ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ ತಾವು ಇತ್ತೀಚೆಗೆ ಉಕ್ರೇನ್ ಭೇಟಿ ನೀಡಿರುವ ಕುರಿತು ಬೈಡನ್ ಅವರಿಗೆ ವಿವರಿಸಿದ್ದಾರೆ. ‘ಉಕ್ರೇನ್‌ನಲ್ಲಿನ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ. ಉಕ್ರೇನ್‌ನಲ್ಲಿ ಶಾಂತಿ ಮತ್ತು ಸ್ಥಿರತೆ ಮರಳಲು ಭಾರತದ ಸಂಪೂರ್ಣ ಬೆಂಬಲವನ್ನು ನಾನು ಬೈಡನ್ ಅವರಲ್ಲಿ ಪುನರುಚ್ಚರಿಸಿದೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ. ‘ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಿದ್ದು, ಅಲ್ಲಿ ಸಹಜ ಸ್ಥಿತಿಯನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯದ ಬಗ್ಗೆ ಒತ್ತಿಹೇಳಿದ್ದೇನೆ. ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರ, ಅದರಲ್ಲೂ ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದಿದ್ದಾರೆ. ದೂರವಾಣಿ ಸಂಭಾಷಣೆ ವೇಳೆ ಮೋದಿ ಅವರು ತಮ್ಮ ಉಕ್ರೇನ್ ಭೇಟಿಯ ಕುರಿತ ವಿವರಗಳನ್ನು ಬೈಡನ್ ಅವರಿಗೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ‘ಕ್ವಾಡ್’ ಒಳಗೊಂಡಂತೆ ವಿವಿಧ ಶೃಂಗಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು…
Author: Prajatv Kannada
ಖ್ಯಾತ ಮಧುರೈನ ಮೀನಾಕ್ಷಿ ದೇವಾಲಯದಲ್ಲಿ ತಮಗೆ ಎದುರಾದ ಅವಮಾನದ ಬಗ್ಗೆ ನಟಿ ನಮಿತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತಿ ವೀರೇಂದ್ರ ಚೌಧರಿ ಜೊತೆ ದೇವಸ್ಥಾನಕ್ಕೆ ತೆರಳಿದ್ದ ನಮಿತಾ ಅವರನ್ನು ದೇವಸ್ಥಾನದ ಬಾಗಿಲಲ್ಲಿ ನಿಲ್ಲಿಸಿ ಜಾತಿ ಪ್ರಮಾಣ ಪತ್ರ ಕೇಳಿದ್ದು ಇದರಿಂದ ನಟಿ ಆಕ್ರೋಶ ಹೊರ ಹಾಕಿದ್ದಾರೆ. ನಟಿಯನ್ನು ದೇವಸ್ಥಾನದ ಬಾಗಿಲಲ್ಲಿ ನಿಲ್ಲಿಸಿಕೊಂಡು, ‘ನೀವು ಹಿಂದೂ ಎಂಬುದುನ್ನು ಸಾಬೀತು ಮಾಡಿ. ಜಾತಿ ಪ್ರಮಾಣಪತ್ರ ನೀಡಿ’ ಎಂದು ದೇವಸ್ಥಾನದ ಸಿಬ್ಬಂದಿ ಕೇಳಿದ್ದಾರೆ ಅಂತ ನಮಿತಾ ಮತ್ತು ವೀರೇಂದ್ರ ಹೇಳಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ನಮಿತಾ ಮತ್ತು ಅವರ ಪತಿ ವೀರೇಂದ್ರ ಚೌಧರಿ ಅವರು ಮಾಸ್ಕ್ ಧರಿಸಿ ದೇವಸ್ಥಾನಕ್ಕೆ ಹೋಗಿದ್ದರು. ತಾವು ದೇವಸ್ಥಾನಕ್ಕೆ ತೆರಳುವುದರ ಬಗ್ಗೆ ಒಂದು ದಿನ ಮುಂಚೆಯೇ ಸ್ಥಳೀಯ ಪೊಲೀಸರಿಗೆ ತಿಳಿಸಿದ್ದರು. ಜನರು ತಮ್ಮನ್ನು ಗುರುತಿಸಿದರೆ ಜನಜಂಗುಳಿ ಆಗಬಹುದು ಎಂಬ ಕಾರಣದಿಂದ ಅವರು ಮಾಸ್ಕ್ ಧರಿಸಿದ್ದರು. ದಂಪತಿಯನ್ನು 20 ನಿಮಿಷಗಳ ಕಾಲ ಕಾಯಿಸಿ, ಜಾತಿ…
ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳು ನಟ ಬಿಜಿಲಿ ರಮೇಶ್ ಇಂದು (ಆಗಸ್ಟ್ 27) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನಟ ಬಿಜಿಲಿ ರಮೇಶ್ ಕುಡಿತದ ಚಟಕ್ಕೆ ಒಳಗಾಗಿದ್ದರು. ಹೀಗಾಗಿ ಯಕೃತ್ತಿಗೆ (ಲಿವರ್) ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದದ್ದ ಅವರು ಆರ್ಥಿಕವಾಗಿಯೂ ಸಾಕಷ್ಟು ತೊಂದರೆ ಅನುಭವಿಸಿದ್ದರು. ಹೀಗಾಗಿ, ಚಿತ್ರರಂಗದವರು ಅವರ ಸಹಾಯಕ್ಕೆ ಮುಂದಾಗಿದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಿಜಿಲಿ ರಮೇಶ್ ಅವರು ಯೂಟ್ಯೂಬ್ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆದರು. ಈ ವಿಡಿಯೋಗಳು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದ್ದವು. 2018ರಲ್ಲಿ ಅವರನ್ನು ‘ಕೊಲಮಾವು ಕೋಕಿಲ’ ಸಿನಿಮಾದ ಪ್ರಮೋಷನಲ್ ಸಾಂಗ್ಗೆ ಬಳಕೆ ಮಾಡಿಕೊಳ್ಳಲಾಯಿತು. ಆ ಬಳಿಕ ಅವರು ನಟನೆಗೆ ಕಾಲಿಟ್ಟರು. ಕೆಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ನಪ್ಟೆ ತುನೈ’, ‘ಆಡೈ’, ‘ಪೊನ್ಮಗಲ್ ವಂದಲ್’, ‘ಕೋಮಲಿ’ ಸಿನಿಮಾಗಳಲ್ಲಿ ಬಿಜಿಲಿ ರಮೇಶ್ ಅವರು ನಟಿಸಿದ್ದಾರೆ. ಅವರು ರಿಯಾಲಿಟಿ ಶೋ ಮೂಲಕವೂ ಗಮನ ಸೆಳೆದಿದ್ದರು.…
ಮಲಯಾಳಂ ಸಿನಿಮಾ ರಂಗದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಹೇಮಾ ವರದಿ ಸಲ್ಲಿಕೆಯಾಗಿದೆ. ಈ ವರದಿ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಜಸ್ಟಿಸ್ ಹೇಮಾ ಸಲ್ಲಿಸಿದ ವರದಿಯಲ್ಲಿನ ಕೆಲವು ಅಂಶಗಳು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿವೆ. ಈಗಾಗಲೇ ಕೆಲವರ ತಲೆದಂಡ ಆಗಿದೆ. ಅನೇಕ ನಟಿಯರು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಈ ವರದಿ ಬಗ್ಗೆ ಇದುವರೆಗೂ ಯಾವ ಖ್ಯಾತ ನಟರು ಮಾತನಾಡಿರಲಿಲ್ಲ. ಮೊದಲ ಬಾರಿಗೆ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿರಾಜ್, ಹೇಮಾ ವರದಿಯಲ್ಲಿನ ಹೆಸರುಗಳನ್ನು ಸರಕಾರವೇ ಬಹಿರಂಗ ಪಡಿಸಬೇಕು. ಚಿತ್ರೀಕರಣದ ಸ್ಥಳದಲ್ಲಿನ ಸುರಕ್ಷತೆಯ ಬಗ್ಗೆ ಗಮನ ಹೆರಿಸಬೇಕು. ಏಕರೂಪದ ಮಾರ್ಗಸೂಚಿಯನ್ನು ತಯಾರಿಸಬೇಕು. ತಪ್ಪು ಯಾರೇ ಮಾಡಿದ್ದರೂ ಅವರ ಮೇಲೆ ತನಿಖೆ ಆಗಿ ಶಿಕ್ಷೆಯಾಗಬೇಕು. ಮಹಿಳೆಯರು ಈ ವಿಷ್ಯದಲ್ಲಿ ಸುಳ್ಳು ಹೇಳಿದ್ದರೂ ಅವರಿಗೆ ಶಿಕ್ಷೆ ಆಗಲಿ ಎಂದಿದ್ದಾರೆ. ಆರಂಭಿಕ ಹಂತಗಳಲ್ಲಿ ಕೆಲವು ತಪ್ಪುಗಳು ಆಗಿರಬಹುದು. ಕಿರುಕುಳ ಮತ್ತು ಲೈಂಗಿಕ…
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಕೂಲಿ ಸಿನಿಮಾ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಶ್ರುತಿ ಹಾಸನ್, ಮಹೇಂದ್ರನ್ ಮತ್ತು ಖ್ಯಾತ ನಟ ಸತ್ಯರಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಮಾಹಿತಿಯೊಂದು ಸಿಕ್ಕಿದ್ದು ಬುಲ್ ಬುಲ್ ಬೆಡಗಿ ರಚಿತಾ ರಾಮ್ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಹೌದು.. ಇತ್ತೀಚಿನ ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ರಜನಿಕಾಂತ್ ಅವರೊಂದಿಗೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ನಟಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಸುಪರ್ ಮಾಚಿ ಚಿತ್ರದ ಮೂಲಕ ತೆಲುಗು ಚಿತ್ರಗಳಲ್ಲಿ ಛಾಪು ಮೂಡಿಸಿರುವ ರಚಿತಾ ರಾಮ್ ಅವರು ಇದೀಗ ಕೂಲಿ ಮೂಲಕ ತಮಿಳು ಚಿತ್ರರಂಗಕ್ಕೂ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದ ಕುರಿತು ಚರ್ಚೆ ನಡೆಸಲು ರಚಿತಾ ರಾಮ್ ಅವರು ಚೆನ್ನೈಗೆ ಭೇಟಿ ನೀಡಿದ್ದಾರೆನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಇದುವರೆಗೂ ಅಧಿಕೃತ ಮಾಹಿತಿ ನೀಡಿಲ್ಲ. ನಟಿ ರಚಿತಾ ರಾಮ್ ಅವರು ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಟಿಸಿ ಹಿಟ್ ಚಿತ್ರಗಳನ್ನು…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋವೊಂದು ವೈರಲ್ ಆಗಿದೆ. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ಕಾಲು ಮೇಲೆ ಕಾಲು ಹಾಕಿ ರೌಡಿಗಳ ಜೊತೆ ಹರಟೆ ಹೊಡೆಯುತ್ತಿದ್ದಾರೆ. ಇದರ ಜೊತೆಗೆ ಹೊರಗಿರುವ ರೌಡಿಗಳ ಜೊತೆಯೂ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾರೆ. ಇದರಿಂದ ದರ್ಶನ್ ಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. ದರ್ಶನ್ ಜೊತೆಗೆ ನಟಿ ರಚಿತಾ ರಾಮ್ ಗೂ ಸಮಸ್ಯೆ ಎಂದೊಡ್ಡಿದೆ. ಈ ಫೋಟೋ ತೆಗೆದ ದಿನವೇ ನಟಿ ರಚಿತಾ ರಾಮ್ ಕೂಡ ಜೈಲಿಗೆ ಭೇಟಿ ನೀಡಿದ್ದು, ಈ ಪಾರ್ಟಿ ನಡೆದಿರುವುದು ಕನ್ಫರ್ಮ್ ಆಗಿದೆ. ರಚಿತಾ ರಾಮ್ ಆಗಸ್ಟ್ 22ನೇ ತಾರೀಕು ಎಂದರೆ 4 ದಿನಗಳ ಹಿಂದೆ ಭೇಟಿ ನೀಡಿದ್ದರು. ಅಂದು ಸಂಜೆಯೇ ನಟ ದರ್ಶನ್ ವಿಲ್ಸನ್ ಗಾರ್ಡನ್ ನಾಗನ ಜೊತೆ ಪಾರ್ಟಿ ಮಾಡಿದ್ದಾರೆ. ಹಾಗಾಗಿ ದರ್ಶನ್ ಬಿಂದಾಸ್ ಲೈಫ್ ಬಗ್ಗೆ ರಚಿತಾ ರಾಮ್ಗೆ ಗೊತ್ತಿತ್ತು. ಅದರಲ್ಲೂ ರಚಿತಾ…
ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದ್ದು ಇದು ಸರ್ಕಾರಕ್ಕೆ ಸಾಕಷ್ಟು ಮುಜುಗರ ತಂದಿದೆ. ಘಟನೆಯ ಬಗ್ಗೆ ಸಾಕಷ್ಟು ಮಂದಿ ಆಕ್ರೋಶ ಹೊರ ಹಾಕಿದ್ದು ರಾಜಕಾರಣಿಗಳು ಕೂಡ ಖಂಡಿಸಿದ್ದಾರೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್ ಸತ್ಯ ಜೊತೆ ದರ್ಶನ್ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸತ್ಯನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ವಿಚಾರಣಾಧೀನ ಖೈದಿ ಆಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನೊಳಗೆ ಸಾಕಷ್ಟು ಸೌಕರ್ಯಗಳನ್ನು ನೀಡಲಾಗಿದೆ. ಮೊಬೈಲ್, ಸಿಗರೇಟು, ಎಣ್ಣೆ, ಗುಂಡು, ತುಂಡು ಎಲ್ಲವು ದರ್ಶನ್ ಗೆ ಸಿಗುತ್ತಿದೆ. ಅದರ ಜೊತೆಗೆ ವಿಡಿಯೋ ಕಾಲ್ ಕೂಡ ಮಾಡಿರುವುದು ಬಹಿರಂಗ ಆಗಿದ್ದು, ದೊಡ್ಡ ಸಂಚಲನ…
ಬೆಂಗಳೂರು: ಇಂದು ವಿಶ್ವ ಶ್ವಾನ ದಿನ. ಪ್ರತಿ ವರ್ಷ ಆಗಸ್ಟ್ 26 ರಂದು ವಿಶ್ವದಾದ್ಯಂತ ವಿಶ್ವ ಶ್ವಾನ ದಿನವನ್ನು ಆಚರಿಸಲಾಗುತ್ತದೆ. ನಾಯಿಗೂ ಒಂದು ಕಾಲ ಬರುತ್ತೆ ಎನ್ನುವ ಮಾತಿದೆ. ಅದರಂತೆ ಪ್ರತಿ ವರ್ಷ ನಾಯಿ ದಿನವನ್ನ ಆಚರಣೆ ಮಾಡುವುದಕ್ಕೆ ಒಂದು ದಿನವನ್ನ ಮೀಸಲಿಡಲಾಗಿದೆ. https://youtu.be/o2V3RMJc9Os?si=Kd6hKfLDlr3HFXRr ಇದು ನಂಬಲು ಅಸಾಧ್ಯವಾದರು, ಇದನ್ನು ನೀವು ನಂಬಲೇಬೇಕು. ಹೌದು ಪ್ರತಿ ವರ್ಷ ಆಗಸ್ಟ್ 26 ರಂದು ಅಂತರಾಷ್ಟ್ರೀಯ ಶ್ವಾನ ದಿನವನ್ನ ಆಚರಣೆ ಮಾಡಲಾಗುತ್ತದೆ. ಭೂಮಿಯ ಮೇಲೆ ಉಂಡ ಮನೆಗೆ ಎಂದಿಗೂ ದ್ರೋಹ ಬಗೆಯದ ಪ್ರಾಣಿ ಎಂದರೆ ಅದು ನಾಯಿ. ಅದಕ್ಕಾಗಿಯೇ ನಾಯಿಗೆ ನಿಯತ್ತು ಜಾಸ್ತಿ ಎಂದು ಹೇಳಲಾಗುತ್ತದೆ. ಮನುಷ್ಯ ಕೂಡಾ ಇದನ್ನು ಒಪ್ಪಿಕೊಂಡಿದ್ದು, ಮಾತನಾಡುವಾಗ ಸ್ವಾಭಾವಿಕವಾಗಿಯೇ ನಾನು ನಾಯಿಗಿಂತ ನಿಯತ್ತಿನವನು ಎಂದು ಬಳಸುತ್ತಾರೆ. ಇದೇ ಸಾಕಲ್ಲವೇ ನಾಯಿಗೆ ನಿಯತ್ತು ಜಾಸ್ತಿ ಇದೆ ಅಂತ. ಶ್ವಾನ ಅದು ತಾನು ಸಾಕಿದವರ ಮನೆಗೆ ಎಂದಿಗೂ ಎರಡು ಬಗೆಯದೇ, ತನ್ನ ಕರ್ತವ್ಯವನ್ನು ಚಾಚೂ ತಪ್ಪದೇ ಪಾಲಿಸುತ್ತದೆ. ಅಂತರಾಷ್ಟ್ರೀಯ ಶ್ವಾನ ದಿನದ ಇತಿಹಾಸ:…
ಚಿಕ್ಕಬಳ್ಳಾಪುರ: ಇದೇ ಮೊದಲ ಬಾರಿಗೆ ಶಾಸಕರಾದ ನಂತರ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದಗ್ದಾರೆ. ಮೊದಲ ಕಾರ್ಯಕ್ರಮದಲ್ಲೇ ಇಬ್ಬರು ನಾಯಕರು ನಾನಾ ನೀನಾ ಅಂತ ಏಟಿಗೆ ಏಟು ಎದಿರೇಟು ನೀಡುವ ಮೂಲಕ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಕೃಷ್ಣ ಭವನ ನಿರ್ಮಾಣ ವಿಚಾರದಲ್ಲಿ ಇಬ್ಬರು ನಾನಾ ನೀನಾ ಅಂತ ಅನುದಾನದ ಘೋಷಣೆ ವಿಚಾರದಲ್ಲಿ ಪರಸ್ಪರರು ಏಟು ಎದಿರೇಟು ನೀಡಿದ್ದಾರೆ. ಇನ್ನೂ ಇದೇ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವಿಚಾರವಾಗಿಯೂ ಶಾಸಕ ಪ್ರದೀಪ್ ಈಶ್ವರ್ ಗರಂ ಆಗಿದ್ದಾರೆ. ಸಂಸದರ ಬೆಂಬಲಿಗರು ವೇದಿಕೆ ಏರಿದ್ದಕ್ಕೆ ಶಿಷ್ಟಾಚಾರ ಫಾಲೋ ಮಾಡುವಂತೆ ಕನ್ನಡ ಹಾಗೂ ಸಂಸ್ಕøತಿ ಇಲಾಖೆ ಅಧಿಕಾರಿಗೆ ವೇದಿಕೆಂiÀಲ್ಲೇ ಸಖತ್ ಕ್ಲಾಸ್ ತಗೊಂಡು ಪ್ರೋಟೋಕಾಲ್ ಫಾಲೋ ಮಾಡುವಂತೆ ಗರಂ ಆದರು. ಇನ್ನೂ ಸುಧಾಕರ್ ಅಭಿವೃದ್ದಿ ವಿಚಾರದಲ್ಲಿ ತಾನು ಮಾಡಿದ ಕೆಲಸಗಳು ಸಾಕ್ಷಿ ಗುಡ್ಡೆಯಾಗಿವೆ ಎಂಬ ಹೇಳಿಕೆಗೆ ಪ್ರದೀಪ್ ಈಶ್ವರ್…
ಉದ್ದೇಶ ಪೂರ್ವಕವಾಗಿ ಎರಡು ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಧಾರ್ಮಿಕ ಕಲಹ ಮತ್ತು ದ್ವೇಷ ಹರಡಲು ಯತ್ನಿಸುತ್ತಿದ್ದ ರಾಮಗಿರಿ ಗುರು ನಾರಾಯಣಗಿರಿ ಮಹಾರಾಜರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ರಾಜ್ಯದ ರಾಮಗಿರಿ ಗುರು ನಾರಾಯಣ ಗಿರಿ ಮಹಾರಾಜ್ ಅವರ ವಿರುದ್ಧ ಘೋಷಣೆ ಕೂಗಿ ಎ ಐ ಎಮ್ ಐಎಮ್ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಅವರು ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿಸಿದರು..