ಬೆಂಗಳೂರು: ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ(Yeshavantpur Police Station, Bangalore) ಸಚಿವ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ (Kusuma Hanumantarayappa)ಅವರು ದೂರು ನೀಡಿದ್ದಾರೆ. ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಎದುರಾಳಿ ಬಿಜೆಪಿ ಅಭ್ಯರ್ಥಿ ಸಚಿವ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ(Yeshavantpur Police Station) ದೂರು ಸಹ ದಾಖಲಿಸಿದ್ದಾರೆ. ಸಚಿವ ಮುನಿರತ್ನ ಅವರು ತಮ್ಮ ಬೆಂಬಲಿಗನನ್ನೇ ಚುನಾವಣೆ ಕಣಕ್ಕೆ ಇಳಿಸಿ ತಮ್ಮ ವಿರುದ್ಧ ಷಡ್ಯಂತ್ರ ರಚನೆ ಮಾಡಿದ್ದಾರೆ ಎಂದು ಕುಸುಮಾ ಹೆಚ್. ಆರೋಪಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಕುಸುಮಾ ಅವರು ಬರೆದುಕೊಂಡಿದ್ದಾರೆ. ಆರ್ಆರ್ ನಗರ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಿರುವ ಯಾರಬ್ಎಂಬವರು ಸಚಿವ ಬೆಂಬಲಿಗ. ಆದ್ರೆ ಕ್ಷೇತ್ರದಲ್ಲಿ ತಾನೋರ್ವ ಕಾಂಗ್ರೆಸ್ ಬೆಂಬಲಿತನಾಗಿದ್ದು ಎಂದು ಹೇಳಿಕೊಂಡು ಪಾಕಿಸ್ತಾನ ಧ್ವಜ ಇರೋ ಕರಪತ್ರ ಮುದ್ರಿಸಿ ಹಂಚುತ್ತಿದ್ದಾರೆ ಎಂದು ಕುಸುಮಾ ಆರೋಪ ಮಾಡಿದ್ದಾರೆ. ಪಾಕಿಸ್ತಾನ ಧ್ವಜ ಮುದ್ರಣದ ಕರಪತ್ರ ಹಂಚಿ…
Author: Prajatv Kannada
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆ ಹಾಲಿ ಶಾಸಕಿಗೆ ಸಂಬಂಧಿಸಿದಂತೆ ಆಡಿಯೋ ಒಂದು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ ಕ್ಷೇತ್ರದ ಹಾಲಿ ಶಾಸಕಿಗೆ ಸಂಬಂಧಿಸಿರುವ ಆಡಿಯೋ ಇದಾಗಿದ್ದು, ಈ ಆಡಿಯೋದಲ್ಲಿ ಶಾಸಕಿಯ ಪತಿ ಮಾತನಾಡಿದ್ದಾರೆ ಎನ್ನಲಾಗಿದ್ದು ಅದರಲ್ಲಿ ಸಂಸಾರ ಉಳಿಸಿಕೊಳ್ಳಲು ಅಂಗಲಾಚುವ ವಿಚಾರ ಉಲ್ಲೇಖವಾಗಿದೆ. ಈ ಆಡಿಯೋದಲ್ಲಿ ಕೋಲಾರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬ್ಯಾಲಹಳ್ಳಿ ಗೋವಿಂದೇಗೌಡ ಜತೆ ರೂಪಕಲಾಗೆ ಸಂಬಂಧ ಕಲ್ಪಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಈ ಆಡಿಯೋ ದಲ್ಲಿ ” 2018ರಲ್ಲಿ ನನ್ನ ಮನೆ ಬಾಗಿಲಿಗೆ ಬಂದು ನನ್ನ ಕನ್ನಿನ್ಸ್ ಮಾಡಿ ಅವಳನ್ನು ಕರೆದುಕೊಂಡು ಹೋದಿರಿ. ಬಾಲಹಳ್ಳಿ, ಗೋವಿಂದೇಗೌಡನ ಜೊತೆ ಸೇರಿಕೊಂಡು ಮಕ್ಕಳನ್ನು ಮಡಿಕೇರಿಗೆ ಹಾಕಿದ್ದಾಳೆ. ಗೋವಿಂದೇಗೌಡರ ವಿಚಾರ ಎತ್ತಿದರೆ ಸಾಕು ಊಟಕೆ ವಿಷ ಹಾಕಿ ಸಾಯಿಸಿಬಿಡ್ತೀನಿ ಅಂತಾರೆ. ನಿಮ್ಮನ್ನ ಕೈ ಮುಗಿತೀನಿ ರೆಡ್ಡಿಯವರೇ ಅವಳನ್ನು ಸೋಲಿಸಿ ಮನೆಗೆ ಕಳುಹಿಸಿಬಿಡಿ. ನಾನು ಹೆಂಗೋ ನನ್ನ ಸಂಸಾರ ಉಳಿಸಿಕೊಳ್ಳಿನಿ” ಎಂಬ ಸಂಭಾಷಣೆ ಕೇಳಿಬಂದಿದೆ. ಈ ಬಗ್ಗೆ…
ಬೆಂಗಳೂರು: ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?: ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ. ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ. ಪೋಷಣೆ ಯೋಜನೆಯ…
ಬೆಂಗಳೂರು: ಬೆಂಗಳೂರಿನ ಹೈವೋಲ್ಟೇಜ್ ಕ್ಷೇತ್ರ ಬೊಮ್ಮನಹಳ್ಳಿಯಲ್ಲಿ ನಟ ದರ್ಶನ್(actor darshan) ಭರ್ಜರಿ ಪ್ರಚಾರ ನಡೆಸಿ, ಶಾಸಕ ಸತೀಶ್ ರೆಡ್ಡಿ(MLA Satish Reddy) ಪರವಾಗಿ ಮತಯಾಚನೆ ಮಾಡಿದ್ದಾರೆ. ಬೊಮ್ಮನಹಳ್ಳಿ ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗಿ ನಿಂತಿದೆ. ಕಳೆದ 3 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತತ ಗೆಲುವು ಕಾಣುತ್ತಾ ಶಾಸಕರಾಗಿರುವ ಸತೀಶ್ ರೆಡ್ಡಿ 4ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಹೀಗಾಗಿ ಈ ಚುನಾವಣೆ ಸಾಕಷ್ಟು ಗಮನ ಸೆಳೆದಿದ್ದು, ನಟ ದರ್ಶನ್(actor darshan) ಕೂಡ ಸತೀಶ್ ರೆಡ್ಡಿ ಪರ ಬೊಮ್ಮನಹಳ್ಳಿಯ ಗಾರ್ಮೆಂಟ್ಸ್ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಮತಯಾಚನೆ ಮಾಡಿದರು. ಇನ್ನು ದರ್ಶನ್ ಎಂಟ್ರಿ ಹಿನ್ನೆಲೆಯಲ್ಲಿ ಭಾರಿ ಜನಸಂಖ್ಯೆ ಬೊಮ್ಮನಹಳ್ಳಿಯಲ್ಲಿ ನೆರೆದಿತ್ತು. ಬೊಮ್ಮನಹಳ್ಳಿ-ಬೇಗೂರು ರಸ್ತೆಯಲ್ಲಿ ನಟ ದರ್ಶನ್ ಫ್ಯಾನ್ಸ್ ಭಾರಿ ಸಂಖ್ಯೆಯಲ್ಲಿ ಸೇರಿ ನೆಚ್ಚಿನ ನಟನನ್ನ ಬರಮಾಡಿಕೊಂಡರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಸಾಕಷ್ಟು ವಿಶಾಲವಾಗಿದೆ. ಹೀಗಾಗಿ ಬಹುತೇಕ ಕಡೆ ರೋಡ್ ಶೋ ಮೂಲಕವೇ ನಟ ದರ್ಶನ್ ಶಾಸಕ ಸತೀಶ್ ರೆಡ್ಡಿ ಪರ ಪ್ರಚಾರ ನಡೆಸಿದರು. ಅರಕರೆ, ಬಿಳೆಕಹಳ್ಳಿ ಸೇರಿದಂತೆ…
ಬೆಂಗಳೂರು: ಹಳೇ ಮೈಸೂರು (Old Mysuru) ಭಾಗದಲ್ಲಿ ಕಾಂಗ್ರೆಸ್- ಜೆಡಿಎಸ್‍ಗೆ (Congresss- JDS) ನೇರ ಠಕ್ಕರ್ ಕೊಟ್ಟು ಮತ ಬೇಟೆಯಾಡಿರುವ ಮೋದಿ (PM Narendra Modi) ಕಾಂಗ್ರೆಸ್-ಜೆಡಿಎಸ್ ಅಸ್ಥಿರದ ಪ್ರತೀಕ ಅಂತ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಸಮಯದಲ್ಲಿ ಎರಡೂ ಪಕ್ಷಗಳು ಡಬ್ಲ್ಯೂ ಡಬ್ಲ್ಯೂಎಫ್ ರೀತಿ ಕಾದಾಡಿ ನಂತರ ಇಬ್ಬರು ಒಂದಾಗುತ್ತಾರೆ. ಜೆಡಿಎಸ್ 25 ಸ್ಥಾನ ಪಡೆದು ಸಿಎಂ ಕನಸು ಕಾಣುತ್ತಿದೆ. ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಂ ಎಂದು ಹೇಳುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯೇ ಪರ್ಯಾಯ ಪಕ್ಷ ಎಂದು ದಾಳ ಉರುಳಿಸಿದ್ದಾರೆ. ನಮೋ ಸಂದೇಶ ಏನು? ಕರಾವಳಿ, ಬೆಂಗಳೂರು ನಗರ, ಮಧ್ಯ ಕರ್ನಾಟಕ ಸೇರಿದಂತೆ ಹಲವು ಕಡೆ ಬಿಜೆಪಿ ಭದ್ರವಾಗಿದ್ದರೂ ಹಳೇ ಮೈಸೂರು ಭಾಗದಲ್ಲಿ ಬಲಿಷ್ಠವಾಗಿ ಬೆಳೆದಿಲ್ಲ. ಈ ಕಾರಣಕ್ಕೆ ಇಲ್ಲಿ ಬಿಜೆಪಿ ಸಂಘಟನೆಯಾಗಲು ಜೆಡಿಎಸ್ ಜೊತೆ ಯಾವುದೇ ಒಳ ಒಪ್ಪಂದ, ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಎಂಬ ಸಂದೇಶವನ್ನು ಮೋದಿ ರವಾನಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಮಗೆ ಸಮಾನ ವಿರೋಧಿಗಳು. ಜೆಡಿಎಸ್ 25 ಸ್ಥಾನ ಪಡೆದು ಸಿಎಂ…
ಮೈಸೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 11 ಕ್ಷೇತ್ರದಿಂದ 26,55,988 ಮತದಾರರು ಮತದಾನ ಮಾಡಲಿದ್ದಾರೆ. ಇವರಲ್ಲಿ 1,66,633 ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. 2018ರ ವಿಧಾನ ಸಭಾ ಚುನಾವಣೆಯಲ್ಲಿ 24,89355 (ಪುರುಷ-939360, ಮಹಿಳೆ-939360, ತೃತೀಯಲಿಂಗಿ-172) ಮತದಾನ ಮಾಡುವ ಅರ್ಹತೆ ಪಡೆದಿದ್ದರು. 2022ರ ಚುನಾವಣೆಯಲ್ಲಿ ಏ. 20ರಂದು ಅಂತಿಮಗೊಂಡ ಮತದಾರರ ಪಟ್ಟಿಯನ್ವಯ ಜಿಲ್ಲೆಯ 11 ಕ್ಷೇತ್ರಗಳಿಂದ 26,55,988 (ಪುರುಷ-1317121, ಮಹಿಳೆ-1338637, ತೃತೀಯಲಿಂಗಿ-230) ಮತದಾರರು ಪ್ರಜಾಪ್ರಭುತ್ವದ ಮಹತ್ವದ ಪ್ರಕ್ರಿಯೆಯಲ್ಲಿಪಾಲ್ಗೊಳ್ಳುವ ಹಕ್ಕು ಪಡೆದುಕೊಂಡಿದ್ದಾರೆ. ಜಿಲ್ಲೆ ಎಲ್ಲಾ 11 ಕ್ಷೇತ್ರಗಳಲ್ಲಿ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರನ್ನು (3,29,141) ಹೊಂದಿದೆ. ಕಳೆದ ಬಾರಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗಿಂತ ನಗರ ವ್ಯಾಪ್ತಿಯ ಕೃಷ್ಣರಾಜ ಕ್ಷೇತ್ರದಲ್ಲಿ ಅತಿ ಹೆಚ್ಚು (2,47,084)ಮತದಾರರಿದ್ದರು. ಮಾತ್ರವಲ್ಲದೇ ಕಳೆದ ಬಾರಿ ಜಿಲ್ಲೆಯಲ್ಲಿಯೇ ಕಡಿಮೆ ಮತದಾರರನ್ನು ಹೊಂದಿದ ಕ್ಷೇತ್ರವಾಗಿ ಪಿರಿಯಾಪಟ್ಟಣ (1,80,411)ಗುರುತಿಸಿಕೊಂಡಿದ್ದು, ಈ ಬಾರಿಯೂ(1,95,458) ಅದೇ ಸ್ಥಾನವನ್ನು ಉಳಿಸಿಕೊಂಡಿದೆ. ಪಿರಿಯಾಪಟ್ಟಣ-2325, ಕೆ.ಆರ್.ನಗರ-250, ಹುಣಸೂರ-273, ಎಚ್.ಡಿ.ಕೋಟೆ-282, ನಂಜನಗೂಡು-249, ಚಾಮುಂಡೇಶ್ವರಿ-337, ಕೃಷ್ಣರಾಜ-265, ಚಾಮರಾಜ-244, ನರಸಿಂಗರಾಜ-282,…
ಶಿಡ್ಲಘಟ್ಟ: ನಮ್ಮ ತಾತನ ಕಾಲದಿಂದಲೂ ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಅಂತ ನಂಬಿದ್ದೆವು, ಆದರೆ ಕಾಂಗ್ರೆಸ್ ಹಣವಂತರ ಪಕ್ಷ ಎಂದು ಗೊತ್ತಾಗಿದೆ. ಹಂಬಲದಿಂದ ಚುನಾವಣೆ ಗೆಲ್ಲಲು ಸಾದ್ಯವಿಲ್ಲ, ಮತದಾರರ ಪ್ರೀತಿಯಿಂದ ಮಾತ್ರ ಮತ ಪಡೆಯಲು ಸಾದ್ಯ, ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ ಎಂದು ಸ್ವತಂತ್ರ ಅಭ್ಯರ್ಥಿ ಆಂಜಿನಪ್ಪ (ಪುಟ್ಟು) ಮನವಿ ಮಾಡಿದರು. ತಾಲೂಕಿನ ಹಿತ್ತಲಹಳ್ಳಿ ಗೇಟ್ ಬಳಿ ಆಯೋಜಿಸಿದ್ದ ಸ್ವಾಭಿಮಾನಿ ಜನತಾ ಸಮಾವೇಶ ಕಾರ್ಯಕ್ರಮದಲ್ಲಿ ಸಾವಿರಾರು ಜನ ಮತದಾರರು ಹಾಗು ಆಂಜಿನಪ್ಪ ನವರ ಅಭಿಮಾನಿಗಳು ಸಮಾವೇಶ ಗೊಂಡಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಕೈ ತಪ್ಪಿದ್ದರಿಂದ ಸ್ವತಂತ್ರ ವಾಗಿ ಸ್ಪರ್ಧಿಸಿದ್ದು, ಕ್ಷೇತ್ರದಾದ್ಯಂತ ಅಪಾರ ಜನ ಬೆಂಬಲ ವ್ಯಕ್ತವಾಗಿದೆ. ವೇದಿಕೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು ನಾನು ಚುನಾವಣೆಗಾಗಿ ಎಲ್ಲಿಂದಲೋ ಬಂದವನಲ್ಲ, ಇಲ್ಲೇ ಇದ್ದು ಹತ್ತು ವರ್ಷಗಳಿಂದ ನಿಮ್ಮ ಸೇವೆ ಮಾಡಿಕೊಂಡು ಬಂದವನು. ಕಳೆದ ಬಾರಿ ಸ್ಪರ್ದಿಸಿದ್ದಾಗ ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವ ಭರವಸೆ ಕೊಟ್ಟಿದ್ದಿರಿ, ಕಳೆದ ಹತ್ತು ವರ್ಷಗಳಲ್ಲಿ ನಾನು ನಿಮ್ಮ ಪ್ರೀತಿ, ವಿಶ್ವಾಸ ಗಳಿಸಿದ್ದರೆ ಈಗ ನನಗೆ ಮತ ಕೊಟ್ಟು, ಆ ಮೂಲಕ ನಿಮ್ಮ ಮಾತು ಉಳಿಸಿಕೊಳ್ಳಿ ಎಂದರು. ಪ್ರಾಮಾಣಿಕ ಸೇವೆ ಮಾಡಿರುವ ನನ್ನನ್ನು ಉಳಿಸಿಕೊಳ್ಳುವುದು ಬಿಡುವುದು ನಿಮ್ಮ ಕೈಯಲ್ಲಿದೆ ಯೋಚಿಸಿ ನಿರ್ದಾರ ತೆಗೆದುಕೊಳ್ಳಿ, ಕ್ಷೇತ್ರವು ಅಭಿವೃದ್ದಿ ಯಲ್ಲಿ 30 ವರ್ಷಗಳಷ್ಟು ಹಿಂದೆ ಬಿದ್ದದ್ದು, ಸರ್ಕಾರಿ ಶಾಲೆಗಳು, ಆಸ್ಪತ್ರೆಗಳಲ್ಲಿ ಉತ್ತಮ ಶಿಕ್ಷಣ ಹಾಗು ಆರೋಗ್ಯ ಸಿಗುವುದಾದರು ಯಾವಾಗ? ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಬಡವರ ಹಾಗು ರೈತರ ಕೆಲಸಗಳು ಸಕಾಲಕ್ಕೆ ಆಗಿವಿಯೇ ಎಂದು ಪ್ರಶ್ನಿಸಿದರು. ಶಾಸಕರಿಗೆ ಇಚ್ಛಾಶಕ್ತಿ ಇಲ್ಲದ ಕಾರಣ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ, ಅಧಿಕಾರ ಇಲ್ಲದಿದ್ದರೂ ನಿಮ್ಮ ಸೇವೆ ಮಾಡುವ ಹಾಗು ಅಭಿವೃದ್ಧಿ ಬೆಂಬಲಿಸುವ ನನಗೆ ಮತ ಕೊಡಿ ಎಂದು ಮಾತನಾಡುತ್ತಾ ಭಾವೋದ್ವೇಗಕ್ಕೆ ಒಳಗಾದರು. ಈ ಸಂದರ್ಭದಲ್ಲಿ ಗ್ರಾ ಪಂ ಸದಸ್ಯ ಬೆಳ್ಳೂಟಿ ಸಂತೋಷ್, ಅಶ್ವಥ್ ನಾರಾಯಣರೆಡ್ಡಿ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ಇಂದು ಕೇಂದ್ರ ಗ್ರಹ ಸಚಿವ ಅಮಿತ್ ಷಾ (Minister Amit Shah) ಭೇಟಿ ನೀಡಿ ರೋಡ್ ಶೋ ನಡೆಸಲಿದ್ದಾರೆ ರೋಡ್ ಶೋ ಶಿವಪ್ಪ ನಾಯಕ ವೃತ್ತದಿಂದ ಪ್ರಾರಂಭವಾಗಿ ನೆಹರು ರಸ್ತೆ, ಗೋಪಿ ವೃತ್ತ ಸಾಗಿ ಲಕ್ಷ್ಮೀ ಟಾಕೀಸ್ ವೃತ್ತದಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಮೂರರಿಂದ ಸಂಜೆ 7.30 ರವರೆಗೆ ಬಿಹೆಚ್ ರಸ್ತೆಯ ಕರ್ನಾಟಕ ಸಂಘ ಶಿವಪ್ಪ ನಾಯಕ ವೃತ್ತ, ಅಮೀರ್ ಅಹ್ಮದ್ ವೃತ್ತ ಗೋಪಿ ವೃತ್ತ, ಲಕ್ಷ್ಮಿ ಟಾಕೀಸ್ ವರೆಗೆ ಜೀರೋ ಟ್ರಾಫಿಕ್ ಆಗಿ ಘೋಷಿಸಲಾಗಿದೆ .ಈ ರಸ್ತೆಯಲ್ಲಿ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಸುಗಮ ಸಂಚಾರದ ದೃಷ್ಟಿಯಿಂದ ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸ್ ಇಲಾಖೆ ಕೋರಿದೆ. ರೋಡ್ ಶೋನಲ್ಲಿ ಭಾಗವಿಸುವ ಸಾರ್ವಜನಿಕರಿಗೆ ಫ್ರೀಡಂ ಪಾರ್ಕ್ ಮೈದಾನ, ಎನ್ಇಎಸ್ ಮೈದಾನ ಮತ್ತು ಸೈನ್ಸ್ ಕಾಲೇಜು ಮೈದಾನಗಳಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ
ತುಮಕೂರು: ತಿಪಟೂರು ಕ್ಷೇತ್ರದ ಶಾಸಕರೂ ಆಗಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಅವರು ಪಕ್ಕಾ ಆರ್ಎಸ್ಎಸ್. ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ಇವರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ತಿಪಟೂರು ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಇತಿಹಾಸ ತಿರುಚುವುದು, ಸಮಾಜ ಹೊಡೆಯುವುದು, ಒಂದು ಧರ್ಮದ ಮೇಲೆ ಇನ್ನೊಂದು ಧರ್ಮ ಎತ್ತಿಕಟ್ಟುವುದು ಬಿಟ್ಟರೆ ಬೇರೆ ಏನ್ ಕೆಲಸ ಇಲ್ಲ. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಕ್ಕಳಿಗೆ ನೈಜ ಚರಿತ್ರೆಯನ್ನ ತಿಳಿಸಬೇಕು. ಇತಿಹಾಸ ಮರೆಯುವವರು ಮುಂದೆ ಬರಲ್ಲ ಅಂತಾ ಅಂಬೇಡ್ಕರ್ ಹೇಳಿದ್ದರು. ಈ ಮನುಷ್ಯ ನಾಗೇಶ್ ಇದ್ದಾನಲ್ಲಾ ಇತಿಹಾಸವನ್ನೇ ತಿರುಚಿಬಿಡ್ತಾರೆ. ಇತಿಹಾಸ ತಿರುಚಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಕೆಲಸ ಮಾಡಿದ ನೀಚ ವಿದ್ಯಾಮಂತ್ರಿ ನಾಗೇಶ್. ಇವರು ಕರ್ನಾಟಕದ ಅಭಿವೃದ್ಧಿ ಮಾಡಲು ಸಾಧ್ಯನಾ? ಇಂತವರು ಸೋಲೇಬೇಕು. ಯಾವ ಕಾರಣಕ್ಕೂ ಗೆಲ್ಲಬಾರದು ಎಂದರು. ಕೊಬ್ಬರಿ ಬೆಲೆ ಬಿದ್ದೋಯ್ತು, ನಾನು ಮುಖ್ಯಮಂತ್ರಿ ಆಗಿದ್ದಾಗ ಕೊಬ್ಬರಿ ಬೆಲೆ…
ಶಿವಮೊಗ್ಗ: ನಗರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) , ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಯಿಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಕರ್ನಾಟಕಕ್ಕೆ ಏನಾದರೂ ದೊಡ್ಡ ಕಾರ್ಖಾನೆ ಮಾಡಿಕೊಟ್ಟಿದ್ದೀರಾ? ದೊಡ್ಡ ಹೂಡಿಕೆ ಏನಾದರೂ ಮಾಡಿದ್ದೀರಾ? ಏನು ಮಾಡಿದ್ದರೂ ಕೂಡಾ ಮೈಸೂರು ಮಹಾರಾಜರ ಕಾಲದಲ್ಲಿ, ಜವಹರ್ ಲಾಲ್ ನೆಹರು ಕಾಲದಲ್ಲಿ ಆಗಿರುವುದು ಎಂದರು. ಪ್ರತಿಯೊಬ್ಬರಿಗೆ 10 ಕೆಜಿ ಸಣ್ಣ ಕ್ಕಿ ಕೊಡುತ್ತೇವೆ, 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ, ಉಚಿತ ಬಸ್ ಪಾಸ್ ಕೊಡುತ್ತೇವೆ, ಇದೆಲ್ಲಾ ನಮ್ಮ ಗ್ಯಾರೆಂಟಿ ಯೋಜನೆ. ನಾವು ಏನು ಹೇಳುತ್ತೇವೋ ಅದನ್ನು ಮಾಡುತ್ತೇವೆ ಎಂದರು.