Author: Prajatv Kannada

ಮತ ಪ್ರಚಾರಕ್ಕಿಳಿದ ವಿರೂಪಾಕ್ಷಪ್ಪ ಬಳ್ಳಾರಿ ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿಯಿಂದ ಕ್ಯಾಂಡಲ್ ಕ್ಯಾನ್ವಾಸ್ ಮಾಡಲಾಯಿತು, ದೇವಸ್ಥಾನ ಸೇರಿದಂತೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೀಪ ಹಚ್ಚಿ ಮತಯಾಚನೆ ಮಾಡಿದ ವಿರೂಪಾಕ್ಷಪ್ಪ ಬಳ್ಳಾರಿ, ತಾಲ್ಲೂಕಿನ ಕಲ್ಲೇದೇವರ ತಾಂಡಾದಲ್ಲಿ ವಿಶಿಷ್ಟ ರೀತಿಯ ಗಮನ ಸೇಳದರು. ಬಸವೇಶ್ವರರು ಸಮಾನತೆಯ ಹರಿಕಾರರು ಮತದಾರರ ಬದುಕಿನಲ್ಲಿ ಬೆಳಕನ್ನು ಚೆಲ್ಲುವ ವ್ಯವಸ್ಥೆಯನ್ನು ಮನದಟ್ಟು ಮಾಡುವ ಕಾರ್ಯ ಮಾಡುತ್ತಿದ್ದೇನೆ ಹಿಂದಿನ ಗೆಲುವಿಗಿಂತ ಈ ಬಾರಿ ಹೆಚ್ಚಿನ ಬೆಂಬಲ ಜನ ನೀಡುತ್ತಿದ್ದಾರೆ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗುವ ಮೂಲಕ ಜನಸೇವೆ ಮಾಡುತ್ತನೆ ಎಂದು ಬ್ಯಾಡಗಿ ತಾಲ್ಲೂಕಿನ ಕಲ್ಲೆದೇವರ ತಾಂಡಾದಲ್ಲಿ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು

Read More

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಕ್ಷೇತ್ರದಿಂದ ಹೊರಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಗ್ರಾಮೀಣದಿಂದ ಜಯ ಸಾಧಿಸಲಿ ಎಂದು ಅಭಿಮಾನಿಯೋರ್ವ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿನಯ ಅಭಿಮಾನಿ  ಕಲಘಟಗಿ ಸಾತೋ ಸಹೀದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ…ವಿನಯ್ ಕುಲಕರ್ಣಿ  ಬಾರಿ ಮತಗಳ ಅಂತರದಿಂದ ಈ ಬಾರಿ ಗೆಲುವು ಸಾಧಿಸಲಿ.

Read More

ಬೆಳಗಾವಿ: ನನ್ನ ಮಾತುಗಳನ್ನು ತಿರುಚುತ್ತಲೇ ಇದ್ದಾರೆ. ವೀರಶೈವ ಲಿಂಗಾಯತರನ್ನು (Veerashaiva Lingayats) ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಗೋಕಾಕ್‌ನಲ್ಲಿ ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿ ಆ ರೀತಿಯ ಮಾತನ್ನಾಡುತ್ತಿದ್ದಾರೆ. ಶೆಟ್ಟರ್ ಟಿಕೆಟ್ ಕೈ ತಪ್ಪೋಕೆ ಕಾರಣ ಸಂತೋಷ್ ಅಲ್ಲ ಪ್ರಧಾನಿಗಳು ಎಂಬ ಜೋಶಿ ಹೇಳಿಕೆ ವಿಚಾರಕ್ಕೆ ಶೆಟ್ಟರ್ ಹೇಳೋದು ನಂಬಬೇಕೊ? ಜೋಶಿ ಹೇಳೋದು ನಂಬಬೇಕೊ? ಎಂದು ಪ್ರಶ್ನೆ ಮಾಡಿದರು. ನಾನು ನಂಬೋದು ಶೆಟ್ಟರ್ ಹೇಳೋದನ್ನು. ಜೋಶಿ ಸುಳ್ಳು ಹೇಳ್ತಾನೆ ಎಂದು ಟಾಂಗ್ ನೀಡಿದರು. ಸಮ್ಮಿಶ್ರ ಸರ್ಕಾರ ಪತನ ಮಾಡಿದ ರಮೇಶ್ ಜಾರಕಿಹೊಳಿ ಕ್ಷೇತ್ರಕ್ಕೆ ಬಂದಿದ್ದೀರಿ, ಹೇಗಿದೆ ವಾತಾವರಣ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಕ್ಷೇತ್ರದಲ್ಲಿ ರಮೇಶ್ ವಿರುದ್ಧ ಬಲವಾದ ವಿರೋಧ ಇದೆ. ಅದರಿಂದ ಈ ಬಾರಿ ನಮ್ಮ…

Read More

ಮಂಡ್ಯ: ಅಂಬರೀಶ್ ಮೃತ ದೇಹ ಮಂಡ್ಯಕ್ಕೆ ತಂದ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ವಿರುದ್ಧ ಗರಂ ಆದ ಸಂಸದೆ ಸುಮಲತಾ(Sumalatha Ambareesh), ತುಂಬಾ ಹೇಸಿಗೆ ಅನಿಸುತ್ತೆ ಕುಮಾರಸ್ವಾಮಿ(Kumarswamy)ಯವರ ಈ ರೀತಿ ಮಾತುಗಳು. ಅಂಬರೀಶ್ ಅವರಿಗೆ ಗೌರವ ಸಿಕ್ಕಿದ್ದು ಒಬ್ಬ ನಾಯಕನಿಂದ ಅಲ್ಲ. ರಾಜ್ಯದ ಜನತೆ ಅವರಿಗೆ ಗೌರವ ಸ್ಥಾನಮಾನ ಕೊಟ್ಟಿರುವುದು. ನಾನೇ ನಾನೇ ಎಂದು ಕುಮಾರಸ್ವಾಮಿ ಹೇಳೋದು ಅವರಿಗೆ ಶೋಭೆ ತರಲ್ಲ ಎಂದರು. ನಾನು ಅವರಿಗೆ ಏನು ಅನ್ಯಾಯ ಮಾಡಿದ್ದೇನೆ ಎಂದು ಈ ರೀತಿ ದ್ವೇಷ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ದ್ವೇಷ ಮಾಡಿದ್ದು ನಾನಾ, ಅವರ ಎಂದು ಜನ ನೋಡಿಕೊಂಡು ಬಂದಿದ್ದಾರೆ. ಒಂದೊಂದು ದಿನ ಒಂದೊಂದು ಹೇಳಿಕೆ ಕೊಡುವ ಮೂಲಕ ದಾರಿ ತಪ್ಪಿಸಲು ಹೊರಟಿದ್ದಾರೆ. ದ್ವೇಷದ ರಾಜಕಾರಣ ಅವರು ಮತ್ತು ಅವರ ಕಡೆಯವರು ಮಾಡಿಕೊಂಡು ಬಂದಿದ್ದಾರೆ. ಅಂಬರೀಶ್ ಹಾಗೂ ಅವರ ಕುಟುಂಬ ಪ್ರೀತಿಯಿಂದನೇ ಎಲ್ಲರನ್ನ ಗೆದ್ದಿರೋದು. ಹಿಂದಿನ ರೆಕಾರ್ಡ್ ತೆಗೆದು ನೋಡಿಕೊಂಡು ಆಮೇಲೆ ಈ ರೀತಿ ಹೇಳಿಕೆ ನೀಡಲಿ.…

Read More

ಚಿಕ್ಕಮಗಳೂರು: ಜೆಡಿಎಸ್‍ಗೆ (JDS) ಬಿಟ್ಟು ಕಾಂಗ್ರೆಸ್‍ಗೆ (Congress) ಮತ ಹಾಕಿ ಎನ್ನುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ (SL Bhojegowda) ಶಾಕ್ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಗೆಲುವಿಗೆ ಭರ್ಜರಿ ಸಿದ್ಧತೆ ನಡೆಸಿವೆ. ಆದರೆ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಸ್.ಎಲ್. ಭೋಜೇಗೌಡ ಅವರು ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತನಾಡಿರುವ ವೀಡಿಯೋ ವೈರಲ್ ಆಗುತ್ತಿದ್ದು, ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ. ವೈರಲ್ ವೀಡಿಯೋದಲ್ಲಿ ಏನಿದೆ?: ಭೋಜೇಗೌಡ ಕಾರ್ಯಕರ್ತರ ಜೊತೆ ಮಾತನಾಡಿರುವ ವೀಡಿಯೋ ಇದಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನ ಪರ ಬ್ಯಾಟಿಂಗ್ ಬೀಸಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕರೆ ನೀಡಿದರು. ಈ ಬಾರಿ ನೀವೆಲ್ಲಾ ಸೇರಿ ಕಾಂಗ್ರೆಸ್‍ಗೆ ವೋಟ್ ಹಾಕಬೇಕು. ಇದು ಒಂದು ಬಾರಿ ಈ ರೀತಿ ಮಾಡಿ ಎಂದು ಹೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ…

Read More

ಬಳ್ಳಾರಿ: ಕಂಪ್ಲಿ ಕ್ಷೇತ್ರದಲ್ಲಿ ಮಂಗಳ ಮುಖಿ ಸ್ಪರ್ಧೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತಲೆ ನೋವಾಗುವ ಸಾಧ್ಯತೆ ಇದೆ. ಕಾರಣ ಇವರು ಹಳ್ಳಿ ಹಳ್ಳಿಗಳಲ್ಲಿ ನಡೆಸಿರುವ  ಪ್ರಚಾರಕ್ಕೆ ಜನರಿಂದ ದೊರೆಯುತ್ತಿರುವ ಪ್ರತಿ ಸ್ಪಂದನೆ‌ ಇವರು ಪಡೆಯುವ ಮತ  ಶಾಸಕ ಗಣೇಶ್ ಇಲ್ಲ ಮಾಜಿ ಶಾಸಕ ಸುರೇಶ್ ಬಾಬು ಇವರಲ್ಲಿ ಯಾರ ಸೋಲಿಗೆ ಕಾರಣವಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ. ಸಮಾಜ ಸುಧಾರಣೆ ಮಾಡ್ತೇವೆ. ಜನರಿಗೆ ಮೂಲಭೂತ ಸೌಲಭ್ಯಗಳನ್ನು ನೀಡ್ತೇವೆ ಎನ್ನುವ ಆಶ್ವಾಸನೆಯೊಂದಿಗೆ ಚುನಾವಣೆ ಕಣಕ್ಕೆ ಇಳಿಯೊದು ಸಹಜ. ಇದರೊಂದಿಗೆ ಈ  ಮಂಗಳ ಮುಖಿ.   ಮಂಗಳ ಮುಖಿಯರಿಗೆ ನ್ಯಾಯಯುತವಾದ ಸೌಲಭ್ಯಗಳನ್ನು  ಸರಗಕಾರದಿಂದ ಕೊಡಿಸಲೆಂದೇ  ಚುನಾವಣೆ ಅಖಾಡಕ್ಕೆ ಇಳಿದಿದ್ದಾರಂತೆ. ದೇಶ ಪ್ರೇಮ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಳಮುಖಿ ಟಿ.ರಾಮಕ್ಕ ಕಣಕ್ಕಿಳಿದಿದ್ದಾರೆ. ಜಿಲ್ಲೆಯಲ್ಲಿ ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಇವರೊಬ್ಬರೇ ಮಂಗಳ ಮುಖಿಯಾಗಿದ್ದಾರೆ. ಸಮಾಜದಲ್ಲಿ ಮಂಗಳಮುಖಿ ಯರಿಗೆ ಸೂಕ್ತ ಸಮಾನತೆ ಸಿಗುತ್ತಿಲ್ಲ. ಸಮಾಜದಲ್ಲಿ ಗೌರವ ನೀಡುತ್ತಿಲ್ಲ. ಇದರಿಂದಾಗಿ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುವಂತಹ ದುಸ್ಥಿತಿಯಲ್ಲಿದ್ದಾರೆ. ಹೀಗಾಗಿ ಶಾಸಕಿಯಾಗುವ ಮೂಲಕ  …

Read More

ಚಾಮರಾಜನಗರ: ‘ಮುಸ್ಲಿಮರಿಗೆ ಮೀಸಲಾತಿ ವಾಪಸ್ ಕೊಡುವ ಬಗ್ಗೆ ನೀವು ಮಾತನಾಡಿದ್ದೀರಿ. ಹಾಗಿದ್ದರೆ ಯಾರ ಮೀಸಲಾತಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಿ? ಕರ್ನಾಟಕದ ಜನರಿಗೆ ಉತ್ತರ ಕೊಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಿದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾನಡಿದ ಅವರು, ಕಾಂಗ್ರೆಸ್ ಪಕ್ಷ ಈಗಲೂ ತುಷ್ಟೀಕರಣದ ರಾಜನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಶೇ 4ರ ಮೀಸಲಾತಿ ಕೊಟ್ಟಿತ್ತು. ಆದರೆ ಬಿಜೆಪಿ ಅದನ್ನೆಲ್ಲವನ್ನೂ ತೆಗೆದು ಹಾಕಿದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ, ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಮರಿಗಿರುವ ಮೀಸಲಾತಿಯನ್ನು ಕೊಡುತ್ತೇವೆ ಎಂಬುದಾಗಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ನೀವೇ ಹೇಳಿ ಮುಸ್ಲಿಮರಿಗೆ ಮೀಸಲಾತಿ ಕೊಡಬೇಕಾ? ಜೋರಾಗಿ ಹೇಳಿ. ಅವರಿಗೆ ಮೀಸಲಾತಿ ಕೊಡಬೇಕಾ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದರು. ‘ನಾನು ಕಾಂಗ್ರೆಸ್ನವರಿಗೆ ಪ್ರಶ್ನೆ ಮಾಡಲು ಬಯಸುತ್ತೇನೆ. ಡಿಕೆ ಶಿವಕುಮಾರ್ ಅವರೇ, ಮುಸ್ಲಿಮರಿಗೆ…

Read More

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದ ಜಿಲ್ಲೆಯ ಗುಂಡ್ಲುಪೇಟೆ ಮತಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಸಿಎಸ್ ನಿರಂಜನ್ ಕುಮಾರ್ (CS Niranjan Kumar) ಪರ ಮತ ಯಾಚಿಸಿದರು. ಸಡುವ ಬಿಸಿಲು ಮತ್ತು ಧಗೆ ಲೆಕ್ಕಿಸದೆ ಸಹಸ್ರಾರು ಜನ ರೋಡ್ ಶೋನಲ್ಲಿ ಪಾಲ್ಗೊಂಡು ಅಮಿತ್ ಶಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪರ ಘೋಷಣೆ ಕೂಗಿದರು. ಚುನಾವಣಾ ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನದಲ್ಲಿ ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ಸಿಎಸ್ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು.

Read More

ಮೈಸೂರು: ಖಂಡಿತಾ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾನು ಸಿಎಂ ಆಗಬೇಕೆಂದು ಕ್ಷೇತ್ರದಲ್ಲಿ ಮಾತ್ರ ಕೂಗು ಕೇಳಿಬರುತ್ತಿದೆ. ರಾಜ್ಯದೆಲ್ಲೆಡೆ ಈ ಕೂಗು ಕೇಳಿದಾಗ ಸಿಎಂ ಮಾಡುವಂತೆ ಕೇಳುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದರು. ಜಿಲ್ಲೆಯಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ವ್ಯಭಿಚಾರನಾ ಎಂದು ಪ್ರಶ್ನಿಸಿದರು. ಇದನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಬೇಕು. ರಾಜಕೀಯ ಹಾದರದ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಲಿಂಗಾಯತ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ತಮ್ಮ ಅಸಹನೆ ಆಕ್ರೋಶ ಹೊರ ಹಾಕಿದ್ದಾರೆ. ವರುಣದಲ್ಲಿ ಲಿಂಗಾಯತರು ಎಸ್ಸಿ, ಎಸ್ಟಿ ಎಲ್ಲರೂ ಒಂದಾಗಿದ್ದಾರೆ. ಅಹಿಂದ ಕಾರ್ಡ್ ನಡೆಯುತ್ತಿಲ್ಲ. ಹಿಂದು ಕಾರ್ಡ್ ನಡೆಯುತ್ತಿದೆ ಅನಿಸಿರಬಹುದು. ಭಯಮಿಶ್ರಿತ ಆಕ್ರೋಶವಾಗಿ ಈ ಮಾತು ಬಂದಿದೆ. ಎರಡು ರೀತಿಯ ಸಿಟ್ಟು ಸಿದ್ದರಾಮಯ್ಯಗೆ ಇದೆ. ಒಂದು ಕೋಲಾರ ವರುಣದಲ್ಲಿ…

Read More

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಯನ್ನು ತಿರುಚಿ ಬಿಜೆಪಿಗರು (BJP) ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಆರೋಪಿಸಿದ್ದಾರೆ. ಗೋಕಾಕ್‍ನಲ್ಲಿ (Gokak) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅದನ್ನು ತಪ್ಪಾಗಿ ಅರ್ಥೈಸುವ ಕೆಲಸವಾಗಿದೆ. ಈ ಮೂಲಕ ಜನರನ್ನು ಪ್ರಚೋಧಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದ 40% ಕಮಿಷನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಮೋದಿಯವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 40% ವಿಚಾರವನ್ನು ಯಾರು ಇಲ್ಲ ಎಂದವರು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತೆಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ, ಚುನಾವಣೆಯಾದ ಬಳಿಕ ನಾವು ಒಂದು ಲೋಟ ನೀರೋ, ತಂಬಿಗೆ ನೀರೋ ಅಥವಾ ಬಕೆಟ್ ನೀರೋ ಎಂಬುದು ತಿಳಿಯಲಿದೆ. ಗೋಕಾಕ್ ಚುನಾವಣೆಯಲ್ಲಿ ಈ ಬಾರಿ…

Read More