ಬೆಂಗಳೂರು: ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ಮಾತನಾಡಿ ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಇನ್ನು ಒಟ್ಟಾರೆ 35% ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಆಡಳಿತ ಪಕ್ಷದವರು ಇತರರಿಗೆ ಮಾದರಿ ಆಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು. ಬಿಜೆಪಿ ವಿರುದ್ಧ ಹರಿಹಾಯ್ದ ರಮೇಶ್ ಬಾಬು ಬಿಜೆಪಿ ವಿರುದ್ಧ ಹರಿಹಾಯ್ದ ಇವರು, ಆಡಳಿತ ಬಿಜೆಪಿ ಪಕ್ಷ ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್ ಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಸೈಲೆಂಟ್ ಸುನೀಲ್ ಹಾಗೂ ಫೈಟರ್ ರವಿ ಅವರ ಪಕ್ಷ ಸೇರ್ಪಡೆ ವಿಚಾರವಾಗಿ ಸಾಕಷ್ಟು ಸುದ್ದಿ ಆಗಿದೆ ಆದ್ರೂ ಏನೂ ಕ್ರಮ ಕೈಗೊಳ್ಳದೆ ಸುಮ್ಮನಿರುವುದು ಖಂಡನೀಯ ಎಂದಿದ್ದಾರೆ. ಚುನಾವಣೆ ಹಿನ್ನಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕ್ರಿಮಿನಲ್ ಗಳ ಪ್ರಕರಣ ತೆರವು ಮಾಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಕಿಡಿ ಕಾರಿದರು. ಸುಪ್ರೀಂಕೋರ್ಟ್…
Author: Prajatv Kannada
ಬೆಂಗಳೂರು: ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಮುದ್ವೇಷ ಭಾಷಣ ಆರೋಪದಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮನೋಜ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಸಚಿವ ಮುನಿರತ್ನ ಹೇಳಿಕೆ ನೀಡಿದ್ದರು. ಕೋಮುದ್ವೇಷ ಪ್ರಚೋದಿತ ಭಾಷಣದ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್‌ರಿಂದ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಮತ್ತೊಂದೆಡೆ ಸಂಸದ ಡಿಕೆ ಸುರೇಶ್, ಮಾ.19 ರಂದು ಸಚಿವ ಮುನಿರತ್ನ ಭಾಷಣದ ವೇಳೆ ಪ್ರಚೋದನೆಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪ ಮಾಡಿದ್ದರು.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಏ.6 ರಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಪ್ರಧಾನಿ ಮೋದಿ ಅವರು ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಗುರುವಾರದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ರಸ್ತೆಗಳು ದುರಸ್ಥಿ ಕಾರ್ಯ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಬಂಡೀಪುರವನ್ನು ತಲುಪುವ ಮಾರ್ಗದ ರಸ್ತೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಜತೆಗೆ ಸಪಾರಿ ಮಾರ್ಗದಲ್ಲಿಯೂ ಅಗತ್ಯ ಅನುಕೂಲ ಕಲ್ಪಿಸಲು ಅರಣ್ಯ…
ಬೆಂಗಳೂರು: ಬೇಸಿಗೆ ಆರಂಭದ ಬೆನ್ನಲ್ಲೇ ರಾಜಧಾನಿಯಲ್ಲಿ ಜೀವಜಲಕ್ಕೆ ಬೇಡಿಕೆ ಹೆಚ್ಚಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನಗರವಾಸಿಗಳ ನೀರಿನ ದಾಹ ತಣಿಸಲು ಸಮರೋಪಾದಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರು ದೇಶದಲ್ಲಿ 3ನೇ ಅತಿ ದೊಡ್ಡ ನಗರ ಮತ್ತು 5ನೇ ದೊಡ್ಡ ಮೆಟ್ರೋಪಾಲಿಟನ್ ಪ್ರದೇಶ. ಶೈಕ್ಷಣಿಕ ಕೇಂದ್ರವಾಗಿ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ನೆಲೆಯಾಗಿ ಅನೇಕ ಬಹುರಾಷ್ಟ್ರೀಯ ಕಂಪನಿಗಳ ತವರಾಗಿರುವ ಬೆಂಗಳೂರು ಹೆಚ್ಚು ಜನರನ್ನು ಸೆಳೆಯುತ್ತಿದೆ. ನಗರವು ಕಳೆದೆರಡು ದಶಕಗಳಿಂದ ರಾಕೆಟ್ ವೇಗದಲ್ಲಿ ಬೆಳೆಯುತ್ತಿದೆ. ಇದರಿಂದಾಗಿ ನಗರದ ಹೊರವಲಯವು ಯೋಜಿತವಲ್ಲದ ರೀತಿಯಲ್ಲಿ ಬೆಳೆದು ಜನಸಂಖ್ಯೆ ಹೆಚ್ಚಳವಾಗಿದೆ. ಜನಸಂಖ್ಯೆ ಕೋಟಿಯ ಗಡಿ ದಾಟಿದೆ. ಜತೆಗೆ ಪ್ರತಿನಿತ್ಯ ನಗರಕ್ಕೆ ಬಂದು ಹೋಗುವ ಜನರ ಸಂಖ್ಯೆ ಸುಮಾರು 25 ಲಕ್ಷದಷ್ಟಿದೆ. ನಿರ್ಮಾಣ ಕಾಮಗಾರಿಗಳು ದುಪ್ಪಟ್ಟಾಗಿವೆ. ನಗರದ ಅತಿ ವೇಗದ ಬೆಳವಣಿಗೆಯು ಮೂಲಸೌಕರ್ಯ ವಲಯಕ್ಕೆ ವಿಶೇಷವಾಗಿ ನೀರು ಸರಬರಾಜು ವ್ಯವಸ್ಥೆ ಮೇಲೆ ಅಗಾಧ ಒತ್ತಡ ಹಾಕುತ್ತಿದೆ. ಬಿಬಿಎಂಪಿಯ ಒಟ್ಟಾರೆ 800 ಚದರ ಕಿ.ಮೀ. ಪ್ರದೇಶವು ಜಲಮಂಡಳಿ ವ್ಯಾಪ್ತಿಗೆ…
ಬೆಂಗಳೂರು: ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಮಲ್ಲಿಗೆಯ ಕಂಪಿನೊಂದಿಗೆ ಗುರುವಾರ ಮಧ್ಯರಾತ್ರಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಶಕ್ತ್ಯೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಇತಿಹಾಸ ಪ್ರಸಿದ್ಧ ಕರಗದ ವೈಭವವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬರಲಿದೆ. ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ರಸ್ತೆಗಳು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ. ಭದ್ರತೆ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಗರದ ಆಯ್ದ ರಸ್ತೆಗಳಲ್ಲಿ ಕರಗದ ಮೆರವಣಿಗೆ ಸಾಗಲಿದ್ದು, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ನೆರೆ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ. ಕರಗ ಉತ್ಸವದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಪುರಾಣ ಕಥನ ಹಾಗೂ ಪೊಂಗಲ್ ಸೇವೆ ವಿಶೇಷವಾಗಿ ನಡೆಯಿತು. ಎಂದಿನಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧೆ, ಭಕ್ತಿಯಿಂದ ನಡೆದವು. ಏ.6ರ ಮಧ್ಯರಾತ್ರಿ ಕರಗ ಶಕ್ತ್ಯೋತ್ಸವವು ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿಯೂ ಕರಗ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಶತಾಯ ಗತಾಯವಾಗಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿ (BJP Karnataka) ರಾಜಕೀಯ ತಂತ್ರಗಾರಿಕೆ ನಡೆಸುತ್ತಿದೆ. ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಿಜಯ ಸಂಕಲ್ಪ ಯಾತ್ರೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಂತಹ ಘಟಾನುಘಟಿ ನಾಯಕರ ಮೂಲಕ ಅಬ್ಬರದ ಪ್ರಚಾರ ನಡೆಸುತ್ತಿದೆ. ಇದೀಗ ಸ್ಯಾಂಡಲ್ವುಡ್ಗೆ ಕೈಹಾಕಿದ ಬಿಜೆಪಿ, ನಟ ಕಿಚ್ಚ ಸುದೀಪ್ (Kichcha Sudeep) ಅವರನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸುದೀಪ್ ಅವರು ಬಿಜೆಪಿಗೆ ಸೇರದೆ ಪಕ್ಷದ ಪರ ಮಾತ್ರ ಪ್ರಚಾರಕ್ಕೆ ಧುಮುಕಲಿದ್ದಾರೆ. ಇದರಿಂದಾಗಿ ಕಾಂಗ್ರೆಸ್ಗೆ ಭೀತಿ ಶುರುವಾಗಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಡ್ಯಾಮೇಜ್ ಆಗುವ ಸಾಧ್ಯತೆ ಇದೆ. ಚುನಾವಣಾ ವರ್ಷದಲ್ಲಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಸ್ಟಿ ಸಮುದಾಯವನ್ನು ಸೆಳೆದಿದ್ದ ಬಿಜೆಪಿ, ಇದೀಗ ಅದೇ ಸಮುದಾಯಕ್ಕೆ ಸೇರಿದ ನಟ ಕಿಚ್ಚ ಸುದೀಪ್ ಅವರನ್ನು ತಮ್ಮ ಪಕ್ಷದ ಪರ ಪ್ರಚಾರಕ್ಕೆ ಬಳಸುತ್ತಿದ್ದಾರೆ. ನಟ…
ಬೆಂಗಳೂರು: ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಬೆಂಗಳೂರಿನ ಆರ್ಟಿ ನಗರದಲ್ಲಿ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿದರು. ಈ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 231 ಕುಕ್ಕರ್ಗಳ ಜಪ್ತಿ ಮಾಡಿದ್ದಾರೆ. ಇವುಗಳನ್ನು ಮತದಾರರಿಗೆ ಹಂಚುವುದಕ್ಕಾಗಿ ಖಾಲಿ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಪೈಕಿ ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭಾವಚಿತ್ರವಿರುವ 60 ಕುಕ್ಕರ್ಗಳನ್ನೂ ಜಪ್ತಿ ಮಾಡಲಾಗಿದೆ. ಇನ್ನೂ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದು, ನಗದು ಹಾಗೂ ಉಡುಗೊರೆಗಳ ಹಂಚಿಕೆ ಜೋರಾಗಿದೆ. ಈ ಮಧ್ಯೆ, ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ ಚುನಾವಣಾ ಅಧಿಕಾರಿಗಳು, ಪೊಲೀಸರು 69.36 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು: ನಟ ಕಿಚ್ಚ ಸುದೀಪ್ (Sudeep) ಬಿಜೆಪಿಗೆ (BJP) ಬೆಂಬಲ ನೀಡುತ್ತಿರುವ ವಿಚಾರವನ್ನು ಸ್ವಾಗತಿಸುತ್ತೇನೆ. ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ (Congress) ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಟಾಂಗ್ ನೀಡಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೇರವೇರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿರುವ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಈ ವಿಚಾರವನ್ನು ಸಹಿಸೋಕಾಗದೇ ಕಾಂಗ್ರೆಸ್‌ನವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ವಿ ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಬಿಎಸ್‌ವೈ, ಹೈಕಮಾಂಡ್ ಏನು ಹೇಳುತ್ತೋ ಅದರಂತೆಯೇ ನಡೆಯುತ್ತೆ. ಶುಕ್ರವಾರ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು. ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುದೀಪ್,…
ನವದೆಹಲಿ: 2023 ರ ಕರ್ನಾಟಕ ವಿದಾನಸಭಾ ಚುನಾವಣೆ (Karnataka Vidhanasabha Election 2023) ಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ. ತಮ್ಮ ಆಪ್ತರ ಪರವಾಗಿ ಪಟ್ಟು ಹಿಡಿದಿದ್ದ ಎರಡು ಕ್ಷೇತ್ರದಲ್ಲಿ ಡಿಕೆಶಿಗೆ ತೀವ್ರ ಹಿನ್ನಡೆಯಾಗಿದೆ. ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಪರ ಡಿಕೆಶಿ ಪಟ್ಟು ಹಿಡಿದಿದ್ದರು. ಇತ್ತ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಕಲಘಟಗಿಯಲ್ಲಿ ನಾಗರಾಜ್ ಚಬ್ಬಿಗೆ ಟಿಕೆಟ್ ಕೊಡಲು ಡಿಕೆಶಿ ಪಟ್ಟು ಹಿಡಿದಿದ್ದರು. ಸಂತೋಷ ಲಾಡ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಬೇಲೂರಿನಲ್ಲಿ ಡಿಕೆಶಿ ಕೈ ಮೇಲು, ರುದ್ರೇಶ್ ಗೌಡ ಕುಟುಂಬ, ಹಾಗೂ ಸಿದ್ದರಾಮಯ್ಯ ಬಣ ಎರಡಕ್ಕೂ ಸಡ್ಡು ಹೊಡೆದು ತಮ್ಮ ಆಪ್ತ ಮಾಜಿ ಸಚಿವ ಗಂಡಸಿ ಶಿವರಾಂ ಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೇಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ…
ಗುವಾಹಟಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೈರ್ಬುಯ 2023ರ ಆವೃತ್ತಿಯಲ್ಲಿನ ಆರಂಭಿಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದ ರಾಜಸ್ಥಾನ ರಾಯಲ್ಸ್ ಆತ್ಮವಿಶ್ವಾಸದ ಅಲೆಯಲ್ಲಿದೆ. ಇದೀಗ ತನ್ನ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧವೂ ಅಂಥದ್ದೇ ಅಧಿಕಾರಯುತ ಗೆಲುವನ್ನು ಪಿಂಕ್ ಫ್ರಾಂಚೈಸಿ ಎದುರು ನೋಡುತ್ತಿದೆ. ಈ ಹೈ-ವೋಲ್ಟೇಜ್ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ (ಏಪ್ರಿಲ್ 5) ನಡೆಯಲಿದೆ. ಅಂದಹಾಗೆ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2023 ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ತನ್ನ ಮೊದಲ ಪಂದ್ಯದಲ್ಲಿ ಜಿದ್ದಾ ಜಿದ್ದಿನ ಪೈಪೋಟಿ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಎದುರು ಮಳೆ-ಬಾಧಿತ ಹಣಾಹಣಿಯಲ್ಲಿ ಡಕ್ವರ್ತ್-ಲೂಯಿಸ್ ನಿಯಮದನ್ವಯ 7 ರನ್‌ಗಳ ರೋಚಕ ಜಯ ದಕ್ಕಿಸಿಕೊಂಡಿತ್ತು. ಕಳೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್‌ಗಳು 203 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸುವ ಮೂಲಕ ಶ್ರೇಷ್ಠ ಲಯದಲ್ಲಿರುವ ಸಂದೇಶ ರವಾನಿಸಿದ್ದಾರೆ. ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ ಸ್ಪೋಟಕ ಅರ್ಧಶತಕ ಬಾರಿಸಿ…