ಮದುವೆ ಮನೆಯಿಂದ ಜನರನ್ನು ಕರೆತರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ನಡೆದಿದೆ. 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಬಿದ್ದಿದೆ ಎಂದು ಹೇಳಿದರು. ಸ್ಥಳೀಯ ಜನರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು ಇಬ್ಬರ ಜೀವ ಉಳಿಸುವಲ್ಲಿ ಯಶಸ್ವಿಯಾದರು. ರಕ್ಷಣಾ ತಂಡ 16 ಮೃತದೇಹಗಳನ್ನು ಮೊದಲು ಹೊರ ತೆಗೆದಿತ್ತು. ಅತಿಥಿಗಳು ಜಿಬಿ ಪ್ರದೇಶದ ಆಸ್ಟರ್ ಪ್ರದೇಶದಿಂದ ಈ ಬಸ್ ಮೂಲಕ ಪೂರ್ವ ಚಕ್ವಾಲ್ ಜಿಲ್ಲೆಗೆ ಹೋಗುತ್ತಿದ್ದರು. ಘಟನೆಗೆ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ನಾಪತ್ತೆಯಾದವರ ಪತ್ತೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಖೈಬರ್ ಪಖ್ತುಂಕ್ವಾ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ರಸ್ತೆ ಅಪಘಾತಗಳು ಆಗಾಗ ಸಂಭವಿಸುತ್ತಿರುತ್ತವೆ. ಕೆಟ್ಟ ಹವಾಮಾನ, ಕೆಟ್ಟ ರಸ್ತೆಗಳು,. ಓವರ್ಲೋಡ್ ವಾಹನಗಳಿಂದ…
Author: Prajatv Kannada
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇತ್ತೀಚೆಗೆ ಒಂದರ ಹಿಂದೊದರಂತೆ ಜೀವ ಬೆದರಿಕೆಗಳು ಬರುತ್ತಲೆ ಇವೆ. ಇದೀಗ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದ ಕಾರಣಕ್ಕೆ ಮುಂಬೈ ಪೊಲೀಸರು ರಾಯಚೂರಿನಲ್ಲಿ ಸೋಹೆಲ್ ಪಾಶಾ ಎಂಬಾತನನ್ನು ಬಂಧಿಸಿದ್ದಾರೆ. ಶಾಕಿಂಗ್ ವಿಚಾರ ಎಂದರೆ ಈತ ಸಲ್ಮಾನ್ ಖಾನ್ ಮುಂಬರುವ ಸಿನಿಮಾದ ಗೀತ ಸಾಹಿತಿ ಆಗಿದ್ದನು. ಸಲ್ಮಾನ್ ಖಾನ್ ಅವರನ್ನು ಕೊಲ್ಲೋದಾಗಿ ಮುಂಬೈ ಸಂಚಾರ ಪೊಲೀಸರಿಗೆ ನಿರಂತರವಾಗಿ ಸಂದೇಶ ಬರುತ್ತಲೇ ಇದೆ. ನವೆಂಬರ್ 7ರಂದು ಕೂಡ ಬೆದರಿಕೆ ಬಂದಿತ್ತು. ಐದು ಕೋಟಿ ರೂಪಾಯಿ ಕೊಡದೇ ಇದ್ದರೆ ಸಲ್ಮಾನ್ ಹಾಗೂ ಸಹೋದರ ಸೋಹೆಲ್ ಖಾನ್ ರನ್ನು ಕೊಲೆ ಮಾಡುತ್ತೇವೆ ಎಂದು ಸೋಹೆಲ್ ಪಾಶಾ ಎಂಬಾತ ವಾಟ್ಸಾಪ್ ಮೂಲಕ ಬೆದರಿಕೆ ಹಾಕಿದ್ದ. ಇದಕ್ಕೆ ಸಂಬಂಧಿಸಿದಂತೆ ವೊರ್ಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮುಂಬೈ ಪೊಲೀಸರು ನಿರಂತರವಾಗಿ ತನಿಖೆ ನಡೆಸಿದ್ದಾರೆ. ಮೊಬೈಲ್ ಸಂಖ್ಯೆಯನ್ನು ಪತ್ತೆ ಹಚ್ಚಿದಾಗ ಅದು ಕರ್ನಾಟಕದ ರಾಯಚೂರಿನ ವೆಂಕಟೇಶ್ ನಾರಾಯಣ ಎಂಬುವವರದು ಅನ್ನೋದು ಗೊತ್ತಾಗಿದೆ. ಅಲ್ಲಿ…
ತುಳಸಿ ವಿವಾಹ ಸೂರ್ಯೋದಯ: 06:24, ಸೂರ್ಯಾಸ್ತ : 05:36 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ: ದ್ವಾದಶಿ ನಕ್ಷತ್ರ: ರೇವತಿ ರಾಹು ಕಾಲ: 12:00 ನಿಂದ 01:30 ತನಕ ಯಮಗಂಡ: 07:30 ನಿಂದ 09:00 ತನಕ ಗುಳಿಕ ಕಾಲ: 10:30 ನಿಂದ 12:00 ತನಕ ಅಮೃತಕಾಲ: ರಾ .1:02 ನಿಂದ ರಾ .2:28 ತನಕ ಅಭಿಜಿತ್ ಮುಹುರ್ತ:ಇಲ್ಲ ಮೇಷ ರಾಶಿ: ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ಜಾತಕ ಆಧಾರದ (ಜನ್ಮ ದಿನಾಂಕ…
ಕನ್ನಡದ ನಟ ಡಾಲಿ ಧನಂಜಯ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಪುಷ್ಪ’ ಚಿತ್ರದ ಬಳಿಕ ಟಾಲಿವುಡ್ನಲ್ಲೂ ಡಾಲಿಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಜಿಬ್ರ’ ಚಿತ್ರದ ಟ್ರೇಲರ್ ಹೈದರಾಬಾದ್ನಲ್ಲಿ ರಿಲೀಸ್ ಆಗಿದೆ. ಈ ಈವೆಂಟ್ಗೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಧನಂಜಯ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ‘ಧನಂಜಯ್ ತೆಲುಗಿನಲ್ಲಿ ಸೆಟಲ್ ಆಗ್ತಾರೆ’ ಎಂದು ಚಿರಂಜೀವಿ ಭವಿಷ್ಯ ನುಡಿದಿದ್ದಾರೆ. ‘ಕನ್ನಡದ ಅದ್ಭುತ ನಟ ಎಂದರೆ ಅದು ಧನಂಜಯ್. ನಾನು ಅವರ ಬಗ್ಗೆ ಕೇಳಿದ್ದೇನೆ, ಆದರೆ ಸಿನಿಮಾ ನೋಡಿಲ್ಲ. ಪುಷ್ಪ ಚಿತ್ರದಲ್ಲಿ ಉತ್ತಮವಾಗಿ ನಟಿಸಿದ್ದಾರೆ. ಜಿಬ್ರಾ ಸಿನಿಮಾದಿಂದ ಅವರಿಗೆ ಒಳ್ಳೆಯ ಜನಪ್ರಿಯತೆ ಸಿಗುತ್ತದೆ. ಈ ಸಿನಿಮಾ ಬಳಿಕ ಅವರು ತೆಲುಗಿನಲ್ಲಿ ಸೆಟಲ್ ಆಗುತ್ತಾರೆ ಎಂಬುದಕ್ಕೆ ಯಾವುದೇ ಅನುಮಾನ ಬೇಡ’ ಎಂದು ಚಿರಂಜೀವಿ ಹೇಳಿದ್ದಾರೆ. ಧನಂಜಯ್ ಅವರಿಗೆ ಟಾಲಿವುಡ್ ಚಿತ್ರರಂಗದ ಜೊತೆ ಒಳ್ಳೆಯ ನಂಟು ಬೆಳೆದಿದೆ. ಈ ಮೊದಲು ‘ಭೈರವ ಗೀತ’ ಹೆಸರಿನ ತೆಲುಗು ಸಿನಿಮಾ ಮಾಡಿದ್ದರು. ಈ ಚಿತ್ರವನ್ನು ರಾಮ್…
ಬಹುನಿರೀಕ್ಷಿತ ಕೈಲಾಕ್ ಕಾರನ್ನು ಸ್ಕೋಡಾ ಕಂಪನಿಯು ಬಿಡುಗಡೆಗೊಳಿಸಿದೆ. ಕೈಲಾಕ್ ಕಾರಿನ ಬೆಲೆ ರೂ 7.89 ಲಕ್ಷದಿಂದ ಪ್ರಾರಂಭ. ಪರಿಚಯಾತ್ಮಕ ಬೆಲೆ, ಎಕ್ಸ್ ಶೋ ರೂಂ ಪ್ಯಾನ್-ಇಂಡಿಯಾ). ಬುಕಿಂಗ್‌ಗಳು ಡಿಸೆಂಬರ್ 2, 2024 ರಿಂದ ಆರಂಭವಾಗುತ್ತಿದ್ದು, ಭಾರತ್ ಮೊಬಿಲಿಟಿ ಎಕ್ಸ್‌ಪೋ 2025 ದಲ್ಲಿ ಅದರ ಪ್ರದರ್ಶನದ ನಂತರ ಜನವರಿ 27, 2025 ರಿಂದ ಡೆಲಿವರಿ ಶುರುವಾಗುತ್ತದೆ. ಸ್ಕೋಡಾ ಕೈಲಾಕ್ ಕ್ಲಾಸಿಕ್, ಸಿಗ್ನೇಚರ್, ಸಿಗ್ನೇಚರ್ ಪ್ಲಸ್, ಮತ್ತು ಪ್ರೆಸ್ಟೀಜ್ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಕೈಲಾಕ್, ಕುಶಾಕ್‌ನಂತೆಯೇ ಸ್ಪ್ಲಿಟ್-ಎಲ್‌ಇಡಿ ಹೆಡ್‌ಲೈಟ್ ವಿನ್ಯಾಸವನ್ನು ಹೊಂದಿದೆ, ಎಲ್‌ಇಡಿಗಳು ಬಾನೆಟ್ ಲೈನ್‌ನ ಕೆಳಗೆ ಇದ್ದು, ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳನ್ನು ಬಂಪರ್‌ನ ಮೇಲೆ ಇರಿಸಲಾಗಿದೆ. ಇದು ಇತರ ಸ್ಕೋಡಾ ಕಾರುಗಳಲ್ಲಿ ಕಂಡುಬರುವಂತೆ ಸಾಂಪ್ರದಾಯಿಕ ಚಿಟ್ಟೆ-ಆಕಾರದ ಗ್ರಿಲ್ ಹೊಂದಿದೆ. 17-ಇಂಚಿನ ಡ್ಯುಯಲ್-ಟೋನ್ ಅಲಾಯ್ ಚಕ್ರಗಳು ಮತ್ತು ORVM-ಮೌಂಟೆಡ್ ಟರ್ನ್ ಇಂಡಿಕೇಟರ್‌ಗಳನ್ನು ಕೈಲಾಕ್ ಹೊಂದಿದೆ. ಕೈಲಾಕ್‌ನಲ್ಲಿ 2-ಸ್ಪೋಕ್ ಸ್ಟೇರಿಂಗ್ ವೀಲ್ ಮತ್ತು ಸೆಮಿ-ಲೆಥೆರೆಟ್ ಸೀಟ್ ಒದಗಿಸಿಲಾಗಿದೆ. ಇದು ಅಷ್ಟಭುಜಾಕೃತಿಯ AC ವೆಂಟ್‌ಗಳನ್ನು ಹೊಂದಿದೆ…
ಬಹುತಾರಾಗಣದ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಆದರೆ ಈ ಸುದ್ದಿಯನ್ನು ನಾಗ್ ಅಶ್ವಿನ್ ನಿರಾಕರಿಸಿದ್ದಾರೆ. ಟಾಲಿವುಡ್ ನಲ್ಲಿ ಬೇಡಿಕೆ ಕಾಯ್ದುಕೊಂಡಿರುವ ನಾಗ್ ಅಶ್ವಿನ್ ಆಲಿಯಾ ಭಟ್ ಜೊತೆ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್ಆರ್ಆರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು. ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ…
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ರಾಜ್ಯದ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಸಮಗ್ರ ವ್ಯವಸ್ಥೆ ಮಾಡಿರುವುದಾಗಿ ಚುನಾವಣಾ ಆಯೋಗ ಹೇಳಿಕೊಂಡಿದೆ ಇಂದು ಜಾರ್ಖಂಡ್‌ನ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 24 ಜಿಲ್ಲೆಗಳ ಒಟ್ಟು 81 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದ ಕ್ಷೇತ್ರಗಳಲ್ಲಿ 685 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 38 ಕ್ಷೇತ್ರಗಳಲ್ಲಿ ಉಳಿದ 528 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಜೆಎಂಎಂ, ಕಾಂಗ್ರೆಸ್, ಆರ್ ಜೆಡಿ ಇದೆ. ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಮತ್ತು ಎಜೆಎಸ್‌ಯು ಒಂದಾಗಿ ಸ್ಪರ್ಧಿಸಲಿವೆ. ಜಾರ್ಖಂಡ್ ಚುನಾವಣೆಯ ಮೊದಲ ಹಂತದ ಪ್ರಮುಖ ಅಭ್ಯರ್ಥಿಗಳೆಂದರೆ, ಚಂಪೈ ಸೊರೆನ್, ಮಹುವಾ ಮಜಿ, ಗೀತಾ ಕೋಡಾ, ಅಜೋಯ್ ಕುಮಾರ್, ಬನ್ನಾ ಗುಪ್ತಾ ಮತ್ತು ಸುಖರಾಮ್ ಓರಾನ್. ಮೊದಲ ಹಂತದ…
ಹುಬ್ಬಳ್ಳಿ:- ಶಿಗ್ಗಾವಿ ಸವಣೂರು ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದೆ. https://youtu.be/PfTWiZa1qZQ?si=wWRK8iKMbG67wVPg ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಬಳ್ಳಾರಿ:- ಸಂಡೂರು ವಿಧಾನಸಭಾ ಚುನಾವಣೆ ಹಿನ್ನೆಲೆ, ಕುಟುಂಬ ಸಮೇತರಾಗಿ ಬಂದು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಮತ ಚಲಾಯಿಸಿದ್ದಾರೆ. https://youtu.be/qtF8Igh966I?si=nHOgO8B4MkA34n1M ಸಂಸದ ತುಕಾರಾಂ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಮತಗಟ್ಟೆ ಸಂಖ್ಯೆ 67ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಜನರು, ನಿರ್ಭೀತಿಯಿಂದ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವ ಕೊಟ್ಟಿರುವ ನಮ್ಮ ಹಕ್ಕು ಬಳಸಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಕ್ಷೇತ್ರದಲ್ಲಿ ಜನರು ನನ್ನ ಕೈ ಹಿಡಿಯುವ ವಿಶ್ವಾಸ ಇದೆ. ಇದುವರೆಗೂ ಪತಿಯ ಪರವಾಗಿ ಚುನಾವಣೆ ಕೆಲಸ ಮಾಡ್ತಿದ್ದೆ. ಈ ಬಾರಿ ನೇರ ಚುನಾವಣೆಯಲ್ಲಿ ನಿಂತಿರೋದು ಖುಷಿ ಇದೆ. ಗೆದ್ದೇ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಹೇಳಿದ್ದಾರೆ
ನವದೆಹಲಿ: ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಇನ್ನು ಮುಂದೆ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು. ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇ-ಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ…