Author: Prajatv Kannada

ಸಂಭ್ರಮದ ಹಬ್ಬವೆಂದರೆ ಹೋಳಿ. ಈ ಬಾರಿ ಹೋಳಿ ಹಬ್ಬವನ್ನು ಮಾರ್ಚ್ 17 ಮತ್ತು 18 ರಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಫಾಲ್ಗುಣ ಮಾಸದ ಪೂರ್ಣಿಮೆಯಂದು ಹಿಂದೂಗಳು ಈ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಹಬ್ಬವನ್ನು ಬಣ್ಣಗಳ ಹಬ್ಬ ಎಂದೂ ಕರೆಯುತ್ತಾರೆ. ಈ ದಿನ ಮಾಡುವಂತಹ ಕೆಲವು ಪರಿಹಾರಗಳು ನಿಮಗೆ ಸಂಪತ್ತು, ಆರೋಗ್ಯ ಮತ್ತು ಸಂತೋಷವನ್ನು ಪಡೆಯಲು ಸಹಾಯ ಮಾಡುತ್ತದೆ. ಆ ಕ್ರಮಗಳೇನು ಎನ್ನುವುದನ್ನು ನೋಡೋಣ. ಈ ದಿನದಂದು ಬಡವರಿಗೆ ಮತ್ತು ನಿರ್ಗತಿಕರಿಗೆ ಏನನ್ನಾದರೂ ದಾನ ಮಾಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ನೀವು ಆರೋಗ್ಯ, ಸಂಪತ್ತು ಮತ್ತು ಶಾಂತಿಯನ್ನು ಪಡೆಯುತ್ತೀರಿ. ಅದಕ್ಕಾಗಿಯೇ ಹೋಳಿ ಹಬ್ಬದಂದು ಬಡವರಿಗೆ ಏನಾದರೂ ದಾನ ಮಾಡಬೇಕು. ನಿಮ್ಮ ಕೆಲಸದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಈ ಪರಿಹಾರ ಮಾಡಿ ಸಾಮಾನ್ಯವಾಗಿ ಜನರು ಉದ್ಯೋಗ, ವ್ಯವಹಾರದ ಬಗ್ಗೆಯೇ ಚಿಂತೆ ಮಾಡುವುದು ಹೆಚ್ಚು. ನಿಮ್ಮ ಕೆಲಸ, ವ್ಯಾಪಾರ ಅಥವಾ ವಾಹಕದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಹೋಲಿಕಾ ದಹನ ಪೂಜೆಯ ಸಮಯದಲ್ಲಿ ನೀವು ತೆಂಗಿನಕಾಯಿಯನ್ನು ಪ್ರಸಾದವಾಗಿ ನೀಡಬೇಕು.…

Read More

ಸೂರ್ಯೋದಯ: 06.33 AM, ಸೂರ್ಯಾಸ್ತ : 06.29 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ಚತುರ್ದಶಿ 04:17 PM ತನಕ ನಂತರ ಹುಣ್ಣಿಮೆ ನಕ್ಷತ್ರ: ಇವತ್ತು ಪೂರ್ಣ ಮಖ ಯೋಗ: ಇವತ್ತು ಸುಕರ್ಮಾ 08:55 PM ತನಕ ನಂತರ ಧೃತಿ ಕರಣ: ಇವತ್ತು ಗರಜ 03:14 AM ತನಕ ನಂತರ ವಣಿಜ 04:17 PM ತನಕ ನಂತರ ವಿಷ್ಟಿ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 09.25 PM to 11.12 PM ಅಭಿಜಿತ್ ಮುಹುರ್ತ: ಮ.12:03 ನಿಂದ ಮ.12:50 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403…

Read More

“ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ” ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗುತ್ತದೆ. ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗುತ್ತದೆ. ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಾರೆ . ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ . ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡುತ್ತಾರೆ. ಆದ್ರೂ ನಿರಾಶೆ ಆಗುವ ಸಾಧ್ಯತೆ. ಆಗ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮಜಾತಕ ಅಥವಾ ಜನ್ಮ ಕುಂಡಲಿ. ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು.ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು…

Read More

ಬೆಂಗಳೂರು: ಹಾಸನ ಅಭಿವೃದ್ಧಿ ಆಗಿಲ್ಲ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಹೇಳಿಕೆ ಸರಿಯಲ್ಲ. ಈ ಕೂಡಲೇ ಅವರು ತಮ್ಮ ಹೇಳಿಕೆಯನ್ನು ಮರು ಪರಿಶೀಲನೆ ಮಾಡಬೇಕು ಎಂದು ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಆಗ್ರಹಿಸಿದ್ದಾರೆ.  ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೇಲೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಹಾಸನ ಜಿಲ್ಲೆ ಅಭಿವೃದ್ಧಿಯಾಗಿಲ್ಲ. ಅಲ್ಲಿ ಒಂದು ಕುಟುಂಬದ ಪಾರಮ್ಯವಿದೆ ಎಂದು ಟೀಕಿಸಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಅವರು ಮಾತನಾಡಿದ್ದಾರೆ. ಆದರೆ ಅವರ ಬಗ್ಗೆ ನಾವು ಗೌರವ ಇಟ್ಟುಕೊಂಡಿದ್ದೇವೆ. ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಸರ್ಕಾರ ಅನುದಾನ ನೀಡಿದೆ. ಹೈಟೆಕ್ ಆಸ್ಪತ್ರೆ, ಹೈಟೆಕ್ ಬಸ್ ನಿಲ್ದಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿಯನ್ನು ನಮ್ಮ ತಂದೆ ರೇವಣ್ಣ ಮಾಡಿದ್ದಾರೆ. ಹಾಗಾಗಿ ಬೊಮ್ಮಾಯಿ‌ ಅವರು ಬೇಲೂರಿನಲ್ಲಿ ನೀಡಿದ ಹೇಳಿಕೆಯನ್ನು ಮರು ಪರಿಶೀಲಿಸಬೇಕು” ಎಂದು ಹೇಳಿದ್ದಾರೆ.

Read More

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಸಾವಯವ ಕೃಷಿಗಾಗಿ ರಾಜ್ಯದಲ್ಲಿ 228.80 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಆಹಾರ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ಪ್ರಾಕಾರ ಮಾಹಿತಿ ಅನುಸಾರ ರಾಜ್ಯದಲ್ಲಿ 1,10,703 ಹೆಕ್ಟೇರ್‍ನಲ್ಲಿ ಸಾವಯವ ಕೃಷಿ ನಡೆಸಲಾಗುತ್ತಿದೆ. ಸಾವಯವದ ಅಭಿವೃದ್ಧಿಗೆ ಮಾರುಕಟ್ಟೆ ಆಧಾರಿತ ರ್ನಿಷ್ಟ ಬೆಳೆಯ ಕ್ಲಸ್ಟರ್ ಅಭಿವೃದ್ಧಿ, ದೃಢೀಕರಣ ಯೋಜನೆ, ಸಿರಿಧಾನ್ಯಗಳ ಮಾರುಕಟ್ಟೆ ಅಭಿವೃದ್ದಿ, ನೈಸರ್ಗಿಕ ಕೃಷಿ, ರೈತ ಸಿರಿ, ಸಿರಿಧಾನ್ಯ ನೈಸರ್ಗಿಕ ಉತ್ಪನ್ನಗಳ ಸಂಸ್ಕರಣೆ ಸಾವಯವ ಸಿರಿ ಯೋಜನೆ, ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಸೇರಿದಂತೆ 8ಕ್ಕೂ ಹೆಚ್ಚು ಯೋಜನೆಗಳು ಜಾರಿಗೆ ತರಲಾಗಿದೆ. 2004ರಲ್ಲಿ ಕೃಷಿ ನೀತಿ ಜಾರಿಗೊಳಿಸಲಾಗಿತ್ತು. ರೈತರಿಗೆ 5326 ತರಬೇತಿ ಶಿಬಿರಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ 2015-16ನೇ ಸಾಲಿನಿಂದ ಪರಂಪಾರಗತ ಕೃಷಿ ವಿಕಾಸ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಇದರಲ್ಲಿ ಕೇಂದ್ರ ಸರ್ಕಾರ 40 ಕೋಟಿ, ರಾಜ್ಯ ಸರ್ಕಾರ 27 ಕೋಟಿ ಸೇರಿ ಒಟ್ಟು…

Read More

ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚನೆ ಎಸಗಿದ ನೈಜೀರಿಯನ್ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತನನ್ನು ನೋಕೋಚಾ ಕಾಸ್ಮೀರ್ ಇಕೆಂಬಾ ಎಂದು ಗುರುತಿಸಲಾಗಿದೆ. ಆರೋಪಿಯು, ಯುಕೆ ದೇಶದ ಶೆಲ್ ಆಯಿಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ವಿವಿಧ ಶುಲ್ಕಗಳ ಹೆಸರಿನಲ್ಲಿ ಹಣ ಹಾಕಿಸಿಕೊಂಡು ಅಮಾಯಕ ಜನರನ್ನು ಈತ ವಂಚಿಸುತ್ತಿದ್ದ. ಇದೀಗ ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು ಫೆ. 11 ರಂದು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಮಲ‌ರ್​ ಕೋಡಿ ಅವರಿಗೆ ಈಮೇಲ್ ಐಡಿಯಿಂದ ಯುಕೆ ದೇಶದಲ್ಲಿ ಸ್ಟಾಫ್​ ನರ್ಸ್ ಕೆಲಸ ಕೊಡಿಸುವುದಾಗಿ ಹೇಳಿ ಸಂದೇಶ ಕಳುಹಿಸಿದ್ದ. ಇದನ್ನು ನಂಬಿದ ಮಲರ್​ ಕೋಡಿ, ಆರೋಪಿಯನ್ನು ಸಂಪರ್ಕಿಸಿದಾಗ ವಿವಿಧ ಶುಲ್ಕ ಹಾಗೂ ಕ್ಲಿಯರನ್ಸ್ ಫೀಜ್‌ಗಳೆಂದು ಹಂತ ಹಂತವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು 3 ಲಕ್ಷ ರೂ. ಅಧಿಕ ಹಣವನ್ನು ಹಾಕಿಸಿಕೊಂಡು ಯಾವುದೇ ಕೆಲಸ ಕೊಡಿಸದೆ ವಂಚಿಸಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಮಲಾರ್​ ಕೋಡಿ ಅವರು ಈಶಾನ್ಯ ವಿಭಾಗದ…

Read More

ಬೆಂಗಳೂರು: ಬೃಹತ್​ ಬೆಂಗಳೂರು ನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ಯಾರಾ ಮೆಡಿಕಲ್​, ವರ್ಕರ್​ ಮತ್ತು ಸೈಕಿಯಾಟ್ರಿಕ್​ ನಸರ್ಸ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಸಲಾಗುತ್ತಿದ್ದು, ಸೂಕ್ತ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸದೇ ವಾಕ್​ ಇನ್​ ಇಂಟರ್​ವ್ಯೂ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 46 ಹುದ್ದೆಗಳು ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ನರ್ಸ್​ ಹೊರತಾಗಿ ಆಶಾ ಕಾರ್ಯಕರ್ತರು, ಅಕೌಂಟ್​ ಮ್ಯಾನೇಜರ್, ಜಿಲ್ಲಾ ಸಮಾಲೋಚಕರು, ಜೋನಲ್​ ಅಕೌಂಟ್​ ಮ್ಯಾನೇಜರ್​, ಡೆಂಟಿಸ್ಟ್​​​ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ, ಪದವಿ, ಎಂಎಸ್​ಡಬ್ಯೂ, ಎಂಬಿಬಿಎಸ್​, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗೆ ತಕ್ಕಂತೆ ನಿರ್ದಿಷ್ಟ ವೇತನವನ್ನು ನಿಗದಿ ಮಾಡಲಾಗಿದ್ದು, ಕನಿಷ್ಟ 14 ಸಾವಿರದಿಂದ ಗರಿಷ್ಟ 50 ಸಾವಿರದವರೆಗೆ ವೇತನ ನಿಗದಿ ಮಾಡಲಾಗಿದೆ.…

Read More

ಬೆಂಗಳೂರು: ಮೊಣಕಾಲು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಕೆಲವು ದಿನಗಳ ಹಿಂದೆ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.ಇನ್ನು, ಮುಂದಿನ ದಿನಗಳಲ್ಲಿ ನಡೆಯುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

Read More

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಅಲ್ಲದೆ H3N2 ಸೋಂಕು ಕೂಡಾ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಸಾರ್ವಜನಿಕರು ಕೆಮ್ಮು, ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಈಗಾಗಲೇ ಭಾರತೀಯ ವೈದ್ಯಕೀಯ ಸಂಘ ಈ ನಿಟ್ಟಿನಲ್ಲಿ ಸೂಚನೆಯೊಂದನ್ನು ಹೊರಡಿಸಿದೆ. ವೈದ್ಯರುಗಳು ಆಂಟಿಬಯೋಟಿಕ್ ಗಳನ್ನು ಶಿಫಾರಸ್ಸು ಮಾಡುವುದನ್ನು ಆದಷ್ಟು ತಪ್ಪಿಸಲು ಭಾರತೀಯ ವೈದ್ಯಕೀಯ ಸಂಘ ತಿಳಿಸಿದ್ದು, ಜೊತೆಗೆ ಸಾರ್ವಜನಿಕರು ಸಹ ಸ್ವಯಂ ಆಗಿ ಆಂಟಿ ಬಯೋಟಿಕ್ ಗಳನ್ನು ಸೇವಿಸಬಾರದು ಎಂದು ತಿಳಿಸಿದೆ.ಈ ಎಲ್ಲದರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ನಂತರ ಸಾರ್ವಜನಿಕರಿಗೆ ಈ ಕುರಿತಂತೆ ಮಾಹಿತಿ ನೀಡಲಾಗುತ್ತದೆ.

Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಭಂದ  ಎನ್ ಐ ಎ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಆರು ತಿಂಗಳಿಂದ ಬೆಂಗಳೂರಿನಲ್ಲೇ ಆರಾಮಾಗಿದ್ದ ಕೊಲೆಗಡುಕ ತೌಸಿಫ್ ಎಂಬ ಪ್ರಮುಖ ಆರೋಪಿಯನ್ನ ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ನಡೆಸಿದ ಇಂಟ್ರೆಸ್ಟಿಂಗ್ ಕಾರ್ಯಚರಣೆ ಹೇಗಿತ್ತು ಗೊತ್ತ? ಈ ಸ್ಟೋರಿ ನೋಡಿ.. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ತೌಫಿಲ್ ನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿರೋ   ಮನೆಯೊಂದರಲ್ಲಿ ಎನ್ ಐ ಎ ಅಧಿಕಾರಿಗಳು ತೌಫಿಲ್ ಬಂಧನ ಮಾಡಿದ್ದಾರೆ.ನಿನ್ನೆ ತಡರಾತ್ರಿ ಎನ್ ಐ ತಂಡ ಆರೋಪಿ ತೌಫಿಲ್ ನನ್ನ ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ಹಂತಕ ತೌಫಿಲ್ ಕಳೆದ ಆರು ತಿಂಗಳಿಂದ ಬೆಂಗಳೂರಿನಲ್ಲಿ ವಾಸವಾಗಿ ಇರುವ ಬಗ್ಗೆ ಎನ್ ಐ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕದೆ.ಬಳಿಕ ಎನ್ ಐಎ ಅಧಿಕಾರಿಗಳು ಪ್ಲಂಬರ್ ಹಾಗೂ ಆಟೋ ಚಾಲಕನ ಮಾರುವೇಷದಲ್ಲಿ ಬಂದು ಹಂತಕ ತೌಫಿಲ್ ನನ್ನ ಬಂಧಿಸಿದ್ದಾರೆ. ತೌಫಿಲ್ ವಾಸವಿದ್ದ…

Read More