ಎಳನೀರು ಮತ್ತು ಜೇನುತುಪ್ಪ ಎರಡೂ ಆರೋಗ್ಯಕ್ಕೆ ಉತ್ತಮವಾಗಿರುವಂತಹದ್ದಾಗಿದೆ. ಇವೆರಡು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದ್ದು ಅನೇಕ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯಲ್ಲಿ ಸಹಾಯ ಮಾಡುತ್ತದೆ. ಅನೇಕ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿರುವ ಎಳನೀರು ಮತ್ತು ಜೇನುತುಪ್ಪವನ್ನು ಬೆರೆಸಿ ಕುಡಿಯುತ್ತಿದ್ದರೆ, ಅದು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಎಳನೀರು ಹಾಗೂ ಜೇನುತುಪ್ಪದ ಪೋಷಕಾಂಶಗಳು ಎಳ ನೀರು ವಿಟಮಿನ್ ಬಿ, ಸಿ, ಸೋಡಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಮತ್ತೊಂದೆಡೆ, ಜೇನುತುಪ್ಪವು ಇದು ಉರಿಯೂತದ, ಬ್ಯಾಕ್ಟೀರಿಯಾ ವಿರೋಧಿ, ಆಂಟಿಫಂಗಲ್ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಂತಹ ಅನೇಕ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಹೆಚ್ಚಿಸಲು ಇದು ಉತ್ತಮ ಪಾನೀಯವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಹೊಟ್ಟೆಯಲ್ಲಿ ಮಲಬದ್ಧತೆ, ಅತಿಸಾರ, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆಗಳನ್ನು ತಡೆಯುವಲ್ಲಿ ಇದು ಪ್ರಯೋಜನಕಾರಿಯಾಗಿದೆ. ವಯಸ್ಸಾದ ಲಕ್ಷಣಗಳನ್ನು ವಿಳಂಬಗೊಳಿಸುತ್ತದೆ ಈ ಸಂಯೋಜನೆಯು ದೇಹಕ್ಕೆ ಪೋಷಣೆಯನ್ನು ನೀಡುತ್ತದೆ.…
Author: Prajatv Kannada
ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಉಪಸ್ಥಿತಿಯ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ವ್ಲಾಡಿವೋಸ್ಟಾಕ್‌ನಲ್ಲಿ ನಡೆಯಲಿರುವ ಈಸ್ಟರ್ನ್ ಎಕನಾಮಿಕ್ ಫೋರಮ್ ಸಮ್ಮೇಳನದ ದಿನಾಂಕವನ್ನು ರಷ್ಯಾ ಬದಲಾಯಿಸಿದೆ. ಈ ಸಮ್ಮೇಳನವು ಸೆಪ್ಟೆಂಬರ್ 9-10 ರ ಬದಲಿಗೆ 12 ಮತ್ತು 15 ಸೆಪ್ಟೆಂಬರ್ ನಡುವೆ ನಡೆಯಲಿದೆ. ಅಂತಾರಾಷ್ಟ್ರೀಯ ಘಟನೆಗಳಿಂದಾಗಿ ಈಸ್ಟರ್ನ್ ಎಕನಾಮಿಕ್ ಫೋರಂನ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ರಷ್ಯಾ ಹೇಳಿದೆ. ಗಮನಾರ್ಹವಾಗಿ, G20 ಶೃಂಗಸಭೆಯು ಭಾರತದಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿದೆ. ಇದರಿಂದ ಪುಟಿನ್ ಭಾರತಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ವ್ಲಾಡಿಮಿರ್ ಪುಟಿನ್ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅವರು ಭಾಗವಹಿಸಿದರೆ, ಉಕ್ರೇನ್ ಯುದ್ಧದ ನಂತರ ಪುಟಿನ್ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ನಾಯಕರು ಮೊದಲ ಬಾರಿಗೆ ಮುಖಾಮುಖಿಯಾಗಬಹುದು. ರಷ್ಯಾದ ಅಧ್ಯಕ್ಷ ಪುಟಿನ್ 2021 ರಲ್ಲಿ ಇಟಲಿ ಮತ್ತು 2022 ರಲ್ಲಿ ಇಂಡೋನೇಷ್ಯಾದಲ್ಲಿ ನಡೆದ ಜಿ 20 ಶೃಂಗಸಭೆಗಳಲ್ಲಿ ಭಾಗವಹಿಸಲಿಲ್ಲ. ಇದರೊಂದಿಗೆ, ಜೂನ್/ಜುಲೈನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಂಘೈ…
ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ ಅವರ ಮನೆಯ ಕಾಂಪೌಂಡ್‌ಗೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ. ಪಾಕಿಸ್ತಾನದ ಪೊಲೀಸರು ಮತ್ತು ಇಮ್ರಾನ್ ಖಾನ್ ಅವರ ಬೆಂಬಲಿಗರು ಮಂಗಳವಾರ ಲಾಹೋರ್‌ನ ಪೂರ್ವ ನಗರದಲ್ಲಿರುವ ಮಾಜಿ ಪ್ರಧಾನಿ ಮನೆಯ ಹೊರಗೆ ಮುಖಮುಖಿಯಾಗಿದ್ದು ಅವರ ಸಂಭವನೀಯ ಬಂಧನಕ್ಕೆ ಮುಂಚಿತವಾಗಿ ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ. ಪೊಲೀಸರು ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದರು. ಮಂಗಳವಾರ ಸಂಜೆ ಖಾನ್ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದು ತಾನು ಜೈಲಿಗೆ ಹೋದರೂ ಸಹ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆಡಳಿತ ಪಕ್ಷಕ್ಕೆ ಸವಾಲು ಹಾಕುವುದನ್ನು ಮುಂದುವರಿಸಲು ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ನನ್ನನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ. ಇಮ್ರಾನ್ ಖಾನ್ ಜೈಲಿಗೆ ಹೋದರೆ ಜನ ನಿದ್ದೆ ಹೋಗುತ್ತಾರೆ ಎಂದು ಭಾವಿಸುತ್ತಾರೆ. ನೀವು ಅವರನ್ನು ತಪ್ಪು ಎಂದು…
ಭೋಪಾಲ್: ಸಾಫ್ಟ್‌ವೇರ್ ಇಂಜಿನಿಯರೊಬ್ಬ (Software Engineer) ಇಬ್ಬರನ್ನು ಮದುವೆಯಾಗಿದ್ದು, ಅವರಿಬ್ಬರೊಂದಿಗಿರಲು ಸಮಯವನ್ನು ನಿಗದಿ ಮಾಡಿ ಸುದ್ದಿಯಾಗಿದ್ದಾನೆ. ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ 28 ವರ್ಷದ ಸಾಫ್ಟ್‌ವೇರ್ ಇಂಜಿನಿಯರೊಬ್ಬ 2 ಮದುವೆಯಾಗಿದ್ದ. ಆದರೆ ಇನ್ನೊಂದು ಮದುವೆ ಆಗಿರುವುದು ಮೊದಲ ಪತ್ನಿಗೆ ತಿಳಿದಿರಲಿಲ್ಲ. ತಿಳಿದ ನಂತರ ಕೋರ್ಟ್‍ಗೆ ಹೋಗಿದ್ದಾಳೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್‍ವೊಂದನ್ನು ಹುಡುಕಿದ್ದಾನೆ. ಈ ಪ್ಲ್ಯಾನ್‍ನಂತೆ ತನ್ನ ಇಬ್ಬರು ಪತ್ನಿಯರನ್ನು ಒಟ್ಟಿಗೆ ಕೂರಿಸಿ ನಿರ್ಧಾರಕ್ಕೆ ಬಂದಿದ್ದಾನೆ. ಇದರ ಪ್ರಕಾರ ವಾರದಲ್ಲಿ 3 ದಿನ ಮೊದಲ ಪತ್ನಿಗಾದರೆ ಉಳಿದ ಮೂರು ದಿನ ಮತ್ತೋರ್ವ ಪತ್ನಿಯೊಂದಿಗೆ ಇರಲು ಸಮಯವನ್ನು ನಿಗದಿ ಮಾಡಿದ್ದಾನೆ. ಉಳಿದಂತೆ ಇನ್ನೊಂದು ದಿನ ಅಂದರೆ ಭಾನುವಾರ ತನ್ನಿಷ್ಟದಂತೆ ಸಮಯ ಕಳೆಯಲು ನಿರ್ಧರಿಸಿದ್ದು, ಇದಕ್ಕೆ ಆತನ ಪತ್ನಿಯರು ಒಪ್ಪಿಗೆ ಸೂಚಿಸಿದ್ದಾರೆ. ಏನಿದು ಪ್ರಕರಣ?: 2008ರಲ್ಲಿ ವ್ಯಕ್ತಿಯು 26 ವರ್ಷದ ಮಹಿಳೆಯನ್ನು ವಿವಾಹವಾಗಿದ್ದ. ಆ ವೇಳೆ ಆತ ಗುರುಗ್ರಾಮನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. 2 ವರ್ಷಗಳ ಕಾಲ ದಂಪತಿ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ…
ಮುಂಬೈ: ಪ್ಲಾಸ್ಟಿಕ್ ಚೀಲದೊಳಗೆ (Plastic Bag) 53 ವರ್ಷದ ಮಹಿಳೆಯ (Woman) ಶವವೊಂದು ಪತ್ತೆಯಾದ ಘಟನೆ ಮುಂಬೈನ (Mumbai) ಲಾಲ್‍ಬಾಗ್ ಪ್ರದೇಶದಲ್ಲಿ ನಡೆದಿದೆ. ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಹಾಗೂ ಸೋದರಳಿಯ ಕಲಾಚೌಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪಾರ್ಟ್‍ಮೆಂಟ್‍ನಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಗೆ 21 ವರ್ಷದ ಮಗಳಿದ್ದು (Daughter), ಆಕೆ ಮಹಿಳೆಯನ್ನು ತಿಂಗಳುಗಟ್ಟಲೆ ಬಚ್ಚಲಲ್ಲಿ ಬೀಗ ಹಾಕಿ ನಂತ ಅವಳನ್ನು ಕೊಂದ ಆರೋಪಗಳು ಇವೆ. ಈ ಹಿನ್ನೆಲೆಯಲ್ಲಿ ಮಹಿಳೆಯ ಶವ ಪತ್ತೆಯಾದ ಬೆನ್ನಲ್ಲೇ ಮಹಿಳೆಯ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಲಕ್ನೋ: ಸಾರ್ವಜನಿಕ ಸ್ಥಳದಲ್ಲಿ (Public Place) ಮೈತುಂಬಾ ಬಟ್ಟೆ (Dress) ಧರಿಸಿಲ್ಲ ಎಂದು ಪತ್ನಿಯನ್ನೇ (Wife) ವ್ಯಕ್ತಿಯೊಬ್ಬ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಸ್ವಪ್ನಾ ಮೃತ ಮಹಿಳೆ ಹಾಗೂ ಮೋಹಿತ್ ಕುಮಾರ್ ಬಂಧಿತ ವ್ಯಕ್ತಿ. ಬರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಗಾಜಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ವಪ್ನಾ ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸದೇ ಬಂದಿದ್ದಕ್ಕೆ ಮೋಹಿತ್ ಕುಮಾರ್ ಸಿಟ್ಟಾಗಿದ್ದಾನೆ. ಅಷ್ಟೇ ಅಲ್ಲದೇ ಇದೇ ವಿಚಾರವಾಗಿ ಸ್ವಪ್ನಾ ಹಾಗೂ ಮೋಹಿತ್ ಕುಮಾರ್ ಮಧ್ಯೆ ಜಗಳ ನಡೆದಿದೆ. ಪದೇ ಪದೇ ಎಚ್ಚರಿಕೆ ನೀಡಿದರೂ ಪತ್ನಿ ಕಿವಿಗೊಡುತ್ತಿಲ್ಲ ಎಂದು ಕೋಪಿಸಿಕೊಂಡಿದ್ದಾನೆ. ಇದರಿಂದಾಗಿ ಆಕ್ರೋಶಗೊಂಡ ಮೋಹಿತ್ ಕುಮಾರ್, ಸ್ವಪ್ನಾಳ ಕುತ್ತಿಗೆಯ ಮೇಲೆ ಚಾಕುವಿನಿಂದ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಗ್ಗೆ ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಸ್ವಪ್ನಾಳ ಮೃತದೇಹದ ಪಕ್ಕದಲ್ಲಿ ಮೋಹಿತ್ ಕುಮಾರ್ ಕುಳಿತಿರುವುದು ಕಂಡು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ನವದೆಹಲಿ: ಶಸ್ತ್ರಾಸ್ತ್ರಗಳ (Arms) ಆಮದಿನಲ್ಲಿ ಭಾರತ (India) ಈಗಲೂ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI) ಈ ವರದಿ ಪ್ರಕಟಿಸಿದೆ. 2013-17ರ ಅವಧಿಗೆ ಹೋಲಿಸಿದರೆ 2018–22ರ ಅವಧಿಯಲ್ಲಿ ಭಾರತದ ಶಸ್ತ್ರಾಸ್ತ್ರ ಆಮದಿನಲ್ಲಿ ಶೇ.11ರಷ್ಟು ಇಳಿದಿದೆ ಎ೦ದು ತಿಳಿಸಿದೆ. ಆಮದು: ಯಾವ ದೇಶದ ಪಾಲು ಎಷ್ಟು? ಭಾರತ ಶೇ.11, ಸೌದಿ ಅರೇಬಿಯಾ ಶೇ.6, ಕತಾರ್ ಶೇ.6.4, ಆಸ್ಟ್ರೇಲಿಯಾ ಶೇ.4.7, ಚೀನಾ ಶೇ.4.6, ಈಜಿಪ್ಟ್ ಶೇ.4.5, ದಕ್ಷಿಣ ಕೊರಿಯಾ ಶೇ.3.7, ಪಾಕಿಸ್ತಾನ ಶೇ.3.7, ಜಪಾನ್ ಶೇ.3.5, ಅಮೆರಿಕ ಶೇ.2.7, ಇತರೇ ಶೇ.45 ರಷ್ಟು ಪಾಲನ್ನು ಹೊಂದಿದೆ. ರಫ್ತು: ಯಾವ ದೇಶದ ಪಾಲು ಎಷ್ಟು? ಅಮೆರಿಕ ಶೇ.40, ರಷ್ಯಾ ಶೇ.16, ಫ್ರಾನ್ಸ್ ಶೇ.11, ಚೀನಾ ಶೇ.5.2, ಜರ್ಮನಿ ಶೇ.4.2, ಇಟಲಿ ಶೇ.3.8, ಇಂಗ್ಲೆಂಡ್ ಶೇ.3.2, ಸ್ಪೇನ್ ಶೇ.2.6, ದಕ್ಷಿಣ ಕೊರಿಯಾ ಶೇ.2.4, ಇಸ್ರೇಲ್ ಶೇ.2.3, ಇತರೇ ಶೇ.9.4 ಪಾಲನ್ನು ಹೊಂದಿದೆ.
ಕೋಲ್ಕತ್ತಾ: ಕೆಲ ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ (Urination) ಮಾಡಿ ಭಾರೀ ವಿವಾದ ಉಂಟಾಗಿತ್ತು. ಇದೀಗ ಭಾರತೀಯ ರೈಲ್ವೆಯಲ್ಲೂ (Indian Railways) ಸಿಬ್ಬಂದಿ ಮಹಿಳೆಯೊಬ್ಬರ (Woman) ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವರದಿಯಾಗಿದೆ. ಅಮೃತಸರದಿಂದ ಕೋಲ್ಕತ್ತಾ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ರೈಲಿನ ಟಿಕೆಟ್ ಪರೀಕ್ಷಕ (TTE) ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ. ವರದಿಗಳ ಪ್ರಕಾರ, ಮಹಿಳೆ ತನ್ನ ಪತಿಯೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಮಲಗಿದ್ದ ವೇಳೆ ರೈಲಿನಲ್ಲಿ ನಿಯೋಜನೆಗೊಂಡಿದ್ದ ಟಿಕೆಟ್ ಪರೀಕ್ಷಕ ಮುನ್ನಾ ಕುಮಾರ್ ಮಹಿಳೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕುಮಾರ್ ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದಾನೆ. ಆದರೆ ಮಹಿಳೆಯ ಪತಿ ಟಿಟಿಇ ಯನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಮುನ್ನಾ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಮದ್ಯಪಾನ ಮಾಡಿ…
ನೀವು ಸಹ ಪಡಿತರ ಚೀಟಿ ಫಲಾನುಭವಿಗಳಾಗಿದ್ದರೆ ಮತ್ತು ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭವನ್ನು ಪಡೆಯುತ್ತಿದ್ದರೆ, ನಿಮ್ಮ ಪಾಲಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಸರ್ಕಾರದ ಈ ಆದೇಶದ ನಂತರ ಪಡಿತರ ಸಂಗ್ರಹಣೆಕಾರರು ಯಾವುದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರ ನೀಡಲು ಸಾಧ್ಯವಿಲ್ಲ, ಏಕೆಂದರೆ ಸರ್ಕಾರವು ಈ ಪಡಿತರ ಸಂಗ್ರಹಣೆಕಾರರಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಒನ್ ನೇಷನ್ ಒನ್ ಪಡಿತರ ಚೀಟಿ ಯೋಜನೆ’ ಕೂಡ ಇಡೀ ದೇಶದಲ್ಲಿ ಇದೀಗ ಜಾರಿಗೆ ಬಂದಿದ್ದು, ಬಳಿಕ ಎಲ್ಲ ಅಂಗಡಿಗಳಲ್ಲಿ ಆನ್ ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಈಗ ಯಾವ ಫಲಾನುಭವಿಗೂ ಕಡಿಮೆ ಪಡಿತರ ಸಿಗುವುದಿಲ್ಲ ಪಡಿತರ ತೂಕದಲ್ಲಿನ ವಂಚನೆಗೆ ಕಡಿವಾಣ ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನಡಿಯಲ್ಲಿ, ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು…
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ (Vidhanasabha Election) ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ (Congres) ನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ದಲಿತ ಎಡ ಸಮುದಾಯಕ್ಕೆ 15 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಸಮುದಾಯದ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಯಲ್ಲಿ ಠಿಕಾಣಿ ಹಾಕಿದ್ದಾರೆ. ಮಾಜಿ ಸಂಸದರಾದ ಕೆ.ಹೆಚ್. ಮುನಿಯಪ್ಪ (K H Muniyappa) , ಬಿ.ಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್. ಆಂಜನೇಯ (Aanjaneya), ಆರ್.ಬಿ ತಿಮ್ಮಾಪುರ, ಸಂಸದ ಎಲ್. ಹನುಮಂತಯ್ಯ ಎಐಸಿಸಿ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭೇಟಿಗೆ ಸಮಯ ಕೇಳಿದ್ದು ಸಂಜೆ 6 ಗಂಟೆಗೆ ಸಭೆ ನಡೆಯುವ ಸಾಧ್ಯತೆಗಳಿದೆ. ಎಡ ಸಮುದಾಯದ ನಾಯಕರು ಪಾವಗಡ, ದೇವನಹಳ್ಳಿ, ಕೆಜಿಎಫ್, ಹೊಳಲ್ಕೆರೆ, ಶಿವಮೊಗ್ಗ ಗ್ರಾಮಂತರ, ಮಾಯಕೊಂಡ, ಶಿರಹಟ್ಟಿ, ಔರಾದ್, ಲಿಂಗಸ್ಗೂರು ಸೇರಿದಂತೆ 15 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಕಳೆದ ಬಾರಿ 11 ಸ್ಥಾನಗಳನ್ನು ನೀಡಿದ್ದು ಈ ಬಾರಿ ಹದಿನೈದಕ್ಕೆ ಏರಿಸಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ…