ಬೆಂಗಳೂರು: ರಾಜ್ಯ ಬಿಜೆಪಿಯವರು 40%ಕಮಿಷನ್ ಪಡೆದಿರುವುದು ಮೋದಿ ಆಶೀರ್ವಾದವೇ ? ಅಥವಾ ಶಾಪವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಜೆಪಿ ನಡ್ಡಾ ಅವರೇ, ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು, ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು, ಮೋದಿಯವರ ಆಶೀರ್ವಾದವೇ ಶಾಪವೇ? ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಕಡಿತದಿಂದಾಗಿ ರಾಜ್ಯ ಸರ್ಕಾರ ಮಾಡಿಕೊಂಡ ಸಾಲ ರೂ.2.4.0 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು ಮತ್ತು ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ ರೂ.86,000 ಸಾಲದ ಹೊರೆ ಬಿದ್ದಿರುವುದು ಮೋದಿ ಆಶೀರ್ವಾದವೇ? ಶಾಪವೇ? 2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ ರೂ.35,000 ಕೋಟಿ ಪರಿಹಾರ ಕೇಳಿದ್ದರೂ, ಕೇವಲ ರೂ.1,869 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಟ್ಟಿದ್ದು, 2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು ಮೋದಿ…
Author: Prajatv Kannada
ಬೆಂಗಳೂರು: ದಿನೇ ದಿನೇ ಹಸಿರಿನ ಪ್ರಮಾಣ ಕುಗ್ಗುತ್ತಿರುವ ಹಿನ್ನೆಲೆ ರಾಜಧಾನಿ ಬೆಂಗಳೂರು ಕಾಂಕ್ರೀಟ್ ಕಾಡಾಗಿ ಪರಿವರ್ತನೆಯಾಗುತ್ತಿದೆ. ಉದ್ಯಾನಗಳ ನಗರಿ ಎಂಬ ಖ್ಯಾತಿ ಪಡೆದಿರುವ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ತಾಪಮಾನದಿಂದ ಹಸಿರಿನ ಪ್ರಮಾಣ ನಾಶವಾಗುತ್ತಿದೆ. ಎಲ್‌ಯುಎಲ್‌ಸಿ ಈ ಕುರಿತು ಕೈಗೊಂಡ ಅಧ್ಯಯನ ಪ್ರಕಾರ, 2003 ಮತ್ತು 2021ರ ಅವಧಿಯಲ್ಲಿ ನಗರವು ಶೇ.59ರಷ್ಟು ಹಸಿರು ಹೊದಿಕೆ ಕಳೆದುಕೊಂಡಿದೆ. 2003ರಲ್ಲಿ 389.17 ಚದರ ಕಿಲೋ ಮೀಟರ್ ಸಸ್ಯ ವರ್ಗವಿದ್ದರೆ, 2021ರಲ್ಲಿ ಈ ಪ್ರಮಾಣ 158.77 ಚದರ ಕಿಮೀಗೆ ಇಳಿದಿದೆ. ಅದೇ ರೀತಿ, 2003ರಲ್ಲಿಕಾಂಕ್ರೀಟ್ ಆವರಿಸಿದ ಭೂಪ್ರದೇಶದ ಪ್ರಮಾಣ 244.17 ಚದರ ಕಿಲೋ ಮೀಟರ್ ಇದ್ದದ್ದು, 485.2 ಚದರ ಕಿಲೋ ಮೀಟರ್‌ಗೆ ಏರಿಕೆಯಾಗಿದೆ. ಆ ಮೂಲಕ ಶೇ.98ರಷ್ಟು ಹೆಚ್ಚು ಭೂಪ್ರದೇಶದಲ್ಲಿ ಕಾಂಕ್ರೀಟ್ ಆವರಿಸಿದೆ. 18 ವರ್ಷಗಳ ಅಲ್ಪಾವಧಿಯಲ್ಲಿನಗರವು ಇಷ್ಟು ದೊಡ್ಡ ಪ್ರಮಾಣದ ಹಸಿರು ಹೊದಿಕೆಯನ್ನು ಕಳೆದುಕೊಂಡಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ,” ಎಂದು ಐಐಎಸ್‌ಸಿ ಕ್ಯಾಂಪಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್‌ನ ಪ್ರಾಧ್ಯಾಪಕ ಡಾ.ಗುರ್ಫಾನ್ ಬೇಗ್ ಹೇಳಿದರು.…
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ನಾಯಕರು ರಾಜ್ಯ ಪ್ರವಾಸದಲ್ಲಿದ್ದು, ಇಂದು (ಏ.21) ಬೆಂಗಳೂರಿಗೆ ಆಗಮಿಸ ಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಇಂದು ಮಧ್ಯಾಹ್ನ 3:15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ನಂತರ ಸಂಜೆ 6 ಗಂಟೆಗೆ ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ಗೆ ಬರಲಿದ್ದು, ರಾತ್ರಿ 7.45ರಿಂದ 9ರವರೆಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ರಾತ್ರಿ ರೇಸ್ಕೋರ್ಸ್ ರಸ್ತೆಯ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಏ.22) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ.
ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಹೀಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಭರ್ಜರಿ ಬೇಟೆ ನಡೆಸಿದ್ದು, ಕಳೆದ 20 ದಿನಗಳಲ್ಲಿ ಒಟ್ಟು 46 ಕೋಟಿ ಮೌಲ್ಯ ದ 12.24 ಲಕ್ಷ ಲೀಟರ್ ಮದ್ಯ ಸೀಜ್ ಮಾಡಿದ್ದಾರೆ. ಜೊತೆಗೆ 44.02 ಕೆಜಿ ಡ್ರಗ್ಸ್ ಸೀಜ್ ಮಾಡಲಾಗಿದೆ. ಇನ್ನೂ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 1474 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ನೀತಿ ಸಂಹಿತೆ ವೇಳೆ 16638 ಪ್ರಕರಣಗಳು ದಾಖಲಿಸಿ 21056 ಮಂದಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹಾಗೂ ಇಲ್ಲಿಯವರೆಗೆ 71.87 ಕೋಟಿ ಹಣ ಸೀಜ್ ಮಾಡಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನೂ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ಆಗಲಿದೆ.
ಬೆಂಗಳೂರು : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ( Karnataka Second PUC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಡಾ.ರಾಮಚಂದ್ರನ್ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದರು. ಒಟ್ಟು 61 ಕೇಂದ್ರಗಳಲ್ಲಿ ಈ ಬಾರಿ ಮೌಲ್ಯಮಾಪನ ಮಾಡಲಾಗಿತ್ತು , ಈ ಬಾರಿ ಶೇ. 74.64 ಮಂದಿ ಪಾಸಾಗಿದ್ದಾರೆ ಅಂತ ತಿಳಿಸಿದರು. ಇನ್ನು ಮಾರ್ಚ್ 09 ರಿಂದ ಮಾರ್ಚ್ 29ರವರೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ವಿದ್ಯಾರ್ಥಿಗಳು-3,63,698, ವಿದ್ಯಾರ್ಥಿನಿಯರು- 3,62,497 ಸೇರಿ ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ ಹೊಸಬರು 6.29 ಲಕ್ಷ ವಿದ್ಯಾರ್ಥಿಗಳು, ಖಾಸಗಿ 25,847 ವಿದ್ಯಾರ್ಥಿಗಳು, ಪುನರಾವರ್ತಿತ 70,589 ವಿದ್ಯಾರ್ಥಿಗಳು, ಕಲಾ ವಿಭಾಗ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ -2023 ಪರಿಶೀಲಿಸುವುದು ಹೇಗೆ?…
ಬೆಂಗಳೂರು: ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (PUC Examination Results) ಇಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ (https://karresults.nic.in) ಫಲಿತಾಂಶ ಲಭ್ಯವಾಗಲಿದೆ ಕಳೆದ ಮಾರ್ಚ್ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.
ಮಂಡ್ಯ: ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ. ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ (H.D.Kumaraswamy) ಹೇಳಿಕೆ ಕುರಿತು ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ (Election) ಒಬ್ಬರ ವಿರುದ್ಧವಾಗಿ ಸ್ಫರ್ಧೆ ಮಾಡಿದರೆ ಅದು ದ್ವೇಷ ಎಂದು ಅರ್ಥನಾ? ಚುನಾವಣೆ ಎಂದಮೇಲೆ ಅದು ಸ್ಪರ್ಧೆ. ಅದರಲ್ಲಿ ನಿಮಗೂ ಹಕ್ಕಿದೆ, ನನಗೂ ಹಕ್ಕಿದೆ ಎಂದರು. ಚುನಾವಣೆ ಎಂದರೆ ಭಾರತ-ಪಾಕಿಸ್ತಾನದ ರೀತಿ ನಾವು ಶತ್ರುಗಳು ಎಂದು ಅರ್ಥ ಅಲ್ಲ. ನಾವು ಒಂದೇ ಸ್ಪರ್ಧೆಯಲ್ಲಿ ವಿರೋಧಿಗಳು ಅಷ್ಟೇ. ಅದನ್ನು ಅವರು ನನ್ನ ಮೇಲೆ ದ್ವೇಷವಿದೆ, ನನ್ನ ಪಕ್ಷದ ಮೇಲೆ ದ್ವೇಷವಿದೆ ಎಂದು ಹೇಳುವುದು ವಿಚಿತ್ರ. ಯಾಕೆಂದರೆ ಅವರದ್ದು ಬರೀ…
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲಾ ರಾಜಕೀಯಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ವಿರುದ್ಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಗುರುವಾರ ಹೊಳೆನರಸೀಪುರದಲ್ಲಿ ಪ್ರೀತಂ ಗೌಡ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಮೂಲಕ ಎಚ್‌ಡಿ ರೇವಣ್ಣ ವಿರುದ್ಧ ಪ್ರೀತಂ ಗೌಡ ಬಹಿರಂಗವಾಗಿಯೇ ತೊಡೆತಟ್ಟಿದಂತಾಗುತ್ತದೆ. ಈಗಾಗಲೇ ಪ್ರೀತಂ ಗೌಡ ಅವರಿಗೆ ಹಾಸನ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಅವರ ನೇತೃತ್ವದಲ್ಲಿಯೇ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಹೊಳೆನರಸೀಪುರದಲ್ಲಿ ದೇವರಾಜೇಗೌಡ ಎಂಬುವವರಿಗೆ ಟಿಕೆಟ್ ಅನ್ನು ಈಗಾಗಲೇ ಬಿಜೆಪಿ ಘೋಷಿಸಿದೆ. ಆದರೆ, ಈಗ ಪ್ರೀತಂ ಗೌಡ ಕೂಡ ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವುದು ಹಾಸನ ರಾಜಕೀಯಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯಲ್ಲಿ ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿ, ಪ್ರೀತಂ ಗೌಡ ಶಾಸಕರಾಗಿ ಆಯ್ಕೆಯಾಗಿದ್ದರು. ಈಗ ಬೇರೆ ಕ್ಷೇತ್ರಗಳಲ್ಲಿಯೂ ಕಮಲ…
ರಾಮನಗರ: ರಾಜ್ಯ ವಿಧಾನಸಭೆ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮತ್ತೊಂದೆಡೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಗಳು ಆಗುತ್ತಲೇ ಇವೆ. ಹಾಗೆಯೇ ಪದ್ಮನಾಭ ನಗರದಲ್ಲಿ ಆರ್.ಆಶೋಕ್ ವಿರುದ್ಧ ಯಾರೇ ಬಂದರೂ ಸ್ವಾಗತ, ಪದ್ಮನಾಭ ನಗರ ಹಾಗೂ ಕನಕಪುರ ಎರಡು ಕ್ಷೇತ್ರಗಳಲ್ಲಿ ಆರ್.ಆಶೋಕ್ ಗಲವು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಆಶ್ವತ್ಥ್ ನಾರಾಯಣ್ ಭವಿಷ್ಯ ನುಡಿದರು. ರಾಮನಗರದ ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಆಶ್ವತ್ಥ್ ನಾರಾಯಣ್, ಪದ್ಮನಾಭನಗರ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲು ಮುಂದಾಗಿರುವುದಕ್ಕೆ ಪ್ರತಿಕ್ರಿಯಿಸಿ, ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಪದ್ಮನಾಭನಾಗರಕ್ಕೆ ಯಾರು ಬೇಕಾದರೂ ಬರಬಹುದು ಸ್ವಾಗತಾರ್ಹ ಎಂದರು. ಪದ್ಮನಾಭನಗರದಲ್ಲಿ ಪ್ರಜಾಪ್ರಭುತ್ವ ಉಳಿಸಬೇಕಾಗಿದೆ ಎಂದ ಡಿ.ಕೆ. ಸಹೋದರರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಅಶ್ವತ್ಥ್ ನಾರಾಯಣ. ಪ್ರಜಾಪ್ರಭುತ್ವ ಉಳಿಸಬೇಕಾಗಿರುವುದು ಪದ್ಮನಾಭನಗರದಲ್ಲಿ ಅಲ್ಲ. ಮೊದಲು ರಾಜ್ಯದಲ್ಲೇ ಹಿಂದುಳಿದ ತಾಲೂಕು ಎಂಬ…
ಹಾಸನ : ರಾಜ್ಯದಲ್ಲಿ ‘ಜೆಡಿಎಸ್‘ ಅಧಿಕಾರಕ್ಕೆ ಬಂದ್ರೆ 2 ಬಿ ಮೀಸಲಾತಿ ಮರುಜಾರಿಗೊಳಿಸುತ್ತೇವೆ ಎಂದು ಮಾಜಿ ಪ್ರಧಾನಿ ‘HD ದೇವೇಗೌಡ” ಘೋಷಣೆ ಮಾಡಿದ್ದಾರೆ. ಹಾಸನದಲ್ಲಿ ನಡೆದ ಬೃಹತ್ ರೋಡ್ ಶೋ , ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ದೇವೇಗೌಡ ರಾಜ್ಯದಲ್ಲಿ ‘ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ನಮ್ಮ ಕುಮಾರಸ್ವಾಮಿ 2 ಬಿ ಮೀಸಲಾತಿ ಮರುಜಾರಿಗೊಳಿಸುತ್ತಾರೆ ಎಂದು ಭರವಸೆ ನೀಡಿದರು. ಹಾಸನದಲ್ಲಿ ಇಂದು ಹೆಚ್.ಡಿ ದೇವೇಗೌಡ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದ್ದು, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಮಾಜಿ ಪ್ರಧಾನಿ ದೇವೇಗೌಡ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.