ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿದೆ. ಇದೇ ವೇಳೆ ಸಂದರ್ಶನವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಸಲ್ಲು ಬಾಯ್ ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದಿದ್ದಾರೆ. ರಜತ್ ಶರ್ಮಾ ನಡೆಸಿಕೊಡುವ ‘ಆಪ್ ಕಿ ಅದಾಲತ್’ ಕಾರ್ಯಕ್ರಮಕ್ಕೆ ಸಲ್ಮಾನ್ ಖಾನ್ ಅತಿಥಿ ಆಗಿ ಬಂದಿದ್ದರು. ಈ ವೇಳೆ ಸಲ್ಮಾನ್ ಜೀವನದ ಎಲ್ಲಾ ಹಂತ ಹಾಗೂ ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಳೆಯ ರಿಲೇಶನ್ಶಿಪ್ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಂದು ನನ್ನ ಎಲ್ಲಾ ಎಕ್ಸ್ಗಳು ಒಳ್ಳೆಯ ಸ್ಥಾನದಲ್ಲಿದ್ದಾರೆ, ಖುಷಿಯಾಗಿದ್ದಾರೆ. ಅವರು ಇಂದು ನನ್ನ ಜೊತೆ ಇರದೇ ಇರಲು ನನ್ನ ತಪ್ಪೇ ಕಾರಣ’ ಎಂದಿದ್ದಾರೆ. ‘ಪ್ರೀತಿಯಲ್ಲಿ ನಾನು ದುರಾದೃಷ್ಟವಂತ. ಎಲ್ಲರೂ ಒಳ್ಳೆಯವರಾಗಿದ್ದರು. ಆದರೆ, ತಪ್ಪು ನನ್ನದೇ. ಮೊದಲ ವ್ಯಕ್ತಿ ಬಿಟ್ಟು ಹೋದಾಗ ತಪ್ಪು ಅವರದ್ದು ಅನಿಸುತ್ತದೆ. ಇದು ಪದೇಪದೇ ರಿಪೀಟ್ ಆದಾಗ ಅನುಮಾನ ಬರುತ್ತದೆ. ತಪ್ಪು ಅವರದ್ದೋ ಅಥವಾ…
Author: Prajatv Kannada
2023ರ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಈಗಾಗಲೇ ಕನ್ನಡದ ನಟ ನಟಿಯರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುತ್ತಿದ್ದು ಇದೀಗ ಸುದೀಪ್ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ನಾನು ಬರಿ ಜಾತಿ ಪರ ಬಂದಿದ್ದೇನೆ ಅನ್ಕೋಬೇಡಿ ಎಂದು ಸುದೀಪ್ ಮನವಿ ಮಾಡಿದ್ದಾರೆ. ಯಮಕನಮರಡಿ ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ಬಳಿಕ ಅಭಿಮಾನಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಸುದೀಪ್, ‘ನಾನು ಎಲ್ಲಿ ಹುಟ್ಟಿದೆ. ಯಾವ ಜನಾಂಗ ಅನ್ನೋದು ಮುಖ್ಯ ಅಲ್ಲ. ಒಬ್ಬ ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮೊದಲು ಮುಖ್ಯ. ಆವಾಗ ಮಾತ್ರ ಮನಸ್ಸುಗಳನ್ನು ಗೆಲ್ಲಲು ಸಾಧ್ಯ. ಇಲ್ಲಿ ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ. ನನ್ನ ಬಾಂಧವರ ಪರ ತುಂಬಾ ಪ್ರೀತಿ ಇದೆ’ ಎಂದಿದ್ದಾರೆ. ಯಮಕನಮರಡಿ ಅಭ್ಯರ್ಥಿ ಬಸವರಾಜ ಹುಂದ್ರಿ ಬಡ ಕುಟುಂಬದಿಂದ ಬಂದಿದ್ದಾರೆ. ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ನಿಮ್ಮ ಸಹಕಾರ ಹಾಗೂ ಸೇವೆ…
ತಮಿಳು ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ವನಿತಾ ವಿಜಯ್ ಕುಮಾರ್ ಲಾಕ್ ಡೌನ್ ಸಂದರ್ಭದಲ್ಲಿ ಸಿಂಪಲ್ ಆಗಿ ಮೂರನೇ ಮದುವೆಯಾಗಿದ್ದರು. ಆದಾಗಲೇ ಇಬ್ಬರನ್ನು ಮದುವೆಯಾಗಿ ಡಿವೋರ್ಡ್ ಪಡೆದುಕೊಂಡಿದ್ದ ವನಿತಾ ಪೀಟರ್ ಪೌಲ್ ಎಂಬುವವರನ್ನು ಮೂರನೇ ಮದುವೆಯಾಗಿದ್ದರು. ವನಿತಾ ಅವರನ್ನು ಮೂರನೇ ಮದುವೆಯಾಗಿದ್ದ ಪೀಟರ್ ಪೌಲ್ ಅದಾಗಲೇ ಮದುವೆಯಾಗಿದ್ದರು. ಆದ್ದರಿಂದ ಆತನ ಪತ್ನಿ ಬೀದಿ ರಂಪ, ಹಾದಿ ರಂಪ ಮಾಡಿದ್ದರು. ಪೀಟರ್ ಅವರನ್ನು ಮದುವೆಯಾದ ಆರೇಳು ತಿಂಗಳಿಗೆ ವನಿತಾ ಆತನನ್ನು ತೊರೆದು ಮತ್ತೊಂದು ಮದುವೆ ಆಗುವ ಸೂಚನೆಯನ್ನೂ ನೀಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೀಟರ್ ಪೌಲ್ ಇದೀಗ ನಿಧನರಾಗಿದ್ದು ಪತಿಯ ನಿಧನದ ಸುದ್ದಿಯನ್ನು ಸ್ವತಃ ವನಿತಾ ತಿಳಿಸಿದ್ದಾರೆ. ಈ ಕುರಿತು ವನಿತಾ ಸೋಷಿಯಲ್ ಮೀಡಿಯಾದಲ್ಲಿ ಭಾವುಕರಾಗಿ ಪತ್ರವೊಂದನ್ನು ಬರೆದಿದ್ದಾರೆ. ಪೀಟರ್ ಆಸ್ಪತ್ರೆಯಲ್ಲಿದ್ದಾಗ ಸ್ವತಃ ವನಿತಾ ಅವರೇ ಖರ್ಚು ವೆಚ್ಚ ನೋಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವನಿತಾರಿಂದ ದೂರವಾದ ನಂತರ ಪೀಟರ್ ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದ ಪೌಲ್,…
ದೊಡ್ಮನೆ ಕುಟುಂಬದಿಂದ ಈಗಾಗಲೇ ಸಾಕಷ್ಟು ಕಲಾವಿದರು ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದು ಸಖತ್ ಸದ್ದು ಮಾಡಿದ್ದಾರೆ. ಇದೀಗ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಕೂಡ ಚಿತ್ರರಂಗಕ್ಕೆ ಭರ್ಜರಿಯಾಗಿ ಎಂಟ್ರಿಕೊಟ್ಟಿದ್ದಾರೆ. ನಟ ಶಿವರಾಜ್ ಕುಮಾರ್ ಸದಾ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಇದೀಗ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಕೂಡ ತಂದೆಯ ಹಾದಿಯಲ್ಲೇ ಸಾಗುತ್ತಿದ್ದಾರೆ. ಗೀತಾ ಪಿಕ್ಚರ್ಸ್ ನಡಿ ಗೀತಾ ಶಿವರಾಜ್ ಕುಮಾರ್, ಪಿಆರ್ ಕೆ ಪ್ರೊಡಕ್ಷನ್ ನಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ದುಡಿಯುತ್ತಿದ್ದಾರೆ. ಈಗ ಶಿವಣ್ಣನ ದ್ವಿತೀಯ ಪುತ್ರಿ ನಿವೇದಿತಾ ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯಡಿ ಚೊಚ್ಚಲ ಚಿತ್ರದ ನಿರ್ಮಾಣಕ್ಕಿಳಿದಿದ್ದಾರೆ. ಶ್ರೀ ಮುತ್ತು ಸಿನಿ ಸರ್ವಿಸ್ ನಿವೇದಿತಾ ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ನೀಡಲೆಂದು ಸೃಷ್ಟಿಯಾಗಿರುವ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಈಗಾಗಲೇ ಧಾರಾವಾಹಿ- ಮೂರು ವೆಬ್ ಸೀರೀಸ್‌ಗಳು ಹೊರ ಬಂದಿವೆ. ಈಗ ಇದೇ ಬ್ಯಾನರ್ ನಡಿ ನಿವೇದಿತಾ ಸಿನಿಮಾ…
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಮೂರು ಪಕ್ಷಗಳಿಂದ ಆಫರ್ ಬಂದಿದ್ದರು ರಮ್ಯಾ ಮಾತ್ರ ಯಾವುದೇ ಪಕ್ಷಕ್ಕೂ ಹೋಗಿಲ್ಲ. ಕಾಂಗ್ರೆಸ್ ಪಕ್ಷದಿಂದ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದ ನಟಿ ರಮ್ಯಾ ಈ ಭಾರಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜನರ ಮತಗಳನ್ನು ತನ್ನತ್ತ ಸೆಳೆಯುವ ಸಲುವಾಗಿ ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತಂದು ಭರ್ಜರಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿವೆ. ಈಗಾಗಲೇ ಸುದೀಪ್, ದರ್ಶನ್, ಶಿವರಾಜ್ ಕುಮಾರ್ ಸೇರಿದಂತೆ ಹಲವು ನಟ, ನಟಿಯರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟಿ ರಮ್ಯಾ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ರಮ್ಯಾ ಪ್ರಚಾರ ನಡೆಸಲಿದ್ದಾರೆ. ಮೇ 6ರಂದು ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಕೆ.ಜೆ.ಜಾರ್ಜ್…
ರಮೇಶ್ ಅರವಿಂದ್ ನಿರೂಪಣೆಯ ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಸಿಹಿ- ಕಹಿ ಚಂದ್ರು ಸಾಧಕರ ಸೀಟ್ ನಲ್ಲಿ ಕುಳಿತಿದ್ದರು. ಬಾಲ್ಯದಲ್ಲಿ ತಾವು ಮಾಡಿದ ತರ್ಲೆ, ತುಂಟಾಟ, ಸಿನಿಮಾ ಎಂಟ್ರಿ, ಲವ್ ಹೀಗೆ ಪ್ರತಿಯೊಂದರ ಕುರಿತು ಸಿಹಿ ಕಹಿ ಚಂದ್ರು ಅವರು ಮಾತನಾಡಿದ್ದಾರೆ. ಈ ವೇಳೆ ಶಂಕರ್ ನಾಗ್ ಜೊತೆಗಿನ ಒಡನಾಟವನ್ನು ಚಂದ್ರು ಮೆಲುಕು ಹಾಕಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಶಂಕರ್‌ನಾಗ್ ಪರಿಚಯ ತಮಗೆ ಆಗಿದ್ದು ಹೇಗೆ? ಎಂಬುದರಿಂದ ಹಿಡಿದು ಅವರೊಂದಿಗಿನ ಸಂಪೂರ್ಣ ಒಡನಾಟವನ್ನು ಚಂದ್ರು ಸ್ಮರಿಸಿದ್ದಾರೆ. ನಾನು ಕಾಲೇಜು ಪ್ರೆಸಿಡೆಂಟ್ ಆಗಿದ್ದಾಗ ಶಂಕರ್‌ನಾಗ್ ಅವರನ್ನು ಕಾಲೇಜಿಗೆ ಅತಿಥಿಯಾಗಿ ಆಹ್ವಾನಿಸಲು ಹೋಗಿದ್ದೆ. ಆಗ ಅವರು ಪುಸ್ತಕವೊಂದನ್ನು ಕೊಟ್ಟು ಓದಿಕೊಂಡು ಬಂದು ಚರ್ಚಿಸುವಂತೆ ಹೇಳಿದರು. ನನಗೆ ಅರ್ಥವಾಗದಾಗ ಅವರೇ ಅದನ್ನು ಹೇಗೆ ಓದಬೇಕು ಎಂದು ಹೇಳಿಕೊಟ್ಟರು, ಅದಾದ ಮೇಲೆ ಓದಿ ಅವರೊಟ್ಟಿಗೆ ಚರ್ಚಿಸಿದೆ. ಆಗ ಅವರು ನಮ್ಮ ಕಾಲೇಜಿಗೆ ಬರಲು ಒಪ್ಪಿಕೊಂಡು ಅತಿಥಿಯಾಗಿ ಬಂದರು ಎಂದು ಶಂಕರ್‌ನಾಗ್…
ಮೊದಲೆಲ್ಲಾ ಕೆಮ್ಮು, ಶೀತ ಬಂದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಯಾವಾಗಿನಿಂದ ಕೊರೊನಾ ವೈರಸ್ ಕಾಟ ಶುರುವಾಯ್ತೋ ಆಗಿನಿಂದ ಸಣ್ಣದಾಗಿ ಕೆಮ್ಮು ಬಂದರೂ ಭಯ ಆಗುತ್ತಿದೆ. ಏಕೆಂದರೆ ಕೆಮ್ಮು, ನೆಗಡಿ, ಜ್ವರ ಕೊರೊನಾ ವೈರಸ್ ಲಕ್ಷಣವಾಗಿದ್ದು, ಕೆಮ್ಮು ಬಂದಾಗ ಸೋಂಕಿಗೆ ತುತ್ತಾಗಿ ಬಿಟ್ವಾ? ಇದು ಸಾಧಾರಣ ಕೆಮ್ಮಾ? ಅಥವಾ ಕೊರೊನಾ ವೈರಸ್ ಲಕ್ಷಣವಾ ಎಂಬ ಪ್ರಶ್ನೆ ಕಾಡಲು ಆರಂಭವಾಗುತ್ತದೆ. ಮೇ ತಿಂಗಳು ಶುರುವಾಗುತ್ತಿದ್ದಂತೆ ಒಂದೆರಡು ಮಳೆ ಬಿದ್ದ ಮೇಲೆ ವಾತಾವರಣ ಬದಲಾವಣೆಯಿಂದ ಕೆಮ್ಮು, ನೆಗಡಿ ಆಗುವುದು ಸಹಜ. ಸಾಧಾರಣ ಕೆಮ್ಮು, ನೆಗಡಿಯನ್ನು ಮನೆಮದ್ದಿನಿಂದಲೇ ಗುಣಪಡಿಸಿಕೊಳ್ಳಬಹುದು. ಕೆಮ್ಮು, ನೆಗಡಿಗೆ ಸಾಕಷ್ಟು ಮನೆಮದ್ದುಗಳಿವೆ. ಅದರಲ್ಲಿ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುವುದು ಈರುಳ್ಳಿ ಸಿರಪ್. ಹೌದು. ಈರುಳ್ಳಿ ಸಿರಪ್ ಕೆಮ್ಮು, ನೆಗಡಿಯನ್ನು ಹೋಗಲಾಡಿಸುವಲ್ಲಿ ಸಹಕಾರಿಯಾಗಿದ್ದು, ಇದನ್ನು ತಯಾರಿಸುವುದು ಕೂಡ ಸುಲಭವಾಗಿದೆ. ಮನೆಯಲ್ಲಿ ಈರುಳ್ಳಿ ಸಿರಪ್ ಮಾಡಿ ಒಂದು ಡಬ್ಬದಲ್ಲಿ ತುಂಬಿಟ್ಟರೆ ಕೆಮ್ಮು ಬಂದಾಗ ಅದನ್ನು ಹೋಗಲಾಡಿಸಲು ಮದ್ದಾಗಿ ಬಳಸಬಹುದಾಗಿದೆ. ಈರುಳ್ಳಿ ಸಿರಪ್ ಮಾಡುವ ವಿಧಾನ ಈರುಳ್ಳಿಯ ಸಿಪ್ಪೆ ಸುಲಿದು ಅದನ್ನು…
ಅಮೆರಿಕದಲ್ಲಿ ಬಂದೂಕು ಸಂಸ್ಕೃತಿಯ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಬಂದೂಕು ಹೊಂದಿರುವ ವ್ಯಕ್ತಿಗಳು ಎಲ್ಲೆಂದರಲ್ಲಿ ಶೂಟ್ ಮಾಡಿ ಅದೆಷ್ಟೋ ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದ್ದಾರೆ. ಹೀಗಾಗಿ ಇದೀಗ ಅಮೆರಿಕಾ ಪೊಲೀಸರು ವಿಭಿನ್ನ ಪ್ರಯತ್ನದ ಮೊರೆ ಹೋಗಿದ್ದಾರೆ. ಪ್ರಜೆಗಳು ತಮ್ಮಲ್ಲಿರುವ ಗನ್ ಕೊಟ್ಟರೆ ಗಿಫ್ಟ್ ಕಾರ್ಡ್ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಪರಿಣಾಮವಾಗಿ ಸಾವಿರಾರು ನಾಗರಿಕರು ಮುಂದೆ ಬಂದು ತಮ್ಮ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನ್ಯೂಯಾರ್ಕ್ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಅವರ ನಿರ್ದೇಶನದಲ್ಲಿ ಕಾರ್ಯಕ್ರಮವನ್ನು ನಡೆಯುತ್ತಿದ್ದು, ಇದುವರೆಗೂ ಮೂರು ಸಾವಿರಕ್ಕೂ ಹೆಚ್ಚು ಗನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದು 185 ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಪ್ರತಿ ಬಂದೂಕನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಎಂದರೆ ದುರಂತದ ಸಾಧ್ಯತೆಯನ್ನು ತೊಡೆದುಹಾಕುವುದು ಎಂದು ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಟ್ವೀಟ್ ಮಾಡಿದ್ದಾರೆ. ಬಂದೂಕು ಹಿಂಸಾಚಾರದಿಂದ ನ್ಯೂಯಾರ್ಕ್ ನಿವಾಸಿಗಳನ್ನು ರಕ್ಷಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಶಸ್ತ್ರಾಸ್ತ್ರವನ್ನು ಒಪ್ಪಿಸುವವರು $500 ಮೌಲ್ಯದ ಉಡುಗೊರೆ ಕಾರ್ಡ್‌ಗಳನ್ನು ಸ್ವೀಕರಿಸುತ್ತಾರೆ (ಹ್ಯಾಂಡ್ ಗನ್, ಅಸಾಲ್ಟ್ ರೈಫಲ್, ಘೋಸ್ಟ್ ಗನ್, ಶಾಟ್…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಲ್ಕು ದಿನಗಳ ಅಧಿಕೃತ ಭೇಟಿಗಾಗಿ ಮಂಗಳವಾರ ದಕ್ಷಿಣ ಕೊರಿಯಾ ತಲುಪಿದ್ದಾರೆ. ಇಂಚಿಯಾನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೀತಾರಾಮನ್ ಅವರನ್ನು ಕೊರಿಯಾ ಗಣರಾಜ್ಯದ ಭಾರತದ ರಾಯಭಾರಿ ಅಮಿತ್ ಕುಮಾರ್ ಸ್ವಾಗತಿಸಿದರು. “ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಅವರು ತಮ್ಮ 4 ದಿನಗಳ ಅಧಿಕೃತ ಭೇಟಿಗಾಗಿ ಕೊರಿಯಾ ಗಣರಾಜ್ಯವನ್ನು ತಲುಪಿದರು. ಕೊರಿಯಾ ಗಣರಾಜ್ಯದ ಭಾರತದ ರಾಯಭಾರಿ ಶ್ರೀ @ KumarAmitMEA ಅವರು ಇಂದು ಮುಂಜಾನೆ ಇಂಚಿಯಾನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರನ್ನು ಬರಮಾಡಿಕೊಂಡರು ಕೊರಿಯಾ ಹಣಕಾಸು ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ. ಇಂದಿನಿಂದ 5ನೇ ತಾರೀಖೀನ ವರೆಗೆ ದಕ್ಷಿಣ ಕೊರಿಯಾದ ಇಂಚಿಯಾನ್‌ನಲ್ಲಿ ಹೂಡಿಕೆದಾರರು/ ದ್ವಿಪಕ್ಷೀಯ ಮತ್ತು ಇತರ ಸಂಬಂಧಿತ ಸಭೆಗಳೊಂದಿಗೆ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಆಡಳಿತ ಮಂಡಳಿಯ 56 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಸೀತಾರಾಮನ್ ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿದ್ದಾರೆ ಎಂದು ಹಣಕಾಸು ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಅಧಿಕೃತ ಎಡಿಬಿ ಸದಸ್ಯ…
ಹೊಸದಿಲ್ಲಿ: ಸೇನೆ ಹಾಗೂ ಅರೆಸೇನೆ ನಡುವೆ ಸುಡಾನ್ ನಲ್ಲಿ ನಡೆಯುತ್ತಿರುವ ಯುದ್ಧ ಇಂದಿಗೂ ಮುಂದುವರೆದಿದೆ. ಸುಡಾನ್ ನಲ್ಲಿ ಸಿಲುಕಿರುವ ಸಾಕಷ್ಟು ಭಾರತೀಯರನ್ನು ಅಪರೇಷನ್ ಕಾವೇರಿ ಅಡಿಯಲ್ಲಿ ಕರೆತರಲಾಗುತ್ತಿದ್ದು ಇದೀಗ 186 ಮಂದಿ ಭಾರತೀಯರು ತಾಯ್ನಾಡಿಗೆ ಆಗಮಿಸಿದ್ದಾರೆ. ಸುಡಾನ್ ನಿಂದ ಸೋಮವಾರ ಹೊಸತಾಗಿ 186 ಮಂದಿಯನ್ನು ಸುರಕ್ಷಿತವಾಗಿ ಕೊಚ್ಚಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈವರೆಗೆ ಸುರಕ್ಷಿತವಾಗಿ ತಲುಪಿದ ಭಾರತೀಯರ ಸಂಖ್ಯೆ 2,140ಕ್ಕೆ ಏರಿಕೆಯಾಗಿದೆ. ಇದೇ ವೇಳೆ 17ನೇ ತಂಡದಲ್ಲಿ 135 ಮಂದಿಯ ತಂಡ ಜೆಡ್ಡಾದಿಂದ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದೂ ಬರೆದುಕೊಂಡಿದ್ದಾರೆ. ಇನ್ನೊಂದೆಡೆ “ಆಪರೇಶನ್ ಕಾವೇರಿ’ಯ ಅನ್ವಯ ಸೌದಿ ಅರೇಬಿಯಾದಿಂದ ಭಾರತೀಯರನ್ನು ಕರೆತರಲು ಹೆಚ್ಚುವರಿಯಾಗಿ ವಿಮಾನಗಳ ಸಂಚಾರ ನಡೆಸಲು ಸ್ಪೈಸ್‌ಜೆಟ್ ಮುಂದಾಗಿದೆ.