ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಹೆಚ್ಚಳ ಮಾಡಿ ಇಂಧನ ಸಚಿವ ಸುನೀಲ್ ಕುಮಾರ್ (Sunil Kumar) ಆದೇಶ ಪ್ರಕಟಿಸಿದ್ದಾರೆ. ವೇತನ (Salary) ಪರಿಷ್ಕರಣೆಗೆ ಪಟ್ಟು ಹಿಡಿದು, ಗುರುವಾರದಿಂದ ಎಸ್ಕಾಂ ಸಿಬ್ಬಂದಿ ಅನಿರ್ದಿಷ್ಟ ಅವಧಿಗೆ ಹೋರಾಟಕ್ಕೆ ಸಿದ್ಧರಾಗಿದ್ದ ಬೆನ್ನಲ್ಲೇ ಕೆಪಿಟಿಸಿಎಲ್ ಎಂಡಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ 2022ರಿಂದ ಪೂರ್ವಾನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಆದೇಶಿಸಿದ್ದಾರೆ. ಇದೀಗ ಸಚಿವರ ಭರವಸೆಯಿಂದ ಎಸ್ಕಾಂ ಸಿಬ್ಬಂದಿ ಹೋರಾಟಕ್ಕೂ ಮುನ್ನವೇ ಜಯ ಸಿಕ್ಕಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರು ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಲೈನ್‍ಮ್ಯಾನ್‍ಗಳಿಂದ ಹಿಡಿದು ಎಂಜಿನಿಯರ್‍ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ…
Author: Prajatv Kannada
ಬೆಂಗಳೂರು: ಚಪ್ಪಲಿಯಲ್ಲಿ (Slipper) ಅಕ್ರಮವಾಗಿ ಬರೋಬ್ಬರಿ 1.2 ಕೆ.ಜಿ ತೂಕದ ಚಿನ್ನವನ್ನು (Gold) ತಂದಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ (Bengaluru Airport) ಬಂಧಿಸಲಾಗಿದೆ. ಚಪ್ಪಲಿಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದನ್ನು ಕಂಡು ಕಸ್ಟಮ್ಸ್ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಇಂಹ ಉಪಾಯಗಳನ್ನು ಬಳಸಿ ಮತ್ತೆ ಕಳ್ಳಸಾಗಣೆ (Gold Smuggling) ನಡೆಯದಂತೆ ಅಧಿಕಾರಿಗಳು ಇದೀಗ ವಿಮಾನದಲ್ಲಿ ಪ್ರಯಾಣಿಸುವವರ ಚಪ್ಪಲಿಗಳನ್ನು ಅತ್ಯಂತ ಜಾಗರೂಕರಾಗಿ ಪರಿಶೀಲಿಸುತ್ತಿದ್ದಾರೆ. ವರದಿಗಳ ಪ್ರಕಾರ ಮಾರ್ಚ್ 12 ರಂದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಡೆದಿದ್ದರು. ಆತನ ಬಳಿ ಪ್ರಯಾಣದ ಉದ್ದೇಶವನ್ನು ಕೇಳಿದಾಗ ಆತ ವೈದ್ಯಕೀಯ ಉದ್ದೇಶಕ್ಕೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದ. ಈ ವ್ಯಕ್ತಿ ಯಾವುದೇ ವೈದ್ಯಕೀಯ ದಾಖಲೆಗಳನ್ನು ನೀಡಲು ವಿಫಲನಾಗಿದ್ದಾನೆ. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಚಪ್ಪಲಿಯಲ್ಲಿ ಗುಳಿಗಳನ್ನು ರಚಿಸಿ, ಚಿನ್ನದ ಗಟ್ಟಿಗಳನ್ನು ಹುದುಗಿಸಿಟ್ಟಿರುವುದು ಕಂಡುಬಂದಿದೆ. ಅಧಿಕಾರಿಗಳು ಒಂದು ಜೊತೆ ಚಪ್ಪಲಿಯಲ್ಲಿ ಒಟ್ಟು 4 ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ವ್ಯಕ್ತಿಯ…
ಅಹಮದಾಬಾದ್: ಟೀಂ ಇಂಡಿಯಾ (Team India) ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ (Virat Kohli) 1,205 ದಿನಗಳ ಬಳಿಕ ಶತಕ ಸಿಡಿಸಿ, ಶತಕದ ಬರ ನೀಗಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ಬಾರಿಸಿರುವ ಕೊಹ್ಲಿ ಅವರಿಗೆ ಇದು ತಮ್ಮ ಕ್ರಿಕೆಟ್ ವೃತ್ತಿ ಜೀವನದ 75ನೇ ಶತಕವಾಗಿದೆ. ಈ ಮೂಲಕ ಟೀಕಾಕಾರರಿಗೆ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಪಂದ್ಯದ ಬಳಿಕ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರೊಂದಿಗೆ ಸುದೀರ್ಘವಾಗಿ ಮಾತನಾಡಿರುವ ಕೊಹ್ಲಿ, ಸೆಂಚುರಿ ಬಾರಿಸುವ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಕೊಹ್ಲಿ ಹೇಳಿದ್ದೇನು? ನೀವು ಸೆಂಚುರಿ ಗಳಿಸಲು ಬ್ಯಾಟಿಂಗ್ ಹೇಗೆ ಮುಂದುವರಿಸುತ್ತೀರಿ ಅಂತಾ ಬಹಳ ಜನರು ನನ್ನನ್ನು ಕೇಳುತ್ತಾರೆ. ನಾನು ಯಾವಾಗಲೂ ಅವರಿಗೆ ಹೇಳುತ್ತೇನೆ, 100 ರನ್ ಬಾರಿಸಬೇಕು ಅನ್ನೋದು ನನ್ನೊಳಗೆ ನಾನೇ ಹಾಕಿಕೊಳ್ಳುವ ಗುರಿ. ಜೊತೆಗೆ ತಂಡಕ್ಕಾಗಿ ಸಾಧ್ಯವಾದಷ್ಟು ಸಮಯ…
ಮುಂಬೈ: ನಾಯಕಿ ಹರ್ಮನ್ ಪ್ರೀತ್‍ಕೌರ್ (Harmanpreet Kaur) ಅರ್ಧಶತಕ ಹಾಗೂ ನಾಟ್ ಸ್ಕಿವರ್ ಬ್ರಂಟ್ ಆಲ್‍ರೌಂಡರ್ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ (Mumbai Indian) ತಂಡವು ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧ 55 ರನ್‍ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಗ್ರಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ. ಮಂಗಳವಾರ ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತ್ತು. 163 ರನ್ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಸೋಲೊಪ್ಪಿಕೊಂಡಿತು. ತನ್ನ ಸರದಿ ಆರಂಭಿಸಿದ ಗುಜರಾತ್ ಜೈಂಟ್ಸ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಸೋಫಿಯಾ ಡಂಕ್ಲೆ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡು ತಂಡಕ್ಕೆ ಆಘಾತ ನೀಡಿದರು. ನಂತರ ಕಣಕ್ಕಿಳಿದವರಲ್ಲಿ ಸಬ್ಬಿನೇನಿ ಮೇಘನಾ 16 ರನ್, ಹರ್ಲೀನ್…
ಬೆಂಗಳೂರು : ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿತ ಟೂರ್ನಿಗಳಲ್ಲಿ ಕಳೆದ 10 ವರ್ಷಗಳಲ್ಲಿ ಟೀಮ್ ಇಂಡಿಯಾ ಅನುಭವಿಸಿರುವ ಪ್ರಶಸ್ತಿಗಳ ಬರ ನೀಗಿಸಿಕೊಳ್ಳಲು ಮತ್ತೊಂದು ಅವಕಾಶ ಒದಗಿಬಂದಿದೆ. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್‌ಗೆ ಕಾಲಿಟ್ಟಿದೆ. ಜೂನ್ 7ರಿಂದ 11ರವರೆಗೆ ಇಂಗ್ಲೆಂಡ್‌ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೊಹಿತ್ ಶರ್ಮಾ ಸಾರಥ್ಯದ ಭಾರತ ತಂಡ ಅಂಕಪಟ್ಟಿಯ ಅಗ್ರಸ್ಥಾನಿ ಆಸ್ಟ್ರೇಲಿಯಾ ಎದುರು ಪೈಪೋಟಿ ನಡೆಸಲಿದೆ. ಇತ್ತೀಚಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲೂ ಭಾರತ 2-1 ಅಂತರದ ಜಯ ದಾಖಲಿಸಿತು. ಈ ಬಗ್ಗೆ ಮಾತನಾಡಿರುವ ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್, ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳಬೇಕಾದ ಬಹುಮುಖ್ಯ ಆಟಗಾರನನ್ನು ಹೆಸರಿದಿದ್ದಾರೆ. ಕೆ.ಎಸ್ ಭರತ್ ಮತ್ತು ಇಶಾನ್ ಕಿಶನ್ ಇಬ್ಬರೂ ಬೇಡ ಟೆಸ್ಟ್ ಕ್ರಿಕೆಟ್‌ನ ವಿಕೆಟ್‌ಕೀಪಿಂಗ್ ಜವಾಬ್ದಾರಿಯನ್ನು ಕಳಪೆ ಲಯದಿಂದ ಹೊರಬಿದ್ದಿರುವ ಕೆ.ಎಲ್ ರಾಹುಲ್‌ಗೆ…
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳುವ ಬಗ್ಗೆ ಇಂಗ್ಲೆಂಡ್ ಆಲ್‌ರೌಂಡರ್ ಮೊಯೀನ್ ಅಲಿ ಸುಳಿವು ನೀಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಂಗ್ಲೆಂಡ್ ತಂಡಕ್ಕೆ ಮೊಯೀನ್ ಅಲಿ ಪ್ರಮುಖ ಆಧಾರ ಸ್ಥಂಭವಾಗಿದ್ದಾರೆ. 2019ರ ಏಕದಿನ ವಿಶ್ವಕಪ್ ಟೂರ್ನಿಯ ವಿಜೇತ ಇಂಗ್ಲೆಂಡ್ ತಂಡದ ಭಾಗವಾಗಿದ್ದ ಅಲಿ, ಇದೀಗ ತಮ್ಮ ರಾಷ್ಟ್ರೀಯ ತಂಡಕ್ಕೆ ಸತತ ಎರಡನೇ ಬಾರಿ ವಿಶ್ವಕಪ್ ಗೆದ್ದು ಕೊಡುವ ಇಂಗಿತವನ್ನು ಹೊಂದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಮುಂಬರುವ ಟಿ20 ಸರಣಿಯ ನಿಮಿತ್ತ ಮಾಧ್ಯಮಗಳ ಜೊತೆ ಮಾತನಾಡಿದ ಮೊಯೀನ್ ಅಲಿ, “ನಾನು ಸಾಕಷ್ಟು ಗುರಿಗಳನ್ನು ಇಟ್ಟುಕೊಳ್ಳುವುದಿಲ್ಲ ಆದರೆ, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನಾನು ಆಡಬೇಕು. ಆ ಮೂಲಕ ಇಂಗ್ಲೆಂಡ್ ತಂಡಕ್ಕೆ ಪ್ರಶಸ್ತಿ ಗೆದ್ದು ಕೊಡಬೇಕು. ತದನಂತರ ಏನು ಆಗುತ್ತೋ ನೋಡೋಣ,” ಎಂದು ಹೇಳಿದ್ದಾರೆ. “ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತೇನೆ ಅಥವಾ ಹೇಳುವುದಿಲ್ಲ ಎಂಬ ಬಗ್ಗೆ ನಾನು ಇದೀಗ ಸ್ಪಷ್ಟತೆ ನೀಡುವುದಿಲ್ಲ.…
ಅಹಮದಾಬಾದ್: ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಕ್ರಿಕೆಟಿಗ ಚೇತೇಶ್ವರ್ ಪೂಜಾರ (Cheteshwar Puajra) ಸ್ಪಿನ್ ಬೌಲಿಂಗ್ ನೋಡಿ, ಸ್ಪಿನ್ ಮಾಂತ್ರಿಕ ಖ್ಯಾತಿಯ ರವಿಚಂದ್ರನ್ ಅಶ್ವಿನ್ (Ravichandran Ashwin) ಶಾಕ್ ಆಗಿದ್ದಾರೆ. ಹೌದು, 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) 2ನೇ ಇನ್ನಿಂಗ್ಸ್ ಆರಂಭಿಸಿತ್ತು. ಈ ವೇಳೆ ಪಂದ್ಯ ಡ್ರಾನತ್ತ ಮುಖಮಾಡಿದ್ದರಿಂದ ನಾಯಕ ರೋಹಿತ್ ಶರ್ಮಾ ಚೇತೇಶ್ಚರ್ ಪೂಜಾರ ಹಾಗೂ ಶುಭಮನ್ ಗಿಲ್ ಪ್ರಮುಖ ಬ್ಯಾಟ್ಸ್‌ಮ್ಯಾನ್‌ಗಳಿಗೂ ಬೌಲಿಂಗ್ ಮಾಡುವ ಅವಕಾಶ ನೀಡಿದ್ದರು. ಮಧ್ಯಂತರದಲ್ಲಿ ಒಂದು ಓವರ್ ಬೌಲಿಂಗ್ ಮಾಡಿದ ಪೂಜಾರ ಕೇವಲ 1 ರನ್ ನೀಡಿದ್ದರು. ಪಂದ್ಯದ ಬಳಿಕ ಪೂಜಾರ ಬೌಲಿಂಗ್ ಚಿತ್ರವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಅಶ್ವಿನ್, ನಾನೇನು ಮಾಡಲಿ? ನನ್ನ ಕೆಲಸ ಬಿಟ್ಟುಬಿಡಲಾ? ಎಂದು ಹಾಸ್ಯ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೂಜಾರ, `ಇಲ್ಲ, ನಾಗ್ಪುರ ಮೊದಲ ಟೆಸ್ಟ್ನಲ್ಲಿ ಗೆಲುವು ತಂದುಕೊಟ್ಟಿದ್ದಕ್ಕಾಗಿ ಧನ್ಯವಾದ ಹೇಳಿದೆ’ ಎಂದಿದ್ದಾರೆ. ಮತ್ತೊಮ್ಮೆ ಇದಕ್ಕೆ ರಿಯಾಕ್ಟ್ ಮಾಡಿರುವ ಅಶ್ವಿನ್ `ನಿಮ್ಮ…
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಇದರ ಹೊರತಾಗಿಯೂ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆದಿದ್ದ ಕಾರಣ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2-1 ಅಂತರದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದಹಾಗೆ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಭಾರತ ತಂಡಕ್ಕೆ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಗೆಲುವು ಅನಿವಾರ್ಯವಿತ್ತು. ಆದರೆ, ನ್ಯೂಜಿಲೆಂಡ್ ತಂಡ, ಭಾರತ ತಂಡದ ಜೊತೆ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ರೇಸ್‌ನಲ್ಲಿದ್ದ ಶ್ರೀಲಂಕಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಪಡೆಯಿತು. ಆ ಮೂಲಕ ಟೀಮ್ ಇಂಡಿಯಾ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿತು. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಜೂನ್ 7 ರಿಂದ 11ರವರೆಗೂ ಇಂಗ್ಲೆಂಡ್ ದಿ ಓವಲ್ ಮೈದಾನದಲ್ಲಿ ನಡೆಯುವ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಸೆಣಸಲಿವೆ. ಅಂದಹಾಗೆ ಸೋಮವಾರ ಮುಗಿದಿದ್ದ ಟೆಸ್ಟ್ ಸರಣಿಯು…
ಕನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು (R. Chandru) ನಿರ್ದೇಶನದ ಕಬ್ಜ (Kabzaa) ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐದು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಕಬ್ಜ 2 ಸಿನಿಮಾದ ಬಗ್ಗೆ ಸುಳಿವು ನೀಡಿದ್ದಾರೆ ನಟ ಉಪೇಂದ್ರ (Upendra). ನಿನ್ನೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಬ್ಜ 2 ಸಿನಿಮಾದಲ್ಲಿ ನನಗೆ ಅತಿಥಿ ಪಾತ್ರ ಕೊಡಿ, ಸುದೀಪ್ ಅವರನ್ನು ಹೀರೋ ಆಗಿ ಮಾಡಿ ಎಂದು ನಿರ್ದೇಶಕರಲ್ಲಿ ಮನವಿ ಮಾಡಿಕೊಂಡರು. ‘ಕಬ್ಜ ಇದು ನಟರ ಸಿನಿಮಾವಲ್ಲ, ಟೆಕ್ನಿಷಿಯನ್ಸ್ ಸಿನಿಮಾ. ಈ ಸಿನಿಮಾದಲ್ಲಿ ನಿರ್ದೇಶಕರು, ಸಂಗೀತ ನಿರ್ದೇಶಕರ, ಕಲಾ ನಿರ್ದೇಶಕ, ಸಿನಿಮಾಟೋಗ್ರಾಫರ್ ಕಾಣುತ್ತಾರೆ. ನಟರು ಕೇವಲ ಹಿಂದಿನ ಶಕ್ತಿ ಅಷ್ಟೇ. ಇಂತಹ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ. ಕಬ್ಜ 2 ಸಿನಿಮಾ ಕೂಡ ಆಗಲಿ. ಆ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರ ಮಾಡಲಿ’ ಎಂದು ಹಾರೈಸಿದರು ಹಾಗೂ ಕಬ್ಜ…
ದಕ್ಷಿಣ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಸಂಭಾವನೆ (Remuneration) ಪಡೆಯುವ ನಟರ ಪಟ್ಟಿಯಲ್ಲಿ ತಮಿಳು ಮತ್ತು ತೆಲುಗು (Telugu) ನಟರೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಚಿತ್ರವೊಂದಕ್ಕೆ ಕನಿಷ್ಠ ಹತ್ತು ಕೋಟಿಯಿಂದ ಗರಿಷ್ಠ ನೂರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರು ಅಲ್ಲಿದ್ದಾರೆ. ಹಾಗಾಗಿ ಸಂಭಾವನೆ ವಿಚಾರ ಬಂದರೆ ರಜನಿಕಾಂತ್, ಕಮಲ್ ಹಾಸನ್, ದಳಪತಿ ವಿಜಯ್, ಪವನ್ ಕಲ್ಯಾಣ್ (Pawan Kalyan) , ಚಿರಂಜೀವಿ, ಜ್ಯೂನಿಯರ್ ಎನ್.ಟಿ.ಆರ್ ಹೀಗೆ ಪ್ರಮುಖ ನಟರ ಹೆಸರು ಕೇಳಿ ಬರುತ್ತವೆ. ಇವರ ಸಂಭಾವನೆ ವಿಚಾರ ನಾನಾ ರೀತಿಯಲ್ಲೂ ಚರ್ಚೆ ಆಗಿದ್ದಿದೆ. ಆದರೆ, ಈವರೆಗೂ ಅಧಿಕೃತವಾಗಿ ಯಾರೂ ತಮ್ಮ ಸಂಭಾವನೆ ಬಗ್ಗೆ ಮಾತನಾಡಿರಲಿಲ್ಲ. ದಕ್ಷಿಣ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಸಂಭಾವನೆ (Remuneration) ಪಡೆಯುವ ನಟರ ಪಟ್ಟಿಯಲ್ಲಿ ತಮಿಳು ಮತ್ತು ತೆಲುಗು (Telugu) ನಟರೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಚಿತ್ರವೊಂದಕ್ಕೆ ಕನಿಷ್ಠ ಹತ್ತು ಕೋಟಿಯಿಂದ ಗರಿಷ್ಠ ನೂರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರು ಅಲ್ಲಿದ್ದಾರೆ. ಹಾಗಾಗಿ ಸಂಭಾವನೆ ವಿಚಾರ ಬಂದರೆ ರಜನಿಕಾಂತ್, ಕಮಲ್…