ಅಹಮದಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿ, 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬಳಿಕ ಐಪಿಎಲ್ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಅಧಿಕೃತವಾಗಿ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಶುಕ್ರವಾರ ನಡೆದಿದ್ದ ಒಂದು ಘಟನೆಯಿಂದ ಎಂಎಸ್ ಧೋನಿಗೆ ಇದು ಕೊನೆಯ ಐಪಿಎಲ್ ಟೂರ್ನಿ ಎಂದು ಭಾಸವಾಗುತ್ತಿದೆ. ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ 2023ರ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 179 ರನ್ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಇನಿಂಗ್ಸ್‌ನಲ್ಲಿ ಎಂಎಸ್ ಧೋನಿ ಚೆಂಡನ್ನು ತಡೆಯುವ ಭರದಲ್ಲಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಪಂದ್ಯದ 19ನೇ ಓವರ್‌ನಲ್ಲಿ ದೀಪಕ್ ಚಹರ್ ಎಸೆತದಲ್ಲಿ ಚೆಂಡು ರಾಹುಲ್ ತೆವಾಟಿಯ ಪ್ಯಾಡ್‌ಗೆ ತಾಗಿ ಲೆಗ್ ಸ್ಲಿಪ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಎಂಎಸ್ ಧೋನಿ ತಮ್ಮ ಬಲ ಭಾಗಕ್ಕೆ…
Author: Prajatv Kannada
ಸದ್ಯದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪೆಂಟಗನ್ ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಚಿತ್ರದ ನಟಿ ತನಿಷಾ ಕುಪ್ಪಂಡ ಮುಜುಗರದ ಸನ್ನಿವೇಶವನ್ನು ಎದುರಿಸಿದ್ದಾರೆ. ಯುಟ್ಯೂಬರ್ ಒಬ್ಬರು ಕೇಳಿದ ಪ್ರಶ್ನೆಯಿಂದ ಮುಜಗರಗೊಂಡಿರುವ ನಟಿ ಯೂಟ್ಯೂಬರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪೆಂಟಗನ್ ಸಿನಿಮಾದಲ್ಲಿ ಮಂಗಳ ಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ತನಿಷಾ ಕುಪ್ಪಂಡ ನಟಿಸಿದ್ದು ಚಿತ್ರದಲ್ಲಿ ಸಖತ್ ಹಾಟ್ ಹಾಗೂ ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಯುಟ್ಯೂಬರ್ ಒಬ್ಬರು ತನಿಷಾ ಅವರನ್ನು ಸಂದರ್ಶನ ಮಾಡುವ ಸಂದರ್ಭದಲ್ಲಿ ನೀವು ನ್ಯೂಡ್ ಫಿಲಂ ಮಾಡ್ತೀರಾ ಅಂತ ಪ್ರಶ್ನೆ ಕೇಳಿ ಕೆರಳಿಸಿದ್ದಾನೆ. ನ್ಯೂಡ್ ಮಾಡೋದು ಪೋರ್ನ್ ಸ್ಟಾರ್ ಮಾಡ್ತಾರೆ ಅಂತ ನಟಿ ತನಿಷಾ ಗರಂ ಆಗಿದ್ದಾರೆ. ಏಪ್ರಿಲ್ 7ರಂದು ತನಿಷಾ ನಟನೆಯ ಪೆಂಟಗನ್ ಸಿನಿಮಾ ರಿಲೀಸ್ ಆಗುತ್ತಿದ್ದು ನಟಿಯ ಇಂಟರ್ವೀವ್ ಮಾಡಲು ಬಂದಿದ್ದ ಯೂಟ್ಯೂಬರ್ ಈ ರೀತಿ ಪ್ರಶ್ನೆ…
ಕಾಂತಾರ ಸಿನಿಮಾದ ಭರ್ಜರಿ ಸಕ್ಸಸ್ ಬಳಿಕ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಮೇಲೆ ರಾಜಕಾರಣಿಗಳ ಕಣ್ಣು ಬಿದ್ದಿದ್ದು, ಬಿಜೆಪಿ ಶೆಟ್ರನ್ನು ಸಂಪರ್ಕಿಸಿ, ಈ ಬಾರಿಯ ಚುನಾವಣೆಗೆ ನಿಲ್ಲುವಂತೆ ಆಹ್ವಾನ ನೀಡಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರಿಷಬ್ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆಯೇ ತಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ರಿಷಬ್ ಹೇಳಿದ್ದರು. ಇದೀಗ ಮತ್ತೆ ರಿಷಬ್ ಈ ಕುರಿತು ಮಾತನಾಡಿದ್ದಾರೆ. ‘ಈಗಾಗಲೇ ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ. ನಾನಾ ಕ್ಷೇತ್ರಗಳಿಗೂ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇಂತಹ ಗಾಸಿಪ್ ಹಬ್ಬಿಸುವವರಿಗೆ ಏನು ಹೇಳಲಿ? ನನಗೆ ನನ್ನದೇ ಆದ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿಯಿದೆ. ಸಿನಿಮಾ ಮಾಡಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಕ್ಷೇತ್ರಕ್ಕೆ ಬರಲ್ಲ’ ಎಂದಿದ್ದಾರೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮತ್ತೆ ರಿಷಬ್ ಇಂಥದ್ದೇ ಮಾತುಗಳನ್ನು ಆಡಿದ್ದಾರೆ. ಹಿರಿಯ ಸಿನಿಮಾ ಪತ್ರಕರ್ತೆಯೊಬ್ಬರು ರಿಷಬ್ ಫೋಟೋವೊಂದನ್ನು ಶೇರ್ ಮಾಡಿ, ರಿಷಬ್ ರಾಜಕಾರಣಕ್ಕೆ ಬರಲಿದ್ದಾರೆ ಎಂದು ಏಪ್ರಿಲ್…
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು ಎಲ್ಲಾ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಈ ಮಧ್ಯೆ ನಟರ ರಾಜಕೀಯ ಎಂಟ್ರಿಯ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಅದರಲ್ಲೂ ಕನ್ನಡದ ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷಕ್ಕೆ ಎಂಟ್ರಿಕೊಟ್ಟೆ ಬಿಟ್ಟರು ಎಂಬಷ್ಟರ ಮಟ್ಟಿಗೆ ಸುದ್ದಿಗಳು ಹರಿದಾಡಿತ್ತು. ಈ ಬಗ್ಗೆ ನಟ ಅನಂತ್ ನಾಗ್ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ. ಫೆ.22ರಂದು ಅನಂತ್ ನಾಗ್ ಅವರು ಬಿಜೆಪಿ ಸೇರ್ಪಡೆ ಆಗುತ್ತಾರೆ ಎನ್ನಲಾಗಿತ್ತು. ಆದರೆ ಅಂದು ಅನಂತ್ ನಾಗ್ ಕಾರ್ಯಕ್ರಮಕ್ಕೆ ಹಾಜರಿರಲಿಲ್ಲ. ಇದು ತೀವ್ರ ಕುತೂಹಲ ಕೆರಳಿಸಿತ್ತು. ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದು ನಿಜ, ಆದರೆ, ಆಗ ಅವರಿಗೆ ರಾಜಕೀಯ ಸೇರುವ ಆಲೋಚನೆ ಇರಲಿಲ್ಲ. ಏಪ್ರಿಲ್ 1ರಂದು ದೆಹಲಿಯಲ್ಲಿ ಅನಂತ್ ನಾಗ್ ಅವರು ಬಿಜೆಪಿ ಸೇರ್ಪಡೆಯಾಗ್ತಾರೆ ಅನ್ನೋ ವದಂತಿ ಹಬ್ಬಿತ್ತು. ಅನಂತ್ ನಾಗ್ ಅವರು ಬೆಂಗಳೂರಿನಲ್ಲೇ ಇದ್ದಾರೆ. ‘ಆ ರೀತಿಯ ಯಾವ ಆಲೋಚನೆ ಇಲ್ಲ. ಯಾವ ಪಕ್ಷಕ್ಕೂ ಸೇರಲ್ಲ. ಇದನ್ನು ಯಾರು…
ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂದಿನ ಸಿನಿಮಾ ಯಾವುದು ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಯಾವಾಗ ಯಶ್ ನಟನೆಯ ಮುಂದಿನ ಸಿನಿಮಾ ಘೋಷಣೆ ಆಗಲಿದೆ ಎಂದು ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಮಧ್ಯೆ ಯಶ್ ಅಭಿಮಾನಿಯೊಬ್ಬ ಯಶ್ ಮನೆ ಮುಂದೆ ಧರಣಿ ಕೂರುವುದಾಗಿ ತಿಳಿಸಿದ್ದಾನೆ. ಯಶ್ ಮನೆ ಮುಂದೆ ಧರಣಿ ಕೂರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೋರ್ವ ಬರೆದುಕೊಂಡಿದ್ದು ಇದನ್ನು ರಾಧಿಕಾ ಪಂಡಿತ್ ಗಮನಕ್ಕೂ ತಂದಿದ್ದಾನೆ. ‘ಅತ್ತಿಗೆ, ಆದಷ್ಟು ಬೇಗ ಯಶ್ ಅವರ ಮುಂದಿನ ಚಿತ್ರದ ಅಪ್ ಡೇಟ್ ಕೊಡಿ. ಕೊಡದೇ ಇದ್ದರೆ ಸ್ಟ್ರೈಕ್ ಮಾಡುತ್ತೇನೆ’ ಎಂದು ಬರೆದಿದ್ದಾನೆ. ಕೆಜಿಎಫ್ 2 ಸಿನಿಮಾದ ನಂತರ ಯಶ್ ನಡೆ ನಿಗೂಢವಾಗಿದ್ದು, ಯಾವ ಭಾಷೆಯಲ್ಲಿ, ಯಾರ ನಿರ್ದೇಶನದಲ್ಲಿ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನುವುದು ಸಸ್ಪೆನ್ಸ್ ಆಗಿಯೇ ಉಳಿದಿದೆ. ಯಶ್ ಜೊತೆ ಹಲವು ನಿರ್ದೇಶಕರ ಹೆಸರುಗಳು ಓಡುತ್ತಿದ್ದರೂ, ಈವರೆಗೂ ಯಶ್ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ತಿಳಿಸುತ್ತೇನೆ ಎಂದು ಹೇಳಿ…
ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟ್ರೈಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಶಿವಾಜಿ ಸುರತ್ಕಲ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ 2 ಸಿನಿಮಾ ಆರಂಭಿಸಿದ್ದರು. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಶಿವಾಜಿ ಸುರತ್ಕಲ್ 2 ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆಯಾಗಿದ್ದು, ನಾನು ಹಾಗೂ ರಮೇಶ್ ಸರ್ ವಾಟ್ಸಪ್ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್ ಡೌನ್ ನಿಂದ ತೊಂದರೆ ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈಗ ಟ್ರೈಲರ್ ಬಿಡುಗಡೆಯಾಗಿದ್ದು, ಎಲ್ಲರಲ್ಲೂ ಮನೆ ಮಾಡಿರುವ ‘ಮಾಯಾವಿ ಯಾರು?’ ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿದ್ದಾರೆ. “ಒಂದೊಳ್ಳೆ…
ಇಟಲಿ: ಇಟಲಿ ಸರ್ಕಾರವು ಇಟಾಲಿಯನ್ ಭಾಷೆಯೇ ಸಾರ್ವಭೌಮ ಎಂಬುದನ್ನು ಜಾರಿಗೆ ತರುವ ಮೂಲಕ ಇಂಗ್ಲಿಷ್ ಭಾಷೆ ಬಳಕೆಯ ನಿಷೇಧಕ್ಕೆ ಮುಂದಾಗಿದೆ. ದೇಶದಲ್ಲಿ ವಿದೇಶಿ ಭಾಷೆ ಬಳಕೆ, ಅದರಲ್ಲೂ ಇಂಗ್ಲಿಷ್ ಭಾಷೆಯ ಬಳಕೆಯನ್ನು ನಿಯಂತ್ರಿಸುವ ದಿಸೆಯಲ್ಲಿ ಮಹತ್ವದ ಕರಡು ವಿಧೇಯಕವೊಂದನ್ನು ಮಂಡಿಸಲು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮುಂದಾಗಿದ್ದಾರೆ. ಇದೀಗ ಸರ್ಕಾರಿ ಅಥವಾ ಖಾಸಗಿ ಕಚೇರಿಗಳಲ್ಲಿ, ಸಂಸ್ಥೆಗಳಲ್ಲಿ ಇಂಗ್ಲಿಷ್ ಪದಗಳನ್ನು ಬಳಸಿದರೆ ಅವರಿಗೆ 1.08 ಲಕ್ಷ ಡಾಲರ್ (ಸುಮಾರು 89 ಲಕ್ಷ ರೂಪಾಯಿ) ದಂಡ ವಿಧಿಸುವ ಕ್ರಮವೂ ವಿಧೇಯಕದಲ್ಲಿದೆ. ಆ ಮೂಲಕ ದೇಶದಲ್ಲಿ ಇಟಲಿಯಲ್ಲಿಯೇ ಜನ ವ್ಯವಹರಿಸುವಂತೆ ಮಾಡುವುದು ಮೆಲೋನಿ ಅವರ ಉದ್ದೇಶವಾಗಿದೆ. ಈಗಾಗಲೇ ಇಂಗ್ಲಿಷ್ ಬಳಕೆಯ ನಿಷೇಧದ ಕುರಿತು ವಿಧೇಯಕದ ಕರಡು ಪ್ರತಿ ಸಿದ್ಧವಾಗಿದೆ. ವಿಧೇಯಕದ ಅಂತಿಮ ಪ್ರತಿ ಸಿದ್ಧವಾಗಿ, ಅದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಿ, ಅಂಗೀಕಾರ ಪಡೆದ ನಂತರ ಕಾನೂನು ಜಾರಿಗೆ ಬರಲಿದೆ. ಎಲ್ಲರೂ ಇಟಾಲಿಯನ್ ಭಾಷೆಯಲ್ಲಿಯೇ ಮಾತನಾಡುವ ಮೂಲಕ ಸ್ವಾಭಿಮಾನ ಮೆರೆಯಬೇಕು ಎಂಬದು ಮೆಲೋನಿ ಅವರ ಉದ್ದೇಶವಾಗಿದ್ದು,…
ಚಂಡೀಗಢ: 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಂಜಾಬ್ ಕಾಂಗ್ರೆಸ್ (Punjab Congress) ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶನಿವಾರ ಜೈಲಿನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಧು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʻʻಪ್ರಜಾಪ್ರಭುತ್ವವು ಸರಪಣಿಯಲ್ಲಿ ಬಂಧಿತವಾಗಿದೆʼʼ ಎಂದು ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಿಡಿಕಾರಿದ್ದಾರೆ. ಮುಂದುವರಿದು ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ (Rahul Gandhi) ಅವರ ರೂಪದಲ್ಲಿ ಕ್ರಾಂತಿ ಬಂದಿದೆ, ಅವರು ಸರ್ಕಾರವನ್ನ ಸಮರ್ಥವಾಗಿ ಎದುರಿಸಲಿದ್ದಾರೆ’ ಎಂದು ಹೊಗಳಿದ್ದಾರೆ. ಆಮ್ ಆದ್ಮಿ ಪಕ್ಷದ ಸರ್ಕಾರವಿರುವ ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಬಿಜೆಪಿಯವರು ಪಂಜಾಬ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ನಾನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಲ್ಲ ಕಾಂಗ್ರೆಸ್…
ರಾಯಪುರ: ನಕ್ಸಲರ ಗುಂಪೊಂದು ಪ್ರಯಾಣಿಕರ ಬಸ್‌ಗೆ ಬೆಂಕಿ ಹಚ್ಚಿ 15 ಜನ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಮಾಲೆವಾಹಿ ಪ್ರದೇಶದಲ್ಲಿ ನಡೆದಿದೆ. ಮಾರ್ಚ್ 31ರಂದು ಮಧ್ಯಾಹ್ನ ಬಸ್ ದಾಂತೇವಾಡದಿಂದ ಸುಕ್ಮಾಗೆ ತೆರಳುತ್ತಿದ್ದ ಸಂದರ್ಭ, ಮಾಲೆವಾಹಿ ಬಳಿ ನಕ್ಸಲರು ಬಸ್ ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ 15 ಜನ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಘಟನೆಯನ್ನು ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಕ್ಸಲರ ದಾಳಿಯನ್ನು ಖಂಡಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿದ್ದಾರೆ. ನಾಗರಿಕರ ಮೇಲೆ ದಾಳಿ ನಡೆಯುತ್ತಿರುವುದು ಛತ್ತೀಸ್‌ಗಢದಲ್ಲಿ ಇದೇ ಮೊದಲಲ್ಲ. ಈ ಪ್ರದೇಶವು ಹಲವು ವರ್ಷಗಳಿಂದ ನಕ್ಸಲ್ ಹಿಂಸಾಚಾರವನ್ನು ಎದುರಿಸುತ್ತಿದೆ. ಅಮಾಯಕ ನಾಗರಿಕರು ಆಗಾಗ ಅವರ ದಾಳಿಗೆ ಒಳಗಾಗುತ್ತಾರೆ. ಈ ಪ್ರದೇಶದಲ್ಲಿ ನಕ್ಸಲ್ ಬಂಡಾಯವನ್ನು ಎದುರಿಸಲು ಸರ್ಕಾರ…
ಪಾಟ್ನಾ: ರಾಮನವಮಿಯ (Ram Navami) ಹಿಂಸಾಚಾರದ (Violence) ಬಳಿಕ ಬಿಹಾರದಲ್ಲಿ (Bihar) ಶನಿವಾರ ಮತ್ತೆ ಘರ್ಷಣೆ ವರದಿಯಾಗಿದೆ. ಬಿಹಾರದ ಸಸಾರಾಮ್ (Sasaram) ಪಟ್ಟಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು (Bomb Blast), ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.ಸಸಾರಾಮ್ ಡಿಎಂ ಈ ಬಗ್ಗೆ ಮಾಹಿತಿ ನೀಡಿದ್ದು, ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟವಾಗಿದೆ. ಗಾಯಾಳುಗಳನ್ನು ಬಿಹೆಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಘಟನೆ ಬಗ್ಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾರ್ಚ್ 31 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಬೇಕಿದ್ದ ನಳಂದದ ಬಿಹಾರಶರೀಫ್, ರೋಹ್ಯಾಸ್‌ನ ಸಸಾರಾಮ್‌ನಲ್ಲಿ ಘರ್ಷಣೆ ನಡೆದಿತ್ತು. ಜಿಲ್ಲೆಯಲ್ಲಿ ಘರ್ಷಣೆ ನಡೆದಿದ್ದ ಹಿನ್ನೆಲೆ ಸೆಕ್ಷನ್ 144 ಹೇರಲಾಗಿತ್ತು. ಮಾತ್ರವಲ್ಲದೇ ಅಮಿತ್ ಶಾ ಅವರ ಸಸಾರಾಮ್ ಭೇಟಿಯನ್ನೂ ರದ್ದುಗೊಳಿಸಲಾಗಿತ್ತು. ಪೊಲೀಸರ ಪ್ರಕಾರ ರಾಮನವಮಿ ಆಚರಣೆ ವೇಳೆ ಹಿಂಸಾಚಾರ ನಡೆದಿರುವ ಹಿನ್ನೆಲೆ ರಾಜ್ಯಾದ್ಯಂತ ಕೆಲ…