ಮಂಗಳೂರು: ಸ್ಯಾಂಡಲ್ವುಡ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. 2024 ಆಗಸ್ಟ್ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬೆನ್ನಲ್ಲೇ ಈ ಬ್ಯೂಟಿಫುಲ್ ಜೋಡಿ ಮತ್ತೊಮ್ಮೆ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸೋನಲ್ ಅವರು ಬಿಳಿ ಬಣ್ಣದ ಲಾಂಗ್ ಗೌನ್ನಲ್ಲಿ ಮಿಂಚಿದ್ದರೆ, ತರುಣ್ ಸುಧೀರ್ ವೈಟ್ ಸೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸೆಲೆಬ್ರೆಷನ್ನಲ್ಲಿ ನವವಧು ಸೋನಾಲ್ ಗೋಲ್ಡ್ ಕಲರ್ ಡ್ರೆಸ್ ಧರಿಸಿದ್ದರು. ಚರ್ಚ್ ವೆಡ್ಡಿಂಗ್ ಬಳಿಕ ಸ್ಟಾರ್ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್ ಸಹ ಮಾಡಿಕೊಂಡಿದೆ. ಈ ಅದ್ಧೂರಿ ರೆಸೆಪ್ಷನ್ನಲ್ಲಿಯೂ ತರುಣ್ ಸುಧೀರ್ ಬ್ರೌನ್ ಸೂಟ್ ಹಾಗೂ ನಟಿ ಸೋನಲ್ ಸೀರೆಯಲ್ಲಿ ಮಿಂಚಿದ್ದಾರೆ.
Author: Prajatv Kannada
ಚೆನ್ನೈ: ಹೇಮಾ ವರದಿ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ನಟ ರಜನಿಕಾಂತ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಕುರಿತಂತೆ ಜಸ್ಟೀಸ್ ಹೇಮಾ ಸಮಿತಿ ಸಲ್ಲಿಸಿರುವ ವರದಿ ಬಗ್ಗೆ ನನಗೆ ಗೊತ್ತಿಲ್ಲ. ತಮಿಳುನಾಡಿನಲ್ಲಿ ಅಂತಹ ಸಮಿತಿ ರಚಿಸಬೇಕೆಂಬ ಬೇಡಿಕೆಯ ಬಗ್ಗೆಯೂ ನನಗೆ ಮಾಹಿತಿ ಇಲ್ಲ, ಕ್ಷಮಿಸಿ ಎಂದು ನಟ ಹೇಳಿದ್ದಾರೆ. ಮಲಯಾಳ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು. ಕಳೆದ ಒಂದು ದಿನದ ಹಿಂದೆಯಷ್ಟೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಮೌನ ಮುರಿದು ಮಾತನಾಡಿದ್ದರು. ಮಲಯಾಳಂ ಚಿತ್ರರಂಗದ ಯಾವುದೇ ಪವರ್ ಗ್ರೂಪ್‌ನಲ್ಲಿ (ಶಕ್ತಿ ಬಣ) ನಾನು ಗುರುತಿಸಿಕೊಂಡಿಲ್ಲ. ಅಂತಹ ಬಣಗಳ ಅಸ್ತಿತ್ವದ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಅಂತ. ಹೇಮಾ ಸಮಿತಿ…
ಬೆಂಗಳೂರು:- ಇಂದು ರಾಜ್ಯದ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು…
ಕಿಚ್ಚ ಸುದೀಪ್ ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಜೊತೆ ರಾತ್ರಿ 12.00 ಗಂಟೆಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಈ ವೇಳೆ ಪತ್ನಿ ಪ್ರಿಯ, ಮಗಳು ಸಾನ್ವಿ ಕೂಡ ಭಾಗಿಯಾಗಿದ್ದರು. ಇವರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಸಂಭ್ರವಿಸಿದ್ದಾರೆ. ಬರ್ತ್ಡೇಗೆ ಶುಭಕೋರಲು ಮನೆಯ ಬಳಿ ಬಾರದಂತೆ ಸುದೀಪ್ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದ್ರೂ ಕೂಡ ಅಭಿಮಾನಿಗಳು ರಾತ್ರಿ ನೆಚ್ಚಿನ ನಟನಿಗೆ ವಿಶ್ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಸುದೀಪ್ ಅವರು ನಿವಾಸ ಬಳಿ ಜಮಾಯಿಸಿದ್ರು. ಮನೆಯ ಬಳಿ ಬಂದ ಅಭಿಮಾನಿಗಳಿಗೆ ನಿರಾಸೆ ಮಾಡದ ನಟ ಸುದೀಪ್ ಅವರು ಕೈ ಬೀಸಿ ಧನ್ಯವಾದ ಹೇಳಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ 12ರವರೆಗೆ ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಸುಮಾರು 2 ಗಂಟೆಗಳ ಕಾಲ ಅಭಿಮಾನಿಗಳಿಗಾಗಿ ಕಿಚ್ಚ ಸುದೀಪ್ ತಮ್ಮ ಸಮಯವನ್ನು ಮೀಸಲಿಟ್ಟಿದ್ದು, ಅವರ ಸಮ್ಮುಖದಲ್ಲಿಯೂ ಕೂಡ ತಮ್ಮ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಬೆಂಗಳೂರು :-ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಾಕ್ಷಿಯಾದರು.ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಡಿ (Yezde) ಬೈಕ್ (ನಂಬರ್ CAE 7684) ಅನ್ನು ಮರುವಿನ್ಯಾಸ ಮಾಡಿ ಸದಾಶಿವನಗರದ ನಿವಾಸಕ್ಕೆ ತಂದು ನಿಲ್ಲಿಸಿದಾಗ ಅದನ್ನು ಕಂಡ ಶಿವಕುಮಾರ್ ಅವರು ಪುಳಕಿತರಾದರು. ತಾವೇ ಬೈಕ್ ಕಿಕ್ ಮಾಡಿ ಸ್ಟಾರ್ಟ್ ಮಾಡಿ ಖುಷಿಪಟ್ಟರು. “ನಾನು ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೈಕ್ ಇದು, ಕನಕಪುರದ ಮನೆಯಲ್ಲಿ ಧೂಳು ಹಿಡಿದಿತ್ತು. ಸುಮಾರು 40 ವರ್ಷಗಳ ನಂತರ ನನ್ನ ಸ್ನೇಹಿತರು ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ಆನಂದ…
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆ ನಡೆಯಲಿದೆ. ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಕಳೆದ ಶನಿವಾರ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಡೆದಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಈ ಪ್ರಕರಣದ ತೀರ್ಪನ್ನು ಇಂದಿಗೆ ಅಂದರೆ ಸೆಪ್ಟೆಂಬರ್ 2ಕ್ಕೆ ಮುಂದೂಡಿತ್ತು. ಇಂದು ಮೂಡಾ ನಿವೇಶನ ಹಂಚಿಕೆ ಕುರಿತ ಸುದೀರ್ಘ ವಾದ -ಪ್ರತಿವಾದದ ವಿಚಾರಣೆ ಮತ್ತು ತೀರ್ಪು ಇಂದು ಮಧ್ಯಾಹ್ನ 2.30ಕ್ಕೆ ಬರಲಿದೆ. ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿ ಇಂದು ಬಹುತೇಕ ಎಲ್ಲರ ವಾದ ಮುಗಿಯುವ ಸಾಧ್ಯತೆ ಇದ್ದು, ಈತನ್ಮಧ್ಯೆ ಇಂದು ಪುನಃ ವಾದ ಮಂಡನೆಗೆ ಅಡ್ವೋಕೇಟ್ ಜನರಲ್…
ಬೆಂಗಳೂರು:- ನಾಡಿನೆಲ್ಲೆಡೆ ಗೌರಿ- ಗಣೇಶ ಹಬ್ಬದ ಸಂಭ್ರಮ ಜೋರಾಗಿದ್ದು, ಗಣೇಶೋತ್ಸವ ಆಚರಣೆಗೆ ಸಿಲಿಕಾನ್ ಸಿಟಿ ಮಂದಿ ಸಜ್ಜಾಗಿದ್ದಾರೆ. ಈ ಬಾರಿ ಗಣೇಶೋತ್ಸವಕ್ಕೆ ತರಹೇವಾರಿ ಗಣೇಶಗಳು ಬಂದಿದೆ. ವೈನಾಡ್ ನಲ್ಲಿ ನಡೆದ ದುರಂತ ಹಿನ್ನೆಲೆ, ಪರಿಸರ ರಕ್ಷಿಸುವ ನಿಟ್ಟಿನಲ್ಲಿ ಸೇವ್ ಅರ್ಥ್ ಕಾನ್ಸೆಪ್ಟ್ ನಲ್ಲಿ ವಿನಾಯಕನ ಮೂರ್ತಿ ರೆಡಿ ಆಗಿದೆ. ಈ ಮದ್ಯೆ ಮಾರುಕಟ್ಟೆಗೆ ಅಯೋದ್ಯಾ ರಾಮ ಮಾದರಿ ಗಣಪ ಸಿದ್ಧವಾಗಿದೆ. ಅಯೋದ್ಯಾ ರಾಮ ಗಣಪನಿಗೆ ಫುಲ್ ಡಿಮ್ಯಾಂಡ್ ಬಂದಿದೆ. ಪರಿಸರ ಸ್ನೇಹಿ, ಸೀಡ್ ಗಣೇಶ ಸಿಲಿಕಾನ್ ಮಂದಿಯನ್ನ ಆಕರ್ಷಿಸುತ್ತಿದೆ.
ಇಸ್ರೇಲ್ ರಕ್ಷಣಾ ಪಡೆಗಳು ಗಾಜಾದಿಂದ ಅಮೆರಿಕದ ಪ್ರಜೆ ಹರ್ಷ್ ಗೋಲ್ಡ್ ಬರ್ಗ್ ಪೋಲಿನ್ ಸೇರಿದಂತೆ ಆರು ಒತ್ತೆಯಾಳುಗಳ ಶವಗಳನ್ನು ವಶಪಡಿಸಿಕೊಂಡಿದ್ದು, ಮೃತ ದೇಹಗಳು ರಾಫಾ ನಗರದ ಸುರಂಗದಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲಿನ್ ಶವದ ಜೊತೆ ಈಡನ್ ಯೆರುಷಲಿ (24), ಕಾರ್ಮೆಲ್ ಗ್ಯಾಟ್ (39), ಅಲೊಗ್ ಸರುಸಿ (26), ಅಲೆಕ್ಸ್ ಲುಬ್ನೋವ್ (32) ಮತ್ತು ಒರಿ ಡ್ಯಾನಿನೊ (25) ಶವಗಳು ಪತ್ತೆಯಾಗಿವೆ.ಗಾಜಾದ ಸುರಂಗಗಳಲ್ಲಿ ಪತ್ತೆಯಾದವರಲ್ಲಿ ಹರ್ಷ್ ಗೋಲ್ಡ್ ಬರ್ಗ್ ಪೋಲಿನ್ ಅವರ ದೇಹವೂ ಸೇರಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ದೃಢಪಡಿಸಿದ್ದಾರೆ. ರಫಾ ನಗರದ ಅಡಿಯಲ್ಲಿರುವ ಸುರಂಗದಲ್ಲಿ, ಇಸ್ರೇಲಿ ಪಡೆಗಳು ಹಮಾಸ್ ವಶಪಡಿಸಿಕೊಂಡ ಆರು ಒತ್ತೆಯಾಳುಗಳ ದೇಹಗಳನ್ನು ವಶಪಡಿಸಿಕೊಂಡವು ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೋಲಿನ್ ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ಭಯೋತ್ಪಾದಕರು ನಡೆಸಿದ ದಾಳಿಯ ಸಂದರ್ಭದಲ್ಲಿ ಸಿಕ್ಕಿಬಿದ್ದ 251 ಒತ್ತೆಯಾಳುಗಳಲ್ಲಿ ಒಬ್ಬನಾಗಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್‌ಗೆ ನುಗ್ಗಿ 1,200 ಜನರನ್ನು…
ಮಾಸ್ಕೋ ಮತ್ತು ರಷ್ಯಾದ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಕ್ರೇನ್ ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಸ್ಕೋದ ಕಡೆಗೆ ಹಾರುತ್ತಿದ್ದ ಡ್ರೋನ್ ರಷ್ಯಾದ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಶವಾಯಿತು ಎಂದು ಮಾಸ್ಕೋದ ಮೇಯರ್ ಸೆರ್ಗೆಯ್ ಸೊಬಯಾನಿನ್ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಷ್ಯಾದ ನೈಋತ್ಯದಲ್ಲಿರುವ ಬ್ರಿಯಾನ್ಸ್ಕ್ ನ ಗಡಿ ಪ್ರದೇಶದ ಮೇಲೆ ಕನಿಷ್ಠ 12 ಉಕ್ರೇನ್ ಉಡಾವಣೆ ಮಾಡಿದ ಡ್ರೋನ್‌ಗಳನ್ನು ನಾಶಪಡಿಸಲಾಗಿದೆ ಎಂದು ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಬೊಗೊಮಾಜ್ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ಕುರ್ಸ್ಕ್ ಪ್ರದೇಶದ ಮೇಲೆ ಎರಡು ಮಾನವರಹಿತ ದಾಳಿ ವಾಹನಗಳನ್ನು ಸಹ ನಾಶಪಡಿಸಲಾಗಿದೆ, ಉಕ್ರೇನ್ನ ಆಕ್ರಮಣದಿಂದ ಭಾಗಶಃ ಸ್ವಾಧೀನಪಡಿಸಿಕೊಂಡಿರುವ ಪ್ರದೇಶದ ಹಾಲಿ ಗವರ್ನರ್ ಅಲೆಕ್ಸಿ ಸಿರ್ನೋವ್ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನವಾದ ಬಳಿಕ ಬಾಂಗ್ಲಾದೇಶದಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಿದೆ. ಇದೀಗ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕನಿಷ್ಠ 49 ಶಿಕ್ಷಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ ಎಂದು ಹಿಂಸಾಚಾರ ಪೀಡಿತ ರಾಷ್ಟ್ರದ ಅಲ್ಪಸಂಖ್ಯಾತ ಸಂಘಟನೆಯೊಂದು ತಿಳಿಸಿದೆ. ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಓಕ್ಯ ಪರಿಷತ್ತಿನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛತ್ರ ಓಕ್ಯ ಪರಿಷತ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದೆ ಎಂದು ದಿ ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. 76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದರು. ಅವರಲ್ಲಿ 49 ಮಂದಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಆದಾಗ್ಯೂ, ಅವರಲ್ಲಿ 19 ಮಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ, ಲೂಟಿ, ಮಹಿಳೆಯರ ಮೇಲೆ ಹಲ್ಲೆ, ದೇವಸ್ಥಾನಗಳ ಧ್ವಂಸ, ಮನೆ…