ಬೆಂಗಳೂರು: ಮಾ.17. ಕನ್ನಡ ನಾಡಿನ ಜನಪ್ರಿಯ ನಟರಾದ ಶ್ರೀ ಪುನೀತ್ ರಾಜಕುಮಾರ್ ಅವರು ಚಲನಚಿತ್ರ ಜೊತೆಗೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಸಾಧನೆಯ ಹಾದಿಯಲ್ಲಿ ನಡೆಯೋಣ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿಯ ಕಾವೇರಿನಗರದಲ್ಲಿ ನಡೆದ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ 49ನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪುನೀತ್ ರಾಜಕುಮಾರ್ ಅವರು ಬೆಟ್ಟದ ಹೂ, ಅಪ್ಪು, ಮಿಲನ, ಆಕಾಶ್, ಅರಸು, ರಾಜಕುಮಾರ ಸೇರಿದಂತೆ ಅತ್ಯುತ್ತಮ ಚಲನಚಿತ್ರಗಳಲ್ಲಿ ಅಭಿನಯಿಸಿ ತಮ್ಮ ಕೋಟ್ಯಾಂತರ ಅಭಿಮಾನಿಗಳಿಗೆ ಮನೋರಂಜನೆಯ ರಸದೌತಣವನ್ನು ಉಣಬಡಿಸಿದ್ದಾರೆ ಎಂದರು. ಪುನೀತ್ ರಾಜಕುಮಾರ್ ಅವರು ಇಂದು ನಮ್ಮ ನಡುವೆ ಇಲ್ಲದೆ ಇರಬಹುದು ಆದರೆ ಅವರ ನೆನಪುಗಳು ಸದಾ ನಮ್ಮೊಂದಿಗೆ ಇರುತ್ತವೆ. ಸಿನಿಮಾ, ಸಮಾಜಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರೆ ತಪ್ಪಿಲ್ಲ. ಅವರ…
Author: Prajatv Kannada
ಲಂಡನ್: ವಿದೇಶಗಳ ಮೇಲೆ ಚೀನಾ ಬೇಹುಗಾರಿಕೆಯ ಕುತಂತ್ರ ನಡೆಸುತ್ತಿದೆ ಎನ್ನುವ ಆರೋಪಗಳ ನಡುವೆಯೇ ದೇಶದ ಭದ್ರತಾ ಹಿತದೃಷ್ಟಿಯ ಕಾರಣ ನೀಡಿ, ಬ್ರಿಟನ್ ಸರಕಾರವು ಚೀನಾ ಮೂಲದ ಆ್ಯಪ್ ಟಿಕ್-ಟಾಕ್ ಬಳಕೆಯನ್ನು ನಿಷೇಧಿಸಿದೆ. ಸರಕಾರದ ಫೋನ್‌ಗಳು, ಸಾಧನಗಳಲ್ಲಿ ಟಿಕ್-ಟಾಕ್ ಆ್ಯಪ್ ಬಳಕೆಯನ್ನು ನಿಷೇಧಿಸಿರುವುದಾಗಿ ಸಂಪುಟ ಸಚಿವ ಒಲಿವರ್ ಡೋವxನ್ ಬ್ರಿಟನ್ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಈ ಮೂಲಕ ಟಿಕ್-ಟಾಕ್ ನಿರ್ಬಂಧಿಸಿರುವ ದೇಶವಾದ ಭಾರತ, ಅಮೆರಿಕ, ಐರೋಪ್ಯ ಒಕ್ಕೂಟ, ಕೆನಡಾದ ಸಾಲಿಗೆ ಬ್ರಿಟನ್ ಕೂಡ ಸೇರ್ಪಡೆಗೊಂಡಿದೆ. ಸರಕಾರಿ ಕೆಲಸಗಳಿಗೆ ಸಂವಹನವಾಗಿ ಬಳಸುತ್ತಿರುವ ಸಾಧನಗಳಿಂದ ಸರಕಾರದ ಮಾಹಿತಿಗಳನ್ನು ಆ್ಯಪ್ ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳ ಹಿನ್ನೆಲೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪುದೀನ ಗುಣಲಕ್ಷಣಗಳು ಅಲರ್ಜಿ ಮತ್ತು ಆಸ್ತಮಾವನ್ನು ನಿವಾರಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಪುದೀನ ಎಲೆಗಳನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ಪುದೀನ ಸೇವನೆಯಿಂದ ಹಲವು ಪ್ರಯೋಜನಗಳಿವೆ. ಪುದೀನ ಸೇವನೆಯ ಪ್ರಯೋಜನಗಳ ಬಗ್ಗೆ ತಿಳಿಯೋಣ ..! ಪುದೀನ ಅಲರ್ಜಿಯನ್ನು ನಿವಾರಿಸುತ್ತದೆ. ಪುದೀನ ಉಸಿರಾಟದ ತೊಂದರೆ ನಿವಾರಿಸುತ್ತದೆ. ಅಡುಗೆಯಲ್ಲಿ ಪುದೀನ ಸೇರಿಸುವುದರಿಂದ ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾ ನಾಶವಾಗುತ್ತದೆ. ಮಳೆಗಾಲ ಮತ್ತು ಚಳಿಗಾಲದಲ್ಲಿ ಪುದೀನ ಎಲೆಗಳನ್ನು ಸೇವಿಸುವುದರಿಂದ ಶೀತ ಮತ್ತು ಗಂಟಲು ನೋವು ನಿವಾರಣೆಯಾಗುತ್ತದೆ. ಪುದೀನದಲ್ಲಿರುವ ವಿಟಮಿನ್ ಸಿ, ಡಿ, ಇ ಮತ್ತು ಬಿ ಹಾಗೂ ಕ್ಯಾಲ್ಸಿಯಂ ಮತ್ತು ರಂಜಕವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿದಿನ ಪುದೀನ ಎಲೆಗಳ ಚಹಾ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸಬಹುದು. ಚರ್ಮದಲ್ಲಿ ತುರಿಕೆ ಸಮಸ್ಯೆ ಇದ್ದಾಗ, ಪುದೀನ ಎಲೆಗಳನ್ನು ತೊಳೆದು ತುರಿಕೆ ಇರುವ ಜಾಗದಲ್ಲಿ ಉಜ್ಜುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ. ಕುದಿಯುತ್ತಿರುವ ನೀರಿಗೆ ಪುದೀನ ಎಲೆಗಳನ್ನು ಹಾಕಿ, ಸ್ವಲ್ಪ ಉಪ್ಪು ಬೆರೆಸಿ ಕಷಾಯ ತಯಾರಿಸಿ ಸೇವಿಸಿದರೆ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಮೊಡವೆಗಳಿಂದಮುಕ್ತಿಪುದೀನಾ…
ವಾಷಿಂಗ್ಟನ್: ಅಮೆರಿಕದಲ್ಲಿ ಪ್ರತಿಭಾವಂತ ಯುವಕರಿಗೆ ನೀಡುವ ಪ್ರತಿಷ್ಠಿತ ಸೈನ್ಸ್ ಟ್ಯಾಲೆಂಟ್ ಸರ್ಚ್ ಪ್ರಶಸ್ತಿಗೆ ಭಾರತೀಯ ಮೂಲದ ಯುಎಸ್ ನಿವಾಸಿ, 17 ವರ್ಷದ ನೀಲ್ ಮೌದ್ಗಲ್ ಪಾತ್ರರಾಗಿದ್ದಾರೆ. ಆರ್‌ಎನ್‌ಎ ಅಣುಗಳ ರಚನೆಯನ್ನು ಅತ್ಯಂತ ಕ್ಷಿಪ್ರವಾಗಿ ಮತ್ತು ನಿಖರವಾಗಿ ಊಹಿಸುವಂತ ಕಂಪ್ಯೂಟರ್ ಮಾದರಿಯನ್ನು ಅಭಿವೃದ್ಧಿ ಪಡಿಸಿರುವ ಹಿನ್ನೆಲೆಯಲ್ಲಿ ಮಿಚಿಗನ್ ನಿವಾಸಿಯಾಗಿರುವ ನೀಲ್‌ಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯ ಭಾಗವಾಗಿ 2.50 ಲಕ್ಷ ಡಾಲರ್ ಗೌರವಧನವನ್ನೂ ನೀಡಲಾಗಿದೆ. ನೀಲ್ ಅಭಿವೃದ್ಧಿ ಪಡಿಸಿರುವ ಮಾದರಿಯು ಹಲವು ರೋಗಗಳನ್ನು ನಿಖರವಾಗಿ ಪತ್ತೆಹಚ್ಚಿ, ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಆರ್ಸಿಬಿ ತಂಡವು ಇಂಗ್ಲೆಂಡ್ ಆಲ್ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇತ್ತ ವಿಲ್ ಜಾಕ್ಸ್ ಐಪಿಎಲ್ನಿಂದ ಹೊರಬೀಳುತ್ತಿದ್ದಂತೆ ಆರ್ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್ವೆಲ್ ಅವರನ್ನು ಆಯ್ಕೆ ಮಾಡಲು ಆರ್ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್…
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಸಿಡಿಸಿರುವ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿಯಲ್ಲಿದ್ದಾರೆಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಭವಿಷ್ಯ ನುಡಿದಿದ್ದಾರೆ. ಕಳೆದ 11 ವರ್ಷಗಳ ಹಿಂದೆ ಮುಷ್ಫಿಕರ್ ರಹೀಮ್ ಅವರ ನಾಯಕತ್ವದ ಬಾಂಗ್ಲಾದೇಶ ವಿರುದ್ಧ ಮೀರ್‌ಪುರ್‌ನಲ್ಲಿ ನಡೆದಿದ್ದ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿ ಜೀವನದ 100ನೇ ಶತಕವನ್ನು ಪೂರ್ಣಗೊಳಿಸಿದ್ದರು. ಆ ಮೂಲಕ ವಿಶ್ವ ದಾಖಲೆ ಬರೆದಿದ್ದರು. ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ 75ನೇ ಅಂತಾರಾಷ್ಟ್ರೀಯ ಶತಕವನ್ನು ಸಿಡಿಸಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಇನ್ನಷ್ಟು ಶತಕಗಳನ್ನು ಸಿಡಿಸುವ ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆಂದು ಶೋಯೆಬ್ ಅಖ್ತರ್ ತಿಳಿಸಿದ್ದಾರೆ. “ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿದ್ದಾರೆ, ಇದರಲ್ಲಿ ಹೊಸದು ನನಗೆ…
ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣದ (Rape And Murder) ಅಪರಾಧಿಗೆ ವಿಶೇಷ ನ್ಯಾಯಾಲಯ (Court) ಮರಣದಂಡನೆ (Death Sentence) ವಿಧಿಸಿದೆ. ವ್ಯಕ್ತಿಯು 9 ವರ್ಷದ ಬಾಲಕಿಯ (Minor Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಗಾಜಿಯಾಬಾದ್ ಪೋಕ್ಸೋ ನ್ಯಾಯಾಲಯವು ( Ghaziabad POCSO Court) ಶಿಕ್ಷೆಯನ್ನು ಪ್ರಕಟಿಸಿದೆ. ಘಟನೆ ನಡೆದ ಸುಮಾರು 6 ತಿಂಗಳ ನಂತರ ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302 (ಮರಣದಂಡನೆ), 363 (ಅಪಹರಣ) ಮತ್ತು 376 (ಅತ್ಯಾಚಾರ) ರ ಅಡಿಯಲ್ಲಿ ಶಿಕ್ಷೆ ವಿಧಿಸಿದೆ ಎಂದು ಗಾಜಿಯಾಬಾದ್ ಗ್ರಾಮಂತರದ ಡಿಸಿಪಿ ರವಿ ಕುಮಾರ್ ಹೇಳಿದ್ದಾರೆ. 2022ರ ಆ. 18ರಂದು ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿಯು ಶವವಾಗಿ ಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಅದೇ ಗ್ರಾಮದ ವ್ಯಕ್ತಿಯನ್ನು ಬಂಧಿಸಿದ್ದರು.
ಪಾಟ್ನಾ: 20 ವರ್ಷದ ಯುವಕನೊಬ್ಬನನ್ನು 100 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದ ಘಟನೆ ಬಿಹಾರ (Bihar) ದಲ್ಲಿ ನಡೆದಿದೆ. ಮೃತನನ್ನು ಚಿಂಟು ಎಂದು ಗುರುತಿಸಲಾಗಿದೆ. ಈತ ಶವ ಪೊದೆಯೊಂದರಲ್ಲಿ ಪತ್ತೆಯಾಗಿದೆ. ಚಿಂಟುವಿನ ಮುಖ ಹಾಗೂ ದೇಹದ ಮೇಲೆ ಚಾಕುವಿನಿಂದ ತಿವಿದ ಗುರುತುಗಳಿವೆ. ಕಳೆದ ಮಂಗಳವಾರದಿಂದ ಚಿಂಟು ಮನೆಯಿಂದ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಆತನ ಮನೆಯವರು ನಾಪತ್ತೆ ಪ್ರಕರಣ ಕೂಡ ದಾಖಲಿಸಿದ್ದರು. ಆದರೆ ಎಲ್ಲಿ ಹುಡುಕಾಟ ನಡೆಸಿದರೂ ಚಿಂಟು ಪತ್ತೆಯಾಗಿರಲಿಲ್ಲ. ಇದೀಗ ಪೊದೆಯೊಂದರಲ್ಲಿ ಆತ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಪೊದೆಗೆ ಬಿಸಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆಕಾರಣವೇನು..?: ಹೋಳಿ ಆಚರಣೆ ಸಂದರ್ಭದಲ್ಲಿ ಚಿಂಟು ಹಾಗೂ ನೆರೆಮನೆಯ ರಾಮ ಮಹತೋ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಹೀಗಾಗಿ ಆತನೇ ಚಿಂಟುವನ್ನು ಕೊಲೆ ಮಾಡಿದ್ದಾನೆ ಎಮದು ಸಹೋದರ ಗಂಭೀರ ಆರೋಪ ಮಾಡಿದರು. ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ಚಿಂಟುವಿಗೆ ತಿಂಗಳ ಹಿಂದೆಯಷ್ಟೇ ಮದುವೆಯಾಗಿದೆ. ಘಟನೆ ಸಂಬಂಧ ಸ್ಥಳೀಯರು ರಸ್ತೆ ತಡೆ ನಡೆಸಿ…
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರನ್ನು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ (Chikkamagaluru) ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿಯಿಂದ ಹೈಡ್ರಾಮಾ ನಡೆದಿದೆ. ಮೂಡಿಗೆರೆಯಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ (MP Kumaraswamy) ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಬೇಡವೇ ಬೇಡ. ಹೊಸ ಮುಖಕ್ಕೆ ಟಿಕೆಟ್ ಕೊಡಿ ಅಂತಾ ಕೂಗಾಟ ನಡೆಸಿದ ನೂರಾರು ಕಾರ್ಯಕರ್ತರು ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಸ್‍ವೈ ಅವರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ 1,000ಕ್ಕೂ ಅಧಿಕ ಬಿಜೆಪಿ ಮುಖಂಡರು ಹಾಗೂ ನಾಯಕರು ಭಾಗಿಯಾಗಿದ್ದರು. ಈ ವೇಳೆ ಶಾಸಕ ಕುಮಾರಸ್ವಾಮಿಯನ್ನು ಪೊಲೀಸರು ಬೇರೆ ಕಡೆ ಕರೆದೊಯ್ದಿದ್ದಾರೆ. ಘಟನೆ ಬೆನ್ನಲ್ಲೇ ಸಿಟ್ಟಾದ ಮಾಜಿ ಸಿಎಂ ಬಿಎಸ್‍ವೈ ರೋಡ್ ಶೋ ರದ್ದುಗೊಳಿಸಿ, ಹೆಲಿಪ್ಯಾಡ್‍ಗೆ ಹೋಗಿದ್ದಾರೆ. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ…
ಕೋಲಾರ: ಜೆಡಿಎಸ್ ಪಕ್ಷ ಬಲಿಷ್ಟವಾಗಿ ಬೆಳೆಯುತ್ತಿದೆ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಜಯಭೇರಿ ಗಳಿಸುತ್ತದೆ ಎಂದು ಬಂಗಾರಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಅವ್ರು ಹೇಳಿದ್ರು. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ್ರು ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ಹಾಗಿಲ್ಲ ಕ್ಷೇತ್ರದ ಜನರು ಒಂದು ಪರಿವರ್ತನೆಯನ್ನು ಬಯಸುತ್ತಿದ್ದಾರೆ ಜೆಡಿ ಎಸ್ ಪಕ್ಷ ಗೆದ್ದೆ ಗೆಲ್ಲುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು. ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಈಡೇರಿಸುತ್ತೆನೆ ಯುವಕರು ಕೆಲಸಕ್ಕಾಗಿ ಬೆಂಗಳೂರಿಗೆ ತೆರಳುತ್ತಿದ್ದಾರೆ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಯಾಗುತ್ತಾರೆ ಕ್ಷೇತ್ರಕ್ಕೆ ಇಂಡಸ್ಟ್ರೀಸ್ ನ್ನು ತಂದು ಯುವಕರಿಗೆ ಉದ್ಯೋಗಗವನ್ನು ಸೃಷ್ಟಿ ಮಾಡಲಾಗುತ್ತದೆ ಎಂದು ತಿಳಿಸಿದ್ರು. ಕಾಂಗ್ರೆಸ್ ಪಕ್ಷಕ್ಕೆ ಭಯ ಸೃಷ್ಟಿಯಾಗಿದೆ ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ ಅಪಪ್ರಚಾರ ಮಾಡುವುದರಿಂದ ನಮ್ಮ ಪಕ್ಷಕ್ಕೆ ಲಾಭವಾಗಲಿದೆ ಕೆಲಸ ಮಾಡಲಿಕ್ಕೆ ನಾವು ಸದಾ…