ನವದೆಹಲಿ: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿ ತಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ವಿಶೇಷ ರಾಜ್ಯ ಸ್ಥಾನಮಾನ, ಕೇಂದ್ರದಿಂದ ಬಾಕಿ ಇರುವ ಹಣ ಮತ್ತು ನೆರೆಯ ತೆಲಂಗಾಣದೊಂದಿಗೆ ಬಾಕಿ ಪಾವತಿಸಲು ಅವರ ಮಧ್ಯಸ್ಥಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ರಾಜ್ಯ ವಿಭಜನೆಯಾಗಿ ಒಂಬತ್ತು ವರ್ಷಗಳಾದರೂ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳ ಕುರಿತು ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಜಗನ್ ಪ್ರಧಾನಿಗೆ ಮನವಿ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದಾರೆ. ಪ್ರಧಾನಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಬಾಕಿ ಉಳಿದಿರುವ ಹಲವಾರು ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ರೆಡ್ಡಿ ಮನವಿ ಮಾಡಿದ್ದಾರೆ. ಆಂಧ್ರಪ್ರದೇಶ ಪುನರ್ವಿಭಜನಾ ಕಾಯ್ದೆಯಲ್ಲಿ ಉಲ್ಲೇಖಿಸಲಾದ ವಿಷಯಗಳ ಕುರಿತು ರಚಿಸಲಾದ ಕೇಂದ್ರ ಹಣಕಾಸು ಕಾರ್ಯದರ್ಶಿ ನೇತೃತ್ವದ ಸಮಿತಿಯು ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳನ್ನು…
Author: Prajatv Kannada
ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ…
ಬೆಂಗಳೂರು: ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ಹಿನ್ನೆಲೆಯಲ್ಲಿ ನಾಳೆ ಕೋಲಾರದಲ್ಲಿ ನಿಗದಿಯಾಗಿದ್ದ ಸಿದ್ದರಾಮಯ್ಯ ಪ್ರವಾಸ ರದ್ದು ಆಗಿದೆ. ಇನ್ನು ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು: ಬಿಜೆಪಿಯಿಂದ ರೈತರು ತಮ್ಮ ಎತ್ತು, ಗಾಡಿಗಳನ್ನೇ ಲಂಚವಾಗಿ ನೀಡುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಎಂ ಬೊಮ್ಮಾಯಿ ತವರು ಜಿಲ್ಲೆಯ ರೈತ ಎತ್ತುಗಳನ್ನೇ ಲಂಚವಾಗಿ ನೀಡಲು ತಂದಿದ್ದಾರೆ. ಬಿಜೆಪಿಯ ಕಡುಭ್ರಷ್ಟ ಸರ್ಕಾರದ ಪರವಾಗಿ ಯಾವ ಮುಖವಿಟ್ಟುಕೊಂಡು ಮತ ಕೇಳುವಿರಿ? ಪ್ರಧಾನಿ ಮೋದಿ ಅವರೇ, ನಿಮ್ಮ ಎರಡನೇ ಇಂಜಿನ್ ಸರ್ಕಾರದ ಲಂಚಾವತಾರವು ರೈತರನ್ನು ಎತ್ತು, ಗಾಡಿಗಳನ್ನೇ ಲಂಚ ನೀಡುವ ಹಂತಕ್ಕೆ ತಂದಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕುಟುಕಿದೆ. ಮೋದಿ ಅವರೇ ನಿಮ್ಮನ್ನು ಸ್ವಾಗತಿಸಲು ಧಿಡೀರ್ ಹಾಜರಾಗಿದ್ದ ಉರಿಗೌಡ, ದೊಡ್ಡನಂಜೇಗೌಡ ಎಂಬ ಫಿಕ್ಷನ್ ಕ್ಯಾರೆಕ್ಟರ್ಗಳು ರಾತ್ರೋರಾತ್ರಿ ಎಲ್ಲಿ ಹೋದರು ಎಂದು ಒಮ್ಮೆ ಸಿಟಿ ರವಿ ಅವರನ್ನು ವಿಚಾರಿಸಿ , ಬಿಜೆಪಿ ನಾಯಕರ ನಕಲಿತನ, ಸುಳ್ಳು, ಆತ್ಮವಂಚನೆ, ಡೋಂಗಿತನ ಎಲ್ಲವಕ್ಕೂ ಮೋದಿಯವರೇ ಪ್ರೇರಣೆಯೇ? ಎಂದು ಟ್ವೀಟ್ ಮಾಡಿದೆ.
ಪಾಪಮೊಚನಿ ಏಕಾದಶಿ ಸೂರ್ಯೋದಯ: 06.25 AM, ಸೂರ್ಯಾಸ್ತ : 06.30 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಯಣ ತಿಥಿ: ಇವತ್ತು ಏಕಾದಶಿ 11:13 AM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಉತ್ತರ ಆಷಾಢ 02:46 AM ತನಕ ನಂತರ ಶ್ರವಣ ಯೋಗ: ಇವತ್ತು ಪರಿಘ 03:33 AM ತನಕ ನಂತರ ಶಿವ 11:54 PM ತನಕ ನಂತರ ಸಿದ್ದಿ ಕರಣ: ಇವತ್ತು ಬವ 12:42 AM ತನಕ ನಂತರ ಬಾಲವ 11:13 AM ತನಕ ನಂತರ ಕೌಲವ 09:41 PM ತನಕ ನಂತರ ತೈತಲೆ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 03.05 PM to 04.31 PM ಅಭಿಜಿತ್ ಮುಹುರ್ತ: ಮ.12:00 ನಿಂದ ಮ.12:48 ವರೆಗೂ ನಿಮ್ಮ…
ಹೊಸದಿಲ್ಲಿ: ಕಳೆದ ಮೂರು ವರ್ಷಗಳಲ್ಲಿ ಸಾಕಷ್ಟು ಏರಿಳಿತಗಳನ್ನು ಅನುಭವಿಸಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಎಲ್ಲಾ ಸ್ವರೂಪದಲ್ಲಿ ಫಾರ್ಮ್ ಮರಳಿದ್ದು, ಎದುರಾಳಿ ತಂಡಗಳಿಗೆ ಭೀತಿ ಉಂಟಾಗಿದೆ ಎಂದು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಪಾಲ್ ಕಾಲಿಂಗ್‌ವುಡ್ ಎಚ್ಚರಿಕೆ ನೀಡಿದ್ದಾರೆ. 2019ರ ಡಿಸೆಂಬರ್ ತಿಂಗಳಲ್ಲಿ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದಿದ್ದ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೊನೆಯ ಶತಕ ಸಿಡಿಸಿದ್ದರು. ಇದಾದ ಬಳಿಕ ಅವರು ಸತತ ಮೂರು ವರ್ಷಗಳ ಕಾಲ ಮೂರಂಕಿ ವೈಯಕ್ತಿಕ ಮೊತ್ತ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು ಹಾಗೂ ಮೂರೂ ಸ್ವರೂಪದ ನಾಯಕತ್ವವನ್ನು ಬಿಟ್ಟುಕೊಟ್ಟಿದ್ದರು. ಆದರೆ, ಕಳೆದ ವರ್ಷ ಏಷ್ಯಾ ಕಪ್ ಟೂರ್ನಿಯಲ್ಲಿ ಅಫಘಾನಿಸ್ತಾನ ವಿರುದ್ಧ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, ಬಳಿಕ ಏಕದಿನ ಕ್ರಿಕೆಟ್‌ನಲ್ಲಿಯೂ ಹಲವು ಶತಕಗಳನ್ನು ಸಿಡಿಸಿದ್ದರು. ಆದರೆ, ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗಳಲ್ಲಿ…
ನವದೆಹಲಿ: ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಅಮಿತ್ ಶಾ ಅವರು ರಾಮ್ ಚರಣ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಅವರಿಗೆ ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಿದರು. ರಾಮ್ ಚರಣ್ ಅವರು ಶೀಘ್ರದಲ್ಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಎಸ್ ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ತೆಲುಗು ಸಿನಿಮಾದ ಜನಪ್ರಿಯ ‘ನಾಟು ನಾಟು’ ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ.
ಬೆಂಗಳೂರು: ವಾಹನಗಳ ಮೇಲಿನ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಇಂದೇ ಅಂತ್ಯವಾಗಲಿದೆ. ಶುಕ್ರವಾರ ಅಂದರೆ ನಿನ್ನೆ ರಾಜಧಾನಿಯಲ್ಲಿ 36 ಸಾವಿರ ಪ್ರಕರಣಗಳಿಂದ 1.07 ಕೋಟಿ ಬಾಕಿ ದಂಡ ಸಂಗ್ರಹವಾಗಿದೆ. ಇದರೊಂದಿಗೆ ಕಳೆದ 14 ದಿನಗಳಲ್ಲಿ 3.58 ಲಕ್ಷ ಪ್ರಕರಣಗಳಿಂದ ಒಟ್ಟು 10.37 ಕೋಟಿ ದಂಡ ಸಂಗ್ರಹವಾಗಿದೆ. ಶೇ.50ರ ರಿಯಾಯಿತಿ ಶನಿವಾರ ಅಂತ್ಯವಾಗುವ ಹಿನ್ನೆಲೆಯಲ್ಲಿ ಎರಡರಿಂದ ಮೂರು ಕೋಟಿ ರು. ದಂಡ ಸಂಗ್ರಹವಾಗುವ ಸಾಧ್ಯತೆಯಿದೆ. ಕಳೆದ ಬಾರಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ದಂಡ ಪಾವತಿಗೆ ಮುಂದಾದ ಪರಿಣಾಮ ಕೇವಲ 9 ದಿನಗಳಲ್ಲಿ 43.35 ಲಕ್ಷ ಪ್ರಕರಣಗಳಿಂದ ಬರೋಬ್ಬರಿ 126.87 ಕೋಟಿ ದಂಡ ಸಂಗ್ರಹವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಗಂಡ ಹೆಂಡತಿ ಸಂಬಂಧ ದೇವರು ಬೆಸೆದ ಬಂಧ ಒಂದು ಗಂಡಿಗೆ ಈ ಹೆಣ್ಣು , ಹೆಣ್ಣಿಗೆ ಈ ಗಂಡು ಅಂತ ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡಿರ್ತ್ತಾರೆ ಒಟ್ಟಾರೆಯಾಗಿ ಹೇಳೋದಾದ್ರೆ ಒಂದು ಮದುವೆಯ ಸಂಕೋಲೆಯನ್ನು ದೇವ್ರೆ ಕೂಡಿಸಿರ್ತ್ತಾರೆ .. ಹೀಗಿರುವಾಗ ಆ ಒಂದು ಗಂಡು ಹೆಣ್ಣಿನ ದಾಂಪತ್ಯ ಜೀವನ ಹೇಗಿರ್ಬೇಕು ಅನ್ನೋದನ್ನು ಕೆಲವೊಂದು ಉದಾಹರಣೆಯ ಮೂಲಕ ತಿಳಿಯೋಣ . ಮೊದಲಿಗೆ ಮದುವೆಯ ವಿಚಾರದಲ್ಲಿ ನಾವು ಮತ್ತು ನಮ್ಮ ಮನಸ್ಸು ಸ್ಥಿರವಾಗಿರಬೇಕು ಮುಂದಿನ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ನನಗೆ ಗಂಡನಾಗಿ ಬರುವ ವ್ಯಕ್ತಿ ಅಥವಾ ಹೆಂಡತಿಯಾಗಿ ಬರುವ ವ್ಯಕ್ತಿ ನಮಗೆ ಸರಿಹೊಂದುತ್ತಾರ ಅಥವಾ ನನ್ನ ಒಂದು ಸ್ಟೇಟಸ್ ಗೆ ಸಮನಾಗಿದ್ದಾರ ಅನ್ನೋದನ್ನ ಯೋಚನೆ ಮಾಡದೇ ಮುಂದಿನ ದಿನಗಳಲ್ಲಿ ನನ್ನ ಜೀವನ ಇವರೊಂದಿಗೆ ನಡೆಸುವ ಹಾದಿಯಾಗಿದ್ದು ಆ ನಡಿಗೆಯಲ್ಲಿ ಅಡ್ದ ಬರುವಂತಹ ಅಥವಾ ಕಾಲಿಗೆ ಸಿಗುವಂತಹ ಕಲ್ಲು ..ಮುಳ್ಳು ..ಹಳ್ಳಕೊಳ್ಳಗಂತಹ ಕಷ್ಟ ತೊಂದರೆಗಳಿಂದ ನನ್ನ ಕೈ ಹಿಡಿದು ನಡೆಸುತ್ತಾರೆ ಹಾಗೂ ಎಂತಹ ಸನ್ನಿಗ್ಧ ಪರಿಸ್ಥಿತಿಯಲ್ಲೂ…
ಲಖನೌ: ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ. ಗುರುವಾರ ಮಧ್ಯಾಹ್ನ ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿತ್ತು. ಎರಡನೇ ದಿನವೂ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಅಧಿಕೃತ ಮೂಲಗಳ ಪ್ರಕಾರ, ಇಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು, ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಘಟನೆ ನಡೆದ ಸ್ಥಳಕ್ಕೆ ರಾಜ್ಯ ಪಶುಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಭೇಟಿ ನೀಡಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂಭಾಲ್ ಜಿಲ್ಲಾ ತೋಟಗಾರಿಕಾ ಅಧಿಕಾರಿಯನ್ನು…