ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, RBI ಹೆಸರಿನಲ್ಲಿ ಜನರನ್ನು ವಂಚನೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳಾದ ಅಶೋಕ್ ಕುಮಾರ್, ರಮೇಶ್ ಕುಮಾರ್, ಮಂಜುನಾಥ್, ರಾಜ್ ಕುಮಾರ್, ಗಂಗರಾಜು, ಕುಮಾರೇಶ್, ಮೂರ್ತಿ ನಾಯಕ್, ಸಿದ್ದರಾಜು ನಾಯಕ್ ಬಂಧಿತರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲು ಮಾಡಲಾಗಿದೆ. RBIನ ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡು ಜನರಿಂದ ಸಾವಿರಾರು ಕೋಟಿ ರೂ. ವಂಚನೆ ಮಾಡಿದ್ದಾರೆ. ವಿದೇಶದಿಂದ 75 ಸಾವಿರ ಕೋಟಿ ರೂ. ಹಣ ಬಂದಿದೆ. ಅದನ್ನು ಡ್ರಾ ಮಾಡಿಕೊಳ್ಳಲು ಸುಮಾರು 150 ಕೋಟಿ ರೂ. ಹಣ ಬೇಕಾಗಿದೆ ಎಂದು ನಂಬಿಸಲಾಗಿದೆ. ಬಳಿಕ ಹಣ ವಂಚನೆ ಮಾಡಲು ಪ್ಲಾನ್ ರೂಪಿಸಿದ್ದಾರೆ. ಈ ಕಥೆ ಪ್ರಕಾರ ಬಾಂಬೆ ಮತ್ತು ದೆಹಲಿಯ ಆರ್ಬಿಐ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಆರ್ಬಿಐನಲ್ಲಿ ಫೋಟೋ ತೆಗೆಸಿ ಹಣ ಅಕೌಂಟ್ನಲ್ಲಿ ಇರುವ ರೀತಿ ಬಿಂಬಿಸಿದ್ದಾರೆ. ನಕಲಿ…
Author: Prajatv Kannada
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ರಾಜ್ಯದಾದ್ಯಂತ ನಾಳೆ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಗಳೂರಿನ ಹೈಕೋರ್ಟ್ ಬ್ರೇಕ್ ನೀಡಿದೆ. ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠದ ಮುಂದೆ, ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ಅವರು, ಮಾರ್ಚ್ 20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಭೆ ನಡೆಸಿದ್ದರು. ಆದ್ರೇ ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದರು. ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿದರೇ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ವಿದ್ಯಾರ್ಥಿಗಳು, ಪ್ರಯಾಣಿಕರು ಸಂಕಷ್ಟ ಎದುರಿಸುವಂತೆ ಆಗಿದೆ ಎಂಬುದಾಗಿ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಈ ಹಿನ್ನಲೆಯಲ್ಲಿ ಹೈಕೋರ್ಟ್ 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಈ ಮೂಲಕ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಿದೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆ ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿವೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿದ್ದರು. ಆದರೆ ಸಮಾನ ಮನಸ್ಕರರ ವೇದಿಕೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ. ಈ ಹಿನ್ನೆಲೆ ನಾಳೆ ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ಬೆಂಗಳೂರು: ನಮ್ಮ ಹುಡುಗರಿಗೆ ತೊಂದರೆ ಕೊಟ್ರೆ ನಿನ್ನ ಮನೆಗೆ ನುಗ್ಗಿ ಹೊಡಿತಿನಿ ಎಂದು ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗೆ ಮಾಜಿ ಕಾರ್ಪೊರೇಟರ್ ಕಂ ರೌಡಿ ಶೀಟರ್ ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಮ್ಮವರಿಗೆ ತೊಂದರೆ ಕೊಟ್ರೆ ಮನೆಗೆ ನುಗ್ಗಿ ಹೊಡೀತಿವಿ. ನೀನೆಷ್ಟೆ ಪ್ರಭಾವಿಯಾದ್ರೂ ಬಿಡಲ್ಲ ಎಂದು ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಜೆ ಡಿಎಸ್ ಮುಖಂಡ ಇಮ್ರಾನ್ ಪಾಷಾ ಅವರು, ಕಾಂಗ್ರೆಸ್ ನಾಯಕ ನಾರಾಯಣಸ್ವಾಮಿಗೆ ಫುಲ್ ಅವಾಜ್ ಹಾಕಿದ್ದಾನೆ. ಆವಾಜ್ ಹಾಕಿರುವ ವಿಡೀಯೋ ಇದೀಗ ಲಭ್ಯವಾಗಿದ್ದು, ಜೆ ಡಿ ಎಸ್ ಸಂಭಾವ್ಯ ಅಭ್ಯರ್ಥಿ ಆಗಿರುವ ಇಮ್ರಾನ್ ಪಾಷಾ ಅವರು, ಉರ್ದುವಿನಲ್ಲಿ ಅವಾಜ್ ಹಾಕಿದ್ದಾನೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಬೇರೆಯವರು ಮಾತನಾಡುವ ಸಂಧರ್ಭದಲ್ಲಿ ಮೈಕ್ ಕಸಿದು ಇಮ್ರಾನ್ ಪಾಷಾ ಅವಾಜ್ ಹಾಕಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಹಾಗೂ ಹಠಯೋಗಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ರಥೋತ್ಸವಕ್ಕೆ, ಹೆಲಿಕ್ಯಾಪ್ಟರ್ ದಿಂದ ಪುಷ್ಪಾರ್ಚನೆ ಮಾಡುವ ಮೂಲಕ, ಅದ್ದೂರಿಯಾಗಿ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಸುಮಾರು 5 ಸಾವಿರ ಅಡಿ ಎತ್ತರದಲ್ಲಿನ ಹೆಲಿಕ್ಯಾಪ್ಟರ್ ಮೂಲಕ, ಶ್ರೀ ಸಿದ್ಧೇಶ್ವರ ರಥೋತ್ಸವ ವೇಳೆ ಪುಷ್ಪಾರ್ಚಣೆ ಮಾಡಿದ್ದು ಜನಮನ ಸೆಳೆಯಿತು. ಮೊದಲು ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮುಖಾಂತರ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೆರವಣಿಗೆಯುದ್ದಕ್ಕೂ ವೀರಗಾಸೆ ನೃತ್ಯ, ಕಹಳೆ, ಮಂಗಳವಾದ್ಯಗಳು ಮೊಳಗಿದವು. ಇನ್ನು ರಥಕ್ಕೆ ಹಾಗೂ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಬಂದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿ ರಥಕ್ಕೆ ಎಸೆದು ಭಕ್ತಿ ಭಾವ ಮೆರೆದರು. ರಥ ಎಳೆಯುತ್ತಿದ್ದಂತೆ ಭಕ್ತರ ಭಾವಾವೇಷ ಮುಗಿಲು ಮುಟ್ಟಿತ್ತು. ಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ಮೂಲಿಮಠ, ಸೌದತ್ತಿ ಹಾಗೂ ಶ್ರೀ ಸಿದ್ದಯ್ಯನವರು ಹಿರೇಮಠ, ಶ್ರೀ ಸಿದ್ದನಗೌಡರು ಕಾಮ್ ಜೇನು, ಶ್ರೀ ಸಿದ್ದೇಶ್ವರ ಟ್ರಸ್ಟ್ ಕಮಿಟಿ ಅಧ್ಯಕ್ಷರಾದ ರಾಜಣ್ಣ ಕೊರವಿ, ಅಡಿವೆಪ್ಪ ಮೆಣಸಿನಕಾಯಿ, ಹಾಗೂ ಗ್ರಾಮದ…
ಚಿತ್ರದುರ್ಗ: ಕ್ರಿಕೆಟ್ ಮತ್ತು ಮೊಬೈಲ್ ಗೀಳಿಗೆ ಬಿದ್ದಿರುವ ಈ ಸಮಯದಲ್ಲಿ ಗ್ರಾಮೀಣ ಕ್ರೀಡೆ ಬಗ್ಗೆ ಜನರ ಆಸಕ್ತಿ ಕಡಿಮೆಯಾಗಿದೆ.ಇದಕ್ಕೆ ವಿರುದ್ದ ಎನ್ನುವಂತೆ ಚಿತ್ರದುರ್ಗ ತಾಲೂಕಿನ ಹುಣಿಸೆಕಟ್ಟೆ ಗ್ರಾಮದಲ್ಲಿ ಜೊಡಿ ಎತ್ತಿನ ಗಾಡಿಗಳಿಗೆ ಕಟ್ಟಿ ಓಡಿಸುವ ಓಟವನ್ನು ಏರ್ಪಡಿಸಲಾಗಿತ್ತು. ತಾಲೂಕು ಮಟ್ಟದ ಈ ಪಂದ್ಯಾವಳಿಯಲ್ಲಿ ಸುತ್ತ ಮುತ್ತಲಿನ 10 ಹಳ್ಳಿಯ ಸುಮಾರು 30ಕ್ಕೂ ಹೆಚ್ಚು ಜೋಡಿ ರಾಸುಗಳು ಈ ಪಂದ್ಯದಲ್ಲಿ ಭಾಗವಹಿಸಿದವು.ಕಾಂತರಾಜು ಎಂಬುವರು ಈ ಯೋಜನೆ ಮಾಡಿದ್ದರು. ಹೋರಿಗಳ ಈ ಓಟವನ್ನು ನೋಡಲು ಸುತ್ತಮುತ್ತಲಿನ ಸಾವಿರಾರು ಜನರು ಸೇರಿದ್ದರು.
ನವದೆಹಲಿ: ಅದಾನಿ ಗ್ರೂಪ್‍ನ (Adani group) ವರದಿಯ ನಂತರ ಅಮೆರಿಕ (America) ಮೂಲದ ಹಿಂಡೆನ್‍ಬರ್ಗ್ ರಿಸರ್ಚ್ ಸಂಸ್ಥೆ (Hindenburg) ಗುರುವಾರ ಮತ್ತೊಂದು ಹೊಸ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತನ್ನ ಟ್ವೀಟ್‍ನಲ್ಲಿ ಶೀಘ್ರದಲ್ಲೇ ಹೊಸ ವರದಿ ಬಿಡುಗಡೆ ಮಾಡುವುದಾಗಿ ಸಂಸ್ಥೆ ಪ್ರಕಟಿಸಿದೆ. ಜನವರಿಯಲ್ಲಿ ಹಿಂಡೆನ್‍ಬರ್ಗ್ ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ ಸಮೂಹದ ಕಂಪನಿಯ ಷೇರು ಬೆಲೆಯನ್ನು ಏರಿಕೆ ಮಾಡಿದ ಎಂದು ಆರೋಪಿಸಿ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಷೇರಿನ ಮೌಲ್ಯ ಹೆಚ್ಚಿಸಲು ಹಲವಾರು ಶೆಲ್ ಕಂಪನಿಗಳನ್ನು (shell companies) ಬಳಸಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು. ವರದಿಯ ಬೆನ್ನಲ್ಲೆ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದವು. ಈ ಬಗ್ಗೆ ಅದಾನಿ ಸಮೂಹ ಸಂಸ್ಥೆಗಳು ವರದಿಯ ಅಂಶಗಳನ್ನು ದುರುದ್ದೇಶಪೂರಿತ ಮತ್ತು ಆಧಾರರಹಿತ ಎಂದಿತ್ತು. ಅಲ್ಲದೇ ಭಾರತದ (India) ಮೇಲಿನ ದಾಳಿ ಇದಾಗಿದೆ ಎಂದು ತಿರುಗೇಟು ನೀಡಿತ್ತು
ಹಾಸನ: ಯಾವುದೇ ಬೌಲಿಂಗ್ ಬಂದರೂ ಉತ್ತಮ ಸ್ಕೋರ್ ಕೊಡುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನ ತಿರುಗಿ ನೋಡುವಂತೆ ಫಲಿತಾಂಶ ಕೊಡಲು ಜನ ತಯಾರಾಗಿದ್ದಾರೆ ಎಂದು ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರ ಜೆಡಿಎಸ್ ಗೆಲ್ಲುತ್ತದೆ ಎಂಬ ಹೆಚ್.ಡಿ.ರೇವಣ್ಣನವರ ಹೇಳಿಕೆಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ಏಳಕ್ಕೆ ಏಳು ಕ್ಷೇತ್ರ ಗೆಲ್ಲಲೇಬೇಕು. ಆದರೆ ಜೆಡಿಎಸ್ ಎಷ್ಟು? ಬಿಜೆಪಿ ಎಷ್ಟು? ಕಾಂಗ್ರೆಸ್ ಎಷ್ಟು ಎಂದು ಫಲಿತಾಂಶದ ದಿನ ಗೊತ್ತಾಗುತ್ತದೆ. ವಿಪಕ್ಷಗಳು ಹಾಸನ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮಗೊಳಿಸಲಿಲ್ಲ. ನಮ್ಮ ಟಿಕೆಟ್ ಕೂಡ ರಾಷ್ಟ್ರೀಯ ನಾಯಕರು ಇನ್ನೂ ಘೋಷಣೆ ಮಾಡಿಲ್ಲ. ಎಲ್ಲದಕ್ಕೂ ಕಾಯುತ್ತಿದ್ದೇವೆ ಎಂದರು ಅಖಾಡದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂದು ನಿರ್ಧಾರವಾದ ಮೇಲೆ ಕಾವೇರುತ್ತದೆ. ನಂತರ ಸ್ಪೀಡ್ ಬೌಲರ್‌ಗೆ ಯಾವರೀತಿಯಾಗಿ ಫುಟ್ ಹಾಕಬೇಕು. ಸ್ಪಿನ್, ಮೀಡಿಯಂ ಪೇಸರ್ ಆದರೆ ಹೇಗೆ ಆಡಬೇಕು ಎಂದು ವರ್ಕೌಟ್ ಮಾಡಿದ್ದೇನೆ. ಯಾವ ಬೌಲರ್ ಬರುತ್ತಾರೆ ಎಂದು ನೋಡಿ, ಪವರ್ ಪ್ಲೇ ಹೇಗೆ ಆಡಬೇಕು,…
ರಾಮನಗರ: ಮನೆ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಮಾಗಡಿ (Magadi) ತಾಲೂಕಿನ ಸೋಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ನಿವಾಸಿ ಹನುಮಂತರಾಯಪ್ಪ ಎಂಬುವವರು ಯುಗಾದಿ ಹಬ್ಬಕ್ಕೆ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಯಾರು ಇಲ್ಲದೇ ಇರುವುದನ್ನು ಗಮನಿಸಿ, ರಾತ್ರಿ ವೇಳೆ ಬಾಗಿಲು ಒಡೆದು ಬೀರುವಿನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳರು ಕದ್ದಿದ್ದಾರೆ. ಈ ಸಂಬಂಧ ಕುದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಘಟನೆ ಕೋಲಾರದ ಬೆಳಮಾರನಹಳ್ಳಿಯಲ್ಲಿ ನಡೆದಿದೆ. ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಇಂಜಿನಿಯರ್(Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ. ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ…