Author: Prajatv Kannada

ಬೆಂಗಳೂರು: ಮುಸ್ಲಿಂ ಸಮುದಾಯ ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತೆ ಎಂದು ಶಾಸಕ ಜಮೀರ್ ಅಹಮದ್ ಖಾನ್(Zameer Khan) ಹೇಳಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿಯಲ್ಲಿ(Madanayakanahalli) ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿ ಪ್ರವಾಸ ಮಾಡಿದರೂ ಎಲ್ಲಾ ಸಮುದಾಯದರು ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತಿದ್ದಾರೆ. ಹಾಗೆಯೇ ಮುಸ್ಲಿಂ ಸಮುದಾಯವರು ಸಹ ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತಿದ್ದಾರೆ. ಆದರೆ, ಹೈಕಮಾಂಡ್ ತಿರ್ಮಾನವೇ ಅಂತಿಮ ಎಂದರು.  ನಾನು ಸಹ ಮೊದಲಿನಿಂದಲೂ ಸಿದ್ದರಾಮಯ್ಯ (Siddaramaiah)ಸಿಎಂ ಆಗಬೇಕೆಂದು ಹೇಳುತ್ತಿದ್ದು ಈಗಲು ಸಹ ಈ ಮಾತಿಗೆ ಬದ್ದನಾಗಿದ್ದಾನೆ. ಇದು ನನ್ನ ವೈಯಕ್ತಿಕ ಹೇಳಿಕೆ ಎಂದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಳಒಪ್ಪಂದ ಮಾಡಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2018ರ ಚುನಾವಣೆಯಲ್ಲೂ ಡಾ.ಯತಿಂದ್ರ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಯತಿಂದ್ರ 50 ಸಾವಿರ ಮತಗಳ ಅಂತರದಲ್ಲಿ ಗೆದ್ದರು, ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ದಾಖಲೆಯ ಅಂತರದಲ್ಲಿ ಜಯ ಸಾಧಿಸುತ್ತಾರೆ, ಈ ಗೆಲುವು ಇತಿಹಾಸವಾಗಲಿದೆ ಎಂದು…

Read More

ಬೆಂಗಳೂರು: ಸೋನಿಯಾ ಗಾಂಧಿ ಅವರು ವಿಷಕನ್ಯೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿಕೆ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್(Minister Dr. CN Aswath Narayan) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ(Malleshwar BJP office) ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಸಂಬೋಧಿಸಿದ್ದಾರೆ. ಯತ್ನಾಳ್ ಬದಲು ಪ್ರಧಾನಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ, ಇದು ಯತ್ನಾಳ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದು ಪಕ್ಷದ ಹೇಳಿಕೆಯಲ್ಲ. ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅದು ಕಾಂಗ್ರೆಸ್ ಪಕ್ಷದ ಹೇಳಿಕೆಯಾಗಲಿದೆ. ಆದರೆ, ಯತ್ನಾಳ್ ಹೇಳಿಕೆ ಪಕ್ಷದ ಹೇಳಿಕೆಯಾಗಲ್ಲ. ಹಾಗಾಗಿ ಪ್ರಧಾನಿ ಮೋದಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವವಾಗಲ್ಲ ಎಂದರು.…

Read More

ಬೆಂಗಳೂರು: ಗೀತಾ ಅವರು ಬಂಗಾರಪ್ಪನವರ ಮಗಳು ಹೀಗಾಗಿ ಕಾಂಗ್ರೆಸ್ ಸೇರಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ (Minister Ashok) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ ಕುಮಾರ್(Geeta Shivraj Kumar) ಅವರ ಪಕ್ಷ ಸೇರ್ಪಡೆ ಇದೇ ಮೊದಲೇನಲ್ಲ. ಅವರ ಸಹೋದರ ರಾಜಕೀಯಕ್ಕೆ ಬಂದಾಗಲೇ ಅವರಿಗೂ ಆಸೆ ಇತ್ತು. ಆಗಲೂ ಅವರು ರಾಜಕೀಯ ಪಕ್ಷವೊಂದನ್ನು ಸೇರಿದ್ದರು ಎಂದರು. ಡಾ.ರಾಜಕುಮಾರ್‌ ಅವರಾಗಲಿ, ಡಾ.ಪುನೀತ್ ರಾಜಕುಮಾರ್ ಅವರಾಗಲಿ ರಾಜಕೀಯಕ್ಕೆ ಬಂದವರಲ್ಲ. ರಾಜಕೀಯ ಕುರಿತು ಯಾವತ್ತೂ ಮಾತನಾಡಿಲ್ಲ. ಗೀತಾ ಶಿವರಾಜಕುಮಾರ್ ರಾಜಕುಮಾರ್ ಅವರ ಸೊಸೆಯಾದರೂ ಸಹ ಅವರು ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ. ಅವರಿಗೆ ಮೊದಲಿಂದಲೂ ರಾಜಕೀಯದ ಆಸೆ ಇತ್ತು. ಅವರು ಹೊಸದಾಗೇನು ಪಕ್ಷ ಸೇರಿಲ್ಲ. ಇದಕ್ಕೂ ರಾಜಕುಮಾರ್ ಅವರ ಕುಟುಂಬಕ್ಕೂ ಏನು ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

Read More

ಬೆಂಗಳೂರು: ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಅತಿ ರಂಜಿತವಾಗಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಸಿದ್ದು ಸುದ್ದಿಗಾರರಿಗೆ ವಿನಂತಿ ಮಾಡಿದ್ದಾರೆ. ವಿಧಾನಸಭಾ ಚುನಾವಣೆ  (Karnataka Election) ಹಿನ್ನೆಲೆ ಕುಡ್ಲಿಗಿಯಲ್ಲಿ (Kudligi) ಕಾಂಗ್ರೆಸ್ (Congress) ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಅವರ ಪರವಾಗಿ ಪ್ರಚಾರಕ್ಕೆ ಶನಿವಾರ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ವೇಳೆ ಅವರು ಕಾರು ಹತ್ತುವಾಗ ಕುಸಿದು ಬಿದ್ದರು. ಅಲ್ಲೇ ಇದ್ದ ವೈದ್ಯರು ಅವರ ಕೈಹಿಡಿದು ಕಾರಿನಲ್ಲಿ ಕೂರಿಸಿದ್ದರು. ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಿದ್ದರು. SHARE.

Read More

ಕೆ ಆರ್ ಪುರ : ಬೆಂಗಳೂರಿನ ಕೆಆರ್ ಪುರದ ಕೇಂಬ್ರಿಡ್ಜ್ ವಿದ್ಯಾಸಂಸ್ಥೆಯಲ್ಲಿ ರೆಫ್ರಲ್ ಲ್ಯಾಬ್ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು , ಕಾಲೇಜಿನ ವಿದ್ಯಾರ್ಥಿಗಳು , ಪೋಷಕರು ಸೇರಿದಂತೆ ಸಿಬ್ಬಂದಿ ವರ್ಗದವರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗಿದೆ. ಸಾಮಾನ್ಯ ಆರೋಗ್ಯ ತಪಾಸಣೆಯ ಜೊತೆಗೆ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಇಸಿಜಿ , ಕಣ್ಣು, ಲಿವರ್ , ಕಿವಿ-ಮೂಗು,ರಕ್ತ ಪರೀಕ್ಷೆ  ಹಲ್ಲಿಗೆ ಸಂಬಂಧಿಸಿದ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳನ್ನು ಉಚಿತವಾಗಿ ಮಾಡಿ ಔಷಧಿಯನ್ನು ನೀಡಲಾಯಿತು. ಕಾಲೇಜಿನ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು ಅವರ ರೆಫ್ರಲ್ ಲ್ಯಾಬ್ ಸಹಯೋಗದಲ್ಲಿ ಈ ಶಿಬಿರವನ್ನು ಹಮ್ಮಿಕೊಂಡು‌ ವಿದ್ಯಾಸಂಸ್ಥೆ ಎಲ್ಲಾರು ಸದುಪಯೋಗ ಪಡೆಸಿಕೊಳ್ಳುವಂತೆ ಕರೆ ನೀಡಿದರು.ಆರೋಗ್ಯ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಇಂತಹ ಶಿಬಿರಗಳು ಆರೋಗ್ಯ ದೃಷ್ಟಿಯಿಂದ ಬಹಳಷ್ಟು ಅಗತ್ಯವಿದೆ ಎಂದರು ಉಚಿತ ಆರೋಗ್ಯ ಶಿಬಿರದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಜನ ಉಪಯೋಗ ಪಡೆದುಕೊಂಡಿದ್ದರು. ಲ್ಯಾಬ್ ನ ಚೀಪ್ ಎಕ್ಸ್ಯೂಟಿವ್ ಆಫೀಸರ್ ಶ್ರೀಧರ್ ಮತ್ತಿತರರಿದ್ದರು. SHARE.

Read More

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಬೆಂಗಳೂರಿನಲ್ಲಿ(Bangalore) ರೋಡ್ ಶೋ ನಡೆಸುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿರುವ ಪ್ರಧಾನಿ ಮೋದಿ(PM Modi) 6 ಸಮಾವೇಶ, 2 ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ನಲ್ಲಿ 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನಹಳ್ಳಿ ಸರ್ಕಲ್ ವರೆಗೂ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ನಡೆಸುವ ಸುತ್ತಮುತ್ತಲ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7:30ರ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಓಲ್ಡ್ ಏರ್ ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್ ಸನ್ ರಸೆ, ಲಾಲ್ ಬಾಗ್ ವೆಸ್ಟ್ ಗೇಟ್ ರಸ್ತೆ, ಕೆ ಆರ್ ಸರ್ಕಲ್, ಆರ್ ವಿ ಕಾಲೇಜು ರಸ್ತೆ, ಲಾಲ್ ಬಾಗ್ ಮುಖ್ಯ…

Read More

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ರಾಜ್ಯದ ಮೂರು ಕಂದಾಯ ವಿಭಾಗಗಳಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯ ಸ್ಥಾಪಿಸಲು ಬೆಂಗಳೂರಿನ ಹೈಕೋರ್ಟ್ (High Court)ಪೀಠ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಟಿ ವೆಂಕಟೇಶ್ ನಾಯಕ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೇ, ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಎನ್‌ಐಎ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆಯಡಿ ರಾಜ್ಯ ಸರ್ಕಾರ ಇಡೀ ರಾಜ್ಯಕ್ಕೆ ಬೆಂಗಳೂರು ನಗರದಲ್ಲಿ ಮಾತ್ರ ಒಂದು ವಿಶೇಷ ನ್ಯಾಯಾಲಯ ರಚನೆ ಮಾಡಿದೆ. ಎನ್‌ಐಎ ಪ್ರಕರಣಗಳನ್ನು ಪರಿಶೀಲಿಸಿದಾಗ ಸುಮಾರು 8 ರಿಂದ 9 ವರ್ಷಗಳ ಹಳೆಯ ಪ್ರಕರಣಗಳು ಬಾಕಿ ಉಳಿದಿವೆ. ನ್ಯಾಯಾಂಗ ಪ್ರಸ್ತುತ ಸಾರ್ವಜನಿಕರ ನಂಬಿಕೆಯ ಅಂತಿಮ ಹಾಗೂ ಕೊನೆಯ ಕೇಂದ್ರ ಬಿಂದುವಾಗಿದೆ. ಎಲ್ಲ ಕಡೆಗಳಲ್ಲಿ ನ್ಯಾಯ ಲಭ್ಯವಾಗದಿದ್ದಾಗ ಜನ ಅಂತಿಮವಾಗಿ ನ್ಯಾಯಾಲಯದ ಕದ ತಟ್ಟುತ್ತಾರೆ. ಧರ್ಮ, ಜಾತಿ ಲಿಂಗ ಅಥವಾ ಜನ್ಮ ಸ್ಥಳವನ್ನು ಲೆಕ್ಕಿಸದೆ ಪ್ರತಿಯೊಬ್ಬರು ಗೌರವಿಸುವ ಸ್ಥಳವೇ ನ್ಯಾಯಾಲಯವಾಗಿದೆ.…

Read More

ಮಹದೇವಪುರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಿ ಜನಮನ್ನಣೆ ಪಡೆದುಕೊಂಡಿದ್ದು, ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅಭಿಪ್ರಾಯಪಟ್ಟರು. ಹಗದೂರು ಮತ್ತು ಗಾಂಧಿಪುರದಲ್ಲಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಶಾಸಕ ಅರವಿಂದ ಲಿಂಬಾವಳಿಯವರ ಪಕ್ಷ ಸಂಘಟನೆ, ಅಭಿವೃದ್ಧಿ ಕಾರ್ಯವೈಖರಿಯನ್ನ ಮೆಚ್ಚಿ ಕಾಂಗ್ರೆಸ್‌ನ ಮಾಜಿ ತಾಲೂಕು ಪಂಚಾಯತಿ ಸದಸ್ಯ ಜಿ.ಎಂ.ನಾರಾಯಣ್, ಹಿರಿಯ ಕಾಂಗ್ರೆಸ್ ಮುಖಂಡರಾದ ಎಚ್. ಕೆ.ನಾರಾಯಣಸ್ವಾಮಿ, ರಘು ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಅರವಿಂದ ಲಿಂಬಾವಳಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿಯವರು,ನರೇಂದ್ರ ಮೋದಿ ಅವರು ಕಳೆದ 9 ವರ್ಷಗಳಲ್ಲಿ ಕಳಂಕ ರಹಿತ ಆಡಳಿತ ನೀಡುವ ಮೂಲಕ, ಭಾರತೀಯ ಜನತಾ ಪಾರ್ಟಿಗೆ ಗೌರವ ತಂದು ಕೊಟ್ಟಿದ್ದಾರೆ. ಹೀಗಾಗಿ, ಇಂದಿಗೂ ಸಹ ದೇಶದ ಜನತೆ ಭಾರತೀಯ ಜನತಾ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕುತ್ತಿದ್ದು, ಇಂದಿಗೂ ಸಹ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಬಿಜೆಪಿ…

Read More

ಬೆಂಗಳೂರು: ಎಐಎಡಿಎಂಕೆ ಅಭ್ಯರ್ಥಿಯೆಂದು  ಚುನಾವಣೆ ಆಯೋಗಕ್ಕೆ(Election Commission)ವಂಚಿಸಲು ಯತ್ನಿಸಿದ ಕುಮಾರ್ ಕಣ್ಣನ್ ವಿರುದ್ಧ  ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ(Cotton Town Police Station) ಪ್ರಕರಣ ದಾಖಲಾಗಿದೆ.  ಕುಮಾರ್ ಕಣ್ಣನ್ ಎಂಬುವರು ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ(Gandhinagar Assembly Constituency) ಎಐಎಡಿಎಂಕೆ ಪಕ್ಷದ ಆಭ್ಯರ್ಥಿಯಾಗಿ  ನಕಲಿ ಎ ಫಾರಂ ಹಾಗೂ ಬಿ ಫಾರಂ ಸಲ್ಲಿಸಿದ್ದರು. ಸಲ್ಲಿಸಿದ್ದ ಅರ್ಜಿಯಲ್ಲಿ ಓ ಪನ್ನೀರ್ ಸೆಲ್ವಂ ಸಹಿಯಿತ್ತು. ವಾಸ್ತವವಾಗಿ ಎಐಎಡಿಎಂಕೆ ಪದಾಧಿಕಾರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಕುಮಾರ್ ಕಣ್ಣನ್ ಅವರನ್ನು ಪಕ್ಷೇತರ ಅಭ್ಯರ್ಥಿ ಎಂದು ಚುನಾವಣಾ ಆಯೋಗ ಪರಿಗಣಿಸಿತ್ತು.  ಆಯೋಗಕ್ಕೆ ವಂಚಿಸಲು ಯತ್ನಿಸಿದ ಆರೋಪದ ಹಿನ್ನೆಲೆ ಚುನಾವಣಾ ಅಧಿಕಾರಿಯೊಬ್ಬರು ಕುಮಾರ್ ಕಣ್ಣನ್ ವಿರುದ್ಧ ದೂರು ನೀಡಿದ ಮೇರೆಗೆ ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು: ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂದು ರಾಜ್ಯಸಭಾ ಸದ್ಯಸ ರಾಜೀವ್ ಶುಕ್ಲಾ(Rajeev Shukla) ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ(KPCC) ಮಾತನಾಡಿದ ಅವರು, ಕಳೆದ ಬಾರಿ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಬೀಳಿಸಿತ್ತು. ಹೀಗಾಗಿ ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದ್ದು, ಕಾಂಗ್ರೆಸ್ ಪ್ರಚಂಡ ಬಹುಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದಿದ್ದು, ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ನಾವು ಹಿಮಾಚಲ ಪ್ರದೇಶದಲ್ಲೂ ಸಾಕಷ್ಟು ಯೋಜನೆ ಘೋಷಣೆ ಮಾಡಿದ್ದು, ಅವುಗಳನ್ನು ಜಾರಿ ಮಾಡುತ್ತಿದ್ದೇವೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿ, ಮಹಿಳೆಯರಿಗೆ 1500 ರೂ. ಉಚಿತ ವಿದ್ಯುತ್, ರೈತರಿಗೆ ಬೆಂಬಲ ಬೆಲೆ ಕುರಿತ ಭರವಸೆಯನ್ನು ಹಿಮಾಚಲ ಪ್ರದೇಶದಲ್ಲಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜೀವ್ ಶುಕ್ಲಾ ತಿಳಿಸಿದರು.

Read More