Author: Prajatv Kannada

ಮಲಯಾಳಂ ಸಿನಿಮಾಗಳ ನಿರ್ದೇಶಕ ರಂಜಿತ್ ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ್ಯ ಸ್ಥಾನಕ್ಕೆ ಹಾಗೂ ನಟ ಸಿದ್ಧಿಕಿ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನ್ಯಾ.ಹೇಮಾ ಸಮಿತಿ ವರದಿ ನಂತರ ಈ ಬೆಳವಣಿಗೆ ನಡೆದಿದೆ. ರಂಜಿತ್ ಅವರು ತನ್ನ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಕಳೆದ ವರ್ಷ ಬಂಗಾಳಿ ನಟಿಯೊಬ್ಬರು ಆರೋಪಿಸಿದ್ದರು. ರಂಜಿತ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿತ್ತು. ಇನ್ನೂ ಸಿದ್ಧಿಕಿ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ನಟಿಯೊಬ್ಬರು ಶನಿವಾರ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಂಜಿತ್ ಅವರು ಸುದ್ದಿವಾಹಿನಿಯೊಂದಕ್ಕೆ ಆಡಿಯೋ ತುಣುಕನ್ನು ಕಳುಹಿಸುವ ಮೂಲಕ ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ. ಆಡಿಯೋದಲ್ಲಿ, ಅಕಾಡೆಮಿಯ ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗಿನಿಂದ ಒಂದು ವರ್ಗದ ಜನ ನನ್ನನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಆರೋಪಗಳೆಲ್ಲವೂ ಸುಳ್ಳು ಎಂದು ಸಮಾಜದ ಎದುರು ಸಾಬೀತು ಮಾಡಬೇಕಿದೆ ಎಂದು ಅವರು ಆಡಿಯೊದಲ್ಲಿ ಹೇಳಿದ್ದಾರೆ. ಸಿದ್ದಿಕಿ ಅವರ ರಾಜೀನಾಮೆ…

Read More

ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರೋ ದರ್ಶನ್ ಬಗ್ಗೆ ಕೆಲವರು ನೊಂದು ಕೊಂಡಿದ್ದರು. ಜೈಲಿನಿಂದ ಹೊರಗಿದ್ದ ವೇಳೆ ಲಕ್ಸುರಿ ಲೈಫ್ ಮಾಡುತ್ತಿದ್ದ ದಾಸ ಕಂಬಿ ಹಿಂದೆ ಹೇಗಿದ್ದಾರೋ ಎಂದು ಮರುಗಿದ್ದರು. ಆದರೆ ಜೈಲಿನಲ್ಲಿರೋ ದರ್ಶನ್ ಬಿಂದಾಸ್ ಆಗಿದ್ದಾರೆ. ಅವರಿಗೆ ಬಯಸ್ಸಿದ್ದೆಲ್ಲಾ ಸಿಗುತ್ತಿದೆ ಅನ್ನೋದು ಫ್ರೂವ್ ಆಗಿದೆ. ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು, ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಕಾರಾಗೃಹದಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬುದಕ್ಕೆ ಸದ್ಯ ವೈರಲ್ ಆಗಿರುವ ಫೋಟೋ ಹಾಗೂ ವಿಡಿಯೋಗಳು ಸಾಕ್ಷಿಯಾಗಿದೆ. ಮೊದಲು ದರ್ಶನ್ ರೌಡಿಶೀಟರ್​ಗಳ ಜೊತೆ ಕುಳಿತು ಟೀ ಕುಡಿಯುತ್ತಾ ಸಿಗರೇಟು ಸೇದಿದ್ದ ಫೋಟೋ ವೈರಲ್​ ಆಯ್ತು. ಬಳಿಕ ವಿಡಿಯೋ ಕಾಲ್ ತುಣುಕು ಕೂಡ ಹೊರಬಂತು. ಅಂದ ಹಾಗೆ ಈ ವಿಡಿಯೋ ಕಾಲ್​ನಲ್ಲಿ ದರ್ಶನ್ ಜೊತೆ ಮಾತನಾಡಿರುವುದು ಕೂಡ ರೌಡಿಗಳೆ. ವೈರಲ್​ ಆಗಿರುವ ದರ್ಶನ್​ ಅವರ ವಿಡಿಯೋ ಕಾಲ್​ನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್​…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರೋ ದರ್ಶನ್ ಗೆ ಅಲ್ಲಿನ ವಾಸ ಕಷ್ಟಕರವಾಗಿದೆ ಎಂದೇ ಹೇಳಲಾಗಿತ್ತು. ಆದರೆ ಈಗ ಕೆಲವು ಶಾಕಿಂಗ್​ ವಿಚಾರಗಳು ಹೊರ ಬಿದ್ದಿವೆ. ಕೊಲೆ ಆರೋಪ ಹೊತ್ತಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಕಲ ಸೌಕರ್ಯಗಳು ಸಿಗುತ್ತಿವೆ ಎಂಬುದಕ್ಕೆ ಕೆಲ ಸಾಕ್ಷಿಗಳು ಲಭ್ಯವಾಗುತ್ತಿವೆ. ನಿನ್ನೆ ದರ್ಶನ್ ಜೈಲಿನಲ್ಲಿರುವ ಫೋಟೋವೊಂದು ವೈರಲ್ ಆಗಿತ್ತು. ಅದರಲ್ಲಿ ದರ್ಶನ್ ಕೈಯಲ್ಲಿ ಸಿಗರೇಟ್ ಹಿಡಿದು ಬಿಂದಾಸ್ ಆಗಿ ಕಾಣಿಸಿಕೊಂಡಿದ್ದರು. ಜೈಲಿನೊಳಗೆ ನಟೋರಿಯಸ್​ ರೌಡಿಗಳ ಜೊತೆ ಹಾಯಾಗಿ ಕುಳಿತು ಮಾತುಕಥೆ ಮಾಡುತ್ತಿರುವ ಕ್ಷಣ ಸೆರೆಯಾಗಿದೆ. ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದ ರೌಡಿಶೀಟರ್​ಗಳ ಜೊತೆ ದರ್ಶನ್​ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಂದು ಫೋಟೋ ವೈರಲ್ ಆಗಿದೆ.ಅದರಲ್ಲಿ ದರ್ಶನ್ ವಿಡಿಯೋ ಕಾಲ್ ಮಾಡಿರೋದು ಕಾಣಿಸಿಕೊಂಡಿದೆ. ಈ ಮೂಲಕ ಜೈಲಿನಲ್ಲಿರೋ ದರ್ಶನ್ ಗೆ ಸಕಲ ಸೌಲಭ್ಯವು ಸಿಗುತ್ತಿದೆ ಅನ್ನೋದು ಗೊತ್ತಾಗಿದೆ. ಪರಪ್ಪನ ಅಗ್ರಹಾರ ಸ್ಪೆಷಲ್​ ಬ್ಯಾರಕ್​ನಲ್ಲಿ ಇರುವ ದರ್ಶನ್​ ಅವರಿಗೆ ವಿಡಿಯೋ…

Read More

ಚಂಡೀಗಡ:- ಪಂಚಾಬ್ ನ ಅಮೃತಸರದ ದಬುರ್ಜಿ ಪ್ರದೇಶದಲ್ಲಿಕೆಲವೇ ದಿನಗಳ ಹಿಂದೆ ಅಮೆರಿಕಾದಿಂದ ಸ್ವದೇಶಕ್ಕೆ ಮರಳಿದ್ದ ಎನ್‌ಆರ್‌ಐ ಪ್ರಜೆಯನ್ನು ಗುಂಡಿಕ್ಕಿರುವ ಭೀಕರ ಘಟನೆ ಜರುಗಿದೆ.ಸುಖಚೈನ್ ಸಿಂಗ್ ಎಂಬ ಎನ್‌ಆರ್‌ಐ ಅವರನ್ನು ಅವರ ಪತ್ನಿ ಮತ್ತು ಮಗುವಿನ ಎದುರೇ ಶೂಟ್‌ ಮಾಡಿದ್ದಾರೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿದ್ದು, ಎಲ್ಲೆಡೆ ಭಾರೀ ವೈರಲ್‌ ಆಗುತ್ತಿದೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸುಖಚೈನ್ ಸಿಂಗ್ ಅವರ ನಿವಾಸಕ್ಕೆ ನುಗ್ಗಿ ಅವರ ಪತ್ನಿ ಮತ್ತು ಮಗುವಿನ ಎದುರೇ ಗುಂಡು ಹಾರಿಸಿದ್ದಾರೆ. ಈ ವೇಳೆ ಸುಖಚೈನ್ ಸಿಂಗ್ ಅವರನ್ನು ಬಿಟ್ಟುಬಿಡುವಂತೆ ಅವರ ಪತ್ನಿ ಮತ್ತು ಮಗು ಎಷ್ಟೇ ಬೇಡಿಕೊಂಡರೂ ಕೇಳದೇ ಶೂಟ್‌ ಮಾಡುತ್ತಿರುವುದ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರವ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗುತ್ತಿರುವ ದೃಶ್ಯಾವಳಿಗಳು ತೋರಿಸಿವೆ. ಶಸ್ತ್ರಸಜ್ಜಿತ ದಾಳಿಕೋರರು ಸಿಂಗ್ ಅವರ ಕಾರಿನ ನೋಂದಣಿ ಪ್ರಮಾಣಪತ್ರದ ಬಗ್ಗೆ ವಿಚಾರಿಸುವ ನೆಪದಲ್ಲಿ ಬಂದು…

Read More

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ ಮೂರು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ಮೈಸೂರಿನಲ್ಲಿ ನಟ ದರ್ಶನ್ ಬಂಧನವಾಗಿತ್ತು. ದರ್ಶನ್, ಕೊಲೆ ಪ್ರಕರಣ ಒಂದರಲ್ಲಿ ಬಂಧನಕ್ಕೆ ಒಳಗಾಗುತ್ತಾರೆ ಎಂದು ಯಾರೂ ಸಹ ನಿರೀಕ್ಷಿಸಿರಲಿಲ್ಲ. ದರ್ಶನ್ ಅನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದಾಗ ಹಲವರಿಗೆ ಆಶ್ಚರ್ಯವಾಗಿತ್ತು. ಇದೀಗ ತನಿಖೆ ಬಲು ಚುರುಕಾಗಿ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಲು ಕೆಲವೇ ದಿನಗಳು ಬಾಕಿ ಇರುವ ಈ ಸಮಯದಲ್ಲಿ ಕೆಲವು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ.  65 ದಿನಗಳಿಂದ ಜೈಲಿನಲ್ಲಿರುವ  ನಟ ದರ್ಶನ್ ಜೈಲಿನಲ್ಲಿ ಸಿಗರೇಟ್‌ ಸೇದುತ್ತಿರುವ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕುಳಿತು ಬೆಂಗಳೂರಿನ ರೌಡಿ ಶೀಟರ್‌ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಕುಳಿತುಕೊಂಡು ದರ್ಶನ್ ಸಿಗರೇಟ್‌ ಸೇದುತ್ತಿರುವುದು ಫೋಟೋದಲ್ಲಿ ಕಂಡುಬಂದಿದೆ. ಪ್ಲಾಸ್ಟಿಕ್‌ ಚಯರ್‌ ನಲ್ಲಿ ಕುಳಿತುಕೊಂಡಿರುವ ದರ್ಶನ್‌, ಒಂದು ಕೈನಲ್ಲಿ ಟೀ ಕಪ್ ಮತ್ತು ಇನ್ನೊಂದು ಕೈನಲ್ಲಿ…

Read More

ವಾಷಿಂಗ್ಟನ್:- ಮುಂದಿನ ವರ್ಷ ಫೆಬ್ರುವರಿಯಲ್ಲಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲಿದ್ದಾರೆ. ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದೀಗ ಅವರು ವಾಪಾಸಾಗುವ ಬಗ್ಗೆ ಅಮೆರಿಕಸ ಬಾಹ್ಯಾಕಾಶ ಸಂಸ್ಥೆ ಮಹತ್ವದ ಸುದ್ದಿಯೊಂದನ್ನು ಹೊರಹಾಕಿದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ. ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ…

Read More

ನವದೆಹಲಿ:- ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಪಕ್ಷಗಳು ಬೇಡಿಕೆ ಇಟ್ಟಿರುವ ಹಳೆಯ ಪಿಂಚಣಿ ಮತ್ತು ಹೊಸ ಪಿಂಚಣಿ ಬದಲಾಗಿ ಏಕೀಕೃತ ಪಿಂಚಣಿ ಯೋಜನೆ ಜಾರಿ ಮಾಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ಪಡೆಯಲಾಗಿದೆ. ಸರ್ಕಾರಿ ನೌಕರರಿಗೆ ಮೂರು ಬಗೆಯ ಪಿಂಚಣಿ ಲಾಭಗಳನ್ನು ಇದು ಒದಗಿಸಲಿದೆ. ಏಕೀಕೃತ ಪಿಂಚಣಿ ಯೋಜನೆಯು 2025 ರ ಏಪ್ರಿಲ್​ 1 ರಿಂದ ಅನ್ವಯವಾಗುವಂತೆ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​​ ಅವರು, ಸರ್ಕಾರ ನೌಕರರಿಗೆ ಖಚಿತ ಪಿಂಚಣಿ ಒದಗಿಸುವ ಯುಪಿಎಸ್​​ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಮೊದಲ ಕ್ರಮವೆಂದರೆ, ಶೇಕಡಾ 50…

Read More

ತೆಲುಗು ಚಿತ್ರರಂಗದ ಖ್ಯಾತ ನಟ ನಾಗಾರ್ಜುನಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ನಾಗಾರ್ಜುನ ಒಡೆತನದ ಎನ್ ಕನ್ವೆನ್ಷನ್ ಸೆಂಟರ್ ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹೈದರಾಬಾದ್‌ನ ಮದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ ಕೆಲ ಭಾಗಗಳನ್ನು ಆ.24ರಂದು ಹೈಡ್ರಾ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ನೀಡಲಾಗಿದೆ. ನಾಗಾರ್ಜುನ ಅವರಿಗೆ ಸೇರಿದ ‘ಎನ್ ಕನ್ವೆಂಷನ್ ಹಾಲ್’ 10 ಎಕರೆ ಜಾಗದಲ್ಲಿ ಇತ್ತು. ಈ ಕಟ್ಟಡ ನಿರ್ಮಾಣದ ವೇಳೆ ಹಲವು ನಿಯಮಗಳ ಉಲ್ಲಂಘನೆ ಮಾಡಲಾಗಿದೆ ಎಂಬುದು ಸಾಬೀತಾಗಿದೆ. ಮಾದಾಪುರದ ತಮ್ಮಿಡಿಕುಂಟ ಕೆರೆಯ 1.12 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಉಳಿದ ಎರಡು ಎಕರೆ ಕೆರೆ ಬಫರ್​ಜೋನ್​ನಲ್ಲಿ ಬರುತ್ತದೆ ಎನ್ನಲಾಗಿದೆ. ‘ಪಟ್ಟಾ ಭೂಮಿಯಲ್ಲೇ ಎನ್​​ ಕನ್ವೆನ್ಷಲ್ ಹಾಲ್ ನಿರ್ಮಾಣ ಮಾಡಿದ್ದೆವು. ಕೆರೆಯ ಒಂದು ಇಂಚು ಭೂಮಿ ಕೂಡ ನಾವು ಆಕ್ರಮಿಸಿಲ್ಲ. ಈ ಹಿಂದೆಯೂ ನೆಲಸಮ ಮಾಡಲು ನೋಟಿಸ್…

Read More

ರಶ್ಯಾದ ರಾಜಧಾನಿ ಮಾಸ್ಕೋದ ಆಗ್ನೇಯಕ್ಕೆ 860 ಕಿ.ಮೀ ದೂರದಲ್ಲಿರುವ ವೊಲ್ಗೊಗ್ರಾಡ್ ಪ್ರಾಂತದ ಸುರೊವ್ಕಿನೊ ಜೈಲಿನಲ್ಲಿ 4 ಕೈದಿಗಳ ಗುಂಪೊಂದು ಜೈಲಿನ 4 ಕಾವಲುಗಾರರನ್ನು ಇರಿದು ಹತ್ಯೆಗೈದ ಬಳಿಕ 8 ಕಾವಲುಗಾರರನ್ನು ಹಾಗೂ 4 ಸಹಕೈದಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡು ಜೈಲಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಳಿಕ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆ ನಾಲ್ವರು ಆರೋಪಿಗಳನ್ನೂ ಗುಂಡಿಕ್ಕಿ ಹತ್ಯೆ ಮಾಡಿದೆ. ಆರೋಪಿಗಳು ಐಸಿಸ್ ಜೊತೆ ಸಂಪರ್ಕ ಹೊಂದಿದ್ದರು ಎಂದು ಫೆಡರಲ್ ಬಂದೀಖಾನೆ ಸೇವೆಯ ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ ಖೈದಿಗಳಿಂದ ಹಲ್ಲೆಗೊಳಗಾದ 4 ಕಾವಲುಗಾರರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತರ ಮೂವರು ಕಾವಲುಗಾರರೂ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನಲ್ಲಿ ನಡೆಯುತ್ತಿದ್ದ ದೈನಂದಿನ ಶಿಸ್ತು ಸಮಿತಿ ಸಭೆಯ ಸಂದರ್ಭ ಕೈದಿಗಳ ತಂಡವೊಂದು ಏಕಾಏಕಿ ಅಧಿಕಾರಿಗಳ ಮೇಲೆ ಚೂರಿಯಿಂದ ದಾಳಿ ನಡೆಸಿದ್ದು ಹಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು ಎನ್ನಲಾಗಿದೆ.

Read More

ಕಳೆದ ಕೆಲ ದಿನಗಳಿಂದ ಚೀನಾದ ಲಿಯೋನಿಂಗ್ ಪ್ರಾಂತ್ಯದ ಹುಲುಡಾವೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ಘಟನೆಯಲ್ಲಿ 11 ಜನರು ಮೃತಪಟ್ಟಿದ್ದು 14 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ಹುಲುಡಾವೊ ನಗರದ 1.88 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ₹12,69 ಕೋಟಿ ಮೌಲ್ಯದ ರಸ್ತೆ, ಸೇತುವೆ, ಮನೆಗಳು ಮತ್ತು ಅಪಾರ ಪ್ರಮಾಣದ ಬೆಳೆ ನಾಶವಾಗಿವೆ ಎಂದು ಸ್ಥಳೀಯ ಮಾಧ್ಯಮವು ವರದಿ ಮಾಡಿದೆ. ಅಲ್ಲದೇ, ಒಂಭತ್ತು ರಾಷ್ಟ್ರೀಯ ಹಾಗೂ ಪ್ರಮುಖ ಪ್ರಾಂತೀಯ ರಸ್ತೆಗಳು, 210 ಗ್ರಾಮೀಣ ರಸ್ತೆಗಳು ಮತ್ತು 187 ಸೇತುವೆಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More