ಬೆಂಗಳೂರು:- ವಾಹನ ಸವಾರರು ಇದು ನೀವು ನೋಡಲೇಬೇಕಾದ ಸ್ಟೋರಿ. ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ. ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೆಪ್ಟೆಂಬರ್ 8 ರವಿರಾದಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ನಡೆಯುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧಿಸಿರುವ ರಸ್ತೆಗಳು: ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ಕಡೆಗೆ ರಸ್ತೆಯ…
Author: Prajatv Kannada
ಬೆಂಗಳೂರು:- ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಹೀಗಾಗಿ ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಮಂಗನ ಕಾಯಿಲೆಯ ಶಂಕಿತ ಪ್ರಕರಣಗಳ ಬಗ್ಗೆ ನಿಗಾ ಇಡಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳು, ಬಂದರು ಮತ್ತು ರಾಜ್ಯದ ಎಲ್ಲಾ ಕಡೆಗಳ ಪ್ರವೇಶ ಕೇಂದ್ರಗಳ ವ್ಯವಸ್ಥಾಪಕ ಅಧಿಕಾರಿಗಳಿಗೆ ಎಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ…
ಬೆಂಗಳೂರು:- ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಪೊಲೀಸರು ಅಮಾನತು ಮಾಡಿದ್ದಾರೆ.ಜೈಲರ್ ಪರಮೇಶ ನಾಯಕ್. ಅಸಿಸ್ಟೆಂಟ್ ಜೈಲರ್ ಕೆ.ಪಿ.ರಾಯಮಾನೆ ಹಾಗೂ ವಾರ್ಡರ್ ಸುದರ್ಶನ್ ಅಮಾನತಾಗಿದ್ದಾರೆ. ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಇತರರ ಜೊತೆ ನಟ ದರ್ಶನ್ ಕುಳಿತು ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಕುಳಿತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂದು ವಿವಾದ ಹುಟ್ಟುಕೊಂಡಿತು. ನಟ ದರ್ಶನ್ ಜೈಲು ಫೋಟೊ ವೈರಲ್ ಡ್ಯಾಮೇಜ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಯಿತು. ಇದರ ಬೆನ್ನಲ್ಲೇ ಜೈಲಿನಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ 9 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ.ಶೇಷಮೂರ್ತಿ ಅವರೂ ಅಮಾನತುಗೊಂಡಿದ್ದರು. ಈಗ ಅವರ ಸ್ಥಾನಕ್ಕೆ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಸುರೇಶ್ ನೇಮಕಗೊಂಡಿದ್ದಾರೆ
ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲಲ್ಲಿ ಒಟ್ಟಿಗಿದ್ದ ದರ್ಶನ್ ಗ್ಯಾಂಗ್ ಈಗ ದಿಕ್ಕಾಪಾಲಾಗುತ್ತಿದೆ. ನಟ ದರ್ಶನ್‌ರನ್ನು ಬಳ್ಳಾರಿ ಸೆಂಟ್ರಲ್ ಜೈಲ್‌ಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಕೆಲಹೊತ್ತಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಶಿಫ್ಟ್ ಮಾಡಲಾಗುತ್ತೆ. ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಒಳಪಡಿಸಲಾಗುತ್ತದೆ. ಕೊಲೆ ಕೇಸ್ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲ್‌ಗೆ ಶಿಫ್ಟ್ ಮಾಡಲಾಗ್ತಿದೆ. ಹದಿನಾರು ಎಕರೆ ವಿಸ್ತೀರ್ಣದಲ್ಲಿರುವ ಬಳ್ಳಾರಿ ಜೈಲಿನಲ್ಲಿ ಬಿಗಿ ಭದ್ರತೆ ಇದೆ. ಇನ್ನು ನಟ ದರ್ಶನ್ರನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡ್ತಿರೋ ಬಗ್ಗೆ ಈಗಾಗಲೇ ಜೈಲಾಧಿಕಾರಿಗೆ ಮಾಹಿತಿ ನೀಡಲಾಗಿದೆ. ವಿಶೇಷ ಭದ್ರತಾ ವಿಭಾಗದ 15ನೇ ಸೆಲ್ನಲ್ಲಿ ದರ್ಶನ್‌ರನ್ನು ಇರಿಸಲು ನಿರ್ಧರಿಸಲಾಗಿದೆ. ಈಗಾಗಲೇ ಮೂವರು ಸಿಬ್ಬಂದಿಯನ್ನು ದರ್ಶನ್ ಭಧ್ರತೆಗೆ ಅಂತ ನಿಯೋಜನೆ ಮಾಡಲಾಗಿದೆ. ದರ್ಶನ್ಗೆ 24 ಗಂಟೆಯೂ ಸಿಸಿಟಿವಿ ಹಾಗೂ ಬಾಡಿವೋರ್ನ್ ಕ್ಯಾಮರಾ ಕಣ್ಗಾವಲು…
ಬೆಂಗಳೂರು ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿದ್ದ ವಿ.ಶೇಷಮೂರ್ತಿ ಜಾಗಕ್ಕೆ ಕೆ.ಸುರೇಶ್ ಅವರನ್ನು ನೇಮಿಸಿ ಸರಕಾರ ಆದೇಶದಲ್ಲಿ ತಿಳಿಸಿದೆ. ನಟ ದರ್ಶನ್‍ಗೆ ರಾಜಾತಿಥ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ, ಈಗಾಗಲೇ 9 ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಪರಪ್ಪನ ಅಗ್ರಹಾರಕ್ಕೆ ಕೆಐಎಸ್‍ಎಫ್ ಪೊಲೀಸರಿಂದ ಭದ್ರತೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೆಐಎಸ್‍ಎಫ್ (ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ) ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶಿಸಬೇಕಾಗಿದೆ. ಇನ್ನು ಕೇಂದ್ರ ಕಾರಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು…
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟಿ ಪವಿತ್ರಾ ಗೌಡ ಜೈಲು ಸೇರಿ ಮೂರು ತಿಂಗಳಾಗಿದೆ. ಇತ್ತ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆಗಿರುವ ಪವಿತ್ರಾ ಗೌಡ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಇದೀಗ ಇಂದು ಮತ್ತೆ ವಿಚಾರಣೆ ನಡೆಯಲಿದೆ. ನಿನ್ನೆ (ಆಗಸ್ಟ್ 27) ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಮಾಡಲಾಗಿದೆ. ಆದರೆ ಬುಧವಾರಕ್ಕೆ (ಆ.28) ವಿಚಾರಣೆ ಮುಂದೂಡಿಕೆ ಆಗಿದೆ. ಇಂದು ಮಧ್ಯಾಹ್ನ 2.45ಕ್ಕೆ ವಿಚಾರಣೆ ನಡೆಯಲಿದೆ. ಪವಿತ್ರಾ ಗೌಡ, ದರ್ಶನ್ ಹಾಗೂ ಸಹಚರರ ಮೇಲೆ ಇರುವುದು ಗಂಭೀರ ಆರೋಪ ಆದ್ದರಿಂದ ಹಲವು ಆಯಾಮದಲ್ಲಿ ತನಿಖೆ ಮಾಡಲಾಗಿದೆ. ಜಾಮೀನು ಪಡೆಯಲು ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲರಾದ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದಾರೆ.…
ಮಲಯಾಳಂ ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟ ಮೋಹನ್ಲಾಲ್ ರಾಜಿನಾಮೆ ನೀಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳ ಬಗೆ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಸಲ್ಲಿಕೆ ಮಾಡಿದ ಬಳಿಕ ದೊಡ್ಡ ಮಟ್ಟದಲ್ಲಿ ಬದಲಾವಣೆ ನಡೆಯುತ್ತಿದೆ. ಮಲಯಾಳಂ ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ಲಾಲ್ ಮಾತ್ರವಲ್ಲದೇ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಸಾಮೂಹಿಕವಾಗಿ ರಾಜಿನಾಮೆ ನೀಡಿದ್ದಾರೆ ಎಂದು ವರದಿ ಆಗಿದೆ. ಮಾಲಿವುಡ್ ಸಿನಿಮಾ ರಂಗದ ಪ್ರಭಾವಿಗಳ ಮೇಲೂ ಗಂಭೀರ ಆರೋಪಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸ್ಥಾನಗಳಿಗೆ ರಾಜಿನಾಮೆ ನೀಡಲಾಗುತ್ತಿದೆ. ಮಲಯಾಳಂ ಚಿತ್ರರಂಗದಲ್ಲಿ ಈ ಹಿಂದೆ ಖ್ಯಾತ ನಟಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಳಿಕ ಹೇಮಾ ಸಮಿತಿ ರಚನೆ ಆಗಿತ್ತು. ಇತ್ತೀಚೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈ ಸಮಿತಿಯು ವರದಿ ಸಲ್ಲಿಸಿದೆ. ಆ ವರದಿಯಲ್ಲಿ ಶಾಕಿಂಗ್ ಸಂಗತಿಗಳು ಬಯಲಾಗಿದ್ದು, ಮಲಯಾಳಂ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್, ಲೈಂಗಿಕ ಕಿರುಕುಳ ಹೇರಳವಾಗಿದೆ ಎಂಬುದು ಹೇಮಾ…
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ಲೈಂಗಿಕ ಆರೋಪಗಳು ಕೇಳಿ ಬರ್ತಿದೆ. ಇದೀಗ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಸಿನಿಮಾ ನಿರ್ಮಾಪಕ ರಂಜಿತ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರು ಕೊಚ್ಚಿ ನಗರ ಪೊಲೀಸ್ ಕಮಿಷನರ್‌ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ನಟಿ ಆರೋಪಿಸಿದ್ದಾರೆ. ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವರದಿ ಆಗಿದೆ. ರಂಜಿತ್ ವರ್ಷಗಳ ಹಿಂದೆ ಸ್ಕ್ರಿಪ್ಟ್ ಕುರಿತು ಚರ್ಚಿಸುವಾಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ಮಿತ್ರ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಸಿಗುತ್ತಿರುವ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಇದು ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಇಂದು (ಆಗಸ್ಟ್ 28) ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆ ಬಳಿಕ ಈ ಪ್ರಕ್ರಿಯೆ ಆರಂಭ ಆಗುವ ಸಾಧ್ಯತೆ ಇದೆ. ಅಂದು ಹಾಗೆ ಈ ಹಿಂದೆ ರೀಲ್ ಖೈದಿಯಾಗಿ ಬಳ್ಳಾರಿ ಜೈಲಿಗೆ ಹೋಗಿದ್ದ ದರ್ಶನ್ ಇದೀಗ ರಿಯಲ್ ಖೈದಿಯಾಗಿ ಹೋಗುತ್ತಿದ್ದಾರೆ. ದರ್ಶನ್ ಈ ಹಿಂದೆ ತರುಣ್ ಸುಧೀರ್ ನಿರ್ದೇಶನದ ‘ಚೌಕ’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿ ಜೈಲಿನ ದೃಶ್ಯವೊಂದು ಬರುತ್ತದೆ. ಅದನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲೇ ಶೂಟ್ ಮಾಡಲಾಗಿತ್ತು. ದರ್ಶನ್ ಕೂಡ ಈ ದೃಶ್ಯದಲ್ಲಿ ಇದ್ದರು. ಈಗ ಅವರು…
ಕನ್ನಡದ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಪ್ರಭಾಕರ್ ಅವರಿಗೆ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಖ್ಯಾತ ಕಲಾವಿದರ ಜೊತೆ ಉತ್ತಮ ಬಾಂದವ್ಯ ಹೊಂದಿದ್ದರು. ಕಾಶಿನಾಥ್, ಶಿವರಾಜ್ಕುಮಾರ್, ವಿಷ್ಣುವರ್ಧನ್, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಹೆಸರು ಮಾಡಿದ್ದ ಪ್ರಭಾಕರ್ ನಿಧನ ಚಿತ್ರರಂಗಕ್ಕೆ ತೀವ್ರ ನೋವುಂಟು ಮಾಡಿದೆ. ಕಾಶಿನಾಥ್-ಭವ್ಯ ನಟನೆಯ ‘ಅವಳೇ ನನ್ನ ಹೆಂಡ್ತಿ’, ವಿಷ್ಣುವರ್ಧನ್-ಪ್ರೇಮಾ ಅಭಿನಯದ ‘ಎಲ್ಲರಂಥಲ್ಲ ನನ್ನ ಗಂಡ’, ಶಿವರಾಜ್ಕುಮಾರ್-ರಾಧಿಕಾ ಕುಮಾರಸ್ವಾಮಿ ನಟಿಸಿದ ‘ಅಣ್ಣ-ತಂಗಿ’, ಉಪೇಂದ್ರ-ಶಿವರಾಜ್ಕುಮಾರ್ ಒಟ್ಟಾಗಿ ಅಭಿನಯಿಸಿದ ‘ಲವ-ಕುಶ’ ಮುಂತಾದ ಸಿನಿಮಾಗಳನ್ನು ಕೆ. ಪ್ರಭಾಕರ್…