ಬಾಲಿವುಡ್ ನ ಖ್ಯಾತ ನಟ ಹಾಗೂ ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸತೀಶ್ ಗೆ ಎದೆನೋವು ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಯಾರಿ ರಸ್ತೆಯ ಮುಂಬೈನ ವರ್ಸೋವಾದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಸತೀಶ್ ನಿಧನದ ಸುದ್ದಿಯನ್ನು ಖ್ಯಾತ ನಟ ಅನುಪಮ್ ಖೇರ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರೊಂದಿಗೆ ಕೆಲಸ ಮಾಡಿದ್ದನ್ನೂ ನೆನಪಿಸಿಕೊಂಡಿದ್ದಾರೆ. ಕಂಗನಾ ರಣಾವತ್ ನಿರ್ದೇಶನದ ಎಮರ್ಜೆನ್ಸಿ ಸಿನಿಮಾದಲ್ಲಿ ಸತೀಶ್ ನಟಿಸುತ್ತಿದ್ದರು. ಈ ಸಿನಿಮಾದಲ್ಲಿ ಅನುಪಮ್ ಖೇರ್ ಕೂಡ ಪ್ರಮುಖ ಪಾತ್ರಲ್ಲಿ ನಟಿಸಿದ್ದರು. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಸತೀಶ್, ನಟನೆಯ ಜೊತೆಗೆ ನಿರ್ದೇಶಕನೂ ಆಗಿಯೂ ಖ್ಯಾತಿ ಘಳಿಸಿದ್ದರು.
Author: Prajatv Kannada
ಮಧ್ಯಪ್ರದೇಶ: ಮೂರು ದಿನಗಳ ಹಿಂದಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗುವ ಮೂಲಕ ಪೈಶಾಚಿಕತೆ ಮೆರೆದ ಘಟನೆ ವರದಿಯಾಗಿತ್ತು. ಇದೀಗ ಮಧ್ಯಪ್ರದೇಶದಲ್ಲೂ ಮಾನವ ಕುಲ ತಲೆತಗ್ಗಿಸುವ ಮತ್ತೊಂದು ಇಂಥವುದೇ ಘಟನೆ ನಡೆದಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಮಲೈಗಾಂವ್ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದ್ದು, ಮನೆ ಹಿಂದಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರ ಎಸಗಲಾಗಿದೆ. ಆರೋಪಿ ಈ ಕೃತ್ಯ ಎಸಗುತ್ತಿದ್ದ ಸಂದರ್ಭದಲ್ಲಿ ಎಚ್ಚರಗೊಂಡ ಮನೆ ಮಾಲೀಕ ಹೊರ ಬಂದಿದ್ದು ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಈಗ ವಿವಿಧ ಕಲಂ ಗಳ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೈದರಾಬಾದ್: ಪಕ್ಷ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ ಎಂದು ತೆಲಂಗಾಣ (Telangana) ಬಿಜೆಪಿ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಹೇಳಿದ್ದಾರೆ. ತೆಲಂಗಾಣದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ವಿರೋಧಿಸಿ ಹೈದರಾಬಾದ್‍ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತೆಲಂಗಾಣದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷ ಆದಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶ (Uttarpradesh) ದ ಮಾದರಿಯಂತೆ ಅಪರಾಧಿಗಳ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವುದಾಗಿ ತಿಳಿಸಿದರು. ಇದೇ ವೇಳೆ ಹಿರಿಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕಕ್ತಿಯಾ ವೈದ್ಯಕೀಯ ಕಾಲೇಕಿನ (ಕೆಎಂಸಿ) ಎಂಡಿ ವಿದ್ಯಾರ್ಥಿನಿ ಪ್ರೀತಿ ಎಂಬಾಕೆಯ ಸಾವಿನ ಕುರಿತು ಮಾತನಾಡಿದರು. ಪ್ರೀತಿ ಸಾವಿನ ಕುರಿತು ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ನವದೆಹಲಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆಡಳಿತಾರೂಢ ಬಿಜೆಪಿ ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಎರಡನೇ ಬಾರಿಗೆ ಸಿಎಂ ಗದ್ದುಗೆಗೇರಿದರು. ಮಾಣಿಕ್ ಸಹಾ ಅವರೊಂದಿಗೆ ಎಂಟು ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಭಾಗವಹಿಸಿದ್ದರು. ಅವರ ಜೊತೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಹಿಮಂತ್ ಬಿಸ್ವಾ ಶರ್ಮಾ ಕೂಡ ಇದ್ದರು. ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಕೂಡ ಉಪಸ್ಥಿತರಿದ್ದರು. ಈ ಬಾರಿ ಹಿಂದಿನ ಸರ್ಕಾರದಲ್ಲಿದ್ದ ನಾಲ್ವರು ಸಚಿವರನ್ನು ಸಂಪುಟದಲ್ಲಿ ಉಳಿಸಿಕೊಳ್ಳಲಾಗಿದೆ. ಅವರೆಂದರೆ ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಶಾಂತಾ ಚಕ್ಮಾ ಮತ್ತು ಸುಶಾಂತ ಚೌಧರಿ. ಮೂವರು…
ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನ ಸಿಂಪಲ್ ಆಗಿ ಆಚರಿಸಿದ್ದಾರೆ. ಕೇಕ್ ಕತ್ತರಿಸುವ ಮೂಲಕ ತಮ್ಮ ಕುಟುಂಬದ ಜೊತೆ ನಟಿ ಸಂಭ್ರಮಿಸಿದ್ದಾರೆ. ಇದೀಗ ಬರ್ತ್‌ಡೇಯ ಸುಂದರ ಫೋಟೋಗಳನ್ನು ರಾಧಿಕಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬ ಮಂಗಳವಾರ (ಫೆ.7)ರಂದು ಇದ್ದ ಕಾರಣ, ಒಂದು ದಿನ ಮುಂಚಿತವಾಗಿಯೇ ತಾವು ದೂರದ ಊರಿಗೆ ಹೋಗುತ್ತಿರುವ ಕಾರಣ ತಿಳಿಸಿದ್ದರು. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಕೇಳಿರುವ ಪ್ರಶ್ನೆಗೆ ಉತ್ತರಿಸುವ ಮೂಲಕ ಶುಭಹಾರೈಸಿದವರಿಗೆ ಬರ್ತ್‌ಡೇಗೆ ಧನ್ಯವಾದ ತಿಳಿಸಿದ್ದರು. 39ನೇ ವರ್ಷದ ಹುಟ್ಟುಹಬ್ಬವನ್ನ ಸ್ಪೆಷಲ್ ಆಗಿ ತಮ್ಮ ಕುಟುಂಬದ ಜೊತೆ ಆಚರಿಸಿದ್ದಾರೆ. ಈ ಕುರಿತ ಸುಂದರ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ. ಪತಿ ಯಶ್ ಮತ್ತು ಮುದ್ದಾದ ಮಕ್ಕಳ ಜೊತೆ ರಾಧಿಕಾ ತಂದೆ-ತಾಯಿ ಕೂಡ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.
ನವದೆಹಲಿ: ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತವನ್ನು ಅವಮಾನಿಸಿದ್ದಾರೆ. ಸುಳ್ಳು ಮಾಹಿತಿ ನೀಡಿ ಭಾರತದ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾರೆ ಅನ್ನೋ ಆರೋಪಗಳು ಕೇಳಿಬಂದಿದೆ. ಈ ವಿವಾದ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಸಂದರ್ಶನ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸುವ ಭರದಲ್ಲಿ, ವಿದೇಶಾಂಗ ಸಚಿವ ಎಸ್ ಜೈಶಂಕರ್‌ಗೆ ಚೀನಾದ ಬೆದರಿಕೆ ಏನೂ ಅನ್ನೋದೆ ಅರ್ಥವಾಗಿಲ್ಲ ಎಂದಿದ್ದಾರೆ. ಚೀನಾ ಒಡ್ಡುತ್ತಿರುವ ಬೆದರಿಕೆಗೆಯನ್ನು ಜೈಶಂಕರ್ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಭಾರತದ ನೆಲವನ್ನೂ ಯಾರೂ ಆಕ್ರಮಿಸಿಲ್ಲ ಅನ್ನೋ ಪ್ರಧಾನಿ ಮೋದಿ ಹೇಳಿಕೆ, ಚೀನಾಗೆ ಆಮಂತ್ರಣ ನೀಡಿದಂತೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್‌ನಲ್ಲಿರು ಭಾರತೀಯ ಪತ್ರಕರ್ತರ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಚೀನಾ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದಾರೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತ ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚೀನಾ…
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 266 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,54,842 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 02,928 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,31,651 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 63,085 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ಅಲ್ಬೇನಿಯಾ: ವಿಮಾನ ಅಪಘಾತದಲ್ಲಿ ಭಾರತೀಯ ಮೂಲದ ಮಹಿಳೆ ಸಾವನ್ನಪ್ಪಿದ್ದು, ಮಗಳು ಗಂಭೀರ ಗಾಯಗೊಂಡಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಭಾರತೀಯ ಮೂಲದ ರೋಮಾ ಗುಪ್ತ (63) ಮೃತ ಮಹಿಳೆ. ಮಗಳು ರೀವಾ ಗುಪ್ತ (33) ಹಾಗೂ 23 ವರ್ಷದ ಪೈಲೆಟ್ ಮಾರ್ಗದರ್ಶಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರೋಮಾ ಗುಪ್ತ ಹಾಗೂ ರೀವಾ ಗುಪ್ತ ಪ್ರಯಾಣಿಸುತ್ತಿದ್ದ ಸಂದರ್ಭ ವಿಮಾನದ ಕಾಕ್‌ಪಿಟ್‌ನಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡು ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ಹಿಂತಿರುಗುತ್ತಿದ್ದ ವೇಳೆ ನಾಲ್ಕು ಆಸನಗಳನ್ನು ಒಳಗೊಂಡಿದ್ದ ಸಿಂಗಲ್ ಇಂಜಿನ್ ಪೈಪರ್ ಚೆರೋಕಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ರೋಮಾ ಗುಪ್ತ ಸಾವನ್ನಪ್ಪಿದ್ದಾರೆ. ಅವರ ಮಗಳು ರೀವಾ ಗುಪ್ತ ಹಾಗೂ ಪೈಲೆಟ್ ಮಾರ್ಗದರ್ಶಕನಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ರೀವಾ ಗುಪ್ತ ಸ್ಟೋನಿ ಬ್ರೂಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೀವಾ ಅವರು ಮೌಂಟ್ ಸಿನಾಯ್ ಸಿಸ್ಟಮ್‌ನಲ್ಲಿ ವೈದ್ಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು.…
ಟೆಹ್ರಾನ್: ಕಳೆದ ವರ್ಷ ನವೆಂಬರ್‌ನಿಂದ ಇರಾನ್‌ನಲ್ಲಿ ಹೆಣ್ಣುಮಕ್ಕಳು ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು. ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿನಿಯರಿಗೆ ವಿಷಪ್ರಾಶನವಾಗಿ ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಪ್ರಕ್ರಿಯೆ ಆರಂಭಿಸಿದೆ. ಇರಾನ್‌ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ವರದಿಗಳ ಪ್ರಕಾರ, ಇರಾನ್‌ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಇದುವರೆಗೂ ಖುಜೆಸ್ತಾನ್, ಪಶ್ಚಿಮ ಅಜೆರ್ಬೈಜಾನ್, ಫಾರ್ಸ್, ಕೆರ್ಮಾನ್ಶಾ, ಖೊರಾಸನ್ ಹಾಗೂ ಅಲ್ಬೋರ್ಜ್ ಪ್ರದೇಶಗಳಲ್ಲಿ ಹಲವರ ಬಂಧನವಾಗಿದೆ. ನವೆಂಬರ್‌ನಲ್ಲಿ ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಮಹ್ಸಾ ಅಮಿನಿ ಎಂಬ ಯುವತಿ ಬಂಧನವಾಗಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಳು. ಈ ಸಾವಿನ…
ಢಾಕಾ: 7 ಅಂತಸ್ತಿನ ಕಟ್ಟಡದಲ್ಲಿ ಉಂಟಾದ ಭಾರೀ ಸ್ಫೋಟದಿಂದ 14 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ನಡೆದಿದೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟ ಸಂಭವಿಸಿದ ಸ್ಥಳದಿಂದ ಸಮೀಪದ ಕಟ್ಟಡಗಳಿಗೂ ಹಾನಿಯಾಗಿದೆ. ರಸ್ತೆಯಲ್ಲಿ ನಿಂತಿದ್ದ ಬಸ್‌ಗಳೂ ಸಾಕಷ್ಟು ಹಾನಿಯಾಗಿದೆ. ಕಟ್ಟಡದ ನೆಲ ಮಳಿಗೆಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಜನನಿಬಿಡ ಸಿದ್ದಿಕ್ ಬಜಾರ್‌ನಲ್ಲಿರುವ ಈ ಕಟ್ಟಡವು ಹಲವಾರು ಕಚೇರಿಗಳು ಮತ್ತು ಮಳಿಗೆಗಳನ್ನ ಹೊಂದಿರುವ ವಾಣಿಜ್ಯ ಕಟ್ಟಡವಾಗಿತ್ತು. ನೆಲಮಹಡಿಯಲ್ಲಿ ನೈರ್ಮಲ್ಯ ಸಾಮಗ್ರಿಗಳನ್ನ ಮಾರಾಟ ಮಾಡುವ ಅಂಗಡಿಗಳಿದ್ದು, ಅಲ್ಲಿಯೇ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ.