ನವದೆಹಲಿ: ಬಿಗ್ ಬಾಸ್ ಮಾಜಿ ಸ್ಪರ್ಧಿ, ಫ್ಯಾಷನ್ ತಾರೆ ಉರ್ಫಿ ಜಾವೇದ್ (Urfi Javed) ತನ್ನ ವಿಭಿನ್ನ ಉಡುಗೆಗಳಿಂದಲೇ ಫೇಮಸ್ ಆಗಿದ್ದಾರೆ. ಅದೇ ರೀತಿ ದೆಹಲಿಯಲ್ಲಿ ಯುವತಿಯೊಬ್ಬಳು ಬಿಕಿನಿ (Bikini) ತೊಟ್ಟು ದೆಹಲಿ ಮೆಟ್ರೋದಲ್ಲಿ ಸಂಚರಿಸಿರುವುದು ಕಂಡುಬಂದಿದೆ. ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾದ ಸುಮಾರು 9 ಸೆಕೆಂಡುಗಳ ವೀಡಿಯೋದಲ್ಲಿ, ಯುವತಿ ಬಿಕಿನಿ ಧರಿಸಿ ಸಂಚರಿಸಿರುವುದು ಕಂಡುಬಂದಿದೆ. ಯುವತಿ ದೆಹಲಿ ಮೆಟ್ರೋದಲ್ಲಿ (Delhi Metro Girl) ಸಂಚರಿಸುತ್ತಿದ್ದ ವೇಳೆ ತೊಡೆಯ ಮೇಲೆ ಬ್ಯಾಗ್ ಇಟ್ಟುಕೊಂಡು ಕುಳಿತಿದ್ದಳು. ಆಕೆ ಎದ್ದು ನಿಂತಾಗ ಬಿಕಿನಿ ತೊಟ್ಟಿರುವುದು ಕಂಡಿದೆ. ತಕ್ಷಣವೇ ಚಾಲಾಕಿಯೊಬ್ಬ ವೀಡಿಯೋ ಸೆರೆಹಿಡಿದು ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ನೆಟ್ಟಿಗರಿಂದ ಫುಲ್ ಕ್ಲಾಸ್: ದೆಹಲಿ ಯುವತಿಯ ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದಂತೆ ನೆಟ್ಟಿಗರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲವರು ಇದು ಪ್ರಜಾಪ್ರಭುತ್ವ, ಸ್ವಾತಂತ್ರ್ಯದ ಹಕ್ಕು ಎಂದು ಆಕೆಯನ್ನು ಬೆಂಬಲಿಸಿದರೆ ಉಳಿದವರು ಆಕೆಯ ನಡವಳಿಕೆಯನ್ನು ಖಂಡಿಸಿದ್ದಾರೆ. ಮೆಟ್ರೋ ಸಿಬ್ಬಂದಿ ಆಕೆಯನ್ನು ಹೇಗಾದರೂ ಒಳಗೆ ಬಿಟ್ಟರು? ಐಪಿಸಿ…
Author: Prajatv Kannada
ರಾಜ್ಯದಲ್ಲಿ ಅಭಿವೃದ್ಧಿಯೇ ಆಗಿಲ್ಲ, ರಾಜ್ಯಕ್ಕೆ ಮೋದಿ ಬರುವುದರಿಂದ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಚಾಮರಾಜನಗರ ವಿಧಾನಸಭಾ ಕ್ಚೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಟೀಕಾ ಪ್ರಹಾರ ನಡೆಸಿದರು.ಚುನಾವಣೆ ನೀತಿ ಸಂಹಿತೆ ಇರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಬಂಡೀಪುರಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಚುನಾವಣಾ ನೀತಿಸಂಹಿತೆ ಇರುವುದರಿಂದ ಅವರು ಬರುವ ಹಾಗಿಲ್ಲ. ಇದು ತಪ್ಪಾಗಿದೆ. ಅವರು ಹೇಗೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿಗಾಗಿ ರಾಜ್ಯಕ್ಕೆ ಬರುವುದಿಲ್ಲ. ಅವರು ಬರುವುದು ಚುನಾವಣೆಗಾಗಿ ಮಾತ್ರ. ಮುಖ್ಯ ಮಂತ್ರಿಯವರು ಜಿಲ್ಲೆಗೆ ಎರಡು ಬಾರಿ ಬಂದು ಹೋದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೊಡಲಿಲ್ಲ. ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಹಲವಾರು ಬಾರಿ ಮನವಿ ಮಾಡಿಕೊಂಡರು ಯಾವುದೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿಲಿಲ್ಲ ಎಂದು ಹೇಳಿದರು.
ಮಂಡ್ಯ:ರೋಡ್ಶೋ ವೇಳೆ ಕಲಾವಿದರತ್ತ ಡಿಕೆ ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾ.28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಡಿಕೆಶಿ ಹಣ ಎರಚಿದ್ದರಉ. ಚುನಾವಣಾ ಅಧಿಕಾರಿ JMFC ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ದೂರು ಬಳಿಕ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. NCR ಬಳಿಕ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ನ್ಯಾಯಾಲಯದ ಆದೇಶದಂತೆ ನಿನ್ನೆ ಡಿಕೆಶಿ ವಿರುದ್ಧ FIR ದಾಖಲಾಗಿದೆ.
ಹುಬ್ಬಳ್ಳಿ: ಬೆಳಗಾವಿ (Belagavi) ರಾಜಕಾರಣ ಹುಬ್ಬಳ್ಳಿಗೆ (Hubballi) ಶಿಫ್ಟ್ ಆಗಿದ್ದು, ಒಂದೇ ಕಡೆ ಬಿಜೆಪಿ ಅತೃಪ್ತ ನಾಯಕರು ಕಾಣಿಸಿಕೊಂಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಲಕ್ಷ್ಮಣ ಸವದಿ (Laxman Savadi) ಮತ್ತಿತರರ ಭೇಟಿ ಈಗ ತೀವ್ರ ಕುತೂಹಲ ಕೆರಳಿಸಿದೆ. ಮೊದಲಿಗೆ ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ಬಿಜೆಪಿ ನಾಯಕರ ಸೀಕ್ರೆಟ್ ಮೀಟಿಂಗ್ ನಡೆಯಿತು. ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಹೇಶ್ ಕುಮಟಳ್ಳಿ ಟಿಕೆಟ್‌ಗಾಗಿ ಸಾಹುಕಾರ್ ರಮೇಶ ಜಾರಕಿಹೊಳಿ ಪಟ್ಟು ಹಿಡಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಜಾರಕಿಹೊಳಿ, ಸವದಿ ಮುನಿಸು ಅಂತ್ಯ ಮಾಡುವ ಪ್ರಯತ್ನ ಮಾಡಿದರು ಇಬ್ಬರ ನಡುವಿನ ಮುನಿಸು ಶಮನಕಾರಿ ಮಾಡುವಲ್ಲಿ ಯಶಸ್ವಿಯಾದ ಕೇಂದ್ರ ಸಚಿವ ಜೋಶಿ, ಮೀಟಿಂಗ್ ಮುಗಿಸಿ ಒಂದೇ ವಾಹನದಲ್ಲಿ ಜೋಶಿ, ಸಾಹುಕಾರ್, ಸವದಿ ವಿಮಾನ ನಿಲ್ದಾಣದಕ್ಕೆ ತೆರಳಿದ್ದು, ಮೂವರು ಒಟ್ಟಿಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಕರ್ನಾಟಕ…
ಉಡುಪಿ: ಕುಂದಾಪುರ ವಾಜಪೇಯಿ ಎಂದೇ ಖ್ಯಾತರಾಗಿರುವ ಉಡುಪಿ ಜಿಲ್ಲೆ ಕುಂದಾಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಚುನಾವಣಾ ಕಣಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಕುಂದಾಪುರ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿರುವ ಅವರ ಈ ನಿರ್ಧಾರ ಅವರ ಅಪಾರ ಅಭಿಮಾನಿ ಬಳಗಕ್ಕೆ ಅಚ್ಚರಿಯನ್ನುಂಟು ಮಾಡಿದೆ. ಸೋಮವಾರ ಸಂಜೆ ಅವರು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಅವರು, ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ. ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ಕ್ಷೇತ್ರದ ಜನತೆ ನನ್ನನ್ನು ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದಗಳು. ಅಧಿಕಾರಿ ವರ್ಗ, ಕುಂದಾಪುರ ಜನತೆ, ಮಾಧ್ಯಮಗಳಿಗಳಿಗೂ ಧನ್ಯವಾದಗಳು. ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ. ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೂ ಧನ್ಯವಾದಗಳು.…
ಶಿವಮೊಗ್ಗ: ಶಿಕಾರಿಪುರದಿಂದ ಸ್ಪರ್ಧೆಗೆ ತಂದೆ ಬಿಎಸ್ವೈ ಸೂಚನೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರನೂ ಆಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಮಾತನಾಡಿದ ಅವರು, ಶಿಕಾರಿಪುರ ಮಾಜಿ ಸಿಎಂ ಯಡಿಯೂರಪ್ಪ ಸ್ಪರ್ಧಿಸುತ್ತಿದ್ದ ಕ್ಷೇತ್ರವಾಗಿದೆ. ಶಿಕಾರಿಪುರ ಕ್ಷೇತ್ರಕ್ಕೆ ಯಡಿಯೂರಪ್ಪ ದೊಡ್ಡ ಕೊಡುಗೆ ನೀಡಿದ್ದಾರೆ. ವರಿಷ್ಠರು ಟಿಕೆಟ್ ಘೋಷಣೆ ಮಾಡಬೇಕಿದೆ. ಶಿಕಾರಿಪುರದಲ್ಲಿ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. ಶಿಕಾರಿಪುರ ಮಾತ್ರವಲ್ಲ ರಾಜ್ಯದಲ್ಲೂ ಪಕ್ಷ ಸಂಘಟನೆ ಮಾಡುತ್ತೇನೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಮಂಡ್ಯ: ಬಹಳ ವರ್ಷಗಳಿಂದ ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದವಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲ ಆದಾಗಿಂದಲೂ ಇದೆಲ್ಲ ನಡೆಯುತ್ತಲೇ ಇದೆ. ಯಾವ ರೀತಿಯ ಒಪ್ಪಂದ ಮಾಡಿಕೊಂಡಿದ್ದಾರೆಂದು ತಿಳಿಯುತ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಒಳಒಪ್ಪಂದ ಮಾಡಿಕೊಂಡರು. ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು JDS ಸೋಲಿಸಿದರು. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಕುತಂತ್ರ ರಾಜಕಾರಣಕ್ಕೆ ಮುಂದಾಗಿದ್ದಾರೆ. ಜೆಡಿಎಸ್ ವಿರುದ್ಧ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳಿಂದ ಕುತಂತ್ರ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಒಗ್ಗೂಡಿ ಜಿಲ್ಲೆಯ ಜನತೆಗೆ ದ್ರೋಹ ಮಾಡುತ್ತಿದ್ದಾರೆ. ಈ ಕುರಿತು ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನ ತೀರ್ಮಾನಿಸುತ್ತಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಏನಾಗಿದೆ ಅಂತಾ ಈಗ ನೋಡುತ್ತಿದ್ದೀರಿ ಅಲ್ವಾ? ಎಲ್ಲಾ ಕ್ಷೇತ್ರದಲ್ಲೂ ಹೆಸರಿಗಾಗಿ ಬಹಿರಂಗವಾಗಿ ಜೆಡಿಎಸ್ ಬಗ್ಗೆ ಮಾತಾಡ್ತಾರೆ. ಲೋಕಸಭಾ ಚುನಾವಣೆ ಸೋಲಿನ ಸೇಡನ್ನು ನಾವು ತೀರಿಸಿಕೊಳ್ಳುತ್ತೇವೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ…
ದಾವಣಗೆರೆ: ನನ್ನ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ನಿಂತರು ನಾನು ಗೆಲ್ಲುವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಎಸ್ಎಸ್ ಮಲ್ಲಿಕಾರ್ಜುನ (SS Mallikarjun) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಕಳೆದ ಚುನಾವಣೆಯಲ್ಲಿ ಸ್ವಲ್ಪ ಜಾಸ್ತಿ ಹುಮ್ಮಸಿನಲ್ಲಿದ್ದ ಹಿನ್ನೆಲೆ ಸೋಲಾಗಿದೆ. ಈ ಸಲ ಹಾಗೇ ಆಗಲು ಸಾಧ್ಯವಿಲ್ಲ. ನಾವು ತಂದ ಕಾಮಗಾರಿಗಳೇ ಈಗ ನಡೆಯುತ್ತಿವೆ. ರಾಜ್ಯದಲ್ಲಿ ಹೇಗೆ 40 ಪರ್ಸೆಂಟ್ ಸರ್ಕಾರ ಇದೆ. ದಾವಣಗೆರೆಯಲ್ಲಿ ಸಹ ಇದೆ. ಇದರಿಂದ ಜನ ಬೇಸತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಹಿಟ್ಲರ್ ರೀತಿ ನಡೆಸಲಾಗುತ್ತಿದೆ. ದಾವಣಗೆರೆ ಇನ್ನೂ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಬೇಕು ನಾನು ನನ್ನ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಇತ್ತೀಚೆಗೆ ಹಾವೇರಿಯಲ್ಲಿ ಸ್ಟಷ್ಟಣೆ ನೀಡಿದ್ದರು. ಆ ಮೂಲಕ ಸಿಎಂ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ…
ಮಂಗಳೂರು: ಇಡೀ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ (BJP) ಆವರಿಸಿದ್ದರೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ನ್ನು (Congress) ಮಣಿಸಲು ಕಮಲ ಪಾಳಯಕ್ಕೆ ಸಾಧ್ಯವಾಗಿಲ್ಲ. 2013ರ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರ ಹೊರತುಪಡಿಸಿ ದಕ್ಷಿಣ ಕನ್ನಡದಲ್ಲಿ 7 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿತ್ತು. ಆದರೆ 2018ರಲ್ಲಿ ಯು.ಟಿ. ಖಾದರ್ (UT Khader) ಉಳಿಸಿಕೊಂಡಿದ್ದ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ವಶದಲ್ಲಿದ್ದ ಸ್ಥಾನಗಳನ್ನು ಬಿಜೆಪಿ ವಶಪಡಿಸಿಕೊಂಡಿದೆ. 1957ರಿಂದ 2008ರವರೆಗೆ, ಇಂದಿನ ಮಂಗಳೂರು ಕ್ಷೇತ್ರವನ್ನು ಉಳ್ಳಾಲ (Ullala) ಕ್ಷೇತ್ರ ಎಂದು ಕರೆಯಲಾಗುತ್ತಿತ್ತು.1957ರಿಂದ ಮಂಗಳೂರು ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದೆ. ಏಕೆಂದರೆ ಈ ಅವಧಿಯಲ್ಲಿ ನಡೆದ 15 ಚುನಾವಣೆಗಳಲ್ಲಿ ಪಕ್ಷವು 12 ಬಾರಿ ಗೆದ್ದಿದೆ ಮತ್ತು 1994ರಲ್ಲಿ ಬಿಜೆಪಿಯ ಜಯರಾಮ ಶೆಟ್ಟಿ 24,412 ಮತಗಳನ್ನು ಪಡೆದು ಸ್ಥಾನವನ್ನು ಗೆದ್ದಿದ್ದರು. ಯು. ಟಿ. ಖಾದರ್ 2007ರಿಂದ ಮಂಗಳೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ. ಇದೀಗ 2023ರ ಚುನಾವಣೆಯಲ್ಲಿ 5ನೇ ಅವಧಿಯ ಮೇಲೆ ಕಣ್ಣಿಟ್ಟಿದ್ದಾರೆ.…
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡಬೇಕು? ಈ ವಿಚಾರ ಕಳೆದ 2 ತಿಂಗಳಿಂದ ಗೊಂದಲದ ಗೂಡಾಗಿದೆ. ಭವಾನಿ ಅವರಿಗೇ ಟಿಕೆಟ್ ಕೊಡಿ ಅಂತಾ ರೇವಣ್ಣ ಪಟ್ಟು ಹಿಡಿದಿದ್ದರೆ, ಕುಮಾರಸ್ವಾಮಿ ಮಾತ್ರ ಸ್ವರೂಪ್ ಅವರಿಗೇ ಟಿಕೆಟ್ ಸಿಗಬೇಕು ಅಂತಾ ಹೇಳ್ತಿದ್ದಾರೆ. ಅಂತಿಮವಾಗಿ ಈ ವಿಚಾರ ದೇವೇಗೌಡರ ಅಂಗಳ ತಲುಪಿದೆ. ಆದ್ರೆ, ದೇವೇಗೌಡರೇ ಮಧ್ಯ ಪ್ರವೇಶ ಮಾಡಿದ್ರೂ ಈ ವಿವಾದ ಬಗೆಹರಿದಿಲ್ಲ! ಅಂತಾದ್ದೇನಾಯ್ತು? ಈ ಗೊಂದಲ ಬಗೆಹರಿಯೋದಾದ್ರೂ ಹೇಗೆ? ಭವಾನಿಗೆ ಸಿಗದ ಟಿಕೆಟ್ ಸ್ವರೂಪ್‌ಗೂ ಸಿಗಲ್ಲ? ಏಪ್ರಿಲ್ 2 ಭಾನುವಾರ ರಾತ್ರಿ ದೇವೇಗೌಡರ ಮನೆಯಲ್ಲಿ ಕಾವೇರಿದ ಚರ್ಚೆ.. ವಾದ – ಪ್ರತಿವಾದ. ಇವೆಲ್ಲ ನಡೆದದ್ದು, ಕೇವಲ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ.. ಭವಾನಿ ಅವರಿಗೇ ಹಾಸನ ಕ್ಷೇತ್ರದ ಟಿಕೆಟ್ ಕೊಡಬೇಕು ಅನ್ನೋದು ರೇವಣ್ಣ ಆಗ್ರಹ. ಆದ್ರೆ, ಪಕ್ಷಕ್ಕಾಗಿ ದುಡಿದಿರುವ ಸ್ವರೂಪ್ ಪ್ರಕಾಶ್‌ಗೆ ಟಿಕೆಟ್ ಸಿಗಬೇಕು ಅನ್ನೋದು ಕುಮಾರಸ್ವಾಮಿ ನಿಲುವು.. ಅಂತಿಮವಾಗಿ ದೇವೇಗೌಡರೂ ಕೂಡಾ ಸ್ವರೂಪ್ ಪರ ವಾಲುತ್ತಿದ್ದಂತೆಯೇ ರೇವಣ್ಣ…