Author: Prajatv Kannada

ಬಳ್ಳಾರಿ:- ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖವಾಡ ಒನ್ನೊಂದೇ ಹೊರ ಬರುತ್ತಿದ್ದು, ಇವಳ ಕಹಾನಿ ಕೇಳಿದವರೇ ದಂಗಾಗಿ ಹೋಗಿದ್ದಾರೆ. ಉಡುಪಿ ನಿವಾಸಿ ತಬುಸುಮ್ ತಾಜ್ ಎಂಬಾಕೆ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ್ದಾರೆ. ಈ ಘಟನೆ ಬಳ್ಳಾರಿಯಲ್ಲಿ ಜರುಗಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡುವ ಈಕೆ ಈ ವರೆಗೆ ಎಂಟು ಮದ್ವೆಯಾಗಿದ್ದಾಳೆ. ಈ ಬಗ್ಗೆ ದಾಖಲೆಗಳು ಸಹ ಸಿಕ್ಕಿವೆ. ಇನ್ನು ದಾಖಲೆಗಳಿಲ್ಲದೇ ಇನ್ನೆಷ್ಟು ಮದುವೆ ಮಾಡಿಕೊಂಡು ವಂಚಿಸಿದ್ದಾಳೋ ಎನ್ನುವ ಅನುಮಾನ ಶುರುವಾಗಿದೆ. ಹೀನಾ ಎಂಟರ್​ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಕೊಡಿಸುತ್ತೇನೆ ಎಂದು ಕಚೇರಿ ಮಾಡಿಕೊಂಡಿದ್ದಳು. 18 ವರ್ಷದಿಂದ ಇದನ್ನೇ ಬ್ಯುಸಿನೆಸ್ ಮಾಡಿಕೊಂಡಿದ್ದಳು. ಅಲ್ಲದೇ ಯು.ಟಿ. ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು. ಅಲ್ಲದೇ 1 ಕೋಟಿ…

Read More

ಉಡುಪಿ:- ಕಾರ್ಕಳ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಮಾಡಿದ್ದಾರೆ. ಈ ವೇಳೆ ಹಲವು ಸಂಗತಿ ಬೆಳಕಿಗೆ ಬಂದಿದೆ. ಯುವತಿಗೆ ನೀಡಲಾಗಿದ್ದ ಡ್ರಗ್ಸ್ ಯಾವುದು ಎಂಬ ಮಾಹಿತಿ ಸಿಕ್ಕಿದೆ. ಪೊಲೀಸ್ ತನಿಖೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಯುವತಿಗೆ ಸಿಂಥೆಟಿಕ್ ಡ್ರಗ್ಸ್​​​ ನೀಡಿ ಅತ್ಯಾಚಾರವೆಸಗಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಆರೋಪಿ ಅಲ್ತಾಫ್ ಕಾರಿನಲ್ಲಿ ಕರೆದೊಯ್ದು ಯುವತಿ ರೇಪ್ ಮಾಡಿದ್ದ. ಯುವತಿಗೆ ಸಿಂಥೆಟಿಕ್ ಡ್ರಗ್ಸ್​ ನೀಡಲಾಗಿತ್ತು. ಆದರೆ ಅಲ್ತಾಫ್​ ಡ್ರಗ್ಸ್ ಬಂದಿದ್ದು ಎಲ್ಲಿಂದ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅಲ್ತಾಫ್ & ಟೀಂ ಬೆಂಗಳೂರಿಗೆ ತೆರಳಿ ವ್ಯಕ್ತಿಯೋರ್ವನಿಂದ ಡ್ರಗ್ಸ್ ಖರೀದಿಸಿದ್ದರು. ಅದೇ ಡ್ರಗ್ಸ್ ಅನ್ನು ಮದ್ಯದಲ್ಲಿ ಬರೆಸಿ ಯುವತಿಗೆ ಕುಡಿಸಿ ಅಲ್ತಾಫ್ ಅತ್ಯಾಚಾರ ಎಸಗಿದ್ದ. ಬಿಜೆಪಿ ಕಾರ್ಯಕರ್ತ ಅಭಯ್ ಮೂಲಕ ಅಲ್ತಾಫ್​ಗೆ ಬೆಂಗಳೂರು ಮೂಲದ ಡ್ರಗ್ಸ್ ಸೇಲ್ ಮಾಡುವ ವ್ಯಕ್ತಿಯೋರ್ವ ಪರಿಚಯವಾಗಿದ್ದ. ಆರೋಪಿ ಅಭಯ್ ತನ್ನ ಜೊತೆ ಅಲ್ತಾಫ್ & ಇತರರನ್ನು ಬೆಂಗಳೂರಿಗೆ ಕರೆದೊಯ್ದು ಡ್ರಗ್ಸ್ ಖರೀದಿಸಿ…

Read More

ಕಾಳಸಂತೆಯಲ್ಲಿ ಲಡ್ಡುಗಳನ್ನು ಮಾರಾಟ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಟಿಟಿಡಿ ಮಹತ್ವದ ತೀರ್ಮಾನ ಕೈಗೊಂಡಿದ https://youtu.be/Qp3t65EyO-Q?si=1XfWBJGhuUSTd75W ಇನ್ಮುಂದೆ ಲಡ್ಡುಗಳನ್ನು ಪಡೆಯಬೇಕೆಂದರೆ ಆಧಾರ್ ಕಾರ್ಡ್​ ಅನ್ನು ಕಡ್ಡಾಯ ಮಾಡಲಾಗಿದೆ. ಟೋಕನ್ ರಹಿತ ಭಕ್ತರಿಗೆ ಲಡ್ಡುಗಳ ಮಾರಾಟಕ್ಕೆ ಆಧಾರ್ ದೃಢೀಕರಣ ಪರಿಚಯಿಸಲಾಗಿದೆ. ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ವೆಂಕಯ್ಯ ಚೌಧರಿ ಮಾತನಾಡಿ, ಲಡ್ಡುಗಳನ್ನು ಕೆಲವು ಮಧ್ಯವರ್ತಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ದೇವಾಲಯಕ್ಕೆ ದಕ್ಕೆಯಾಗುತ್ತಿದೆ. ಅಲ್ಲದೇ ದೂರದ ಊರುಗಳಿಂದ ಬರುವ ವಕ್ತರಿಗೆ ಲಡ್ಡುಗಳು ಕೊರತೆಯಾಗುತ್ತವೆ. ಸಾಮಾನ್ಯ ಭಕ್ತರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್​ ದೃಢೀಕರಣ ಪರಿಚಯಿಸಲಾಗಿದೆ. ಲಡ್ಡು ವಿತರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಇದನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ದರ್ಶನಕ್ಕೆ ಟಿಕೆಟ್​ ತೆಗೆದುಕೊಳ್ಳದೇ 48 ಹಾಗೂ 62ನೇ ಕೌಂಟರ್​​ನಿಂದ ಬರುವ ಭಕ್ತರಿಗೆ ಇದು ಅನ್ವಯ ಆಗಲಿದೆ. ತಮ್ಮ ಆಧಾರ್​ ದೃಢೀಕರಣ ಮಾಡಿ, ಒಬ್ಬ ಭಕ್ತರು 2 ಲಡ್ಡುಗಳನ್ನು ಪಡೆದುಕೊಳ್ಳಬಹುದು. ಹಿಂದಿನಂತೆ ಒಂದು ಲಡ್ಡು ಉಚಿತವಾಗಿ ಪಡೆದು ಹೆಚ್ಚುವರಿ ಲಡ್ಡುಗಳನ್ನು ಹಣ ಕೊಟ್ಟು ಖರೀದಿ ಮಾಡಬಹುದು.…

Read More

ಬೆಂಗಳೂರು/ ದೆಹಲಿ: ಚನ್ನಪಟ್ಟಣ ಉಪ ಚುನಾವಣೆಗೆ ಟಿಕೆಟ್ ಫೈಟ್ ಜೋರಾಗಿದ್ದು, ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಶನಿವಾರ ಭೇಟಿಯಾದರು. https://youtu.be/5S7FBlMyFG8?si=tevYbxlvVQOGlfSN ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಅವರ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು ರಾಷ್ಟ್ರೀಯ ಅಧ್ಯಕ್ಷರ ಭೇಟಿ ಬಳಿಕ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಚನ್ನಪಟ್ಟಣದ ಬಗ್ಗೆ ಹೆಚ್ಚು ಚರ್ಚೆಯಾಗಿದೆ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಹೇಳಿಕೆ ವಿಚಾರವಾಗಿ ಮಾತನಾಡಿ, ಚನ್ನಪಟ್ಟಣಕ್ಕೆ ಹೋಗಿ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಚನ್ನಪಟ್ಟಣ ಜನ ಜಾಣರಿದ್ದಾರೆ. ಮಂಡ್ಯ ವಿಚಾರದಲ್ಲೂ ಅದೇ ರೀತಿಯಲ್ಲಿ ಹೇಳಿದ್ರು. ಕುಮಾರಸ್ವಾಮಿ ಮೂರನೇ ಸ್ಥಾನಕ್ಕೆ ಹೋಗ್ತಾರೆ ಅಂದಿದ್ರು. ಆದರೆ ಕುಮಾರಸ್ವಾಮಿ ಕೇವಲ ಎರಡು ದಿನ ಪ್ರಚಾರಕ್ಕೆ ಹೋಗಿ ಗೆಲುವು…

Read More

ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೋ ಮದುವೆಯಾದ ಖುಷಿಯಲ್ಲಿದ್ದಾರೆ. ಮದುವೆಯಾಗಿ ತಿಂಗಳು ಕಳೆಯೋದ್ರಲ್ಲೇ ಈ ಮುದ್ದಾದ ಜೋಡಿ ಮಂಗಳೂರಿನಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದೆ. ತರುಣ್ ಸುಧೀರ್ ಹಾಗೂ ಸೋನಲ್ ಕೈ ಕೈ ಹಿಡಿದು ಸುತ್ತಾಡುತ್ತಿದ್ದಾರೆ. ಅಂತೆಯೇ ಖ್ಯಾತ ನಿರೂಪಕಿ ಅನುಶ್ರೀ ಅವರ ಯುಟ್ಯೂಬ್ ಚಾನಲ್ ಗೂ ಒಟ್ಟಿಗೆ ಸಂದರ್ಶನ ನೀಡಿದ್ದು ಈ ವೇಳೆ ತಮ್ಮ ಜೀವನದ ಹಲವಾರು ವಿಷಯಗಳನ್ನ ಹಂಚಿಕೊಂಡಿದ್ದಾರೆ. ಸೋನಲ್ ಅವರನ್ನ ಮೊದಲು ನೋಡಿರೋದು ಎಲ್ಲಿ ಅನ್ನೋ ವಿಷಯವನ್ನ ತರುಣ್ ಹೇಳಿಕೊಂಡಿದ್ದಾರೆ. ಚಿಕಣ್ಣನ ಮನೆ ಹುಡುಕಿಕೊಂಡು ಹೋಗಿದ್ದೆ. ಆದರೆ, ಆ ಮನೆಯಲ್ಲಿ ಸೋನಲ್ ಆ್ಯಂಡ್ ಫ್ಯಾಮಿಲಿ ಇತ್ತು. ಆಗ ಅವರೇ ಚಿಕ್ಕಣ್ಣನ ಮನೆ ಹಿಂದೆ ಇದೆ ಅಂತಲೇ ಜೊತೆಗೆದ್ದವರು ಹೇಳಿದ್ದರು ಅಂತಲೂ ತರುಣ್ ಹೇಳಿದ್ದರು. ತರುಣ್ ಸುಧೀರ್ ಮತ್ತು ಸೋನಲ್ ಮದುವೆ ಎರಡು ಕುಟುಂಬಗಳು ಒಪ್ಪಿಗೆಯ ಮೇರೆಗೆ ನಡೆದಿದೆ. ದರ್ಶನ್ ಮಂಗಳೂರಿಗೆ ಹೋದಾಗ ಸೋನಲ್ ತಾಯಿಗೆ ಹೇಳಿದ್ರು. ತರುಣ್ ಸುಧೀರ್ ತುಂಬಾ…

Read More

ಮಂಡ್ಯ   ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು.ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು. ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಹಿರಿಯ…

Read More

ಬಳ್ಳಾರಿ: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ದರ್ಶನ್​ ಅವರು ಈಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ಕಳೆಯುತ್ತಿದ್ದಾರೆ. ಆದ್ರೆ ಇಂದು ದರ್ಶನ್‌ಗೆ ಮಾಂಸದೂಟ ನೀಡಲಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಲ್ಲಿ ಎರಡನೇ ಶುಕ್ರವಾರ ಮತ್ತು ಕೊನೆಯ ಶುಕ್ರವಾರ ಖೈದಿಗಳಿಗೆ ಮಟನ್ ಊಟ ನೀಡಲಾಗುತ್ತದೆ. ಜೊತೆಗೆ ತಿಂಗಳ ಮೊದಲ ಶುಕ್ರವಾರ ಮತ್ತು 3ನೇ ಶುಕ್ರವಾರ ಚಿಕನ್ ನೀಡಲಾಗುತ್ತದೆ. ಅದರಂತೆ ದರ್ಶನ್‌ಗೂ ಕೂಡ ಇಂದು (ಆ.30) ರಾತ್ರಿ 90 ಗ್ರಾಂ ಮಟನ್ ಊಟ ಕೊಡಲಿದ್ದಾರೆ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಆ.29ರ ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್ ವ್ಯಾನ್‌ನಲ್ಲಿ ಬಳ್ಳಾರಿ ಜೈಲಿಗೆ ಕರೆ ತರಲಾಗಿದೆ.

Read More

ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋ ಶೂಟ್‌ ಮಾಡುವಾಗ ಪೊಲೀಸರು ತಡೆದಿದ್ದಾರೆ ಎಂದು ಆಕ್ಷೇಪಿಸಿ ಯುವತಿ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಸಂದೇಶ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜತೆಗೆ, ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ. ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತುಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದರು. ಈ ವಿಚಾರವಾಗಿ ಇನ್​ಸ್ಟಾಗ್ರಾಂನಲ್ಲಿ ಫೋಟೋಶೂಟ್‌ ಮಾಡಿದ ಫೋಟೋ ಸಹಿತ ಮಾಹಿತಿ ನೀಡಿರುವ ಯುವತಿ, ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವ ಹಂಚಿಕೊಂಡಿದ್ದಾರೆ. ಫೋಟೋಶೂಟ್ ಮಾಡಿಸುತ್ತಿದ್ದಾಗ ಬಟ್ಟೆ ಬದಲಿಸುವಂತೆ ಸ್ಥಳೀಯ ಪೊಲೀಸರು ಸೂಚಿಸಿದ್ದಾರೆ. ಬೇರೆ ಬಟ್ಟೆ ಹಾಕದಿದ್ದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರೆಂದು ಯುವತಿ ಪ್ರಶ್ನಿಸಿದ್ದಾರೆ

Read More

ಅಮೆರಿಕಾ ಅಧ್ಯಕ್ಷಿಯ ಚುನಾವಣೆಯಲ್ಲಿ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸಿಎನ್‌ಎನ್‌ಗೆ ನೀಡಿದ ಮೊದಲ ಸಂದರ್ಶನದಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ‘ನೀತಿ ಹಾಗೂ ದೃಷ್ಟಿಕೋನದಲ್ಲಿ ನನ್ನ ಮೌಲ್ಯಗಳು ಬದಲಾಗಿಲ್ಲ’ ಎಂದಿದ್ದಾರೆ. ‘ಅಧ್ಯಕ್ಷ ಜೋ ಬೈಡನ್ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಸಾಧ್ಯವಾಗಿದೆ. ಆದರೆ ಆರ್ಥಿಕತೆಯು ಸವಾಲಿನಿಂದ ಕೂಡಿದ ವಿಷಯವಾಗಿದ್ದು, ಇನ್ನೂ ಉತ್ತಮ ಕೆಲಸ ಮುಂದುವರಿಸಬೇಕಿದೆ’ ಎಂದು ಹೇಳಿದರು. ‘ಅಮೆರಿಕದ ಅಧ್ಯಕ್ಷೆ ಹುದ್ದೆ ವಹಿಸಲು ನಾನು ಸೂಕ್ತ ಅಭ್ಯರ್ಥಿ ಎಂದು ನಂಬಿದ್ದೇನೆ. ಮಧ್ಯಮ ವರ್ಗದವರನ್ನು ಬಲಪಡಿಸುವುದು ನನ್ನ ಆದ್ಯತೆಗಳಲ್ಲಿ ಒಂದಾಗಿದೆ’ ಎಂದು ಕಮಲಾ ಹ್ಯಾರಿಸ್ ತಿಳಿಸಿದರು. ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಿರುದ್ಧವೂ ಕಮಲಾ ಹ್ಯಾರಿಸ್ ವಾಗ್ದಾಳಿ ನಡೆಸಿದರು. ‘ಅಮೆರಿಕದ ಜನರ ಮಹತ್ವಾಕಾಂಕ್ಷೆಗಳ ಕುರಿತು ನೋಡಿದಾಗ, ಜನರು ಹೊಸ ಹಾದಿ ಸ್ವೀಕರಿಸಲು ಸಿದ್ಧರಾಗಿದ್ದಾರೆ’ ಎಂದು ಹೇಳಿದ್ದಾರೆ. ಕಮಲಾ ಹ್ಯಾರಿಸ್ ಸಂದರ್ಶನಕ್ಕೆ ಪ್ರತಿಕ್ರಿಯೆ ನೀಡಿರುವ ಡೊನಾಲ್ಡ್ ಟ್ರಂಪ್ ‘ಬೋರಿಂಗ್’ ಎಂದು ವ್ಯಂಗ್ಯವಾಡಿದ್ದಾರೆ. ‘ಆಕೆ ನಾಯಕಿ ಎಂದು…

Read More