Author: Prajatv Kannada

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ರಂಗು ಹೆಚ್ಚುತ್ತಿದೆ. ರಾಜ್ಯದ 3 ಪ್ರಮುಖ ಪಕ್ಷಗಳಾದ ಬಿಜೆಪಿ (BJP), ಜೆಡಿಎಸ್ (JDS), ಕಾಂಗ್ರೆಸ್‍ನ (Congress) ಅನೇಕ ಘಟಾನುಗಟಿ ನಾಯಕರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬೆಂಬಲಿಗರನ್ನು ಒಟ್ಟುಗೂಡಿಸಿ, ಬೃಹತ್ ರ‍್ಯಾಲಿಗಳನ್ನು ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದ್ದಾರೆ. ಯಾರ‍್ಯಾರು ಎಲ್ಲೆಲ್ಲಿ ನಾಮಪತ್ರ ಸಲ್ಲಿಕೆ?: ಆರ್. ಅಶೋಕ್: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್. ಅಶೋಕ್ (R Ashok) ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅದಾದ ಬಳಿಕ ದೇವೇಗೌಡ ಪೆಟ್ರೋಲ್ ಬಂಕ್‍ನಿಂದ ಕಿಮ್ಸ್ ಕಾಲೇಜಿನವರೆಗೂ ಮೆರವಣಿಗೆ ಮೂಲಕ ಹೊರಟು ಬನಶಂಕರಿ ಎರಡನೇ ಹಂತದಲ್ಲಿ ಇರುವ ಆರ್‍ಓ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಸಂಸದ ತೇಜಸ್ವಿ ಸೂರ್ಯ ಸಾಥ್ ನೀಡಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಅಶ್ವಥ್ ನಾರಾಯಣ್: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್‌ ಅವರು ಇಂದು…

Read More

ಬೆಂಗಳೂರು: ಪಕ್ಷೇತರರಾಗಿ ಸ್ಪರ್ದೆ ಮಾಡಬೇಕು ಅಂತ ಯೋಚಿಸಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಹೇಳಿದ್ದಾರೆ. ಈ ಸಂಬಂಧ ಪುಲಿಕೇಶಿ ನಗರದಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರು, ಜನತೆಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಅತ್ಯಂತ ಹೆಚ್ಚು ಲೀಡ್​ನಿಂದ ಗೆದ್ದ ಶಾಸಕ ನಾನು. ಆದರೆ ನನಗೆ ಪಕ್ಷದ ನಡೆಯಿಂದ ನೋವುಂಟಾಗಿದೆ. ಮೂರನೇ ಲಿಸ್ಟ್​ನಲ್ಲೂ ನನಗೆ ಟಿಕೇಟ್ ನೀಡಲಿಲ್ಲ. ಇದರ ಹಿಂದೆ ಪಕ್ಷದ ಹಿರಿಯ ನಾಯಕರಿದ್ದಾರೆ. ಹಿರಿಯ ನಾಯಕರು ಯಾರು ಎಂದು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದರು. ಕ್ಷೇತ್ರದಲ್ಲಿ ಹಿಂದೂ- ಮುಸ್ಲಿಂ- ಕ್ರಿಶ್ಚಿಯನ್ ಎಲ್ಲಾ ಅಣ್ಣ ತಮ್ಮಂದಿರ ರೀತಿ ಇದ್ದೇವೆ. ನನ್ನ ಬಗ್ಗೆ ಮನೆ ಮನೆಗೆ ಹೋಗಿ ಕೇಳಲಿ ಬೇಕಾದರೆ ಎಂದು ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.

Read More

ಬೆಂಗಳೂರು: ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್​ ನಾಯಕರ ಮುಂದೆ ಜಗದೀಶ್ ಶೆಟ್ಟರ್​ ಬೇಡಿಕೆ ಇಟ್ಟಿದ್ದಾರೆ. ತಮಗೆ ಹಾಗೂ ತಮ್ಮ ಆಪ್ತರಾದ ಮಾಜಿ ಶಾಸಕ SI ಚಿಕ್ಕನಗೌಡರ್ ತಮ್ಮ ತವನಪ್ಪ ಅಷ್ಟಗಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್​ ನಾಯಕರ ಮುಂದೆ ಜಗದೀಶ್ ಶೆಟ್ಟರ್​ ಬೇಡಿಕೆ ಇಟ್ಟಿದ್ದಾರೆ. ತಮಗೆ ಹಾಗೂ ತಮ್ಮ ಆಪ್ತರಾದ ಮಾಜಿ ಶಾಸಕ SI ಚಿಕ್ಕನಗೌಡರ್ ತಮ್ಮ ತವನಪ್ಪ ಅಷ್ಟಗಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಕುಂದಗೋಲ ಟಿಕೆಟ್​ ಕೈತಪ್ಪಿದ್ದರಿಂದ ಬಿಜೆಪಿಗೆ ರಾಜೀನಾಮೆ ನೀಡಿರುವ SI ಚಿಕ್ಕನಗೌಡರ್ ಅವರಿಗೆ ಕುಂದಗೋಳ ಕ್ಷೇತ್ರಕ್ಕೆ ಟಿಕೆಟ್ ಕೊಡಿ ಎಂದು ಜಗದೀಶ್ ಶೆಟ್ಟರ್​ ಕೇಳಿದ್ದಾರೆ. ಈಗಾಗಲೇ ಕುಂದಗೋಳ ಕ್ಷೇತ್ರಕ್ಕೆ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಗೆ ಕಾಂಗ್ರೆಸ್​ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆಯಾಗಿದ್ದರೂ ಸಹ ಚಿಕ್ಕನಗೌಡರ ಪರ ಶೆಟ್ಟರ್ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ಮತ್ತೊಂದು ಕಡೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ…

Read More

ಬೆಂಗಳೂರು: ಜಗದೀಶ್ ಶೆಟ್ಟರ್ ಒಬ್ಬರು ಸ್ವಾಭಿಮಾನಿ ರಾಜಕಾರಣಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಲಿಂಗಾಯತರನ್ನು ಕಡೆಗಣಿಸಿದೆ. ಹೀಗಾಗಿ ಯಡಿಯೂರಪ್ಪ  ಸಿಎಂ ಸ್ಥಾನದಿಂದ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಿದರು. ಅದಕ್ಕೆ ರಾಜೀನಾಮೆ ನೀಡಿದ ದಿನ  ಯಡಿಯೂರಪ್ಪ ಕಣ್ಣೀರು ಹಾಕಿದರು‌. ಯಡಿಯೂರಪ್ಪ ಬಳಿಕ ಲಿಂಗಾಯತ ಸಮಾಜದಲ್ಲಿ ದೊಡ್ಡ ನಾಯಕ ಜಗದೀಶ್ ಶೆಟ್ಟರ್. ಬಿಜೆಪಿ ಅವರನ್ನು ನಡೆದುಕೊಂಡ ರೀತಿ ಯಾವ ನಾಯಕರಿಗೂ ಆಗಬಾರದು, ಯಾವುದೇ ಪಕ್ಷದಲ್ಲೂ ಆಗಬಾರದು.  ಯಾವುದೇ ಕಾರಣ, ಆರೋಪ ಇಲ್ಲದೆ ಟಿಕೆಟ್ ತಪ್ಪಿಸಿದ್ದಾರೆ. ಇದು ದುರುದ್ದೇಶ. ಶೆಟ್ಟರ್ ಸ್ವಾಭಿಮಾನಿ ರಾಜಕಾರಣಿ. ಸ್ವಾಭಿಮಾನಕ್ಕೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಇವಾಗ ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅವರ ಅಭಿಮಾನಿಗಳ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಇದು ಸಹಿಸಲಾರದ ಅವಮಾನ. ಈ ತರದ ಅನ್ಯಾಯ ಆಗುತ್ತೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುನ್ಸೂಚನೆ ಇಲ್ಲದೆ ಟಿಕೆಟ್ ನೀಡದೆ ಇರುವುದು ಘೋರ ಅವಮಾನ. ಶೆಟ್ಟರ್ ಅವರನ್ನು…

Read More

ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಲೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಅದರ ಭಾಗವಾಗಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ಅವರು, ದರ್ಗಾ ಕೈ ಮುಗಿದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನೂ ಇದೇ ವೇಳೆ ರಿಜ್ವಾನ್ ಹರ್ಷದ್ ಬೆಂಬಲಿಗರಿಂದ ನಿಯಮ ಉಲ್ಲಂಘನೆ ಮಾಡಲಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಮೆರವಣಿಗೆಯಲ್ಲಿ ಭಾಗಿ ಆಗಿರುವುದು ಕಂಡು ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಪುಟ್ಟ ಪುಟ್ಟ ಮಕ್ಕಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ರ್ಯಾಲಿಯಲ್ಲಿ ಮಕ್ಕಳು ಭಾಗಿಯಾಗಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗಿದೆ.

Read More

ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಡಿಕೆ ಬ್ರದರ್ಸ್ ಕಳಂಕ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಂಚಿತ ಪಿ.ಎನ್ ಕೃಷ್ಣಮೂರ್ತಿ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು 5 ವರ್ಷದಲ್ಲಿ ಡಿ.ಕೆ ಸುರೇಶ ನಮ್ಮ ಕ್ಷೇತ್ರಕ್ಕೆ ಬಂದಿಲ್ಲ, ಕ್ಷೇತ್ರದ ಜನರ ಕಷ್ಟ ಸುಖ ಕೇಳೋಕೆ ಯಾರು ಬಂದಿಲ್ಲ, ಕೋವಿಡ್ ಸಂದರ್ಭದಲ್ಲಿ 35 ಸಾವಿರ ಜನರಿಗೆ ಕಿಟ್ ಗಳನ್ನು ನೀಡಿದ್ದೆನೆ. ನೀರಿಗೆ ಪಾಚಿ ವೈರಿ ಇದ್ದ ಹಾಗೆ ಡಿಕೆ ಶಿವಕುಮಾರ್ ಒಕ್ಕಲಿಗ ಜನಾಂಗಕ್ಕೆ ಕಳಂಕ ಎಂದು ಕಿಡಿಕಾರಿದರು. ಇನ್ನೂ ಈ ಬಾರಿ ಟಿಕೆಟ್ ಪಡೆದ ಧನಂಜಯ್ಯ ಅವರು 2 ಲಕ್ಷ ನೀಡಿ ಅರ್ಜಿ ಹಾಕಿದ ತಕ್ಷಣ ಟಿಕೆಟ್ ಕೊಟ್ಟಿದ್ದಾರೆ. ದಾಸರಹಳ್ಳಿ ಜನ ಹೇಳುತ್ತಾರೆ ಟಿಕೆಟ್ ಮಾರಾಟವಾಗಿದೆ ಎಂದು. ಬ್ಲಾಕ್ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್ ಧಮ್ಕಿ ಹಾಕುತ ಇದ್ದಾರೆ ಎಂದು ಆರೋಪಿಸಿದರು. ಇನ್ನೂ ಕ್ಷೇತ್ರದಲ್ಲಿ 2018ರಿಂದ 2023ರ ವರೆಗೂ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕ್ಷೇತ್ರದಲ್ಲಿ ಚುನಾವಣಾ ಸರ್ವೇ ನೀವೇ ಮಾಡಿಸಿದ್ದೀರಾ, ಡೆಲ್ಲಿಯಿಂದ ಮಾಡಿದ್ದಾರೆ, ಆ…

Read More

ಬೆಂಗಳೂರು: ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದ್ದಾರೆ, ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‌ಯಾರು ಟಿಕೆಟ್ ತಪ್ಪಿಸಿದ್ದಾರೆ ಎಂಬುದನ್ನು ನೀವೇ ಯೋಚಿಸಿ. ದೊಡ್ಡ ನಾಯಕರು ಟಿಕೆಟ್ ತಪ್ಪಿಸಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನ ಪರವಾಗಿಯೇ ಇದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಕೂಡ ನನ್ನ ಪರವಾಗಿಯೇ ಇದ್ದಾರೆ. ಆದರೆ ಹಿರಿಯರೊಬ್ಬರು ಟಿಕೆಟ್ ತಪ್ಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯಾವ ನಿರೀಕ್ಷೆ ಇಟ್ಕೊಂಡು ಕಾದು ಕುಳಿತುಕೊಳ್ಳಲಿ. ಆದರೆ ನಾನಿನ್ನೂ ಪಕ್ಷಕ್ಕೆ ರಾಜೀನಾಮೆ ಕೊಟ್ಟಿಲ್ಲ.ರಾಜೀನಾಮೆ ಕೊಟ್ಟರೆ ಪಕ್ಷದ ಕತೆ ಮುಗಿಯುತ್ತೆ ಎಂದರು. ನನಗೆ ಟಿಕೆಟ್ ಸಿಗುವ ವಿಶ್ವಾಸ ಹೋಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಜನರೇ ನನ್ನನ್ನು ಗೆಲ್ಲಿಸ್ತಾರೆ ಎಂದು ಅಖಂಡ ಶ್ರೀನಿವಾಸ್ ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು. ಟಿಕೆಟ್ ಕೈತಪ್ಪಲು ಕಾರಣ ಯಾರು ಎಂದು ನಾನು…

Read More

ಬೆಂಗಳೂರು: ಕಾಂಗ್ರೆಸ್‌ನ (Congress) ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ. ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ (BJP) ಹೋದವರಿಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಮಾಡುವುದು ಕಾಂಗ್ರೆಸ್‌ನ ಸಂಸ್ಕೃತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದರು. ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯಿಸಿದ ಅವರು, ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರು ಒಂದು ಕಾರಣ ಕೊಡಬೇಕು. ಬಿಜೆಪಿ ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಕಂಡಿದೆ. ಇದರಲ್ಲಿ ಎರಡನೇ ಮಾತಿಲ್ಲ. ಕಳೆದ 25 ವರ್ಷದ ಅವರ ಬೆಳವಣಿಗೆಯಲ್ಲಿ ಬಿಜೆಪಿಯೇ ಪ್ರಮುಖವಾದ ಪಾತ್ರವನ್ನು ವಹಿಸಿದೆ. 25 ವರ್ಷ ಅವರನ್ನು ಬೆಳೆಸಿದ ಬಿಜೆಪಿ ಈಗ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಮಾಡಿಲ್ಲ. ಷಡ್ಯಂತ್ರದ ಪ್ರಶ್ನೆಯೇ ಇಲ್ಲ. ಪಕ್ಷದ ವರಿಷ್ಠರಿಗೂ ಕೂಡಾ ಇದರ ಬಗ್ಗೆ ಮಾಹಿತಿಯಿದೆ. ಪ್ರಮುಖ ನಾಯಕರಲ್ಲಿ ಶೆಟ್ಟರ್…

Read More

ದೇವನಹಳ್ಳಿ: ರಾಜ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ.. ಎಲ್ಲಾ ನಾಯಕರು, ಅಧಿಕಾರಿಗಳು ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿದ್ದಾರೆ.. ಆದ್ರೆ ಈ ಐದಾರು ಗ್ರಾಮದ ಜನರು ಕೈಗಾರಿಕಾ ತ್ಯಾಜ್ಯ ನೀರು, ನಗರಸಭೆ ಮಲೀನ ನೀರಿನಿಂದ ಬೇಸತ್ತು ಪರದಾಡುತ್ತಿದ್ದಾರೆ.. ಸಂಬಂಧಿಸಿದ ಅಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಹಲವು ಬಾರಿ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ರೂ ಸರಿಯಾಗದಿರುವುದರಿಂದ ಸರ್ಕಾರಕ್ಕೆ ಮತದಾನದ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.. ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಸುಮಾರು 30 ಕಿ.ಮೀ ದೂರವಿರುವ ಈ ಪ್ರದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡ ತುಮಕೂರು, ಚಿಕ್ಕತುಮಕೂರು, ಜಿಂಕೆ ಬಚ್ಚಳ್ಳಿ ಗ್ರಾಮಗಳು.. ಆದ್ರೆ ಸ್ವಚ್ಚ ವಾಗಿದ್ದ ಗ್ರಾಮಗಳ ಕೆರೆಗಳಿಗೆ ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ತ್ಯಾಜ್ಯ ನೀರು ಹಾಗೂ ದೊಡ್ಡಬಳ್ಳಾಪುರ ನಗರ ಸಭೆಯ ಕಲುಷಿತ ನೀರನ್ನು ಶುದ್ದಿಕರಿಸದೇ ಈ ಬಾಗದ ಕೆರೆಗಳಿಗೆ ಬಿಡುತ್ತಿದ್ದಾರೆ.. ಒಂದು ಕಡೆ ಕೈಗಾರಿಕೆಗಳು ಆರಂಭಗೊಂಡು ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಅಂತ ಸರ್ಕಾರ ಮುಂದಾದ್ರೆ ಮತ್ತೊಂದು ಕಡೆ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಯಲು ಬಿಟ್ಟು, ಅಂತರ್ಜಾಲ ಸೇರಿ ಕಲುಷಿತಗೊಳ್ಳುತ್ತಿವೆ..…

Read More

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಕ್ಷೇತ್ರದ ಮತ್ತು ನಾಡಿನ ಜನರ ಒಳಿತಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಸಚಿವರ ಮಲ್ಲೇಶ್ವರದ ನಿವಾಸದಲ್ಲಿ ವಿಶೇಷ ಹೋಮ ನೆರವೇರಿತು. ಸಚಿವರು ಬೆಳಗ್ಗೆ ತಮ್ಮ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರ ಜೊತೆಯಲ್ಲಿ ಬಾಲಾಂಜನೇಯ ದೇವಸ್ಥಾನ, ಕಾಡು ಮಲ್ಲೇಶ್ವರ ದೇಗುಲ, ಗಂಗಮ್ಮನ ದೇವಸ್ಥಾನ, ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ, ಶೇಷಾದ್ರಿಪುರಂನ ಶ್ರೀ ಕೋಡಿ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನಗಳಿಗೆ ಭೇಟಿ ಕೊಟ್ಟರು.ಈ ಸಂದರ್ಭದಲ್ಲಿ ದೇಗುಲಗಳ ಅರ್ಚಕರು ಸಚಿವರಿಗೆ ಶಾಲು ಮತ್ತು ದೇವರ ಪ್ರಸಾದ, ಫಲ ತಾಂಬೂಲ ನೀಡಿ, ಸತ್ಕರಿಸಿದರು.

Read More