Author: Prajatv Kannada

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕರು ಸಾರಿಗೆಗೆ ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ನವ ಕರ್ನಾಟಕ ಶೃಂಗದಲ್ಲಿ ‘ಬೆಂಗಳೂರು-ಬೆಳವಣಿಗೆ ಜೋರು’ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹಲವು ಸ್ತರಗಳಲ್ಲಿ ರಸ್ತೆಗಳನ್ನು ನಿರ್ಮಿಸಿ, ನಿರ್ವಹಣೆ ಮಾಡುತ್ತಿದ್ದೇವೆ. ಕಳದ ಕೆಲವು ತಿಂಗಳಿಂದ ಸಂಚಾರದಲ್ಲಿ ಸಾಕಷ್ಟು ಸುಧಾರಣೆ ಆಗಿದೆ. ಅತಿ ದಟ್ಟಣೆಯ ಕಾರಿಡಾರ್‌ಗಳನ್ನು ಗುರುತಿಸಿ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ ಕೈಗೊಳ್ಳಲಾಗಿದೆ. ಪೆರಿಫೆರಲ್‌ ವರ್ತುಲ ರಸ್ತೆ ಮತ್ತು ಉಪ ನಗರ ವರ್ತುಲ ರಸ್ತೆಗಳ ನಿರ್ಮಾಣ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಧೈರ್ಯವನ್ನು ಈ ಸರ್ಕಾರ ತೋರಿದೆ. ಉಪ ನಗರ ರೈಲು ಸೇವೆ ಆರಂಭಿಸುವ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಮುಂದಾಗಿದೆ. ಮೆಟ್ರೊ ರೈಲು ಸೇವೆಯನ್ನು ವಿಸ್ತರಿಸಿದ್ದು, ಬಿಎಂಟಿಸಿಯನ್ನೂ ಬಲಪಡಿಸಲಾಗುತ್ತಿದೆ ಎಂದು ವಿವರ ನೀಡಿದರು. ಎಂಜಿನಿಯರಿಂಗ್, ಉದ್ಯೋಗ, ನವೋದ್ಯಮ, ಆವಿಷ್ಕಾರ, ತಂತ್ರಜ್ಞಾನ, ಬಯೋ ಟೆಕ್ನಾಲಜಿ ಸೇರಿದಂತೆ ಯಾವುದೇ ಹೊಸತನದಲ್ಲಿ ಬೆಂಗಳೂರು ಮುಂದಿದೆ. ಎಲ್ಲರಲ್ಲೂ ಸುಸ್ಥಿರ…

Read More

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮದ ಏಜೆಂಟ್ ಒಬ್ಬರನ್ನು ವಜಾ ಮಾಡಿ ಆದೇಶಿಸಿದ್ದ ಕ್ರಮವನ್ನು ಬೆಂಗಳೂರಿನ ಹೈಕೋರ್ಟ್ ರದ್ದು ಪಡಿಸಿದೆ. ತಮ್ಮನ್ನು ಏಜೆಂಟ್ ಸ್ಥಾನದಿಂದ ರದ್ದು ಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಸೂತ್ರಂ ಸುರೇಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಎಲ್ ಐಸಿ ನಿಬಂಧನೆಗಳ ಐದನೇ ಪರಿಚ್ಚೇಧದ ಪ್ರಕಾರ ಪ್ರಕ್ರಿಯೆ ಜೀವನಾಡಿಯಿದ್ದಂತೆ ಎಂದು ಹೇಳಿರುವ ನ್ಯಾಯಪೀಠ, ಯಾವುದೇ ಸಿಬ್ಬಂದಿಯನ್ನು ವಜಾ ಆದೇಶ ಹೊರಡಿಸುವ ಮುನ್ನ ನಿರ್ದಿಷ್ಟ ನಿಯಮಾವಳಿ ಇದ್ದರೆ ಅದನ್ನು ಪಾಲನೆ ಮಾಡಬೇಕು. ಅದನ್ನು ಗಾಳಿಗೆ ತೂರಿ ಸಿಬ್ಬಂದಿಯನ್ನು ವಜಾ ಮಾಡುವುದು ಸರಿಯಾದ ಕ್ರಮವಲ್ಲ. ಅಲ್ಲದೇ, ಅರ್ಜಿದಾರರ ವಿಚಾರದಲ್ಲಿ ಕಡ್ಡಾಯ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿಲ್ಲ. ಕೊನೆ ಪಕ್ಷ ವಜಾ ಅದೇಶ ಮಾಡುವುದಕ್ಕೂ ಮುನ್ನ ಅವರ ಅಹವಾಲು ಸ್ವೀಕರಿಸಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರಿನ ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Read More

ಬೆಂಗಳೂರು: ಬೆಂಗಳೂರಿನ ಕೆಆರ್​ ಪುರಂ-ವೈಟ್ ಫೀಲ್ಡ್ ನಮ್ಮ ಮೆಟ್ರೋ ಸೇವೆಗೆ ಕೌಂಟ್ ಡೌನ್ ಶುರುವಾಗಿದ್ದು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂವರೆಗಿನ 13.71 ಕಿಮೀ ಉದ್ದದ ಆರ್‌-1 ವಿಸ್ತರಣಾ ಮಾರ್ಗದ ಅಂತಿಮ ಹಂತದ ಟ್ರಯಲ್ ರನ್​ ಅನ್ನು ರೈಲ್ವೆ ಸೇಫ್ಟಿ ಕಮಿಷನ್ ಈಗಾಗಲೆ ನಡೆಸಿದೆ. ಕೆಆರ್​ ಪುರಂ-ವೈಟ್ ಫೀಲ್ಡ್ ನೇರಳೆ ಮಾರ್ಗ ಐಟಿ ಉದ್ಯೋಗಿಗಳಿಗೆ ಸಹಾಯಕವಾಗಲಿದೆ. ಈ ಮಾರ್ಗದಲ್ಲಿ ಗಂಟೆಗೆ 80 ಕಿ. ಮೀ. ವೇಗದಲ್ಲಿ ನಮ್ಮ ಮೆಟ್ರೋ ರೈಲುಗಳನ್ನು ಓಡಿಸಿ ಪರೀಕ್ಷೆ ನಡೆಸಲಾಗಿದೆ. 13 ಕಿ. ಮೀ. ಮಾರ್ಗವನ್ನು 12 ನಿಮಿಷಗಳಲ್ಲಿ ರೈಲು ಕ್ರಮಿಸಿದೆ. ಇನ್ನೂ ನಿಲ್ದಾಣಗಳಲ್ಲಿ ಸೀಮಿತ ದ್ವಿಚಕ್ರ ವಾಹನ ನಿಲುಗಡೆ ಮತ್ತು ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸೌಲಭ್ಯ ಇದೆ. ನಿಲ್ದಾಣಗಳ ಸುತ್ತಲೂ ಇರುವ ಸೇವಾ ರಸ್ತೆಗಳ ಎರಡೂ ಬದಿಯಲ್ಲಿ, ಪ್ರವೇಶ ಮತ್ತು ನಿರ್ಗಮನ ದ್ವಾರದೊಂದಿಗೆ ಬಿಎಂಟಿಸಿ ಬಸ್…

Read More

ಬೆಂಗಳೂರು: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಈ ಮೊದಲೇ ಹೇಳಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ನಾನು ಅವರ ಗೆಲುವಿಗೆ ಶ್ರಮಿಸುತ್ತೇನೆ. ಒಂದು ವೇಳೆ ಅವರು ಕೋಲಾರದಿಂದ ಸ್ಪರ್ಧಿಸದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಕರ್ನಾಟಕ ರಾಜ್ಯಕ್ಕೆ ಮೊದಲನೇ ಮುಖ್ಯಮಂತ್ರಿ ನೀಡಿದ ಜಿಲ್ಲೆ ಕೋಲಾರ. ಇದೀಗ ಮತ್ತೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಇಲ್ಲಿಂದಲೇ ಕಳುಹಿಸಬೇಕು ಎಂಬ ಮದಹಾಸೆ ನಮ್ಮದು ಎಂದು ಅವರು ತಿಳಿಸಿದರು. ಕಾಂಗ್ರೆಸ್‌ ಹೈಕಮಾಂಡ್ ಕೋಲಾರದಿಂದ ಸ್ಪಧಿಸುವುದು ಬೇಡ ಎಂದರೆ ಸಿದ್ದರಾಮಯ್ಯನವರು ಏನು ಮಾಡುತ್ತಾರೆ?. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಅವರು ಕಣಕ್ಕಿಳಿದಿದ್ದರೆ ಗೆಲುವು ಅವರಿಗೆ ಖಚಿತವಾಗಿತ್ತು. ಅವರು ಇಲ್ಲಿಂದಲೇ ಸ್ಪರ್ಧಿಸಲಿ ಎಂಬ ವಿಶ್ವಾಸ ಇನ್ನೂ ನನ್ನಲ್ಲಿದೆ. ಆದರೆ ಕೋಲಾರದಿಂದ ನಾನು ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಈ ವೇಳೆ ಶಾಸಕರು ಸ್ಪಷ್ಟಪಡಿಸಿದರು.

Read More

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾರ್ಚ್‌ 23 ರಂದು ಚಾಲನೆ ನೀಡಲಿದ್ದಾರೆ. . ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಸಂಘಗಳ ರಚನೆಯ ಪ್ರಗತಿಯ ಕುರಿತು ಸಿಎಂ ಮಾಹಿತಿ ಪಡೆದರು. ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿವೆ. ಆದರೆ ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಇಂತಹ ಯೋಜನೆಯನ್ನು ರೂಪಿಸಲಾಗಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಚ್ಚಿನ ಆದ್ಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು. ಜಂಟಿ ಬಾಧ್ಯತಾ ಗುಂಪುಗಳ ರಚನೆಯಾಗಿ, ಸುತ್ತು ನಿಧಿ ಹಂಚಿಕೆಯೊಂದಿಗೆ ನಿಮ್ಮ ಕೆಲಸ ಮುಗಿಯುವುದಿಲ್ಲ. ಈ ಗುಂಪುಗಳು ಯೋಜನೆಯನ್ನು ಗುರುತಿಸಿ, ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆದು, ತಮ್ಮ ಉದ್ದಿಮೆಯನ್ನು ಸ್ಥಾಪಿಸಿ, ಉತ್ಪಾದನೆ ಪ್ರಾರಂಭಿಸುವ ವರೆಗೂ ನೀವು ಅವರಿಗೆ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಸೂಚಿಸಿದರು. ಯೋಜನೆಗಳನ್ನು ಗುರುತಿಸಲು ನಿಯೋಜಿಸಿರುವ ಸಮಾಲೋಚಕರು, ಯುವಕರು ಕೈಗೊಳ್ಳುವ ಯೋಜನೆಗೆ ಅನುಗುಣವಾಗಿ, ಆಯಾ ಕ್ಷೇತ್ರದ ಪರಿಣತರಿಂದಲೇ ತರಬೇತಿ ನೀಡಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು…

Read More

ಬೆಂಗಳೂರು: ಮನೆಗಳ್ಳತನ, ಸರಗಳ್ಳತನ ಸೇರಿದಂತೆ 23 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ 11 ಆರೋಪಿಗಳನ್ನು ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಮತ್ತು ಅಶೋಕನಗರ ಠಾಣೆಗಳ ತಲಾ 8 ಪ್ರಕರಣ, ವಿವೇಕನಗರ, ಸಂಪಂಗಿ ರಾಮನಗರ, ಎಸ್.ಜೆ‌. ಪಾರ್ಕ್, ವಿಲ್ಸನ್ ಗಾರ್ಡನ್ ಠಾಣೆಗಳ ತಲಾ ಒಂದೊಂದು ಪ್ರಕರಣ, ಶೇಷಾದ್ರಿಪುರಂ ಠಾಣೆಯ ಮೂರು ಪ್ರಕರಣಗಳಿಗೆ ಸಂಬಂಧಿಸಿದ 4.33 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ಆರೋಪಿಗಳು ಹಾಗೂ ಅವರು ನೀಡುತ್ತಿದ್ದ ಆಭರಣಗಳನ್ನು ಸ್ವೀಕರಿಸುತ್ತಿದ್ದವರ ಸಹಿತ 23 ಜನರನ್ನ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಜಾನ್ ಶಂಕರ್ ಎಂಬಾತನನ್ನ ಬಂಧಿಸಿ 223 ಗ್ರಾಂ ಚಿನ್ನಾಭರಣ, 232.44 ಬೆಳ್ಳಿ ಆಭರಣ ಹಾಗೂ 10 ಸಾವಿರ ರೂ ಮೌಲ್ಯದ ಹವಳ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ವಿವೇಕನಗರ ವ್ಯಾಪ್ತಿಯಲ್ಲಿ‌ ಶ್ರೀನಿವಾಸ್, ಹಾಗೂ ಕದ್ದ ಆಭರಣ ಸ್ವೀಕರಿಸುತ್ತಿದ್ದ ಭವರ್ ಲಾಲ್ ಎಂಬುವರನ್ನು ಬಂಧಿಸಿ 301…

Read More

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಸ್ಯಾಕ್ರಮೆಂಟೊ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಆಕಾಶದಲ್ಲಿ ನಿಗೂಢ ದೀಪಗಳು ಕಾಣಿಸಿಕೊಂಡು, ಸೇಂಟ್ ಪ್ಯಾಟ್ರಿಕ್ಸ್ ಡೇ ಆಚರಿಸಲು ಸಮುದ್ರ ತೀರದಲ್ಲಿ ಸೇರಿದ್ದವರಿಗೆ ಅಚ್ಚರಿ ಮೂಡಿಸಿದೆ. AP ವರದಿಯ ಪ್ರಕಾರ, ಜನರು ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲಾ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಜೇಮೀ ಹೆರ್ನಾಂಡೆಜ್ 40 ಸೆಕೆಂಡುಗಳ ವಿಡಿಯೋವನ್ನು ಸೆರೆಹಿಡಿದಿದ್ದಾರೆ. ಅವರು ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಕಿಂಗ್ ಕಾಂಗ್ ಬ್ರೂಯಿಂಗ್ ಕಂಪನಿಯಲ್ಲಿ ಸೇಂಟ್ ಪ್ಯಾಟ್ರಿಕ್ಸ್ ಡೇ ಅನ್ನು ಆಚರಿಸುತ್ತಿದ್ದರು. ಈ ವೇಳೆ ಆಕಾಶದಲ್ಲಿ ಇದ್ದಕ್ಕಿದ್ದಂತೆ ಕಂಡ ನಿಗೂಢ ಬೆಳಕು ಕಾಣಿಸಿಕೊಂಡಿದೆ. ಈ ಅದ್ಭುತ ದೃಶ್ಯವನ್ನು ನೋಡಿದ ಜನರು ಕೂಡಲೇ ಅದನ್ನು ರೆಕಾರ್ಡ್ ಮಾಡಲು ಪ್ರಾರಂಭಿಸಿದರು. AP ಗೆ ಇಮೇಲ್‌ನಲ್ಲಿ ಜೇಮೀ ಹೆರ್ನಾಂಡೆಜ್ ಎಂಬುವವರು, ‘ನಾವು ಅಚ್ಚರಿಗೊಂಡೆವು, ಆದರೆ ಇದನ್ನು ನೋಡಿ ನಾವು ಆಶ್ಚರ್ಯಚಕಿತರಾಗಿದ್ದೇವೆ. ನಮ್ಮಲ್ಲಿ ಯಾರೂ ಈ ಹಿಂದೆ ಇಂತಹದ್ದನ್ನು ನೋಡಿರಲಿಲ್ಲ.’ ಎಂದು ಹೇಳಿದ್ದಾರೆ.

Read More

ಮುಂಬೈ: 16ನೇ ಐಪಿಎಲ್ (IPL 2023) ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದೆ. ದೇಶದ ವಿವಿಧೆಡೆ 12 ಕ್ರೀಡಾಂಗಣಗಳಲ್ಲಿ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದಿರುವ ದಿಗ್ಗಜರು ಈ ಐಪಿಎಲ್‌ನೊಂದಿಗೆ ವಿದಾಯ ಹೇಳುವ ಸಾಧ್ಯತೆಗಳೂ ಇವೆ. ಈ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್ (S. Sreesanth) ಖಾಸಗಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (CSK) 2023ರ ಐಪಿಎಲ್ ಟ್ರೋಫಿ ಗೆಲ್ಲುತ್ತೆ ಅನ್ನಿಸಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಹೊಸ ತಂಡಗಳು ಟ್ರೋಫಿ ಗೆದ್ದರೆ ಖುಷಿಯಾಗುತ್ತೆ. ಅದರಲ್ಲೂ ಆರ್‌ಸಿಬಿ (RCB) ತಂಡ 2023ರ ಟ್ರೋಫಿ ಗೆದ್ದರೆ ನಾನು ತುಂಬಾನೇ ಖುಷಿಪಡುತ್ತೇನೆ. ಏಕೆಂದರೆ ಭಾರತೀಯ ಕ್ರಿಕೆಟ್ ಜಗತ್ತಿಗೆ ಆರ್‌ಸಿಬಿ ಮಾಜಿ ನಾಯಕ ವಿರಾಟ್‌ಕೊಹ್ಲಿ (Virat Kohli) ಸಾಕಷ್ಟು ಕೊಡುಗೆ ನೀಡಿದ್ದಾರೆ. ಆರ್‌ಸಿಬಿ ಈವರೆಗೆ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆ. ಆದರೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಈ ಬಾರಿ ಕಪ್ ಗೆದ್ದರೆ ಖುಷಿಪಡುತ್ತೇನೆ ಎಂದು…

Read More

ಖಲಿಸ್ತಾನಿ ಉಗ್ರರು ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಕೆ ನೀಡಿದೆ. ಖಲಿಸ್ತಾನ ಪರ ಪ್ರತ್ಯೇಕವಾದಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಭಾರತ ಧ್ವಜವನ್ನು ಕೆಳಗಿಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಭಾನುವಾರ ರಾತ್ರಿ ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ. ಲಂಡನ್​ನಲ್ಲಿರುವ ಭಾರತೀಯ ರಾಜತಾಂತ್ರಿಕ ಸ್ಥಳಗಳು ಮತ್ತು ಸಿಬ್ಬಂದಿಯ ಭದ್ರತೆ ಬಗ್ಗೆ ಬ್ರಿಟನ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ.

Read More