ಜೈಪುರ: ʻ10 ವರ್ಷದವಳಿದ್ದಾಗ ನನ್ನನ್ನ ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ ಮಾಡಿ ಕೋಟಿಗಟ್ಟಲೇ ಸಂಪಾದಿಸಿದ್ರು. ನಾನೀಗ ನೊಂದಿದ್ದೇನೆ, ನನಗೆ ನ್ಯಾಯ ಕೊಡಿಸಿ..ʼ ವೇಶ್ಯಾವಾಟಿಕೆ ಜಾಲಕ್ಕೆ ಸಿಕ್ಕಿ ನರಳುತ್ತಿದ್ದ ಸಂತ್ರಸ್ತೆಯೊಬ್ಬಳ ಕೂಗು ಇದಾಗಿದೆ. ಹೌದು. ರಾಜಸ್ಥಾನದ (Rajasthan) ಬಿಲ್ವಾರದಲ್ಲಿ 10 ವರ್ಷಗಳ ಹಿಂದೆ ಮಾರಾಟವಾಗಿ ವೇಶ್ಯಾವಾಟಿಕೆ ದಂಧೆಗೆ ಸಿಲುಕಿದ್ದ ಹುಡುಗಿಯೊಬ್ಬಳು (Girl) 8-9 ವರ್ಷಗಳ ಬಳಿಕ ತನ್ನ ಕರಾಳ ಕತೆಯನ್ನು ಹೇಳಿಕೊಂಡಿದ್ದಾಳೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ವೀಡಿಯೋ ಮಾಡಿಬಿಟ್ಟಿರುವ ಸಂತ್ರಸ್ತೆ ತನ್ನನ್ನು ರಕ್ಷಿಸುವಂತೆ ಪೊಲೀಸರಿಗೆ ಕೇಳಿಕೊಂಡಿದ್ದಾಳೆ. ಸಂತ್ರಸ್ತೆವೀಡಿಯೋದಲ್ಲಿಹೇಳಿರುವುದೇನು? ʻಹಲೋ ನಾನು ಸ್ವಂತ ಇಚ್ಛೆಯ ಮೇಲೆ ಈ ವೀಡಿಯೋ ಮಾಡುತ್ತಿದ್ದೇನೆ. ನಾನು 10 ವರ್ಷದವಳಿದ್ದಾಗ ಮಾಧೋಪುರದಲ್ಲಿ ನನ್ನನ್ನು ಮಾರಾಟ ಮಾಡಿದರು. 11ನೇ ವರ್ಷದಲ್ಲಿ ಬಲವಂತವಾಗಿ ನನ್ನನ್ನ ವೇಶ್ಯಾವಾಟಿಕೆಗೆ ತಳ್ಳಿದರು. ಒಂದೆರಡು ವರ್ಷ ಮಾಧೋಪುರದಲ್ಲಿ ಇಟ್ಟುಕೊಂಡು ನಂತರ ನನ್ನನ್ನು ಬೇರೆ ಸ್ಥಳಕ್ಕೆ ಮಾರಾಟ ಮಾಡಿದರು. ಇಲ್ಲಿನ ಡಿಯೋಲಿ ನಗರದಲ್ಲಿ ಕಿಶನ್ ಎಂಬ ವ್ಯಾಪಾರಿ 20 ಲಕ್ಷ ರೂ.ಗೆ ನನ್ನನ್ನು ಖರೀದಿಸಿ 8-9 ವರ್ಷಗಳ…
Author: Prajatv Kannada
ಬಳ್ಳಾರಿ: ಶ್ರೀರಾಮುಲು (Sriramulu) 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ. ನನ್ನ ವ್ಯಕ್ತಿತ್ವ, ಕೆಲಸ, ಸರಳತೆಯ ಮೇಲೆ ಜನರು ಮತ ನೀಡಲಿದ್ದಾರೆ ಎಂದು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ನನ್ನ ವಿರುದ್ಧ ಸ್ಪರ್ಧೆ ಮಾಡಿದರೆ ಸ್ವಾಗತ ಮಾಡುತ್ತೇನೆ. ಶ್ರೀರಾಮುಲು, ನಾನು ಒಟ್ಟಿಗೆ ರಾಜಕೀಯ ಮಾಡಿಕೊಂಡು ಬಂದಿದ್ದೇವೆ. ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧಿಸಿದರೆ ನನಗೆ ಬೇಜಾರಿಲ್ಲ. ರಾಮುಲು ವಿಚಾರಧಾರೆಗಳೇ ಬೇರೆ, ನಮ್ಮ ವಿಚಾರಧಾರೆಗಳೇ ಬೇರೆ. ಸ್ನೇಹಿತರಾದ್ರೂ ರಾಜಕೀಯವಾಗಿ ಯಾವುದೇ ಹೊಂದಾಣಿಕೆಯಿಲ್ಲ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ರಣತಂತ್ರ ಬೇರೆಯೇ ಇದೆ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕೇವಲ ಕಣ್ಣೊರೆಸುವ ತಂತ್ರ. ರಾಮುಲು ಸಚಿವರಾದ ನಂತರ ಉತ್ತಮವಾಗಿ ಕೆಲಸ ಮಾಡಬಹುದಿತ್ತು. ಆದರೆ ರಾಮುಲು ಜಿಲ್ಲೆಯ ಶಾಸಕರನ್ನು ಒಗ್ಗೂಡಿಸಿ ಕೆಲಸ ಮಾಡಲಿಲ್ಲ. ನಾನು ಕ್ಷೇತ್ರದ ಮತದಾರರ ಬೆಂಬಲದಿಂದ ಗೆಲುವು ಸಾಧಿಸುತ್ತೇನೆ. ಗೆದ್ದ ಬಳಿಕ ಪಕ್ಷ ನನಗೆ ದೊಡ್ಡ ಸ್ಥಾನಮಾನ ನೀಡುವ ವಿಶ್ವಾಸ ಇದೆ…
ಕೋಲಾರ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕ್ಯಾನ್ಸಲ್ ಆದ ಹಿನ್ನೆಲೆಯಲ್ಲಿ ಮತ್ತೊಬ್ಬ ಸೂಕ್ತ ಅಭ್ಯರ್ಥಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಹೌದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡಗೆ ಅವರಿಗೆ ಡಿ.ಕೆ ಶಿವಕುಮಾರ್ ಕರೆ ಮಾಡಿದ್ದು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಹೀಗಾಗಿ ಕೋಲಾರದಲ್ಲಿ ಡಿ.ಕೆ ಶಿವಕುಮಾರ್ ನಡೆ ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಹಾಗೂ ಕೆ.ಎಚ್ ಮುನಿಯಪ್ಪರನ್ನು ಡಿ.ಕೆ ಶಿವಕುಮಾರ್ ಓವರ್ ಟೇಕ್ ಮಾಡಿದ್ದಾರೆ. ಸಿದ್ದು ಸ್ಪರ್ಧೆ ಘೋಷಣೆಗೂ ಮುನ್ನವೇ ಕೋಲಾರದ ಟಿಕೆಟ್‌ಗಾಗಿ ಬ್ಯಾಲಹಳ್ಳಿ ಗೋವಿಂದಗೌಡ ಅರ್ಜಿ ಹಾಕಿದ್ದರು. ಸಿದ್ದು ಸ್ಪರ್ಧೆ ಘೋಷಣೆ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಬ್ಯಾಲಹಳ್ಳಿ ಗೋವಿಂದಗೌಡ ಓಡಾಟ ನಡೆಸಿದ್ದರು. ಡಿಸಿಸಿ ಬ್ಯಾಂಕ್ ಮೂಲಕ ಸ್ವ ಸಹಾಯ ಹಾಗೂ ಸ್ತ್ರೀ ಶಕ್ತಿಗಳಿಗೆ ಸಾಲ ನೀಡುವ ಮೂಲಕ ಬ್ಯಾಲಹಳ್ಳಿ ಗೋವಿಂದಗೌಡ ಅವರು ಭಾರೀ ಜನಮನ್ನಣೆ ಗಳಿಸಿದ್ದಾರೆ. ಒಕ್ಕಲಿಗ ಸಮುದಾಯದ ನಾಯಕ ಬ್ಯಾಲಹಳ್ಳಿ ಗೋವಿಂದಗೌಡ ತಮ್ಮದೇ ಓಟ್ ಬ್ಯಾಂಕ್…
ಹಾಸನ: ಆಡಿಯೋದಲ್ಲಿ ಶಿವಲಿಂಗೇಗೌಡ (Shivalinge Gowda) ಹೇಳಿರುವುದು ಸತ್ಯ ಅಲ್ಲ ಎಂದು ಧರ್ಮಸ್ಥಳಕ್ಕೆ (Dharmasthala) ಬಂದು ಪ್ರಮಾಣ ಮಾಡಲಿ. ನಾನೇನಾದರು ಒಂದು ಪದ ಎಡಿಟ್ (Edit) ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದು ಮಾಜಿಸಚಿವ ಎಚ್.ಡಿ.ರೇವಣ್ಣ (H.D.Revanna) ಶಾಸಕ ಶಿವಲಿಂಗೇಗೌಡರಿಗೆ ಸವಾಲೆಸದರು. ಇತ್ತೀಚೆಗೆ ವೈರಲ್ (Viral) ಆಗಿದ್ದ ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ (Arasikere) ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ರಾಗಿ ಕಳ್ಳ ಅಂದ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ಸತ್ಯ ಮಾಡಲಿಲ್ವಾ? ಕಳೆದ ಒಂದು ವರ್ಷದಿಂದ ಇದು ನಡೆಯುತ್ತಿದೆ. ಕುರುಬರು, ಲಿಂಗಾಯತರು, ಒಕ್ಕಲಿಗರು ನನಗೆ ಓಟು ಹಾಕುವುದಿಲ್ಲ ಎಂದು ಆ ಆಡಿಯೋದಲ್ಲೇ ಹೇಳಿದ್ದಾರೆ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ. ಇಲ್ಲವಾದರೆ ಆ ದೇವರು ಅವರನ್ನು ನೋಡಿಕೊಳ್ಳಲಿ. ಧರ್ಮಸ್ಥಳಕ್ಕೆ ಬಂದು ದೇವರ ಮೇಲೆ…
ಕೋಲಾರ : ಕೋಲಾರ ಸ್ಪರ್ಧೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯುವ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೋಲಾರದಲ್ಲಿ ಸಿದ್ದು ಬದಲಿಗೆ ಕಾಂಗ್ರೆಸ್‌ನಿಂದ (Congress) ಅಭ್ಯರ್ಥಿ ಯಾರು ಎನ್ನುವ ಕುರಿತು ಚರ್ಚೆ ಜೋರಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಬಣ ರಾಜಕೀಯ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೋಲಾರ (Kolar) ಕ್ಷೇತ್ರದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿದೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತವನ್ನು ಜ.9ರಂದು ಕೋಲಾ ವಾರ್ಡ್ ಸಭೆಗಳು, ಗ್ರಾಮಾಂತರ ಸಭೆಗಳು ಸೇರಿದಂತೆ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಅಷ್ಟೊಂದು ಸೇಫ್ ಅಲ್ಲ, ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಕೋಲಾರದಿಂದ ಯೂಟರ್ನ್ ಹೊಡೆದ ಮೇಲೆ ಕೋಲಾರದ ಕಾಂಗ್ರೆಸ್ ವಲಯದಲ್ಲಿ ಸಿದ್ದು ಬದಲಿಗೆ ಯಾರು ಕಾಂಗ್ರೆಸ್ ಅಭ್ಯರ್ಥಿ ಎಂಬ ಚರ್ಚೆ…
ಕೊಪ್ಪಳ: ಅನಾರೋಗ್ಯಕ್ಕೆ ಒಳಗಾಗಿದ್ದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಇಬ್ಬರು ಮಕ್ಕಳನ್ನು ಕೆಆರ್‌ಪಿಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ದತ್ತು ಪಡೆದುಕೊಂಡರು. ಕೊಪ್ಪಳದ (Koppala) ಗಂಗಾವತಿ ನಗರದ ವಿರುಪಾಪುರ ತಾಂಡದ ನಿವಾಸಿಯಾಗಿರುವ ಈ ಇಬ್ಬರು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಸೋದರ ಮಾವನ ಮನೆಯಲ್ಲಿ ವಾಸವಿದ್ದರು. ಸೋದರ ಮಾವನಿಗೂ ಕಷ್ಟ ಇರುವುದರಿಂದ ಜನಾರ್ದನ ರೆಡ್ಡಿಯವರು ಜ್ಯೋತಿ ಸ್ವರೂಪ್, ವೇಣು ಎನ್ನುವ ಇಬ್ಬರು ಮಕ್ಕಳನ್ನು ದತ್ತು ಪಡೆಕೊಂಡಿದ್ದಾರೆ. ಮಕ್ಕಳ ಶಿಕ್ಷಣ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು ನನ್ನ ಮಕ್ಕಳಂತೆ ನೋಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಕೆಆರ್‌ಪಿಪಿ ಪಕ್ಷದ ವತಿಯಿಂದ ಈಗಾಗಲೇ 12 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮಾರ್ಚ್ 30ರ ಒಳಗೆ 30 ಕ್ಕೂ ಅಧಿಕ ಅಭ್ಯರ್ಥಿಗಳನ್ನು ಘೋಷಣೆ ಮಾಡುವೆ. ಬಿಜೆಪಿ ಪಕ್ಷದ ನಾಯಕರು ಗಂಗಾವತಿಗೆ ಸಾಲು ಸಾಲಾಗಿ ಆಗಮಿಸುತ್ತಿದ್ದಾರೆ. 5 ವರ್ಷಗಳ ಅವಧಿಯಲ್ಲಿ ಯಾರು ಸಹ ಗಂಗಾವತಿಗೆ ಬಂದಿರಲಿಲ್ಲ. ನನ್ನಿಂದ ಅವರು ಗಂಗಾವತಿಗೆ ಬರುತ್ತಿರುವುದು ಖುಷಿಯಾಗುತ್ತಿದೆ ಕಾಲೆಳೆದ ಪಕ್ಷದ ವಿಚಾರವಾಗಿ ಯಾರ ಬಗ್ಗೆ ಕೂಡ ನಾನು…
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಟೋ ಚಾಲಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವುದರಿಂದ ಆಟೋ ಸೇವೆ ವ್ಯತ್ಯಯ ಉಂಟಾಗಲಿದೆ. ಅಂದಾಜು 2 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿರುವುದರಿಂದ ಪ್ರಯಾಣಿಕರು ಪರದಾಡುವ ಸಾಧ್ಯತೆ ಇದೆ. ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು, ಕಾನೂನು ಬಾಹಿರವಾಗಿ ಬೈಕ್ ಟ್ಯಾಕ್ಸಿಯಿಂದ ಆಟೋ ಚಾಲಕರಿಗೆ ಬಾಡಿಗೆ ಸರಿಯಾಗಿ ಸಿಗುತ್ತಿಲ್ಲ. ನ್ಯಾಯಬದ್ಧವಾಗಿ ಸರ್ಕಾರಕ್ಕೆ ಕಳೆದ 60 ವರ್ಷಗಳಿಂದ ತೆರಿಗೆ ಕಟ್ಟುತ್ತಿದ್ದೇವೆ. ಆದರೆ, ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿಗಳು ಸೇವೆ ನೀಡುತ್ತಿದ್ದರು ರಾಜ್ಯ ಸರ್ಕಾರ ಕ್ರಮಕೈಗೊಳ್ಳದೆ ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದೆ. ಇದರಿಂದ ಆಟೋ ಚಾಲಕರ ಜೀವನ ದುಸ್ತರವಾಗಿದೆ. ಕೂಡಲೇ ಬೈಕ್ ಸೇವೆ ನೀಡುತ್ತಿರುವ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು ಎಂದು ಬೆಂಗಳೂರು ಚಾಲಕರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಂ ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರು: ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ” ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಲ್ಲೇಶ್ವರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಟಿಪ್ಪು ಸುಲ್ತಾನ್ ನಮಗೆ ವಿಲನ್. ಅವನು ನರಹಂತಕ ನಮಗೆ. ಉರಿಗೌಡ ನಂಜೇಗೌಡ ನಮಗೆ ಹೆಮ್ಮೆ. ಉರಿಗೌಡ ನಂಜೇಗೌಡ ಇದ್ದದ್ದು ಸತ್ಯ. ನಾವು ಎಂದೆಂದಿಗೂ ಟಿಪ್ಪುವನ್ನು ವಿರೋಧಿಸುತ್ತೇವೆ. ಇನ್ನೂ ಸುವರ್ಣ ಮಂಡ್ಯ ಪುಸ್ತಕ ಯಾರು ಬರೆದಿದ್ದು? ಆ ಪುಸ್ತಕದಲ್ಲಿ ಆ ಎರಡು ಹೆಸರು ಕಾಲ್ಪನಿಕಾನಾ. ವಿರೋಧ ಮಾಡುವವರು ಮಾಡ್ತಾರೆ. ಟಿಪ್ಪು ಸುಲ್ತಾನ್ ಫೋಟೋಗಳನ್ನು ತೆಗೆದುಕೊಂಡು ಹೋಗಿ ಅವ್ರ ಮನೆಯಲ್ಲಿ , ಕಾರುಗಳ ಮೇಲೆ ಅಂಟಿಸಿಕೊಳ್ಳಲಿ ಎಂದು ಹೇಳುವ ಮೂಲಕ ಹೆಚ್‌ಡಿಕೆಗೆ…
ಬೆಂಗಳೂರು: ಇನ್ನೂ ಎರಡು, ಮೂರು ದಿನಗಳಲ್ಲಿ ಬಿಜೆಪಿ (BJP) ಸೇರುತ್ತೇನೆ. ಮಂಡ್ಯದಲ್ಲಿ (Mandya) ಇನ್ಮುಂದೆ ಮೂರನೇ ಆಟ ಶುರುವಾಗುತ್ತದೆ ಎಂದು ಮಂಡ್ಯದ ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ( L.R Shivarame gowda) ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗಮಂಗಲದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಸೋಲಿಸುವ ಅವಕಾಶ ಇರುವುದು ನನ್ನೊಬ್ಬನಿಗೇ ಮಾತ್ರ. ಕ್ಷೇತ್ರದಲ್ಲಿ ನನಗೆ ನನ್ನದೇ ಆದಂತಹ ಮತಗಳು ಇವೆ. ಮಂಡ್ಯದಲ್ಲಿ 7ಕ್ಕೆ 7 ಸೀಟು ಗೆಲ್ಲಿಸಲು ಪಣ ತೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಬಿಜೆಪಿಯ ಎಲ್ಲಾ ನಾಯಕರ ಜೊತೆಗೆ ಚರ್ಚೆ ಮಾಡಿದ್ದೇನೆ. ನನಗೆ ಒಂದು ರಾಷ್ಟ್ರೀಯ ಪಕ್ಷದ ಶಕ್ತಿ ಬೇಕಾಗಿತ್ತು. ಮಂಡ್ಯದಲ್ಲಿ ಬಿಜೆಪಿಯ ಶಕ್ತಿ ಸ್ವಲ್ಪ ಕಡಿಮೆ ಇತ್ತು. ಆದರೆ ರಾಷ್ಟ್ರೀಯ ನಾಯಕರು ಅಲ್ಲಿ ಪಕ್ಷ ಕಟ್ಟುವ ಇಚ್ಛೆ ಪಟ್ಟಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಮುಟ್ಟಿ ನೋಡಿಕೊಳ್ಳಬೇಕು ಆ ರೀತಿಯಲ್ಲಿ ಮಂಡ್ಯದಲ್ಲಿ ಗೆಲುವು ಸಾಧಿಸುತ್ತೇವೆ ಎಂದರು. ಮಂಡ್ಯದ ಸ್ವಾಭಿಮಾನ ಅಮಿತ್ ಶಾ ಕಾಲು ಕೆಳಗೆ ಹೋಗಿದೆ ಎಂಬ ಕುಮಾರಸ್ವಾಮಿ ಹೇಳಿಕೆ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ 67 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಪಿಯುಸಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್ 25,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿದಾರರು 635/-ರೂ, ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 335/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 85/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 35/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.