ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು?. ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ವಿಷಯ ಈಗ ಸ್ಪಷ್ಟವಾಗಿದೆ. ಸ್ವರೂಪ್ ಹೆಚ್. ಪಿ. ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈಗ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ. ಮೇ 10ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾದ ಗುರುವಾರ ಜೆಡಿಎಸ್ ನಾಯಕರು ಇದಕ್ಕೆ ಮುಹೂರ್ತ ಇಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಸ್ವರೂಪ್ ಹೆಚ್. ಪಿ. ನಾಮಪತ್ರ ಸಲ್ಲಿಕೆ ಮಾಡುವಾಗ ಅವರ ಜೊತೆ ಇರಲಿದ್ದಾರೆ. ಈಗಾಗಲೇ ಸಾಂಕೇತಿವಾಗಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಗುರುವಾರ ಬೃಹತ್ ರೋಡ್ ಶೋ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 20ರ ಗುರುವಾರ ಹಾಸನ ನಗರದಲ್ಲಿ ನಡೆಯುವ ಬೃಹತ್ ರೋಡ್ ಶೋನಲ್ಲಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಸಚಿವ ಎಚ್. ಡಿ. ರೇವಣ್ಣ, ಭವಾನಿ ರೇವಣ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ…
Author: Prajatv Kannada
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಿನ್ನೆಲೆಯಲ್ಲಿ ಲಿಂಗಾಯತ ಮತಗಳಿಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಗೆ ಇಳಿದಿವೆ. ಲಿಂಗಾಯತ ಸಮುದಾಯವನ್ನು ಸೆಳೆಯಲು ನಿರಂತರವಾಗಿ ಕಾಂಗ್ರೆಸ್ ಪ್ರಯತ್ನಿಸುತ್ತಲೇ ಬಂದಿತ್ತು. ಇದೀಗ ಶೆಟ್ಟರ್ ಹಾಗೂ ಸವದಿ ಸೇರ್ಪಡೆಯನ್ನು ಬಳಸಿಕೊಂಡು ಸಮುದಾಯವನ್ನು ಓಲೈಸುವ ಮೂಲಕ ಹಿಂದೆ ಆಗಿದ್ದ ಡ್ಯಾಮೇಜ್ ಸರಿಪಡಿಸಿಕೊಳ್ಳಲು ಸರ್ಕಸ್ ನಡೆಸುತ್ತಿದೆ. ಮತ್ತೊಂದೆಡೆ, ಶೆಟ್ಟರ್ ಹಾಗೂ ಸವದಿ ಅವರು ಪಕ್ಷ ತೊರೆದಿರುವುದರಿಂದ ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಜೆಪಿಗೆ ನಾಯಕರ ಕೊರತೆ ಎದುರಾಗಬಹುದಾದ ಭೀತಿ ಎದುರಾಗಿದೆ. ಈ ಕೊರತೆಯನ್ನು ನೀಗಿಸಿಕೊಳ್ಳುವ ಮೂಲಕ ಲಿಂಗಾಯತರನ್ನು ಪಕ್ಷದಲ್ಲಿ ಬಲವಾಗಿ ಹಿಡಿದಿಡಲು ಬಿಜೆಪಿ ಕೂಡ ಪ್ರಯತ್ನ ನಡೆಸುತ್ತಿದೆ. ಕರ್ನಾಟಕದ ದೊಡ್ಡ ಸಮುದಾಯವಾಗಿರುವ ವೀರಶೈವ ಲಿಂಗಾಯತ ಮತ ಬುಟ್ಟಿಯನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿದೆ. ಆಡಳಿತಾರೂಢ ಬಿಜೆಪಿ ಈಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಂದೆ ಬಿಟ್ಟು…
ಸೂರ್ಯ ಗ್ರಹಣ ಅಮವಾಸೆ(ನಮ್ಮ ಭಾರತ ದೇಶದಲ್ಲಿ ಇರುವುದಿಲ್ಲ) ಸೂರ್ಯೋದಯ: 06.05 AM, ಸೂರ್ಯಾಸ್ತ : 06.33 PM ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ಚೈತ್ರ ಮಾಸ, ಕೃಷ್ಣ ಪಕ್ಷ, ವಸಂತ ಋತು, ಉತ್ತರಾಯಣ ತಿಥಿ: ಇವತ್ತು ಅಮವಾಸ್ಯೆ 09:41 AM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಅಶ್ವಿನಿ 11:11 PM ತನಕ ನಂತರ ಭರಣಿ ಯೋಗ: ಇವತ್ತು ವಿಷ್ಕುಂಭ01:01 PM ತನಕ ನಂತರ ಪ್ರೀತಿ ಕರಣ: ಇವತ್ತು ನಾಗವ 09:41 AM ತನಕ ನಂತರ ಕಿಂಸ್ತುಘ್ನ 09:01 PM ತನಕ ನಂತರ ಬವ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ:06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 04.11 PM to 05.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:50 ನಿಂದ ಮ.12:40 ವರೆಗೂ ಮೇಷ ರಾಶಿ; ಮಹಿಳಾ ಉದ್ಯೋಗಿಗಳಿಗೆ ಕೆಲಸದಲ್ಲಿ ಹೆಚ್ಚಿನ ಒತ್ತಡ ಹಾಗೂ ಮಾನಸಿಕ ಕಿರುಕುಳ ಸಂಭವ. ಶಿಕ್ಷಕರಉದ್ಯೋಗ…
ಕೆಆರ್‌ಪುರ: ಕೆಆರ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಮೋಹನ್ ಬಾಬು ಹೆಸರು ಪ್ರಕಟಿಸಲಾಗಿದೆ. ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೇಂಬ್ರಿಡ್ಜ್ ವಿದ್ಯಾಸಂಸ್ಥೆಗಳ ಮಾಲೀಕರಾಗಿರುವಂತ ಮೋಹನ್ ಬಾಬು, ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅಂತಿಮ ಹಂತದಲ್ಲಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಿಹಿಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಲಿಂಗಾಯತ ಮುಖಂಡರನ್ನು ಕರೆಸಿಕೊಂಡು ಚರ್ಚೆ ನಡೆಸಿದರು. ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪುತ್ರ ಬಿ.ವೈ. ವಿಜಯೇಂದ್ರ ಅವರು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗಿ ತಮ್ಮ ಕಾವೇರಿ ನಿವಾಸದಲ್ಲಿ ಲಿಂಗಾಯತ ಮುಖಂಡರ ಸಭೆಯನ್ನು ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಸೋಮಣ್ಣ, ಸಿ.ಸಿ ಪಾಟೀಲ್, ಬಿ.ಸಿ. ಪಾಟೀಲ್, ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಸಂಸದರಾದ ಜಿ.ಎಂ. ಸಿದ್ದೇಶ್ವರ್, ಪಿ.ಸಿ ಗದ್ದಿಗೌಡರ್, ಮಂಗಳಾ ಸುರೇಶ್ ಅಂಗಡಿ, ಅಣ್ಣಾ ಸಾಹೇಬ್ ಜೊಲ್ಲೆ, ಶಿವಕುಮಾರ್ ಉದಾಸಿ, ಕರಡಿ ಸಂಗಣ್ಣ, ಬಿ.ವೈ ರಾಘವೇಂದ್ರ, ಜಿ.ಎಸ್ ಬಸವರಾಜ್, ಪ್ರಭಾಕರ್ ಕೋರೆ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜತೆಗೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಮಹಾಂತೇಶ್ ಕವಟಗಿಮಠ, ಅರವಿಂದ್ ಬೆಲ್ಲದ್, ಎಂ.ಪಿ. ರೇಣುಕಾಚಾರ್ಯ, ಎ.ಎಸ್ ಪಾಟೀಲ್ ನಡಹಳ್ಳಿ, ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ್, ನವೀನ್, ಸತೀಶ್, ಪಿ.ಹೆಚ್ ಪೂಜಾರು…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರನ್ನು ಹುರಿಯಾಳುಗಳನ್ನಾಗಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಶಾಕ್ ನೀಡಿದೆ. ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈತಪ್ಪಿದ್ದು, ಚನ್ನಬಸಪ್ಪಗೆ ಮಣೆ ಹಾಕಲಾಗಿದೆ. ಬಿ.ವಿ.ನಾಯಕ್ ಅವರು ನಿನ್ನೆಯಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ನಾಯಕ್‌ಗೆ ಟಿಕೆಟ್ ಗಿಟ್ಟಿಸಿಕೊಡುವಲ್ಲಿ ಸಚಿವ ಶ್ರೀರಾಮುಲು ಯಶಸ್ವಿಯಾಗಿದ್ದಾರೆ. ನಾಲ್ಕು ಹಂತಗಳಲ್ಲಿ 224 ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ ಮೊದಲ ಪಟ್ಟಿ – 189 ಎರಡನೇ ಪಟ್ಟಿ – 23 ಮೂರನೇ ಪಟ್ಟಿ – 10 ನಾಲ್ಕನೇ ಪಟ್ಟಿ – 02 ಈ ಸಲ ಬಿಜೆಪಿ 73 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. 20 ಕುಟುಂಬಗಳ ಸದಸ್ಯರಿಗೆ ಸ್ಪರ್ಧೆಗೆ…
ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾ ಗಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನುಏಪ್ರಿಲ್ ತಿಂಗಳ 4 ನೇ ವಾರದಲ್ಲಿ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ. ಮೇ. 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದ್ದು, ವಿದ್ಯಾರ್ಥಿಗಳ ಅನುಕೂಲ ಕ್ಕಾಗಿ ಮುಂದಿನ ಐದಾರು ದಿನಗಳಲ್ಲಿ…
ಬೆಂಗಳೂರು: ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್ ಆದ ರಾಕೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. 30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು, ದಾಳಿ ನಡೆಸಿ, ಬಂಧಿಸಿದ್ದಾರೆ. ಸದ್ಯ ರಾಜೇಶ್ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಕಚೇರಿಯಲ್ಲಿ 2 ಲಕ್ಷ ಹೆಚ್ಚುವರಿ ಹಣ ಕೂಡ ಪತ್ತೆ ಮಾಡಿದ್ದಾರೆ. ಇನ್ನೂ ಹೆಚ್ಚುವರಿ ಹಣದ ಬಗ್ಗೆ ಹೆಚ್ಚಿನ ವಿಚಾರಣೆ ಮಾಡುತ್ತಿರುವ ಲೋಕಾಯುಕ್ತ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನೂ ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್ ರಾಕೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್ಐಆರ್ ಕೂಡ ದಾಖಲು ಮಾಡಲಾಗಿದೆ. ರಾಜೇಶ್ ಕಚೇರಿಯಲ್ಲಿ 2 ಲಕ್ಷ ರೂ. ಹೆಚ್ಚುವರಿ ನಗದು ಕೂಡ ಪತ್ತೆ ಆಗಿದೆ. ಸದ್ಯ ರಾಜೇಶ್ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಈ ಚುನಾವಣೆಯಲ್ಲಿ ಯಾರ್ಯಾರು ಮಕಾಡೆ ಮಲಗ್ತಾರೋ ಗೊತ್ತಿಲ್ಲ.. ಘಟಾನುಘಟಿ ನಾಯಕರಿಗೇ ಸೋಲಿನ ಭೀತಿ ಕಾಡ್ತಿದೆ. ಕನಕಪುರಕ್ಕೆ ಹೋಗಿ ಡಿಕೆಶಿಯನ್ನ ಕಟ್ಟಿಹಾಕಲು ಯತ್ನಿಸಿದ್ದ, ಅಶೋಕ್ ಗೆ ನಿದ್ದೆಗೆಟ್ಟಿದೆ. ಪದ್ಮನಾಭನಗರ ಕ್ಷೇತ್ರ ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿದ್ದು, ಡಿಕೆ ಬ್ರದರ್ಸ್ ಎಂಟ್ರಿಯಿಂದ ಅಶೋಕ್ ಸುಸ್ತಾಗಿ ಹೋಗಿದ್ದಾರೆ.. ಯೆಸ್… ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಕಣಕ್ಕಿಳಿದಿರೋ ಆರ್ ಅಶೋಕ್ ಗೆ ಕಾಂಗ್ರೆಸ್ ಟಕ್ಕರ್ ಕೊಡ್ತಾ ಇದೆ. ರಘುನಾಥ್ ನಾಯ್ಡು ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮ ಕ್ಷಣದಲ್ಲಿ ಡಿ.ಕೆ ಸುರೇಶ್ ನ್ನ ಅಖಾಡಕ್ಕಿಳಿಸಿ, ಅಶೋಕ್ ನಿದ್ದೆಗೆಡುವಂತೆ ಪ್ಲ್ಯಾನ್ ರೂಪಿಸಿದ್ದಾರೆ. ಡಿ.ಕೆ ಸುರೇಶ್ ಕೂಡ ನಾಮಪತ್ರ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿಂದ ಡಿ.ಕೆ ಸುರೇಶ್ ಗೆ ಸಂದೇಶ ಹೋಗುದ್ದು, ಇಡೀ ದಿನ ಆ ಸಿದ್ಧತೆಯಲ್ಲೇ ತೊಡಗಿದ್ರು. ನಾಮಪತ್ರ ಸಲ್ಲಿಸಲು ಎಲ್ಲ ಡಾಕ್ಯೂಮೆಂಟ್ ರೆಡಿ ಮಾಡಿಕೊಂಡಿದ್ದಾರೆ. ಸುರೇಶ್ ನಾಮಪತ್ರ ಸಲ್ಲಿಸ್ತಾರೆ ಅಂತಾ ಡಿ.ಕೆ ಶಿವಕುಮಾರ್ ಅವ್ರೇ ಹೇಳಿದ್ದಾರೆ.. ಈಗಾಗಲೇ ಬಿ ಫಾರ್ಮ್ ಪಡೆದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು…
ಬೆಂಗಳೂರು: ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿಯಿರುವಂತೆಯೇ, ಬಿಜೆಪಿ ಹೈಕಮಾಂಡ್, ಕರ್ನಾಟಕದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಲಿರುವ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪ, ಈಶ್ವರಪ್ಪ ಹಾಗೂ ಮುಂತಾದವರ ಹೆಸರುಗಳಿವೆ. ಆದರೆ, ಅಲ್ಲಿ ತಮ್ಮ ಚುರುಕು ಮಾತುಗಳಿಂದ ವಿಪಕ್ಷಗಳ ನಾಯಕರಿಗೆ ಬಿಸಿ ಮುಟ್ಟಿಸುವ, ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರಿಲ್ಲ. ಅಷ್ಟೇ ಏಕೆ, ಅವರ ಆಪ್ತರಾದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರೂ ಆದ ತೇಜಸ್ವಿ ಸೂರ್ಯ ಅವರ ಹೆಸರೂ ಇಲ್ಲದಿರುವುದು ಅಚ್ಚರಿ ತಂದಿದೆ. ಒಟ್ಟು 40 ಜನರ ಹೆಸರರಿರುವ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅದರಲ್ಲಿ ಈಗಾಗಲೇ ಹೇಳಿರುವಂತೆ ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ, ಈಶ್ವರಪ್ಪ, ನಡ್ಡಾ ಮೊದಲಾದ ಹೆಸರುಗಳಿವೆ. ರಾಜ್ಯದ ನಾಯಕರ ಪೈಕಿ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ್…