ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ನಟನೆಯ ದಿ ವಿಲನ್ ಸಿನಿಮಾದಲ್ಲಿ ನಟಿಸಿದ್ದ ಖ್ಯಾತ ನಟಿ ಆ್ಯಮಿ ಜಾಕ್ಸನ್ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಗ ಹುಟ್ಟಿದ ಆರು ವರ್ಷಗಳ ನಂತರ ಆ್ಯಮಿ ಅವರು ಗಾಸಿಪ್ ಗರ್ಲ್ ಸ್ಟಾರ್ ಎಡ್ ವೆಸ್ಟ್‌ವಿಕ್ ಅವರನ್ನು ವಿವಾಹವಾದರು. ಇಟಲಿಯಲ್ಲಿ ನಟ ಇಡ್ ವೆಸ್ಟ್ವೀಕ್ ಜೊತೆ ಮೋಹಕ ಸುಂದರಿ ಆ್ಯಮಿ ಜಾಕ್ಸನ್ ಮದುವೆಯಾಗಿರುವ ಫೋಟೋ ಸದ್ಯ ಇಬ್ಬರ ಇನ್ಸ್ಟಾಗ್ರಾಮ್ನಲ್ಲಿ ಹರಿದಾಡುತ್ತಿವೆ. ಗಾಸಿಪ್ ಗರ್ಲ್ ಅಂತಲೇ ಫೇಮಸ್ ಆಗಿರುವ ನಟ ಇಡ್ ವೆಸ್ಟ್ವೀಕ್ ಆ್ಯಮಿ ಜಾಕ್ಸನ್ ಜೊತೆ ವಿವಾಹವಾಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡು ಈಗಷ್ಟೇ ಪ್ರಯಾಣ ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ. ಆ್ಯಮಿ ಹಾಗೂ ಇಡ್ ವೆಸ್ಟ್ ವೀಕ್ ಅವರ ಮದುವೆ ಮಂಟಪವನ್ನು ಸುಂದರವಾದಿ ಬಿಳಿ ಹೂವುಗಳಿಂದ ಅಲಂಕರಿಸಲಾಗಿತ್ತು. ಅಲ್ಲದೆ ಆ್ಯಮಿ ಹಾಗೂ ಇಡ್ ವೆಸ್ಟ್ ವೀಕ್ ಧರಿಸಿದ್ದ ವಸ್ತ್ರಗಳು ಕೂಡ ಸಂಪೂರ್ಣವಾಗಿ ಬಿಳಿ ಬಣ್ಣದಿಂದ ಕೂಡಿಸಿದ್ದು ನೋಡುಗರನ್ನು ಮಂತ್ರ ಮುಗ್ದಗೊಳಿಸಿವೆ. ಇನ್ನೊಂದು ಕ್ಲಿಕ್‌ನಲ್ಲಿ, ಎಡ್ ಆ್ಯಮಿಯನ್ನು ನೋಡುತ್ತಿರುವಾಗ…
Author: Prajatv Kannada
ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಮತ್ತು ಹೊಸ ಪಿಂಚಣಿ ಯೋಜನೆಗೆ ಬದಲಾಗಿ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. https://youtu.be/RypoUJMAqpg?si=F62JCSUznbnt54Ky ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಏಕೀಕೃತ ಪಿಂಚಣಿ ಯೋಜನೆ ಎಂದರೇನು? ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. ಖಚಿತವಾದ ಪಿಂಚಣಿ: UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ. ಸ್ಥಿರ ಕುಟುಂಬ ಪಿಂಚಣಿ: ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ…
ಮುಂಬೈ: ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮಹಾರಾಷ್ಟ್ರದ ಜಲಗಾಂವ್‍ನಲ್ಲಿ `ಲಕ್‍ಪತಿ ದೀದಿ’ ಸಮ್ಮೇಳನದಲ್ಲಿ ಮಾತನಾಡಿ, ಮಹಿಳೆಯರ ರಕ್ಷಣೆ ತುಂಬಾ ಮುಖ್ಯವಾದದ್ದು. ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು. ಅಪರಾಧಿ ಯಾರೇ ಇರಲಿ ರಕ್ಷಿಸುವ ಕೆಲಸ ಮಾಡಬಾರದು. ಮಹಿಳೆಯರ ಮೇಲೆ ಅಪರಾಧ ಎಸಗಿದರೆ ಕಟ್ಟುನಿಟ್ಟಿನ ಕಾನೂನಿನ ಮೂಲಕ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಲಕ್‍ಪತಿ ದೀದಿ ಯೋಜನೆಯ ಬಗ್ಗೆ ವಿವರಿಸಿದ ಅವರು, ಮಹಿಳೆಯರು ಸ್ವಂತವಾಗಿ 1 ಲಕ್ಷ ರೂ. ವಾರ್ಷಿಕ ಆದಾಯ ಗಳಿಸಬಹುದು. ಮಹಿಳೆಯರು ಕೃಷಿ ಮತ್ತು ಇನ್ನಿತರ ವ್ಯವಹಾರ ಮಾಡುವುದರ…
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. https://youtu.be/VNBoO48xQUw?si=UC4YDD9sTEEpbWCs ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ ಮೇಲ್ಪಟ್ಟಿರಬೇಕು. ಅಷ್ಟೇ ಅಲ್ಲದೆ ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು. ಜಮೀನನ್ನು ಹೊಂದಿರುವ ಸ್ಥಳದಲ್ಲಿ ಯಾವುದೇ ರೀತಿಯ ನೀರಾವರಿ ವ್ಯವಸ್ಥೆಯು ಆ ಜಮೀನಿಗೆ ಇರಬಾರದು. ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ . ಅಷ್ಟೇ ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಎಕರೆ ಜಮೀನನ್ನು ಹೊಂದಿರಬೇಕು. ಅಷ್ಟೇ ಅಲ್ಲದೆ…
ಜನಪ್ರಿಯ ಮೆಸೇಜಿಂಗ್ ಆಪ್ ಟೆಲಿಗ್ರಾಮ್‌ನ ಸಂಸ್ಥಾಪಕ ಹಾಗೂ ಸಿಇಒ ಪಾವೆಲ್ ಡುರೊವ್ ಅವರನ್ನು ಫ್ರಾನ್ಸ್ ಪೊಲೀಸರು ಬಂಧಿಸಿದ್ದಾರೆ. ಪ್ಯಾರಿಸ್‌ನ ಉತ್ತರಕ್ಕಿರುವ ಲೆ ಬೌರ್ಗೆಟ್ ವಿಮಾನ ನಿಲ್ದಾಣಕ್ಕೆ ತಮ್ಮ ಖಾಸಗಿ ವಿಮಾನದ ಮೂಲಕ ಬಂದಿಳಿದ 39 ವರ್ಷದ ಡುರೊವ್ ಅವರನ್ನು ಬಂಧಿಸಲಾಗಿದೆ ಎಂದು ಫ್ರೆಂಚ್ ಮಾಧ್ಯಮಗಳು ವರದಿ ಮಾಡಿದೆ. ಟೆಲಿಗ್ರಾಮ್ ಪ್ಲಾಟ್‌ಫಾರ್ಮ್‌ಗೆ ಸಂಬಂಧಿಸಿದ ಅಪರಾಧಗಳ ಕುರಿತು ಅವರ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು. ಈ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಪರಾಧದ ನಿರ್ದಿಷ್ಟ ಸ್ವರೂಪವನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಪ್ಯಾರಿಸ್‌ನ ಹೊರವಲಯದಲ್ಲಿರುವ ಬೋರ್ಗೆಟ್ ವಿಮಾನ ನಿಲ್ದಾಣಕ್ಕೆ ಖಾಸಗಿ ಜೆಟ್‌ನಲ್ಲಿ ಬಂದಿಳಿದ ಪಾವೆಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಗಾಗಿ ಫ್ರಾನ್ಸ್ ಪೊಲೀಸರು ಅರೆಸ್ಟ್ ವಾರೆಂಟ್ ಹೊರಡಿಸಿದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ. ರಷ್ಯಾ, ಉಕ್ರೇನ್, ಸೋವಿಯತ್ ಯುನಿಯನ್ ದೇಶಗಳಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಟೆಲಿಗ್ರಾಂ ಶತಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿದೆ ಪಾವೆಲ್ ಬಂಧನದ ಕುರಿತು ಇದುವರೆಗೆ ಟೆಲಿಗ್ರಾಂ ಯಾವುದೇ…
ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಅಲ್ಲೂ ರಾಜಮರ್ಯಾದೆ ಸಿಗುತ್ತಿದೆ. ಹೊಟ್ಟೆ ತುಂಬಾ ಬಿರಿಯಾನಿ, ಸಿಗರೇಟ್, ಮತ್ತೇರಿಸಿ ಎಣ್ಣೆ ಎಲ್ಲೂವ ಸಪ್ಲೈ ಆಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿರುವ ದರ್ಶನ್ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಜೈಲಿನಲ್ಲೂ ದರ್ಶನ್ ರಾಜನಂತೆಯೇ ಇದ್ದಾರೆ ಎಂಬುದಕ್ಕೆ ವೈರಲ್ ಫೋಟೋ ಸಾಕ್ಷಿ ನೀಡಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ. ಪರಮೇಶ್ವರ್ ಅವರು ಮಾಲಿನಿ ಕೃಷ್ಣಮೂರ್ತಿ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.…
ರೇಣುಕಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳು ಕಳೆದಿದೆ. ದರ್ಶನ್ ಸ್ಥಿತಿ ನೆನೆದು ಸಾಕಷ್ಟು ಮಂದಿ ಕಣ್ಣಿರುಡುತ್ತಿದ್ದರೆ ಅತ್ತ ದರ್ಶನ್ ಮಾತ್ರ ಜೈಲಿನಲ್ಲಿ ರಾಜಾರೋಷಯವಾಗಿ ಕಾಲ ಕಳೆಯುತ್ತಿದ್ದಾರೆ. ಹೊಟ್ಟೆ ತುಂಬ ಬಿರಿಯಾಗಿ, ಮತ್ತೇರಿಸೋ ಎಣ್ಣೆ, ಸಿಗರೇಟ್ ಎಲ್ಲವೂ ದರ್ಶನ್ ಗೆ ಸಪ್ಲೈ ಆಗ್ತಿದೆ. ಇದು ಕಾನೂನಿನ ಮೇಲೆ ಜನರಿಗಿರೋ ನಂಬಿಕೆಯನ್ನು ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ನಿನ್ನೆಯಷ್ಟೇ ದರ್ಶನ್ ಜೈಲಿನಲ್ಲಿ ಸಿಗರೇಟು ಸೇದುತ್ತೀರೋ ಫೋಟೋ ವೈರಲ್ ಆಗಿತ್ತು. ಜೊತೆಗೆ ಹೊರಗಿದ್ದ ರೌಡಿ ಜೊತೆ ದರ್ಶನ್ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದರು. ಇದು ಆರೋಪಿ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಎಲ್ಲಾ ಸೌಲಭ್ಯ ಸಿಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿತ್ತು. ಸಿಗರೇಟ್ ಮಾತ್ರವಲ್ಲ ಬೇಕಾದ ಎಲ್ಲಾ ವಸ್ತುಗಳು ದರ್ಶನ್‌ಗೆ ಬೇಕಾದ ಎಲ್ಲಾ ವಸ್ತುಗಳು ಸಿಗುತ್ತಿವೆ ಎನ್ನಲಾಗುತ್ತಿದೆ. ದರ್ಶನ್ ಮನೆ ಊಟಕ್ಕಾಗಿ ಮೂರು ಭಾರಿ ಅರ್ಜಿ ಸಲ್ಲಿಸಿದ್ದರು. ಆದರೆ ದರ್ಶನ್‌ಗೆ ಮನೆ ಊಟವಲ್ಲ ಫೇಮಸ್ ಮಿಲ್ಟ್ರಿ ಹೋಟೆಲ್ನಿಂದಲೇ ಬಿರಿಯಾನಿ ಪೂರೈಕೆ ಆಗುತ್ತಿದೆ.…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ಜೈಲಿನಲ್ಲೂ ಆರಾಮಾಗಿ ಕಾಲ ಕಳೆಯುತ್ತಿದ್ದಾರೆ.ರೌಡಿಗಳ ಜೊತೆ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ವಿಡಿಯೋ ಕಾಲ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ. ‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅಲ್ಲೂ ಬಿಂದಾಸ್ ಆಗಿದ್ದಾರೆ. ರೌಡಿ ಶೀಟರ್ ಗಳ ಜೊತೆ ಸೇರಿಕೊಂಡು ಕಾಫಿ ಕುಡಿಯುತ್ತ ಸಿಗರೇಟ್ ಸೇದುತಾ ಆರಾಮಾಗಿದ್ದಾರೆ. ಜೊತೆಗೆ ಹೊರಗಿರುವ ರೌಡಿಗಳ ಜೊತೆಗೂ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ. ಈ ಬೆಳವಣಿಗೆ ಮೃತ ರೇಣುಕಾಸ್ವಾಮಿ ಕುಟುಂಬದ ನೋವನ್ನು ಮತ್ತಷ್ಟು ಹೆಚ್ಚಿಸಿದ್ದು ಹೆತ್ತವರು ಕಣ್ಣೀರಿಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದುಹೋಗಿದೆ. ಇನ್ನೇನು ಎರಡ್ಮೂರು ವಾರಗಳಲ್ಲಿ ಡಿಗ್ಯಾಂಗ್ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈ ಹೊತ್ತಲ್ಲಿ ದರ್ಶನ್ ಜೈಲೊಳಗೆ ಮೋಜು ಮಸ್ತಿ ಮಾಡ್ತಿದ್ದಾರೆ ಎನ್ನಲಾದ ಶಾಕಿಂಗ್ ಫೋಟೋ ವೈರಲ್ ಆಗಿದೆ. ಸಿಗರೇಟ್ ಸೇದುತ್ತಾ, ಕಾಫಿ ಕುಡ್ಕೊಂಡು, ಇಬ್ಬರು ರೌಡಿ ಶೀಟರ್‌ಗಳ ಜೊತೆ ಕೂತು ಮಾತನಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳು ದೊಡ್ಡ ಸಂಚಲನ ಸೃಷ್ಟಿಸಿದೆ. ಅಲ್ಲದೆ, ಜೈಲೊಳಗೆ ದರ್ಶನ್‌ಗೆ ರಾಜಾತಿಥ್ಯ ಸಿಗ್ತಿದೆಯಾ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಮತ್ತೊಂದು ಕಡೆ ಮಗನನ್ನು ಕಳ್ಕೊಂಡು ರೇಣುಕಾಸ್ವಾಮಿ ಕುಟುಂಬ ಕಣ್ಣೀರಿನಲ್ಲಿ…
ಟಾಲಿವುಡ್ ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಏಕ್ತಾ ಕಪೂರ್ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್ ಭಾಗ್ಯʼ ಮೂಲಕ ಜನಪ್ರಿಯರಾಗಿದ್ದ ಹಿರಿಯ ನಟಿ ಆಶಾ ಶರ್ಮಾ 88ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆಶಾ ಶರ್ಮಾ ನಿಧನಕ್ಕೆ ಸಿನಿ ಮತ್ತು ಟಿವಿ ಆರ್ಟಿಸ್ಟ್ಸ್ ಅಸೋಸಿಯೇಷನ್ ಎಕ್ಸ್ ಖಾತೆಯಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದೆ. ಜೊತೆಗೆ ಹಿರಿಯ ನಟಿ ಹೇಮಾ ಮಾಲಿನಿ, ಪ್ರೇಮ್ ಚೋಪ್ರಾ, ಅರುಣಾ ಇರಾನಿ ಮತ್ತು ನಿರುಪಾ ರಾಯ್ ಸೇರಿದಂತೆ ಬಾಲಿವುಡ್‌ನ ಹಿರಿಯ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ʻಕುಂಕುಮ್ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್ ಹಾಗೂ ಕೃತಿ ಸನೋನ್ ನಟನೆಯ ʻಆದಿಪುರುಷ್ʼ ಸಿನಿಮಾದಲ್ಲಿ ʻಶಬರಿʼ…