Author: Prajatv Kannada

ನಾವು ಭಾರತೀಯರು ತುಂಬಾ ಅದೃಷ್ಟವಂತರು. ಏಕೆಂದರೆ, ನಮ್ಮ ಸುತ್ತಲಿನ ಪ್ರಕೃತಿಯಲ್ಲಿ, ಅನೇಕ ಆಯುರ್ವೇದ ಗಿಡಮೂಲಿಕೆಗಳು ಮತ್ತು ಆರೋಗ್ಯಕರ ಪದಾರ್ಥಗಳು ನೈಸರ್ಗಿಕವಾಗಿ ಲಭ್ಯವಿವೆ. ಆದರೆ ದುರದೃಷ್ಟವಶಾತ್, ನಾವು ಅವರನ್ನು ಗುರುತಿಸುವುದಿಲ್ಲ. ಏಕೆಂದರೆ, ಅವುಗಳ ಉಪಯೋಗ ಮತ್ತು ಪ್ರಯೋಜನಗಳ ಬಗ್ಗೆ ನಮಗೆ ಸಂಪೂರ್ಣ ಅರಿವಿಲ್ಲ. ಅಂತಹ ಆರೋಗ್ಯಕರ ವಸ್ತಗಳಲ್ಲಿ ಒಂದಾದ ಶುಂಠಿಯ ಪ್ರಯೋಜನಗಳನ್ನು ತಿಳಿದುಕೊಳ್ಳೊಣ ಬನ್ನಿ. ತಾಜಾ ಶುಂಠಿಯನ್ನು ಮಾತ್ರ ಅಡುಗೆ ಮತ್ತು ಚಹಾದಲ್ಲಿ ಬಳಸಲಾಗುತ್ತದೆ. ಆದರೆ, ಅರಿವಿನ ಕೊರತೆಯಿಂದ ನಾವು ಒಣಗಿದ ಶುಂಠಿಯನ್ನು ಎಸೆಯುತ್ತೇವೆ. ಆದರೆ ಹಾಗೆ ಮಾಡಬೇಡಿ ಎನ್ನುತ್ತಾರೆ ಆರೋಗ್ಯ ತಜ್ಞರು. ಏಕೆಂದರೆ, ಸಂಪೂರ್ಣವಾಗಿ ಒಣಗಿದ ಶುಂಠಿಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಶುಂಠಿ ಪುಡಿಯನ್ನು ಕಡ, ಚೂರಣ ರೂಪದಲ್ಲಿ ತೆಗೆದುಕೊಳ್ಳಬಹುದು. ಇದರಿಂದ ಆಗುವ ಆರೋಗ್ಯ ಪ್ರಯೋಜನಗಳಿವೆ. ಒಣ ಶುಂಠಿ ಪುಡಿ ಗರ್ಭಿಣಿ ಮಹಿಳೆಯರಿಗೆ ವಾಕರಿಕೆ ಮತ್ತು ಬೆಳಗಿನ ಬೇನೆಯನ್ನು ನಿವಾರಿಸಲು ತುಂಬಾ ಉಪಯುಕ್ತವಾಗಿದೆ. ಏಕೆಂದರೆ, ಬೆಳಿಗ್ಗೆ ಇದನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳನ್ನು ದೂರವಿಡಬಹುದು. ಅರ್ಧ ಚಮಚ ಶುಂಠಿ ಪುಡಿಯನ್ನು ಉಗುರುಬೆಚ್ಚಗಿನ ನೀರಿಗೆ…

Read More

ಸೂರ್ಯೋದಯ: 06.36 AM, ಸೂರ್ಯಾಸ್ತ : 06.28 ಪಿಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಶ್ರೀ ಶುಭಕೃತ ನಾಮ ಸಂವತ್ಸರ ಶಕ ಸಂವತ ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಇವತ್ತು ಅಷ್ಟಮಿ 02:21 AM ತನಕ ನಂತರ ನವಮಿ ನಕ್ಷತ್ರ: ಇವತ್ತು ರೋಹಿಣಿ 07:20 AM ತನಕ ನಂತರ ಮೃಗಶಿರ ಯೋಗ: ಇವತ್ತು ವಿಷ್ಕುಂಭ 04:26 PM ತನಕ ನಂತರ ಪ್ರೀತಿ ಕರಣ: ಇವತ್ತು ಬವ 02:21 AM ತನಕ ನಂತರ ಬಾಲವ 03:16 PM ತನಕ ನಂತರ ಕೌಲವ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 03.51 AM to 05.36 AM ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:52 ವರೆಗೂ ಮೇಷ : ಶಿಕ್ಷಕರ ಮಕ್ಕಳಿಗೆ ಮದುವೆ ಯೋಗ ಕೂಡಿ ಬರಲಿದೆ, ವಿಚ್ಛೇದನ…

Read More

ಲಂಡನ್‌: ಬಲವಂತದ ವಿವಾಹವನ್ನು ತಡೆಯಲು ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಮದುವೆಯ ಕನಿಷ್ಠ ವಯಸ್ಸನ್ನು 18 ವರ್ಷಕ್ಕೆ ಏರಿಕೆ ಮಾಡಿ ಹೊಸ ಕಾನೂನನ್ನು ಜಾರಿಗೊಳಿಸಲಾಗಿದೆ. ಈವರೆಗೆ 16 ಅಥವಾ 17 ವರ್ಷದ ಯುವಕ- ಯುವತಿಯರು ಮದುವೆಗೆ ಅರ್ಹರಲ್ಲ ಎನ್ನುವ ಯಾವುದೇ ಕಾನೂನು ಇಲ್ಲದ ಕಾರಣ ಪೋಷಕರ ಒಪ್ಪಿಗೆಯ ಮೇರೆಗೆ ಮದುವೆಯಾಗಬಹುದಿತ್ತು. ವಿಶೇಷವಾಗಿ ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್‌ ಜನಾಂಗಗಳು ಈ ರೀತಿಯ ಬಲವಂತದ ಮದುವೆಗೆ ಒಳಗಾಗುತ್ತಿದ್ದರು. ಇದೀಗ ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಮದುವೆಯ ಕನಿಷ್ಠ ವಯಸ್ಸನ್ನು 18 ವರ್ಷಕ್ಕೆ ಏರಿಕೆ ಮಾಡಲಾಗಿದೆ.

Read More

ಕಳೆದ ಕೆಲ ತಿಂಗಳುಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್‌ ವಿರೋಧಿ ಪ್ರತಿಭಟನೆಯನ್ನು ಮಣಿಸಲು ಅಲ್ಲಿನ ಸರಕಾರ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಈ ಮಧ್ಯೆ ಅಲ್ಲಿನ ಕಟ್ಟಾ ಮುಸ್ಲಿಂ ಮೂಲಭೂತವಾದಿಗಳು ಹೆಣ್ಣು ಮಕ್ಕಳನ್ನು ಭಯಭೀತರನ್ನಾಗಿಸುವ ಮೂಲಕ ಅವರನ್ನು ಶಾಲೆಗಳಿಂದ ದೂರವುಳಿಯುವಂತೆ ಮಾಡಲು ವಿಷ ಉಣಿಸುವಂತಹ ಅಮಾನವೀಯ ಕೃತ್ಯಕ್ಕೆ ಕೈಹಾಕಿದ್ದಾರೆ. ಶಾಲೆಗಳಿಗೆ ತೆರಳುತ್ತಿರುವ ಬಾಲಕಿಯರಿಗೆ ಅವರ ಅರಿವಿಗೆ ಬಾರದಂತೆ ಅಲ್ಪಪ್ರಮಾಣದಲ್ಲಿ ವಿಷಪ್ರಾಶನ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದ್ದು ಇದರಿಂದ ನೂರಾರು ಸಂಖ್ಯೆಯಲ್ಲಿ ಬಾಲಕಿಯರು ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುವಂತಾಗಿದೆ. ಮೂಲಭೂತವಾದಿಗಳ ಈ ಅಮಾನವೀಯ ನಡೆಗೆ ಇರಾನ್‌ ಮಾತ್ರವಲ್ಲದೆ ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಾಲಕಿಯರಿಗೆ ವಿಷಪ್ರಾಶನ ಮಾಡಲಾಗುತ್ತಿರುವ ಮಾಹಿತಿಯನ್ನು ಇರಾನ್‌ನ ಆರೋಗ್ಯ ಖಾತೆಯ ಉಪ ಸಚಿವರೇ ದೃಢಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೇಶದಲ್ಲಿ ಹೆಣ್ಣು ಮಕ್ಕಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ತೆರಳುವ ಹೆಣ್ಣುಮಕ್ಕಳು ಹಿಜಾಬ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಕಳೆದ ವರ್ಷದ ನವೆಂಬರ್‌ನಿಂದೀಚೆಗೆ ದೇಶಾದ್ಯಂತ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರ ಸಹಿತ ಹೆಣ್ಣುಮಕ್ಕಳು…

Read More

ನವದೆಹಲಿ: ಒಂದೇ ದಿನ ತಜಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಭಾರತದ ಮಣಿಪುರದಲ್ಲೂ ಭೂಮಿ ಕಂಪಿಸಿರುವ ಕುರಿತು ವರದಿಯಾಗಿದೆ. ಇಂದು(ಮಂಗಳವಾರ ಮುಂಜಾನೆ ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದರೆ, ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಈ ನಡುವೆ ಭಾರತದ ಮಣಿಪುರದ ನೋನಿಯಲ್ಲಿ ನಸುಕಿನ ಜಾವ 2.46ರ ಸುಮಾರಿಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ.

Read More

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮಂಗಳವಾರ ಮುಂಜಾನೆ ಟಿಎಂಸಿಯ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರೊಫೈಲ್ ಫೋಟೋ ಮತ್ತು ಹೆಸರನ್ನು ಬದಲಾಯಿಸಲಾಗಿದೆ  ಹ್ಯಾಕರ್‌ಗಳು ಟಿಎಂಸಿಯ ಪ್ರೊಫೈಲ್ ಚಿತ್ರ ಮತ್ತು ಹೆಸರನ್ನು ಬದಲಾಯಿಸಿದ್ದಾರೆ. ಪ್ರೊಫೈಲ್‌ನಲ್ಲಿ ಟಿಎಂಸಿ ಬದಲಿಗೆ ಯುಗಾ ಲ್ಯಾಬ್ಸ್ ಎಂದು ಬರೆಯಲಾಗಿದೆ. ಈ ಬಗ್ಗೆ ಟಿಎಂಸಿ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹ್ಯಾಕ್ ಆದ ಬಳಿಕ ಯಾವುದೇ ಹೊಸ ಟ್ವೀಟ್​ನ್ನು ಪೋಸ್ಟ್​ ಮಾಡಿಲ್ಲ, ಈ ಬಗ್ಗೆ ಟ್ವಿಟ್ಟರ್​ಗೆ ಮಾಹಿತಿ ನೀಡಲಾಗಿದ್ದು, ಸರಿಪಡಿಸುವಂತೆ ಕೇಳಿಕೊಳ್ಳಲಾಗಿದೆ. ಇದು 2020 ರ ಪ್ರಕರಣಕ್ಕೆ ಹೋಲುತ್ತದೆ, ಇದರಲ್ಲಿ ಯುಎಸ್‌ನ ಹಲವಾರು ಪ್ರಮುಖ ವ್ಯಕ್ತಿಗಳ ಟ್ವಿಟರ್ ಹ್ಯಾಂಡಲ್‌ಗಳು ಹ್ಯಾಕ್ ಆಗಿದ್ದವು.

Read More

ನವದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಸಿಬಿಐ ತನಿಖೆಯ ವಿಧಾನವನ್ನು ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತುರ್ತು ವಿಚಾರಣೆಗಾಗಿ 10.30 ಕ್ಕೆ ಸಿಜೆಐ ಮುಂದೆ ವಿಷಯವನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಮನೀಶ್ ಸಿಸೋಡಿಯಾ ಇಂದು ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಸಿಸೋಡಿಯಾ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ ಮೊದಲು ಏಕೆ ಹೈಕೋರ್ಟ್‌ಗೆ ಹೋಗಲಿಲ್ಲ ಎಂದು ಕೇಳಿದರು. ವಿನೋದ್ ದುವಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸಿಸೋಡಿಯಾ ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಸಿಂಘ್ವಿ ಕಾರಣವೆಂದು ಉಲ್ಲೇಖಿಸಿದ್ದಾರೆ. ಇದಾದ ಬಳಿಕ, ಮಧ್ಯಾಹ್ನ 3.50ಕ್ಕೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು ನಿನ್ನೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಐದು ದಿನಗಳ ಕಸ್ಟಡಿಗೆ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಪ್ರಹ್ಲಾದ್ ಮೋದಿ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಅವರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾದ ನಂತರ ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

Read More

ಉತ್ತರ ಕನ್ನಡ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಸಲಾಗಿದೆ. ಸಿಎಂ ಸಂಚರಿಸುವ ರಸ್ತೆ ಬದಿಯಲ್ಲಿನ ಮರಗಳಿಗೆ ‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಅಳವಡಿಸಲಾಗಿದೆ. ರಸ್ತೆ ಪಕ್ಕದ ಕಟ್ಟಡಗಳಿಗೆ ಸಚಿವ ಹೆಬ್ಬಾರ್ ಫೋಟೋ ಅಳವಡಿಸಲಾಗಿದೆ. ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.

Read More

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ವಿಜಯ ಸಂಕಲ್ಪ ರಥಯಾತ್ರೆಗೆ (Vijay Sankalpa Rath Yatra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ (Basavakalyan) ಬರಲಿದ್ದಾರೆ. ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದರು. ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು. ಬಸವಕಲ್ಯಾಣ ಪಟ್ಟಣದ ಥೇರು ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶ್ರೀರಾಮುಲು,…

Read More