ಹೊಸದಿಲ್ಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್, 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಿಂದ ಹೊರಗುಳಿದಿದ್ದಾರೆ. ಇದೀಗ ಮುಂಬರುವ ಏಷ್ಯಾ ಕಪ್ ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳಿಂದಲೂ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ. ಕ್ರಿಕ್‌ಬಜ್ ಮೂಲಗಳ ಪ್ರಕಾರ ಭಾರತ ತಂಡದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಅವರಿಗೆ ಆಗಿರುವ ಗಾಯಗಳಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಕ್ರಿಕೆಟ್ ಅಂಗಣಕ್ಕೆ ಮರಳಲು ಇನ್ನೂ 7 ರಿಂದ 8 ತಿಂಗಳು ಬೇಕಾಗಬಹುದು ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ 2024ರ ಜನವರಿ ಮೇಲೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆ ಇದೆ. ರಿಷಭ್ ಪಂತ್ ಸದ್ಯ ಊರುಗೋಲು ಸಹಾಯದಿಂದ ನಡೆಯುತ್ತಿದ್ದಾರೆ ಹಾಗೂ ತಮಗಾಗಿರುವ ಗಾಯಗಳಿಂದ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಕೆಲವೇ ವಾರಗಳಲ್ಲಿ ಊರುಗೋಲು ನೆರವಿಲ್ಲದ ನಡೆಯಲಿದ್ದಾರೆ. ಇತ್ತೀಚೆಗೆ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ವೀಕ್ಷಿಸಲು ಅರುಣ್…
Author: Prajatv Kannada
ಮುಂಬೈ: ಜೂನ್ 7 ರಿಂದ 11ರ ವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ (WTC) ಬಿಸಿಸಿಐ (BCCI) ಟೀಂ ಇಂಡಿಯಾ ಆಟಗಾರರನ್ನ ಆಯ್ಕೆ ಮಾಡಿದೆ. 15 ಜನರ ಬಲಿಷ್ಠ ಆಟಗಾರರ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು, ತಂಡದಲ್ಲಿ ಅಜಿಂಕ್ಯಾ ರಹಾನೆಗೆ (Ajinkya Rahane) ಸ್ಥಾನ ನೀಡಲಾಗಿದೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದ ಸೂರ್ಯಕುಮಾರ್ ಯಾದವ್‌ಗೆ (Suryakumar Yadav) ಕೊಕ್ ನೀಡಲಾಗಿದೆ. ಟೀಂ ಇಂಡಿಯಾ (Team India) ಪರ 82 ಟೆಸ್ಟ್ ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ 2022ರ ಜನವರಿಯಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. ಆ ನಂತರ ರಹಾನೆ ಕಳಪೆ ಫಾರ್ಮ್‌ನಿಂದಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಇದೀಗ 2023ರ 16ನೇ ಐಪಿಎಲ್ (IPL 2023) ಆವೃತ್ತಿಯಲ್ಲಿ ರಹಾನೆ ಚೆನ್ನೈಸೂಪರ್ ಕಿಂಗ್ಸ್ (CSK) ಪರ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. 5 ಪಂದ್ಯಗಳಲ್ಲಿ 209 ರನ್ ಬಾರಿಸಿದ್ದಾರೆ. 52.25 ಸರಾಸರಿಯಲ್ಲಿರುವ ರಹಾನೆ 199.04 ಸ್ಟ್ರೈಕ್‌ರೇಟ್ ಕಾಯ್ದುಕೊಂಡಿದ್ದಾರೆ. ಅಲ್ಲದೇ ಐಪಿಎಲ್‌ಗೂ ಮುನ್ನ…
ಅಣ್ಣಿಗೇರಿ: ನಾಳೆ ಪಟ್ಟಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಎಪ್ರಿಲ್ 28ರಂದು ಶುಕ್ರವಾರ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ತಿಳಿಸಿದರು. ಪಟ್ಟಣದಲ್ಲಿ ಬುಧವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಂಕರ್ ಪಾಟೀಲ ಮುನೇನಕೊಪ್ಪರ ಚುನಾವಣೆ ಪ್ರಚಾರಕ್ಕಾಗಿ ಶುಕ್ರವಾರ 28ನೇ ತಾರೀಕಿನಂದು ಬೆಳಿಗ್ಗೆ 10 ಗಂಟೆಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ನಾವು ಅನೇಕ ತಯಾರಿಗಳನ್ನು ಹಾಗೂ ವ್ಯವಸ್ಥಿತವಾದ ಕಾರ್ಯಕ್ರಮವನ್ನು ನಡೆಸಲು ಸಜ್ಜಾಗಿದ್ದೇವೆ ಎಂದರು. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವರಾದ ಪ್ರಲಾಜಿ ಜೋಶಿ,ಶಂಕರ ಪಾಟೀಲ ಮುನ್ನೇನಕೊಪ್ಪ ಸೇರಿದಂತೆ ಅನೇಕ ಮುಖಂಡರು ಸಾತ ನೀಡಲಿದ್ದಾರೆ.ಹಾಗೂ ಈ ಒಂದು ಕಾರ್ಯಕ್ರಮಕ್ಕೆ 20 ರಿಂದ 25 ಸಾವಿರ ಜನಸಂಖ್ಯೆ ಕೊಡುವ ನಿರೀಕ್ಷೆ ಎಂದು ಇದೆ ವೇಳೆ ತಿಳಿಸಿದರು.ಈ ವೇಳೆ ಎಸ್ ಬಿ ದಾನಪ್ಪ ಗೌಡರ,…
ಹುಬ್ಬಳ್ಳಿ: ಪ್ರಸಕ್ತ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯವರು ಹಣ ಬಲ ಮತ್ತು ತೋಳ್ಬಲ ಪ್ರದರ್ಶಿಸುತ್ತಿದ್ದಾರೆ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಏನೇ ಮಾಡಿದರೂ ಕೂಡ ರಾಜ್ಯದ ಜನ ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ರಾಜ್ಯದೆಲ್ಲೆಡೆ ಪಕ್ಷಕ್ಕೆ ಒಳ್ಳೆಯ ವಾತಾವರ ಣವಿದ್ದು, ಈ ಬಾರಿ ಪಕ್ಷ ರಾಜ್ಯದಲ್ಲಿ ಜಯಭೇರಿ ಬಾರಿಸಲಿದೆ ಎಂದರು. ಅಮಿತ್ ಶಾ ಹೇಳಿಕೆಗೆ ಕಿಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆ ಆಗುತ್ತೆದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದಾರೆ. ಹೀಗೆ ಪ್ರಚೋದನಕಾರಿಯಾಗಿ ಮಾತನಾಡುವುದನ್ನು ಶಾ ಬಿಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷ ಅವರ ವಿರುದ್ಧ ಹೋರಾಟ ಮಾಡಬೆಕಾಗುತ್ತದೆ ಎಂದು ಎಚ್ಚರಿಸಿದರು. ಪ್ರಧಾನಿ ಮೋದಿ ನಾ ಕಾವೊಂಗಾ ನಾ ಖಾನೇದೂಂಗಾ ಎಂದು ಹೇಳುತ್ತಾರೆ. ಆದರೆ, ತಿನ್ನುವವರೇ ಅವರ ಪಕ್ಷದಲ್ಲಿ ಕುಳಿತಿದ್ದಾರೆ. ಹೀಗಿದ್ದರೂ ಕೂಡ ಮೋದಿ ಯಾಕೆ ಸುಮ್ಮನೆ ಕುಳಿತಿದ್ದಾರೆ ಗೊತ್ತಿಲ್ಲ. ನೀವೇನು ಸತ್ಯ…
ಹುಬ್ಬಳ್ಳಿ: ನನಗೆ ನೀಡಿದ 10 ವಷ೯ದ ಕಾಲಾವಧಿಯಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನಾನು ಮಾಡಿದ ಕಾರ್ಯಗಳಿಗೆ ತಾವು ನನಗೆ ಮತ ಹಾಕುವ ಮೂಲಕ ಆಶೀರ್ವಾದ ಮಾಡಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅವರು, ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 75ರಲ್ಲಿ ಬರುವ ನೂರಾನಿ ಪ್ಲಾಟ್, ಕೆ.ಇ.ಬಿ. ಲೇಔಟ್, ಶರಾವತಿ ನಗರ, ಟಿಪು ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದರು. ಕಳೆದ ಹತ್ತು ವರ್ಷದ ಹಿಂದೆ ಕ್ಷೇತ್ರ ಅಭಿವೃದ್ಧಿ ಕಾಣದೆ ಅತ್ಯಂತ ಹಿಂದುಳಿದ ಪ್ರದೇಶವಾಗಿ ಸಾಕಷ್ಟು ಸಮಸ್ಯೆಗಳು ತುಂಬಿಕೊಂಡು ಕ್ಷೇತ್ರ ಜರ್ಜಿತವಾಗಿತ್ತು. ನಾನು ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಇದರ ಸದುಪಯೋಗ ಪಡಿಸಿಕೊಂಡ ನಾನು ಸಾವಿರಾರು ಕೋಟಿ ರೂಗಳ ಅನುದಾನವನ್ನು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೃಪಾ ಆಶೀರ್ವಾದದಿಂದ ಕ್ಷೇತ್ರಕ್ಕೆ ತಂದಿದ್ದೇನೆ. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರು ಅಧಿಕಾರ ವಹಿಸಿಕೊಳ್ಳಲಿದೆ.…
ಧಾರವಾಡ: ಲೋಕಾಯಕ್ತ ಬಲೆಗೆ ಬಿದ್ದಿದ್ದ ಭೂಮಾಪನಾ ಅಧಿಕಾರಿಗೆ ಧಾರವಾಡದ ಮೂರನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದೆ. ಕಳೆದ 2018ರಲ್ಲಿ ರಮೇಶ್ ಡವಳಗಿ ಎಂಬ ಭೂಮಾಪನಾ ಅಧಿಕಾರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ಜಮೀನು ಸರ್ವೇಗಾಗಿ ರೈತನಿಂದ 4 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ. ಈ ಹಿನ್ನೆಲೆಯಲ್ಲಿ ಅಧಿಕಾರಿಯ ವಿರುದ್ಧ ನ್ಯಾಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈಗ ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದ್ದು, ಆರೋಪಿತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರಾರು ದಂಡ ವಿಧಿಸಿ ಆದೇಶ ಹೊರಡಿಸಿದೆ.
ಚಾಮರಾಜನಗರ:- ಜೆಡಿಎಸ್ ಅಭ್ಯರ್ಥಿಗೆ ಆಮಿಷವೊ ಡ್ಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿರುದ್ಧ ಕ್ರಮವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್‌ಗೆ ಕರ್ನಾಟಕ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಅಂಬರೀಶ್ ದೂರು ನೀಡಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರ 223 ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಪರಿಶೀಲನೆ ಮುಗಿದು ಹಿಂಪಡೆಯಲು ನಿಗದಿಯಾಗಿದ್ದ ಸಮಯದೊಳಗಿನ ಪರಿಮಿತಿಗೆ ಒಳಪಟ್ಟು ಒಂದು ಗಂಟೆ ಅವಧಿಯ ಹಿಂದೆ ಜೆ.ಡಿ.ಎಸ್ ಅಭ್ಯರ್ಥಿ ಆಲೂರು ಮಲ್ಲು ಅವರಿಗೆ ಬಿ.ಜೆ.ಪಿ ಅಭ್ಯರ್ಥಿಯಾದ ಸೋಮಣ್ಣ ಹಾಗೂ ಅವರ ಸಹಚರರು ಕರೆ ಮಾಡಿ ಆಮಿಷ ಒಡ್ಡಿರುವುದರ ವಿಷಯವು ಸುದ್ದಿ ಮಾದ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದಾಗಿದೆ. ಜೊತೆಗೆ ಈ ಆಡಿಯೋ ಸಂಭಾಷಣೆಯ ನೈಜತೆಯನ್ನು ಕುರಿತು ಸ್ವತಃ ಜೆ.ಡಿ.ಎಸ್ ಅಭ್ಯರ್ಥಿ ಆಲೂರು ಮಲ್ಲು ಸತ್ಯವೆಂದು ಹೇಳಿಕೆ ಕೊಟ್ಟಿದ್ದಾರೆ. ಹೀಗಿದ್ದರೂ ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳ ಮೇಲೆ ನಡೆದಿರುವ ಈ ದೌರ್ಜನ್ಯ ಪ್ರಕರಣ ಕುರಿತು ಸಾರ್ವಜನಿಕ ಸಾಕ್ಷ್ಯ ಲಭ್ಯವಿದ್ದರೂ ಕನಿಷ್ಟ ಕ್ರಮವನ್ನು ತೆಗೆದುಕೊಳ್ಳದೆ ಇರುವುದು ಅನುಮಾನವನ್ನು ಹುಟ್ಟುಹಾಕಿದೆ. ಈ ಕೂಡಲೇ ಆಮಿಷವೊಡ್ಡಿರುವ…
ಧಾರವಾಡ: ನಾನು ಯಾವ ಮನೆ ಕಟ್ಟಿ ಬೆಳೆಸಿದ್ದೆನೋ ಅದೇ ಮನೆಯಿಂದ ಇಂದು ನನ್ನನ್ನು ಹೊರ ಹಾಕಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಧಾರವಾಡದ ಕಡಪಾ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಬಿಜೆಪಿ ಪಕ್ಷವನ್ನು ಕಟ್ಟಿದ್ದೆ. 6 ಬಾರಿ ಶಾಸಕನಾಗಿ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದೆ. ಆದರೆ, 7ನೇ ಬಾರಿಗೆ ಸ್ಪರ್ಧೆ ಮಾಡಲು ನನಗೆ ಅವಕಾಶ ಕೊಡಲಿಲ್ಲ. ಪಕ್ಷದವರು ಗೌರವಯುತವಾಗಿ ಸ್ಪರ್ಧೆ ಮಾಡಬೇಡಿ ಎಂದಿದ್ದರೆ ನಾನೇ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ, ಪಕ್ಷದವರು ನನ್ನನ್ನು ಅಗೌರವದಿಂದ ನಡೆಸಿಕೊಂಡರು. ಸಣ್ಣ ಹುಡುಗನಿಗೆ ಹೇಳುವ ಹಾಗೆ ನನಗೆ ಸ್ಪರ್ಧೆ ಮಾಡದಂತೆ ಹೇಳಿದರು. ಅದು ನನ್ನ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡಿತು. ಪಕ್ಷ ಕಟ್ಟಿ ಬೆಳೆಸಿದವರೇ ಪಕ್ಷ ಬಿಡುವಂತಾಯಿತು ಎಂದರು. ಬಿಜೆಪಿ ಪಕ್ಷ ಈಗ ಕೆಲವೇ ಕೆಲವರ ಹಿಡಿತದಲ್ಲಿದೆ. ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾದಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಗೌರವದಿಂದ ನನ್ನನ್ನು ನೋಡಿಕೊಳ್ಳಿ…
ದೊಡ್ಡಬಳ್ಳಾಪುರ: ಮೋದಿ ಒಬ್ಬ ಮಹಾನ್ ಸುಳ್ಳುಗಾರ, ಬಿಜೆಪಿ ಅಧಿಕಾರಕ್ಕೆ ಬಂದರೆ ಅಚ್ಚೆದಿನ್ ಆಯೇಗ ಎಂದರು ಆದರೇ ಇದುವರೆಗೂ ಆ ಅಚ್ಚೆ ದಿನ ಬಂದಿದ್ದು ನೋಡೆಯೇ ಇಲ್ಲ ಎಂದು ಕಾಂಗ್ರಸ್ ಮುಖಂಡ ಹೆಚ್ ಎಂ ರೇವಣ್ಣ ಬಿಜೆಪಿ ಸರ್ಕಾರವನ್ನು ಟೀಕಿಸಿದರು. ನಗರದ ಕರೇನಹಳ್ಳಿ ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಈ ಬಾರಿ ಫತನವಾಗಲಿದೆ, ಈ ಕುರಿತು ಅನೇಕ ಬಾರಿ ಬಿಜೆಪಿ ಮುಖಂಡರೇ ಆದ ಯತ್ನಾಳ್ ಸೇರಿ ಹಲವು ಶಾಸಕರು ಮತ್ತು ಸಚಿವರು ತಮ್ಮ ಸರ್ಕಾರದ ವಿರುದ್ದವೇ ಆರೋಪಗಳನ್ನು ಮಾಡುತ್ತಿವೆ, ಬಿಜೆಪಿ ಸರ್ಕಾರದಲ್ಲಿ ಒಬ್ಬ ವ್ಯಕ್ತಿ ಸಿಎಂ ಆಗಬೇಕಾದರೇ 250 ಕೋಟಿ ನೀಡಬೇಕು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಭಿವೃದ್ದಿ ಕಾರ್ಯಗಳೇ ಆಗಿಲ್ಲ ಎಂದು ಸ್ವಪಕ್ಷದವರೇ ಆರೋಪಗಳನ್ನು ಮಾಡಿರುವುನ್ನು ಕಾಣಬಹುದು, ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗಾಗಿ ಈಗಾಗಲೇ ಶಾಸಕರು ಬಹಳಷ್ಟು ಶ್ರಮಿಸಿದ್ದಾರೆ, ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದರೇ ಖಂಡಿತ ಮಂತ್ರಿಯಾಗುವ ಸಾಧ್ಯತೆ ಇದ್ದೂ ತಾಲ್ಲೂಕನ್ನು ಮತ್ತಷ್ಟು ಅಭಿವೃದ್ದಿ ಪಥದತ್ತ…
ಧಾರವಾಡ: ಕಾಂಗ್ರೆಸ್ 70 ವರ್ಷಗಳ ಅವಧಿಯಲ್ಲಿ ಈ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸಿಕೊಂಡು ಬಂದಿದೆ. ಹೀಗಾಗಿಯೇ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಧಾರವಾಡದ ಕಡಪಾ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಸದ್ಯ ರಾಜ್ಯದಲ್ಲಿ ಬಂದಿರುವ ಚುನಾವಣೆ ದೇಶದ ಭವಿಷ್ಯವನ್ನು ಬದಲಾಯಿಸುವ ಚುನಾವಣೆ. ಬಿಜೆಪಿ ಆಡಳಿತ ಎಂದರೆ ಅದು ಕಮೀಷನ್ ಆಡಳಿತ ಎನ್ನುವಂತಾಗಿದೆ. ಶೇ.40 ಕೊಟ್ಟರೆ ಎಲ್ಲ ಕೆಲಸ ಆಗುತ್ತಿದ್ದವು. ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಕೆಲಸಕ್ಕೂ ಹಣ ಕೊಡದೇ ಯಾವುದೇ ಕೆಲಸಗಳು ಈ ಸರ್ಕಾರದ ಅವಧಿಯಲ್ಲಿ ಆಗಲಿಲ್ಲ. ಗುತ್ತಿಗೆದಾರರ ಬಿಲ್ ಕೂಡ ಇದುವರೆಗೂ ಕ್ಲಿಯರ್ ಆಗಿಲ್ಲ. ಇದನ್ನು ಸ್ವತಃ ಗುತ್ತಿಗೆದಾರರೇ ರಾಷ್ಟ್ರಪತಿ ಹಾಗೂ ಪ್ರಧಾನಿ ಸೇರಿದಂತೆ ಹಲವರಿಗೆ ಪತ್ರ ಬರೆದಿದ್ದಾರೆ ಎಂದರು. ಕಮೀಷನ್ ಆರೋಪಕ್ಕೆ ಮೋದಿ ಹಾಗೂ ಅಮಿತ್ ಶಾ ಅವರು ಪ್ರೂಫ್ ಕೇಳುತ್ತಾರೆ. ಮೋದಿ ತಾನು ತಿನ್ನುವುದಿಲ್ಲ ತಿನ್ನುವವರಿಗೂ ಬಿಡೋದಿಲ್ಲ…