ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ತಪ್ಪುಗಳೇ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವರದಾನವಾಗಲಿವೆ. ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಜತೆಗೆ ಅಡುಗೆ ಅನಿಲ ಸೇರಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಆಕ್ರೋಶವಿದೆ. ಇವೆಲ್ಲದರ ನಡುವೆ ಕಾಂಗ್ರೆಸ್ ನೀಡಿರುವ 4 ಗ್ಯಾರಂಟಿ ಯೋಜನೆಗಳು ಜನರಲ್ಲಿ ವಿಶ್ವಾಸ ಮೂಡಿಸಿರುವುದರಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು. ನಗರ ಮತ್ತು ಗ್ರಾಮೀಣ ಭಾಗದ ತಟಸ್ಥ ಮತದಾರರು ಈ ಚುನಾವಣೆಯಲ್ಲಿ ನಮ್ಮ ಪರ ಒಲವು ತೋರಲಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಬಗ್ಗೆ ಬಡವರು, ಕೆಳವರ್ಗದ ಜನರಲ್ಲಿ ವಿಶ್ವಾಸ ಮೂಡಿದೆ. ನಾವು ಅಧಿಕಾರಕ್ಕೆ ಬಂದಾಗ ಕೊಟ್ಟ ಭರವಸೆ ಈಡೇರಿಸಿದ್ದೆವು. ಕಾಂಗ್ರೆಸ್ ಬಂದರೆ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಇವೆಲ್ಲ ಅಂಶಗಳು ನಾವು ಅಧಿಕಾರಕ್ಕೆ ಬರಲು ಸಹಕಾರಿಯಾಗಲಿವೆ ಎಂದು ಸಮರ್ಥಿಸಿಕೊಂಡರು.
Author: Prajatv Kannada
ಬೆಂಗಳೂರು: ಬೆದರಿಕೆ ಕರೆ ಆರೋಪದ ಹಿನ್ನೆಲೆ ಬಸವ ಜಯಮೃತ್ಯಂಜಯ ಸ್ವಾಮೀಜಿ ಅವರಿಗೆ ಪೊಲೀಸ್ ಭದ್ರತೆ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಅರವಿಂದ್ ಬೆಲ್ಲದ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸ್ವಾಮೀಜಿಗಳಿಗೆ ಬೆದರಿಕೆ ಕರೆ ಬರುತ್ತಿದೆ. ಹೀಗಾಗಿ ಸೂಕ್ತ ಭದ್ರತೆಯನ್ನು ಶ್ರೀಗಳಿಗೆ ಕಲ್ಪಿಸಲು ಮನವಿ ಮಾಡಿದ್ದರು. ಪ್ರತಿ ದಿನವೂ ಶ್ರೀಗಳಿಗೆ ದೂರವಾಣಿ ಕರೆಗಳು ಬರುತ್ತಿದ್ದು, ನಿಂದನಾತ್ಮಕವಾದ ಮಾತುಗಳನ್ನಾಡುತ್ತಾರೆ. ಕೆಲವರು ಕುಡಿದು ಸಹ ಮಾತನಾಡಿ ಶ್ರೀಗಳ ಮನನೋಯಿಸುತ್ತಿದ್ದಾರೆ. ಇನ್ನು ಕೆಲ ಕರೆಗಳು ಬೆದರಿಕೆ ಕರೆಗಳಾಗಿವೆ, ಹಾಗಾಗಿ ಶ್ರೀಗಳಿಗೆ ಸೂಕ್ತ ಭದ್ರತೆಯ ಅಗತ್ಯವಿದೆ ಸಿಎಂಗೆ ಮನವಿ ಮಾಡಿದರು. ಶಾಸಕರ ಅರವಿಂದ ಬೆಲ್ಲದ್ ಅವರ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ ಅವರು ಬೆದರಿಕೆ ಕರೆಗಳ ದಾಖಲೆ ಪರಿಶೀಲಿಸಿ ಸೂಕ್ತ ಭದ್ರತೆ ನೀಡುವಂತೆ ಪೊಲಿಸ್ ಇಲಾಖೆಗೆ ಸೂಚನೆ ನೀಡಿದರು. ಹಾಗಾಗಿ ಇನ್ನು ಮುಂದೆ ಬಸವ ಜಯಮೃತ್ಯುಂಜಯ ಶ್ರೀಗಳು ಪೊಲೀಸ್ ಭದ್ರತೆಯಲ್ಲಿ ಸಂಚಾರ ಮಾಡಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಸಾದುದ್ದೀನ್ ಓವೈಸಿ ಸಾರಥ್ಯದ ಎಐಎಂಐಎಂ ಪಕ್ಷದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಕನಿಷ್ಟ 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಓವೈಸಿ ನಿರ್ಧರಿಸಿದ್ದು, ಜೆಡಿಎಸ್ ಜೊತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಈ ಸಂಬಂಧ ಎಐಎಂಐಎಂ ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ ಒಸ್ಮಾನ್ ಘನಿ ಅವರು ಅಧಿಕೃತ ಮಾಹಿತಿ ನೀಡಿದ್ಧಾರೆ. ಈ ಬೆಳವಣಿಗೆ ಕುರಿತಾಗಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡಾ ಸುದ್ದಿ ಸಂಸ್ಥೆಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಲು ಈವರೆಗೆ ತಮ್ಮ ಪಕ್ಷದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ನಾವು ಚುನಾವಣಾ ಪೂರ್ವ ಮೈತ್ರಿಗೆ ಸಿದ್ಧವಿದ್ದೇವೆ. ಕಾದು ನೋಡುತ್ತಿದ್ದೇವೆ. ಒಂದು ವೇಳೆ ಮೈತ್ರಿ ಆಗಲಿ, ಆಗದೇ ಇರಲಿ.. ನಾವು ಚುನಾವಣೆಯಲ್ಲಿ ಸ್ಪರ್ಧಿಸೋದು ಖಚಿತ ಎಂದು ಓವೈಸಿ ಹೇಳಿದ್ದಾರೆ. ಇನ್ನು ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರವಾಗಿ ಹೆಚ್ಚಿನ ಮಾಹಿತಿ ನೀಡಿರುವ ಎಐಎಂಐಎಂ ಪಕ್ಷ ಕರ್ನಾಟಕ ಘಟಕದ ಮುಖ್ಯಸ್ಥ ಘನಿ, ತಮ್ಮ…
ಇಂದು ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬ. ಈ ಹಿನ್ನೆಲೆಯಲ್ಲಿ ರಶ್ಮಿಕಾ ಅಭಿಮಾನಿಗಳು ನೆಚ್ಚಿನ ನಟಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ಈ ಮಧ್ಯೆ ನಿನ್ನೆಯಷ್ಟೇ ರಶ್ಮಿಕಾರ ಕಾಮನ್ ಡಿಪಿಯನ್ನು ರಿಲೀಸ್ ಮಾಡಿ ಶುಭ ಹಾರೈಸಿದ್ದರು ನಟಿ ಕೀರ್ತಿ ಸುರೇಶ್. ಇಂದು ಪುಷ್ಪಾ 2 ಚಿತ್ರತಂಡದಿಂದ ಉಡುಗೊರೆಯೊಂದು ಸಿಕ್ಕಿದ್ದು ರಶ್ಮಿಕಾ ಹುಟ್ಟು ಹಬ್ಬಕ್ಕಾಗಿ ಪುಷ್ಪಾ 2 ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ವಿಶ್ ಮಾಡಲಾಗಿದೆ. ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ. ಅಭಿಮಾನಿಗಳು ಈ ಲುಕ್ ಗೆ ಫಿದಾ ಆಗಿದ್ದು, ಶುಭಾಶಯಗಳ ಸುರಿಮಳೆಗೈದಿದ್ದಾರೆ. ರಶ್ಮಿಕಾ ಕೂಡ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಲ್ಲದೇ, ಪುಷ್ಪಾ 2 ತಂಡಕ್ಕೆ ವಿಶೇಷವಾದ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ. `ರೈನ್‌ಬೋ’ ಸಿನಿಮಾದ ಮೂಲಕ ನಟಿ ರಶ್ಮಿಕಾ ಮೊದಲ ಭಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ರಶ್ಮಿಕಾ ಕೂಡ ಪ್ರತಿಕ್ರಿಯೆ ನೀಡಿದ್ದು,…
ನಟಿ ಶ್ವೇತಾ ತಿವಾರಿ ಪುತ್ರಿ ಪಾಲಕ್ ತಿವಾರಿ ಸದ್ಯ ಬಿಟೌನ್ ಅಂಗಳದಲ್ಲಿ ನಾಯಕಿಯಾಗಿ ಮಿಂಚ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಿರುವ ಪಾಲಕ್ ಸದ್ಯ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ಜೊತೆಗಿನ ಡೇಟಿಂಗ್ ವಿಚಾರವಾಗಿ ಸುದ್ದಿಯಾಗಿದ್ದು ಈ ಬಗ್ಗೆ ಪಾಲಕ್ ಸ್ಪಷ್ಟನೆ ನೀಡಿದ್ದಾರೆ. ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ನಟನೆಯ `ಕಿಸಿ ಕಾ ಭಾಯ್ ಕಿಸಿ ಕಾ ಜಾನ್’ ಚಿತ್ರದ ಮೂಲಕ ಪಾಲಕ್ ಎಂಟ್ರಿ ಕೊಡ್ತಿದ್ದಾರೆ. ಮತ್ತೊಂದಿಷ್ಟು ಸಿನಿಮಾಗಳು ನಟಿಯ ಕೈಯಲ್ಲಿದ್ದು ಈ ಮಧ್ಯೆ ಇಬ್ರಾಹಿಂ ಜೊತೆಗಿನ ಡೇಟಿಂಗ್ ಕುರಿತು ಸುದ್ದಿಯಲ್ಲಿದ್ದಾರೆ. ಈ ಬಗ್ಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ಎರಡು ಚಿತ್ರಗಳ ಶೂಟಿಂಗ್ ನನ್ನನ್ನು ತುಂಬಾ ಬ್ಯುಸಿಯಾಗಿರುವಂತೆ ಮಾಡಿದ್ದು, ಜೀವನದಲ್ಲಿ ತೃಪ್ತಿ ಇದೆ. ಸಿನಿಮಾ ನನ್ನ ಏಕೈಕ ಗಮನವಾಗಿದ್ದು, ನನಗಿದು ಮಹತ್ವದ ವರ್ಷ. ನಾನು ವೃತ್ತಿಯಲ್ಲಿ ಒಂದು ಭಾಗವಾಗಿರುವುದರಿಂದ ಈ ವದಂತಿಗೆಲ್ಲಾ ಕಿವಿಗೊಡುವುದಿಲ್ಲ. ಕೆಲಸದ ಮೇಲೆ ಹೆಚ್ಚು ಗಮನ ಹರಿಸುತ್ತೇನೆ. ಪ್ರೀತಿಯನ್ನು ಎಂದಿಗೂ ಲೆಕ್ಕಾಚಾರ ಮಾಡಲು…
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ರಾಜಕಾರಣಿ ರಾಘವ್ ಚಡ್ಡಾ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇಬ್ಬರ ಪ್ರೀತಿಗೆ ಎರಡು ಮನೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಇದೀಗ ಈ ಜೋಡಿಯ ನಿಶ್ಚಿತಾರ್ಥ ದೆಹಲಿಯಲ್ಲಿ ನಡೆಯಲಿದ್ದು ಅದಕ್ಕಾಗಿ ಎರಡು ಕುಟುಂಬಗಳು ಭರದ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಇತ್ತೀಚಿಗೆ ಲಂಡನ್ ಮತ್ತು ಮುಂಬೈ ಏರ್‌ಪೋರ್ಟ್‌ನಲ್ಲಿ ಪರಿಣಿತಿ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ. ಇಬ್ಬರ ಮದುವೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರು ಇಬ್ಬರೂ ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಈ ವಾರವೇ ದೆಹಲಿಯಲ್ಲಿ ರಾಘವ್ ಹಾಗೂ ಪರಿಣಿತಿ ಎಂಗೇಜ್‌ಮೆಂಟ್ ಫಿಕ್ಸ್ ಆಗಿದೆ. ಅದಕ್ಕಾಗಿ ಈಗಾಗಲೇ ಪರಿಣಿತಿ ಚೋಪ್ರಾ ದೆಹಲಿಗೆ ತೆರಳಿದ್ದು, ನಿಶ್ಚಿತಾರ್ಥದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬದ ಆಪ್ತರಷ್ಟೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್‌ಗೆ ಭಾಗಿಯಾಗಲು ಈಗಾಗಲೇ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ ಮತ್ತು ಮೀರಾ ಚೋಪ್ರಾ ಕೂಡ ದೆಹಲಿಗೆ ಆಗಮಿಸಿದ್ದಾರೆ. ಅಧಿಕೃತವಾಗಿ ಈ…
ಕನ್ನಡದ ‘ಪೆಂಟಗನ್’ ಸಿನಿಮಾದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿ ತನಿಷಾ ಕುಪ್ಪಂಡ ಕಳೆದೆರೆಡು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಸಂದರ್ಶನದ ವೇಳೆ ಯುಟ್ಯೂಬರ್ ಇಬ್ಬರು ಬ್ಲೂಫಿಲ್ಮ್ ಮಾಡ್ತೀರಾ ಎಂದು ಕೇಳಿದ್ದಕ್ಕೆ ನಟಿ ಖಡಕ್ ಕ್ಲಾಸ್ ತೆಗೆದುಕೊಂಡಿದ್ದರು. ಈ ಬಗ್ಗೆ ನಟಿ ಪತ್ರಿಕಾಗೋಷ್ಠಿ ನಡೆಸಿ ಅಸಮಾಧಾನ ಹೊರ ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಟ ಹರ್ಷ ಸೋಷಿಯಲ್ ಮೀಡಿಯಾದಲ್ಲಿ ಬ್ಲೂಫಿಲ್ಮ್ ನಲ್ಲಿ ನಟಿಸ್ತೀರಾ ಎಂದು ಕೇಳಿದ್ದಾಗಿ ತನಿಷಾ ಆರೋಪಿಸಿದ್ದರು. ಅಸಭ್ಯ ಸಂದೇಶ ಕಳುಹಿಸಿದ್ದಾರೆ ಎಂದು ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದರು. ತನಿಷಾ ಮಾಡಿರುವ ಆರೋಪಕ್ಕೆ ಇದೀಗ ನಟ ಹರ್ಷ ಸ್ಪಷ್ಟನೆ ನೀಡಿದ್ದಾರೆ. ನಾನು ಮತ್ತು ತನಿಷಾ ಒಳ್ಳೆಯ ಸ್ನೇಹಿತರು. ನೀಲಿ ಚಿತ್ರದ ಬಗ್ಗೆ ಕೇಳಿದ್ದ ಯುಟ್ಯೂಬರ್ ವೈರಲ್ ವೀಡಿಯೋಗೆ ಪ್ರತಿಕ್ರಿಯಿಸಿ, ನಾನು ಸಂದೇಶ ಕಳಿಸಿದ್ದು ನಿಜ. ಆದರೆ ಯಾವುದೇ ಕೆಟ್ಟ ಆಲೋಚನೆಯಿಂದ ಅಲ್ಲ. ಬ್ಲೂಫಿಲ್ಮ್ ಮಾಡ್ತೀರಾ ಎಂದು ಆ ಯುಟ್ಯೂಬರ್ ಹೀಗ್ಯಾಕೆ ಕೇಳಿದ್ದರು ಎಂದು ಪ್ರಶ್ನೆ ಮಾಡುವ ರೀತಿಯಲ್ಲಿ ನಗುವಿನ ಇಮೋಜಿ ಕಳುಹಿಸಿದೆ ಅಷ್ಟೇ. ಆ ಸಂದೇಶವೇ ಗೊಂದಲಕ್ಕೆ…
ಹಾಸನ: ಮೊದಲ ಬಾರಿಗೆ ಬೇಲೂರು ಚೆನ್ನಕೇಶವ ಸನ್ನಿಧಿಯಲ್ಲಿ ಅರೆ ಮಿಲಿಟರಿ ಪಡೆಯ ಬಂದೋಬಸ್ತಿನಲ್ಲಿ ಕುರಾನ್ ಪಠಣ ಇಲ್ಲದೆ ರಥೋತ್ಸವ ಜರುಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಂಗಳವಾರ ಇತಿಹಾಸ ಪ್ರಸಿದ್ಧ ಬೇಲೂರು ಚೆನ್ನಕೇಶವ ರಥೋತ್ಸವ ಜರುಗಿತು. ಚೆನ್ನಕೇಶವ ರಥೋತ್ಸವದಲ್ಲಿ ‘ಕುರಾನ್ ಪಠಣ’ ಮಾಡಬಾರದು ಎಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ಧಾರ್ಮಿಕ ದತ್ತಿ ಇಲಾಖೆ ಕೂಡಾ ಅನುಮತಿ ನೀಡಿತ್ತು. ಆದರೆ, ಹಿಂದೂ ಕಾರ್ಯರ್ತರು ಅಡ್ಡಿ ಪಡೆಸಿದ್ದು, ಕುರಾನ್ ಪಠಣ ಸಾಧ್ಯವಾಗಿಲ್ಲ. ಶ್ಲೋಕ ಹೇಳಲು ಅಡ್ಡಿ; ಜೈ ಶ್ರೀರಾಮ್… ನಾವೆಲ್ಲ ಹಿಂದೂ, ನಾವೆಲ್ಲ ಒಂದು ಪ್ರತಿ ವರ್ಷದಂತೆ ಕುರಾನ್ ಪಠಣ ಮಾಡಲು ಬಂದಿದ್ದ, ದೊಡ್ಡ ಮೇದೂರು ಗ್ರಾಮದ ಸೈಯದ್ ಸಜಾದ್ ಭಾಷಾ ಖಾದ್ರಿ ಈ ಬಾರಿ ದೇವಸ್ಥಾನದ ಮುಂಭಾಗದ ಮೆಟ್ಟಿಲಿನ ಬಳಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಇಸ್ಲಾಂ ಧರ್ಮದ ರೀತಿಯಲ್ಲಿ ಶ್ಲೋಕ ಹೇಳಿ ನಮಸ್ಕರಿಸಿದ್ದು, ಕುರಾನ್ ಪಠಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೊಡ್ಡ ಮೇದೂರಿನ ಖಾಜಿ ಸಾಹೇಬರು ಶ್ಲೋಕ…
ಬೆಂಗಳೂರು: ಕನಕಪುರದಲ್ಲಿ ಮಂಡ್ಯ ಯುವಕ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ವ್ಯಕ್ತಿ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು’ ಎಂದು ಒತ್ತಾಯಿಸಿದ್ದಾರೆ. ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ? ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಿ’ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಫೇಕ್ ಫ್ಯಾಕ್ಟರಿಯಿಂದ ಇನ್ನೊಂದು ಫೇಕ್ ಸುದ್ದಿ ಹೊರಬಿದ್ದಿದೆ. ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಜೆಪಿ ನಾಯಕತ್ವ ನಡೆಸುತ್ತಿದೆ. ಪ್ರಜಾತಂತ್ರವೆಂದರೆ ಏನೆಂದು ತಿಳಿಯದ ಗುಲಾಮಿ ಮನಸ್ಥಿತಿಯ ಕಾಂಗ್ರೆಸ್ ಸುಳ್ಳು ಸುದ್ದಿಯನ್ನು ಹರಡುವುದೇ ರಾಜಕೀಯ ಎಂದುಕೊಂಡಿದೆ’ ಎಂದು ಸಿ.ಟಿ ರವಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.