ಬೆಂಗಳೂರು: ರಾಜ್ಯದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ (Yogi Adityanath campaign) ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Opposition leader Siddaramaiah) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ರಾಜ್ಯದ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದಾರೆ. ರಾಜ್ಯದ ಮಂಡ್ಯ ಮುಂತಾದ ಕಡೆ ಉತ್ತರ ಪ್ರದೇಶದ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಆ ಮಾದರಿ ಎಂದರೆ ಏನು ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ. ಆದರೂ ಅದರ ಬಗ್ಗೆ ಕರ್ನಾಟಕದಲ್ಲೂ ಪ್ರಸ್ತಾಪಿಸುವುದು ಹಾಸ್ಯಾಸ್ಪದ ವಾದ ಸಂಗತಿಯಾಗಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ 6 ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ ಶೇ. 66.4 ರಷ್ಟಿದೆ. ಇದು 2016 ರಲ್ಲಿ ಶೇ.63.2 ರಷ್ಟಿತ್ತು. ಶೇ.3.2 ರಷ್ಟು ಅಪೌಷ್ಟಿಕತೆಯನ್ನು ಹೆಚ್ಚಿಸಿ ಮಕ್ಕಳನ್ನು, ರೋಗಗ್ರಸ್ತ ಮಾಡಿದ್ದು ಯೋಗಿ ಆದಿತ್ಯ ನಾಥ್ ಅವರ ಸಾಧನೆನಾ? 2016ರಲ್ಲಿ ಉತ್ತರ…
Author: Prajatv Kannada
ಬೆಂಗಳೂರು: ತುಮಕೂರಿನಲ್ಲಿ ತಮಗೆ ಕಣ್ಣೀರು ಹಾಕಿಸಿದವರನ್ನು ಸೋಲಿಸಿ ಎಂದು ಹೆಚ್ ಡಿಡಿ ಕರೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Sivakumar) ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಅವರ ಭಾವನೆ,ಅವರ ಅನುಭವ ಅವರ ಹಿರಿತನಕ್ಕೆ ನಾವು ಸ್ಪರ್ಧೆ ಮಾಡೋಕೆ ಆಗುತ್ತಾ. ನಮ್ಮ ಕೈಯಲ್ಲಿ ಸ್ಪರ್ಧೆ ಮಾಡೋಕೆ ಆಗಲ್ಲಪ್ಪ. ಅವರಿಗೆ ಒಳ್ಳೆಯದಾಗಲಿ ಎಂದರು. ಇಷ್ಟು ವಯಸ್ಸು ಆದ್ರು,ಇಷ್ಟು ದೊಡ್ಡ ಚುನಾವಣಾ ಪ್ರಚಾರ ಮಾಡ್ತಾ ಇದ್ದಾರೆ. ಅವರಿಂದ ಕಲಿಯಬೇಕಾಗಿರುವುದು ಬಹಳಷ್ಟು ಇದೆ. ಅವರ ಛಲ ಹೋರಾಟ, ಆರೋಗ್ಯ ಚನ್ನಾಗಿ ಇರ್ಲಿ ಒಳೆಯದಾಗಲಿ ಎಂದರು. ಇನ್ನೂ ಕಳೆದ ಮೂರ್ನಾಲ್ಕು ದಿನದ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು(HD Deve Gowda), ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡುತ್ತಾ, ನಾನು ಹಿಂದೆ ನಡೆದಿದ್ದನ್ನು ಮೆಲುಕು ಹಾಕಿ ನೋಡಲೂ ಹೋಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದುಕೊಂಡಿರಲಿಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ತುಮಕೂರಿನ ಕೆಲವು ಮುಖಂಡರು ನನ್ನನ್ನು ಬಲಿಪಶು…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಏಪ್ರಿಲ್ 29ರ ಶನಿವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅಂದು ಮೋದಿ ನಡೆಸಲಿರುವ ಮೆಗಾ ರೋಡ್ ಶೋಗಾಗಿ (Road Show) ಬುಲೆಟ್ ಪ್ರೂಫ್ ವಾಹನ (Bulletproof Vehicles) ಸಿದ್ಧವಾಗಿದೆ. ಮೋದಿ ಪ್ರಚಾರಕ್ಕೆ ಎಸ್ಪಿಜಿ (SPG) ತಂಡ ಬೆಂಗಳೂರಿಗೆ ಸ್ಪೆಷಲ್ ಪ್ರೂಫ್ ವಾಹನ ಕಳುಹಿಸಿದೆ. ಆ ವಾಹನದಲ್ಲೇ ಮೋದಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇದೇ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಸುರಕ್ಷತಾ ದೃಷ್ಟಿಯಿಂದಾಗಿ ಈ ಬಾರಿ ಬುಲೆಟ್ ಪ್ರೂಫ್ ವಾಹನ ಸಿದ್ಧಪಡಿಸಿದ್ದು, ಈಗಾಗಲೇ ಬೆಂಗಳೂರಿಗೆ ಬಂದಿಳಿದಿದೆ. ಮಾಗಡಿ ರೋಡ್ ಬಂದ್: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ಮಾಗಡಿ ರಸ್ತೆ ಬಂದ್ ಆಗಲಿದೆ. ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿರುವ ಮೋದಿ ಅವರು ಸಂಜೆ 4.30ಕ್ಕೆ ಇಲ್ಲಿನ ಹೆಚ್ಎಎಲ್ ವಿಮಾನ…
ಬೆಂಗಳೂರು: ಮೋದಿ ವಿಷ ಸರ್ಪ ಇದ್ದಂತೆ ಎಂಬ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಮುಂದಾಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಮಲ್ಲಿಕಾರ್ಜುನ ಖರ್ಗೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ದಲಿತ ಕುಟುಂಬದಲ್ಲಿ ಹುಟ್ಟಿ ಎಐಸಿಸಿ ಅಧ್ಯಕ್ಷರಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಸೋಲಿನ ಹತಾಶೆ ಕಂಡು ಬಂದ ಹಿನ್ನೆಲೆ ಪ್ರಧಾನಿ ಬಾಯಲ್ಲೂ ಕಾಂಗ್ರೆಸ್ ಗ್ಯಾರಂಟಿಯದ್ದೇ ಮಾತು ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Sivakumar) ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಸುಳ್ಳು, ಅವು ಮುಂದಿನ ಪೀಳಿಗೆಗೆ ಮಾರಕ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತರ ಸಭೆಯಲ್ಲಿ ಹೇಳಿರುವುದರ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಉತ್ತರಿಸಿದರು. ‘ ‘ಪ್ರಧಾನಮಂತ್ರಿಗಳಿಗೆ ಬಿಜೆಪಿ ಭರವಸೆಗಳ ಬಗ್ಗೆ ಗೊತ್ತಿಲ್ಲವೇ. ನಾವು ಬಿಜೆಪಿಯವರಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ನಾವು ಹೇಳಿಲ್ಲ. ಬಿಜೆಪಿ ಪ್ರಣಾಳಿಕೆ ತೆಗೆದು ನೋಡಿ. ಅವರು 1 ಲಕ್ಷದವರೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರ ಪಂಪ್ಸೆಟ್ಗೆ ನೀಡುವ ವಿದ್ಯುತ್ ಅನ್ನು 7 ತಾಸಿನಿಂದ 10 ತಾಸಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಜನವರಿ 16ರಂದು ಬೊಮ್ಮಾಯಿ ಅವರ ಸರ್ಕಾರ ಪತ್ರಿಕೆಗಳಿಗೆ ಕೊಟ್ಟಿರುವ ಜಾಹೀರಾತು ನೋಡಿ.
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ(Karnataka Rains) ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಹಾವೇರಿ, ರಾಯಚೂರು, ಕಲ್ಬುರ್ಗಿ, ಕೊಪ್ಪಳ, ಯಾದಗಿರಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ,
ಬೆಂಗಳೂರು: ಇದೇ ಏ.30ರಂದು ರಾಮನಗರ (Ramanagara) ಜಿಲ್ಲೆಯ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಯ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಏಪ್ರಿಲ್ 30ರ ಬೆಳಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಂದು ರಾಮನಗರದ ಬಿಡದಿಯಿಂದ ಮದ್ದೂರಿನವರೆಗೂ ದಶಪಥ ಹೆದ್ದಾರಿಯ (Bengaluru-Mysuru Expressway) ಸಂಚಾರಕ್ಕೆ ನಿರ್ಬಂಧವಿರಲಿದೆ. ಎಕ್ಸ್‌ಪ್ರೆಸ್ ಹೈವೇ ಹಾಗೂ ಸರ್ವೀಸ್ ರಸ್ತೆಗಳಲ್ಲಿ ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ಮಾರ್ಗಸೂಚಿ ನೀಡಲಾಗಿದೆ. ಯಾವ ಮಾರ್ಗದಲ್ಲಿ ಸಂಚರಿಸಬಹುದು? ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರಿಗೆ ಹೋಗಬಹುದು. ಮೈಸೂರಿನಿಂದ ಬೆಂಗಳೂರಿಗೆ ಹೋಗುವ ವಾಹನಗಳು ಮದ್ದೂರು- ಕುಣಿಗಲ್- ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದು. ಮೈಸೂರಿನಿಂದ ಬೆಂಗಳೂರಿಗೆ ಮತ್ತೊಂದು ಮಾರ್ಗವಿದ್ದು, ಮಳವಳ್ಳಿ,…
ಬೆಂಗಳೂರು: ರಾಜ್ಯಾದ್ಯಂತ ಚುನಾವಣಾ ಅಧಿಕಾರಿಗಳ (Election Officers) ಕಾರ್ಯಾಚರಣೆ ಮುಂದುವರಿದಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಮನೆಯ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆಯಾಗಿದೆ. ಗುರುವಾರ ತಡರಾತ್ರಿ ಬೆಂಗಳೂರಿನ (Bengluru) ಆರ್.ಟಿ ನಗರದ ಸಿಎಂ ಬೊಮ್ಮಾಯಿಯವರ ಮನೆ ಮುಂದಿನ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಝ್ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 10 ಲಕ್ಷ ನಗದು ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ತಾವು ವ್ಯಾಪಾರಿಗಳು ಅಂತಾ ಪೊಲೀಸರ ಮುಂದೆ ಹೇಳಿದ್ದಾರೆ. ಆದರೆ ಹಣಕ್ಕೆ ಯಾವುದೇ ದಾಖಲೆ ಇಲ್ಲದೇ ಇರೋದು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಆರ್.ಟಿ ನಗರ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನೂ ವಶಕ್ಕೆ ಪಡೆದು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್(Geetha Shivarajkumar) ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಕಚೇರಿಯಲ್ಲಿ (kpcc) ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಇಂದು ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್(JDS)ನಿಂದ ಲೋಕಸಭಾ ಚುನಾವಣೆಗೆ ಬಿಎಸ್ ಯಡಿಯೂರಪ್ಪ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಭಾರಿ ಮತಗಳ ಅಂತರದಿಂದ ಸೋತಿದ್ದರು. ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. HD Kumaraswamy: ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚು ಸ್ಥಾನ JDS ಗೆಲ್ಲುತ್ತದೆ: ಹೆಚ್ ಡಿ ಕುಮಾರಸ್ವಾಮಿ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆ ಯಲ್ಲಿ ಸೆಣಸಲಿದ್ದಾರೆ. 2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್…
ಬೆಂಗಳೂರು: ಕಂಟೇನರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ. ಕಂಟೇನರ್ ಲಾರಿ ಚಾಲಕ ಬೈಕ್‌ಗೆ ಡಿಕ್ಕಿ (Bike Accident) ಹೊಡೆದು ಎಸ್ಕೇಪ್ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸದ್ಯ ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಆಡುಗೋಡಿ ಸಂಚಾರ ಪೊಲೀಸ್(Adugodi Traffic Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಪತ್ತೆಗಾಗಿ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆಯೂ ಮೇಡಹಳ್ಳಿ ಫ್ಲೈ ಓವರ್ ಬಳಿ ಕಾರೊಂದು ಎದುರು ಬಂದ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ತನಿಖೆ ನಡೆಸಿದ್ದ ಕೆ.ಆರ್.ಪುರಂ ಸಂಚಾರ ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದರು.