ಇಟಲಿ: ಇಟಲಿ ಸರ್ಕಾರವು ಇಟಾಲಿಯನ್ ಭಾಷೆಯೇ ಸಾರ್ವಭೌಮ ಎಂಬುದನ್ನು ಜಾರಿಗೆ ತರುವ ಮೂಲಕ ಇಂಗ್ಲಿಷ್ ಭಾಷೆ ಬಳಕೆಯ ನಿಷೇಧಕ್ಕೆ ಮುಂದಾಗಿದೆ. ದೇಶದಲ್ಲಿ ವಿದೇಶಿ ಭಾಷೆ ಬಳಕೆ, ಅದರಲ್ಲೂ ಇಂಗ್ಲಿಷ್ ಭಾಷೆಯ ಬಳಕೆಯನ್ನು ನಿಯಂತ್ರಿಸುವ ದಿಸೆಯಲ್ಲಿ ಮಹತ್ವದ ಕರಡು ವಿಧೇಯಕವೊಂದನ್ನು ಮಂಡಿಸಲು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮುಂದಾಗಿದ್ದಾರೆ. ಇದೀಗ ಸರ್ಕಾರಿ ಅಥವಾ ಖಾಸಗಿ ಕಚೇರಿಗಳಲ್ಲಿ, ಸಂಸ್ಥೆಗಳಲ್ಲಿ ಇಂಗ್ಲಿಷ್ ಪದಗಳನ್ನು ಬಳಸಿದರೆ ಅವರಿಗೆ 1.08 ಲಕ್ಷ ಡಾಲರ್ (ಸುಮಾರು 89 ಲಕ್ಷ ರೂಪಾಯಿ) ದಂಡ ವಿಧಿಸುವ ಕ್ರಮವೂ ವಿಧೇಯಕದಲ್ಲಿದೆ. ಆ ಮೂಲಕ ದೇಶದಲ್ಲಿ ಇಟಲಿಯಲ್ಲಿಯೇ ಜನ ವ್ಯವಹರಿಸುವಂತೆ ಮಾಡುವುದು ಮೆಲೋನಿ ಅವರ ಉದ್ದೇಶವಾಗಿದೆ. ಈಗಾಗಲೇ ಇಂಗ್ಲಿಷ್ ಬಳಕೆಯ ನಿಷೇಧದ ಕುರಿತು ವಿಧೇಯಕದ ಕರಡು ಪ್ರತಿ ಸಿದ್ಧವಾಗಿದೆ. ವಿಧೇಯಕದ ಅಂತಿಮ ಪ್ರತಿ ಸಿದ್ಧವಾಗಿ, ಅದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಿ, ಅಂಗೀಕಾರ ಪಡೆದ ನಂತರ ಕಾನೂನು ಜಾರಿಗೆ ಬರಲಿದೆ. ಎಲ್ಲರೂ ಇಟಾಲಿಯನ್ ಭಾಷೆಯಲ್ಲಿಯೇ ಮಾತನಾಡುವ ಮೂಲಕ ಸ್ವಾಭಿಮಾನ ಮೆರೆಯಬೇಕು ಎಂಬದು ಮೆಲೋನಿ ಅವರ ಉದ್ದೇಶವಾಗಿದ್ದು,…
Author: Prajatv Kannada
ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂದಿನ ಸಿನಿಮಾ ಯಾವುದು ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಯಾವಾಗ ಯಶ್ ನಟನೆಯ ಮುಂದಿನ ಸಿನಿಮಾ ಘೋಷಣೆ ಆಗಲಿದೆ ಎಂದು ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಮಧ್ಯೆ ಯಶ್ ಅಭಿಮಾನಿಯೊಬ್ಬ ಯಶ್ ಮನೆ ಮುಂದೆ ಧರಣಿ ಕೂರುವುದಾಗಿ ತಿಳಿಸಿದ್ದಾನೆ. ಯಶ್ ಮನೆ ಮುಂದೆ ಧರಣಿ ಕೂರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೋರ್ವ ಬರೆದುಕೊಂಡಿದ್ದು ಇದನ್ನು ರಾಧಿಕಾ ಪಂಡಿತ್ ಗಮನಕ್ಕೂ ತಂದಿದ್ದಾನೆ. ‘ಅತ್ತಿಗೆ, ಆದಷ್ಟು ಬೇಗ ಯಶ್ ಅವರ ಮುಂದಿನ ಚಿತ್ರದ ಅಪ್ ಡೇಟ್ ಕೊಡಿ. ಕೊಡದೇ ಇದ್ದರೆ ಸ್ಟ್ರೈಕ್ ಮಾಡುತ್ತೇನೆ’ ಎಂದು ಬರೆದಿದ್ದಾನೆ. ಕೆಜಿಎಫ್ 2 ಸಿನಿಮಾದ ನಂತರ ಯಶ್ ನಡೆ ನಿಗೂಢವಾಗಿದ್ದು, ಯಾವ ಭಾಷೆಯಲ್ಲಿ, ಯಾರ ನಿರ್ದೇಶನದಲ್ಲಿ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನುವುದು ಸಸ್ಪೆನ್ಸ್ ಆಗಿಯೇ ಉಳಿದಿದೆ. ಯಶ್ ಜೊತೆ ಹಲವು ನಿರ್ದೇಶಕರ ಹೆಸರುಗಳು ಓಡುತ್ತಿದ್ದರೂ, ಈವರೆಗೂ ಯಶ್ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ತಿಳಿಸುತ್ತೇನೆ ಎಂದು ಹೇಳಿ…
ಕಾಂತಾರ ಸಿನಿಮಾದ ಭರ್ಜರಿ ಸಕ್ಸಸ್ ಬಳಿಕ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಮೇಲೆ ರಾಜಕಾರಣಿಗಳ ಕಣ್ಣು ಬಿದ್ದಿದ್ದು, ಬಿಜೆಪಿ ಶೆಟ್ರನ್ನು ಸಂಪರ್ಕಿಸಿ, ಈ ಬಾರಿಯ ಚುನಾವಣೆಗೆ ನಿಲ್ಲುವಂತೆ ಆಹ್ವಾನ ನೀಡಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರಿಷಬ್ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆಯೇ ತಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ರಿಷಬ್ ಹೇಳಿದ್ದರು. ಇದೀಗ ಮತ್ತೆ ರಿಷಬ್ ಈ ಕುರಿತು ಮಾತನಾಡಿದ್ದಾರೆ. ‘ಈಗಾಗಲೇ ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ. ನಾನಾ ಕ್ಷೇತ್ರಗಳಿಗೂ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇಂತಹ ಗಾಸಿಪ್ ಹಬ್ಬಿಸುವವರಿಗೆ ಏನು ಹೇಳಲಿ? ನನಗೆ ನನ್ನದೇ ಆದ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿಯಿದೆ. ಸಿನಿಮಾ ಮಾಡಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಕ್ಷೇತ್ರಕ್ಕೆ ಬರಲ್ಲ’ ಎಂದಿದ್ದಾರೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮತ್ತೆ ರಿಷಬ್ ಇಂಥದ್ದೇ ಮಾತುಗಳನ್ನು ಆಡಿದ್ದಾರೆ. ಹಿರಿಯ ಸಿನಿಮಾ ಪತ್ರಕರ್ತೆಯೊಬ್ಬರು ರಿಷಬ್ ಫೋಟೋವೊಂದನ್ನು ಶೇರ್ ಮಾಡಿ, ರಿಷಬ್ ರಾಜಕಾರಣಕ್ಕೆ ಬರಲಿದ್ದಾರೆ ಎಂದು ಏಪ್ರಿಲ್…
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 60 ದಿನಗಳ ಕಾಲ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ಮುಗಿಸಿದ್ದು ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಮಾಫಿಯಾ’ಚಿತ್ರ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಜೂನ್ ತಿಂಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದ್ದು, ‘ಮಾಫಿಯಾ’ ಚಿತ್ರಕ್ಕಾಗಿ ಪ್ರಜ್ವಲ್ ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ಚಿತ್ರದಲ್ಲಿ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳುತ್ತಿದ್ದಾರೆ. ಮಾಫಿಯಾ ಪ್ರಜ್ವಲ್ ನಟನೆಯ ಮೂವತ್ತೈದನೇ ಚಿತ್ರವಾಗಿದ್ದು, ಲೋಹಿತ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದ್ದು, ವಿನೋದ್, ರಿಯಲ್ ಸತೀಶ್, ಡಿಫರೆಂಟ್ ಡ್ಯಾನಿ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ಹತ್ತು ದಿನಗಳ ಕಾಲ ನಡೆದಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ…
ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟ್ರೈಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಶಿವಾಜಿ ಸುರತ್ಕಲ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ 2 ಸಿನಿಮಾ ಆರಂಭಿಸಿದ್ದರು. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಶಿವಾಜಿ ಸುರತ್ಕಲ್ 2 ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆಯಾಗಿದ್ದು, ನಾನು ಹಾಗೂ ರಮೇಶ್ ಸರ್ ವಾಟ್ಸಪ್ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್ ಡೌನ್ ನಿಂದ ತೊಂದರೆ ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈಗ ಟ್ರೈಲರ್ ಬಿಡುಗಡೆಯಾಗಿದ್ದು, ಎಲ್ಲರಲ್ಲೂ ಮನೆ ಮಾಡಿರುವ ‘ಮಾಯಾವಿ ಯಾರು?’ ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿದ್ದಾರೆ. “ಒಂದೊಳ್ಳೆ…
ಬಾಗಲಕೋಟೆ- ತೇರದಾಳ: ತೇರದಾಳ ಮತಕ್ಷೇತ್ರದ ಬಿಜೆಪಿ ಟಿಕೆಟ್ ಸ್ಥಳೀಯ ನೇಕಾರರಿಗೆ ಕೊಡದಿದ್ದರೆ ಬಿಜೆಪಿ ಸೋಲು ಶತಸಿದ್ಧ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಬಾಗಲಕೋಟ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜು ಅಂಬಲಿ ವರಿಷ್ಠರಿಗೆ ಮನವಿಮಾಡಿದ್ದಾರೆ. ಬಾಗಲಕೋಟೆಯ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಭೇಟಿ ಮಾಡಿ ತೇರದಾಳ ವಿಧಾನಸಭಾ ಕ್ಷೇತ್ರದ ಸ್ಥಳೀಯ ನೇಕಾರರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿಕೊಂಡರು. ತೇರದಾಳ್ ಮತಕ್ಷೇತ್ರದ ಸ್ಥಳೀಯ ನೇಕಾರರಿಗೆ ಬಿಜೆಪಿ ಟಿಕೆಟ್ ನೀಡಿ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳಿಸುತ್ತೇವೆ. ಒಂದು ವೇಳೇ ನೇಕಾರರಿಗೆ ಟಿಕೆಟ್ ನೀಡದಿದ್ದಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು ಖಚಿತ ಎಂದು ಹೇಳಿದರು. ವರಿಷ್ಠರು ತೇರದಾಳ ಮತಕ್ಷೇತ್ರದ ನೇಕಾರರ ಬಗ್ಗೆ ಕಾಳಜಿ ವಹಿಸಲಿ. ಬಾಗಲಕೋಟೆ ಬಿಜೆಪಿ ಕೋರ ಕಮಿಟಿ ಸಭೆಯಲ್ಲಿ ಸಿದ್ದು ಸವದಿ ಅವರ ಹೆಸರನ್ನು ಹೇಳುವವರು ಜಾಸ್ತಿ ಜನರನ್ನು ಕರೆಸಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಅಂತ ಸ್ಥಳಿಯ ಅನೇಕ ಬಿಜೆಪಿ ನಾಯಕರು ಹೆಳಿದರು. ತೇರದಾಳ…
ಬೆಂಗಳೂರು: ಒಳಮೀಸಲಾತಿ ನ್ಯಾಯಸಮ್ಮತವಾಗಿದೆ, ಯಾರಿಗೂ ಅನ್ಯಾಯವಾಗಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಒಳಮೀಸಲಾತಿ ನೀಡಿದ್ದಾರೆ ಇದರ ಬಗ್ಗೆ ಪ್ರಭು ಚವ್ಹಾಣ್ ವಿರೋಧ ಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂತು, ನಾನು ಪತ್ರ ಕೊಟ್ಟಿರೋದು ನಿಜ ಆದರೆ ನಾನು ಯಾವ ತಿಂಗಳಿನಲ್ಲಿ ಪತ್ರ ಕೊಟ್ಟಿದ್ದೇನೆ ಎನ್ನುವುದನ್ನು ನೋಡಿ. ನಾನು ಕಳೆದ ಫೆಬ್ರವರಿಯಲ್ಲಿ ಕೊಟ್ಟಿರೋದು. ಆದರೆ ಸಚಿವ ಸಂಪುಟದಲ್ಲಿ ಮೊನ್ನೆ ಸರಿಯಾಗಿ ಚರ್ಚೆಯಾಗಿ ಒಳಮೀಸಲಾತಿ ಹಂಚಲಾಗಿದೆ. ಇದಕ್ಕೆ ಸಮ್ಮತಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ನಮ್ಮ ಸಮಾಜ ಸೇರಿ ಎಲ್ಲಾ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಹಾಗಾಗಿ ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಈ ಮೀಸಲಾತಿ ಹಂಚಿಕೆಯಿಂದ ಯಾರಿಗೂ ಅನ್ಯಾಯವಾಗಿಲ್ಲ ಯಾರಿಗೂ ಮೋಸ ಆಗಿಲ್ಲ ನಮ್ಮ ಮುಖ್ಯಮಂತ್ರಿಯವರು ಸಂವಿಧಾನಬದ್ಧವಾಗಿ ನ್ಯಾಯವನ್ನ ಕೊಟ್ಟಿದ್ದಾರೆ. ಬಂಜಾರ, ಭೋವಿ, ಕೊರಮ ಕೊರಚರನ್ನು ಎಸ್ಸಿ ಪಂಗಡದಿಂದ ಹೊರಗೆ ಹಾಕಬೇಕು ಅನ್ನೋದರ ಬಗ್ಗೆ ನ್ಯಾಷನಲ್ ಕಮೀಷನ್ನಿಂದ…
ಬೆಂಗಳೂರು: 30 ದಿನದಲ್ಲಿ ಇ ಖಾತಾ ಮಂಜೂರು ಆಗುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಬೆಂಗಳೂರಿನ ಹೈಕೋರ್ಟ್ ಸೂಚನೆ ನೀಡಿದೆ. ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಇ- ಗೌರ್ನೆನ್ಸ್ ಇಲಾಖೆಗೆ ಸೂಚನೆ ನೀಡಿ ಅರ್ಜಿ ಇತ್ಯರ್ಥ ಪಡಿಸಿದೆ. ಅಲ್ಲದೇ ಪ್ರತಿ ಗ್ರಾಪಂ ವ್ಯಾಪ್ತಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವೆಬ್ಸೈಟ್ನಲ್ಲಿ ಅರ್ಜಿಗಳ ಸ್ವೀಕಾರ, ಪರಿಶೀಲನೆ ಮತ್ತು ವಿಲೇವಾರಿ ಮಾಡುವ ಸಂಬಂಧ ಸೂಕ್ತ ವ್ಯವಸ್ಥೆ ಜಾರಿಯಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲದೆ, ಇ-ಖಾತಾ ಪಡೆದುಕೊಳ್ಳುವುದಕ್ಕಾಗಿ ಅರ್ಜಿದಾರರ ಹೆಸರು, ಅರ್ಜಿ ಸಲ್ಲಿಸಿರುವ ಆಸ್ತಿಯ ಸಂಪೂರ್ಣ ವಿವರ, ಖಾತೆಗಾಗಿ ಕೋರಿ ಸಲ್ಲಿಸಿರುವ ಅರ್ಜಿಯ ದಿನಾಂಕ, ಇ-ಖಾತೆಯನ್ನು ವಿತರಣೆ ಮಾಡಿದ ದಿನಾಂಕವು ಕಡ್ಡಾಯವಾಗಿ ಪ್ರಸ್ತಾಪವಾಗಿರಬೇಕು ಎಂದು ಸೂಚನೆ ನೀಡಿದೆ. ಇ -ಖಾತೆಗಾಗಿ ಇ-ಸುಗಮಾ ನಿಯಮಗಳ ಪ್ರಕಾರ ಯಾವುದೇ ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ ಮೂವತ್ತು ದಿನಗಳ ಒಳಗಾಗಿ ಇತ್ಯರ್ಥ…
ಸೂರ್ಯೋದಯ: 06.15 AM, ಸೂರ್ಯಾಸ್ತ : 06.31 PM ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ಚೈತ್ರ ಮಾಸ, ವಸಂತ ಋತು,ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ಏಕಾದಶಿ 04:19 AM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಆಶ್ಲೇಷ 04:48 AM ತನಕ ನಂತರ ಮಖ ಯೋಗ: ಇವತ್ತು ಧೃತಿ 02:45 AM ತನಕ ನಂತರ ಶೂಲ ಕರಣ: ಇವತ್ತು ವಿಷ್ಟಿ 04:19 AM ತನಕ ನಂತರ ಬವ 05:24 PM ತನಕ ನಂತರ ಬಾಲವ ರಾಹು ಕಾಲ: 04:30ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 03.01 AM to 04.48 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:55 ನಿಂದ ಮ.12:44 ವರೆಗೂ ಮೇಷ ರಾಶಿ: ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ…
ಲಕ್ನೋ: ಕೇಲ್ ಮೇಯರ್ಸ್ ಬೆಂಕಿ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, 16ನೇ ಆವೃತ್ತಿಯ ಐಪಿಎಲ್‌ನಲ್ಲಿ ಶುಭಾರಂಭ ಪಡೆದುಕೊಂಡಿದೆ. ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಸಿಡಿಸಿತ್ತು. 194 ರನ್ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಆರಂಭಿಸಿದ ಡೆಲ್ಲಿ ತಂಡ ಉತ್ತಮ ಶುಭಾರಂಭ ಪಡೆದುಕೊಂಡಿತ್ತು. ಮೊದಲ ವಿಕೆಟ್ ಪತನಕ್ಕೆ 4.3 ಓವರ್‌ಗಳಲ್ಲಿ 41 ರನ್ ಕಲೆಹಾಕಿತ್ತು. ಆ ನಂತರ ತಂಡದ ಒಂದೊಂದೇ ವಿಕೆಟ್ ಪತನಗೊಂಡಿತು. ಡೆಲ್ಲಿ ತಂಡದಲ್ಲಿ ನಾಯಕ ಡೇವಿಡ್ ವಾರ್ನರ್ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲವಾದರು. ಡೇವಿಡ್…