ಹೈದರಾಬಾದ್: ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ವೈಎಸ್‍ಆರ್ ತೆಲಂಗಾಣ ಪಕ್ಷದ (YSR Telangana Party) ನಾಯಕಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ (Jagan Mohan Reddy) ಸಹೋದರಿ ವೈ.ಎಸ್ ಶರ್ಮಿಳಾ (Y.S Sharmila) ಅವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರ ನಡೆಸಿದ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‍ಐಟಿ (SIT) ಕಚೇರಿಗೆ ತೆರಳುತ್ತಿದ್ದಾಗ ಶರ್ಮಿಳಾ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದ ಶರ್ಮಿಳಾ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸದಂತೆ ಮನವರಿಕೆ ಮಾಡಲು ತೆರಳಿದ ಪೊಲೀಸರ ಮೇಲೆ ಅವರು ಹಲ್ಲೆ ನಡೆಸಿದ್ದಾರೆ. ತೆಲಂಗಾಣದಲ್ಲಿ ಸ್ವತಂತ್ರವಾಗಿ ರಾಜಕೀಯ ಗುರುತನ್ನು ಕಟ್ಟಿಕೊಳ್ಳಲು ಶ್ರಮಿಸುತ್ತಿರುವ ಶರ್ಮಿಳಾ ಅವರು ನಿರಂತರವಾಗಿ ಪತ್ರಿಕೆ ಸೋರಿಕೆ ವಿಷಯವನ್ನು ಎತ್ತುತ್ತಿದ್ದಾರೆ. ಕಳೆದ ತಿಂಗಳು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹೈದರಾಬಾದ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಶರ್ಮಿಳಾ ಇತ್ತೀಚೆಗೆ ತೆಲಂಗಾಣದಾದ್ಯಂತ ಮೆರವಣಿಗೆ ನಡೆಸಿದ್ದರು. ಈ…
Author: Prajatv Kannada
ನವದೆಹಲಿ: ಮಹಿಳಾ ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಇತರ ತರಬೇತುದಾರರ ವಿರುದ್ಧ ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು ಈಗ ಮತ್ತೆ ಅಖಾಡಕ್ಕಿಳಿದಿದ್ದಾರೆ. ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎಂದು ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರದ ಸಮಿತಿಯ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸದಿರುವುದು ಹತಾಶೆಯಾಗಿದೆ. ಮಹಿಳಾ ಕುಸ್ತಿಪಟುಗಳ ಹೇಳಿಕೆಯನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ಇದು ಸೂಕ್ಷ್ಮ ವಿಷಯವಾಗಿದೆ. ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ. ದೂರುದಾರರ ಹೆಸರುಗಳನ್ನು ಸೋರಿಕೆ ಮಾಡಬಾರದು ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದಾರೆ. ಬ್ರಿಜ್ಭೂಷಣ್ ಅವರನ್ನು ಬಂಧಿಸುವವರೆಗೂ ನಾವು ಇಲ್ಲಿಂದ…
ಭೋಪಾಲ್: ಕಳೆದ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಿದ್ದ 12 ಚೀತಾಗಳ (Cheetah) ಪೈಕಿ ಒಂದು ಚೀತಾ ಸಾವನ್ನಪ್ಪಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಹೆಣ್ಣು ಚೀತಾ ಮಾರ್ಚ್ ತಿಂಗಳಲ್ಲಿ ಮೃತಪಟ್ಟಿತ್ತು. ಇದೀಗ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ ಉದಯ್ ಹೆಸರಿನ ಗಂಡು ಚೀತಾ ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಮಧ್ಯಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್ ಚೌಹಾಣ್ ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉದಯ್ ಹೆಸರಿನ ಚೀತಾ ಭಾನುವಾರ ಬೆಳಗ್ಗೆ ಅಸ್ವಸ್ಥಗೊಂಡಿತ್ತು. ಇದನ್ನು ಗಮನಿಸಿದ ಅರಣ್ಯಾಧಿಕಾರಿಗಳ ತಂಡ ಅದನ್ನು ವೈದ್ಯಕೀಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲು ಪ್ರಾರಂಭಿಸಿತ್ತು. ಆದರೆ ಸಂಜೆ 4 ಗಂಟೆ ವೇಳೆಗೆ ಚಿಕಿತ್ಸೆ ವೇಳೆ ಸಾವನ್ನಪ್ಪಿದೆ. ಸೋಮವಾರ ಪಶುವೈದ್ಯಾಧಿಕಾರಿಗಳ ತಂಡ ಮರಣೋತ್ತರ ಪರೀಕ್ಷೆ ನಡೆಸಲಿದೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ…
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಕೇದಾರನಾಥ ದೇವಾಲಯವನ್ನು (Kedarnath Temple) ಯಾತ್ರಾರ್ಥಿಗಳಿಗೆ ತೆರೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ಯಾತ್ರೆ ಆರಂಭವಾಗುವುದಕ್ಕೂ ಮುನ್ನವೇ ಅವಘಡವೊಂದು ಸಂಭವಿಸಿದೆ. ದೇವಾಲಯದ ಸಿದ್ಧತೆ ಪರಿಶೀಲನೆಗೆ ತೆರಳಿದ್ದ ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್‌ನ (Helicopter) ರೆಕ್ಕೆ ಬಡಿದು ಮೃತಪಟ್ಟಿದ್ದಾರೆ. ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ (JMVN) ಹೆಲಿಪ್ಯಾನ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಅಧಿಕಾರಿಯನ್ನು ಉತ್ತರಾಖಂಡದ ನಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (UCADA) ಹಣಕಾಸು ನಿಯಂತ್ರಕ ಅಮಿತ್ ಸೈನಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಹೆಲಿಕಾಪ್ಟರ್‌ನ ಹಿಂದಿನ ಭಾಗದ ರೆಕ್ಕೆ ಅಮಿತ್ ಸೈನಿ ಅವರ ಕತ್ತನ್ನು ಸೀಳಿದೆ. ಇದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಘಟನೆಯ ಹಿಂದಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಸೇನಿ ಅವರು ಹೆಲಿಕಾಪ್ಟರ್‌ನ ಹಿಂಬದಿಯ ರೆಕ್ಕೆಯ ಬಳಿಗೆ ಏಕೆ ಹೋದರು ಎಂಬುದು ತಿಳಿದುಬಂದಿಲ್ಲ. ಅವರು ಸೆಲ್ಫಿ ತೆಗೆಯಲು ಮುಂದಾಗಿದ್ದಾಗ ದುರ್ಘಟನೆ ನಡೆದಿದೆ ಎಂಬುದು ವದಂತಿಯಾಗಿದೆ ಎಂದು ಎಸ್‌ಪಿ ವಿಶಾಖ್ ಅಶೋಕ್ ಭದನೆ ತಿಳಿಸಿದ್ದಾರೆ.
ಜಲಗಾಂವ್: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ(Government of Maharashtra) ‘ಡೆತ್ ವಾರಂಟ್’ ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್(Sanjay Raut) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು. ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ 16(Shiv Sena) ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಬಾಕಿ ಉಳಿದಿರುವ ವಿಚಾರವಾಗಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ರಾಜ್ಯಸಭಾ ಸದಸ್ಯರು ಉಲ್ಲೇಖಿಸಿದರು. ಈಗಿರುವ ಮುಖ್ಯಮಂತ್ರಿ ಮತ್ತು ಅವರ 40 ಶಾಸಕರ ಸರ್ಕಾರ 15-20 ದಿನಗಳಲ್ಲಿ ಪತನವಾಗಲಿದೆ. ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಇದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದು ಈಗ ನಿರ್ಧಾರವಾಗಲಿದೆ ಎಂದು ರಾವುತ್ ಹೇಳಿದ್ದಾರೆ.
ನವದೆಹಲಿ: ಪುಲ್ವಾಮಾ ದಾಳಿ (Pulwama attack)ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಖಾಸಗಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ (Amit Shah) ಅವರು, ಜಮ್ಮು ಮತ್ತು ಕಾಶ್ಮೀರದ (Jammu and Kashmir)ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ‘ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್(Satyapal Mallick) ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ’ ಎಂದು ಹೇಳಿದ್ದಾರೆ. ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅಗತ್ಯವೂ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ. ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ.…
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ(corona) ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ(india) ಕಳೆದ 24 ಗಂಟೆಗಳಲ್ಲಿ 6,904 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,98,893ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,345ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 65,683ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,43,01,865ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 78,342 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿ ಸಲಾಗಿದ್ದು, ಈವರೆಗೂ 92,54,97,040 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ…
ಬೆಂಗಳೂರು: ಇಬ್ಬರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ (Bangalore) ಬೆಂಗಳೂರಿನ ಗಿರಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರ ಮೂಲದ ಸೈಯದ್ ಬಾಷ, ಶೇಖ್ ಅಯೂಬ್ ಬಂಧಿತರು ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಸೈಯದ್ ಬಾಷಾ ದೇಹದಾರ್ಡ್ಯ (Body builder) ಪಟುವಾಗಿದ್ದ. ನಂತರ ಶೇಖ್ ಅಯೂಬ್ ಜೊತೆ ಸೇರಿ ಕಳ್ಳತನದ ಹಾದಿ ಹಿಡಿದಿದ್ದ. ಇನ್ನೂ ಆಂಧ್ರದಲ್ಲಿ ಬಂಧಿತರ ಮೇಲೆ 32 ಪ್ರಕರಣ ದಾಖಲಾಗಿರುವುದು ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಜೈಲಿಗೆ ಹೋದರೂ ಬುದ್ದಿ ಕಲಿಯದ ಆರೋಪಿಗಳು, ಬೇಲ್ ಮೇಲೆ ಹೊರ ಬಂದು ಬೆಂಗಳೂರಿನಲ್ಲಿ (Bangalore)ಕೈಚಳಕ ತೋರುತ್ತಿದ್ದರು. ಐಷಾರಾಮಿ ಜೀವನ ನಡೆಸಲು(Theft) ಸರಗಳ್ಳತನಕ್ಕೆ ಇಳಿದಿದ್ದರು. ಬೈಕಲ್ಲಿ ಬಂದು ಸರ ಎಗರಿಸಿ ಪರಾರಿಯಾಗುತ್ತಿದ್ದರು. ಅದೇ ರೀತಿ ಕಳೆದ ತಿಂಗಳು ಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ್ದರು. ಇದೇ ರೀತಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದರು. ಇದೀಗ ಆರೋಪಿಗಳು ಅರೆಸ್ಟ್ ಮಾಡಿದ್ದು, ಆರೋಪಿಗಳಿಂದ 6 ಲಕ್ಷ ಮೌಲ್ಯದ ಚಿನ್ನದ ಸರಗಳು,ಕೃತ್ಯಕ್ಕೆ ಬಳಸಿದ್ದ ಎರಡು…
ಬೆಂಗಳೂರು: ಟ್ರಸ್ಟ್ ಜಾಗದ ವಿಚಾರವಾಗಿ ಟ್ರಸ್ಟಿಗಳಿಗೆ ಜೀವ ಬೆದರಿಕೆ (Life threatening) ಹಾಕಿದ ಗಂಭೀರ ಆರೋಪ ಸುರೇಶ್ ಬಿಎಲ್ ಎಂಬುವವರ ವಿರುದ್ಧ ಕೇಳಿ ಬಂದಿದೆ. ಕುಂಬಾರಪೇಟೆ ಅನ್ನದಾನ ಸಮಿತಿ ಟ್ರಸ್ಟ್(Kumbarpet Annadana Samiti Trust), ಕುಂಬಾರಪೇಟೆ ಆಂಜನೇಯಸ್ವಾಮಿ ಟೆಂಪಲ್ ಬಿಲ್ಡಿಂಗ್ ಸಮಿತಿ ಟ್ರಸ್ಟ್, ಕುಂಬಾರಪೇಟೆ ಅನ್ನದಾನ ಸಮಿತಿ ಕಲ್ಯಾಣ ಮಂದಿರ ಟ್ರಸ್ಟ್ ಜಾಗಕ್ಕಾಗಿ ಜಗಳ ನಡೆದಿದ್ದು, ಸುರೇಶ್ ಬಿಎಲ್ (Suresh BL)ಎಂಬುವವರಿಂದ ಕಟ್ಟಡದ ಬಾಡಿಗೆ ಪಡೆದು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.. ಕೆ ಮುನಿಸ್ವಾಮಿ, ಅನ್ನದಾನ ಸಮಿತಿ ಟ್ರಸ್ಟ್ ಅಧ್ಯಕ್ಷ, ಇತರರಿಂದ ಗಂಭೀರ ಆರೋಪ ಮಾಡಲಾಗಿದೆ. ಬಿಎಲ್ ಸುರೇಶ್ ತಂದೆ ಬಿ ಲಿಂಗಪ್ಪ ಈ ಹಿಂದೆ ಆಂಜನೇಯಸ್ವಾಮಿ ಟೆಂಪಲ್ ಬಿಲ್ಡಿಂಗ್ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಇದನ್ನೆ ನೆಪ ಮಾಡಿಕೊಂಡು ತಾನೇ ಅಧ್ಯಕ್ಷ ಎಂದು ಬಿಂಬಿಸಿಕೊಂಡು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿಂದೆಯೆ ಕೋರ್ಟ್ ಟ್ರಸ್ಟ್ ತಂಟೆಗೆ ಹೋಗಬಾರದು ಎಂದು ಸೂಚಿಸಿದ್ದರು ಕೂಡ ತೊಂದರೆ ಕೊಟ್ಟು ಧಮ್ಕಿ ಹಾಕಿರುವ ಆರೋಪ ಮಾಡಲಾಗಿದೆ.…
ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ(Karnataka Election) ಕೆಲವೇ ದಿನಗಳು ಬಾಕಿ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ (Bangalore) ರೌಡಿ ಶೀಟರ್ ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಾಗಲೇ ನಗರದ ಹಲವೆಡೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು, ಇಂದು ಕೂಡ ಮುಂದುವರಿಸಿದ್ದಾರೆ. ಅದರ ಭಾಗವಾಗಿ ನಗರದ ಪೂರ್ವ ವಿಭಾಗದಲ್ಲಿ ಡಿಸಿಪಿ ಭೀಮಾಶಂಕರ್ ಗುಳೇದ್(DCP Bhimashankar Guled) ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೌಡಿಶೀಟರ್ ಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ದಾಳಿ ವೇಳೆ ಗಾಂಜಾ ಸೇರಿ ಕೆಲ ವಸ್ತುಗಳನ್ನು ಸೀಜ್ ಮಾಡಲಾಗಿದ್ದು, ಚುನಾವಣೆ ಹೊತ್ತಲ್ಲಿ ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನೂ 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಇದ್ದು, ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.