ನಟ ಅನೀಶ್ ತೇಜೇಶ್ವರ್ ನಟನೆಯ ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದ ಫಸ್ಟ್ ಲುಕ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾಗೆ ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ.
Author: Prajatv Kannada
ಬೆಂಗಳೂರು: ಬೆಂಗಳೂರು ಹೆಸರು ಕೆಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಯಂಡಹಳ್ಳಿ ವಾರ್ಡ್‍ನ ಪಂತರಪಾಳ್ಯಯಲ್ಲಿ ನಿರ್ಮಿಸಿರುವ ಡಾ. ಪುನೀತ್ ರಾಜ್‍ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಅಭಿವೃದ್ಧಿಪಡಿಸಲಾಗಿರುವ ನಾಯಂಡಹಳ್ಳಿ ಕೆರೆ ಲೋಕಾರ್ಪಣೆಗೊಳಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು. ಬೆಂಗಳೂರು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಉಳಿದ ರಾಜ್ಯಗಳ ನಗರಗಳಿಂತ ವೇಗವಾಗಿ ಅಭಿವೃದ್ಧಿಯಾಗಿದೆ. ಪ್ರತಿ ದಿನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸಾವಿರ ವಿಜ್ಞಾನಿಗಳು ಬರುತ್ತಾರೆ ಹೋಗುತ್ತಾರೆ. ಹಾಗೇ ಪ್ರತಿ ದಿನ 5000 ವಾಹನಗಳು ರಸ್ತೆಗಿಳಿಯುತ್ತವೆ. ಸುಮಾರು 400 ಆರ್ ಆಂಡ್ ಡಿ ಕೇಂದ್ರಗಳಿವೆ. ಸೇಫ್ ಸಿಟಿ ಯೋಜನೆ ಅಡಿಯಲ್ಲಿ 7000 ಸಿಸಿ ಕ್ಯಾಮರಾಗಳನ್ನು ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕ್ಯಾಮರಾ ಅಳವಡಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಹೆಣ್ಣು ಮಕ್ಕಳು ಕೆಲಸ ಮಾಡಲು ಅನುಮತಿ ನೀಡಲಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಅಭಿವೃದ್ಧಿಗೊಂಡಿದೆ. ಕೆಂಪೇಗೌಡರು ಕಟ್ಟಿರುವ ಬೆಂಗಳೂರು ಹೆಸರು ಉಳಿಸುವುದು ನಮ್ಮ ಕರ್ತವ್ಯ. ರಾಜ್ಯಕ್ಕೆ ಅತಿ ಹೆಚ್ಚು ಆದಾಯ…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಇದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ ದಿನ. ನಿಮ್ಮ ಕುಟುಂಬದ ಸದಸ್ಯನಾಗಿ ನಾನು ಇಲ್ಲಿ ನಿಂತಿದ್ದೇನೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ನೀವು ದೇಶ ಹಾಗೂ ಜನ ಸೇವಕರು. ಮಧ್ಯಮವರ್ಗ ಹಾಗೂ ಜನ ಸಾಮಾನ್ಯರ ಸಾರಥಿಗಳು. ಇಡೀ ಪ್ರಪಂಚದಲ್ಲಿ ಈ ವರ್ಗಕ್ಕೆ ಜಾತಿ, ಧರ್ಮದ ಬೇಧವಿಲ್ಲ. ಜನ ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡಿಕೊಂಡು ಬಂದಿದ್ದೀರಿ. ಒಬ್ಬ ವ್ಯಕ್ತಿ ಸಾಧನೆಗೆ ನೀವು ಸಂಪರ್ಕದ ವ್ಯವಸ್ಥೆಯಾಗಿದ್ದೀರಿ. ಜನರ ನಂಬಿಕೆ ಗಳಿಸಿದ್ದೀರಿ. ನಿಮಗೆ ಕೋಟಿ ಧನ್ಯವಾದಗಳು ಎಂದರು. ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರಿಗೆ ಸಹಾಯ ಮಾಡಲು ಕಾಂಗ್ರೆಸ್ ಪಕ್ಷ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ.…
ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಮೂವರ ನಡುವೆ ಜಗಳ ಶುರುವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಉಪ್ಪಾರಪೇಟೆಯಲ್ಲಿ ನಡೆದಿದೆ. ಕಲಬುರಗಿ ಮೂಲದ ಮಲ್ಲಿನಾಥ್ ಬಿರಾದರ್ (33), ಗಣೇಶ್ ಹಾಗೂ ಮತ್ತೋರ್ವ ಮೂವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ಪ್ರತಿದಿನ ಬೆಂಗಳೂರಿನ ಬೇರೆ ಬೇರೆ ಕಡೆ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಉಪ್ಪಾರಪೇಟೆಯ ಭಾಗ್ಯ ವಿನಾಯಕ ದೇವಸ್ಥಾನದ ಪಕ್ಕದಲ್ಲಿ ಬಂದು ಮೂವರು ಕೂತಿದ್ದಾರೆ. ಹೀಗೆ ಕುಳಿತಿದ್ದವರ ಮಧ್ಯೆ ಸಿಗರೇಟ್ ವಿಚಾರಕ್ಕೆ ಕಿರಿಕ್ ಆಗಿದೆ. ನೋಡ ನೋಡ್ತಿದ್ದಂತೆ ಆರೋಪಿ ಗಣೇಶ್, ಮಲ್ಲಿನಾಥ್ ಬಿರಾದರ್ ಮತ್ತು ಮತ್ತೋರ್ವನ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಣೇಶ್‌ಗೂ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರಲ್ಲಿ ಮಲ್ಲಿನಾಥ್ ಬಿರಾದರ್ ಸಾವನ್ನಪ್ಪಿದ್ದಾನೆ. ಮತ್ತೋರ್ವನ ಮರ್ಮಾಂಗಕ್ಕೆ ಚಾಕು ಇರಿತವಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಆರೋಪಿ ಗಣೇಶ್‌ಗೂ ಗಾಯಗಳಾಗಿವೆ. ಮೇಲ್ನೋಟಕ್ಕೆ ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆ ಎನ್ನಲಾಗುತ್ತಿದೆ. ಸದ್ಯ ಯಾರು ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ನಿಖರ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ HAL ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾ ಅವರನ್ನ ಸ್ವಾಗತಿಸಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಕೇಂದ್ರ ನಾಯಕರು ಪದೇ ಪದೆ ಭೇಟಿ ನೀಡುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರು ನಗರಕ್ಕೆ ಆಗಮಿಸಿದ್ದಾರೆ.ಅಮಿತ್ ಶಾ ಅವರು ಬೆಂಗಳೂರಿನ ಕಮ್ಮಘಟ್ಟದಲ್ಲಿ ಇವತ್ತು ಶೇಖರ್ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮಾರ್ಗದಲ್ಲಿ ಅವರು ಸಂಚರಿಸುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಸಾರ್ವಜನಿಕ ವಾಹನ ಸಂಚಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇಂದು ಮತ್ತು ನಾಳೆ ಅಮಿತ್ ಶಾ ಕರ್ನಾಟಕದಲ್ಲಿ ಇರಲಿದ್ದಾರೆ. ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.
ಯಗಾದಿ ಹಬ್ಬಕ್ಕೆ ಪ್ರಯುಕ್ತ ಕಿರಣ್ ರಾಜ್ ನಟನೆಯ ರಾನಿ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ನಲ್ಲಿ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸಿರುವ, ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ ಪ್ರಶಂಸೆ ಪಡೆದುಕೊಂಡಿದ್ದರು. ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್ ಮಾಡಿದಾರಂತೆ, ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿದೆ. ‘ರಾನಿ’ ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದ್ದು, ಈಗಾಗಲೇ 5 ಸೆಟ್ ಗಳಲ್ಲಿ ಚಿತ್ರಿಕರಣ ಮುಗಿದಿದೆ. ಈಗಾಗಲೇ ರಾನಿ ಸಿನಿಮಾದ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ…
14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (ಮಾ.23) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದು, ಈ ವೇಳೆ ಬೊಮ್ಮಾಯಿ ಕನ್ನಡದ ಕೆಜಿಎಫ್, ಕಾಂತಾರ, ಆಸ್ಕರ್ ಗೆದ್ದಿರುವ RRR ಚಿತ್ರವನ್ನ ಹಾಡಿ ಹೊಗಳಿದ್ದಾರೆ. ಇಡೀ ಜಗತ್ತಿನಲ್ಲಿ ಚಿತ್ರೋತ್ಸವ ಅತ್ಯಂತ ಕಡಿಮೆ ನಗರದಲ್ಲಿ ನಡೆಯುತ್ತದೆ. ಅದರಲ್ಲಿ ಬೆಂಗಳೂರು ಒಂದಾಗಿರೋದು ಹೆಮ್ಮೆಯ ವಿಚಾರವಾಗಿದ್ದು, ಮುಂಬರುವ ದಿನಗಳಲ್ಲಿ ಬೆಂಗಳೂರು ಫೈನಾನ್ಸ್ ಕ್ಯಾಪಿಟಲ್ ಆಗಲಿದೆ. ಮಾತಿಲ್ಲದ ಸಿನಿಮಾದಿಂದ ಹಿಡಿದು ಅತ್ಯಂತ ಅದ್ಬುತ ತಂತ್ರಜ್ಞಾನ ಬಳಕೆ ಮಾಡಿದ ಸಿನಿಮಾ ನಮ್ಮಲ್ಲಿದೆ. ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ ಎಂದರು. ಸಿನಿಮಾಗೆ ಸಾಕಷ್ಟು ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ…
ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ನಟ ಚೇತನ್ ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶಿವಕುಮಾರ್ ಎಂಬುವವರು ನೀಡಿದ್ದ ದೂರಿನ ಮೇಲೆ ಚೇತನ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ. ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ಚೇತನ್ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಚೇತನ್ ಅವರು ಉರಿಗೌಡ, ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು…
ಕೀವ್: ಕೀವ್‌ನ ಶಾಲೆಯೊಂದಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಕೀವ್ ಮೇಲೆ ರಷ್ಯಾ ಮಂಗಳವಾರ ರಾತ್ರಿಯಿಡೀ ದಾಳಿ ನಡೆಸಿದ್ದು, ಈ ವೇಳೆ ಶಾಲೆಗೆ ಡ್ರೋನ್ ಅಪ್ಪಳಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನೂ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಾಜ್ಯ ತುರ್ತು ಸೇವಾ ಘಟಕ ತಿಳಿಸಿದೆ. ಡ್ರೋನ್ ದಾಳಿಯಲ್ಲಿ ವಿದ್ಯಾರ್ಥಿಗಳಿದ್ದ ಎರಡು ಅಂತಸ್ತಿನ ಕಟ್ಟಡ ಹಾಗೂ ಅಧ್ಯಯನದ ಕಟ್ಟಡವೂ ಸಹ ನೆಲಸಮಗೊಂಡಿದ್ದು, ಡ್ರೋನ್ ಅಪ್ಪಳಿಸಿದಾಗ ಶಾಲೆಯ 300 ಚದರ ಮೀಟರ್‌ವರೆಗೂ ಬೆಂಕಿ ಆವರಿಸಿತು. ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲೂ ತೊಡಗಿಕೊಂಡಿದ್ದಾರೆ. ರಷ್ಯಾ ನಿಯಮಿತವಾಗಿ ಉಕ್ರೇನ್ ವಿರುದ್ಧ ಕ್ಷಿಪಣಿ, ಫಿರಂಗಿಗಳು ಮತ್ತು ಡ್ರೋನ್‌ಗಳಿಂದ ದಾಳಿ ಮಾಡುತ್ತಿದೆ. ಇದರಿಂದ ಜನತೆ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಪರದಾಡುವಂತಾಗಿದೆ.
ಚಾಮರಾಜನಗರ: ಋತುಮಾನದ ಅವಧಿಯಲ್ಲಿ ಹೆಣ್ಣು ಮಕ್ಕಳು ಮೈತ್ರಿ ಮುಟ್ಟಿನ ಕಪ್ ಬಳಕೆ ಮಾಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ರಾಷ್ಟೀಯ ಬಾಲ ಸ್ವಾಸ್ಥ್ಯ, ರಾಷ್ಟೀಯ ಕಿಶೋರ ಸ್ವಾಸ್ಥ್ಯ, ಶುಚಿ ಕರ್ನಾಟಕ ಉಪ ನಿರ್ದೇಶಕಿ ಡಾ.ವೀಣಾ ಸಲಹೆ ನೀಡಿದರು. ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮೈತ್ರಿ ಮುಟ್ಟಿನ ಕಪ್ ಬಳಕೆಯ ಅರಿವು ಹಾಗೂ ವಿತರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಋತುಮಾನದ ಕಪ್ ಹೆಣ್ಣು ಮಕ್ಕಳ ಆರೋಗ್ಯ ಹಾಗೂ ಪರಿಸರದ ಮೇಲೆ ಒಳ್ಳೆಯ ಪರಿಣಾಮ ಬೀರಲಿದೆ. ಋತುಮಾನದ ಕಪ್‌ಗಳನ್ನು ೧೦ ವರ್ಷಗಳ ಕಾಲ ಮರುಬಳಕೆ ಮಾಡಬಹುದಾಗಿದೆ. ಕಡಿಮೆ ವೆಚ್ಚದಲ್ಲಿ ಆರೋಗ್ಯಯುತವಾದ ಕಪ್‌ಗಳನ್ನು ಬಳಕೆ ಮಾಡುವುದು ಒಳಿತು ಎಂದರು. ಸ್ಯಾನಿಟರಿ ಪ್ಯಾಡ್‌ಗಳಿಗೆ ಬಳಸಿರುವ ರಾಸಾಯನಿಕ ಅಂಶಗಳು ಆರೋಗ್ಯಕ್ಕೆ ಹಾನಿಕಾರವಾಗಿದೆ. ಋತುಮಾನದ ಕಪ್‌ಗಳು ಮಣ್ಣಿನಲ್ಲಿ ಕೊಳೆಯುವ ಗುಣ ಹೊಂದಿರುವುದರಿಂದ ಪರಿಸರಕ್ಕೆ ಹಾನಿಯಾಗುವುದಿಲ್ಲ. ಒಂದು ವರ್ಷದಲ್ಲಿ ಸರಿ ಸುಮಾರು ೧.೫ ಬಿಲಿಯನ್ ಸ್ಯಾನಿಟರಿ ಪ್ಯಾಡ್‌ಗಳು ಪರಿಸರದಲ್ಲಿ ಬೆರೆತು ಹೋಗುತ್ತಿವೆ. ಇದರಿಂದ…