Author: Prajatv Kannada

ಉತ್ತರ ಕನ್ನಡ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಸಲಾಗಿದೆ. ಸಿಎಂ ಸಂಚರಿಸುವ ರಸ್ತೆ ಬದಿಯಲ್ಲಿನ ಮರಗಳಿಗೆ ‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಅಳವಡಿಸಲಾಗಿದೆ. ರಸ್ತೆ ಪಕ್ಕದ ಕಟ್ಟಡಗಳಿಗೆ ಸಚಿವ ಹೆಬ್ಬಾರ್ ಫೋಟೋ ಅಳವಡಿಸಲಾಗಿದೆ. ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.

Read More

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ವಿಜಯ ಸಂಕಲ್ಪ ರಥಯಾತ್ರೆಗೆ (Vijay Sankalpa Rath Yatra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ (Basavakalyan) ಬರಲಿದ್ದಾರೆ. ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದರು. ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು. ಬಸವಕಲ್ಯಾಣ ಪಟ್ಟಣದ ಥೇರು ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶ್ರೀರಾಮುಲು,…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿಯು ಕಳೆದ ಜನವರಿ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6 ಲಕ್ಷದ 77 ಸಾವಿರದ 190 ರೂ ಹಣವನ್ನು ಸಂಗ್ರಹಿಸಿದ್ದು, ಈ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತನಿಖೆ ಮಾಡಿ 3591 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 6,77,190ರೂಗಳನ್ನು ದಂಡ ವಸೂಲಿ ಮಾಡಿ ಹಾಗೂ ಕರ್ತವ್ಯ ಲೋಪ ಆರೋಪದಡಿಯಲ್ಲಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1521 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ 322 ಪುರುಷ ಪ್ರಯಾಣಿಕರಿಂದ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿಟ್ಟ ಆಸನಗಳನ್ನು ಅತಿಕ್ರಮಿಸಿ ಕುಳಿತು ಪ್ರಯಾಣ ಮಾಡುತ್ತಿದ್ದ ಆರೋಪದ ಮೇರೆಗೆ ಒಟ್ಟು 32,200 ರೂ ದಂಡ ಸಂಗ್ರಹಿಸಲಾಗಿದೆ. ಇನ್ನು ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್/ದಿನದ ಪಾಸು/ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ. ಹಾಗೂ…

Read More

ಬೆಂಗಳೂರು: ಇದು ನನ್ನ ಕೊನೆಯ ಅಧಿವೇಶನ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಭಾವುಕರಾದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಇದು ನನ್ನ ಕೊನೆಯ ಅಧಿವೇಶನ. ಕಾಂಗ್ರೆಸ್ ನಾಯಕರು ಪದೇ ಪದೇ ಪಕ್ಷ ನನ್ನನ್ನ ಕಡೆಗಣಿಸಿದೆ ಎನ್ನುತ್ತಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಎಂದು ನನ್ನ ಕಡೆಗಣಿಸಿಲ್ಲ. ಯಡಿಯೂರಪ್ಪನವರಿಗೆ ಮೋದಿ ಗೌರವ ಕೊಟ್ಟಿದ್ದಾರೆ, ಒಳ್ಳೆಯ ಅವಕಾಶ, ಸ್ಥಾನಮಾನ ಕೊಟ್ಟಿದ್ದಾರೆ. ಅವರನ್ನ ನಾನು‌ ಮರೆಯಲು ಸಾಧ್ಯವಿಲ್ಲ. ಪಕ್ಷದ ಅವಕಾಶದಿಂದ 4 ಬಾರಿ ಮುಖ್ಯಮಂತ್ರು ಆಗಿದ್ದೇನೆ. ಸೂರ್ಯ,ಚಂದ್ರ ಇರುವುದು ಎಷ್ಟು ಸತ್ಯವೋ, ಬಿಜೆಪಿ ಅಧಿಕಾರಕ್ಕೆ‌ ಬರುವುದು ಅಷ್ಟೇ ಸತ್ಯ. ಇದು ನಾನು‌ ಭವಿಷ್ಯ ಹೇಳ್ತೇನೆ ಅಂದು ಕೊಳ್ಳಬೇಡಿ, ನಾಳೆಯಿಂದ ನಾನು ರಾಜ್ಯ ಪ್ರವಾಸ ಮಾಡ್ತೇನೆ. ಇನ್ನೆರಡು ತಿಂಗಳಲ್ಲಿ ನೀವೇ ನೋಡಿ, ಯಾವ ರೀತಿ ಗಾಳಿ ಬೀಸುತ್ತೆ ಅಂತ ನಾವು ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

Read More

ಚಾಮರಾಜನಗರ: ಕೊಳ್ಳೇಗಾಲದಲ್ಲಿ ತಿಮಿಂಗಲ ವಾಂತಿ ಸಾಗಾಟ: 15 ಕೆಜಿ ಮಾಲು ಸಮೇತ ನಾಲ್ವರ ಬಂಧನ ಒಂದು ಕೆ.ಜಿ.ಗೆ ಕೋಟಿ ಬೆಳೆಬಾಳಲಿದೆ ಎನ್ನುವ ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ನ್ನು ಕೆಜಿಗಟ್ಟಲೇ ವಶಪಡಿಸಿಕೊಂಡಿರುವ ಘಟನೆ ಕೊಳ್ಳೇಗಾಲ ಬಸ್ ನಿಲ್ದಾಣ ಸಮೀಪ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅಲ್ಲಮಜ್ಜಿ ರಸ್ತೆಯ ಕೆ.ಬಿ.ವಿರೂಪಾಕ್ಷ(62),  ಕೇರಳ ಮೂಲದ ಶಂಸುದ್ಧೀನ್ ಒತಿಯೋತ್(48),  ತ್ರೆಸೀಮಾ ವರ್ಘಸೆ@ ಸುಜಾ(55) ಹಾಗೂ ಸಜಿ ಸುಬಾಸ್ (41)  ಬಂಧಿತ ಆರೋಪಿಗಳು. ಇವರುಗಳು ಬೆಂಗಳೂರಿನ ಕಡೆಯ ಕಾಳಸಂತೆಯಲ್ಲಿ ಆಂಬರ್ ಗ್ರಿಸ್(ತಿಮಿಂಗಿಲ ವಾಂತಿ) ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಸಾಗಾಣಿಕೆ ಮಾಡುತ್ತಿರುವುದು ಖಚಿತ ಪಡಿಸಿಕೊಂಡ ಅರಣ್ಯ ಸಂಚಾರಿ ದಳದ ಪೊಲೀಸರು ಕೊಳ್ಳೇಗಾಲದ ಬಸ್ ನಿಲ್ದಾಣದ ಸಮೀಪ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 14 ಕೆ.ಜಿ 950 ಗ್ರಾಂ ಆಂಬರ್ ಗ್ರಿಸ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

Read More

ಶ್ರೀನಗರ: ಉಗ್ರರ (Terrorists) ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ (Pulwama) ನಡೆದಿದೆ. ಸಂಜಯ್ ಶರ್ಮಾ (40) ಮಾರುಕಟ್ಟೆಗೆ ತೆರಳುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು. ಸಂಜಯ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್‍ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಉಗ್ರರ ದಾಳಿಯಲ್ಲಿ ಹಿಂದೂ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಸಂಜಯ್ ಶರ್ಮಾ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಹಿಂದೂ ನಾಗರಿಕರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಕಳೆದ ವರ್ಷ ಕಾಶ್ಮೀರಿ ಪಂಡಿತರು ಮತ್ತು ಸ್ಥಳೀಯರಲ್ಲದವರ ಮೇಲೆ ಸರಣಿ ಉದ್ದೇಶಿತ ದಾಳಿಗಳು ನಡೆದಿವೆ.

Read More

ಲಖನೌ: ಮತ್ತೊಂದು ಹಿಟ್ ಆಂಡ್ ರನ್ ಪ್ರಕರಣ ಉತ್ತರಪ್ರದೇಶದಾದ್ಯಂತ ಸದ್ದು ಮಾಡಿದೆ. ಟ್ರಕ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದು 6 ವರ್ಷದ ಮಗುವನ್ನು 2 ಕಿ.ಮೀಗೂ ಅಧಿಕ ದೂರ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಜ್ಜ ಉದಿತ್ ನಾರಾಯಣ ಚಾನ್ಸೋರಿಯಾ(67)ಹಾಗೂ ಮೊಮ್ಮಗ ಸಾತ್ವಿಕ್ ಮಾರುಕಟ್ಟೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ, ಬಳಿಕ ಉದಿತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ, ಸಾತ್ವಿಕ್ನನ್ನು 2 ಕಿ.ಮೀ ದೂರದವರೆಗೆ ಟ್ರಕ್ ಎಳೆದುಕೊಂಡು ಹೋಗಿದೆ. ಕಾನ್ಪುರ್-ಸಾಗರ್ ಹೆದ್ದಾರಿ NH86ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಹಲವು ಬೈಕ್ ಸವಾರರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ್ದನ್ನು ಕಾಣಬಹುದು, ಕೊನೆಗೆ ರಸ್ತೆಯಲ್ಲಿ ಕಲ್ಲುಗಳನ್ನಿಟ್ಟ ಕಾರಣ ಟ್ರಕ್ ನಿಂತಿತ್ತು, ಟ್ರಕ್ ಚಾಲಕನನ್ನು ಥಳಿಸಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

Read More

ಬಹುಕೋಟಿ ವಂಚನೆ ಆರೋಪಿ, ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪರ ನಿಂತಿದ್ದಾರೆ. ಮೊನ್ನೆಯಷ್ಟೇ ಕೋರ್ಟಿಗೆ ಬಂದಿದ್ದ ಸುಕೇಶ್, ನಟಿಯ ಬಗ್ಗೆ ಅಚ್ಚರಿ ಎನ್ನುವಂತಹ ಮಾತುಗಳನ್ನು ಆಡಿದ್ದಾನೆ. ತನ್ನ ಮೇಲಿರುವ ಆರೋಪಕ್ಕೂ ಜಾಕ್ವೆಲಿನ್ ಗೂ ಯಾವುದೇ ಸಂಬಂಧವಿಲ್ಲ. ಆಕೆ ಅಮಾಯಕಿ ಎನ್ನುವ ಅರ್ಥದಲ್ಲಿ ಸುಕೇಶ್ ಹೇಳಿಕೆ ನೀಡಿದ್ದಾನೆ. ಕೋರ್ಟಿನಲ್ಲಿ ಜಾಕ್ವೆಲಿನ್ ಪರ ಮಾತನಾಡಿದ್ದ ಸುಕೇಶ್, ಆಚೆ ಬಂದ ನಂತರ ಪ್ರೇಮಿಗಳ ದಿನಕ್ಕೆ ಆ ನಟಿಗೆ ಶುಭಾಶಯ ಕೋರಿದ್ದ. ಜಾಕ್ವೆಲಿನ್ ತುಂಬಾ ಒಳ್ಳೆಯ ಹುಡುಗಿ. ಆಕೆ ಯಾವ ತಪ್ಪು ಮಾಡಿಲ್ಲ. ಆಕೆಯ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗುತ್ತಿದೆ. ಅದಲ್ಲೆವನ್ನೂ ಎದುರಿಸುವ ಶಕ್ತಿ ಆಕೆಗೆ ಇದೆ ಎಂದು ಹೇಳಿದ್ದ. ಈ ಕೇಸ್ ನಲ್ಲಿ ಆಕೆ ಗೆದ್ದು ಬರುತ್ತಾಳೆ ಎನ್ನುವ ವಿಶ್ವಾಸವನ್ನೂ ವ್ಯಕ್ತ ಪಡಿಸಿದ್ದ. ಇದೀಗ ಜೈಲಿನಿಂದಲೇ ಸುಕೇಶ್ ಮತ್ತೊಂದು ಸಂದೇಶವನ್ನು ಜಾಕ್ವೆಲಿನ್ ಗೆ ಕಳುಹಿಸಿದ್ದಾನೆ. ‘ಮುಂದಿನ ವರ್ಷ ನಾನು ಚುನಾವಣೆಗೆ ನಿಲ್ಲುತ್ತೇನೆ. ನಾನು ನಿನ್ನನ್ನು ರಕ್ಷಿಸುತ್ತೇನೆ’ ಎಂದು ಅಭಯ ನೀಡಿದ್ದಾನೆ. ಸುಕೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಕೂಡ…

Read More

ಶಿವಮೊಗ್ಗ: ಸೋಮವಾರ ನನ್ನ ಜೀವನದಲ್ಲಿ ಮರೆಲಾಗದ ಕ್ಷಣ. ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲಕ್ಷಾಂತರ ಜನರು ಈ ವಿಶೇಷ ಕ್ಷಣದಲ್ಲಿ ಭಾಗವಹಿಸಿ. ಇಷ್ಟು ಬೇಗ ವಿಮಾನ ನಿಲ್ದಾಣ (Shivamogga Airport) ಆಗುತ್ತೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಬೆಂಗಳೂರಿನ ನಂತರ ಇದೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ ಎಂದರು. ಮೋದಿಯವರ ಇಡೀ ದೇಶಕ್ಕೆ ಆದರ್ಶವಾದ ವ್ಯಕ್ತಿ ಎಂದು ಹೇಳುತ್ತಾ ನಾಳಿನ ಕಾರ್ಯಕ್ರಮಕ್ಕೆ ಆಗಮಿಸಿ ಶಾಂತ ರೀತಿಯಲ್ಲಿ ವರ್ತಿಸುವಂತೆ ಇದೇ ವೇಳೆ ಬಿಎಸ್‍ವೈ ಮನವಿ ಮಾಡಿದರು. ಏರ್ ಪೋರ್ಟ್ ಲೋಕಾರ್ಪಣೆ ಬಿಎಸ್‍ವೈಗೆ ಗಿಫ್ಟ್ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ರಾಜಾಹುಲಿ, ನೀವು ಏನು ಬೇಕಾದ್ರು ಕರೀರಿ. ಮೋದಿಯವರನ್ನು ಲೋಕಾರ್ಪಣೆ ಮಾಡಲು ಕರೆದಿದ್ದೆವು. ಆಗ ನಿಮ್ಮ ಹುಟ್ಟು ಹಬ್ಬದ ದಿನದಂದೆ ಬರುತ್ತೇವೆ ಎಂದು ಹೇಳಿದ್ದಾರೆ. ಅದು ನನಗೆ ಸಂತೋಷ ತರುವ ವಿಷಯವಾಗಿದೆ ಎಂದು…

Read More

ಕನ್ನಡ ಚಲನಚಿತ್ರ ಕಪ್ ಗೆ ತೆರೆಬಿದ್ದಿದೆ. ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಧನಂಜಯ್ ನೇತೃತ್ವದ  ಗಂಗಾ ವಾರಿಯಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಗಂಗಾ ವಾರಿಯರ್ಸ್ ಮತ್ತು ರಾಷ್ಟ್ರಕೂಟ ಪ್ಯಾಂಥರ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಗಂಗಾ ವಾರಿಯರ್ಸ್ ಚಾಂಪಿಯನ್ ಆಗಿ ಕಪ್ ಅನ್ನು ಪಡೆದುಕೊಂಡಿದೆ. ಎರಡು ದಿನಗಳ ಕಾಲ ನಡೆದ ಪಂದ್ಯಗಳಲ್ಲಿ ಆರು ತಂಡಗಳು ಭಾಗಿಯಾಗಿದ್ದವು. ತಲಾ ಎರಡು ಪಂದ್ಯಗಳನ್ನು ಆಡಿದವು. ಧನಂಜಯ್, ಗಣೇಶ್, ಶಿವರಾಜ್ ಕುಮಾರ್, ಸುದೀಪ್, ಉಪೇಂದ್ರ ಮತ್ತು ಧ್ರುವ ಸರ್ಜಾ ತಲಾ ಒಂದೊಂದು ತಂಡದ ನೇತೃತ್ವವಹಿಸಿದ್ದರು. ಸಿನಿಮಾ ನಟರು ಮತ್ತು ತಂತ್ರಜ್ಞರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಕನ್ನಡ ಚಲನಚಿತ್ರ ಕಪ್ ಪಂದ್ಯದಲ್ಲಿ ಭಾಗಿಯಾಗಿದ್ದರು. ಈ ಸಲದ ಪಂದ್ಯಾವಳಿ ಹಲವು ವಿಶೇಷಗಳಿಂದ ಕೂಡಿತ್ತು. ಆಡಿದ ಎರಡು ಪಂದ್ಯಗಳನ್ನು ಧನಂಜಯ ಅಂಡ್ ಟೀಮ್ ಗೆದ್ದರೆ, ಶಿವರಾಜ್ ಕುಮಾರ್ ನೇತೃತ್ವದ ತಂಡ ಒಂದೇ ಒಂದು ಪಂದ್ಯವನ್ನೂ ಗೆಲ್ಲಲಾಗಲಿಲ್ಲ. ಉಳಿದ ಎಲ್ಲ ತಂಡಗಳು ಒಂದೊಂದು…

Read More