ಹಾಸನ: ಸಿಲಿಂಡರ್ ಬೆಲೆ ಸೇರಿದಂತೆ ದಿನನಿತ್ಯ ಬಳಸುವ ಅಗತ್ಯ ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ- ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಡಿಸಿ ಕಛೇರಿ ಆವರಣಕ್ಕೆ ಬಂದ ಅವರು, ೪೦ಪರ್ಸೆಂಟ್ ಕಮಿಷನ್ ಸಿಲೆಂಡರ್, ಅಗತ್ಯ ಬೆಲೆ ಏರಿಕೆ: ಕಾಂಗ್ರೆಸ್ ಪ್ರತಿಭಟನೆ ಬಿಜೆಪಿಯಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಕ್ಷಣೆ: ಆಕ್ರೋಶ ಸರಕಾರ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಧರಣಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಮತ್ತು ಜಿಲ್ಲಾ ಘಟಕದ ವಕ್ತಾರ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮತ್ತು ಬನವಾಸೆ ರಂಗಸ್ವಾಮಿ ಮಾತನಾಡುತ್ತಾ, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆ ಸಾಮಾನ್ಯ ಜನರು ಕೂಡ ತತ್ತರಿಸಿ ಹೋಗಿರುವ ಕಾಲದಲ್ಲಿ ಗ್ಯಾಸ್ ಬೆಲೆ ಗಗನಕ್ಕೇರಿದೆ.…
Author: Prajatv Kannada
ಸೂರ್ಯೋದಯ: 06.34 AM, ಸೂರ್ಯಾಸ್ತ : 06.29 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಫಾಲ್ಗುಣ ಮಾಸ, ಶಿಶಿರ ಋತು,ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ತ್ರಯೋದಶಿ 02:07 PM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ಆಶ್ಲೇಷ 09:30 PM ತನಕ ನಂತರ ಮಖ ಯೋಗ: ಇವತ್ತು ಅತಿಗಂಡ 08:21 PM ತನಕ ನಂತರ ಸುಕರ್ಮಾ ಕರಣ: ಇವತ್ತು ಕೌಲವ 12:56 AM ತನಕ ನಂತರ ತೈತಲೆ 02:07 PM ತನಕ ನಂತರ ಗರಜ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ:03:00 ನಿಂದ 04:30 ವರೆಗೂ ಅಮೃತಕಾಲ: 07.43 PM to 09.30 PM ಅಭಿಜಿತ್ ಮುಹುರ್ತ: ಮ.12:04 ನಿಂದ ಮ.12:51 ವರೆಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.…
ಮಂಗಳೂರು: ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಒಳಹರಿವು ಒಂದೇ ಸವನೆ ಕಡಿಮೆಯಾಗಿದ್ದು, ಏಪ್ರಿಲ್ ತಿಂಗಳಾಂತ್ಯದೊಳಗೆ ಬೇಸಿಗೆ ಮಳೆ ಬಾರದಿದ್ದರೆ ನಗರದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಲಿದೆ. ಪ್ರಸ್ತುತ ಡ್ಯಾಂನಲ್ಲಿ ಶೇಖರಣೆಯಾಗಿರುವ ನೀರು 50ರಿಂದ 55 ದಿನಕ್ಕಷ್ಟೇ ಪೂರೈಕೆಯಾಗಬಹುದಾಗಿದೆ ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಶುಕ್ರವಾರ ಸಂಜೆಯ ವೇಳೆಗೆ ನೀರಿನ ಮಟ್ಟ 5.85 ಮೀಟರ್ ಗೆ ಇಳಿಕೆಯಾಗಿದೆ. ಮಹಾನಗರಪಾಲಿಕೆ ಆಡಳಿತ ಮತ್ತು ನಗರದ ಜನತೆ ಈಗಲೇ ಮುಂದಾಲೋಚನೆ ಮಾಡದಿದ್ದರೆ 2019ರಲ್ಲಿ ಆದ ನೀರಿನ ಸಮಸ್ಯೆ ಈ ಬಾರಿಯೂ ನಗರವನ್ನು ಬಿಗಡಾಯಿಸಲಿದೆ. 4 ವರ್ಷದಲ್ಲೇ ಇಳಿಕೆ: ತುಂಬೆ ವೆಂಟೆಡ್ ಡ್ಯಾಂನಲ್ಲಿ ಶೇಖರಣೆಯಾಗುತ್ತಿರುವ ನೀರಿನ ಪ್ರಮಾಣ ಹೋಲಿಕೆ ಮಾಡಿದರೆ 4 ವರ್ಷದಲ್ಲೇ ಅತ್ಯಧಿಕ ಇಳಿಕೆಯಾಗಿದೆ. 2020ರ ಮಾ.3ರಂದು 6 ಮೀಟರ್ ನೀರಿದ್ದರೆ, ಆ ಬಳಿಕ ಪ್ರತಿವರ್ಷ ಈ ದಿನಕ್ಕೆ 6 ಮೀಟರ್ ನೀರಿತ್ತು. ಈ ಬಾರಿ ಮಾ.3ಕ್ಕೆ 5.85 ಮೀಟರ್‌ಗೆ ಇಳಿಕೆಯಾಗಿದ್ದು ಇದು 4 ವರ್ಷದಲ್ಲೇ ಅತೀ ಕಡಿಮೆಯಾಗಿದೆ. 2019ರ ನೀರಿನ ಬಳಕೆಯನ್ನು ಹೋಲಿಸಿದರೆ…
ಬೆಂಗಳೂರು: ಕಡೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿ.ಎಂ. ಧನಂಜಯ ಹಾಗೂ ಕೊಳ್ಳೇಗಾಲ ಕ್ಷೇತ್ರದ ಪೊಲೀಸ್ ಇಲಾಖೆಯಿಂದ ಸ್ವಯಂ ನಿವೃತ್ತಿ ಹೊಂದಿರುವ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ಜೆಡಿಎಸ್ ಪಕ್ಷ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಇದೇ ತಿಂಗಳ 11 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲಾಗುವುದು. ಹಾಸನ ಜಿಲ್ಲೆಯ ರಾಜಕಾರಣಕ್ಕೆ ನಾನು ಬಂದಿಲ್ಲ. ಅದನ್ನು ರೇವಣ್ಣ ಅವರಿಗೆ ಬಿಟ್ಟಿದ್ದೇನೆ. ಪಕ್ಷಕ್ಕೆ ದುಡಿದವರನ್ನು ನಾನು ಎಂದೂ ಕೈ ಬಿಟ್ಟಿಲ್ಲ, ತಾಳ್ಮೆ ಅನ್ನೋದು ಇಲ್ಲಿ ಮುಖ್ಯ ಎಂದ ಮಾಜಿ ಮುಖ್ಯಮಂತ್ರಿ, ಬೇಗ ಮತ್ತೊಂದು ಪಟ್ಟಿ ಬಿಡುಗಡೆ ಮಾಡುತ್ತೇವೆ. ಎರಡನೇ ಪಟ್ಟಿ ಇನ್ನೇನು ಅಂತಿಮ ಹಂತದಲ್ಲಿದೆ. ಆ ಪಟ್ಟಿಯಲ್ಲಿ 60ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರುಗಳು ಇರುತ್ತದೆ ಎಂದು ಹೇಳಿದರು. ಧರ್ಮೇಗೌಡರ ಬದಲಾಗಿ ವೈ ಎಸ್ ವಿ ದತ್ತಾ ಅವರಿಗೆ ಪಕ್ಷವು ಕಡೂರು ಟಿಕೆಟ್ ಕೊಟ್ಟಿತು. ಪಕ್ಷಕ್ಕಾಗಿ ದುಡಿದ ನಾಯಕನಿಗೆ ಅನ್ಯಾಯ ಮಾಡಿ, ಕೈ ಕೊಟ್ಟು ಹೋದ…
ಬೆಂಗಳೂರು: ಮಾರ್ಚ್ 8 ರಂದು ಮಹಿಳೆಯರ ದಿನಾಚರಣೆ ಪ್ರಯುಕ್ತ ಮಯೂರ ಹೊಟೇಲ್ಗಳಲ್ಲಿ ಮಹಿಳೆಯರಿಗೆ ಶೇ 50 ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಾರ್ಚ್ 8 ರಂದು ಆಚರಿಸಲಾಗುತ್ತಿರುವ 48ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪ್ರವಾಸಿಗರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ನಿರ್ವಹಣೆ ಮಾಡುತ್ತಿರುವ ಮಯೂರ ಗ್ರೂಪ್ ಹೋಟೆಲ್ಗಳಲ್ಲಿ ಈ ರಿಯಾಯಿತಿ ನೀಡಲಾಗಿದೆ. ಕೊಠಡಿ ಬುಕ್ಕಿಂಗ್ ಮೇಲೆ 50 ಶೇ ಹಾಗೂ ಊಟೋಪಹಾರದ ಮೇಲೆ 20 ಶೇ ರಿಯಾಯಿತಿಯ ವಿಶೇಷ ಕೊಡುಗೆ ನೀಡಲಾಗಿದೆ. ಈ ವಿಶೇಷ ಕೊಡುಗೆ ಮಾ. 6 ರಿಂದ ಮಾ. 10 ರವರೆಗೆ ಅನ್ವಯಿಸಲಿದೆ. ನಿಗಮದ ಹೋಟೆಲ್ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವ ಒಬ್ಬ ಮಹಿಳೆ ಅಥವಾ ಕುಟುಂಬ ಅಥವಾ ಮಹಿಳೆಯರ ಗುಂಪು, ಪ್ರವಾಸ ಕೈಗೊಳ್ಳುವ ಮಹಿಳಾ ಪ್ರವಾಸಿಗರಿಗೆ 50 ಶೇ ರಿಯಾಯಿತಿ ಘೋಷಿಸಿದೆ. ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ನಿಗಮದ ಎಂಡಿ ಮನವಿ ಮಾಡಿದ್ದಾರೆ.
ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರಾಗಿದ್ದ ಪ್ರವೀಣ್ ಹತ್ಯೆ ಬಳಿಕ ಆರೋಪಿ ತೌಫಿಲ್ ತಲೆಮರೆಸಿಕೊಂಡಿದ್ದ. ಶನಿವಾರ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿ ತೌಫಿಲ್ ಬಂಧನವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ 36 ವರ್ಷದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತಮ್ಮ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಮೃತಪಟ್ಟಿದ್ದರು.
ಆತನಿಗೆ ಸಂಗೀತ ಕ್ಷೇತ್ರದಲ್ಲಿಎತ್ತರಕ್ಕೆ ಬೆಳೆಯುವ ದೈತ್ಯ ಪ್ರತಿಭೆ ಹೊಂದಿದ್ದ ಮ್ಯುಜಿಷಿಯನ್. ಜೀವನದಲ್ಲಿ ಏನನ್ನಾದರು ಸಾಧಿಸಬೇಕು ಅನ್ನೋ ಛಲ ಟ್ಟುಕೊಂಡಿದ್ದ ಯುವಕ.ಅದಕ್ಕಾಗಿ ಹಗಲು ರಾತ್ರಿ ಕಷ್ಟ ಪಡ್ತಿದ್ದ.ಅವಕಾಶ ಸಿಕ್ಕಾಗಲೆಲ್ಲ ಜನಪರ ,ಪರಿಸರ,ಜಾನಪದ ಗೀತೆಗಳ ಸಂಗೀತ ಕಾರ್ಯಕ್ರಮ ನೀಡ್ತಿದ್ದ.ಜೊತೆಗೆ ಬೆಸ್ಕಾಂ ನಲ್ಲೂ ಕೆಲಸ ಮಾಡ್ತಿದ್ದ.9 ತಿಂಗಳಹಿಂದಷ್ಟೇ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ.ಆದರೆ BWSSB ನಿರ್ಲಕ್ಷ್ಯ ಆತನ ಜೀವವನ್ನೇ ತೆಗೆದಿದೆ.ಪತ್ನಿ 6 ತಿಂಗಳ ಗರ್ಭಿಣಿಯಾಗಿದ್ದು,ಮಗು ಭೂಮಿಗೆ ಕಾಲಿಡೊ ಮೊದಲೇ ತಂದೆ ಸಾವಿನ ಮನೆ ಸೇರಿದ್ದಾನೆ. ಈತ ನಗು ಮೊಗದ ವೀರ. ಜನ ಸಾಮಾನ್ಯರ ದುಃಖದ ದ್ವನಿಯ ಹಾಡುಗಳಿಗೆ ಸಂಗೀತಗಾರ.ಧ್ವನಿ ಇಲ್ಲದವರ ಹಕ್ಕುಗಳ ಹೋರಾಟದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿ ಕೀ ಬೋರ್ಡ್ ನುಡಿಸುತ್ತಿದ್ದ ವಿವೇಕ್ ಮೌರ್ಯ ಏನನ್ನಾದರು ಸಾಧಿಸಲೇಬೇಕು ಅನ್ನೋ ಛಲ ಹೊಂದಿದ್ದಾತ.ಪತ್ನಿಗೆ ತಕ್ಕ ಪತಿ.ದೇಶ ವಿದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದ ಹಾಡುಗಾರ.ಇಂಡಿಯನ್ ಫೋಕ್ ಬ್ಯಾಂಡ್ ನಲ್ಲಿ ಮಿಂಚಿದ್ದ ಮ್ಯೂಸಿಷಿಯನ್..ಕರ್ನಾಟಕದ ಮೂಲೆ ಮೂಲೆಯಲ್ಲೂ ಸಂಗೀತ ಕಾರ್ಯಕ್ರಮ ನೀಡಿದ್ದ ವ್ಯಕ್ತಿ .ಬಿಬಿಎಂಪಿ ಮತ್ತು ಬಿಡಬ್ಲ್ಯೂ ಎಸ್ ಎಸ್ ಬಿ…
ಬಿಜೆಪಿ ವಿರುದ್ದ ಪದೇ ಪದೇ 40% ಕಮಿಷನ್ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸ ಮತ್ತು ಪುತ್ರ ಪ್ರಶಾಂತ್ ಮನೆಯಲ್ಲಿ ಸಿಕ್ಕ ಹಣ ಬ್ರಹ್ಮಾಸ್ತ್ರವಾಗಿದೆ. ಇದನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡಿರುವ ಕೈ ಪಡೆ ಸರ್ಕಾರದ ವಿರುದ್ಧ ಬೀದಿಗಿಳಿದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ್ರು ಕೈ ನಾಯಕರು. ಇವತ್ತಿನ ಕೈ ಪ್ರತಿಭಟನೆಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.. ಕಳೆದ ಹಲವು ತಿಂಗಳುಗಳಿಂದ ಅದರಲ್ಲೂ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿ ಮೋದಿಗೆ ಪತ್ರ ಬರೆದ ನಂತರ ನಿರಂತರವಾಗಿ 40%. ಕಮಿಷನ್ ಸರ್ಕಾರ ಎಂದು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ಡೀಲ್ ಪ್ರಕಾಣದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಸ್ಪಷ್ಟ ಸಾಕ್ಷಿ ಸಿಕ್ಕಂತೆ ಆಗಿದೆ. ಇದೇ ವಿಚಾರವನ್ನು ಚುನಾವಣಾ ಬ್ರಹ್ಮಾಸ್ತ್ರ ವಾಗಿಟ್ಟುಕೊಂಡು ಕಾಂಗ್ರೆಸ್ ಇಂದು ಸಿಎಂ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬೃಹತ್ ಪ್ರತಿಭಟನೆ ನಡೆಸಿತು. ರೇಸ್…
ಬಾಲಿವುಡ್‌ನ (Bollywood) ಸ್ಟಾರ್ ಕಪಲ್ ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ (Viraat Kohli) ಜೋಡಿ ಇತ್ತೀಚಿಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ವಿರುಷ್ಕಾ ಜೋಡಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ನಟಿ ಅನುಷ್ಕಾ (Anushka Sharma) ಅವರು ಪಿಂಕ್ ಬಣ್ಣದ ಸೆಲ್ವಾರ್ ಧರಿಸಿದ್ದರೆ, ವಿರಾಟ್ ಧೋತಿ ಧರಿಸಿದ್ದಾರೆ. ಇತ್ತೀಚಿಗೆ ಭಾರತ -ಆಸ್ಟ್ರೇಲಿಯಾ ತಂಡದ ನಡುವೆ ಮೂರನೇ ಟೆಸ್ಟ್ ಮ್ಯಾಚ್ ಇಂದೋರ್‌ನಲ್ಲಿ ನಡೆಯಿತು. ಅಲ್ಲಿಂದ ಉಜ್ಜಯನಿಗೆ ಹತ್ತಿರವಿರುವ ಕಾರಣ, ಅನುಷ್ಕಾ ಜೋಡಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ನಟಿ ಅನುಷ್ಕಾ ಮುದ್ದು ಮಗಳ ಆರೈಕೆಯ ಜೊತೆಗೆ ಸಿನಿಮಾಗಳತ್ತ ಕೂಡ ಗಮನ ಕೊಡುತ್ತಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿ ಆಕ್ಟೀವ್ ಆಗುತ್ತಿದ್ದಾರೆ.
ಅಹಮದಾಬಾದ್: ಅದಾನಿ ಸಮೂಹದ ಕಂಪನಿಗಳ (Adani Group Companies) 15,446 ಕೋಟಿ ರೂ. ಮೌಲ್ಯದ ಷೇರುಗಳನ್ನು ಅಮೆರಿಕದ GQG ಕಂಪನಿ (GQG Partners) ಖರೀದಿಸಿದೆ. ಅಮೆರಿಕದ ಹಿಂಡೆನ್‌ಬರ್ಗ್ ವರದಿಯಿಂದ (Hindenburg Research) ಅದಾನಿ ಕಂಪನಿಯ ಮಾರುಕಟ್ಟೆ ಮೌಲ್ಯ ಭಾರೀ ಇಳಿಕೆಯಾಗಿತ್ತು. ಈ ಮಧ್ಯೆ GQG ಕಂಪನಿ ಹೂಡಿಕೆ ಮಾಡುವ ಮೂಲಕ ಸಂಕಷ್ಟದಿಂದ ಪಾರು ಮಾಡಿದೆ. ಎಸ್‌ಬಿ ಅದಾನಿ ಫ್ಯಾಮಿಲಿ ಟ್ರಸ್ಟ್ ಈ ಷೇರುಗಳನ್ನು ಮಾರಾಟ ಮಾಡಿದೆ. GQG ಅಧ್ಯಕ್ಷ ಮತ್ತು ಸಿಐಒ ರಾಜೀವ್ ಜೈನ್ (Rajiv Jain) ಪ್ರತಿಕ್ರಿಯಿಸಿ, “ನಾನು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಉತ್ಸುಕನಾಗಿದ್ದೇನೆ. ಅದಾನಿ ಕಂಪನಿಗಳು ಭಾರತದಾದ್ಯಂತ ಮತ್ತು ಪ್ರಪಂಚದಾದ್ಯಂತ ದೊಡ್ಡ ಮತ್ತು ಪ್ರಮುಖ ಮೂಲಸೌಕರ್ಯ ಸ್ವತ್ತುಗಳನ್ನು ಹೊಂದಿವೆ ಮತ್ತು ನಿರ್ವಹಿಸುತ್ತವೆ. ಗೌತಮ್ ಅದಾನಿ ಈ ಪೀಳಿಗೆಯ ಅತ್ಯುತ್ತಮ ಉದ್ಯಮಿಯಾಗಿದ್ದಾರೆ. ಭಾರತದ ಆರ್ಥಿಕತೆ ಮತ್ತು ಇಂಧನ ಮೂಲಸೌಕರ್ಯವನ್ನು ಮುನ್ನಡೆಸಲು ಸಹಾಯ ಮಾಡುವ ಕಂಪನಿಗಳಲ್ಲಿ ಹೂಡಿಕೆ ಮಾಡಲು ನಾವು ಸಂತೋಷಪಡುತ್ತೇವೆ ಎಂದು ತಿಳಿಸಿದ್ದಾರೆ. GQG ವಿಶ್ವದ ಪ್ರಮುಖ ಜಾಗತಿಕ ಮತ್ತು…