ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ನ ಬಸ್ ನಿಲ್ದಾಣದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರ ಶವ ಪತ್ತೆ ಆಗಿರುವ ಘಟನೆ ಜರುಗಿದೆ. 65 ವರ್ಷದ ಮುನಿಆಂಜಿನೇಯ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಸಹಳ್ಳಿ ನಿವಾಸಿ ಮುನಿಆಂಜಿನೇಯ, ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೋಗಿ ಬರ್ತೀನಿ ಎಂದು ಮನೆಯಲ್ಲಿ ಹೇಳಿ ಹೊರಟಿದ್ದರು. ಆದ್ರೆ ಇಂದು ಮೆಜೆಸ್ಟಿಕ್ನಲ್ಲಿ ಶವ ಪತ್ತೆಯಾಗಿದೆ. ದೇವರ ದರ್ಶನಕ್ಕೆಂದು ಹೋಗುವುದಾಗಿ ಹೇಳಿ ಹೊರಟ ಮುನಿಆಂಜಿನೇಯನವರು ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುನಿಆಂಜಿನೇಯ ನಿನ್ನೆ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ತೆರಳಿದ್ದರು. ಇಂದು ಬೆಳಗಿನ ಜಾವ 3 ಗಂಟೆಗೆ ಶವವಾಗಿ ಸಿಕ್ಕಿದ್ದಾರೆ. ಇನ್ನು ಬಸ್ ನಿಲ್ದಾಣದಲ್ಲಿ ಗೆಳೆಯರಿಗಾಗಿ ಕಾದು ಕುಳಿತಿದ್ದಾಗ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ನಿವೃತ್ತ ಪೊಲೀಸ್ ಸಿಬ್ಬಂದಿ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮುನಿಆಂಜಿನೇಯ ಬಳಿ ಇದ್ದ ನಗದು ಹಾಗೂ ಚಿನ್ನಾಭರಣ ನಾಪತ್ತೆಯಾಗಿದೆ. ಮುನಿಆಂಜಿನೇಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Prajatv Kannada
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಬೆಂಗಳೂರಿನಲ್ಲಿ ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಾರಿಗೆ ನೌಕರರ ಕೂಟ ಈಗಾಗಲೇ ಎರಡು ಬಾರಿ ಮುಷ್ಕರ ಮಾಡಿದೆ. ನಾಲ್ಕು ದಿನ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಸದ್ಯ ನಾಳೆಯಿಂದ ಎಲ್ಲಾ ಘಟಕಗಳಲ್ಲಿ ಮುಷ್ಕರದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಈ ಹಿಂದೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಲಿದ್ದಾರೆ.
ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠವು, RSS ಕಾರ್ಯಕರ್ತನ ವಿರುದ್ಧ ದಾಖಲಾಗಿದ್ದ ಹಣ ವಸೂಲಿಗೆ ಧಮ್ಕಿ ಹಾಕಿದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ದಾಖಲಿಸಿರುವ ದೂರು ರದ್ದು ಮಾಡಬೇಕು ಎಂದು ಕೋರಿ ಹನುಮೇಗೌಡ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ಮಾನ್ಯ ಮಾಡಿದೆ. ಅಲ್ಲದೆ, ಹಣ ವಸೂಲು ಮಾಡಲು ಬೆದರಿಸಿದ್ದಾನೆಂದು ಅರ್ಜಿದಾರರ ವಿರುದ್ಧ ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಜತೆಗೆ, ಭಾರತೀಯ ಅಪರಾಧ ದಂಡ ಸಂಹಿತೆ ಸೆಕ್ಷನ್ 385ರಡಿ ಅಪರಾಧ ಎಸಗಿದ್ದರೆ ಆತ ಇತರೆ ಯಾವುದೇ ವ್ಯಕ್ತಿಯನ್ನು ಬೆದರಿಸಿ ಘಾಸಿಗೊಳಿಸಿರಬೇಕು. ಆದರೆ ಈ ಪ್ರಕರಣದಲ್ಲಿ ಆರೋಪಪಟ್ಟಿಯ ಜತೆ ಆರೋಪ ಸಾಬೀತುಪಡಿಸುವಂತಹ ಯಾವುದೇ ಸಾಕ್ಷ್ಯಧಾರಗಳು ಲಭ್ಯವಾಗಿಲ್ಲ. ಅಲ್ಲದೆ, ದೂರುದಾರರನ್ನು ಸುಲಿಗೆ ಮಾಡಲೆಂದು ಬೆದರಿಸಿರುವುದಕ್ಕೆ ಬಲವಾದ ಸಾಕ್ಷಿಗಳು ಇಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ನಟಿ ಅನಿಕಾ ವಿಜಯ್ ವಿಕ್ರಮನ್ ಮೇಲೆ ಮಾಜಿ ಪ್ರಿಯಕರ ಅನೂಪ್ ಪಿಳ್ಳೈ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ರಕ್ತಸಿಕ್ತ ಮುಖದ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕ್ರೂರ ಪ್ರಿಯಕರನ ಬಗ್ಗೆ ಬರೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕ್ರೂರವಾಗಿ ಥಳಿಸಿರುವ ಮಾಜಿ ಪ್ರಿಯಕರನ ಬಗ್ಗೆ ನಟಿ ಅನಿಕಾ ಬರೆದುಕೊಂಡಿದ್ದು, ‘ನಾನು ಅವನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಅವನು ಹಲವು ತಿಂಗಳಿಂದ ದೈಹಿಕ ಮತ್ತು ಮಾನಸಿಕವಾಗಿ ಸಾಕಷ್ಟು ತೊಂದರೆ ಕೊಡುತ್ತಲೇ ಬಂದ. ಈಗಾಗಲೇ ಎರಡು ಬಾರಿ ಥಳಿಸಿದ್ದಾನೆ. ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಜೀವನದಲ್ಲಿ ಇಂಥದ್ದೊಂದು ಘಟನೆ ನಡೆಯುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪೊಲೀಸರು ಕೂಡ ಅವನಿಗೆ ಸಹಕರಿಸುತ್ತಿದ್ದಾರೆ’ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸರಿಗೆ ದೂರು ನೀಡಿರುವ ನಟಿ ಅನಿಕಾ, ‘ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ, ಅವನಿಂದ ದೂರ ಇರು ಎಂದು ನನಗೆ ಸಲಹೆ ನೀಡಿದರು. ಅವನು ಪೊಲೀಸರಿಗೂ ಹಣ ಕೊಟ್ಟಿದ್ದಾನೆ. ಹಾಗಾಗಿ ಮತ್ತೆ ಮತ್ತೆ ಅವನು ನನ್ನ ಮೇಲೆ…
ಲಕ್ಷ್ಮಣ ಖ್ಯಾತಿಯ ನಟ ಅನೂಪ್ ರೇವಣ್ಣ ಹಾಗೂ ಧನ್ಯಾ ರಾಮ್ ಕುಮಾರ್ ನಟನೆಯ ‘ಹೈಡ್ ಅಂಡ್ ಸೀಕ್’ ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ರಿಲೀಸ್ ಗೆ ರೆಡಿಯಾಗಿದೆ. ಪುನೀತ್ ನಾಗರಾಜು ನಿರ್ದೇಶನದ ‘ಹೈಡ್ ಅಂಡ್ ಸೀಕ್’ ಚಿತ್ರದಲ್ಲಿ ಅನೂಪ್ ರೇವಣ್ಣ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಚಿತ್ರದ ಮೇಕಿಂಗ್ ವೀಡಿಯೋ ರಿಲೀಸ್ ಮಾಡಿದರು. ಇದೇ ವೇಳೆ ಮಾತನಾಡಿದ ಹೆಚ್.ಎಂ.ರೇವಣ್ಣ ಪುನೀತ್ ನನ್ನ ಬಳಿ ಬಂದು ಸಿನಿಮಾ ಮಾಡುತ್ತೇವೆ ಅಂದಾಗ ಸಂತೋಷವಾಯಿತು. ಚಿತ್ರದ ಸನ್ನಿವೇಶಗಳು ಕುತೂಹಲಕರವಾಗಿವೆ. ನಾಗರಾಜ್ ಅವರ ಪ್ರಯತ್ನ ಯಶಸ್ವಿಯಾಗಲಿ. ಇವತ್ತು ಕನ್ನಡ ಚಿತ್ರರಂಗ ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಪಡೆದಿದೆ. ಈ ಸಿನಿಮಾ ಕೂಡ ಅಂಥಾ ಚಿತ್ರಗಳ ಸಾಲಿಗೆ ಸೇರಲಿ ಎಂದು ಹಾರೈಸಿದರು. ನಂತರ ಮಾತನಾಡಿದ ಪುನೀತ್ ನಾಗರಾಜು ಯುವತಿಯ ಅಪಹರಣದ…
ಜಕಾರ್ತ: ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದ ತನ್ಹಾ ಮೆರಹ್ ಪ್ರದೇಶದ ಪ್ಲುಮ್‍ಪಾಂಗ್ ತೈಲ ಸಂಗ್ರಹ ಕೇಂದ್ರದಲ್ಲಿ ನಡೆದಿದೆ. ಸದ್ಯ ಘಟನೆಯಲ್ಲಿ 19 ಮಂದಿ ಸಜೀವ ದಹನವಾಗಿದ್ದು, ಸುಟ್ಟ ಮನೆಗಳು ಹಾಗೂ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ದೇಶದ ಶೇ. 25ರಷ್ಟು ಇಂಧನ ಅಗತ್ಯವನ್ನು ಇದೇ ಕೇಂದ್ರ ಪೂರೈಸುತ್ತಿತ್ತು. ಘಟನೆ ವೇಳೆ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಕನಿಷ್ಠ 260 ಅಗ್ನಿಶಾಮಕ ಸಿಬ್ಬಂದಿ ಹಾಗೂ 52 ಅಗ್ನಿಶಾಮಕ ಇಂಜಿನ್‍ಗಳಿದ್ದವು. ಪಶ್ಚಿಮ ಜಾವಾ ಪ್ರಾಂತ್ಯದ ಪೆರ್ಟಮಿನಾದ ಬಲೋಂಗನ್ ರಿಫೈನರಿಯಿಂದ ಡಿಪೋ ಇಂಧನವನ್ನು ಪಡೆದಿದ್ದರು. ಇದರಿಂದಾಗಿ ಹೆಚ್ಚಿನ ಒತ್ತಡವಾಗಿ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸದ್ದಾರೆ.
ವಾಷಿಂಗ್ಟನ್: ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಯುನೈಟೆಡ್ ಏರ್‌ಲೈನ್ಸ್ ವಿಮಾನವು ಲಾಸ್ ಏಂಜಲೀಸ್‌ನಿಂದ ಬೋಸ್ಟನ್‌ಗೆ ಹೊರಟಿತ್ತು. ಈ ವೇಳೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ತುರ್ತು ನಿರ್ಗಮನದ ದ್ವಾರ ತೆರೆಯಲು ಯತ್ನಿಸಿದ್ದು, ಇದೇ ವೇಳೆ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕ ಟೊರೆಸ್ ಎಂಬಾತನನ್ನು ಬೋಸ್ಟನ್ ಲೋಗನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿಮಾನದ ಲ್ಯಾಂಡಿಂಗ್‌ಗೆ 45 ನಿಮಿಷ ಇರುವಾಗ, ವಿಮಾನದ ಸಿಬ್ಬಂದಿಗೆ ಕಾಕ್‌ಪಿಟ್‌ನಲ್ಲಿ ಎಚ್ಚರಿಕೆಯ ಶಬ್ದ ಕೇಳಿಬಂದಿದೆ. ವಿಮಾನದ ಮೊದಲ ದರ್ಜೆ ಮತ್ತು ಕೋಚ್ ವಿಭಾಗಗಳ ನಡುವೆ ಇರುವ ಸ್ಟಾರ್‌ಬೋರ್ಡ್ ಬದಿಯ ಬಾಗಿಲನ್ನು ತೆಗೆಯಲು ಪ್ರಯಾಣಿಕ ಪ್ರಯತ್ನಿಸಿದ್ದನ್ನು ಗಗನಸಖಿ ಗಮನಿಸಿದ್ದು ಈ ವೇಳೇ ಆತನನ್ನು ತಡೆಯಲು ಯತ್ನಿಸಿದ್ದಾರೆ. ವಿಚಾರವನ್ನು ಸಿಬ್ಬಂದಿ ಫ್ಲೈಟ್ ಅಟೆಂಡೆಂಟ್ ಕ್ಯಾಪ್ಟನ್‌ಗೆ ತಿಳಿಸಿದ್ದಾರೆ. ನಂತರ ಟೊರೆಸ್‌ನನ್ನು ಪ್ರಶ್ನಿಸಿದಾಗ, ಸಿಬ್ಬಂದಿ ಮೇಲೆಯೇ ಅಪಾಯಕಾರಿ ಆಯುಧ ಬಳಸಿ ಹಲ್ಲೆಗೆ ಮುಂದಾಗಿದ್ದಾನೆ. ಆತನನ್ನು ಪೊಲೀಸರ ವಶಕ್ಕೆ ನೀಡಲಾಯಿತು. ನ್ಯಾಯಾಲಯವು ಮಾ.9ಕ್ಕೆ…
ಟಿಬಿಲಿಸಿ: ಬರ್ತಡೇ ಪಾರ್ಟಿಯ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಜಾರ್ಜಿಯಾದ ಡೌಗ್ಲಾಸ್ ಕೌಂಟಿಯಲ್ಲಿ ನಡೆದಿದೆ. ಹೌಸ್ ಪಾರ್ಟಿಯಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ನೂರಾರು ಮಂದಿ ಸೇರಿದ್ದರು. ಈ ವೇಳೆ ಘರ್ಷಣೆಯಾಗಿದ್ದು, ಗುಂಡಿನ ದಾಳಿ ನಡೆದಿದೆ. ದಾಳಿ ಕುರಿತು ಜನರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮನೆಯ ಮಾಲೀಕ ಪ್ರತಿಕ್ರಿಯಿಸಿ, ನಮ್ಮ ಮಗಳ ಬರ್ತ್‌ಡೇ ಪಾರ್ಟಿಯನ್ನು ಮನೆಯಲ್ಲಿ ಆಯೋಜಿಸಿದ್ದೆವು. ರಾತ್ರಿ 10 ಗಂಟೆಗೆ ಪಾರ್ಟಿಯನ್ನು ಕೊನೆಗೊಳಿಸಲು ನಿರ್ಧರಿಸಿದ್ದೆವು. ಪಾರ್ಟಿಯಲ್ಲಿ ಕೆಲವರು ಪಾಲ್ಗೊಂಡಿದ್ದರು. ಅವರು ಗಾಂಜಾ ಸೇದುತ್ತಿದ್ದುದು ನಮ್ಮ ಗಮನಕ್ಕೆ ಬಂದಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಜ್ಯೂರಿಚ್: 115 ವರ್ಷಗಳ ಇತಿಹಾಸದಲ್ಲಿ ಮೊದಲ ಭಾರಿಗೆ ಸ್ವಿಸ್ ಬ್ಯಾಂಕ್ ನಷ್ಟ ಅನುಭವಿಸಿದೆ. ಸ್ವಿಸ್ ನ್ಯಾಷನಲ್ ಬ್ಯಾಂಕ್ ವಾರ್ಷಿಕ 132.5 ಶತಕೋಟಿ ಸ್ವಿಸ್ ಫ್ರಾಂಕ್ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಬಾಂಡ್ ಮತ್ತು ಷೇರು ಮಾರುಕಟ್ಟೆ ಕುಸಿತದ ಪರಿಣಾಮ ಎಸ್‌ಎನ್‌ಬಿ ಮಾರುಕಟ್ಟೆ ಮೌಲ್ಯ ಇಳಿಕೆಯಾಗಿದ್ದು 115 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಿದೆ. 2021ರಲ್ಲಿ 26 ಶತಕೋಟಿ ಫ್ರಾಂಕ್ ಲಾಭ ಗಳಿಸಿತ್ತು. ನಷ್ಟದ ಹಿನ್ನೆಲೆಯಲ್ಲಿ ಸ್ವಿಸ್ ಬ್ಯಾಂಕ್ ಕೇಂದ್ರ ಅಥವಾ ಪ್ರಾದೇಶಿಕ ಸರ್ಕಾರಗಳಿಗೆ ಯಾವುದೇ ಪಾವತಿ ಅಥವಾ ಹೂಡಿಕೆದಾರರಿಗೆ ಲಾಭಾಂಶವನ್ನು ನೀಡುವುದಿಲ್ಲ. 1907 ರಲ್ಲಿ ಬ್ಯಾಂಕ್ ಸ್ಥಾಪನೆಯಾದ ನಂತರ ಎರಡನೇ ಬಾರಿ ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 23 ರಂದು ತನ್ನ ಮುಂದಿನ ಹಣಕಾಸು ನೀತಿಯನ್ನು ಬ್ಯಾಂಕ್ ಪ್ರಕಟಿಸಲಿದೆ. ನಷ್ಟವು ಅದರ ಭವಿಷ್ಯದ ಹಣಕಾಸು ನೀತಿಯ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದೆ ಎನ್ನಲಾಗುತ್ತಿದೆ.
ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ, ನಟಿ ರಾಧಿಕಾ ಪಂಡಿತ್ ಸದ್ಯ ಚಿತ್ರರಂಗದಿಂದ ದೂರವಿದ್ದರು ಅವರ ಮೇಲಿನ ಕ್ರೇಜ್ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಿದ್ದರು ಕೂಡ ಅಭಿಮಾನಿಗಳ ಜೊತೆ ಸದಾ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದಾರೆ. ಇಂದು (ಮಾ. 7) ರಾಧಿಕಾ ಪಂಡಿತ್ ಹುಟ್ಟುಹಬ್ಬವಿದ್ದು, ಆ ಪ್ರಯುಕ್ತ ನಟಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ. ಪ್ರತಿ ವರ್ಷ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ದಿನದಂದು ಮನೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಾರೆ. ಹಾಗಾಗಿ ಈ ಬಾರಿ ಮುಂಚಿತವಾಗಿಯೇ ತಾವು ಮನೆಯಿಂದ ದೂರ ಇರುವ ವಿಚಾರವನ್ನ ತಿಳಿಸಿದ್ದಾರೆ. ದೂರದ ಊರಲ್ಲಿ ಬರ್ತ್‌ಡೇ ಆಚರಿಸಿಕೊಳ್ಳುವುದಾಗಿ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್‌ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು ಎಂದು ರಾಧಿಕಾ ಪಂಡಿತ್ ಪೋಸ್ಟ್…