ಬಾಲಿವುಡ್ ನ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ ಸಾಂಸಾರಿಕ ಜೀವನ ಹಾದಿ ಬೀದಿಯಲ್ಲಿ ರಂಪವಾಗುತ್ತಿದೆ. ನವಾಜುದ್ದೀನ್ ಸಿದ್ದಿಕಿ ಹಾಗೂ ಪತ್ನಿ ಆಲಿಯಾ ಜಗಳ ಅಕ್ಷರಶಃ ಆಡಿಕೊಳ್ಳುವಂತಾಗಿದೆ. ನವಾಜುದ್ದೀ ನ್ ಮೇಲೆ ಪತ್ನಿ ಆಲಿಯಾ ಅನೇಕ ರೋಪಗಳನ್ನು ಮಾಡಿದ್ದು, ಅತ್ತೆಯ ಕಿರುಕುಳ ಸೇರಿದಂತೆ, ತನಗೆ ಅನ್ನ ನೀರು ಕೊಡದೇ ಕೂಡಿ ಹಾಕಲಾಗಿತ್ತು ಎಂದೆಲ್ಲ ಹೇಳಿಕೊಂಡು ಕಣ್ಣೀರು ಹಾಕಿದ್ದರು ತಮ್ಮಿಂದ ಮಕ್ಕಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು. ಇದುವರೆಗೂ ಯಾವುದಕ್ಕೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ ತಗೆದುಕೊಂಡಿದ್ದಾಳೆ. ಆದರೆ ಈಗ ಆಕೆ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಪತ್ನಿಯ ವಿರುದ್ಧ ಕಿಡಿ ಕಾರಿದ್ದಾರೆ. ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ…
Author: Prajatv Kannada
ಡಾ. ರಾಜ್ ಕುಮಾರ್ ಕುಟುಂಬದ ಕುಡಿ ಯುವರಾಜ್‌ಕುಮಾರ್ `ಯುವ’ ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೇ `ಯುವ’ ಚಿತ್ರದ ಮುಹೂರ್ತ ಅದ್ದೂರಿಯಾಗಿ ಮಾಡಿ, ಟೈಟಲ್ ಅನಾವರಣ ಮಾಡುವ ಮೂಲಕ ದೂಳೆಬ್ಬಿಸಿದ್ದಾಯ್ತು. ಇದೀಗ ಯುವಗೆ ಜೋಡಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. `ಯುವ’ ಸಿನಿಮಾ ಶುರುವಾಗುವ ಮುಂಚೆಯೇ ಯುವ ರಾಜ್‌ಕುಮಾರ್‌ಗೆ ಯಾರು ನಾಯಕಿಯಾಗಿ ಬರುತ್ತಾರೆ ಎಂದು ಗಾಂಧಿನಗರದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಇದೀಗ ಯುವಗೆ ನಾಯಕಿಯಾಗುತ್ತಿರುವ ಆ ಅದೃಷ್ಟದ ಬೆಡಗಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯುವರಾಜ್ ಕುಮಾರ್ ಗೆ ನಾಯಕಿಯಾಗಿ `ಕಾಂತಾರ’ ನಟಿ ಸಪ್ತಮಿ ಗೌಡ ಕಾಣಿಸಿಕೊಳ್ಳಲಿದ್ದಾರೆ. ಯುವ ಜೊತೆ ರೊಮ್ಯಾನ್ಸ್ ಮಾಡಲು ಸಪ್ತಮಿ ರೆಡಿಯಾಗಿದ್ದಾರೆ. ಚಿತ್ರದಲ್ಲಿ ಸಪ್ತಮಿ ಪಾತ್ರಕ್ಕೆ ಹೆಚ್ಚಿನ ಆದ್ಯತೆಯಿದ್ದು, ಪವರ್‌ಫುಲ್ ಪಾತ್ರದ ಮೂಲಕ ನಟಿ ಬಿಗ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವ-ಸಪ್ತಮಿ ಜೋಡಿ ಮೊದಲ ಬಾರಿಗೆ ತೆರೆಯ ಮೇಲೆ ಜೋಡಿಯಾಗಿ ಕಾಣಿಸಿಕೊಳ್ತಿದ್ದು, ಅಭಿಮಾನಿಗಳು ಈ ಜೋಡಿಯನ್ನು ನೋಡಲು ಕಾಯ್ತಿದ್ದಾರೆ. ಸಂತೋಷ್ ಆನಂದ್‌ರಾಮ್ ನಿರ್ದೇಶನದ, ಹೊಂಬಾಳೆ…
ಮಂಡ್ಯ: ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆಯ ಯೋಜನೆಯಲ್ಲಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಕಾರ್ಯಕ್ರಮದಡಿ ಮಂಡ್ಯದ ಬೆಲ್ಲಕ್ಕೆ ಮಾನ್ಯತೆ ನೀಡಲಾಗಿದ್ದು, ಇದರಿಂದ ಕಬ್ಬು ಬೆಳೆಗಾರರು ಸಹ ಸಂತಸಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ (ಆರ್ಗ್ಯಾನಿಕ್ ) ಕೆಮಿಕಲ್ ಫ್ರೀ ಬೆಲ್ಲವನ್ನು ತಯಾರು ಮಾಡುವ ಘಟಕವನ್ನು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಎಸ್. ವಿ. ಸುರೇಶ್ ವಿ. ಸಿ ಫಾರಂನಲ್ಲಿ ಉದ್ಘಾಟಿಸಿದ್ದಾರೆ. ಈ ಘಟಕ ಉತ್ತಮವಾದ ಕೆಲಸ ನಿರ್ವಹಿಸಿ ರೈತ ಸಮುದಾಯಕ್ಕೆ ಕಬ್ಬು ಬೆಳೆಗಾರರಿಗೆ ವರದಾನವಾಗಲಿ ಎಂದು ಹಾರೈಸಿದರು. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ವಲಯ ಕೃಷಿ ಸಂಶೋಧನ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಮಹಾವಿದ್ಯಾನಿಲಯ, ವಿ. ಸಿ ಫಾರಂ, ಮಂಡ್ಯ ತಾಲೂಕು ಹಾಗೂ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಶ್ರಯದಲ್ಲಿ ನಡೆದ ಕೃಷಿ ಯಂತ್ರೋಪಕರಣಗಳ ಮೇಳ 2023 ಹಾಗೂ ಜಾಗರಿ…
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಚಂದನವನದ ಚಲನಚಿತ್ರ ವಿಮರ್ಶಕರ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ಆಕ್ಷನ್ ಮತ್ತು ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಪ್ರಶಸ್ತಿಗಳ ಮೇಲೆ ಪ್ರಶಸ್ತಿಗಳನ್ನು ಬಾಚುತ್ತಿದೆ. ಇದೀಗ ಕಾಂತಾರ ಮತ್ತೆ 4 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಕಾಂತಾರ ಸಿನಿಮಾ,ಚಂದನವನ ಚಲನಚಿತ್ರ ವಿಮರ್ಶಕರ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ಆಕ್ಷನ್ ಮತ್ತು ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದಿದೆ ಎಂದು ಘೋಷಿಸಲು ನನಗೆ ಅಪಾರ ಸಂತೋಷವಾಗಿದೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಹೇಳಿರುವ ರಿಷಬ್ ಶೆಟ್ಟಿ, ಅತ್ಯುತ್ತಮವಾದುದನ್ನು ನೀಡಿದ ನಮ್ಮ ಕಾಂತಾರ ತಂಡಕ್ಕೆ ಸದಾ ಚಿರಋಣಿ ಎಂದು ರಿಷಬ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ. ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾ ಕಾಂತಾರ ಹಲವು ದಾಖಲೆಯನ್ನು ಬ್ರೇಕ್ ಮಾಡಿದೆ. ರಿಷಬ್ ಶೆಟ್ಟಿ ನಿರ್ದೇಶನ, ಸಿನಿಮಾ ಮೇಕಿಂಗ್, ನಟನೆ ಬಗ್ಗೆ ವಿವಿಧ ಸಿನಿಮಾ ನಾಯಕರು ಮೆಚ್ಚುಗೆ ಸೂಚಿಸಿದ್ದರು.
ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ತಮ್ಮ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್ನ್ನು ಅಮಾನತುಗೊಳಿಸುವಂತೆ ಕೋರಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಡಿದ ಮನವಿಯನ್ನು ಪಾಕಿಸ್ತಾನ ನ್ಯಾಯಾಲಯ ತಿರಸ್ಕರಿಸಿದೆ. ಹಿಂದಿನ ದಿನವೇ ತೀರ್ಪನ್ನು ಕಾಯ್ದಿರಿಸಿರುವ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಜಾಫರ್ ಇಕ್ಬಾಲ್, ಪ್ರಕರಣದ ಸಂಕ್ಷಿಪ್ತ ವಿಚಾರಣೆಯ ನಂತರ ದಿನದ ನಂತರ ಅದನ್ನು ಪ್ರಕಟಿಸಿದರು. ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಇಮ್ರಾನ್ ಖಾನ್ ಅವರ ವಕೀಲರಾದ ಅಲಿ ಬುಖಾರಿ, ಖೈಸರ್ ಇಮಾಮ್ ಮತ್ತು ಗೋಹರ್ ಅಲಿ ಖಾನ್ ಅವರು ಇಸ್ಲಾಮಾಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು, ಅಲ್ಲಿ ಬುಖಾರಿ ಅವರು ತಮ್ಮ ಕಕ್ಷಿದಾರರು ಯಾವಾಗಲೂ ನ್ಯಾಯಾಲಯದ ಆದೇಶಗಳನ್ನು ಅನುಸರಿಸುತ್ತಾರೆ ಎಂದು ವಾದಿಸಿದರು. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥರು ನ್ಯಾಯಾಲಯಕ್ಕೆ ಹಾಜರಾಗಲು ಸಿದ್ಧರಿದ್ದರೆ ಅವರನ್ನು ಪೊಲೀಸರು ಬಂಧಿಸಲು ಸಾಧ್ಯವಿಲ್ಲ ಎಂದು ಇಮಾಮ್ ವಾದಿಸಿದರು. ಈ ವೇಳೆ ನ್ಯಾಯಾಧೀಶರು, ವಾರಂಟ್ ಅನ್ನು ಅಮಾನತುಗೊಳಿಸಲು ಇಸ್ಲಾಮಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಬಹುದಿತ್ತು ಎಂದು ಇಮಾಮ್ ಅವರು ಸೆಷನ್ಸ್ ನ್ಯಾಯಾಲಯವು ಅಮಾನತುಗೊಳಿಸಬೇಕೆಂದು…
ಪ್ರಾಜೆಕ್ಟ್ ಕೆ ಚಿತ್ರದ ಚಿತ್ರೀಕರಣದ ವೇಳೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆ. ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಬಿಗ್ ಬಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಬಳಿಕ ಬೆಡ್ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ಅಮಿತಾಬ್ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ಪಕ್ಕೆಲುಬಿನ ಕಾರ್ಟಿಲೇಜ್ ಮುರಿದಿದೆ, ಹೈದರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮುಂಬೈನಲ್ಲಿರುವ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ಗಾಯವು ತೀವ್ರ ನೋವಿನಿಂದ ಕೂಡಿದ್ದು ನಡೆದಾಡಲು ಕಷ್ಟವಾಗಿದೆ ಮತ್ತು ಉಸಿರಾಟದ ಸಮಸ್ಯೆಯೂ ಇದೆ. ಅದಾಗ್ಯೂ ಯಾವುದೇ ತೊಂದರೆಗಳಿಲ್ಲ, ಚೇತರಿಕೆ ಕಾಣಲು ಹಲವು ವಾರಗಳ ಸಮಯ ಬೇಕಾಗಬಹುದು ಹೀಗಾಗಿ ಯಾವ ಹಿತೈಷಿಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ, ಮನೆಯ ಬಳಿ ಯಾರು ಬರಬೇಡಿ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಅವರು ತಮ್ಮ ಪೊಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ವೈಜಯಂತಿ ಮೂವೀಸ್ ತಂಡ ಟ್ವೀಟ್ ಮಾಡಿದ್ದು,…
ಬಾಲಿವುಡ್ ಬ್ಯೂಟಿ ವಿದ್ಯಾ ಬಾಲನ್ ಮತ್ತೆ ಸುದ್ದಿಯಲ್ಲಿದ್ದಾರೆ. ವಿದ್ಯಾ ಬಾಲನ್ ಪ್ರೆಗ್ನೆಂಟ್ ಎಂದು ಸುದ್ದಿ ಹಬ್ಬಿಸಿದವರಿಗೆ ನಟಿ ಖಡಕ್ ಉತ್ತರ ನೀಡಿದ್ದು, ಪ್ರೆಗ್ನೆನ್ಸಿ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ. ಮದುವೆಯ ಬಳಿಕವೂ ಚಿತ್ರರಂಗದಲ್ಲಿ ಆಕ್ಟೀವ್ ಆಗಿರುವ ನಟಿ ವಿದ್ಯಾ ಬಾಲನ್ ಇದೀಗ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಪರ್ಸನಲ್ ಲೈಫ್‌ಗೆ ಸಂಬಂಧಿಸಿದ ಒಂದಿಷ್ಟು ವಿಚಾರಗಳನ್ನ ನಟಿ ವಿದ್ಯಾ ಬಾಲನ್ ಹಂಚಿಕೊಂಡಿದ್ದಾರೆ. ದೇವರಿಗೇ ಗೊತ್ತು ಅದೆಷ್ಟು ಮಕ್ಕಳಿಗೆ ಜನ್ಮ ನೀಡಿರುವೆ ಎಂದು. ನಾನು ದಪ್ಪಗಿರುವೆ ಇದು ನನ್ನ ದೇಹ, ಪ್ರೆಗ್ನೆಂಟ್ ಆದಾಗ ಹೇಗೆ ಕಾಣಿಸುತ್ತೀನಿ ಎಂದು ಗೊತ್ತಿಲ್ಲ ಆದರೆ ಈಗ ನೋಡಲು ಹೀಗಿರುವೆ. ಇಷ್ಟು ವರ್ಷ ಚಿತ್ರರಂಗದಲ್ಲಿ ಇರುವೆ ಈಗಲೂ ನಿಮಗೆ ಅರ್ಥವಾಗಿಲ್ವಾ ನಾನು ಸೈಜ್ ಝಿರೋ ಇಲ್ಲ ನಾನು ಸಣ್ಣ ಎಂದೂ ಇರಲಿಲ್ಲ ಎಂದು. ನನ್ನ ಬಗ್ಗೆ ನಾನು ನೆಗೆಟಿವ್ ಯೋಚನೆ ಮಾಡುವುದಿಲ್ಲ. ನಾನು ಸಂಬಂಧಗಳಿಗೆ ಹೆಚ್ಚಿಗೆ ಗೌರವ ಕೊಡುವ ವ್ಯಕ್ತಿ ಜೊತೆಗೆ ನನ್ನ ಕೆಲಸವನ್ನು ಹೆಚ್ಚಿಗೆ ಪ್ರೀತಿಸುವ ವ್ಯಕ್ತಿ ಎಂದು…
ಮಗನ ತಪ್ಪಿಗೆ ಅಪ್ಪನಿಗೆ ಸಂಕಷ್ಟ ಇನ್ನು ಪತ್ತೆಯಾಗದ ಮಾಡಾಳ್ ವಿರುಪಾಕ್ಷಪ್ಪ. | PRAJAATV KANNADA | BJP | https://www.youtube.com/watch?v=pHm9fYpYkL8
Amitabh Bachchan : ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ. ಆಸ್ಪತ್ರೆಗೆ ದಾಖಲು.| PRAJAATV KANNADA https://www.youtube.com/watch?v=plD72LrHwv4
ಮಹದೇವಪುರ:ಯಾವ ರೀತಿ ಸೂರ್ಯಚಂದ್ರ ಇರುವುದು ಸತ್ಯವೋ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸತ್ಯ, ಯಾವುದೇ ದುಷ್ಟಶಕ್ತಿಗಳು ಅಡ್ಡ ಬಂದರು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ದ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದ ಕುಂದಲಹಳ್ಳಿ ಸಮೀಪ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ ಮಹಿಳಾ ಸಮಾವೇಶ ಉದ್ಘಾಟನೆ ಮಾಡಿ ನಂತರ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, 2014ವರೆಗೆ 10 ವರ್ಷ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ, ದೇಶವನ್ನು ಭ್ರಷ್ಟಾಚಾರದ ಸುಳಿಗೆ ಸಿಲುಕಿಸಿದರು. ಸಾವಿರಾರು ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿತ್ತು, ಭ್ರಷ್ಟಾಚಾರದ ಕೂಸನ್ನು ಹುಟ್ಟಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಈಗ ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಕಾಂಗ್ರೆಸ್ ಪಕ್ಷದ ಸುಳ್ಳು ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕಿಡಿಕಾರಿದರು. ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ…