ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಈಗ ಮತ್ತೊಂದು ಹಂತಕ್ಕೆ ಹೋಗಿದೆ. ಕೇಂದ್ರ ಸಚಿವರನ್ನು ನಿಂದಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಜೆಡಿಎಸ್ ಉಪನಾಯಕ ಟಿ. ಎ.ಶರವಣ ನೇತೃತ್ವದಲ್ಲಿ ರಾಜ್ಯ ಪೊಲೀಸ್ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು. ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ಉಪನಾಯಕ ಟಿ. ಎ.ಶರವಣ ಆಗ್ರಹಿಸಿದ್ದಾರೆ.
Author: Prajatv Kannada
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಭೀಕರವಾಗಿ ಹತ್ಯೆ ಮಾಡಿಲಾಗಿದೆ. ಪ್ರಕರಣದ ಸಂಬಂಧ ನಟ ದರ್ಶನ್ ರನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರಿಸಲಾಗಿದೆ. 60ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟಿಸಿರೋ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ದರ್ಶನ್ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದು ಅವರ ಸಿನಿ ಭವಿಷ್ಯವೇ ಮುಗಿಯಲಿ ಎಂದು ಭವಿಷ್ಯ ನುಡಿಯಲಾಗಿದೆ. ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದರ್ಶನ್ ಇಂದು ಸ್ಟಾರ್ ನಟನಾಗಿ ಮಿಂಚಿದ್ದಾರೆ. ತಮ್ಮದೇ ಅಭಿಮಾನಿ ಬಳಗ ಹೊಂದಿರುವ ದರ್ಶನ್ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವುದು ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ. ಇನ್ನೇನು ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತೆ. ದಾಸ ಆಚೆ ಬರ್ತಾನೆ. ಮತ್ತೆ ಆನೆ ನೆಡೆದಿದ್ದೇ ದಾರಿ, ಬಾಸ್ ಸಿನಿಮಾ ಮಾಡ್ತಾರೆ ಅಂತ ಕಾದು ಕೂತಿದ್ದ ಅಭಿಮಾನಿಗಳಿಗೆ ಬಿರುಗಾಳಿಯಂತಾ ಸುದ್ದಿಯೊಂದು ಕೇಳಿ ಬಂದಿದೆ. ನಟ ದರ್ಶನ್ ಗೆ ಕೆಟ್ಟ ಸಮಯ. ಕೊಲೆ…
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತು ಜಸ್ಟೀಸ್ ಹೇಮಾ ಸಮಿತಿಯ ವರದಿ ಸಿನಿ ಇಂಡಸ್ಟ್ರಿಯನ್ನೇ ಬೆಚ್ಚಿಬೀಳಿಸಿದೆ. ಈ ವರದಿಯ ಬಳಿಕ ಸಾಕಷ್ಟು ಮಂದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಹಲವರು ವಿರುದ್ಧ ಪ್ರಕರಣದ ದಾಖಲಾಗಿದೆ. ಕೇರಳದಲ್ಲಿ ಇಟ್ಟಿರುವ ದಿಟ್ಟ ಹೆಜ್ಜೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ, ಇದೀಗ ಟಾಲಿವುಡ್ ನಟಿ ಸಮಂತಾ ‘ತೆಲುಗು ಚಿತ್ರರಂಗದಲ್ಲೂ ‘ಅದೇ ರೀತಿಯ ವರದಿಯನ್ನು ಪ್ರಕಟಿಸಬೇಕು’ ಎಂದು ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಕಿರುಕುಳದ ಹಿನ್ನೆಲೆಯಲ್ಲಿ ಕೇರಳದಲ್ಲಿ ಜಸ್ಟೀಸ್ ಹೇಮಾ ವರದಿ ಬಹಿರಂಗಗೊಂಡ ಬಳಿಕ 9 ಪುರುಷರ ವಿರುದ್ಧ ಎಫ್‌ಐಆರ್‌ಗಳು ದಾಖಲಾಗಿವೆ. ಜೊತೆಗೆ ಅಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಕೇರಳದಲ್ಲಿ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ಯಿಂದ ಪ್ರೇರಿತವಾಗಿ ಟಾಲಿವುಡ್ 2019ರಲ್ಲಿ ಸ್ಥಾಪಿತವಾಗಿರುವ ವಾಯ್ಸ್ ಆಫ್ ವುಮೆನ್ಮೂಲಕ ಇದೇ ರೀತಿಯ ವರದಿ ಹೊರಬರಬೇಕಿದೆ ಎಂದು ನಟಿ ಸಮಂತಾ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬಗ್ಗೆ ನಟಿ ಸಮಂತಾ ಅವರು…
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೌಡಿಗಳ ಜೊತೆ ಕುಳಿತು ಟೀ ಕುಡಿದು ಸೇಗರೇಟು ಸೇದಿದ್ದ ಫೋಟೋ ವೈರಲ್ ಆಗಿತ್ತು. ಜೊತೆಗೆ ಹೊರಗಿದ್ದ ರೌಡಿಯ ಜೊತೆ ದರ್ಶನ್ ವಿಡಿಯೋ ಕಾಲ್ ನಲ್ಲಿ ಮಾನತಾಡಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿ ಬಳಿಕ ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ದರ್ಶನ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ‘ನನ್ನ ಅಭಿಮಾನಿ ಮಾತನಾಡಿ ಎಂದು ಒತ್ತಾಯಿಸಿದ್ದಕ್ಕೆ ವಿಧಿ ಇಲ್ಲದೆ ಮೊಬೈಲ್‌ನಲ್ಲಿ ಮಾತನಾಡಿದೆ. ನಾನು ಯಾವತ್ತೂ ಜೈಲಿನಲ್ಲಿ ಮೊಬೈಲ್ ಬಳಸಿಲ್ಲ’ ಎಂದು ನಟ ದರ್ಶನ್ ತಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿ ವಿಶೇಷ ಸವಲತ್ತು ಪಡೆದ ಪ್ರಕರಣ ಸಂಬಂಧ ಬಳ್ಳಾರಿಗೆ ಸಳಾಂತರಿಸುವ ಮುನ್ನ ಅವರನ್ನು ಸುದೀರ್ಘವಾಗಿ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. “ನಾನು ಜೈಲಿಗೆ ಬಂದ ಕೆಲ ದಿನಗಳಲ್ಲೇ ನನ್ನನ್ನು ಭೇಟಿಯಾಗಿ ಧರ್ಮ ಪರಿಚಯ ಮಾಡಿಕೊಂಡ. ನನ್ನ ಬ್ಯಾರಕ್‌ನಲ್ಲೇ ಆತ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮೂರು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈಗಾಗಲೇ ಸಾಕಷ್ಟು ನಟ, ನಟಿಯರು ದರ್ಶನ್ ರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಇದೀಗ ನಟ ಸುದೀಪ್ ಪ್ರತಿಕ್ರಿಯಿಸಿದ್ದು, ‘ನಾನು ಮತ್ತು ದರ್ಶನ್ ಮೊದಲಿನಂತೆ ಮಾತನಾಡಿಕೊಳ್ಳುತ್ತಿದ್ದರೆ ಖಂಡಿತ ಈ ಸಂದರ್ಭದಲ್ಲಿ ಅವರನ್ನು ಜೈಲಿನಲ್ಲಿ ಭೇಟಿ ಮಾಡಿ ಬರುತ್ತಿದ್ದೆ’ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗ ಪ್ರಶ್ನೆಗೆ ಉತ್ತರಿಸಿದ ಸುದೀಪ್, ‘ದರ್ಶನ್ ವಿಚಾರವಾಗಿ ನಾನು ಹೇಳಬೇಕಿರೋದನ್ನು ಈಗಾಗಲೇ ಹೇಳಿದ್ದೇನೆ. ಮತ್ತೆ ಅದೇ ಮಾತನಾಡುವುದು ಬೇಡ. ಅವರಿಗೆ ಅಭಿಮಾನಿಗಳು ಇದ್ದಾರೆ. ಅವರದ್ದೇ ಕುಟುಂಬ ಇದೆ. ನಾನು ಮಾತನಾಡುವುದರಿಂದ ಅವರಿಗೆ ನೋವಾಗುವುದು ಬೇಡ. ಮತ್ತೊಂದು ಕಡೆ ಮಗನನ್ನು ಕಳೆದುಕೊಂಡಿರುವ ಕುಟುಂಬಕ್ಕೂ ನೋವು ಆಗೋದು ಬೇಡ ಎಂದಿದ್ದಾರೆ. ಈ ದೇಶದಲ್ಲಿ ನಾವು ಇದ್ದೇವೆ ಎಂದ ಮೇಲೆ ಕಾನೂನು ಮೇಲೆ ನಂಬಿಕೆ ಇಡಬೇಕು. ನನಗೆ ಸರ್ಕಾರ ಮತ್ತು ಕಾನೂನಿನ ಮೇಲೆ ನಂಬಿಕೆ ಇದೆ. ನಾನು ಆ ಪ್ರಕರಣದ…
ಬೆಂಗಳೂರು: ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಇನ್ನೆರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ಸೆಪ್ಟೆಂಬರ್ 2ಕ್ಕೆ ಹೈಕೋರ್ಟ್ ಮುಂದೂಡಿದೆ. https://youtu.be/-ARZ3SvH6dE?si=qAL0kevDtZ-EY7dR ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ‘ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳಡಿಯಲ್ಲಿ ತನಿಖೆಗೆ ಅನುಮತಿ ನೀಡಲಾಗಿದೆ. ಆರೋಪಿತ ಘಟನೆ ನಡೆದಾಗ ಭಾರತೀಯ ನ್ಯಾಯ ಸಂಹಿತೆ ಜಾರಿಯಲ್ಲಿರಲಿಲ್ಲ. ಹೀಗಾಗಿ ರಾಜ್ಯಪಾಲರ ಅನುಮತಿಯೇ ಕಾನೂನುಬಾಹಿರ. ಐಪಿಸಿ ಸೆಕ್ಷನ್‌ನಡಿ ಅನುಮತಿ ನೀಡುತ್ತೇನೆಂದು ಹೇಳಬಹುದಿತ್ತು. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿಲ್ಲವೆಂಬುದಕ್ಕೆ ಇದು ಸಾಕ್ಷಿ. ಸಿಎಂ ಪತ್ನಿ ಪಾರ್ವತಿ ಹಾಗೂ ಅವರ ಸಹೋದರನ ವಿರುದ್ಧ ಆರೋಪವಿದೆ. ಪತ್ನಿ ಹಾಗೂ ಮೈದುನನ ಲೋಪಗಳಿಗೆ ಸಿಎಂ ಜವಾಬ್ದಾರಿಯಾಗುತ್ತಾರೆಯೇ?’ ಹೀಗೆಂದು ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು. ಇದಕ್ಕೆ ತಮಾಷೆಯಾಗಿಯೇ ಪ್ರತಿಕ್ರಿಯಿಸಿದ ಮೆಹ್ತಾ, ಪತ್ನಿ ಪರವಾಗಿ ಪತಿಗೆ ಪವಿತ್ರವಾದ ಹೊಣೆಗಾರಿಕೆ ಇರುತ್ತದೆ.…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬೆನ್ನಲ್ಲೇ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. https://youtu.be/PSro7CXyEpU?si=iVLXr9qnCvAdM4RD ಪ್ರಕರಣ ಕುರಿತ ಕೆಲ ಮಹತ್ವದ ದಾಖಲೆಗಳಿರುವ ಫೈಲ್‌ಗಳೊಂದಿಗೆ ಎಸಿಪಿ ಚಂದನ್ ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಪ್ರಕರಣದಲ್ಲಿ ದರ್ಶನ್ ಅವರನ್ನು ಎ1 ಮಾಡುವ ಬಗ್ಗೆಯೂ ಗೃಹ ಸಚಿವರ ಜೊತೆ ಎಸಿಪಿ ಚಂದನ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ತನಿಖೆಯ ಪ್ರಗತಿ ಬಗ್ಗೆಯೂ ಗೃಹ ಸಚಿವರಿಗೆ ಚಂದನ್ ಮಾಹಿತಿ ಕೊಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಎಸಿಪಿ ಚಂದನ್ ಭೇಟಿ ಬಗ್ಗೆ ಮಾತನಾಡಿದ ಸಚಿವ ಪರಮೇಶ್ವರ್, ಅವರು ಬೇರೆ ಕೇಸ್ ಸಂಬಂಧ ಬಂದಿದ್ದರು. ದರ್ಶನ್ ಕೇಸ್ ಸಂಬಂಧ ಚರ್ಚೆ ಮಾಡಲಿಲ್ಲ. ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ರನ್ನು ಎ1 ಮಾಡುವ ವಿಚಾರ ತನಿಖಾಧಿಕಾರಿಗಳಿಗೆ ಬಿಟ್ಟದ್ದು. ದರ್ಶನ್‌ರನ್ನು ಎ1…
ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. https://youtu.be/f3nZxiO-EsM?si=EPDbV9ohyhpkr5Yt ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ…
ದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದ್ದು, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪಿನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ವಿಷಯವಾಗಿದ್ದು ಅವರ ಸುರಕ್ಷತೆಗಾಗಿ ಹಲವು ಕಠಿಣ ಕಾನೂನುಗಳನ್ನು ಮಾಡಲಾಗಿದೆ. ಮಹಿಳೆಯರು ಕಾನೂನುಗಳ ಬಗ್ಗೆ ಅರಿಯುವ ಅಗತ್ಯವಿದೆ ಎಂದರು. ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಯಿತು. ಇಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಪ್ರಮುಖ ಪಾತ್ರವಹಿಸುತ್ತವೆ. ನಾವು ಈ ಸಮಿತಿಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಿನಿಮಾಗಳು ಸಾರ್ವತ್ರಿಕವಾಗಿ ಎಲ್ಲರೂ ವೀಕ್ಷಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ದೃಷ್ಟಿ ಹಾಗೂ ಶ್ರವಣ ದೋಷವುಳ್ಳ ವ್ಯಕ್ತಿಗಳಿಗೂ ಸಹ ಸಿನಿಮಾಗಳು ಲಭ್ಯವಾಗುವುದನ್ನು ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹಾಗಾಗಿ, ಸಿನಿಮಾದಲ್ಲಿ ಇನ್ನು ಮುಂದೆ ಓಪನಿಂಗ್ ಕ್ಯಾಪ್ಷನಿಂಗ್ ಅಥವಾ ಕ್ಲೋಸಡ್ ಕ್ಯಾಪ್ಷನಿಂಗ್ ಅಥವಾ ಭಾರತೀಯ ಸಂಜ್ಞ್ಯಾ ಭಾಷೆಯನ್ನು ಮತ್ತು ಧ್ವನಿ ವಿವರಣೆಯನ್ನು ದೃಷ್ಟಿ ವಿಶೇಷ ಚೇತನರಿಗಾಗಿ ಬಳಕೆ ಮಾಡಬೇಕೆಂದು ಸೂಚಿಸಲಾಗಿದೆ. ಮೊದಲಿಗೆ 2024ರ ಸೆಪ್ಟೆಂಬರ್ 15ರೊಳಗೆ ಒಂದಕ್ಕಿಂತ ಹೆಚ್ಚು ಭಾಷೆಗಳಲ್ಲಿ ತಯಾರಾಗುವ ಚಿತ್ರಗಳು ಈ ಅಂಶಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. 2025ರ ಜನವರಿ 1ರಿಂದ ಅನ್ವಯವಾಗುವಂತೆ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸುವ ಚಿತ್ರಗಳಿಗೂ ಇದು ಅನ್ವಯವಾಗುತ್ತದೆ. 2025ರ ಸೆಪ್ಟೆಂಬರ್ 15ರಿಂದ ಅನ್ವಯವಾಗುವಂತೆ ಈ ಎಲ್ಲಾ ಅಂಶಗಳನ್ನು , ಚಿತ್ರ ಮಂದಿರಗಳಲ್ಲೂ ಕೂಡ ಖಾತರಿ ಪಡಿಸುವುದು ಕಡ್ಡಾಯವಾಗಿದೆ. CBFC ಪ್ರಮಾಣೀಕರಿಸಿದ ಎಲ್ಲಾ ಚಿತ್ರಗಳಿಗೂ ಇದು ಅನ್ವಯವಾಗಲಿದೆ. ಇದರ ಕಾರ್ಯ ವೈಖರಿಯ ಕುರಿತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ – CBFC ನಿಗಾ ವಹಿಸಲಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು…