ಧಾರವಾಡ: ನಗರದ ಲೈನ್ ಬಜಾರ್ ಬಳಿಯ ಕೊರವರ ಓಣಿಯಲ್ಲಿ ದೇವರ ಮುಂದೆ ಹಚ್ಚಿದ್ದ ದೀಪದಿಂದ ಮನೆಯೇ ಹೊತ್ತಿ ಉರಿದ ಘಟನೆ ನಡೆದಿದೆ. ಮಹಾದೇವಪ್ಪ ಭಜಂತ್ರಿ ಎಂಬುವರಿಗೆ ಸೇರಿದ್ದ ಮನೆ ಇದಾಗಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳು ನಾಶವಾಗಿದ್ದು, ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author: Prajatv Kannada
ಉತ್ತರ ಕನ್ನಡ: ಜಿಲ್ಲೆಯ ಮಾಜಾಳಿ ಬಳಿ ಸಮುದ್ರದಲ್ಲಿ ಅಕ್ರಮವಾಗಿ ಬೋಟ್ನಲ್ಲಿ ಸಾಗಿಸುತ್ತಿದ್ದ 2.90 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಗೋವಾದಿಂದ ಫೆನ್ನಿ, ವಿಸ್ಕಿ, ಉರಾಕ್ ಸೇರಿದಂತೆ ಹಲವು ಬ್ರ್ಯಾಂಡ್ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕರಾವಳಿ ಕಾವಲುಪಡೆ ಇನ್ಸ್‌ಪೆಕ್ಟರ್ ನಿಶ್ಚಲ್ ಕುಮಾರ್ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಬೋಟ್ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಕಾರವಾರ ಕರಾವಳಿ ಕಾವಲುಪಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರದಲ್ಲಿ ಈಜಲು ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಯುವತಿಯರು ಒಬ್ಬ ಯುವಕ ಸಾವನ್ನಪ್ಪಿದ್ದು. ಬೆಂಗಳೂರಿನ ಸಾರಾಯಿ ಪಾಳ್ಯದ 20 ವರ್ಷದ ಪೂಜಾ 21 ವರ್ಷದ ರಾಧಿಕಾ 22 ವರ್ಷದ ಇಮ್ರಾನ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ವೀಕೆಂಡ್ ಆಗಿದ್ದರಿಂದ ಇಂದು ಬೆಳಗ್ಗೆ ಬೆಂಗಳೂರಿನಿಂದ ಶ್ರೀನಿವಾಸ ಸಾಗರಕ್ಕೆ ಮೂರು ಬೈಕ್ ಗಳಲ್ಲಿ 6 ಜನರು ಬಂದಿದ್ದರು.. ಬೇಸಿಗೆಯಾಗಿದ್ದರಿಂದ ಬಿಸಿಲಿನ ಧಗೆಗೆ ಈಜಾಡಲು ಮೂವರು ಜಲಾಶಯಕ್ಕಿಳಿದಿದ್ದರಂತೆ.. ಪೂಜಾ ಮೃತ ದೇಹವನ್ನು ಹೊರ ತೆಗೆದಿದ್ದು. ಇನ್ನುಳಿದ ರಾಧಿಕಾ ಹಾಗೂ ಇಮ್ರಾನ್ ಮೃತ ದೇಹಗಳನ್ನ ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಮೃತರೆಲ್ಲರೂ ಬೆಂಗಳೂರಿನಲ್ಲಿ ಬಿ ಫಾರಂ ಓದುತ್ತಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಾಡಾಳ್ ವೀರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಮಾಡಾಳ್ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು.…
ಬೆಂಗಳೂರು: 2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಹೊತ್ತಲ್ಲೇ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಮಸೀದಿಗೆ ಹೋಗಿ ನಮಾಜ್ ಮಾಡಿದರು. ಈ ವಿಚಾರವನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕರು, ಎಲೆಕ್ಷನ್ ಗಿಮಿಕ್ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬಿಜೆಪಿ ಕಾಲೆಳೆದಿದ್ದರು. ಇದೀಗ ನಮಾಜ಼್ ಮಾಡಿದ್ದರ ಬಗ್ಗೆ ಶಾಸಕ ಉದಯ್ ಗರುಡಾಚಾರ್ ಅವರು ತಮ್ಮ ಕಚೇರಿಯಲ್ಲಿ ಪ್ರತಿಕ್ರಿಯಿಸಿ, ಭಾರತ ದೇಶ ಒಂದು ಜ್ಯಾತ್ಯಾತೀತ ದೇಶ, ಇಲ್ಲಿ ಹಿಂದೂಗಳು, ಮುಸ್ಲಿಮರು, ಸಿಖ್ಖರು ಎಲ್ಲಿಗೂ ಅವಕಾಶ ಇದೆ. ನಾನೊಬ್ಬ ಬ್ರಾಹ್ಮಣ, ಬೆಳಗ್ಗೆ ಸ್ನಾನ ಮುಗಿಸಿ ಸಂಧ್ಯಾವಂದನೆ ಮಾಡುತ್ತೇನೆ. ಒಮ್ಮೆ ಮನೆಯಿಂದ ಹೊರಗಡೆ ಬಂದರೆ ನನ್ನ ಕಣ್ಣಿಗೆ ಎಲ್ಲರೂ ಒಂದೇ. ಕ್ರಿಸ್ಮಸ್ ಸಮಯದಲ್ಲಿ ನಾನು ಚರ್ಚ್ ಗೆ ಹೋಗುತ್ತೇನೆ, ಶ್ರೀರಾಮನವಮಿ ಆಚರಿಸಿದ್ದೇನೆ. ಭಾರತ ಭವ್ಯ ಭಾರತ ಆಗಬೇಕು ಅಂದ್ರೆ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನರೇಂದ್ರ ಮೋದಿ, ಅಮಿತ್ ಶಾ, ನಮ್ಮ ಸಂಘದ ಮೋಹನ್ ಭಾಗವತ್ ಎಲ್ಲರೂ ಇದನ್ನೇ ಹೇಳಿದ್ದಾರೆ.…
ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ ಮೂಡಿಲ್ಲ. ಈ ನಡುವೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಶನಿವಾರ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಆದರೆ ಅಧಿಕೃತವಾಗಿ ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಾರದೆ ಇದ್ದರೂ, ಸದ್ಯ ಟಿಕೆಟ್ ವಿಚಾರವಾಗಿ ನಡೆಯುತ್ತಿರುವ ಆಂತರಿಕ ತಿಕ್ಕಾಟದ ಹಿನ್ನೆಲೆಯ ನಡುವೆ ಈ ಭೇಟಿ ಸಹಜವಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇದೀಗ ಉಳಿದ 100 ಕ್ಷೇತ್ರಗಳ ಹೆಸರುಗಳನ್ನು ಅಂತಿಮಗೊಳಿಸಬೇಕಾಗಿದೆ. ಈ ನಡುವೆ ಸುಮಾರು 35 ಕ್ಷೇತ್ರಗಳಿಗೆ…
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ:ಮೂಡಲಪಾಳ್ಯ ಜ್ಞಾನ ಸೌಧದಲ್ಲಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನವತಿಯಿಂದ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 116ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಸಮಾರಂಭ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರತಿಮೆಗೆ ಬೇಲಿ ಮಠದ ಶ್ರೀ ಶಿವರುದ್ರ ಮಹಾಸ್ವಾಮೀಜಿರವರು , ವಸತಿ ಸಚಿವರಾದ ವಿ.ಸೋಮಣ್ಣರವರು, ಖ್ಯಾತ ವಿಜ್ಞಾನಿಗಳಾದ ಪದ್ಮಶ್ರೀ ಡಾ.ಎ.ಎಸ್.ಕಿರಣ್ ಕುಮಾರ್ ರವರು, ಜಯದೇವ ಆಸ್ಪತ್ರೆ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ರವರು, ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಸೋಮಣ್ಣರವರು, ಕನ್ನಡಪರ ಹೋರಾಟಗಾರ ಪಾಲನೇತ್ರ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ದಾಸೇಗೌಡರವರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ದೀಪಾ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಶಿವರುದ್ರ ಸ್ವಾಮೀಜಿಗಳು ಮಾತನಾಡಿ ಸಮಾಜದಲ್ಲಿ ಜ್ಞಾನದ ದೀಪಾವಾಗಿ, ಎಲ್ಲರು ಬಾಳಿಗೆ ಬೆಳಕಾಗಿ ನಿಂತವರು ಶ್ರೀ ಶಿವಕುಮಾರ ಸ್ವಾಮೀಜಿರವರು.ಮನುಷ್ಯ ಉತ್ತಮ ಪ್ರಜೆಯಾಗಿ ಬದುಕಲು ಗುರುಗಳ ಮಾರ್ಗದರ್ಶನ ಮುಖ್ಯ.ಪರಮಾತ್ಮ ಎಲ್ಲಿ ವಾಸ ಮಾಡುತ್ತಾನೆ ಎಂದರೆ ಎಲ್ಲರ ಭಕ್ತರ ಹೃದಯದಲ್ಲಿ.ಕಾಯಕ…
ನಾವೆಲ್ಲ ಮನುಷ್ಯರು ಸತ್ತಾಗ ಅಂತ್ಯ ಸಂಸ್ಕಾರ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಮನುಷ್ಯರಂತೆ ಕತ್ತೆಗೆ ಅಂತ್ಯ ಸಂಸ್ಕಾರ ಮಾಡಿರುವ ಅಪರೂಪದ ಘಟನೆಯೊಂದು ಹೊಳಲ್ಕೆರೆ ತಾಲೂಕಿನ ಮದ್ದೇರು ಗ್ರಾಮದಲ್ಲಿ ಇಂದು ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಹೋಬಳಿಯ ಮದ್ದೇರು ಗ್ರಾಮದ ಗ್ರಾಮಸ್ಥರು ತಮ್ಮ ಊರಿನ ಕತ್ತೆಯೊಂದು ಅಕಾಲಿಕವಾಗಿ ಸಾವಿಗೀಡಾಗಿದ್ದಕ್ಕೆ ಕಣ್ಣೀರು ಹಾಕಿ ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಿ , ಇಡೀ ಊರಿಗೆ ಅನ್ನ ಸಂತರ್ಪಣೆ ಏರ್ಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಕೋರಿದ್ದಾರೆ. ಹೌದು,, ಸಮೃದ್ಧ ಮಳೆ ಬೆಳೆಯಾಗಲಿ ಎಂದು ಗ್ರಾಮಸ್ಥರು ಸುಮಾರು ವರ್ಷಗಳಿಂದ ಕಪ್ಪೆ ಮತ್ತು ಕತ್ತೆಗೆ ಮದುವೆ ಮಾಡುತ್ತಿದ್ದರು. ಈ ರೀತಿ ಮದುವೆ ಮಾಡುವುದರಿಂದ ಸಮೃದ್ಧ ಮಳೆ ಬೆಳೆಯಾಗುತ್ತದೆ ಎಂಬುದು ಇಲ್ಲಿನ ಪ್ರತೀತಿ. ಈ ಹಿನ್ನೆಲೆಯಲ್ಲಿ ಪ್ರೀತಿಯಿಂದ ಸಾಕಿದ್ದ, ದೇವರಂತೆ ಕಾಣುತ್ತಿದ್ದ ಕತ್ತೆಯೂ ಇಂದು ಅಕಾಲಿಕ ಮರಣ ಹೊಂದಿದೆ. ವಿಷಯ ತಿಳಿದು ಗ್ರಾಮಸ್ಥರು ಮನುಷ್ಯರಿಗೆ ಯಾವ ರೀತಿ ಅಂತ್ಯಸಂಸ್ಕಾರ ಮಾಡುತ್ತೇವೆಯೋ ಅದೇ ರೀತಿ ಕತ್ತೆಗೆ ಅಂತ್ಯ ಸಂಸ್ಕಾರ ಮಾಡುವುದರ ಮುಖಾಂತರ ಕತ್ತೆ ಆತ್ಮಕ್ಕೆ ಮುಕ್ತಿ…
ಹುಬ್ಬಳ್ಳಿ : ಮತದಾನದಿಂದ ಯಾರೂ ಕೂಡ ವಂಚಿತರಾಗಬಾರದು. ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 18 ವರ್ಷ ಪೂರ್ಣಗೊಳ್ಳುವ ಅರ್ಹ ಯುವ ಮತದಾರರು ಮತದಾನ ನಡೆಯುವ 10 ದಿನ ಮುಂಚಿತವಾಗಿ ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. 72 ಹುಬ್ಬಳ್ಳಿ-ಧಾರವಾಡ ಪೂರ್ವ(ಪರಿಶಿಷ್ಟ ಜಾತಿ) ವಿಧಾನಸಭಾ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು 72 ಹುಬ್ಬಳ್ಳಿ-ಧಾರವಾಡ ಪೂರ್ವ (ಪರಿಶಿಷ್ಟ ಜಾತಿ) ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ವಿನೋದ ಹೆಗ್ಗಳಗಿ ಹೇಳಿದರು. ಹುಬ್ಬಳ್ಳಿ ಶಹರ ತಹಸೀಲ್ದಾರ ಕಾರ್ಯಾಲಯದಲ್ಲಿ 72 ಮತಕ್ಷೇತ್ರ ವ್ಯಾಪ್ತಿ, ಚುನಾವಣಾ ಸಿದ್ಧತೆ, ಸಿಬ್ಬಂದಿಗಳ ನೇಮಕ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು, ಚೆಕ್ ಪೋಸ್ಟ್ ಹಾಗೂ ಇತರ ವಿಷಯಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದ ವ್ಯಾಪ್ತಿಯಲ್ಲಿ 2,07,577 ಮತದಾರರು ಇದ್ದು, ಅದರಲ್ಲಿ 1,03,295 ಪುರುಷರು, 1,04,268 ಮಹಿಳೆಯರು, 14 ಇತರೆ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟ 4080 ಮತದಾರರಿದ್ದಾರೆ. ಅವರಿಗೆ ಮನೆಯಿಂದಲೇ…
ಹುಬ್ಬಳ್ಳಿ/ ಧಾರವಾಢ: ಅವರೆಲ್ಲರೂ ಮಹದಾಯಿಗಾಗಿ ಸಾಕಷ್ಟು ಹೋರಾಟ ಮಾಡಿದವರು. ಈಗ ಮಹದಾಯಿ ನೀರಿಗಾಗಿ ಕಾಶಿಯಾತ್ರೆ ಮಾಡಿ ಬಂದಿದ್ದಾರೆ. ಕಣಕುಂಬಿಯ ನೀರನ್ನು ಕಾಶಿ ವಿಶ್ವನಾಥನಿಗೆ ಅಭಿಷೇಕ ಮಾಡಿದ ಹೋರಾಟಗಾರರು ತಾಯಿ ನಾಡು ಹುಬ್ಬಳ್ಳಿಗೆ ಆಗಮಿಸಿದ್ದಾರ. ಹೌದು…ಬೆಳಗಾವಿ ಜಿಲ್ಲೆಯ ಕಣಕುಂಬಿಯಿಂದ ಸಂಗ್ರಹಿಸಿದ ಮಹದಾಯಿ ನದಿಯ ನೀರನ್ನು ಕಾಶಿ ವಿಶ್ವನಾಥನಿಗೆ ಅಭಿಷೇಕ ಮಾಡಲು ಹುಬ್ಬಳ್ಳಿಯಿಂದ. ಸಾವಿರಾರು ಜನ ಮಹದಾಯಿ ಹೋರಾಟಗಾರರು ಕಾಶಿಗೆ ಪ್ರಯಾಣ ಬೆಳೆಸಿದ್ದರು. ಮಹದಾಯಿಗಾಗಿ ವಿನೂತನ ಹೋರಾಟದ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸುವ ಮೂಲಕ ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಹುಬ್ಬಳ್ಳಿ ಮೂರುಸಾವಿರ ಮಠದ ಆವರಣದಲ್ಲಿ ಸೇರಿದ ಧಾರವಾಡ, ಬಾಗಲಕೋಟ, ಗದಗ ಹಾಗೂ ಹಾವೇರಿ ಜಿಲ್ಲೆಯಿಂದ ಆಗಮಿಸಿದ ಹೋರಾಟಗಾರರು ಚನ್ನಮ್ಮ ವೃತ್ತ ಲ್ಯಾಮಿಂಗ್ಟನ್ ರಸ್ತೆ ಮಾರ್ಗವಾಗಿ ಸಾಗಿ ರಾತ್ರಿ 8 ಗಂಟೆಗೆ ರೈಲ್ವೆ ನಿಲ್ದಾಣ ತಲುಪಿದ್ದರು. ಈಗ ಮಹತ್ವದ ಕಾರ್ಯವನ್ನು ಪೂರ್ಣಗೊಳಿಸಿ ಹುಬ್ಬಳ್ಳಿಗೆ ಆಗಮಿಸಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲ ಪಕ್ಷಗಳ ಮೇಲೆ ನಮಗೆ ವಿಶ್ವಾಸ ಹೊರಟು ಹೋಗಿದೆ. ನ್ಯಾಯಾಧೀಕರಣ ತೀರ್ಪು ನೀಡಿ ಹಲವು…