ವಿಶ್ವದ ಶ್ರೀಮಂತ ವ್ಯಕ್ತಿ ಹಾಗೂ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಗೇಟ್ಸ್ ಭಾರತ ಪ್ರವಾಸ ಮುಗಿಸಿ ತವರಿಗೆ ವಾಪಸ್ಸಾಗಿದ್ದಾರೆ. ಇದೀಗ ಭಾರತದ ಪ್ರವಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಬಿಲ್ಗೇಟ್ಸ್ ಮತ್ತೆ ಭಾರತಕ್ಕೆ ಆಗಮಿಸಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ಟ್ವಿಟ್ ಮೂಲಕ ಹೇಳಿಕೊಂಡಿದ್ದಾರೆ. ಭಾರತದ ಪ್ರವಾಸದ ಬಗ್ಗೆ ಸರಣಿ ಟ್ವೀಟ್ಗಳನ್ನು ಮಾಡಿರುವ ಬಿಲ್ಗೇಟ್ಸ್ ಕಳೆದ ಕೆಲ ದಿನಗಳಲ್ಲಿ ಭಾರತದಲ್ಲಿ ಸುಂದರವಾದ ದಿನಗಳನ್ನು ಕಳೆದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರ ಭೇಟಿ ಹಾಗೂ ಬೆಂಗಳೂರು ನಗರಕ್ಕೆ ಭೇಟಿ ನೀಡಿರುವ ವಿಚಾರವನ್ನೂ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಾತನಾಡುವುದು ಸಂತಸದ ವಿಚಾರ ಹಾಗೂ ಭಾರತವು ಆರೋಗ್ಯ, ಆರ್ಥಿಕ ಒಳಗೊಳ್ಳುವಿಕೆ, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಡಿಜಿಟಲೈಸೇಷನ್ನಲ್ಲಿ ಹೇಗೆ ಮುನ್ನುಗ್ಗುತ್ತಿದೆ ಎಂಬುದನ್ನು ಚಿರ್ಚಿಸಿರುವುದು ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ. ನನ್ನ ಭಾರತ ಪ್ರವಾಸವು ಮುಂಬೈನಿಂದ ಆರಂಭವಾಗಿ ಅಲ್ಲಿನ ನಗರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಟಿಬಿ ರೋಗಿಗಳ ಜತೆ…
Author: Prajatv Kannada
ಮೈತುಂಬಾ ಹೋಳಿ ಬಣ್ಣದಲ್ಲಿ ಮಿಂದೆದ್ದ ನಟಿ ರಾಗಿಣಿ ದ್ವಿವೇದಿ ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಿದ ತುಪ್ಪದ ಬೆಡಗಿ ಶೂಟಿಂಗ್ ಮಧ್ಯೆಯೂ ಬ್ರೇಕ್ ಪಡೆದು ಹೋಳಿ ಹಬ್ಬ ಸೆಲೆಬ್ರೇಟ್ ಮಾಡಿದ ಬ್ಯೂಟಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡ ನಟಿ ಅಭಿಮಾನಿಗಳಿಗೆ ಹೋಳಿ ಹಬ್ಬದ ಶುಭ ಕೋರಿದ ರಾಗಿಣಿ ದ್ವಿವೇದಿ ಹೋಳಿ ಸಂಭ್ರಮದಲ್ಲಿ ಮುದ್ದು ಶ್ವಾನದ ಜೊತೆ ಆಟವಾಡಿದ ನಟಿ ಫೋಟೋ ಹಂಚಿಕೊಂಡು ಇದು ಪ್ರೀತಿ ಚಿಗುರುವ ಕಾಲ ಎಂದು ಪೋಸ್ಟ್ ಮಾಡಿದ ರಾಗಿಣಿ
ಯುವ ಕ್ರಿಕೆಟಿಗ ಶುಭ್‍ಮನ್ ಗಿಲ್ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿಚಾರವಾಗಿ ಅಸಮಾಧಾನಗೊಂಡಿದ್ದಾರೆ. ಹಲವು ದಿನಗಳಿಂದ ರಶ್ಮಿಕಾ ಮತ್ತು ಗಿಲ್ ವಿಚಾರ ಬಹಳ ಸುದ್ದಿಯಾಗಿತ್ತು. ಆಕೆ ನನ್ನ ಕ್ರಶ್ ಎಂದು ಗಿಲ್ ಹೇಳಿದ್ದಾರೆ ಎನ್ನುವುದು ಭಾರಿ ವೈರಲ್ ಆಗಿತ್ತು. ಇದೀಗ ಗಿಲ್ ವೈರಲ್ ಪೋಸ್ಟ್ ವಿರುದ್ಧ ಕಿಡಿ ಕಾರಿದ್ದಾರೆ. ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಯಾವತ್ತೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ. ಇದೊಂದು ಕಪೋಕಲ್ಪತ ವರದಿ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ರಶ್ಮಿಕಾ ನನ್ನ ಕ್ರಶ್ ಅಲ್ಲ ಎಂದು ಅವರು ಉತ್ತರಿಸಿದ್ದಾರೆ. ಯಾವ ಮಾಧ್ಯಮದಲ್ಲೂ ನಾನು ಆ ರೀತಿಯಾಗಿ ಮಾತನಾಡಿಲ್ಲ ಎಂದು ಗಿಲ್ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಶುಭ್‍ಮನ್ ಗಿಲ್ ಜೊತೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಹೆಸರು ಕೇಳಿ ಬಂದಿದ್ದು, ಇಬ್ಬರೂ ಜೊತೆಗಿದ್ದ ಫೋಟೋಗಳು ವೈರಲ್ ಆಗಿದ್ದವು. ಆ ಸಮಯದಲ್ಲಿ ಸಾರಾ ಮತ್ತು ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ…
ಹಾಸನ: ಜಿಲ್ಲೆಯಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡರಿಂದ (Preetham Gowda) ಮತದಾರರಿಗೆ ಭರಪೂರ ಉಡುಗೊರೆ (Gift) ನೀಡಲಾಗುತ್ತಿದೆ. ಅಷ್ಟಲಕ್ಷ್ಮಿ ಪೂಜೆ, ಬಾಗಿನ ಎಂಬ ಹೆಸರಿನಲ್ಲಿ ಕ್ಷೇತ್ರದ ಮಹಿಳೆಯರಿಗೆ (Women) ಸೀರೆ, ಬೆಳ್ಳಿಯ ದೇವರ ಫೋಟೋ ಹಂಚುತ್ತಿದ್ದಾರೆ. ಮಹಿಳೆಯರಿಗೆ ಉಡುಗೊರೆ ಹಂಚುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಲ್ಲದೇ ಬಿಜೆಪಿ (BJP) ಕಚೇರಿ ಬಳಿ ಗಿಫ್ಟ್ ಪಡೆಯಲು ಜನರು ಮುಗಿಬಿದ್ದಿದ್ದು, ಗಿಫ್ಟ್ ಪಡೆದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಚುನಾವಣೆ ಘೋಷಣೆಯಾದರೆ ನೀತಿ ಸಂಹಿತೆ ಅಡ್ಡಿಯಾಗುವ ಕಾರಣಕ್ಕೆ ಪ್ರತಿದಿನ ಒಂದೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ಉಡುಗೊರೆ ನೀಡಲಾಗುತ್ತಿದೆ. ಈ ಹಿಂದೆಯೂ ಗೌರಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಸೀರೆ, ಬಳೆ, ಕುಂಕುಮ, ಪುರುಷರಿಗೆ ಪಂಚೆ, ಶರ್ಟ್ ಅನ್ನು ಶಾಸಕ ಪ್ರೀತಂ ಗೌಡ ಉಡುಗೊರೆಯಾಗಿ ನೀಡಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಮತದಾರರನ್ನು ಓಲೈಸಲು ಪ್ರೀತಂ ಗೌಡ ದುಬಾರಿ ಉಡುಗೊರೆಗಳನ್ನು ನೀಡುತ್ತಿದ್ದಾರೆ.
ವಿಜಯನಗರ: ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ನಡೆದಿದೆ. ಆರೋಪಿ ಮೂಕಪ್ಪನವರ ಹನುಮಂತನ ಎಂಬಾತ ಪ್ರತಿಭಾಳನ್ನ ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದ. ಇದಾದ ಬಳಿಕ ಪ್ರತಿಭಾಳನ್ನ ರಾಣೆಬೆನ್ನೂರಿನ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಜೊತೆಗೆ ಆಕೆಗೆ ಓರ್ವ ಗಂಡು ಮಗು ಸಹ ಇದೆ. ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು. ಇನ್ನೇನು ತನ್ನೂರಿಗೆ ಹೋಗಬೇಕು ಎನ್ನವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನ ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ ಭಾಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯಯೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಬಂಧಿಸಲಾಗಿದೆ.
ರಾಮನಗರ: ಸಂಸದ ಡಿ.ಕೆ.ಸುರೇಶ್ (D. K. Suresh) ಹಾಗೂ ಸಚಿವ ಸೋಮಣ್ಣನವರು (V.Somanna) ಗುಪ್ತ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದ್ದಾರೆ. ಕನಕಪುರ (Kanakapura) ತಾಲೂಕಿನ ರಾಯಸಂದ್ರದಲ್ಲಿ ಕುವೆಂಪು ಸಂಯುಕ್ತ ವಸತಿ ಬಡಾವಣೆಯ ಮುಖ್ಯದ್ವಾರ ಉದ್ಘಾಟನೆಗೆಂದು ವಿ.ಸೋಮಣ್ಣ ಹಾಗೂ ಡಿ.ಕೆ.ಸುರೇಶ್ ಆಗಮಿಸಿದ್ದರು. ಈ ವೇಳೆ ಮಾಧ್ಯಮ ಹಾಗೂ ಆಪ್ತರನ್ನು ದೂರವಿಟ್ಟು ಯಾವುದೋ ಪತ್ರವನ್ನು ಕೈಯಲ್ಲಿ ಹಿಡಿದುಕೊಂಡು ಡಿ.ಕೆ.ಸುರೇಶ್ ಅವರು ಸಚಿವ ಸೋಮಣ್ಣನವರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: Ac Effect: ತಾಯಿ, ಇಬ್ಬರು ಮಕ್ಕಳ ಸಜೀವ ದಹನ ಕೇಸ್ – ಅವಘಡಕ್ಕೆ ಎಸಿ ತಾಂತ್ರಿಕ ದೋಷವೇ ಕಾರಣ ಮಾಧ್ಯಮ ಹಾಗೂ ಆಪ್ತರಿಂದ ದೂರ ನಿಂತು ಈ ಇಬ್ಬರು ನಾಯಕರು ಆಪ್ತ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಸೋಮಣ್ಣ ಮತ್ತು ಬಿಜೆಪಿ ನಾಯಕರ ಮಧ್ಯೆ ಸಂಬಂಧ ಹಳಸಿದ್ದು ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಈ ಮಧ್ಯೆ ಸುರೇಶ್ ಅವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.
ರಾಯಚೂರು: ಇಲ್ಲಿನ ಶಕ್ತಿನಗರದಲ್ಲಿ ನಡೆದಿದ್ದ ಬೆಂಕಿ (Fire) ಅವಘಡದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಈ ಘಟನೆಗೆ ಎಸಿ (AC) ತಾಂತ್ರಿಕ ದೋಷವೇ ಕಾರಣ ಅಂತಾ ಪೊಲೀಸರು (Police) ಇದೀಗ ತಿಳಿಸಿದ್ದಾರೆ. ಇದೇ ಮಾರ್ಚ್ 6 ರಂದು ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದರು. ಮಂಡ್ಯ ಮೂಲದ ರಂಜಿತಾ (33), ಮಕ್ಕಳಾದ ಮೃದಲಾ (13), ತಾರುಣ್ಯ(5) ಘಟನೆಯಲ್ಲಿ ಸಾವಿಗೀಡಾಗಿದ್ದರು. ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಕಾರಣ ತಿಳಿಯದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿರಲಿಲ್ಲ. ಕಾರಣ ತಿಳಿದ ನಂತರ ಮಂಗಳವಾರ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಆರ್‌ಟಿಪಿಎಸ್ ನಲ್ಲಿ ಎಇಇ ಆಗಿರುವ ಸಿದ್ದಲಿಂಗಯ್ಯ ಸ್ವಾಮಿ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದರು. ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತರ ಮಾದರಿಗಳ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಹುಬ್ಬಳ್ಳಿ: ಕುಂದಗೋಳ ತಾಲೂಕು ಪಂಚಾಯಿತಿ ಕಚೇರಿ ಎದುರು ನಿಲ್ಲಿಸಿದ್ದ ಬೈಕ್ ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಹೌದು ! ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಓರ್ವನ ಅಪಾಚಿ ಬೈಕ್ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗಿಸಲಾರಂಭಿಸಿದೆ. ತಕ್ಷಣ ಬೈಕ್ ಹೊತ್ತಿ ಉರಿಯುವದನ್ನು ಕಂಡ ಸಿಬ್ಬಂದಿ ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳ ತಲುಪುವ ಅಷ್ಟರಲ್ಲಾಗಲೇ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ: ಶೃಂಗೇರಿ ಕೊಡಲಿ ಮಠದ ಪೀಠಾಧಿಪತಿ ವಿದ್ಯಾವಿನಯ ವಿದ್ಯಾರಣ್ಯ ಸ್ವಾಮೀಜಿ ಅವರು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಠದ ಭಕ್ತ ಅಮೃತೇಶ್ವರ ಮಹಾರಾಜರು ಮಾಡಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧಾರವಾಡ, ಗದಗ ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿರುವ ಮಠಕ್ಕೆ ಸೇರಿದ ಆಸ್ತಿಯನ್ನು ಮಾರಾಟ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಕೊಡಲಿ ಶೃಂಗೇರಿ ಮಹಾಸಂಸ್ಥಾನದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಜಗದ್ಗುರು ಶಂಕರಾಚಾರ್ಯರಿಂದ ಸ್ಥಾಪಿತವಾದ ಮಠದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದರು. ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿದ್ಯಾವಿನಯ ವಿದ್ಯಾರಣ್ಯ ಸ್ವಾಮೀಜಿ ಅವರನ್ನು ಕೆಳಗಿಳಿಸಿ ನೂತನ ಪೀಠಾಧಿಪತಿಯನ್ನು ನೇಮಕ ಮಾಡಬೇಕು. ಈ ಮಠ ಚಿತ್ರದುರ್ಗ, ದಾವಣಗೆರೆ, ಹಾನಗಲ್, ಗದಗ, ಊದಗಟ್ಟಿ ಸೇರಿದಂತೆ ಇತರ ಕಡೆ ಹಲವಾರು ಶಾಖಾ ಮಠಗಳನ್ನು ಹೊಂದಿದೆ. ಈ ಮಠಕ್ಕೆ ರಾಜ್ಯದಾದ್ಯಂತ ಭಕ್ತರು ನೀಡಿದ 36 ಎಕರೆ ಜಮೀನು ಇದೆ. ಪ್ರಸ್ತುತ ಪೀಠಾಧಿಪತಿ ಈ ಆಸ್ತಿಯನ್ನು ಮಾರಾಟ ಮಾಡುತ್ತಿದ್ದಾರೆ. ಪೀಠಾಧಿಪತಿ ಮಠದಲ್ಲಿ ಇರದೇ ನಾಪತ್ತೆಯಾಗಿದ್ದಾರೆ. ಮಠದಲ್ಲಿ…
ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಶೇ 50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸರ್ಕಾರ ಮತ್ತೊಮ್ಮೆ ಅವಕಾಶ ನೀಡಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಮೊದಲ 4 ದಿನಗಳಲ್ಲಿ 2,68,16,500 ರೂ. ದಂಡ ಸಂಗ್ರಹವಾಗಿದೆ. ಕಳೆದ 4 ದಿನಗಳಲ್ಲಿ 93,532 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿತ್ತು. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ದಂಡ…