ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾದ (Bus Overturn) ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ. ಬಸ್‌ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 40 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಸಿಂದಗಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಅಪಘಾತ ಸಂಭವಿಸಿದೆ ಘಟನೆಯ ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ್ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Author: Prajatv Kannada
ವಿಜಯನಗರ: ಪಕ್ಷೇತರ ಅಭ್ಯರ್ಥಿ ಎಂ.ಪಿ ಲತಾ ಈ ಭಾರಿ ಹರಪ್ಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಂಚಲನವನ್ನೆ ಸೃಷ್ಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ ಲತಾ ಅವರು ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತು. ಕ್ಷೇತ್ರದಲ್ಲಿ ಸಾಮಾಜಿಕವಾಗಿ ಜನಗಳ ಕಣ್ಮಣಿಯಾಗಿರುವ ಎಂ.ಪಿ ಲತಾ ಅವರು ಸ್ವಾಭಿಮಾನದ ಅಸ್ತ್ರ ಬಳಸಿದ್ದಾರೆ, ಈ ಭಾರಿ ನನಗೆ ಕ್ಷೇತ್ರದ ಜನಗಳು ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ ನಮ್ಮ ತಂದೆಯವರಾದ ದಿಂವಗತ ಎಂ.ಪಿ ಪ್ರಕಾಶ ಹಾಗು ನನ್ನ ಸಹೋದರ ದಿವಂಗತ ಎಂ.ಪಿ ರವಿಯವರು ಕ್ಷೇತ್ರದಲ್ಲಿ ಹಲವಾರು ಕೆಲಸ ಕಾರ್ಯಗಳನ್ನ ಮಾಡಿದ್ದಾರೆ. Video Player 00:00 01:24 ಅದರ ಮುಂದುವರಿದ ಭಾಗವಾಗಿ ನಾನು ಈ ಕ್ಷೇತ್ರದ ಜನಗಳ ಕಲ್ಯಾಣಕ್ಕಾಗಿ ನಾನು ಶ್ರಮವಹಿಸುವೆ, ನಾನು ಯಾವುದೆ ಪಕ್ಷದವರನ್ನ ಟಿಕಿಸಲು ಹೋಗುವುದಿಲ್ಲ ನನ್ನ ಧ್ಯೇಯ ನನ್ನ ಗೆಲವು, ಕ್ಷೇತ್ರದ ಜನಗಳ ಕಲ್ಯಾಣವಾಗಬೇಕು, ನಾನು ಜನಗಳ ಮಧ್ಯೆ ಇರುವವಳು ಅವರ ಅಣತಿಯಂತೆ ನಡೆಯುತ್ತೆನೆ, ಯಾವುದೆ ಕಾರಣಕ್ಕೂ ಅವರ ನಿರ್ಧಾರವಾಗಿರುತ್ತದೆ…
ಚಿಕ್ಕಮಗಳೂರು: ಆಡಿ ಕಾರು (Audi Car) ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ತಾಲೂಕಿನ ಹಿರೇಗೌಜ (Hiregowja) ಗೇಟ್ ಬಳಿ ಈ ಘಟನೆ ನಡೆದಿದ್ದು, ಮೃತನನ್ನು 28 ವರ್ಷದ ದರ್ಶನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಶಶಿಕುಮಾರ್ ಎಂಬವರಿಗೆ ತೀವ್ರ ಗಾಯಗಳಾಗಿದ್ದರಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಭೀಕರ ಅಪಘಾತದಿಂದ ಬೈಕಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತವಾದ ಕೂಡಲೇ ಕಾರು ಚಾಲಕ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಕಾರು ಚಾಲಕನ ವೇಗವೇ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಸಖರಾಯ ಪಟ್ಟಣ ಪೊಲೀಸರು ಸ್ಥಳ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿ
ಕೊಪ್ಪಳ: ಕಳೆದ 2 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮನೆಯೊಂದು ಕುಸಿದು ಬಿದ್ದು, 20 ದಿನದ ಹಸುಗೂಸು (Infant) ಹಾಗೂ ವೃದ್ಧೆ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಕುಸಿತದಿಂದ (House Collapse) ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ ಬಾಣಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪತಿ ಸದ್ಯ ಮನೆಯ ಹೊರಗಡೆ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ (Voting) ಪ್ರಾರಂಭವಾಗಿದೆ. ಅರ್ರೆ ಮೇ 10ಕ್ಕೆ ಮತದಾನ ಅಲ್ವೆ ಎಂದು ನೀವು ಹೇಳಬಹುದು. ಚುನಾವಣಾ ಆಯೋಗ ಇದೇ ಮೊದಲಬಾರಿಗೆ ರಾಜ್ಯದಲ್ಲಿ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಯೋವೃದ್ಧರು ತಮ್ಮ ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆಯನ್ನು ಏಪ್ರಿಲ್ 29 ರಿಂದ ಪ್ರಾರಂಭಿಸಲಾಗಿದ್ದು, ಮೇ 6 ರಂದು ಕೊನೆಗೊಳ್ಳಲಿದೆ. 104ರ ವೃದ್ಧೆ ಮತದಾನ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಿತ್ಲಳ್ಳಿ ಗ್ರಾಮದ 104ರ ವೃದ್ಧೆ ಸುಬ್ಬಿ ಗೋಪಾಲಕೃಷ್ಣ ಭಟ್ ಅವರು ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದ್ದು ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಮತದಾರರು ಇವರಾಗಿದ್ದಾರೆ. ಜಿಲ್ಲೆಯಲ್ಲಿ ಎಷ್ಟಿದ್ದಾರೆ ಮತದಾರರು? * ಅಂಗವಿಕಲ ಮತದಾರರ ಸಂಖ್ಯೆ- 14,724 * 80 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 27,399 ಎಲ್ಲಿ ಎಷ್ಟು ಮತದಾನ ? * 80…
ರಾಮನಗರ: 25 ವರ್ಷಗಳಿಂದ ಬೇರೆ ಕಡೆಯಿಂದ ಬಂದವರಿಗೆ ಅವಕಾಶ ನೀಡಿ ಆಗಿದೆ ಈ ಬಾರಿ ಇದೇ ಕ್ಷೇತ್ರದ ಸ್ಥಳೀಯ ವ್ಯಕ್ತಿಗೆ ಅವಕಾಶ ನೀಡುವಂತೆ ವಿಧಾನಪರಿಷತ್ ಮಾಜಿ ಸದಸ್ಯ ಮರಿಲಿಂಗೇಗೌಡ ಮನವಿ ಮಾಡಿದರು. ಹಾರೋಹಳ್ಳಿ ತಾಲೂಕು ರಾಮಸಾಗರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ದೇಶಕ್ಕೆ ನರೇಂದ್ರ ಮೋದಿ ಮತ್ತು ರಾಜ್ಯಕ್ಕೆ ಬಸವರಾಜ್ ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಈ ಭಾರೀ ರಾಮನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧೆ ಮಾಡಿದ್ದು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಕಳೆದ 30 ವರ್ಷದಿಂದ ಅಧಿಕಾರ ಅನುಭವಿಸಿದವರು ಜಿಲ್ಲೆಗೆ ಏನೇನು ಮಾಡಿಲ್ಲ ಜನರನ್ನು ಮರಳು ಮಾಡುತ್ತಲೇ ಕಾಲವನ್ನು ಕಳೆದಿದ್ದಾರೆ ಈ ಬಾರಿ ಸ್ಥಳೀಯ ಯುವಕನಿಗೆ ಅವಕಾಶ ನೀಡುವ ಮೂಲಕ ಕ್ಷೇತ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು ಎಂದರು. Video Player 00:00 00:43 ಕ್ಷೇತ್ರದಾದ್ಯಂತ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕುಟುಂಬ ರಾಜಕಾರಣಕ್ಕೆ ಬೇಸತ್ತು ಬಿಜೆಪಿಗೆ ಸೇರುತ್ತಿದ್ದಾರೆ.…
ಮಂಡ್ಯ :- ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಪ್ರಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಲು ಸೋಮವಾರ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪ್ರಚಾರದ ಅಖಾಡಕ್ಕೆ ಧುಮುಕಿ ಮದ್ದೂರು ಪಟ್ಟಣದ ವಿವಿಧೆಡೆ ಭರ್ಜರಿ ರೋಡ್ ಶೋ ನಡೆಸಿ ಎಸ್.ಪಿ.ಸ್ವಾಮಿ ಅವರ ಪರ ಮತ ಯಾಚಿಸಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ವೃತ್ತಕ್ಕೆ ಸಂಜೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟಿ ತಾರಾ ಅನುರಾಧ ಮತ್ತು ಗಣ್ಯರನ್ನು ಬಿಜೆಪಿ ತಾಲೂಕು ಘಟಕ ಹಾಗೂ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಬಳಿಕ ಹಳೇ ಎಂ.ಸಿ.ರಸ್ತೆ ಮೂಲಕ ತೆರೆದೆ ವಾಹನದಲ್ಲಿ ರೋಡ್ ಶೋ ನಡೆಸಿ ರಾಮಮಂದಿರ ಪಾರ್ಕ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಸತತ 16 ವರ್ಷಗಳ ಕಾಲ ಸಮಾಜ ಸೇವೆ ಮತ್ತು ಕೋವಿಡ್ ಸೇರಿದಂತೆ…
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗಾಗಿ ಇಡೀ ಬದುಕನ್ನು ಮೀಸಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವ ಮೇಲೆ ಜನರು ವಿಶ್ವಾಸ ಇಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರದ(Double engine Govt) ಕೊಡುಗೆ ರಾಜ್ಯದ ಜನರಿಗೆ ಗೊತ್ತು. ರಾಜ್ಯದ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ಮುಕ್ತ ಮನಸ್ಸಿನಿಂದ ನೋಡಿದರೇ ಸಾಧನೆಗಳು ಕಾಣುತ್ತೆ. ರಷ್ಯಾ-ಉಕ್ರೇನ್ ಯುದ್ಧ ವೇಳೆ ವಿದ್ಯಾರ್ಥಿಗಳನ್ನು ಕರೆತರಲಾಯ್ತು. ನಂಬಿಕೆಯ ಆಧಾರದಲ್ಲಿ ಮೋದಿ ಬಂದಾಗ ಜನರು ಸೇರುತ್ತಾರೆ. ಕಾಂಗ್ರೆಸ್ಸಿಗರು ಹತಾಶೆಯಿಂದ ಪ್ರಧಾನಿ ಮೋದಿ ಟೀಕೆ ಮಾಡುತ್ತಾರೆ. ಶಾಸಕ ಪ್ರಿಯಾಂಕ್ ಖರ್ಗೆ ಅವರು ತಂದೆಯ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದ ಮೇಲೆ ಸರ್ವೆ ವರದಿ ಗಮನಿಸಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ(CT Ravi) ಹೇಳಿದ್ದಾರೆ.
ಕೊಪ್ಪಳ: ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ತೀರುಗೇಟು ನೀಡಿದ್ದಾರೆ. ಕೊಪ್ಪಳ(Koppala) ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ ಶೆಟ್ಟರ್, ಸವದಿ 50 ಸಾವಿರ ಮತಗಳ ಅಂತರದಿಂದ ಸೋಲ್ತಾರೆ ಎನ್ನೋ ಅಮಿತ್ ಶಾ (Amitshah) ಹೇಳಿಕೆಗೆ ತೀರುಗೇಟು ನೀಡಿದರು. ಹುಬ್ಬಳ್ಳಿಯ ಜನರ ಹೃದಯದಲ್ಲಿದ್ದೇನೆ. ಹುಬ್ಬಳ್ಳಿ (Hubballi) ಜನ ಏನು ಅಂತ ನಂಗೆ ಗೊತ್ತಿದೆ. ನಾನೇನು ಎನ್ನೋದು ನನ್ನ ಜನತೆಗೆ ಗೊತ್ತಿದೆ. ನಾನು ಗೆದ್ದು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನನ್ನ ಕಾಂಗ್ರೆಸ್ ಸೇರ್ಪಡೆಯಾಗುವಂತೆ ಮಾಡಿದ್ದೇ ಬಿಜೆಪಿ. ರಾಜ್ಯದ ಕೆಲವೇ ಕೆಲವು ಜನರ ಕಪಿಮುಷ್ಠಿಯಲ್ಲಿ ಬಿಜೆಪಿ ಇದೆ. ನಂಗೆ ಎಲ್ಲಾ ಕೊಟ್ಟಿದ್ದೀವಿ ಅಂತಾರೆ. ನಮ್ಮ ಕುಟುಂಬ ಬಿಜೆಪಿಗೆ ಏನು ಮಾಡಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ (BJP) ಕಟ್ಟೋಕೆ ಶೆಟ್ಟರ್ ಶ್ರಮವಿದೆ. ನಂಗೆ ಒಬ್ಬ ಎಂಎಲ್‍ಎ ರೀತಿ ಪತ್ರ ಬರೀರಿ ಅಂತಾರೆ. ನಾನು ರಾಜಕೀಯಕ್ಕೆ…
ಚಾಮರಾಜನಗರ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು. ನಗರದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಪ್ರಕಾರ ಆಯ್ಕೆಯಾಗಿರುವ ಸರ್ಕಾರವಲ್ಲ. ಶಾಸಕರನ್ನು ಖರೀದಿಸಿ ಕದ್ದು ರಚನೆ ಮಾಡಿರುವ ಸರ್ಕಾರ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಬಳಿ 8 ಕೋಟಿ ಸಿಕ್ತು. ಪಿಎಸ್‌ಐ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ಹೀಗೆ ಹಗರಣಗಳ ಪಟ್ಟಿಯೇ ಇದೆ. ಆದರೆ ಕರ್ನಾಟಕಕ್ಕೆ ಬರುತ್ತಿರುವ ಮೋದಿ ಈ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. 40% ಕಮಿಷನ್ ಆರೋಪದ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಮೋದಿಯವರೇ? ಯಾರನ್ನು ಜೈಲಿಗೆ ಕಳಿಸಿದ್ದೀರಿ, ಏನು ತನಿಖೆ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ (Narendra Modi) ಅವರನ್ನು ಪ್ರಶ್ನಿಸಿದರು. ಕಾಂಗ್ರೆಸ್ ಎಲ್ಲ ನಾಯಕರ ಹೆಸರನ್ನು ಹೇಳುತ್ತದೆ. ಆದರೆ ಬಿಜೆಪಿ ನರೇಂದ್ರ ಮೋದಿ ಅವರ…