Author: Prajatv Kannada

ಬೆಂಗಳೂರು: ಫಾಫ್‌ ಡು ಪ್ಲೆಸಿಸ್‌ (Faf du Plessis), ವಿರಾಟ್‌ ಕೊಹ್ಲಿ (Virat Kohli) ಬೆಂಕಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು, ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.ಆರಂಭಿಕರಾಗಿ ಕಣಕ್ಕಿಳಿದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ ಮತ್ತು ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸಿದರು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳೂ ʻಕೊಹ್ಲಿ, ಕೊಹ್ಲಿʼ, ʻಆರ್‌ಸಿಬಿ, ಆರ್‌ಸಿಬಿʼ ಎಂದು ಕೂಗುತ್ತಾ ಆಟಗಾರರನ್ನು ಹುರಿದುಂಬಿಸಿದರು. ಪ್ರತಿ ಬೌಂಡರಿ, ಸಿಕ್ಸರ್‌ಗಳನ್ನು ಅದ್ಭುತವಾಗಿ ಎಂಜಾಯ್‌ ಮಾಡಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ…

Read More

ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ. ಆದ್ರೆ ಕೆಲವೊಂದು ಹಣ್ಣುಗಳು ಮಾತ್ರವಲ್ಲ ಕಾಯಿಗಳು ಸಹ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಅದ್ರಲ್ಲೊಂದು ಪಪ್ಪಾಯಿ. ಪಪ್ಪಾಯವನ್ನು ನೀವು ಹಣ್ಣಾದ್ಮೇಲೆ ಸೇವನೆ ಮಾಡ್ಬಹುದು. ಹಾಗೆ ಪಪ್ಪಾಯ ಕಾಯಿಯಿಂದ ಸಲಾಡ್ ಮಾಡಬಹುದು. ಇಲ್ಲವೆ ಪಪ್ಪಾಯಿ ಕಾಯಿಯ ಪರಾಟ ಮಾಡಬಹುದು. ಪಪ್ಪಾಯಿಯಲ್ಲಿ ಹಲವು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಇದು ಜೀವಸತ್ವಗಳು, ಕಿಣ್ವಗಳು ಮತ್ತು ಅನೇಕ ರೀತಿಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ. ಪಪ್ಪಾಯಿ ಕಾಯಿಯಲ್ಲಿ ವಿಟಮಿನ್–ಇ, ಸಿ, ಬಿ, ಎ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಖನಿಜಗಳಂತಹ ಪೋಷಕಾಂಶಗಳು ಕಂಡುಬರುತ್ತವೆ. ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೀವು ಅಧಿಕ ತೂಕ (Weight) ಹೊಂದಿದ್ದರೆ ಅಥವಾ ಯೂರಿಕ್ ಆಮ್ಲವು ನಿಮ್ಮ ದೇಹ (Body)ದಲ್ಲಿ ವೇಗವಾಗಿ ಹೆಚ್ಚುತ್ತಿದ್ದರೆ, ಹಸಿ ಪಪ್ಪಾಯಿಯು (Raw papaya) ನಿಮಗೆ ರಾಮಬಾಣವೆಂದು ಸಾಬೀತಾಗಲಿದೆ. ಇದನ್ನು ತಿನ್ನುವ ಸರಿಯಾದ ಮಾರ್ಗ, ಸಮಯ ಮತ್ತು ಅನುಪಾತದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದ ತಕ್ಷಣ ಕೀಲು ನೋವು ಅಥವಾ ಸಂಧಿವಾತದ (Arthritis) ಸಮಸ್ಯೆ ಶುರುವಾಗುತ್ತದೆ. ಯೂರಿಕ್ ಆಸಿಡ್ ಅನ್ನು ಸಮಯಕ್ಕೆ ನಿಯಂತ್ರಿಸದೆ ಹೋದಲ್ಲಿ, ಅದು ಸಂಧಿವಾತವಾಗಿ ಬದಲಾಗುತ್ತದೆ. ನಂತರ ನಡೆದಾಡುವುದರಿಂದ ಹಿಡಿದು ಕುಳಿತುಕೊಳ್ಳುವವರೆಗೆ ಅಸಹನೀಯ ನೋವು (Pain) ಕಾಣಿಸಿಕೊಳ್ಳುತ್ತದೆ. ಆದರೆ ಇಲ್ಲಿ ನಾವು ಹಸಿ ಪಪ್ಪಾಯಿಯ ಪ್ರಯೋಜನಗಳ ಬಗ್ಗೆ ಹೇಳುತ್ತಿದ್ದೇವೆ. ಹಸಿ ಪಪ್ಪಾಯಿ ಸೇವನೆ ನಿಮ್ಮ ಈ ಸಮಸ್ಯೆಯನ್ನು ಬುಡ ಸಮೇತ ನಿವಾರಿಸುತ್ತದೆ. ಹಸಿ ಪಪ್ಪಾಯಿಯ ಗುಣಗಳು ಹಸಿ ಪಪ್ಪಾಯಿಯು ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲೋರಿಯೂ ಕಡಿಮೆಯಾಗಿರುತ್ತದೆ. ಇದು ವಿಟಮಿನ್ ಸಿ, ಫೋಲೇಟ್ ಮತ್ತು ವಿಟಮಿನ್ ಇ ಗಳಿಂದ ಸಮೃದ್ಧವಾಗಿದೆ. ಯೂರಿಕ್ ಆಮ್ಲವನ್ನು ಕಡಿಮೆ ಮಾಡುವಲ್ಲಿ ಈ ಮೂರೂ ರಾಸಾಯನಿಕಗಳು ಔಷಧಿಗಳಂತೆ (Medicine)  ಕೆಲಸ ಮಾಡುತ್ತವೆ. ಹಾಗಾದರೆ ಪಪ್ಪಾಯಿಯ ಹೆಚ್ಚಿನ ಪ್ರಯೋಜನಗಳನ್ನು ಮತ್ತು ಅದನ್ನು ತಿನ್ನಲು ಸರಿಯಾದ ಮಾರ್ಗ ಯಾವುದು ತಿಳಿದುಕೊಳ್ಳೋಣ. ಪಪ್ಪಾಯಿ ಜ್ಯೂಸ್ ತಯಾರಿಸಿ ಯೂರಿಕ್ ಆಮ್ಲವನ್ನು ತಕ್ಷಣವೇ ನಿಯಂತ್ರಣಕ್ಕೆ ತರಬೇಕು ಎಂದರೆ, ನೀವು ಪ್ರತಿದಿನ ಬೆಳಗ್ಗೆ (Morning) ಕನಿಷ್ಠ ಒಂದು ಲೋಟ ಹಸಿ ಪಪ್ಪಾಯಿ ರಸವನ್ನು ಕುಡಿಯುವುದು ಮುಖ್ಯ. ನೀವು ಬಯಸಿದರೆ, ನೀವು ಅದರಲ್ಲಿ ನಿಂಬೆ (Lemon) ಅಥವಾ ಜೇನುತುಪ್ಪ (Honey)ವನ್ನು ಕೂಡ ಬೆರೆಸಬಹುದು. ಅದರಲ್ಲಿಯೂ ವಿಶೇಷವಾಗಿ ಯೂರಿಕ್ ಆಮ್ಲ ಹೆಚ್ಚಳ ಸಮಸ್ಯೆ ಇರುವವರು ಪಪ್ಪಾಯಿ ಜ್ಯೂಸ್ ಕುಡಿಯುವುದರಿಂದ ಹೆಚ್ಚಿನ ಪ್ರಯೋಜನ ಸಿಗುತ್ತದೆ. ಹೆಚ್ಚುವರಿ ಕ್ಯಾಲೊರಿಗಳನ್ನು ಬರ್ನ್ ಮಾಡಲು ಮಾಡಲು ಇದು ಸಹಾಯ ಮಾಡುತ್ತದೆ. ತರಕಾರಿಯ ರೂಪದಲ್ಲಿ ಸೇವಿಸಿ ಹಸಿ ಪಪ್ಪಾಯಿಯನ್ನು ನೀಡುವ ತರಕಾರಿಯ (Vegetables) ರೂಪದಲ್ಲಿ ಸೇವಿಸುವ ಅಭ್ಯಾಸ ಮಾಡಿಕೊಂಡರೂ ಕೂಡ ಉತ್ತಮ. ಇದು ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಇದನ್ನು ತಯಾರಿಸುವಾಗ, ಅದರಲ್ಲಿ ಮೆಂತ್ಯ ಮತ್ತು ಇಂಗು ಹಾಕಿ. ಅರಿಶಿನ ಮತ್ತು ಉಪ್ಪಿನೊಂದಿಗೆ ಬೇಯಿಸಿ. ಯೂರಿಕ್ ಆಸಿಡ್ ಅಧಿಕವಾಗಿರುವ ಯಾವುದೇ ರೂಪದಲ್ಲಿ ಹಸಿ ಪಪ್ಪಾಯಿಯನ್ನು ಆದಷ್ಟು ಹೆಚ್ಚು ತಿನ್ನಲು ಪ್ರಯತ್ನಿಸಿ.

Read More

ಪಾಟ್ನಾ: ನಿತೀಶ್ ಕುಮಾರ್ (Nitish Kumar) ನೇತೃತ್ವದ ಮಹಾಘಟಬಂದನ್ ಸರ್ಕಾರವು ಬಿಹಾರದ ಸಸಾರಾಮ್ ಮತ್ತು ಷರೀಫ್ ಪಟ್ಟಣಗಳಲ್ಲಿ ಕೋಮು ಗಲಭೆ, ಹಿಂಸಾಚಾರ ತಡೆಗಟ್ಟುವಲ್ಲಿ ವಿಫಲವಾಗಿದೆ. ಮುಂದಿನಬಾರಿ ಇಲ್ಲಿ ಬಿಜೆಪಿ ಸರ್ಕಾರವನ್ನು (BJP Government) ಅಧಿಕಾರಕ್ಕೆ ತಂದರೆ ಗಲಭೆಕೋರರನ್ನ ತಲೆಕೆಳಗಾಗಿ ನೇತುಹಾಕುವ ಮೂಲಕ ಗಲ್ಲಿಗೇರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗುಡುಗಿದ್ದಾರೆ. ಬಿಹಾರದ (Bihar) ನವಾಡ ಜಿಲ್ಲೆಯ ಹಿಸುವಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ಕ್ಕೆ ಬಿಹಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನ ತಲೆಕೆಳಗಾಗಿ ಗಲ್ಲಿಗೇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ. ಬಿಹಾರದ ಜನರು ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. ನರೇಂದ್ರ ಮೋದಿ (Narendra Modi) ಅವರು 3ನೇ ಅವಧಿಗೆ ಪ್ರಧಾನಿಯಾ ಗಾಬೇಕೆಂದು ದೇಶದ ಜನ ಬಯಸಿದ್ದಾರೆ. ಇದರಿಂದ ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂಬ ಕನಸಿನಿಂದ ದೂರ ಸರಿದಿದ್ದಾರೆ ಎಂದು ಕುಟುಕಿದರು. ಪ್ರಧಾನಿ ನರೇಂದ್ರ…

Read More

ನವದೆಹಲಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ʻ50 ವರ್ಷವಾದರೂ ನನಗೆ ಸ್ವಂತ ಮನೆಯಿಲ್ಲʼ ಎಂದು ಹೇಳಿಕೊಂಡಿದ್ದರು. ಇದರೊಂದಿಗೆ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಅಧಿಕೃತ ಸರ್ಕಾರಿ ನಿವಾಸವನ್ನು ತೊರೆಯುವಂತೆ ಸೂಚಿಸಿದೆ. ಈ ನಡುವೆ ಕಾಂಗ್ರೆಸ್‌ ನಾಯಕಿಯೊಬ್ಬರು ರಾಹುಲ್ ಗಾಂಧಿ ಅವರಿಗೆ ತಮ್ಮ 4 ಅಂತಸ್ತಿನ ಮನೆಯನ್ನೇ ಬರೆದುಕೊಟ್ಟಿದ್ದಾರೆ. ರಾಹುಲ್ ಗಾಂಧಿ ಹೆಸರಿಗೆ ಮನೆ ಬರೆದ ಬಳಿಕ ಅವರು ಪ್ರಮಾಣಪತ್ರವನ್ನು ಮಾಧ್ಯಮದವರಿಗೆ ತೋರಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷೆ ರಾಜಕುಮಾರಿ ಗುಪ್ತಾ (Rajkumari Gupta) ಅವರು ಮಂಗೋಲ್ವುರಿ ಪ್ರದೇಶದಲ್ಲಿ ತಮ್ಮ ಹೆಸರಿನಲ್ಲಿದ್ದ 4 ಅಂತಸ್ತಿನ ಮನೆಯನ್ನು ರಾಗಾ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ. ಗುಪ್ತಾ ಅವರು ಇಂದಿರಾ ಗಾಂಧಿ ಅವರ ಕಾಲದಲ್ಲಿ ಈ ಮನೆಯನ್ನು ಪಡೆದು ಕೊಂಡಿದ್ದರು ಎಂಬುದು ವಿಶೇಷವಾಗಿದೆ. ಈ ಕುರಿತ ವೀಡಿಯೋ ತುಣುಕನ್ನು ಕಾಂಗ್ರೆಸ್‌ ಸಹ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

Read More

ಅಮರಾವತಿ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು (Teacher) ಬಂಧಿಸಿದ (Arrest) ಘಟನೆ ಆಂಧ್ರಪ್ರದೇಶದ (Andhra Pradesh) ಚಿತ್ತೂರು ಜಿಲ್ಲೆಯ ಗಂಗವರಂ ಮಂಡಲ್ ಪ್ರದೇಶದಲ್ಲಿ ನಡೆದಿದೆ.ಆರೋಪಿಯನ್ನು ಶಿಕ್ಷಕ ಚಲಪತಿ (33) ಬಂಧಿತ ಆರೋಪಿ. ಚಲಪತಿ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ. ಚಲಪತಿಗೆ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ. ಆದರೂ ಆತ 12ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಪ್ರೀತಿಸಿದ್ದಾನೆ. ಅದಾದ ಬಳಿಕ ಬಾಲಕಿಯ ಅಂತಿಮ ಪರೀಕ್ಷೆ ಮುಗಿದ ನಂತರ ಸುಳ್ಳು ಹೇಳಿ ತಿರುಪತಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಬಾಲಕಿಯ ಬಳಿ ತಾನು ಪ್ರಾಮಾಣಿಕ, ತನ್ನನ್ನು ನಂಬು, ನಿನ್ನನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಬಣ್ಣದ ಮಾತುಗಳನ್ನು ಆಡಿ ನಂಬಿಸಿದ್ದಾನೆ. ಅದಾದ ಬಳಿಕ ಅವರಿಬ್ಬರು ಅಲ್ಲಿನ ದೇವಸ್ಥಾನದಲ್ಲಿ ಮದುವೆಯಾದರು. ಮದುವೆಯಾದ (Marriage) ಬಳಿಕ ಚಲಪತಿ ವರ್ತನೆಯಲ್ಲಿ ಬದಾಲಾವಣೆಯಾಗಿದೆ. ಇದನ್ನು ಗಮನಿಸಿದ ಆಕೆ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ.  ದಾದ ಬಳಿಕ ಆಕೆ ತನ್ನ ಪೋಷಕರೊಂದಿಗೆ ಗಂಗವರಂ ಪೊಲೀಸ್ ಠಾಣೆಗೆ ಹೋಗಿ ದೂರು…

Read More

ಮಲಪುರಂ: ಪ್ರೇಮಿಗಳಿಬ್ಬರ ನಡುವೆ ಜಗಳ ಉಂಟಾಗಿ ಪ್ರೇಯಸಿಯೊಬ್ಬಳು ಪ್ರಿಯಕರನ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ ಧಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಲಾಡ್ಜ್ ಒಂದರಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯುವಕನ್ನು ಸ್ಥಳೀಯ ಪುರಥೂರ್ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಪ್ರೇಮಿಗಳಿಬ್ಬರು ಲಾಡ್ಜ್‍ನಲ್ಲಿ ರೂಮ್ ಬುಕ್ ಮಾಡಿದ್ದು, ಗುರುವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಇರ್ಶಾದ್ ಬೆಳಿಗ್ಗೆ ತನ್ನ ಕೊಠಡಿಯಿಂದ ಓಡಿಬರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಆತನನ್ನು ಕೋಯಿಕ್ಕೋಡು ಆಸ್ಪತ್ರೆಗೆ ದಾಖಲು ಮಾಡಲಾ ಗಿದ್ದಾರೆ. ವೈದ್ಯರು ಯುವಕನ ತುರ್ತು ಅಪರೇಷನ್ ನಡೆಸಿ ಮರ್ಮಾಂಗವನ್ನು ಯಶಸ್ವಿಯಾಗಿ ಜೋಡಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರೇಮಿಯ ಮರ್ಮಾಂಗವನ್ನು ನಾನೇ ಚಾಕುವಿನಿಂದ ಕತ್ತರಿಸಿದ್ದೇನೆ ಎಂದು ಮಹಿಳೆ ಒಪ್ಪಿಕೊಂಡಿದ್ದಾಳೆ. ಕೃತ್ಯ ಎಸಗಿದ್ದು ಯಾಕೆ? ಮಹಿಳೆಗೆ ಈ ಹಿಂದೆ ಮದುವೆಯಾಗಿದ್ದು ಪತಿಗೆ ವಿಚ್ಛೇದನ ನೀಡಿದ್ದಳು. ಕಳೆದ 2 ವರ್ಷಗಳಿಂದ ಇರ್ಷಾದ್ ಜೊತೆ ಮಹಿಳೆ ಸಂಬಂಧ ಹೊಂದಿದ್ದು, ಇವರಿಬ್ಬರು ರಹಸ್ಯವಾಗಿ ಮದುವೆಯಾಗಿದ್ದರು. ಈ ಮದುವೆಯಾಗಿದ್ದರೂ ಇರ್ಷಾದ್ ಮತ್ತೊಂದು…

Read More

ಚಿಕ್ಕೋಡಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ (Assembly Election) ಹಿನ್ನೆಲೆ ನೀತಿ ಸಂಹಿತೆ (Code of Conduct) ಜಾರಿಯಲ್ಲಿದೆ. ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಚುನಾವಣೆ ಆಯೋಗದ ಪ್ರತಿ ತಾಲೂಕಿನ ಸರಹದ್ದಿನಲ್ಲಿ ಚೆಕ್ ಪೋಸ್ಟ್ (Check Post) ನಿರ್ಮಿಸಿ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳ ಮೇಲೆ ಅಧಿಕಾರಿಗಳು ನಿಗಾ ಇಡುವಂತೆ ಸೂಚನೆ ನೀಡಲಾಗುತ್ತಿದೆ. ಇದನ್ನು ಕಟ್ಟುನಿಟ್ಟಿನಿಂದ ರಾಜ್ಯಾದ್ಯಂತ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಅವರ ಪುತ್ರನ ಕಾರನ್ನು ಅಧಿಕಾರಿಗಳು ಪರಿಶೀಲನೆ ಮಾಡದೆ ಕರ್ತವ್ಯ ಲೋಪ ಎಸಿಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇಲ್ಲಿ ಪ್ರತಿಯೊಂದು ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ…

Read More

ಬಾಗಲಕೋಟೆ: ತೇರದಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಾರಿ ಪೈಪೋಟಿ ನಡೆದಿದ್ದು, ಹಾಲಿ ಶಾಸಕ ಸಿದ್ದು ಸವದಿವಯವರ ಶಿಷ್ಯ ರಾಜೇಂದ್ರ ಅಂಬಲಿ ಬಹಿರಂಗವಾಗಿ ಸೆಡ್ಡು ಹೊಡೆದಿರುವದೇ ತೀವ್ರ ತಲೇನೋವಾಗುವಲ್ಲಿ ಕಾರಣವಾಗಿದೆ.ಕಳೆದ ಮೂರು ವಿಧಾನಸಭಾ ಚುನಾವಣೆಗಳನ್ನು ಎದುರಿಸಿರುವ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಬಿಜೆಪಿಯಿಂದ ಸಿದ್ದು ಸವದಿ ಜಯ ಸಾಧಿಸಿದ್ದರೆ, ಒಂದು ಬಾರಿ ಕಾಂಗ್ರೆಸ್‌ನಿಂದ ಉಮಾಶ್ರೀ ಗೆದ್ದಿದ್ದಾರೆ. ಹಿಂದೆಂದೂ ಕಾಣದಂತಹ ಬಂಡಾಯದ ಬೇಗುದಿ ಎರಡೂ ಪಕ್ಷಗಳಲ್ಲಿ ತೀವ್ರಗೊಂಡಿದ್ದು, ಇದೀಗ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು ರಾಜಧಾನಿಯಲ್ಲಿಯೇ ಬಿಡಾರ ಹೂಡಿದ್ದು, ಖಾಸಗಿ ಹೊಟೇಲ್ ಮುಂಭಾಗದಲ್ಲಿರುವ ಪಕ್ಷದ ವರಿಷ್ಠರ ಎದುರು ಬ್ಯಾನರ್ ಹಿಡಿದು ನೇಕಾರ ಸಮುದಾಯಕ್ಕೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಟಿಕೆಟ್ ಆಕಾಂಕ್ಷಿ ರಾಜೇಂದ್ರ ಅಂಬಲಿ, ಕ್ಷೇತ್ರದಲ್ಲಿನ ವಾಸ್ತವ ಅರಿತು ಈ ಬಾರಿ ಟಿಕೆಟ್ ನೀಡಬೇಕು. ಶೇ.40 ರಷ್ಟುನೇಕಾರ ಸಮುದಾಯವನ್ನೇ ಹೊಂದಿರುವ ತೇರದಾಳದಲ್ಲಿ ಬಹು ದಿನಗಳ ಬೇಡಿಕೆಯಾಗಿರುವದನ್ನು ಪಕ್ಷವು ಈಡೇರಿಸಬೇಕು. ಪಕ್ಷ ಗೆಲ್ಲಬೇಕಾದರೆ ನೇಕಾರ ಸಮುದಾಯಕ್ಕೆ ನೀಡಿದರೆ ಮಾತ್ರ ಗೆಲುವು…

Read More

ಹಾವೇರಿ: ವಿಧಾನಸಭಾ ಚುನಾವಣೆ ಅಂಗವಾಗಿ ಮುದ್ರಣಾಲಯ ಮಾಲೀಕರು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಪ್ರಚಾರ ಸಾಮಗ್ರಿಗಳ ಮುದ್ರಣ ಹಾಗೂ ಲೋಕಲ್‌ ಕೇಬಲ್‌ ಟಿವಿ ಆಪರೇಟರ್‌ಗಳು ಜಾಹೀರಾತುಗಳ ಪ್ರಕಟಿಸುವ ಪೂರ್ವದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಮುದ್ರಣಾಲಯದ ಮಾಲೀಕರು ಹಾಗೂ ಲೋಕಲ್‌ ಕೇಬಲ್‌ ಟಿವಿ ಆಪರೇಟರ್‌ಗಳ ಜೊತೆಗೆ ಸಭೆ ನಡೆದ ಅವರು, ‘‘ರಾಜಕೀಯ ಪಕ್ಷದವರು, ಅಭ್ಯರ್ಥಿ ಮುದ್ರಿಸಿದ ಪ್ರತಿಗಳ ಸಂಖ್ಯೆ ಸಹ ರಜಿಸ್ಟರ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು’’ ಎಂದರು. ‘‘ಮುದ್ರಣಕ್ಕೆ ಆದೇಶ ನೀಡಿದ ವ್ಯಕ್ತಿಯಿಂದ ಕಡ್ಡಾಯವಾಗಿ ಒಂದು ಘೋಷಣೆಯನ್ನು ದ್ವಿಪ್ರತಿಯಲ್ಲಿ ಪಡೆದುಕೊಳ್ಳಬೇಕು. ಈ ಘೋಷಣೆಗೆ ಇಬ್ಬರ ಸಾಕ್ಷಿದಾರರ ರುಜು ಪಡೆದುಕೊಳ್ಳಬೇಕು. ಘೋಷಣೆಯನ್ನು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರತಿ ಮುದ್ರಣಾಲದ ಮಾಲೀಕರು ಪಡೆದುಕೊಂಡು ನಂತರ ಮಾಡಿರಬೇಕು. ಮುದ್ರಣ ಮಾಡಿದ ಎರಡು ದಿನದೊಳಗಾಗಿ ಘೋಷಣೆ ಮತ್ತು ಮುದ್ರಿಸಿದ ಪ್ರಚಾರ ಸಾಮಗ್ರಿಯ ಒಂದು ಪ್ರತಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು.…

Read More

ವಿಜಯನಗರ ಜಿಲ್ಲೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನೀತಿಸಂಹಿತೆ ಜಾರಿಯಲ್ಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಹಣ ಸಾಗಾಟ ತಡೆಯಲು ಚೆಕ್‌ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಭಾನುವಾರ ಸೂಕ್ತ ದಾಖಲೆ ಇಲ್ಲದೆ ವಾಹನಗಳಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಚೆಕ್‌ಪೋಸ್ಟ್ ಬಳಿ ತಪಾಸಣೆ ನಡೆಸಿ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ. ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷ ರೂ. ಹಣ ಹಾಗೂ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಚೆಕ್‌ಪೋಸ್ಟ್‌ನಲ್ಲಿ ಹಿರೇಕೆರೂರಿನಿಂದ ಮಾಗಳಕ್ಕೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡು ಗ್ರಾಮೀಣ ಪೊಲೀಸ್ ಠಾಣೆ ಮತ್ತು ಹಿರೇಹಡಗಲಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More