ಬೆಂಗಳೂರು: ಶ್ರೀನಿವಾಸ ವೈದ್ಯರ ನಿಧನಕ್ಕೆ ನಾಡೋಜ ಮಹೇಶ್ ಜೋಶಿ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು,ಶ್ರೀನಿವಾಸ ವೈದ್ಯ ಅವರ ನಿಧನ ವಾರ್ತೆ ಆಘಾತ ತಂದಿದೆ. ಅವರ ಅಗಲುವಿಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಪಾರ ನಷ್ಟವಾಗಿದೆ ಎಂದರು. ಶ್ರೀನಿವಾಸ ವೈದ್ಯ ಮೂಲತಃ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 1936ರ ಏಪ್ರಿಲ್ 4 ರಂದು ಜನಿಸಿದ್ದರು. ತಂದೆ ಬಿ.ಜಿ. ವೈದ್ಯರು ಸುಪ್ರಸಿದ್ಧ ವಕೀಲರು. ತಾಯಿ ಸುಂದರಬಾಯಿ. ಇವರ ಅಜ್ಜ ಎಂದರೆ ತಾಯಿಯ ತಂದೆ ನರಗುಂದಕರ್ ರಾಮರಾ ಕರ್ನಾಟಕದ ಸಪ್ತರ್ಷಿಗಳಲ್ಲೊಬ್ಬರು ಎಂದು ಗುರುತಿಸಿಕೊಂಡವರು. ಕಾಲೇಜಿನ ದಿನಗಳಲ್ಲಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ʻಗಗ್ಗಯನ ಗಡಿಬಿಡಿʼ, ʻದಾಂಪತ್ಯದ ಬೊಂಬೆʼ, ʻತಿರುವು-ಮುರುವುʼ ಮುಂತಾದ ಅನೇಕ ನಾಟಕಗಳಲ್ಲಿ ಪಾತ್ರ ವಹಿಸಿದ್ದರು. ವಿದ್ಯಾವರ್ಧಕ ಸಂಘದವರು ಏರ್ಪಡಿಸುತ್ತಿದ್ದ ಸಾಹಿತ್ಯ ಸ್ಪರ್ಧೆಗಳಲ್ಲಿ ಅವರು ಹಲವಾರು ಬಹುಮಾನಗಳನ್ನು ಗಳಿಸಿದ್ದರು ಎಂದು ಮಹೇಶ್ ಜೋಶಿ ನೆನಪಿಸಿಕೊಂಡಿದ್ದಾರೆ.
Author: Prajatv Kannada
ಬೆಂಗಳೂರು: ವರುಣಾ (Varuna) ಕ್ಷೇತ್ರಕ್ಕೆ ಮತ್ತೆ ಮತ ಪ್ರಚಾರಕ್ಕೆ ಸಿದ್ದರಾಮಯ್ಯ (Siddaramaiah) ಆಗಮಿಸಿದ್ದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಕಾಲೆಳೆದಿದ್ದಾರೆ. ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು. ಇವತ್ತು ಮತ್ತೆ ಬಂದಿದ್ದಾರೆ. ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೇ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಿ ಬಳಿಕ ವರುಣಾ ಕ್ಷೇತ್ರದಲ್ಲಿ ಮತ ಪ್ರಚಾರ ನಡೆಸಲಿದ್ದಾರೆ. ರಾತ್ರಿ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಬರಲಿದ್ದಾರೆ. ಕಳೆದ ಬಾರಿ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಈ ಬಾರಿ ಪುತ್ರ ಯತೀಂದ್ರ ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ನಿಂತಿದ್ದಾರೆ. ಈ ಬಾರಿ ಸಿದ್ದರಾಮಯ್ಯನವರನ್ನು ಸೋಲಿಸಲು ಬಿಜೆಪಿ ಸೋಮಣ್ಣನವರನ್ನು ಕಣಕ್ಕೆ ಇಳಿಸಿದ್ದು ಭರ್ಜರಿ ಪ್ರಚಾರದಲ್ಲಿ ತೊಡಗಿದೆ.
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ ದೂರು ನೀಡಿತ್ತು. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದರು. ಪ್ರಕರಣದ ತನಿಖೆ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಕಳವುವಾಗಿರುವ ಅನುಮಾನವಿದ್ದರಿಂದ ಡೆಲ್ಲಿ ಕ್ಯಾಪಿಟಲ್ ತಂಡ ಈ ಬಗ್ಗೆ ಬೆಂಗಳೂರು ಪೊಲೀಸರನ್ನು ಸಂಪರ್ಕ ಮಾಡಿದ್ದರು. ಬೆಂಗಳೂರು ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಕೊನೆಗು ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕಳವಾಗಿದ್ದ 17 ಬ್ಯಾಟ್ಗಳು, ಗ್ಲೌಸ್, ಹೆಲ್ಮೇಟ್, ಪ್ಯಾಡ್ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಕರ್ನಾಟಕ ವಿಧಾನಸಭೆಯ ಚುನಾವಣೆ-2023ರ ಮತದಾನ ಮೇ 10 ರಂದು ನಡೆಯಲಿದ್ದು, ಶೇಕಡಾವಾರು ಮತದಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಲಹಂಕ ವಲಯ ವ್ಯಾಪ್ತಿಯಲ್ಲಿ ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪೂರ್ಣಿಮಾ.ಪಿ.ವಿ ರವರು ಇಂದು ಜಕ್ಕೂರಿನಲ್ಲಿರುವ ಜವಾಹರಲಾಲ್ ನೆಹರೂ ಉನ್ನತ ವಿಜ್ಞಾನ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿರುವ ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್(ಭಾರತೀಯ ವಿಜ್ಞಾನಿ) ರವರ ನೇತೃತ್ವದಲ್ಲಿ ಇಂದು ಅಧ್ಯಯನ ಕೇಂದ್ರದ ಮುಖ್ಯ ಆಡಳಿತಾಧಿಕಾರಿ, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಸಂಸ್ಥೆಯ ಆಡಳಿತ ಸಿಬ್ಬಂದಿಗಳಿಗೆ ಮತದಾನ ಮಾಡುವ ಬಗ್ಗೆ ಅರಿವು ಮೂಡಿಸಿದ ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ವಿವಿಧ ಸ್ಥಳಗಳಲ್ಲಿ ಮತ ಜಾಗೃತಿ: ಯಲಹಂಕ ವಲಯ ವಿದ್ಯಾರಣ್ಯಪುರ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಂದಂತಹ ಭಕ್ತರುಗಳಿಗೆ, ಕಾಪಿ ಬೋರ್ಡ್, ದಾಸರಹಳ್ಳಿ, ನಂಜಪ್ಪ ವೃತ್ತ ನಿವಾಸಿಗಳು, ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮಾಲೀಕರು, ಆಟೋ ಚಾಲಕರು, ಉದ್ದಿಮೆದಾರರು, ಕೋಡಿಗೆಹಳ್ಳಿ ಸ್ವಾತಿ ಗಾರ್ಡನ್ ಹೋಟೆಲ್ ನೌಕರರು, ಗ್ರಾಹಕರು, ಸಾರ್ವಜನಿಕರಿಗೆ ಬೀದಿ ಬದಿ ನಾಟಕ, ಮತದಾನ ಜಾಗೃತಿ ಹಾಗೂ ಜಾಥಾ ಮೂಲಕ ಅಭಿಯಾನ ನಡೆಸಿ…
ದಾವಣಗೆರೆ: ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ಶಾಸಕ ಅರವಿಂದ ಬೆಲ್ಲದ ಅವರು ಹೇಳಿಕೆ ನೀಡಿದ ಬಳಿಕ ಈ ವಿಚಾರ ಪಕ್ಷದೊಳಗೆ ಬಹಳವಾಗಿ ಚರ್ಚೆಯಾಗುತ್ತಿದೆ. ಇದೀಗ ಶಾಸಕ ರೇಣುಚಾರ್ಯ ಅವರು ಸಹ ಈ ಬಗ್ಗೆ ಹೇಳಿಕೆ ನೀಡಿದ್ದು, ವೀರಶೈವ ಲಿಂಗಾಯಿತರನ್ನು ಸಿಎಂ ಎಂದು ಘೋಷಣೆ ಮಾಡಿದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯಿತರನ್ನು ಈ ಬಾರಿ ಸಿಎಂ ಮಾಡಬೇಕು. ಆಗ ರಾಜ್ಯದಲ್ಲಿ ಹೆಚ್ಚಿನ ಸೀಟು ಬರುತ್ತದೆ. ಸೂರ್ಯ ಚಂದ್ರ ಇರುವುದು ಎಷ್ಟೋ ಸತ್ಯವೋ ಅಷ್ಟೇ ಸತ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ರಾಜ್ಯದ ಬಿಜೆಪಿ ಸರಕಾರ ಎಲ್ಲ ವರ್ಗದ ಜನರಿಗೆ ಸರ್ವರಿಗೂ ಸಮಪಾಲು ಸಮಬಾಳು ಎಂಬಂತೆ ಬಿಜೆಪಿ ಅಧಿಕಾರ ನೀಡಿದೆ ಎಂದರು. ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಹಿನ್ನೆಡೆಯಾಗುದಿಲ್ಲವೆ ಎಂಬ ಪತ್ರರ್ಕತರ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಪಕ್ಷ ಬಿಡಬಾರದಿತ್ತು. ಜನಸಂಘದಿಂದ ಬಂದವರು. ಜಗದೀಶ್ ಶೆಟ್ಟರ್ ಸ್ವಯಂಕತ ಅಪರಾಧ ಮಾಡಿಕೊಂಡಿದ್ದಾರೆ. ಆದರೆ ಅವರಿಂದ…
ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಯುವಕರ ಗುಂಪಿನ ನಡುವೆ ಗಲಾಟೆ ನಡೆದು, ಯುವಕನೋರ್ವನ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ಶುಕ್ರವಾರ ರಾತ್ರಿ ನಡೆದಿದೆ. ಹತ್ಯೆಯಾದ ಯುವಕನನ್ನು ಕೋಡಿಹಳ್ಳಿ ಬಡಾವಣೆ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ.ಹತ್ಯೆಯಾದ ನವೀನ್ ಹಾಗೂ ಆತನ ಸ್ನೇಹಿತ ಅರುಣ್ ಕುಮಾರ್ ಇಬ್ಬರೂ ಸ್ನೇಹಿತರಾಗಿದ್ದು, ಮೊಬೈಲ್ ಕಳ್ಳತನ ಇವರ ಕಸುಬಾಗಿತ್ತು. ಕಳವು ಮಾಡಿದ ಮೊಬೈಲ್‌ಗಳನ್ನು ಸದಾತ್ ಎಂಬವನ ಬಳಿ ಮಾರಾಟ ಮಾಡುತ್ತಿದ್ದರು. ಸದಾತ್ ಮೊಬೈಲ್ ಖರೀದಿಸಿ ಬಾಕಿ ಹಣವನ್ನು ಉಳಿಸಿಕೊಂಡಿದ್ದ. ಬಾಕಿ ಹಣವನ್ನು ಕೇಳಲು ನವೀನ್ ಹಾಗೂ ಅರುಣ್ ಸತ್ಯಸಾಯಿನಗರಕ್ಕೆ ತೆರಳಿದ್ದರು. ಬಾಕಿ ಹಣ ವಸೂಲಿಗೆ ತೆರಳಿದ್ದ ವೇಳೆ ನವೀನ್, ಅರುಣ್ ಕುಮಾರ್ ಹಾಗೂ ಸದಾತ್ ಗುಂಪಿನ ನಡುವೆ ಗಲಾಟೆ ನಡೆದಿದೆ. ರಂಜಾನ್ (Ramzan) ಹಬ್ಬ ಇರುವ ಕಾರಣ ಹಣ ಇಲ್ಲ. ನಂತರ ಕೊಡುವುದಾಗಿ ಸದಾತ್ ತಿಳಿಸಿದ್ದಾನೆ. ಹಣ ಕೊಡುವುದಿಲ್ಲ ಎಂಬ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡಿದ್ದಾರೆ. ನಂತರ…
ಬೆಳಗಾವಿ/ ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ (Ratna Mamani) ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್‌ಓ ಅಂಗಳದಲ್ಲಿದೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ (AAP) ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯ ಬಳಿಕ ಏ.20ರ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಸಹ ಕಾನೂನು ಬಾಹಿರ…
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರ ಸುಳ್ಳು ಸುದ್ದಿ ಹರಿಬಿಡುತ್ತಿದ್ದಾರೆ ಅವುಗಳಿಗೆ ಯಾರು ಕಿವಿಗೊಡಬೇಡಿ ತೇರದಾಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಶತಸಿದ್ಧ ಎಂದು ಡಾ.ಪದ್ಮಜೀತ ನಾಡಗೌಡ ಪಾಟೀಲ. ಹೇಳಿದರು. ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ವಿಧಾನ ಸಭಾ ಚುನಾವಣೆಯಲ್ಲಿ ಡಾ. ಪದ್ಮಜೀತ ನಾಡಗೌಡ ಪಾಟೀಲರು ಹಾಗೂ ಡಾ.ಎ.ಆರ್ ಬೆಳಗಲ್ಲಿ.ಯವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದು. ಅದು ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಮಾತೆ ಇಲ್ಲಾ. ಈಗಾಗಲೇ ನಾಮಪತ್ರ ಪರಿಶೀಲನೆ ಕಾರ್ಯ ಮುಕ್ತಾಯಗೊಂಡಿದೆ. Video Player 00:00 01:49 ನಾವು ಇಬ್ಬರು ಅಭ್ಯರ್ಥಿಗಳ ಹಿರಿಯರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸೋಮವಾರ ದಿವಸ ಒಬ್ಬರು ನಾಮಪತ್ರ ವಾಪಸ್ ಪಡೆದದ್ದು ಈ ಚುನಾವಣೆಯಲ್ಲಿ ಒಬ್ಬರನ್ನು ಕಣಕ್ಕೆ ಇಳಿಯುವುದು ಖಚಿತವೆಂದು ಸ್ಪಷ್ಟಪಡಿಸಿದ್ದಾರೆ. ಕಿಡಿಗೇಡಿಗಳ ವದಂತಿಗೆ ಕಿವಿ ಕೊಡದೆ ಸಂಪೂರ್ಣ ನಿಮ್ಮ ಬೆಂಬಲ ನಮಗಿರಲಿ ಎಂದು ಮನವಿ ಮಾಡಿದರು. ವರದಿ: ಪ್ರಕಾಶ ಕುಂಬಾರ, ಬಾಗಲಕೋಟೆ
ಹುಬ್ಬಳ್ಳಿ: ಹಬ್ಬ ಯಾವುದೇ ಇರಲಿ ಹುಬ್ಬಳ್ಳಿಯಲ್ಲಿ ಆಚರಣೆ ಅಂದರೆ ನಿಜಕ್ಕೂ ಅದೊಂದು ವಿಶೇಷವೇ ಸರಿ. ಸಣ್ಣ ಹಬ್ಬವಿದ್ದರೂ ಅದ್ದೂರಿಯಾಗಿ ಆಚರಣೆ ಮಾಡುವ ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹಾಗಿದ್ದರೇ ಬನ್ನಿ ಪವಿತ್ರ ರಂಜಾನ್ ಆಚರಣೆ ಝಲಕ್ ಹೇಗಿದೆ ನೋಡಿಕೊಂಡು ಬರೋಣ ಬನ್ನಿ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾ ಮೈದಾನ ಸೇರಿದಂತೆ ಲ್ಯಾಮಿಂಗ್ಟನ್ ರೋಡ್, ಚೆನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಆವರಣದಲ್ಲಿ ಲಕ್ಷಾಂತರ ಮುಸ್ಲಿಂ ಬಾಂಧವರು ರಂಜಾನ್ ಕೊನೆಯ ದಿನದ ಪ್ರಾರ್ಥನೆ ಸಲ್ಲಿಸಿದರು. ಹೌದು.. ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು, ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಿದ್ದಾರೆ. ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವೃತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ…
ಚಾಮರಾಜನಗರ: ಪ್ರತಿ ವರ್ಷದಂತೆ ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿಯಿನಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಗೆ ಐವರು ವಿದ್ಯಾರ್ಥಿಗಳು ಟಾಫರ್ ಆಗಿ ಹೊರಹೊಮ್ಮಿದ್ದು, ವಿಜ್ಞಾನ ವಿಭಾಗದಿಂದ ಎಂ. ಹರ್ಷಿತಾ(589) ಶೇ.98.16 ಪಡೆದುಕೊಂಡರೆ, ಕಲಾ ವಿಭಾಗದಿಂದ ಎಸ್.ವರ್ಷಿತಾ(581) ಶೇ.92.8 ಗಳಿಸಿದ್ದಾರೆ. ಆದರೆ, ಅಚ್ಚರಿ ಮೂಡಿಸುವಂತೆ ವಾಣಿಜ್ಯ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಒಂದೇ ಸಮನಾದ ಅಂಕವನ್ನು ಪಡೆದಿದ್ದಾರೆ. ಎಸ್.ಆರ್. ನೆಹನಾ ಛಾಯ, ಸಾಜಿದಾ, ಎಸ್.ಕೆ.ನಂದಿತಾ ಈ ಮೂವರು ಸಹ 586(ಶೇ.97.66) ಅಂಕ ಗಳಿಸುವ ಮೂಲಕ ಜಿಲ್ಲೆಗೆ ಟಾಫರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಟಾಫರ್ ಆಗಿರುವ ಎಂ. ಹರ್ಷಿತಾ ಕೊಳ್ಳೇಗಾಲದ ಪಟ್ಟಣದಲ್ಲಿರುವ ನಿಸರ್ಗ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಇವರು ಕೆಸ್ತೂರು ಗ್ರಾಮದವರಾಗಿದ್ದು, ಪ್ರಸ್ತುತ ಚಾಮರಾಜನಗರದಲ್ಲಿ ವಾಸವಾಗಿದ್ದಾರೆ. ಹನೂರಿನ ಎಲ್ಲೇಮಾಳ ಗ್ರಾಪಂನ ಪಿಡಿಒ ಕೆ.ಎಸ್.ಮಂಜುನಾಥ್ ಹಾಗೂ ಜ್ಯೋತಿ ಅವರ ಪುತ್ರಿಯಾಗಿದ್ದಾರೆ. ಕಲಾ ವಿಭಾಗದಲ್ಲಿ ಟಾಫರ್ ಆಗಿರುವ ಎಸ್. ವರ್ಷಿತಾ ಕೊಳ್ಳೇಗಾಲದ ಎಸ್.ವಿ.ಕೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದರು. ಇವರು ವಕೀಲ ಶ್ರೀರಾಮುಲು ಹಾಗೂ ಕರ್ಪಗಂ…