ನಟಿ ಸಮಂತಾರಿಂದ ದೂರವಾದ ಬಳಿಕ ನಟ ನಾಗಚೈತನ್ಯ ಹೆಸರು ಶೋಭಿತಾ ಜೊತೆಗೆ ಕೇಳಿ ಬಂದಿತ್ತು. ಇದೆಲ್ಲಾ ಸುಳ್ಳು ಎಂದು ಹೇಳುತ್ತಾ ಬಂದಿದ್ದ ಜೋಡಿಗಳು ಇದೀಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶೋಭಿತಾ ಜೊತೆಗಿನ ನಾಗಚೈತನ್ಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರೀತಿಸಿ ಮದುವೆಯಾಗಿದ್ದ ಸಮಂತಾ- ನಾಗಚೈತನ್ಯ ಮದುವೆಯಾದ ಕೆಲ ವರ್ಷದಲ್ಲೇ ಬೇರೆ ಬೇರೆಯಾದರು. ಸದ್ಯ ಹಳೆಯದನ್ನು ಮರೆತು ಇಬ್ಬರು ಹೊಸ ಬದುಕನ್ನ ಕಟ್ಟಿಕೊಳ್ತಿದ್ದಾರೆ. ಸಮಂತಾ ಜೊತೆ ಡಿವೋರ್ಸ್ ಆಗ್ತಿದ್ದಂತೆ ನಾಗಚೈತನ್ಯ ಶೋಭಿತಾ ಜೊತೆ ಓಡಾಡಲು ಶುರುಮಾಡಿದ್ದಾರೆ. ಲಂಡನ್‌ನಲ್ಲಿ ಅಭಿಮಾನಿಯೊಬ್ಬರ ಜೊತೆ ನಾಗ ಚೈತನ್ಯ ಫೋಟೋಗೆ ಪೋಸ್ ಕೊಟ್ಟಿದ್ದು, ಈ ಫೋಟೋದ ಹಿಂದೆ ಶೋಭಿತಾ ಕೂಡ ಕಾಣಿಸಿಕೊಂಡಿದ್ದಾರೆ. ಲಂಡನ್ ಐಷಾರಾಮಿ ಹೋಟೆಲ್ ಒಂದರಲ್ಲಿ ಭಾರತ ಮೂಲದ ಸುಂದರ್ ಮೋಹನ್ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದಾರೆ. ಇದೇ ಹೋಟೆಲ್‌ಗೆ ನಾಗ ಚೈತನ್ಯ ಹಾಗೂ ಶೋಭಿತಾ ಆಗಮಿಸಿದ್ದರು. ಈ ವೇಳೆ ನಾಗ ಚೈತನ್ಯ ಜೊತೆ ಸುಂದರ್ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಹಿಂಭಾಗದಲ್ಲಿ ಶೋಭಿತಾ ಕೂಡ ಕಾಣಿಸಿದ್ದಾರೆ. ಇಷ್ಟು ದಿನ…
Author: Prajatv Kannada
ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಇನ್ನೂ ಚುನಾವಣಾ ಅಕ್ರಮ ತಡೆಯಲು 2,400 ವಿಚಕ್ಷಣ ತಂಡ ನಿಯೋಜನೆ ಮಾಡಲಾಗಿದೆ. ಅಕ್ರಮಗಳ ಮೇಲೆ ನಿಗಾವಹಿಸಲು 2016 ಫ್ಲೈಯಿಂಗ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಎಲ್ಲಾ ವಿಮಾನ ನಿಲ್ದಾಣ, ಬಂದರು, ಹೆದ್ದಾರಿಗಳಲ್ಲಿ ಹದ್ದಿನಕಣ್ಣು ಇಡಲಿದೆ. ಎಲ್ಲಾ ನಗರ, ಜಿಲ್ಲಾ ಕೇಂದ್ರಗಳ ಗೋದಾಮುಗಳ ಮೇಲೆ ನಿಗಾ ಇಡಲಾಗುತ್ತೆ. ಬ್ಯಾಂಕ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ ಇಡಲಿದೆ.…
ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಸದ್ಯ ಕೊಂಚ ಚೇತರಿಸಿಕೊಂಡಿದ್ದು ಶಾಕುಂತಲಂ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಸಮಂತಾ ನಟಿಯರ ಸಂಭಾವನೆ ವಿಚಾರವಾಗಿ ಮಾತನಾಡಿದ್ದಾರೆ. ನಾಗಚೈತನ್ಯ ಜೊತೆಗೆ ಡಿವೋರ್ಸ್ ಆದ ಬಳಿಕ ಸಮಂತಾ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ಪಾತ್ರಗಳಿಗೆ ಹೆಚ್ಚಿನ ಮಹತ್ವ ಇರುವ ಸಿನಿಮಾಗಳಲ್ಲಿ ಸಮಂತಾ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಇಂದಿಗೂ ನಟ-ನಟಿಯರಿಗೆ ಸಂಭಾವನೆ ಬಹಳಷ್ಟು ವ್ಯತ್ಯಾಸವಿದೆ. ನಟರಿಗೆ ಕೊಡುವಷ್ಟು ಸಂಭಾವನೆ ನಾಯಕಿಯರಿಗೆ ಕೊಡಲ್ಲ ಎಂಬ ಧೋರಣೆ ಕೂಡಯಿದೆ. ಈ ಬಗ್ಗೆ ಸಮಂತಾ ಮಾತನಾಡಿದ್ದಾರೆ. ಹೆಚ್ಚಿನ ಸಂಭಾವನೆ ಪಡೆಯಲು ನಾನು ಹೋರಾಡುತ್ತಿದ್ದೇನೆ. ಹಾಗಂತ ಹೀರೋಗಳಷ್ಟೇ ಸಂಭಾವನೆ ಪಡೆಯುತ್ತೇನೆ ಎಂದಲ್ಲ. ನಿರ್ಮಾಪಕರೇ ಬಂದು ಹೌದು, ನಾವು ನಿಮಗೆ ಇಷ್ಟು ಪಾವತಿಸಲು ಬಯಸುತ್ತೇವೆ ಎಂದು ಹೇಳಬೇಕು. ಅದಕ್ಕಾಗಿ ನಾನು ಬೇಡಬೇಕಾಗಿಲ್ಲ. ಆದರೆ ಇದಕ್ಕೆ ಪರಿಶ್ರಮ ಬೇಕು ಎಂದಿದ್ದಾರೆ.
ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಲು ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗಾಯಾಳುಗಳ ಸಮಸ್ಯೆ ಎದುರರಾಗಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿಗೆ ಪ್ರಮುಖ ಅಸ್ತ್ರವಾಗಿದ್ದ ಜಾಶ್ ಹೇಝಲ್‌ವುಡ್ ಪಾದದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಇದೆ. ಒಂದು ವೇಳೆ ಆಸೀಸ್ ವೇಗಿ ಅಲಭ್ಯರಾದರೆ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಪ್ರಮುಖ ಮೂರು ಸಮಸ್ಯೆಗಳನ್ನು ಎದುರಿಸಲಿದೆ. 2022ರ ಐಪಿಎಲ್ ಮೆಗಾ ಹರಾಜಿನಲ್ಲಿ 7.75 ಕೋಟಿ ರೂ ಖರ್ಚು ಮಾಡಿ ಆಸ್ಟ್ರೇಲಿಯಾ ಪ್ರಮುಖ ವೇಗಿ ಜಾಶ್ ಹೇಝಲ್‌ವುಡ್ ಅವರನ್ನು ಬೆಂಗಳೂರು ಫ್ರಾಂಚೈಸಿ ಖರೀದಿಸಿತ್ತು. ಕಳೆದ ಬಾರಿ ಆಡಿದ್ದ 12 ಪಂದ್ಯಗಳಲ್ಲಿ 8.10 ಸರಾಸರಿಯಲ್ಲಿ 20 ವಿಕೆಟ್ ಕೆಡವುವ ಮೂಲಕ ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದರು. ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ವೇಳೆ ಜಾಶ್ ಹೇಝಲ್‌ವುಡ್ ಪಾದದ ಗಾಯಕ್ಕೆ ತುತ್ತಾಗಿದ್ದರು. ಆದ್ದರಿಂದ ಏಕದಿನ ಸರಣಿ…
ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮೊದಲ ಪಂದ್ಯದಲ್ಲಿ ಸೆಣಸುವ ಮೂಲಕ 2023ರ ಹೊಡಿ-ಬಡಿ ಟೂರ್ನಿಗೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಈ ಮಹತ್ವದ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಅಂದಹಾಗೆ 2022ರ ಐಪಿಎಲ್ ಮೆಗಾ ಹರಾಜಿನಲ್ಲಿ ಹೊಸದಾಗಿ ಎರಡು ತಂಡಗಳಿಗೆ ಅವಕಾಶ ನೀಡಲಾಗಿತ್ತು. ಅದರಂತೆ ಆಡಿದ ಮೊದಲ ಆವೃತ್ತಿಯಲ್ಲಿಯೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಐಪಿಎಲ್ ಇತಿಹಾಸದ ಬಗ್ಗೆ ಮಾತನಾಡುವುದಾದರೆ 2008ರಲ್ಲಿ ಮೊದಲ ಆವೃತ್ತಿ ಆರಂಭವಾಗಿತ್ತು. ಶೇನ್ ವಾರ್ನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮೊದಲ ಚಾಂಪಿಯನ್ ತಂಡ ಎನಿಸಿಕೊಂಡಿತ್ತು. ಫೈನಲ್ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಆರ್‌ಆರ್ ಪ್ರಶಸ್ತಿ ತನ್ನದಾಗಿಸಿಕೊಂಡಿತ್ತು. ಇದಾದ ಮುಂದಿನ ಆವೃತ್ತಿಯಲ್ಲಿ ಅಂದರೆ, 2009ರ ಐಪಿಎಲ್ ಟೂರ್ನಿಯಲ್ಲಿ…
2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದೆ. ಈ ಬಾರಿ ವಿಶೇಷವಾಗಿ ಉದ್ಘಾಟನಾ ಸಮಾರಂಭ ಕೂಡ ಆಯೋಜಿಸಲಾಗಿದೆ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ವಿಶೇಷ ಎಂದರೆ ಆರ್ಸಿಬಿ ತನ್ನ ಮೊದಲ ಪಂದ್ಯವನ್ನು ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಎರಡನೇ ಪಂದ್ಯ ಏಪ್ರಿಲ್ 6 ರಂದು ಆಯೋಜಿಸಲಾಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾದಲ್ಲಿ ಆಡಲಿದೆ (ಸಂಜೆ 7:30 IST), ಮೂರನೇ ಪಂದ್ಯ ಏಪ್ರಿಲ್ 10, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಬೆಂಗಳೂರು (3:30PM IST). ನಾಲ್ಕನೇ ಪಂದ್ಯ ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ…
ಕೆಲವರಿಗೆ ಪ್ರತಿದಿನ ಆಯಾಸ, ದೌರ್ಬಲ್ಯ ಅಥವಾ ತಲೆನೋವಿನಂತಹ ಸಮಸ್ಯೆಗಳು ಕಾಡುತ್ತವೆ. ಈ ಸಮಸ್ಯೆಗಳಿದ್ದರೆ ನಿಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯಿದೆ ಎಂದು ಅರ್ಥ. ಹಿಮೋಗ್ಲೋಬಿನ್ ಎಂದರೆ ಇದು ಕೆಂಪು ರಕ್ತ ಕಣಗಳಲ್ಲಿ ಕಂಡುಬರುವ ಪ್ರೋಟೀನ್ ಆಗಿದೆ. ರಕ್ತ ಕಣಗಳ ಕಾರ್ಯವು ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸುವುದು. ಪ್ರತಿಯೊಬ್ಬರಲ್ಲೂ ನಿಯಮಿತ ಪ್ರಮಾಣದಲ್ಲಿ ಹಿಮೋಗ್ಲೋಬಿನ್ ಇರುವುದು ಬಹಳ ಅವಶ್ಯಕ. ಕೆಲವೊಮ್ಮೆ ಹೀಮೋಗ್ಲೋಬಿನ್‌ನ ಮಟ್ಟವನ್ನು ಹೆಚ್ಚಿಸಲು ಕಬ್ಬಿಣಾಂಶದಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ. ಹಿಮೋಗ್ಲೋಬಿನ್ ಕಡಿಮೆಯಾದಾಗ ಏನಾಗುತ್ತದೆ? ಕಡಿಮೆ ಮಟ್ಟದ ಹಿಮೋಗ್ಲೋಬಿನ್ ದೇಹದ ಕಾರ್ಯನಿರ್ವಹಣೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಇದರ ಕಡಿಮೆ ಮಟ್ಟವು ನೀವು ರಕ್ತಹೀನತೆಯಿಂದ ಬಳಲುತ್ತಿರುವಿರಿ ಅಥವಾ ಯಾವುದೇ ಯಕೃತ್ತು ಅಥವಾ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವಿರಿ ಎಂದು ಸೂಚಿಸುತ್ತದೆ. ಹಿಮೋಗ್ಲೋಬಿನ್ ಕೊರತೆಯಿಂದಾಗಿ ನೀವು ಆಯಾಸ-ದೌರ್ಬಲ್ಯ, ಕಾಮಾಲೆ ಅಥವಾ ಆಗಾಗ್ಗೆ ತಲೆನೋವು ಮುಂತಾದ ಲಕ್ಷಣಗಳನ್ನು ಅನುಭವಿಸಬಹುದು. ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುವುದು ಹೇಗೆ ? ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು, ನೀವು ಕಬ್ಬಿಣದಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಹಿಮೋಗ್ಲೋಬಿನ್ ಉತ್ಪಾದನೆಯನ್ನು…
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕ್ರಮೇಣ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಸಾಗಿದ್ದು, ಒಂದೇ ದಿನ ದೇಶಾದ್ಯಂತ 2,151 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ಐದು ತಿಂಗಳಲ್ಲಿ ದೇಶದಲ್ಲಿ ದಾಖಲಾದ ಗರಿಷ್ಠ ಪ್ರಮಾಣದ ಸೋಂಕಿತರ ಪ್ರಮಾಣವಾಗಿದೆ. ಇಂದು ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 11,903 ಕ್ಕೆ ಏರಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದು. ಆ ಮೂಲಕ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 5,30,848 ಕ್ಕೆ ಏರಿದೆ. ಮಹಾರಾಷ್ಟ್ರದಿಂದ ಮೂರು, ಕರ್ನಾಟಕದಿಂದ ಒಂದು ಮತ್ತು ಕೇರಳದಿಂದ ಮೂರು ಸಾವುಗಳು ವರದಿಯಾಗಿವೆ.ಇನ್ನು ದೈನಂದಿನ ಧನಾತ್ಮಕತೆಯ ದರವು 1.51 ಪ್ರತಿಶತ ಮತ್ತು ವಾರದ ಧನಾತ್ಮಕ ದರವನ್ನು 1.53 ಪ್ರತಿಶತದಲ್ಲಿ ದಾಖಲಿಸಲಾಗಿದೆ.ನಿನ್ನೆ ದೇಶಾದ್ಯಂತ 1,573 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದವು.
ನವದೆಹಲಿ: ಪಂಜಾಬ್‌ನಿಂದ ಪರಾರಿಯಾಗಿ ಒಂದು ವಾರಕ್ಕೂ ಹೆಚ್ಚು ಕಾಲ ಪೊಲೀಸರಿಂದ ತಲೆಮರೆಸಿಕೊಂಡಿರುವ ಮೂಲಭೂತವಾದಿ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ದೆಹಲಿಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದ್ದಾನೆ.ಅಮೃತಪಾಲ್ ಸಿಂಗ್ ಪೋಲಿಸರಿಂದ ತಪ್ಪಿಸಿಕೊಳ್ಳಲು ವೇಷ ಧರಿಸುವ ಪ್ರಯತ್ನದಲ್ಲಿ ತಮ್ಮ ಪೇಟವಿಲ್ಲದೆ ಕಾಣಿಸಿಕೊಂಡಿದ್ದಾರೆ. ಅಮೃತಪಾಲ್ ಸನ್‌ಗ್ಲಾಸ್ ಮತ್ತು ಡೆನಿಮ್ ಜಾಕೆಟ್ ಧರಿಸಿ ಓಡಾಡುತ್ತಿರುವುದು ಕಂಡುಬಂದಿದೆ. ಸಿಸಿಟಿವಿ ಕ್ಲಿಪ್‌ನಲ್ಲಿ ಅವರ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಕೂಡ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಗುರುತನ್ನು ಮರೆಮಾಚಲು ಮುಖವಾಡಗಳನ್ನು ಧರಿಸಿದ್ದರು.ಮಾರ್ಚ್ 18 ರಂದು ಪಂಜಾಬ್‌ನಲ್ಲಿ ಆತನನ್ನು ಬಂಧಿಸಲು ಪೊಲೀಸರು ತೆರಳಿದ ಮೂರು ದಿನಗಳ ನಂತರ ದೆಹಲಿಯ ಸಿಸಿಟಿವಿ ವಿಡಿಯೋ ಟೈಮ್‌ಸ್ಟ್ಯಾಂಪ್ ಮಾರ್ಚ್ 21 ಅನ್ನು ತೋರಿಸುತ್ತದೆ. ಅಮೃತಪಾಲ್ ಸಿಂಗ್ ಮತ್ತು ಪಾಪಲ್ಪ್ರೀತ್ ಸಿಂಗ್ ಹರಿಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನೂ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದಾನೆಯೇ ಅಥವಾ ರಾಷ್ಟ್ರ ರಾಜಧಾನಿಯಿಂದಲೂ ಸ್ಕೂಟರ್ ಮಾಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಿಲ್ಲ.
ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆ ಹೊಂದಿರುವ ( Tirupati Temple) ತಿರುಪತಿ ತಿಮ್ಮಪ್ಪನಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮೂರು ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ಈ ದಂಡವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ದೇವಾಲಯದ ಮೂಲಗಳು ಖಚಿತಪಡಿಸಿವೆ. ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಾಗ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 10 ಕೋಟಿ ರೂಪಾಯಿಗಳ ದಂಡ ವಿಧಿಸಲಾಗಿದ್ದು, ಮಾತುಕತೆ ಬಳಿಕ ಇದನ್ನು ಮೂರು ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿತ್ತು. ವಿದೇಶಿ ಭಕ್ತರು ನೀಡುವ ಕೊಡುಗೆಗಳನ್ನು ಭಾರತೀಯ ಕರೆನ್ಸಿಗೆ ಪರಿವರ್ತನೆ ಮಾಡುವ ಸಂದರ್ಭದಲ್ಲಿ ವ್ಯತ್ಯಾಸವಾಗಿತ್ತು ಎನ್ನಲಾಗಿದ್ದು, ಅಲ್ಲದೆ ಇದನ್ನು ಖರ್ಚು ಮಾಡಿದ ರೀತಿಗೂ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ 3 ಕೋಟಿ ರೂಪಾಯಿಗಳ ದಂಡವನ್ನು ಪಾವತಿಸಲಾಗಿದೆ.