ಬೆಂಗಳೂರು: ಎಲ್ಲೆಲ್ಲಿ ಪಂಚ್ ಕೊಡಬೇಕು, ಎಲ್ಲೆಲ್ಲಿ ಗಂಭೀರವಾಗಿ ಮಾತನಾಡಬೇಕು ಎನ್ನುವ ವಿಚಾರದಲ್ಲಿ ಮೋದಿ ಮಾಸ್ಟರ್ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರ ಮಾತುಗಳನ್ನು ಹೊಸದಾಗಿ ನಾನು ಕೇಳುತ್ತಿಲ್ಲ. ಕಾರ್ಯಕ್ರಮದಲ್ಲಿ 50 ಸಾವಿರ ಜನ ಇದ್ದರೇ ಅವರ ಒಂದು ಮಾತಿನಿಂದಾಗಿ 45 ಸಾವಿರ ಜನ ಅವರ ಪರವಾಗುತ್ತಾರೆ. ಮೋದಿ ಮಾತುಗಳಲ್ಲಿ ನಿಜವಾಗಿಯೂ ತೂಕವಿರುತ್ತದೆ. ನಾನು ಪಾರ್ಲಿಮೆಂಟ್‍ನಲ್ಲಿ ಅವರ ಮಾತುಗಳನ್ನು ಕೇಳಿದ್ದೇನೆ ಸಾಕಷ್ಟು ಕಲಿತಿದ್ದೇನೆ. ಬಹಳ ತೂಕವಾಗಿ ಮಾತನಾಡುತ್ತಾರೆ. ವಿಷಯವನ್ನು ಅರ್ಥ ಮಾಡಿಕೊಂಡು ಚೆನ್ನಾಗಿ ಮಾತನಾಡ್ತಾರೆ ಎಂದು ಪ್ರಶಂಸಿಸಿದರು. ಬೆಂಗಳೂರು ಮೈಸೂರು ರಸ್ತೆ ಹೆದ್ದಾರಿ (Mysuru Bengaluru Highway) ಇಲ್ಲಿ ಲೋಕಾರ್ಪಣೆಗೊಳ್ಳುತ್ತಿರುವುದು ಮಂಡ್ಯ (Mandya) ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. 118 ಕಿ.ಮೀ ಅಷ್ಟು ಉದ್ದದ ಹೈವೇ ಇದ್ದಾಗಿದ್ದು, ಎಲ್ಲಿ ಬೇಕಾದರೂ ಉದ್ಘಾಟನೆ ಮಾಡಬಹುದಿತ್ತು. ಆದರೂ ಮಂಡ್ಯವನ್ನ ಉದ್ಘಾಟನೆಗಾಗಿ ಆಯ್ಕೆ ಮಾಡಿದ್ದಾರೆ. ಮಂಡ್ಯದ ಪ್ರಾಮುಖ್ಯತೆ ಏನು ಎಂದು ಪ್ರಧಾನಮಂತ್ರಿ ಅವರು ಗುರುತಿಸಿದ್ದಾರೆ. ಹಾಗಾಗಿ ಮಂಡ್ಯದಲ್ಲಿ ಉದ್ಘಾಟನೆ…
Author: Prajatv Kannada
‘ಪಠಾಣ್’ ಸಕ್ಸಸ್ ಬೆನ್ನಲ್ಲೇ ಶಾರುಕ್ ಖಾನ್ ನಟನೆಯ ‘ಜವಾನ್’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅಟ್ಲಿ ನಿರ್ದೇಶನದ ಈ ಚಿತ್ರದಲ್ಲಿ ಸೌತ್ ಸ್ಟಾರ್ಸ್ ಕೂಡ ನಟಿಸ್ತಿದ್ದಾರೆ. ವಿಜಯ್ ಸೇತುಪತಿ, ದಳಪತಿ ವಿಜಯ್, ನಯನತಾರಾ, ಪ್ರಿಯಾಮಣಿ ಚಿತ್ರದ ತಾರಾಗಣದಲ್ಲಿದ್ದು ಇದೀಗ ಚಿತ್ರಕ್ಕೆ ಸಂಜಯ್ ದತ್ ಎಂಟ್ರಿಕೊಟ್ಟಿದ್ದಾರೆ. ಸ್ಟಾರ್ ಕಾಸ್ಟ್‌ನಿಂದಲೂ ‘ಜವಾನ್’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. 200 ಕೋಟಿ ಬಜೆಟ್‌ನಲ್ಲಿ ಸ್ವತಃ ಕಿಂಗ್ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ 5 ಭಾಷೆಗಳಲ್ಲಿ ಸಿನಿಮಾ ಏಕಕಾಲಕ್ಕೆ ತೆರೆಗೆ ಬರ್ತಿದೆ. ಇತ್ತೀಚಿಗೆ ಸಾಲು ಸಾಲಾಗಿ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಸಂಜಯ್ ದತ್ ನಟಿಸ್ತಿದ್ದಾರೆ. KGF ನಂತರ KD, ಲಿಯೋ ಹೀಗೆ ಸಂಜು ಬಾಬಾ ನಟಿಸುತ್ತಿರುವ ಸೌತ್ ಸಿನಿಮಾಗಳ ಲಿಸ್ಟ್ ಬೆಳೀತಿದೆ. ಕೆಲ ದಿನಗಳ ಹಿಂದೆ ‘ಜವಾನ್’ ಚಿತ್ರದಲ್ಲಿ ಸಣ್ಣ ಪಾತ್ರ ಮಾಡಲು ತೆಲುಗಿನ ಅಲ್ಲು ಅರ್ಜುನ್‌ನ ಚಿತ್ರತಂಡ ಸಂಪರ್ಕಿಸಿತ್ತು ಎನ್ನಲಾಗಿತ್ತು. ‘ಪುಷ್ಪ’-2 ಸಿನಿಮಾದಲ್ಲಿ ಬ್ಯುಸಿ ಇರುವ ಅರ್ಜುನ್ ನಟಿಸೋಕೆ ನೋ…
ಲಾಸ್ ಏಂಜಲೀಸ್: ಇಂದು ತಡರಾತ್ರಿ ನಡೆಯಲಿರುವ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತದ ಆರ್ ಆರ್ ಆರ್ ಸಿನಿಮಾದ ನಾಟ್ಟು ನಾಟ್ಟು ಹಾಡನ್ನು ಲೈವ್ ಆಗಿ ಪ್ರಸ್ತುತಪಡಿಸಲಾಗುತ್ತದೆ. ಗಾಯಕರಾದ ಕಾಲಭೈರವ, ರಾಹುಲ್, ಸಂಗೀತ ನಿರ್ದೇಶಕ ಕೀರವಾಣಿ ಈ ಹಾಡನ್ನು ಪ್ರಸ್ತುತಪಡಿಸಲಿದ್ದು, ಈ ವೇಳೆ ಹಾಡಿಗೆ ಹಿನ್ನಲೆಯಲ್ಲಿ ನೃತ್ಯ ಮಾಡುವವರು ಯಾರು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಮೆರಿಕಾ ಮೂಲದ ನಟಿ ಲಾರೆನ್ ಗೊಟಿಲೆಬ್ ಎಂಬಾಕೆ ನಾಟ್ಟು ನಾಟ್ಟು ಹಾಡಿಗೆ ಹೆಜ್ಜೆ ಹಾಕಲಿದ್ದಾರೆ. ಇದಕ್ಕೆ ಮೊದಲು ಸ್ವತಃ ಜ್ಯೂ.ಎನ್ ಟಿಆರ್, ರಾಮ್ ಚರಣ್ ನೃತ್ಯ ಮಾಡಲಿದ್ದಾರೆಯೇ ಎಂದು ಅಭಿಮಾನಿಗಳಲ್ಲಿ ಕುತೂಹಲವಿತ್ತು. ಆದರೆ ಆಸ್ಕರ್ ನಂತಹ ವೇದಿಕೆಯಲ್ಲಿ ಪರ್ಫಾರ್ಮ್ ಮಾಡುವ ಮೊದಲು ಅಭ್ಯಾಸ ನಡೆಸಬೇಕು. ಆದರೆ ಅಭ್ಯಾಸ ನಡೆಸಲು ಸಮಯ ಸಿಗಲಿಲ್ಲ. ಹೀಗಾಗಿ ನಾವು ನೃತ್ಯ ಮಾಡುತ್ತಿಲ್ಲ ಎಂದು ಜ್ಯೂ.ಎನ್ ಟಿಆರ್ ಸ್ಪಷ್ಟಪಡಿಸಿದ್ದರು.
ನಿನ್ನೆಯಷ್ಟೇ ನಟ ನರೇಶ್ ಪವಿತ್ರಾ ಲೋಕೇಶ್ ಜೊತೆ ಮದುವೆಯಾದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಪವಿತ್ರಾ ಲೋಕೇಶ್ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದೇನೆ ಎನ್ನುವ ಅರ್ಥದಲ್ಲಿ ಅದನ್ನು ಬಿಂಬಿಸಿದ್ದರು. ತೆಲುಗು ಮಾಧ್ಯಮಗಳು ಈ ವಿಡಿಯೋ ಹಿಂದೆ ಬಿದ್ದಿದ್ದವು. ಅದು ರೀಲ್ ಅಥವಾ ರಿಯಲ್ ಎನ್ನುವ ಸತ್ಯವನ್ನು ಪತ್ತೆ ಹಚ್ಚಲು ಕಸರತ್ತು ಮಾಡಿದ್ದವು. ಈ ನಡುವೆ ತೆಲುಗು ನ್ಯೂಸ್ ಚಾನೆಲ್ ವೊಂದು ನರೇಶ್ ಹನಿಮೂನ್ ಟ್ರಿಪ್ ಮಾಡಿರುವ ವಿಡಿಯೋವನ್ನು ಪ್ರಸಾರ ಮಾಡಿದೆ. ನರೇಶ್ ಮತ್ತು ಪವಿತ್ರಾ ದುಬೈಗೆ ಹೋಗಿದ್ದ ವಿಡಿಯೋ ಅದಾಗಿದೆ. ಇದು ಕೂಡ ಅಸಲಿಯಾ? ಅಥವಾ ಸಿನಿಮಾದ ದೃಶ್ಯವಾ ಗೊತ್ತಿಲ್ಲ. ಆದರೆ, ಈ ಕುರಿತು ಮುಂದಿನ ದಿನಗಳಲ್ಲಿ ಸ್ಪಷ್ಟನೆ ಕೊಡುವುದಾಗಿಯೂ ನರೇಶ್ ತಿಳಿಸಿದ್ದಾರೆ. ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ನಟ ನರೇಶ್ ಹಂಚಿಕೊಂಡಿದ್ದರು. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ…
ಭಾರತ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಶ್ಯಾಮ್ ಬೆನಗಲ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎರಡೂ ಕಿಡ್ನಿ ಫೇಲ್ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲೇ ಅವರು ಡಯಾಲಿಸಿಸ್ ಗೆ ಒಳಗಾಗಿದ್ದು, ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಅವರ ಕಛೇರಿ ಸಿಬ್ಬಂದಿ ತಿಳಿಸಿದ್ದಾರೆ. ಭಾರತ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ಮತ್ತು ವಿಶೇಷ ಸಿನಿಮಾಗಳನ್ನು ನೀಡಿದ ನಿರ್ದೇಶಕರು. ಎಂಟು ರಾಷ್ಟ್ರ ಪ್ರಶಸ್ತಿಗಳನ್ನು ಇವರ ಚಿತ್ರಗಳು ಪಡೆದುಕೊಂಡಿವೆ. ಅಲ್ಲದೇ, ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣವನ್ನೂ ಪಡೆದಿದ್ದಾರೆ. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಭಾರತ ಸರಕಾರವು 2005ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಿದೆ. ಶಬಾನಾ ಅಜ್ಮಿ ಮತ್ತು ಅನಂತ್ ನಾಗ್ ಕಾಂಬಿನೇಷನ್ ನ ಅಂಕುರ್ ಇವರ ಮೊದಲ ಸಿನಿಮಾ. ಆನಂತರ ಮಥಣ್, ಭೂಮಿಕಾ: ದಿ ರೋಲ್, ವೆಲ್ ಡನ್ ಅಬ್ಬಾ, ಆರೋಹನ್, ನೇತಾಜಿ ಸುಭಾಸ್ ಚಂದ್ರ ಬೋಸ್ ಸೇರಿದಂತೆ ಸಾಕಷ್ಟು ಚಿತ್ರಗಳನ್ನು…
ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಿಥುನ್ ರೈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಮಿಥುನ್ ರೈ ಹೇಳಿಕೆಯ ಕುರಿತು ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಿಥುನ್ ರೈ ರನ್ನು ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಿಥುನ್ ರೈ ಹೇಳಿಕೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ. ಮಿಥುನ್ ರೈ ಹೆಸರನ್ನು ಬಳಸದೇ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ. ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು…
ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠವು 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ…
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್ಮೆಂಟ್ ನ 2ನೇ ಮಹಡಿಯಿಂದ ಕೆಳಗೆ ಬಿದ್ದು ಮಗು ಗಂಭೀರ ಗಾಯವಾಗಿರುವ ಹೃದಯವಿದ್ರಾವಕ ಘಟನೆ ಶುಕ್ರವಾರ ಜರುಗಿದೆ. ಶಿವಪ್ಪ ಎಂಬುವವರ ಮಗು ರಾಹುಲ್ ಅಪಾರ್ಟ್ಮೆಂಟ್ನಿಂದ ಬಿದ್ದಾತ. 2ನೇ ಮಹಡಿಯಿಂದ ಮಗು ಬೀಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ (Dhruva Narayan) ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಮನಗರದಲ್ಲಿ (Ramanagara) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷೇತ್ರದ ಮೂರು ಕಡೆ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮನಗರ ತಾಲೂಕಿನ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಧ್ರುವ ನಾರಾಯಣ್ ಅವರ ನಿಧನದಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ಮುಂದೂಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಶನಿವಾರ ಹೃದಯಾಘಾತದಿಂದ (Heart Attack) ಮೈಸೂರಿನ (Mysuru) ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ…
ಹೊಸಕೋಟೆ: ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವವರ 6 ತಿಂಗಳ ಮೃತಪಟ್ಟ ಮಗು. ಓವರ್ ಡೋಸ್ ಕೊಟ್ಟಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಓವರ್ ಡೋಸ್ ನೀಡಿದ್ದರಿಂದ ಮಗು ಮೃತಪಟ್ಟಿದೆ. ಆಸ್ಪತ್ರೆಯ ಎಲ್ಲಾ ಮೆಡಿಕಲ್ಗಳನ್ನು ಬಂದ್ ಮಾಡಿಸಿ ಪೋಷಕರಿಂದ ಗಲಾಟೆ ಮಾಡಲಾಗಿದೆ.