Author: Prajatv Kannada

ಬೆಂಗಳೂರು: ಲಿಂಗಾಯತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು(Minister R.Ashok) ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ (Bangalore)ಮಾತನಾಡಿದ ಕಂದಾಯ ಇಲಾಖೆ ಸಚಿವ ಆರ್. ಅಶೋಕ್, ಈಗಾಗಲೇ ಮೋದಿ ಸಮುದಾಯವನ್ನು ಟೀಕಿಸಿದ ರಾಹುಲ್ ಗಾಂಧಿಯವರಿಗೆ ಶಿಕ್ಷೆಯಾಗಿದೆ. ರಾಹುಲ್ ಗಾಂಧಿ ಈಗ ಫುಟ್ಪಾತ್ ಮೇಲೆ ಅಲೆದಾಡುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರುವುದಿಲ್ಲ ಎಂದರು.ಲಿಂಗಾಯಿತ ಸಮುದಾಯದ ಕೋಟ್ಯಂತರ ಜನರ ಶಾಪ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ತಟ್ಟಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶಕ್ಕೆ ಸಿದ್ದರಾಮಯ್ಯ ಅವರೇ ಅಡಿಗಲ್ಲು ಹಾಕಿದ್ದಾರೆ. ಈ ಹಿಂದೆ ವೀರಶೈವ ಲಿಂಗಾಯಿತ ಸಮುದಾಯ ಒಡೆಯಲು ಯತ್ನಿಸಿದ್ದರು ಎಂದು ಅಶೋಕ್ ಟೀಕಿಸಿದ್ದಾರೆ.

Read More

ಬೆಂಗಳೂರು: ಹಸಿರು ಸಂರಕ್ಷಣೆಯ ಪ್ರಚಾರದ ಉದ್ದೇಶದಿಂದ (RCB )ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್‌(RR) ಎದುರು ಹಸಿರು(Green) ಜೆರ್ಸಿ ತೊಟ್ಟು ಕಣಕ್ಕಿಳಿದಿದೆ. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 32ನೇ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್‌ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ರಾಜಸ್ಥಾನ ರಾಯಲ್ಸ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿದೆ. ಇನ್ನು ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿಯೇ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆರ್‌ಸಿಬಿ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದ್ದು, ವೇಯ್ನ್ ಪಾರ್ನೆಲ್ ಬದಲಿಗೆ ಡೇವಿಡ್ ವಿಲ್ಲಿ ತಂಡ ಕೂಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕೂ ಫೀಲ್ಡಿಂಗ್ ಮಾಡಲು ಫಾಫ್ ಡು ಪ್ಲೆಸಿಸ್‌ ಸಂಪೂರ್ಣ ಫಿಟ್ ಆಗದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ, ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಇಂಪ್ಯಾಕ್ಟ್‌ ಆಟಗಾರನ ರೂಪದಲ್ಲಿ ಫಾಫ್ ಡು…

Read More

ಬೆಂಗಳೂರು: ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ಆರ್‌ಸಿಬಿ (RCB) ತನ್ನ 7ನೇ ಪಂದ್ಯದಲ್ಲಿ ರಾಜಸ್ಥಾನ್ (Rajasthan Royals) ರಾಯಲ್ಸ್ ವಿರುದ್ಧ ತವರಿನಲ್ಲಿ ಸೆಣಸಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್​ನಿಂದ ಆರ್​ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. 16ನೇ ಆವೃತ್ತಿಯಲ್ಲಿ 7ನೇ ಪಂದ್ಯವಾಡುತ್ತಿರುವ ಆರ್‌ಸಿಬಿ ತವರಿನಲ್ಲೇ ಪಿಂಕ್ ಆರ್ಮಿ ವಿರುದ್ಧ ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿ ಹಿಡಿದಿದೆ. ʻನಮ್ಮ ಹಸಿರು ಭೂಮಿಗಾಗಿʼ ಎಂಬ ಸಂಕಲ್ಪದೊಂದಿಗೆ ʻವಿಶೇಷ ಪಂದ್ಯಕ್ಕೆ ವೇದಿಕೆ ಸಿದ್ಧವಾಗುತ್ತಿದ್ದಂತೆ, ನಮ್ಮ ಪರಿಸರಕ್ಕಾಗಿ ಪ್ರತಿಜ್ಞೆ ತೆಗೆದುಕೊಳ್ಳೋಣʼ, ʻಮುಂದಿನ ಪೀಳಿಗೆಗಾಗಿ ಹಸಿರು ಪರಿಸರ…

Read More

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 67,806 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,92,854 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 01,947 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,39,528 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 01,43,899 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Read More

ಹುಬ್ಬಳ್ಳಿ: ನಾಗಪುರದಿಂದ ಯಾರೇ ಬಂದರೂ ಅವರಿಂದ ಯಶಸ್ವಿ ಚುನಾವಣೆ ಮಾಡಲು ಆಗುವುದಿಲ್ಲ. ಸ್ಥಳೀಯವಾಗಿ ನಮಗೆ ಗುರುತಿರುತ್ತೆ, ಹೊರಗಿನಿಂದ ಬಂದವರಿಗೆ ಎಲ್ಲಾ ಮಾಹಿತಿ ಇರುವುದಿಲ್ಲ. ತಿಳಿದುಕೊಳ್ಳುವಷ್ಟರಲ್ಲಿ ಚುನಾವಣೆ ಮುಗಿದಿರುತ್ತೆ, ಅನುಭವದಲ್ಲಿ ಇದನ್ನೆಲ್ಲಾ ನೋಡಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ನಾಗಪುರದಿಂದ ನೂರಾರು ಜನರ ತಂಡ ಬಂದಿದೆ ಅಂತಾ ಹೇಳ್ತಾರೆ, ಆದರೆ ನಾನು ನೋಡಿಲ್ಲ. ಅಕಸ್ಮಾತ್ ಬಂದಿದ್ರೆ ನಾನೊಂದು ಹೇಳುತ್ತೇನೆ. ಇತ್ತೀಚೆಗೆ ನಾಗಪುರದಲ್ಲಿ ಪದವೀಧರರ ಕ್ಷೇತ್ರದ ಚುನಾವಣೆ ನಡೆಯಿತು, ಇಷ್ಟೆಲ್ಲಾ ಎಕ್ಸ್‌ಪರ್ಟ್ ಇರುವವರು ನಾಗಪುರದ ಪದವೀಧರರ ಚುನಾವಣೆಯಲ್ಲಿ ಯಾಕೆ ಸೋತರು ತಿಳಿಸಲಿ ಎಂದ ಅವರು, ನಾನು ಕಾನೂನುಬಾಹಿರ ಕೆಲಸ ಮಾಡಲ್ಲ, ನನ್ನ ಚಲನವಲನದ ಮೇಲೆ ಏನು ನಿಗಾ ಇಡುತ್ತಾರೆ ಎಂದು ಪ್ರಶ್ನಿಸಿದರು. ಲಿಂಗಾಯತರಿಗೆ ಈ ಬಾರಿ ಹೆಚ್ಚು ಟಿಕೆಟ್ ಕೊಡಲಾಗಿದೆ. ಕಾಂಗ್ರೆಸ್ (Congress) ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ ಜೊತೆ ನಾನು ಮಾತಾಡುತ್ತೇನೆ. ಕಾಂಗ್ರೆಸ್ ವರಿಷ್ಠರು ಈಗಾಗಲೇ ಅವರ ಜೊತೆ ಮಾತಾಡಿದ್ದಾರೆ,…

Read More

ಧಾರವಾಡ: ತವನಪ್ಪ ಅಷ್ಟಗಿ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರ ಶಕ್ತಿಗನುಗುಣವಾಗಿ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ (Satish jarkiholi) ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ವರಿಷ್ಠರ ಸೂಚನೆ ಮೇರೆಗೆ ನಾನು ತವನಪ್ಪ ಅವರ ಮನೆಗೆ ಬಂದಿದ್ದೆ. ಇನ್ನು ಮುಂದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ. ಪಕ್ಷೇತರರಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ನಾಳೆ ಅದನ್ನು ವಾಪಸ್ ಪಡೆದು ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲುತ್ತಾರೆ ಎಂದರು. ಮೊದಲು ನಾವೇ ಅಷ್ಟಗಿ ಅವರನ್ನು ಸಂಪರ್ಕ ಮಾಡಿದ್ದೆವು. ಈಗ ನಾವು ಬಂದು ವಿನಂತಿ ಮಾಡಿದ್ದಕ್ಕ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಷ್ಟಗಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಎಫೆಕ್ಟ್ ಕ್ಷೇತ್ರದ ಜೊತೆಗೆ ಬೇರೆ ಕಡೆಯೂ ಆಗಲಿದೆ. ತವನಪ್ಪ ಸಣ್ಣ ಸಮಾಜದವರಾದರೂ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದರು.

Read More

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಬಲ ಪಡಿಸುವ ಜೊತೆಗೆ ಅಭ್ಯರ್ಥಿಗಳ ಗೆಲುವಿಗೆ ಕೇಂದ್ರ ಸಚಿವ(Pralhad joshi) ಪ್ರಹ್ಲಾದ ಜೋಶಿ ಶತಾಯು ಗತಾಯು ಹೋರಾಟ ನಡೆಸಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರ ಹಾಗೂ ಬಿಜೆಪಿ ನಾಯಕರ ಜೊತೆಗೆ ಸಭೆ ನಡೆಸುವ ಮೂಲಕ ಹೊಸ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹೌದು.. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯ, ಜೆ.ಸಿ.ನಗರದಲ್ಲಿರುವ ಮಾಧ್ಯಮದ ಕೇಂದ್ರದಲ್ಲಿ ಸಭೆ ನಡೆಸುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಒಂದಿಲ್ಲೊಂದು ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ನಿರ್ಧಾರ ಮಾಡಿದ್ದಾರೆ. ಅಲ್ಲದೇ ಹುಬ್ಬಳ್ಳಿಗೆ ಆಗಮಿಸಿದ ಜೋಶಿಯವರು, ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಇನ್ನೂ ಕಾರ್ಯಕರ್ತರಲ್ಲಿ ಜವಾಬ್ದಾರಿ ವಹಿಸುವ ಮೂಲಕ ಮತದಾರರನ್ನು ಜಾಗೃತರನ್ನಾಗಿ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಮಹೇಶ ಟೆಂಗಿನಕಾಯಿ, ಸಚಿವ ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಬಹುತೇಕ ನಾಯಕರು ಭಾಗವಹಿಸಿದ್ದರು.

Read More

ಅಲಚೂರು ಅರಸರ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದವರು ಮತ್ತು ಸಾಮಾಜಿಕ ಸುಧಾರಕರಾಗಿದ್ದವರು ಬಸವಣ್ಣ.ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡದ ಕವಿಯಾಗಿದ್ದರು.ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು. ಬಸವಣ್ಣ ಲಿಂಗ ಸಾಮಾಜಿಕ ತಾರತಮ್ಯ ಮೂಡನಂಬಿಕೆಗಳನ್ನು ನಿವಾಕರಿಸಿದರು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿ ಆಗಿ ಅವರ ಅನುಭವ ಮಂಟಪ ಅಥವಾ ಅಧ್ಯಾತ್ಮಿಕ ಅನುಭವದ ಭವನದ ಇಲ್ಲಿ ಎಲ್ಲಾ ಸಾಮಾಜಿಕ ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರನ್ನು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತ ಕೋರಿದರು. ಬಾಲ್ಯದ ಜೀವನ 8ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ ಬಸವಣ್ಣನವರು ತನಗಿಂತ ಹಿರಿಯರಾದ ಅಕ್ಕ ನಾಗಮ್ಮನಿಗೆ ಕೊಡಲು ಹೇಳುತ್ತಾರೆ. ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು. ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ ಬಸವಣ್ಣ ಪುರುಷ ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ. ಬಸವಣ್ಣ 12 ವರ್ಷಗಳ ಕಾಲ ಕೂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು. ನಂತರ ಲಕುಲಿಶಾ…

Read More

ರಾಯಚೂರು ಜಿಲ್ಲೆಯಲ್ಲಿ (Matka) ಮಟ್ಕಾ ಬುಕ್ಕಿಗಳ ಹಾವಳಿ ಹೆಚ್ಚಾಗಿದ್ದು. ಆದ್ದರಿಂದ  ಮೂವರು  ಮಟ್ಕಾ ಬುಕ್ಕಿಗಳನ್ನ  ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು  ಮಟ್ಕಾ ಬುಕ್ಕಿಗಳನ್ನ  ಗಡಿಪಾರು ಮಾಡಲಾಗಿದೆ. ನಿಂಗಪ್ಪ, ಆದಪ್ಪ, ಮತ್ತು ಶಾಸ್ತ್ರೀ ಎಂಬವರನ್ನ  ಗಡಿಪಾರು ಮಾಡಿ  ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್   ಆದೇಶ ಹೊರಡಿಸದ್ದಾರೆ.    ಇತ್ತಿಚಿಗೆ ಜಿಲ್ಲೆಯಲ್ಲಿ  ಜೂಜು, ಮಟ್ಕಾ ಬುಕ್ಕಿಗಳ ಹಾವಳಿ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರು, ಕದ್ದುಮುಚ್ಚಿ ಮಟ್ಕಾ ದಂದೆ ನಡೆಸುತ್ತಿದ್ದ  ಮೂವರನ್ನ ಜಿಲ್ಲೆಯಿಂದ ಹೊರಗೆ ಹಾಕಲಾಗಿದೆ. ಚುನಾವಣೆಯ ಮುನ್ನವೇ  ಮಟ್ಕಾ ಚಟುವಟಿಕೆಯಲ್ಲಿ ಭಾಗಿಯಾದ ಜೂಜುಕೋರರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದ್ದು, ಮತ್ತೆ ಯಾರಾದರೂ ಈ ದಂದೆಯಲ್ಲಿ ಕಾಣಿಸಿಕೊಂಡರೆ ಅವರನ್ನು ಕೂಡ ಗಡಿ ಪಾರು ಮಾಡವುದಾಗಿ ಎಚ್ಚರಿಕೆ ಕೊಡಲಾಗಿದೆ

Read More

ಮಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel), ಲಿಂಗಾಯಿತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಸಿದ್ದರಾಮಯ್ಯ ರಾಜ್ಯದ 7 ಕೋಟಿ ಜನತೆಗೆ ಅಪಮಾನಿಸಿದ್ದಾರೆ. ತಕ್ಷಣ ಅವರು ಕ್ಷಮೆ ಕೋರಬೇಕು ಎಂದರು. ಲಿಂಗಾಯಿತ ಸಮುದಾಯ ಭ್ರಷ್ಟಾಚಾರಿ ಸಮುದಾಯ ಎಂದು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರ ಒಂದು ಮುಖ ಇಂದು ಬಹಿರಂಗವಾಗಿದೆ. ಪ್ರಧಾನಿ ಮೋದಿಯವರನ್ನು ಅವಮಾನ ಮಾಡಿದ್ದಕ್ಕೆ ರಾಹುಲ್ ಗಾಂಧಿಗೆ ಯಾವ ಸ್ಥಿತಿ ಬಂದಿದೆ. ಅದೇ ಸ್ಥಿತಿ ಸಿದ್ದರಾಮಯ್ಯನವರಿಗೂ ಬರಬೇಕು. ಜನರೇ ಸಿದ್ದರಾಮಯ್ಯನವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More