ಶಿವಮೊಗ್ಗ: ಶಿವಶರಣರ ನಾಡು, ಹಲವು ಐತಿಹಾಸಿಕ ತಾಣಗಳ ಬೀಡು ಶಿಕಾರಿಪುರ ರಾಜ್ಯ ರಾಜಕೀಯದಲ್ಲಿ ಪ್ರತಿಷ್ಠಿತ ಕ್ಷೇತ್ರವೆನಿಸಿಕೊಂಡಿದೆ. ಪಕ್ಕದ ಸೊರಬ ಕ್ಷೇತ್ರ ಮಾಜಿ ಸಿಎಂ ಎಸ್.ಬಂಗಾರಪ್ಪ ಕುಟುಂಬದ ಹಿಡಿತದಲ್ಲೆಉಳಿದಿರುವಂತೆ ಶಿಕಾರಿಪುರ ಸಹ 40 ವರ್ಷಗಳಲ್ಲಿಒಮ್ಮೆ ಹೊರತಾಗಿ ನಿರಂತರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ಹಿಡಿತದಲ್ಲೇ ಉಳಿದಿದೆ. ರಾಜ್ಯದಲ್ಲಿಅತಿಹೆಚ್ಚು ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕ್ಷೇತ್ರದ ಮತದಾರರು ಯಡಿಯೂರಪ್ಪರಿಗೆ ನೀಡಿದರು. ಒಂದು ಕಾಲದಲ್ಲಿ ರಾಜ್ಯದ ಭತ್ತದ ಕಣಜ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅತ್ಯುತ್ತಮ ಗುಣಮಟ್ಟದ ಭತ್ತ ಬೆಳೆಯುತ್ತಿದ್ದ ಕಾರಣ ಶಿಕಾರಿಪುರದ ಅಕ್ಕಿಗೆ ರಾಜ್ಯದೆಲ್ಲೆಡೆ ಭಾರಿ ಬೇಡಿಕೆ ಇತ್ತು. ಆದರೆ, ರೈತರು ಬೆಲೆಯ ಕಾರಣಕ್ಕೆ ಅಡಕೆ ಬೆನ್ನತ್ತಿ ಹೋಗಿದ್ದರಿಂದ ಹಚ್ಚ ಹಸಿರಾಗಿ ಕಾಣುತ್ತಿದ್ದ ಗದ್ದೆ ಬಯಲನ್ನು ಅಲ್ಲಲ್ಲಿಅಡಕೆ ತೋಟಗಳು ಆವರಿಸಿಕೊಂಡಿವೆ. ಮೆಕ್ಕೆಜೋಳ ಮತ್ತು ಶುಂಠಿ ಬೆಳೆ ಸಹ ಅಧಿಕವಾಗಿದೆ. ಕ್ಷೇತ್ರ ವ್ಯಾಪ್ತಿ- ಹೆಗ್ಗಳಿಕೆ ಕ್ಷೇತ್ರದ ವ್ಯಾಪ್ತಿ ಶಿಕಾರಿಪುರ ತಾಲೂಕಿಗಷ್ಟೆ ಸೀಮಿತಗೊಂಡಿದೆ. ಕ್ಷೇತ್ರದಲ್ಲಿ ವೀರಶೈವರು ಅಧಿಕ ಸಂಖ್ಯೆಯಲ್ಲಿದ್ದಾರೆ. ಬಂಜಾರ, ವಾಲ್ಮೀಕಿ, ಕುರುಬರು, ಅಲ್ಪಸಂಖ್ಯಾತರು ಆನಂತರದ ಸ್ಥಾನದಲ್ಲಿಇದ್ದಾರೆ. ಸಾಗರ ಮತ್ತು ಸೊರಬ…
Author: Prajatv Kannada
ತುಮಕೂರು ಜಿಲ್ಲೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡ್ತಿದ್ದಾರೆ..ದಿನಕ್ಕೊಬ್ಬರಂತೆ ಆಕಾಂಕ್ಷಿತರು ಬಂಡಾಯದ ಬಾವುಟ ಹಾರಿಸುತ್ತಿದ್ದು,ಕುಣಿಗಲ್,ಗುಬ್ಬಿ,ತುಮಕೂರು ನಗರದ ಬಿಜೆಪಿ ಅಭ್ಯರ್ಥಿಗಳಿಗೆ ತಲೆಬಿಸಿಯಾಗಿದೆ..ಬಿಜೆಪಿಯ ಬಂಡಾಯವನ್ನ ಜೆಡಿಎಸ್ ಪಕ್ಷ ತಮ್ಮತ್ತ ಸೆಳೆದುಕೊಳ್ಳೋ ಮೂಲಕ ರಾಜಕೀಯ ಚದುರಂಗದಾಟಕ್ಕೆ ಮುಂದಾಗಿದೆ.. ಬಿಜೆಪಿ ಅಭ್ಯರ್ಥಿಗಳ ಘೋಷಣೆ ದಿನದಿಂದಲೂ ತುಮಕೂರು ಜಿಲ್ಲೆಯಲ್ಲಿ ಟಿಕೆಟ್ ಆಕಾಂಕ್ಷಿತರು ಬಿಜೆಪಿಗೆ ಬಂಡಾಯದ ಶಾಕ್ ನೀಡ್ತಿದ್ದಾರೆ..ತುಮಕೂರು ನಗರದ ಸೊಗಡು ಶಿವಣ್ಣ, ಕುಣಿಗಲ್ ನ ರಾಜೇಶ್ ಗೌಡ,ಮುದ್ದಹನುಮೇಗೌಡ,ಗುಬ್ಬಿಯ ಬೆಟ್ಟಸ್ವಾಮಿ ಹೀಗೆ ಸಾಲು ಸಾಲು ಹಿರಿಯ ನಾಯಕರು ಬಿಜೆಪಿಗೆ ಗುಡ್ ಬೈ ಹೇಳಿ ಚುನಾವಣಾ ರಣಕಣದಲ್ಲಿ ತೊಡೆತಟ್ಟುತ್ತಿದ್ದಾರೆ.. ಕುಣಿಗಲ್ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಪ್ರಭಲ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜೇಶ್ ಗೌಡ ಕೂಡ ಇಂದು ಬಂಡಾಯದ ಸಮರ ಸಾರಿದ್ದಾರೆ..ಕುಣಿಗಲ್ ನಲ್ಲಿ ನೂತನ ಕಚೇರಿ ತೆರದಿರೋ ರಾಜೇಶ್ ಗೌಡ,ತಮ್ಮ ಅಪಾರ ಬೆಂಬಲಿಗರ ಸಭೆ ನಡೆಸಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಾಗಿ ಘೋಷಿಸಿದ್ದಾರೆ..ಕಾಣದ ಕೈಗಳು ಹಾಗೂ ಪಕ್ಷದ ನಾಯಕರಿಂದ ಮೋಸವಾಗಿದ್ದು,19 ರಂದು ತಮ್ಮ ನಾಮಪತ್ರ ಸಲ್ಲಿಸೋದಾಗಿ ತಿಳಿಸಿದ್ದಾರೆ… ಇನ್ನೂ ಗುಬ್ಬಿ ಬಿಜೆಪಿ…
ಬೆಂಗಳೂರು : ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಬೆನ್ನಲ್ಲೆ ಸಚಿವ ಗೋವಿಂದ ಎಂ ಕಾರಜೋಳ ಮಾತನಾಡಿ, ರಾಜಕೀಯ ನಾಯಕರು ಅವಸರದ ನಿರ್ಧಾರ ಕೈಗೊಳ್ಳಬಾರದು ಎಂದು ಪ್ರತಿಕ್ರಿಯಿಸಿದ್ದಾರೆ. ವಿಧಾನ ಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚನೆ ಗೊಳಲಾದ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ ವಿಚಾರ ಭಾರೀ ಸಂಚಲನ ಸೃಷ್ಟಿಸಿದೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ರಾಯಚೂರು ನಗರದಲ್ಲಿ ಸಚಿವ ಗೋವಿಂದ ಎಂ ಕಾರಜೋಳ ಮಾತನಾಡಿ, ಆತುರದ ನಿರ್ಧಾರದಿಂದ ನಮ್ಮ ಮೂಗನ್ನು ನಾವೇ ಕುಯ್ದುಕೊಂಡಂತೆ, ನೆಲೆ ಇಲ್ಲದ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಹುಡುಕುತ್ತಿದೆ. ಹೀಗಾಗಿ ಬಿಜೆಪಿ ಟಿಕೆಟ್ ವಂಚಿತರ ಕೈ ಕಾಲು ಹಿಡಿದು ಅಭ್ಯರ್ಥಿಗಳನ್ನು ಕರೆದೊಯ್ಯುತ್ತಿದ್ದಾರೆ. ಅವಸರದ ನಿರ್ಧಾರ ಯಾವ ನಾಯಕರು ಮಾಡುವುದು ಬೇಡ. ಹೊಸಬರನ್ನ ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎನ್ನುವ ಮೂಲಕ ರಾಜೀನಾಮೆ ತೆಗೆದುಕೊಂಡ ನಾಯಕರಿಗೆ ಸಚಿವ ಗೋವಿಂದ ಎಂ ಕಾರಜೋಳ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು: ಟಿಕೆಟ್ ನೀಡುವುದಾಗಿ ಬಿಜೆಪಿ ಸಬೂಬು ಹೇಳುತ್ತಲೇ ಬಂದಿದ್ದು, ಅದಕ್ಕೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ ಎಂದು ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಬಸವನಗುಡಿಯಲ್ಲಿ ಮಾತನಾಡಿದ ಅವರು, ನಾನು ಬಸವನಗುಡಿ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಸೀನಿಯರ್ ಇದ್ದೇನೆ. ಈ ಹಿಂದೆ ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದೆ. ಪ್ರತಿ ಬಾರಿಯೂ ಕೇಳುತ್ತಲೇ ಇದ್ದೇನೆ ಅವರು ಸಬೂಬು ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ ಯಾಕೋ ಪಕ್ಷ ನನಗೆ ಮಣೆ ಹಾಕಿಲ್ಲ. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ಬ್ಯಾಟರಾಯನಪುರ ಕ್ಷೇತ್ರದ ಬಳಿಕ ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಬಹಳ ವರ್ಷಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಈ ಬಾರಿ ಟಿಕೆಟ್ ಸೀಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಪಕ್ಷ ಬಿಜೆಪಿಯ ರವಿ ಸುಬ್ರಮಣ್ಯ ಎಂಬುವವರಿಗೆ ಟಿಕೆಟ್ ನೀಡಿದೆ. ಇದರಿಂದ ಬಂಡಾಯ ಎದ್ದಿರುವ…
ಬೆಂಗಳೂರು: ವಿಫಲತೆ ಹಾಗೂ ಸಫಲತೆ ಇವೆರಡೂ ಜೀವನದ ಅವಿಭಾಜ್ಯ ಅಂಗ. ಮನುಷ್ಯನ ವಿಫಲತೆಗಳೇ ಗೆಲುವಿನ ಮೆಟ್ಟಿಲಾಗುವುದು. ವಿಭಿನ್ನ ಚಿಂತನೆ ಮತ್ತು ಸದೃಡ ಮನೋಕಾಮನೆ ಜೊತೆ ನಿರಂತರ ಪ್ರಯತ್ನ ಇದ್ದರೆ ಯಶಸ್ಸು ನಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹೇಳಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೧-೨೨ ಹಾಗೂ ೨೦೨೨-೨೩ನೆಯ ಸಾಲಿನ ʻಕನ್ನಡ ಪ್ರವೇಶ, ಕಾವ, ಜಾಣ, ರತ್ನ ಹಾಗೂ ಶಾಸನಶಾಸ್ತ್ರ ಡಿಪ್ಲೋಮಾʼ ಉತ್ತಮ ಸಾಧನೆ ಮಾಡಿದವರಿಗೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಪಿಎಚ್ಡಿ ಪದವಿ ಪಡೆದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭೆ ಎನ್ನುವುದು ಪ್ರತಿಯೊಬ್ಬರಲ್ಲಿ ಇದ್ದೇ ಇರುತ್ತದೆ. ವಾಸ್ತವದಲ್ಲಿ ಸುಪ್ತವಾಗಿದ್ದ ಪ್ರತಿಭೆಯನ್ನು ಪ್ರಯತ್ನ ಎನ್ನುವ ಒರೆಗೆ ಹಚ್ಚುವ ಮೂಲಕ ಜಗತ್ತಿಗೆ ತೋರಿಸ ಬೇಕಾಗಿದೆ, ಚಿನ್ನ ಭೂಗರ್ಭದಲ್ಲಿ ಇದ್ದರೆ,…
ಬೆಂಗಳೂರು : ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಎಂದು ಸಚಿವ ಆರ್. ಅಶೋಕ್ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ನಡೆದ ಕನಕಪುರ ಬಿಜೆಪಿ ಮುಖಂಡರ ಸಭೆಯಲ್ಲಿ ಸಚಿವ ಆರ್. ಅಶೋಕ ಡಿಕೆ ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದರು. ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ಎಂದು ಸಚಿವ ಆರ್. ಅಶೋಕ್ ಸಿನಿಮಾ ಡೈಲಾಗ್ ಹೊಡೆಯುವ ಮೂಲಕ ಡಿಕೆಶಿಗೆ ಟಾಂಗ್ ನೀಡಿದ್ದಾರೆ.
ತುಮಕೂರು: ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರಿನ (Tumakuru) ನಗರ ವೃತ್ತದಲ್ಲಿ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ (Protest) ನಡೆಸಿದ್ದಾರೆ. ಜೆಡಿಎಸ್ (JDS) ಅಭ್ಯರ್ಥಿ ಗೋವಿಂದರಾಜು ವಿರುದ್ಧ ಸಾವಿರಾರು ಮಹಿಳೆಯರು ಕ್ರಮಕ್ಕೆ ಆಗ್ರಹಿಸಿದ್ದಾರೆ. ಗೋವಿಂದರಾಜು ಅವರನ್ನ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಅವರಿಗೆ ʻಬಿʼ ಫಾರಂ ಕೊಡದೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇಂಥಹ ವ್ತಕ್ತಿತ್ವ ಉಳ್ಳವರು ಶಾಸಕರಾದರೆ ಕ್ಷೇತ್ರದ ಮಹಿಳೆಯರು ಹಗಲು ಹೊತ್ತಿನಲ್ಲಿ ಭಯದಿಂದ ಓಡಾಡುವ ವಾತಾವರಣ ಸೃಷ್ಟಿಯಾಗುತ್ತದೆ ಅಸಮಾಧಾನ ಹೊರಹಾಕಿದ್ದಾರೆ. ಮಹಿಳೆಯೊಬ್ಬರನ್ನ ಪ್ರಚಾರಕ್ಕೆ ಕರೆಯುವ ನೆಪದಲ್ಲಿ ಗೋವಿಂದರಾಜು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೇ ಇವರ 8 ಪೋಲಿ ಆಡಿಯೋಗಳು ಬಿಡುಗಡೆಯಾಗಿದ್ದು, ಜನಪ್ರತಿನಿಧಿಯಾಗಲು ಹೊರಟವರ ಬಣ್ಣ ಬಯಲಾಗಿದೆ. ಈ ಕೂಡಲೇ ಗೋವಿಂದರಾಜು ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.
ಬೆಂಗಳೂರು: ನೀವು ನೌಕರಿ ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. ದಿನಾಂಕ- 16-04-2023 ರಂದು ಮಧ್ಯಾಹ್ನ 12 ಗಂಟೆಯಿಂದ ದ 2 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: #616, ಜಿಎಮ್ ಆಸ್ಪತ್ರೆಯ ಹತ್ತಿರ, ವಿನಾಯಕ ಲೇಔಟ್, ನಾಗರಬಾವಿ, ಬೆಂಗಳೂರು – 72, ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರಿಗೆ ಸಂಪರ್ಕಿಸಬಹುದಾಗಿದೆ. 9740626853 ಜೊತೆಗೆ ನಿಮ್ಮ…
ಮೈಸೂರು: ವರುಣಾದಲ್ಲಿ (Varuna) 15 ವರ್ಷಗಳ ಅಪ್ಪ ಮಗನ ದರ್ಬಾರ್‌ಗೆ ಅಂತ್ಯ ಕಾಲ ಬಂದಿದೆ. ಬಿಜೆಪಿ (BJP) ಅಭ್ಯರ್ಥಿ ಸೋಮಣ್ಣನವರಿಗೆ (V.Somanna) ಒಳ್ಳೆಯ ಅಭಿಪ್ರಾಯವಿದೆ. ಹಳೆ ಮೈಸೂರು ಭಾಗದಲ್ಲಿ 8ರಿಂದ 10 ಸ್ಥಾನ ಬಿಜೆಪಿಗೆ ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ (Prathap Simha) ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ (Mysuru) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬರಲು ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಕೈಜೋಡಿಸುತ್ತಿದೆ. ಪಿಎಫ್‌ಐ (PFI), ಕೆಎಫ್‌ಡಿ (KFD) ಹಾಗೂ ಎಸ್‌ಡಿಪಿಐ (SDPI) ಸಂಘಟನೆಯ ಕಾರ್ಯಕರ್ತರು ಸಿದ್ದರಾಮಯ್ಯನವರಿಗೆ ದತ್ತು ಮಕ್ಕಳಿದ್ದಂತೆ. ಪಿಎಫ್‌ಐ ಮತ್ತು ಕೆಎಫ್‌ಡಿಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (D.K.Shivakumar) ಅವರು ಕರ್ನಾಟಕದಲ್ಲಿ ತಾಲಿಬಾನ್ (Taliban) ಸರ್ಕಾರ ತರಲು ಹೊರಟಿದ್ದಾರೆ. ಸಮಾಜಘಾತುಕ ಸಂಘಟನೆಯ ಬೆಂಬಲದೊಂದಿಗೆ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದರು. ಎಸ್‌ಡಿಪಿಐನವರು ಕಾಂಗ್ರೆಸ್‌ಗೆ ಬೆಂಬಲ ಕೊಡಬೇಕು ಎಂದು ಜಿ.ಪರಮೇಶ್ವರ್ (G.Parameshwar) ಕರೆ ಕೊಟ್ಟಿದ್ದಾರೆ. ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳು…
ಹುಬ್ಬಳ್ಳಿ: ಸುಮಾರು 30 ನಿಮಿಷಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ ಪ್ರಲ್ಹಾದ್ ಜೋಶಿ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷಕ್ಕೆ ಅವರ ಸೇವೆಯ ಅಗತ್ಯವಿದೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಜಗದೀಶ್ ಶೆಟ್ಟರ್ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಹಾಲಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಬಿಜೆಪಿ ಬಿಡುವ ಮಾತೇ ಇಲ್ಲ…