ಗೋಕಾಕ್:- ನನ್ನ ರಾಜಕೀಯ ಜೀವನದಲ್ಲೇ ಇರದ ಕಪ್ಪು ಚುಕ್ಕಿ ಹುಡುಕಲು ಮೈತ್ರಿ ನಾಯಕರು ಯತ್ನ ಮಾಡಿದ್ದಾರೆ ಎಂದು CM ಸಿದ್ದರಾಮಯ್ಯ ವ್ಯಂಗ್ಯವಾಡಿದರು. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿ-ಜೆಡಿಎಸ್‌ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಬಡವರ, ಮಧ್ಯಮ ವರ್ಗದವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಲ್ಲಿದ್ದು, ಸದಾ ನಮ್ಮ ನೆರವಿನ ಹಸ್ತ ಬಡವರ ಪರವಾಗಿ ಇರುತ್ತದೆ ಎಂದರು.
Author: Prajatv Kannada
ಕೋಲಾರ:- ನಗರದ ಅಂತರಗಂಗೆ ರಸ್ತೆಯಲ್ಲಿ ಮುಸ್ಲಿಂ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ. ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ ಗ್ರಾಮದ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದರು. ಈ ವೇಳೆ ಆತನನ್ನು ಹಿಂಬಾಲಿಸಿದ ಮುಸ್ಲಿಂ ಯುವಕರ ತಂಡ ವಿಷ್ಣು ಹಾಗೂ ಮಹಿಳೆ ಸಮೀನಾ ತಾಜ್ರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಮಾಡಿ ವೈರಲ್ ಮಾಡಿರುವ ಯುವಕರ ವಿರುದ್ದ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು:- ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ಜರುಗಿದೆ. 40 ವರ್ಷದ ಗ್ರಾಮದ ತಿಪ್ಪಮ್ಮ, ತಿಮ್ಮಕ್ಕ ಗಿರಿಯಮ್ಮ (75) ಮೃತ ದುರ್ದೈವಿಗಳು ಎನ್ನಲಾಗಿದೆ. ಶ್ರಾವಣ ಮಾಸ ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿದ್ದರಿಂದ 11 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ. ಅಸ್ವಸ್ಥರಿಗೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಮೇಲ್ನೋಟಕ್ಕೆ ಪ್ರಸಾದ ಸೇವಿಸಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯಪುರ:- ಜಿಲ್ಲೆಯ ಸಚಿವ ಶಿವಾನಂದ ಪಾಟೀಲ ಮತಕ್ಷೇತ್ರದ ಮನಗೂಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸದಸ್ಯರ ಹೈಜಾಕ್ ನಿಂದಾಗಿ ಮತ್ತೆ ಮೀಸಲಾತಿ ಪ್ರಶ್ನಿಸಿ ಬಿಜೆಪಿಯವರು ಹೈಕೋರ್ಟ್ ಮೊರೆ ಹೋಗಿದ್ದು ತಾತ್ಕಾಲಿಕವಾಗಿ ಗದ್ದುಗೆ ಜಿದ್ದಾ ಜಿದ್ದಿಗೆ ಬ್ರೇಕ್ ಬಿದ್ದಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು ಮೂರು ವರ್ಷಗಳಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಜಟಾಪಟಿಯಿಂದಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಭಾಗ್ಯ ದೊರೆತಿರಲಿಲ್ಲ . ಇದೀಗ ಆಗಸ್ಟ್ 27 ರಂದು ಅಮದರೆ ಇಂದು ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಗಳ ಅ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿಯಂತೆ ಚುನಾವಣಾ ಪ್ರಕ್ರಿಯೆಗೆ ಆದೇಶ ಹೊರಬಿದ್ದಿತ್ತು. ಮನಗೂಳಿ ಪಟ್ಟಣ ಪಂಚಾಯಿತಿಗೆ 16 ಸದಸ್ಯ ಬಲ ಹೊಂದಿದೆ. ಚುನಾವಣೆಯಲ್ಲಿ ಬಿಜೆಪಿ 12 ಕಾಂಗ್ರೆಸ್ 4 ಸ್ಥಾನ ಗೆದ್ದಿದೆ. ಹಿಂದೆ ಬಿಜೆಪಿಯಲ್ಲಿದ್ದ ಮುಖಂಡ ಅಪ್ಪುಗೌಡ ಪಾಟೀಲ್ ಮನಗೂಳಿ ಪ್ರಭಾವದಿಂದಾಗಿ ಬಿಜೆಪಿಗೆ ಹೆಚ್ಚು…
ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ಮೋದಿ ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿದೆ. 2023ರ ಡಿಸೆಂಬರ್ 4ರಂದು ಭಾರತೀಯ ನೌಕಾಪಡೆಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ಈ ಭವ್ಯ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಿದ್ದರು. ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮರಾಠ ರಾಜನ 35 ಅಡಿ ಉದ್ದದ ಪ್ರತಿಮೆ ಕುಸಿದಿದುಬಿದ್ದಿದೆ. ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಈ ಬೆನ್ನಲ್ಲೇ ತಜ್ಞರು ಪ್ರತಿಮೆ ಕುಸಿತಕ್ಕೆ ನಿಖರ ಕಾರಣ ತಿಳಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ, ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ಪ್ರತಿಮೆ ಧ್ವಂಸವಾಗಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಸ್ಥಳೀಯ ಆಡಳಿತಕ್ಕೆ ನಿರ್ವಹಣೆಯ ಹೊಣೆ ವಹಿಸಲಾಗಿತ್ತು. ಸದ್ಯ ಪ್ರತಿಮೆ ಕುಸಿತಕ್ಕೆ ಮಳೆ ಗಾಳಿಯೇ ಕಾರಣವಾ? ಅಥವಾ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯ ಕಾರಣವಾಯ್ತಾ…
ಪಂಚಾಂನನ ಫಿಲಂಸ್ ನಿರ್ಮಾಣದ ,ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ “ರಿಪ್ಪನ್ ಸ್ವಾಮಿ ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಚಿತ್ರತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.ಪೋಸ್ಟರ್ನಲ್ಲಿ ಚಿನ್ನಾರಿ ಮುತ್ತ ರಾ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಮಾಲ್ಗುಡಿ ಡೇಸ್ ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ “ರಿಪ್ಪೆನ್ ಸ್ವಾಮಿ “ಮೂಲಕ ಒಂದು ಮಾಸ್ ಕಥೆ ಹೇಳಲು ಹೊರಟಿದ್ದಾರೆ.ತಾರಾ ಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿ ನಾಡು ,ವಜ್ರದೀರ್ ಜೈನ್ ,ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಮುಂತಾದವರು ಇದ್ದಾರೆ. ಇನ್ನು ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ ಕಳಸ ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಇನ್ನು ಈ ಸಿನಿಮಾ ಪಂಚಾಂನನ ಫಿಲಂಸ್ ಬ್ಯಾನರ್…
ಅಹಮ್ಮದಾಬಾದ್: ಅಹ್ಮದಾಬಾದ್- ಜೋಧ್‌ಪುರಗೆ ಹೋಗುವ ವಂದೇ ಭಾರತ್ ರೈಲು ಹಳಿಗಳ ಮೇಲಿದ್ದ ಸಿಮೆಂಟ್ ಸ್ಲ್ಯಾಬ್‌ಗೆ ಡಿಕ್ಕಿ ಹೊಡೆದಿರುವ ಘಟನೆ ರಾಜಸ್ತಾನದ ಪಾಲಿ ಎಂಬಲ್ಲಿ ಆಗಸ್ಟ್ 23ಕ್ಕೆ ನಡೆದಿದೆ. ರೈಲ್ವೇ ಅಧಿಕಾರಿಗಳ ಪ್ರಕಾರ, ಜವಾಯಿ ಹಾಗೂ ಬಿರೋಲಿಯಾ ನಡುವೆ ರೈಲು ಚಲಿಸುತ್ತಿರುವಾಗ ಎಂಜಿನ್ ಸಿಮೆಂಟ್ ಸ್ಲ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ಬಗ್ಗೆ ವಾಯುವ್ಯ ಅಧಿಕಾರಿ (ಸಿಪಿಆರ್‌ಒ) ಶಶಿಕಿರಣ್ ಮಾತನಾಡಿ, ಘಟನೆಯಿಂದ ರೈಲು ಬರುವಾಗ 8 ನಿಮಿಷ ತಡವಾಗಿ ಬಂದಿದೆ. ಇದರ ಹೊರತಾಗಿ ಯಾವ ಪ್ರಯಾಣಿಕರಿಗೂ ಸಮಸ್ಯೆ ಆಗಿಲ್ಲ ಎಂದು ತಿಳಿಸಿದ್ದಾರೆ. ಫಲ್ನಾ ಪ್ರದೇಶದ ಹಿರಿಯ ಎಂಜಿನಿಯರ್ (ಎಸ್‌ಎಸ್‌ಇ) ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಫುಟ್‌ಪಾತ್ ನಿರ್ಮಿಸಲು ಬಳಸುವ ಸಿಮೆಂಟ್ ಸ್ಲ್ಯಾಬ್ ರೈಲು ಹಳಿಯ ಮೇಲೆ ಇಟ್ಟಿರುವುದು ಕಂಡುಬಂದಿದೆ ಎಂದು ಶಶಿಕಿರಣ್ ಹೇಳಿದರು. ಈ ರೈಲು ಅಹ್ಮದಾಬಾದ್- ಜೋಧ್‌ಪುರಕ್ಕೆ ಮಂಗಳವಾರ ಹೊರತುಪಡಿಸಿ ವಾರದ 6 ದಿನ ಚಲಿಸುತ್ತದೆ. ಸಬರಮತಿ ನಿಲ್ದಾಣಕ್ಕೆ ಸಂಜೆ 4.45ಕ್ಕೆ ತಲುಪುತ್ತದೆ. ಕಳೆದ ಬಾರಿ ಅಕ್ಟೋಬರ್‌ನಲ್ಲಿ ಇಂತಹದ್ದೇ ಒಂದು…
ಬೆಳಗಾವಿ:- ಗೃಹಲಕ್ಷ್ಮಿ ಹಣದಲ್ಲಿ ಊಟ ಹಾಕಿಸಿದ್ದ ಅಜ್ಜಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಘಟನೆ ಬೆಳಗಾವಿ ಏರ್ಪೋರ್ಟ್ನಲ್ಲಿ ಜರುಗಿದೆ. ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ. ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ಮೊನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು.
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಸಾಧಾರಣ ಮಳೆಯಾದರೆ, ಒಳನಾಡಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಣ್ಣ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾದರೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ…
ಬೆಂಗಳೂರು: ಸರಕಾರದ ಆದೇಶದಂತೆ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ ರದ್ದುಪಡಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ಆದಾಯ ತೆರಿಗೆ ಪಾವತಿ ಮಾಡುತ್ತಿರುವ 2086 ಕುಟುಂಬಗಳು, ಸರ್ಕಾರಿ ನೌಕರರು ಹೊಂದಿರುವ 391, ರೂ. 1.20 ಲಕ್ಷಕ್ಕಿಂತ ಹೆಚ್ಚಿನ ಕುಟುಂಬದ ಆದಾಯ ಹೊಂದಿರುವ 29,615 ಹೀಗೆ 32,092 ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವುದು ತಂತ್ರಾಂಶದ ಮೂಲಕ ಪತ್ತೆಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ. ಹೌದು, ರಾಜ್ಯ ಸರ್ಕಾರವು ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಅಭಿಮಾನ ಆರಂಭಿಸಿದೆ. ಇದರಲ್ಲಿ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಕುಟುಂಬಗಳಿಗೆ ಸಿಮೀತವಾದ ಪಡಿತರ ಚೀಟಿಯನ್ನು ಶ್ರೀಮಂತರು, ಉಳ್ಳವರು ಪಡೆದಿದ್ದಾರೆ. ಈ ಕುರಿತು ಅಭಿಮಾನದ ಮೂಲಕ ಪತ್ತೆ ಕಾರ್ಯ ಆರಂಭಿಸಿದೆ. ಅಧಿಕ ಆದಾಯ ಇರುವ ಒಟ್ಟು 32,092 ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದರಲ್ಲಿ 391 ಮಂದಿ ಸರ್ಕಾರಿ ಉದ್ಯೋಗ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್…