ಹಾಸನ: ತಡರಾತ್ರಿ ಜವರಾಯನ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕೆರೆಹಳ್ಳಿ ಬಳಿ ನಡೆದ ದುರಂತದಲ್ಲಿ ಲೋಕೇಶ್, ಲಕ್ಷ್ಮಿ ಹಾಗೂ ಲೋಕೇಶ್ ತಂಗಿಯ ಮಕ್ಕಳಾದ ಗಾನವಿ ಮತ್ತು ಲೇಖನ ಮೃತಪಟ್ಟಿದ್ದಾರೆ. ನಡೆದಿದ್ದೇನು..?: ಲೋಕೇಶ್ ಅವರು ಹೊಸೂರಿನಿಂದ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಲೋಕೇಶ್ ಬೈಕ್ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author: Prajatv Kannada
ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಅಭ್ಯರ್ಥಿಗಳ ಘೋಷಣೆ ಮಾಡುವ ಮೊದಲೆ ಒಂದು ಕಡೆ ಭವಾನಿ ರೇವಣ್ಣ ಅವರು ಕ್ಷೇತ್ರ ಸುತ್ತಿ ಪ್ರಚಾರದ ಮೂಲಕ ಬಿಂಭಿಸಿಕೊಳ್ಳುತ್ತಿದ್ದರೇ, ಇನ್ನೊಂದು ಕಡೆ ಸದ್ದಿಲ್ಲದೇ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅವರ ಪುತ್ರ ಹೆಚ್.ಪಿ. ಸ್ವರೂಪ್ ಅವರು ಕೂಡ ಹಳ್ಳಿ ಹಳ್ಳಿ ಸುತ್ತಿ ಗಮನಸೆಳೆಯುತ್ತಿದ್ದಾರೆ. ಇದೊಂದು ರೀತಿ ಪಕ್ಷದಿಂದ ಟಿಕೆಟ್ ಪೈಟ್ ಎಂಬಂತೆ ಕಂಡು ಬಂದರೂ ಕೂಡ ಇನ್ನೊಂದು ದಿನದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರೆಂಬುದನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಬಹಿರಂಗಪಡಿಸುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳಲ್ಲಿ ಅಭ್ಯರ್ಥಿಗಳ ಪ್ರಚಾರಗಳು ಕೂಡ ಹೆಚ್ಚಾಗು ತೊಡಗಿದ್ದು, ಇನ್ನು ಅಭ್ಯರ್ಥಿಗಳ ಆಯ್ಕೆಯಲ್ಲಿ ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಕ್ಷೇತ್ರಗಳಲ್ಲಿ ಸುತ್ತಾಡಿ ಗಮನಸೆಳೆಯುವ ಕೆಲಸ ಮಾಡಲಾಗುತ್ತಿದೆ. ಹಾಸನದಲ್ಲಿ ಮುಂದುವರಿದ ಭವಾನಿ ರೇವಣ್ಣ ದಂಡಯಾತ್ರೆಯು ಮೂರನೇ ದಿನವು ಕೂಡ ಮುಂದುವರೆದಿದೆ. ಭವಾನಿಗೆ ಟಿಕೆಟ್ ಇಲ್ಲಾ ಎಂಬ ಹೆಚ್.ಡಿ. ಕುಮಾರಸ್ವಾಮಿ ಅವರ ಸಂದೇಶವನ್ನು ಕೂಡ ಲೆಕ್ಕಿಸದೆ ಹಾಸನ ಕ್ಷೇತ್ರದಲ್ಲಿ…
ರಾಯಚೂರು: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ (Siddaramaiah) ಜೈಲಿಗೆ ಹೋಗ್ತಾರೆ ಅಂತಾ ನಾನು ಈ ಮೊದಲು ಹೇಳಿದ್ದೆ, ಈಗಲೂ ಹೇಳುತ್ತೇನೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ. ಕೊನೆ ಸಾಲಿನ ಆದೇಶ ಓದಿದ್ದಾರೆ. ಲೋಕಾಯುಕ್ತ (Lokayukta) ಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತೆ, ಯಾರ್ಯಾರು ನಾಯಕರು ಪ್ರಕರಣದಲ್ಲಿ ಇದ್ದಾರೆ ಅವರ ವಿರುದ್ಧ ಕ್ರಮ ಆಗುತ್ತೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿ ಮಾತನಾಡಿದ ಕಟೀಲ್, ಸಿದ್ದರಾಮಯ್ಯ ಬಹುಮತ ಸರ್ಕಾರ ಇದ್ದಾಗ ಹಗರಣ ಆಗಿತ್ತು. ತಾವು ಸಿಕ್ಕಿ ಬೀಳುತ್ತೇವೆ ಅಂತ ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನ ಹುಟ್ಟುಹಾಕಿದರು. ನ್ಯಾ.ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನ ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗ್ತಾರೆ ಅಂತ ಕಟೀಲ್ ಹೇಳಿದ್ದಾರೆ. ಅಮಿತ್ ಶಾ, ಜನಾರ್ದನ ರೆಡ್ಡಿಯನ್ನು ನೋಡಿಕೊಳ್ಳುತ್ತೇನೆ ಎಂಬ ಹೇಳಿಕೆಗೆ ಹೆಚ್.ಡಿ.ಕೆ ಪ್ರತಿಕ್ರಿಯೆ ವಿಚಾರವಾಗಿ ಮಾತನಾಡಿದ ಕಟೀಲ್ (Nalin Kumar Kateel),…
ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ವ್ಯಕ್ತಿಯೊಬ್ಬ ಜನ್ಮ ನೀಡಿದ ತಾಯಿ (Mother), ತಂದೆಗಾಗಿ (Father) ದೇವಸ್ಥಾನ (Temple) ನಿರ್ಮಿಸಿ ಪ್ರತಿನಿತ್ಯ ಪೂಜೆ ಮಾಡಿ ಇತರರಿಗೆ ಆದರ್ಶವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ಸುರೇಶ್ ತಳವಾರ ಎಂಬುವರು ತಮ್ಮ ಜಮೀನಿನಲ್ಲಿರುವ ತಂದೆ ಗುರಪ್ಪ ತಳವಾರ ಹಾಗೂ ತಾಯಿ ಪಾರ್ವತಿ ತಳವಾರ ಅವರ ಸಮಾಧಿ ಮೇಲೆ ಪುತ್ಥಳಿ ಸ್ಥಾಪಿಸಿ ದೇವಸ್ಥಾನ ನಿರ್ಮಿಸಿ ತಂದೆ ತಾಯಿಯ ಮೇಲಿನ ಪ್ರೇಮ ಮೆರೆದಿದ್ದಾರೆ. ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹಾಗೂ ಸಮಾಜ ಸೇವಕರಾಗಿರುವ ಸುರೇಶ್ ತಳವಾರ ಹಾಗೂ ಅವರ ಸಹೋದರರಿಗೆ ಮೊದಲಿನಿಂದಲೂ ತಾಯಿ ತಂದೆ ಮೇಲೆ ಅಪಾರ ಭಕ್ತಿ ಇತ್ತು. 20 ವರ್ಷಗಳ ಹಿಂದೆ ಅವರ ತಂದೆ ಗುರಪ್ಪ ಸಾವನ್ನಪ್ಪಿದ್ದರು. ಕಳೆದ 2 ವರ್ಷದ ಹಿಂದೆ ಅವರ ತಾಯಿ ಪಾರ್ವತಿ ತೀರಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಅವರ ಪುಣ್ಯಸ್ಮರಣೆಯಂದು ಸಾವಿರಾರು ಜನರಿಗೆ ಅನ್ನಸಂತರ್ಪನೆ ಮಾಡುತ್ತಿದ್ದರು. ಆದರೆ ಈ ವರ್ಷ ತಂದೆ, ತಾಯಿಗಳು…