Author: Prajatv Kannada

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ 40 ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್​ ಶೆಟ್ಟರ್​, ಸತೀಶ್​ ಜಾರಕಿಹೊಳಿ, ಡಿ.ಕೆ.ಸುರೇಶ್​​, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ.

Read More

ಅಭ್ಯರ್ಥಿಗಳ ವಿವರ ಹೀಗಿದೆ ನಿಪ್ಪಾಣಿ- ರಾಜು ಮಾರುತಿ ಪವಾರ್​ ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ್​ ಅರಭಾವಿ ಕ್ಷೇತ್ರ- ಪ್ರಕಾಶ ಕಾಶ ಶೆಟ್ಟಿ ಶಿವಮೊಗ್ಗ ನಗರ- ಆಯನೂರು ಮಂಜುನಾಥ್​ ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ್​ ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್​ ತೋಳಲ್ಕರ್​ ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ್ ರಾಮದುರ್ಗ ಕ್ಷೇತ್ರ- ಪ್ರಕಾಶ್​​ ಮುಧೋಳ

Read More

ಬೆಂಗಳೂರು: ಕೆಆರ್‌ಪಿಪಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ ಪ್ರವೇಶವನ್ನು ನಿರಾಕರಿಸಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಷರತ್ತು ಸಡಿಲಿಸುವಂತೆ ಕೋರಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಹೊಸ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಸಿಟಿ ರವಿಕುಮಾರ್ ಅವರ ಪೀಠ ನಿರಾಕರಿಸಿದೆ. ಸುಪ್ರೀಂಕೋರ್ಟ್ ನಿರ್ಧಾರದಿಂದ ಜನಾರ್ದನ ರೆಡ್ಡಿಗೆ ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ಈ ಹಿಂದೆ ಷರತ್ತು ವಿಧಿಸಿ ಜಾಮೀನು ನೀಡಿತ್ತು. 2015, ಜನವರಿ 20ರ ಜಾಮೀನು ಆದೇಶವನ್ನು ಮಾರ್ಪಡಿಸಿದ್ದ ನ್ಯಾಯಾಲಯ, ಕರ್ನಾಟಕದ ಮಾಜಿ…

Read More

2023 ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ.. ಈಗಾಗಲೇ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ಅವರು ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಯೆಸ್2023  ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತಹದ್ದು.. ಮೂರು ಪಕ್ಷದ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಅದರಂತೆ ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ನಾಮಪತ್ರ ಸಲ್ಲಿಕೆ ಮಾಡಿದರು.. ನಾಮಪತ್ರ ಸಲ್ಲಿಸುವ ಮುನ್ನ ನೆಲಮಂಗಲದ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ಮೆರವಣಿಗೆ ಮಾಡಿ ನಾಮಪತ್ರ ಸಲ್ಲಿದ್ದರು.. ನಾಮಪತ್ರ ಸಲ್ಲಿದ ಬಳಿಕ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳಿಂದ ಜೆಡಿಎಸ್ ಪಕ್ಷದ ಶಾಸಕರು ಕ್ಷೇತ್ರದಲ್ಲಿ ಎನು ಅಭಿವೃದ್ಧಿ ಮಾಡಿಲ್ಲ.. ಈ ಬಾರಿ ನಾನು ಆಯ್ಕೆ ಆಗ್ತಿನಿ ಅನ್ನುವ ವಿಶ್ವಾಸ ನನಗೆ ಇದೆ..…

Read More

ಬೆಂಗಳೂರು: ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಆದಾಯ ತೆರಿಗೆ ಹಾಗೂ ಇತರ ಸಂಸ್ಥೆತಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಬೆಂಬಲಿಗರನ್ನು ಬೆದರಿಸುವ ಯತ್ನ ಮಾಡುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ.  ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ. ಮೇ 10ರಂದು ಕೇವಲ ಮತದಾನದ ದಿನ ಮಾತ್ರವಲ್ಲ, ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟಾಚಾರ ಬಡಿದೋಡಿಸುವ ದಿನ. ಎಲ್ಲರ ಮನೆಯಲ್ಲಿ ಜ್ಯೋತಿ ಹತ್ತಿಸುವ, ಎಲ್ಲಾ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ನಿರುದ್ಯೋಗಿ…

Read More

ಬೆಂಗಳೂರು: ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲಿ ಸಚಿವ ವಿ ಸೋಮಣ್ಣ ಸ್ಪರ್ದೆ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು?’ ಎಂದು ಹೇಳಿದ್ದಾರೆ. ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ’ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಸುಮಾರು 45 ಪ್ರಮುಖ ರೌಡಿಗಳನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 12 ರೌಡಿಗಳನ್ನ ಗಡಿಪಾರು ಮಾಡಲು ಆಯಾ ವಿಭಾಗದ ಡಿಸಿಪಿಗಳು ಆದೇಶ ಹೊರಡಿಸಿದ್ದಾರೆ. ಉಳಿದಂತೆ 33 ರೌಡಿಗಳ ಗಡಿಪಾರಿಗೆ ಸಿದ್ದತೆ ನಡಿತಾಯಿದ್ದು, ಕೌನ್ಸಿಲಿಂಗ್ ಆಗುತ್ತಿದೆಯಂತೆ. ಇನ್ನೊಂದು ವಾರದ ಒಳಗೆ ನಗರ ಪೊಲೀಸರು ಗಡಿಪಾರು ಮಾಡಲಿದ್ದಾರೆ. ಪೂರ್ವ ವಿಭಾಗ 12, ಪಶ್ಚಿಮ ವಿಭಾಗ 6, ಆಗ್ನೇಯ ವಿಭಾಗ 5, ಕೇಂದ್ರ ವಿಭಾಗ 4, ಈಶಾನ್ಯ ವಿಭಾಗ 4, ವೈಟ್ ಫೀಲ್ಡ್ ವಿಭಾಗ 5, ಉತ್ತರ ವಿಭಾಗ 5, ದಕ್ಷಿಣ ವಿಭಾಗ 4 ರೌಡಿಗಳನ್ನ ಗಡಿಪಾರು ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದು, ಅದರಂತೆ ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಸೂಕ್ತ ಕ್ರಮ‌ಕೈಗೊಳ್ಳಲಾಗಿದೆ.

Read More

ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಅಕ್ರಮ ಎಸಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಬೊಮ್ಮಾಯಿ ಸರ್ಕಾರ ಟೆಂಡರ್‌ಗಳಲ್ಲಿ 40% ಕಮಿಷನ್ ಪಡೆಯಲು ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೆಲ್ಲವನ್ನು ನೋಡಿ ಸುಮ್ಮನೆ ಕೂತಿರುವ ಚುನಾವಣಾ ಆಯೋಗದ ಮೇಲೆ ನಂಬಿಕೆ ಕುಗ್ಗಿವೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಇನ್ನೂ ಚುನಾವಣೆ ದಿನಾಂಕ ಘೋಷಿಸುವ ಮುನ್ನ ಅನೇಕ ಟೆಂಡರ್ ಗಳನ್ನು ಸಮರ್ಪಕ ಪ್ರಕ್ರಿಯೆ ಮೂಲಕ ಹೊರಡಿಸಿಲ್ಲ. ಟೆಂಡರ್ ಅಂದಾಜು ಮೊತ್ತ, ಕಾಲಾವಧಿ ನಿಗದಿಯಾಗದೇ ಟೆಂಡರ್ ನೀಡಲಾಗಿದೆ. ಇಲಾಖೆವಾರು ಕಾಮಗಾರಿ ವೆಚ್ಚದ ಪರಿಶೀಲನೆ ಇಲ್ಲದೆ ಟೆಂಡರ್ ನೀಡಲಾಗಿದೆ. ಬೊಮ್ಮಾಯಿ ಸರ್ಕಾರ ಕೇವಲ 40% ಕಮಿಷನ್ ಪಡೆಯುವ ಏಕಮಾತ್ರ ಉದ್ದೇಶದಿಂದ ಈ ರೀತಿ ಅಕ್ರಮವಾಗಿ ಟೆಂಡರ್ ನೀಡಲಾಗಿದೆ. ಈ ವಿಚಾರವಾಗಿ ರಾಜ್ಯ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕೇಂದ್ರ…

Read More

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲೇ ಪ್ಲ್ಯಾನ್ ಮಾಡಿದ್ದರು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್‌ ಬಿಜೆಪಿಯಲ್ಲಿ ಎಲ್ಲವನ್ನೂ ಅನುಭವಿಸಿ ಹೋಗಿರೋದು ಆಶ್ಚರ್ಯ ಉಂಟುಮಾಡಿದೆ. ಮುಖ್ಯಮಂತ್ರಿ ಆಗಬೇಕು ಎನ್ನುವ ಕೊರಗು ಅವರಿಗೆ ಇದ್ದಿದ್ದರೆ ಕಾಂಗ್ರೆಸ್‌ಗೆ ಹೋಗಿದ್ದಾರೆ ಎನ್ನಬಹುದು. ಆದರೆ ಅವರಿಗೆ ಈ ರೀತಿಯಾದ ಕೊರಗು ಇರಲಿಲ್ಲ. ಅವರ ಕುಟುಂಬಕ್ಕೆ ಟಿಕೆಟ್ ಕೊಡುತ್ತೇವೆ ಎಂದರೂ ಹೋಗಿದ್ದಾರೆ. ಅವರ ಏರಿಯಾದಲ್ಲಿ ಏನೋ ಕೆಲಸ ಪೆಂಡಿಂಗ್ ಇದೆ ಎಂದಾಗಿದ್ದರೆ ಅವರ ಮಗ ಅಥವಾ ಶ್ರೀಮತಿ ಕೈಯಲ್ಲಿಯೇ ಮಾಡಿಸಬಹುದಿತ್ತು ಕಾಂಗ್ರೆಸ್‌ಗೆ ಹೋಗಿ ದುಡುಕಿನ ನಿರ್ಧಾರ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ಅಧಿಕಾರವನ್ನು ಕೊಟ್ಟಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಹೋಗಿರುವುದು ಬಹಳ ನೋವಿನ ಸಂಗತಿ ಎಂದು ಜಗದೀಶ್‌ ಶೆಟ್ಟರ್‌ ವಿರುದ್ಧ ಸಚಿವ ಆರ್.ಅಶೋಕ್ ಕೆಂಡಾಮಂಡಲರಾಗಿದ್ದಾರೆ.

Read More

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಕ್ರಮ ಅದಿರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕ ನಾಗೇಂದ್ರ ಸೇರಿದಂತೆ 16 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಲಾಗಿದೆ. ಗಣಿ ಮತ್ತು ಖನಿಜ ಅಭಿವೃದ್ಧಿ ನಿಯಂತ್ರಣಗಳ ಕಾಯ್ದೆ 1957 ಅಡಿ, ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ತಿಳಿಸಿದೆ. ವಿಧಾನಸಭೆ ಚುನಾವಣೆಗೆ ಜನಾರ್ದನ ರೆಡ್ಡಿ ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ಇದೀಗ ಕೋರ್ಟ್ ಆದೇಶದಿಂದ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ ಎಂದು ಮಾತು ಕೇಳಿ ಬಂದಿದೆ.

Read More